ಹುಬ್ಬಳ್ಳಿ: ಬಿ.ಎಲ್ ಸಂತೋಷ್ (BL Santhosh) ನಮ್ಮ ಪಕ್ಷದ ನಿಷ್ಠಾವಂತ ಕಾರ್ಯಕರ್ತ. ಅವರು ತಮ್ಮ ಕುಟುಂಬ, ಸಂಸಾರ ತ್ಯಾಗ ಮಾಡಿ ಪಕ್ಷಕ್ಕಾಗಿ ಹಗಲಿರುಳು ಶ್ರಮಿಸುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ಹೇಳಿದರು.
ಹುಬ್ಬಳ್ಳಿಯಲ್ಲಿ (Hubballi) ಮಾತನಾಡಿದ ಅವರು, ಈಗಾಗಲೇ ಕಿತ್ತೂರು ಭಾಗದಲ್ಲಿ ಒಂದು ಮೋದಿ ಕಾರ್ಯಕ್ರಮ ನಿಗದಿಯಾಗಿದೆ. ಮೋದಿ ಕಾರ್ಯಕ್ರಮ ಇನ್ನೂ ಎರಡು, ಮೂರು ಜಾಸ್ತಿ ಮಾಡುವಂತೆ ಮನವಿ ಮಾಡಿದ್ದೇವೆ. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಕೇಂದ್ರ ಸಚಿವ ರಾಜನಾಥ್ ಸಿಂಗ್ ಸಹ ಬರಲಿದ್ದಾರೆ ಎಂದರು. ಇದನ್ನೂ ಓದಿ: ಏಪ್ರಿಲ್ 29ರಂದು ಬೆಂಗಳೂರಿನಲ್ಲಿ ಮೋದಿ ಮೆಗಾ ರೋಡ್ ಶೋ
ಅಮಿತ್ ಶಾ ಇಂದು ಸಂಜೆ 6 ಗಂಟೆಗೆ ಹುಬ್ಬಳ್ಳಿಗೆ ಬರಲಿದ್ದಾರೆ. ನಮ್ಮ ಪಕ್ಷದ ಜಿಲ್ಲಾ ಪದಾಧಿಕಾರಿಗಳು ಮತ್ತು ಇತರೆ ಪ್ರಮುಖ ನಾಯಕರ ಜೊತೆಗೆ ಸಭೆಯಿದೆ. ಗದಗ, ಧಾರವಾಡ, ಹಾವೇರಿ ಜಿಲ್ಲೆಯ ಪ್ರಮುಖರ ಸಭೆ ನಡೆಯಲಿದೆ. ಸದ್ಯದ ಚುನಾವಣಾ ಮಾಹಿತಿಯನ್ನು ಶಾ ಪಡೆಯಲಿದ್ದಾರೆ. ಬಳಿಕ ಸುದ್ದಿಗೊಷ್ಠಿ ನಡೆಸಲಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ:ಜೆಡಿಎಸ್‌ಗೆ ಶಾಕ್ – ʼಕೈʼ ಅಭ್ಯರ್ಥಿಗೆ ವೋಟ್ ಹಾಕಿ ಎಂದ MLC ಭೋಜೇಗೌಡ
ಮೈಸೂರು: ಬಿಜೆಪಿಯಲ್ಲಿ ಅನೇಕರು ನಾಯಕರಿದ್ದಾರೆ. ನಾನು ಯಾರಿಗೂ ಪ್ರತಿಸ್ಪರ್ಧಿ ಆಗಲು ಬಯಸುವುದಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ (BL Santosh) ಮಾರ್ಮಿಕವಾಗಿ ಹೇಳಿದರು.
ಮೈಸೂರಿನಲ್ಲಿ (Mysuru) ಚುನಾವಣಾ ಅಖಾಡ ರಂಗೇರಿದೆ. ಮೈಸೂರು ಚುನಾವಣಾ ಅಖಾಡಕ್ಕೆ ಬಿ.ಎಲ್ ಸಂತೋಷ್ ಎಂಟ್ರಿ ಕೊಟ್ಟಿದ್ದಾರೆ. ಈ ವೇಳೆ ತಮ್ಮ ಕುರಿತು ಎದ್ದಿರುವ ಸುದ್ದಿಗಳಿಗೆ ಮಾಧ್ಯಮಗಳಿಗೆ ಸ್ಪಷ್ಟೀಕರಣ ಕೊಡಲು ನಿರಾಕರಿಸಿ, ಮಾರ್ಮಿಕವಾಗಿ ಒಂದು ಮಾತು ಹೇಳಿ ಸುಮ್ಮನಾದರು.
ಮಾಧ್ಯಮದವರು ನನ್ನನ್ನು 100 ಬಾರಿ ಮಾತಾಡಿಸಲು ಯತ್ನಿಸಿದ್ದಾರೆ. ನಾನು ಮಾತಾಡಿಲ್ಲ. ನಮ್ಮಲ್ಲಿ ಮಾತಾಡಲು ಪ್ರತಾಪ್ ಸಿಂಹ ಥರದವರು ಇದ್ದಾರೆ ಅವರೆ ಮಾತಾಡಲಿ. ನಾನು ಮಾತಾಡಿ ಯಾರಿಗೆ ಯಾಕೆ ಪ್ರತಿಸ್ಪರ್ಧಿಯಾಗಲಿ ಎಂದು ವ್ಯಂಗ್ಯವಾಡಿದರು. ಇದನ್ನೂ ಓದಿ: 2nd PUC Result: ವಿಜ್ಞಾನ ವಿಭಾಗದಲ್ಲಿ ಟಾಪ್ ಅಂಕ ಗಳಿಸಿದ ವಿದ್ಯಾರ್ಥಿಗಳು
ಈ ಹಿಂದೆ ಜಗದೀಶ್ ಶೆಟ್ಟರ್ ಮಾತನಾಡಿ, ತಮಗೆ ಬಿಜೆಪಿಯಲ್ಲಿ ಟಿಕೆಟ್ ತಪ್ಪಲು ಬಿ.ಎಲ್ ಸಂತೋಷ್ ಕಾರಣ ಎಂದು ನೇರ ಆರೋಪ ಮಾಡಿದ್ದರು. ಅಷ್ಟೇ ಅಲ್ಲದೇ ಈವರೆಗೂ ಅನೇಕ ನಾಯಕರಿಗೆ ಬಿ.ಎಲ್ ಸಂತೋಷ್ ಬಿಜೆಪಿಯಲ್ಲಿ ಟಿಕೆಟ್ ತಪ್ಪಿಸಿ, ತಮಗೆ ಬೇಕಾದ ಅಭ್ಯರ್ಥಿಗೆ ಟಿಕೆಟ್ ನೀಡಿದ್ದಾರೆ ಎಂದು ಹೇಳಿದ್ದರು. ಇದನ್ನೂ ಓದಿ: ಕಲಾ ವಿಭಾಗದಲ್ಲಿ ಬೆಂಗಳೂರಿನ ತಬ್ಸುಮ್ ಶೇಖ್ ಫಸ್ಟ್ – ಟಾಪ್ ವಿದ್ಯಾರ್ಥಿಗಳ ಲಿಸ್ಟ್ ಇಲ್ಲಿದೆ
ಬೆಂಗಳೂರು: ಬಿಎಲ್ ಸಂತೋಷ್ (BL Santosh) ಹೆಸರನ್ನು ನಡುವೆ ತಂದಿರುವುದು ಜಗದೀಶ್ ಶೆಟ್ಟರ್‌ಗೆ (Jagadish Shettar) ಶೋಭೆ ತರಲ್ಲ. ಅವರಿಗೆ ಸಂತೋಷ್‌ರಿಂದ ಟಿಕೆಟ್ ತಪ್ಪಿದ್ದು ಎಂಬ ಮಾತು ಸುಳ್ಳು ಎಂದು ಮಾಜಿ ಸಿಎಂ ಯಡಿಯೂರಪ್ಪ (BS Yediyurappa) ಶೆಟ್ಟರ್ ವಿರುದ್ಧ ಕಿಡಿಕಾರಿದ್ದಾರೆ.
ಜಗದೀಶ್ ಶೆಟ್ಟರ್‌ಗೆ ಎಲ್ಲಾ ರೀತಿಯಿಂದಲೂ ಮನವೊಲಿಸುವ ಪ್ರಯತ್ನ ಆಗಿದೆ. ಆದರೆ ಅವರು ಅಂತಿಮವಾಗಿ ಪಕ್ಷ ಬಿಟ್ಟು ಹೋದರು. ಅವರು ಪಕ್ಷ ಬಿಟ್ಟಿರುವುದರಿಂದ ಬಿಜೆಪಿಗೆ (BJP) ಏನೂ ನಷ್ಟ ಆಗಲ್ಲ. ಏಕೆಂದರೆ ಜಗದೀಶ್ ಶೆಟ್ಟರ್ ನಂಬಿ ಅವರ ಜೊತೆಗೆ ಯಾವ ಕಾರ್ಯಕರ್ತರೂ ಹೋಗಿಲ್ಲ. ಅವರಿಗೆ ಟಿಕೆಟ್ ಸಿಗದಿರುವುದಕ್ಕೆ ಯಾರೂ ಕಾರಣರಲ್ಲ. ಸುಮ್ಮನೆ ಸಂತೋಷ್ ಹೆಸರು ತಂದಿದ್ದು ಕೂಡಾ ಶೆಟ್ಟರ್‌ಗೆ ಶೋಭೆ ತರುವುದಿಲ್ಲ ಎಂದು ತಿರುಗೇಟು ನೀಡಿದರು.
ಶೆಟ್ಟರ್ ಈ ರೀತಿಯ ತೀರ್ಮಾನ ತೆಗೆದುಕೊಳ್ಳಬಾರದಾಗಿತ್ತು. ನಾವು ಎಷ್ಟೇ ಮನವಿ ಮಾಡಿದರೂ ಅವರು ಒಪ್ಪಲಿಲ್ಲ. ಅವರನ್ನು ರಾಜ್ಯಸಭೆ ಸದಸ್ಯರಾಗಿ ಮಾಡುತ್ತೇವೆ ಎಂದು ಹೇಳಿದ್ದೆವು. ಈಗ ಅವರು ಹೋಗಿರುವುದರಿಂದ ನಮಗೇನೂ ನಷ್ಟವಿಲ್ಲ. ಇನ್ಮೇಲೆ ಅವರ ದಾರಿ ಅವರಿಗೆ ನಮ್ಮ ದಾರಿ ನಮಗೆ. ಬಿಜೆಪಿ ಬಹುಮತ ಪಡೆದುಕೊಂಡು ಅಧಿಕಾರಕ್ಕೆ ಬರುತ್ತದೆ ಎಂದರು. ಇದನ್ನೂ ಓದಿ: ನನ್ನ ಎದುರಾಳಿ ಪ್ರಬಲ ಅಭ್ಯರ್ಥಿ: ರಮೇಶ್ ಜಾರಕಿಹೊಳಿ
ಶಿವಮೊಗ್ಗ ಟಿಕೆಟ್ ಘೋಷಣೆ ಬಾಕಿ ಇರುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಶಿವಮೊಗ್ಗದ ಟಿಕೆಟ್ ಅನ್ನು ಇಂದು ಘೋಷಣೆ ಮಾಡುತ್ತೇವೆ. ಬುಧವಾರ ಶಿಕಾರಿಪುರದಿಂದ ವಿಜಯೇಂದ್ರ ನಾಮಪತ್ರ ಸಲ್ಲಿಕೆ ಮಾಡುತ್ತಿದ್ದಾರೆ. ಅದಕ್ಕಾಗಿ ನಾನು ಇಂದು ಶಿವಮೊಗ್ಗ ಹೋಗುತ್ತಿದ್ದೇನೆ. ನಾಮಪತ್ರ ಸಲ್ಲಿಕೆ ಬಳಿಕ ಒಂದೆರಡು ದಿನಗಳಲ್ಲಿ ಪ್ರಚಾರ ಆರಂಭಿಸುತ್ತೇವೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದರು. ಇದನ್ನೂ ಓದಿ: ನಾಳೆಯಿಂದ ಸಿಎಂ ಬೊಮ್ಮಾಯಿ ಪರ ಅಖಾಡಕ್ಕೆ ಇಳಿವ ಸುದೀಪ್
ಬೆಂಗಳೂರು: ಕೋಲಾರ ಕಣದಲ್ಲಿ ಸಿದ್ದರಾಮಯ್ಯ (Siddaramaiah) ವಿರುದ್ಧ ಬಿಜೆಪಿಯು ಸದ್ದಿಲ್ಲದೇ ಭಾರೀ ರಣತಂತ್ರ ಹೆಣೆಯುತ್ತಿದೆ. ಬೂತ್ ಮಟ್ಟದಿಂದಲೇ ಸಿದ್ದರಾಮಯ್ಯಗೆ ಖೆಡ್ಡಾ ತೋಡಲು ಸ್ಕೆಚ್ ರೂಪಿಸಲಾಗಿದೆ.
ರಾಷ್ಟ್ರೀಯ ಬಿಜೆಪಿ (BJP) ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್ (BL Santosh) ನೇತೃತ್ವದಲ್ಲಿ ಚುನಾವಣಾ ತಂತ್ರಗಾರಿಕೆ ರೂಪಿಸಲಾಗುತ್ತಿದೆ. ಕೋಲಾರದಲ್ಲಿ (Kolara) ಸ್ಥಳೀಯ ಮಟ್ಟದಲ್ಲಿ ಬಲವನ್ನು ವೃದ್ಧಿಸಿಕೊಳ್ಳುವತ್ತಾ ಬಿಜೆಪಿ ಗಮನ ಹರಿಸಿದೆ. ಕಾಂಗ್ರೆಸ್ ಜೆಡಿಎಸ್ ಪಕ್ಷಗಳ ಸ್ಥಳೀಯ ಮುಖಂಡರ ಸೇರ್ಪಡೆಗೆ ಬಿಜೆಪಿ ತನ್ನ ಬಾಗಿಲನ್ನು ತೆರೆದಿದೆ. ಇದನ್ನೂ ಓದಿ: ಮಂಡ್ಯದಲ್ಲಿ ಕಾವು ಪಡೆದ ರಾಜಕೀಯ – ಕನಕಪುರದ ಬಂಡೆ ಮದ್ದೂರಿನಲ್ಲಿ ಸ್ಪರ್ಧೆ?
ಕೋಲಾರದಲ್ಲಿ ಸ್ಥಳೀಯ ನಾಯಕರಿಗೆ ಆಪರೇಷನ್ ಕಮಲ (Operation Kamala) ಮೂಲಕ ಗಾಳ ಹಾಕಲು ತಂತ್ರಗಾರಿಕೆ ಮಾಡಲಾಗಿದೆ. ಜೆಡಿಎಸ್ (JDS) ಮುಖಂಡರೇ ಆಪರೇಷನ್‌ಗೆ ಮುಖ್ಯ ಟಾರ್ಗೆಟ್ ಆಗಿದ್ದಾರೆ ಎನ್ನಲಾಗಿದೆ. ಜೆಡಿಎಸ್ ನಾಯಕರನ್ನು ಆಪರೇಷನ್ ಮಾಡಿದರೆ ಚುನಾವಣೆಯಲ್ಲಿ ಬಿಜೆಪಿಗೆ ಭಾರೀ ಪ್ಲಸ್ ಆಗುವ ನಿರೀಕ್ಷೆ ಇಟ್ಟುಕೊಳ್ಳಲಾಗಿದೆ. ಕೋಲಾರದಲ್ಲಿ ರೂಪಿಸಿರುವ ಒಕ್ಕಲಿಗ ಜಾತಿವ್ಯೂಹ ಲೆಕ್ಕಾಚಾರಕ್ಕೆ ಆಪರೇಷನ್ ಕಮಲವೇ ಅಸ್ತ್ರವಾಗಿದೆ.
ಮೊದಲ ಆದ್ಯತೆ ತೆನೆ ಮುಖಂಡರಾದರೆ, ನಂತರದ ಆದ್ಯತೆ ಕಾಂಗ್ರೆಸ್ (Congress) ಮುಖಂಡರು. ಕೈ-ತೆನೆಯಿಂದ ಯಾರೇ ಬಂದರೂ ಬಿಜೆಪಿಗೆ ಸೇರ್ಪಡೆ ಮಾಡಿಕೊಳ್ಳುವಂತೆ ದೆಹಲಿಯಿಂದಲೇ ರಾಜ್ಯ ಘಟಕಕ್ಕೆ ಸೂಚನೆ ಬಂದಿದೆ ಎಂದು ಮೂಲಗಳು ತಿಳಿಸಿವೆ. ಹೀಗಾಗಿ ಸ್ಥಳೀಯ ಸಂಸ್ಥೆಗಳ ಹಾಲಿ-ಮಾಜಿ ಸದಸ್ಯರನ್ನು ಪಕ್ಷಕ್ಕೆ ಕರೆತರಲು ಆಪರೇಷನ್ ಪ್ಲಾನ್ ರೂಪಿಸಲಾಗಿದೆ. ಬಿಜೆಪಿಯ ಸಂಭಾವ್ಯ ಅಭ್ಯರ್ಥಿ ವರ್ತೂರು ಪ್ರಕಾಶ್ (Varthur Prakash) ಅವರಿಗೆ ಇರುವ ಪ್ರಭಾವವನ್ನು ಬಳಸಿಕೊಂಡು ಹಾಲಿ-ಮಾಜಿ ಲೋಕಲ್ ಜನಪ್ರತಿನಿಧಿಗಳಿಗೆ ಗಾಳ ಹಾಕಲಾಗುತ್ತಿದೆ.
ಕಾಂಗ್ರೆಸ್, ಜೆಡಿಎಸ್‌ನಲ್ಲಿ ಅಸಮಧಾನಗೊಂಡವರನ್ನು ಪಕ್ಷಕ್ಕೆ ಸೆಳೆಯುವ ತಂತ್ರ ಹೆಣೆಯಲಾಗಿದೆ. ಆ ಮೂಲಕ ಕೋಲಾರ ಕ್ಷೇತ್ರದಲ್ಲಿ ಸ್ಥಳೀಯವಾಗಿ ಪಕ್ಷ ಸಂಘಟನೆ, ಮುಖಂಡರು, ಕಾರ್ಯಕರ್ತರ ಸಂಖ್ಯೆ ಹೆಚ್ಚಿಸಿಕೊಳ್ಳುವುದು ಬಿಜೆಪಿಯ ಗುರಿಯಾಗಿದೆ. ಆಪರೇಷನ್ ಕಮಲ ಮೂಲಕ ಜೆಡಿಎಸ್ ಮತ್ತು ಕಾಂಗ್ರೆಸ್ ಶಕ್ತಿ ಕುಂದಿಸುವ ಹಿಡನ್ ತಂತ್ರವೂ ಇದರ ಹಿಂದೆ ಇದೆ. ಅಸಮಧಾನಿತರನ್ನು ಸೆಳೆದು ಪಕ್ಷಕ್ಕೆ ಸೇರಿಸಿಕೊಳ್ಳುವ ಮೂಲಕ ಕಾಂಗ್ರೆಸ್-ಜೆಡಿಎಸ್ ಪಕ್ಷಗಳ ಆಂತರಿಕ ಕಚ್ಚಾಟದ ಲಾಭ ಪಡೆಯಲು ಬಿಜೆಪಿ ಮುಂದಾಗಿದೆ.
ಕಾಂಗ್ರೆಸ್ ವಿರುದ್ಧ ಸಣ್ಣ ವಿರೋಧವೂ ಅಸ್ತ್ರ ಮಾಡಿಕೊಳ್ಳಲು ಬಿಜೆಪಿ ಟೀಮ್ ಸಜ್ಜಾಗಿದೆ. ಕಾಂಗ್ರೆಸ್, ಜೆಡಿಎಸ್ ನಾಯಕರ ಬಗ್ಗೆ ಅಸಮಾಧಾನಗೊಂಡ ಸಂಘ ಸಂಸ್ಥೆಗಳು, ಸಂಘಟನೆಗಳು, ಸಮಿತಿ, ಒಕ್ಕೂಟಗಳು, ಹಳ್ಳಿಗಳ ಮೇಲೂ ಬಿಜೆಪಿ ನಾಯಕರು ಗಮನ ಹರಿಸಿದ್ದಾರೆ. ಒಟ್ಟಾರೆ ಈ ಎಲ್ಲ ತಂತ್ರಗಳ ಜಾರಿಗೆ ಪಕ್ಷದ ಮುಖಂಡರಿಗೆ ಜವಾಬ್ದಾರಿಗಳ ಹಂಚಿಕೆ ಮಾಡಲಾಗಿದೆ. ಸಿದ್ದರಾಮಯ್ಯರನ್ನು ಸೋಲಿಸಲು ಬಿಜೆಪಿಯ ಈ ಮೈಕ್ರೋ ಲೆವೆಲ್ ಸ್ಟ್ರಾಟೆಜಿ ಯಶಸ್ವಿಯಾಗುತ್ತಾ ಎಂಬ ಕುತೂಹಲ ಮೂಡಿಸಿದೆ.
Live Tv
[brid partner=56869869 player=32851 video=960834 autoplay=true]
ಬೆಂಗಳೂರು: ರಾಜ್ಯದಲ್ಲಿ ಚುನಾವಣಾ ಕಣ ರಂಗೇರಿದ್ದು, ರಾಜಕೀಯ ಮೇಲಾಟಗಳು ಜೋರಾಗಿದೆ. ಈ ನಡುವೆ ಸಿದ್ದರಾಮಯ್ಯ (Siddaramaiah) ಕೋಲಾರದಿಂದಲೇ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಾಗಿ ಘೋಷಣೆ ಮಾಡಿದ ಬಳಿಕ ಕೋಲಾರ (Kolara) ಈಗ ಕರ್ನಾಟಕದಲ್ಲಿ ಹೈವೋಲ್ಟೇಜ್ ಕಣವಾಗಿ ಮಾರ್ಪಟ್ಟಿದೆ. ಹೀಗಾಗಿ ಕೋಲಾರ ಆರ್‌ಎಸ್‍ಎಸ್ (RSS) ಟಾರ್ಗೆಟ್ ಲಿಸ್ಟ್‌ನಲ್ಲಿ ಮೊದಲ ಸ್ಥಾನದಲ್ಲಿದ್ದು, ಸಿದ್ದರಾಮಯ್ಯ ಅವರನ್ನು ಸೋಲಿಸಲು ಖುದ್ದು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್ (BL Santosh) ಅಖಾಡಕ್ಕಿಳಿದ್ದಿದ್ದಾರೆ.
ಪರಿಶಿಷ್ಟ ಸಮುದಾಯಗಳು ಹಾಗೂ ಒಕ್ಕಲಿಗರ ಜಾತಿ ವ್ಯೂಹ ರಚನೆಗೆ ತಂತ್ರ ಹೆಣೆದಿದ್ದು, ಈ ಎರಡೂ ಸಮುದಾಯಗಳನ್ನು ಒಲಿಸಿಕೊಳ್ಳಲು ಭಾರೀ ಕಸರತ್ತು ನಡೆಸಿದ್ದಾರೆ. ಮೀಸಲಾತಿ ಕೊಡುವ ಮೂಲಕ ಈಗಾಗಲೇ ಪರಿಶಿಷ್ಟ ಸಮುದಾಯಗಳ ಒಲವು ಹಾಗೂ ಕೆಂಪೇಗೌಡ ಪ್ರತಿಮೆ, 2ಸಿ ಪ್ರವರ್ಗದಲ್ಲಿ ಮೀಸಲು ಹೆಚ್ಚಿಸಿ ಒಕ್ಕಲಿಗರ ಸಖ್ಯ ಬೆಳೆಸಲು ಮುಂದಾಗಿದ್ದಾರೆ.
ಪಕ್ಷದ ದಲಿತ ಮತ್ತು ಒಕ್ಕಲಿಗ ನಾಯಕರ ಮೂಲಕ ಎರಡೂ ಸಮುದಾಯಗಳ ಮನವೊಲಿಕೆ ಕಸರತ್ತು ಮಾಡಿದ್ದಾರೆ. ಈ ಎರಡು ಸಮುದಾಯಗಳು ಬೆಂಬಲ ನೀಡುವುದರ ಜೊತೆ ಬಲಿಜರು, ಬ್ರಾಹ್ಮಣ ಮತದಾರರು ಬಿಜೆಪಿ ಪರವಾಗಿದ್ದಾರೆ. ಈ ತಂತ್ರಗಾರಿಕೆ ಯಶಸ್ವಿಯಾದರೆ ಕೋಲಾರದಲ್ಲಿ ಬಿಜೆಪಿಗೆ ಜಯ ಸಿಗಬಹುದು ಎಂಬ ಲೆಕ್ಕಾಚಾರವನ್ನು ಕಮಲ ನಾಯಕರು ಹಾಕಿಕೊಂಡಿದ್ದಾರೆ. ಬೈರತಿ ಬಸವರಾಜು, ಈಶ್ವರಪ್ಪ, ಎಂಟಿಬಿ, ಅಭ್ಯರ್ಥಿ ವರ್ತೂರು ಪ್ರಕಾಶ್ ಮೂಲಕ ಕುರುಬ ಮತ ಸೆಳೆಯಲು ಪ್ಲಾನ್ ಮಾಡಲಾಗಿದೆ.
ಕೋಲಾರ ಲೆಕ್ಕಾಚಾರ
ಕ್ಷೇತ್ರದ ಒಟ್ಟು ಮತಗಳು – 2.32 ಲಕ್ಷ
ಪರಿಶಿಷ್ಟ ಜಾತಿ – 49 ಸಾವಿರ
ಮುಸ್ಲಿಮರು – 51 ಸಾವಿರ
ಒಕ್ಕಲಿಗರು – 40 ಸಾವಿರ
ಕುರುಬರು – 28 ಸಾವಿರ
ಕ್ರೈಸ್ತರು – 12 ಸಾವಿರ
ಪರಿಶಿಷ್ಟ ಪಂಗಡ- 11 ಸಾವಿರ
ಬ್ರಾಹ್ಮಣ, ಬಲಿಜ ಸೇರಿ ಇತರರು – 40 ಸಾವಿರ
Live Tv
[brid partner=56869869 player=32851 video=960834 autoplay=true]
ನವದೆಹಲಿ: 2024ರ ಲೋಕಸಭೆ ಚುನಾವಣೆಗೆ ತಯಾರಿ ಆರಂಭವಾಗಿದೆ. ಭಾರತ್ ಜೋಡೊ ಯಾತ್ರೆ ಮೂಲಕ ಕಾಂಗ್ರೆಸ್(Congress) ಬಲವರ್ಧನೆ ಪ್ರಯತ್ನಗಳು ನಡೆಯುತ್ತಿದ್ದರೇ, ಬಿಹಾರ್ ಮುಖ್ಯಮಂತ್ರಿ ನಿತೀಶ್ ಕುಮಾರ್ ತೃತೀಯ ರಂಗ ಸ್ಥಾಪನೆಗೆ ಕಸರತ್ತು ಆರಂಭಿಸಿದ್ದಾರೆ. ಈ ನಡುವೆ ಬಿಜೆಪಿಯೂ ಮುಂಬರುವ ಸಾರ್ವತ್ರಿಕ ಚುನಾವಣೆಗೆ ಹೊಸ ತಂತ್ರಗಳನ್ನು ರೂಪಿಸುತ್ತಿದೆ.
ಲೋಕಸಭೆ ಚುನಾವಣೆ(Election) ತಯಾರಿ ನಡೆಸಿರುವ ಬಿಜೆಪಿ(BJP) ಹೈಕಮಾಂಡ್ ಪ್ರಮುಖ 144 ಕ್ಷೇತ್ರಗಳ ಮೇಲೆ ಗಮನ ಹರಿಸಿದೆ. 2019ರ ಚುನಾವಣೆಯಲ್ಲಿ ಕಡಿಮೆ ಅಂತರದಲ್ಲಿ ಸೋತ ಕ್ಷೇತ್ರಗಳನ್ನು ಪಟ್ಟಿ ಮಾಡಿರುವ ಹೈಕಮಾಂಡ್ ನಾಯಕರು ಕೇಂದ್ರ ಸಚಿವರನ್ನು ಸಂಘಟನೆಗೆ ನಿಯೋಜಿಸುವ ಮೂಲಕ ಗೆಲುವಿಗೆ ಹೊಸ ಪ್ಲ್ಯಾನ್ ರೂಪಿಸುತ್ತಿದೆ.
ದಕ್ಷಿಣ ಮತ್ತು ಪೂರ್ವ ಭಾರತದ 144 ಕ್ಷೇತ್ರಗಳನ್ನು ಬಿಜೆಪಿ ಆಯ್ಕೆ ಮಾಡಿಕೊಂಡಿದ್ದು, ಕೇಂದ್ರ ಸಚಿವರು ಈ ಕ್ಷೇತ್ರಗಳಲ್ಲಿ ಕನಿಷ್ಠ 48 ಗಂಟೆಗಳ ಪ್ರವಾಸ ಮಾಡಬೇಕು ಎಂದು ಸೂಚಿಸಲಾಗಿದೆ. ಅಲ್ಲದೇ ಆಗ್ಗಾಗ್ಗೆ ಭೇಟಿ ನೀಡಿ ಜನರೊಂದಿಗೆ ಬೆರೆಯುವಂತೆ ನಿರ್ದೇಶನ ನೀಡಲಾಗಿದೆ. ಈ ಕ್ಷೇತ್ರಗಳ ಪ್ರವಾಸ ವೇಳೆ ಜನರೊಂದಿಗೆ ಸಂವಾದ ನಡೆಸಿ, ಕೇಂದ್ರ ಸರ್ಕಾರದ ಯೋಜನೆಗಳ ಅನುಷ್ಠಾನ ಸೇರಿದಂತೆ ಜನರ ಅಗತ್ಯತೆಗಳನ್ನು ಅರಿಯುವಂತೆ ಪಕ್ಷ ಸೂಚಿಸಿದೆ.
ಗೃಹ ಸಚಿವ ಅಮಿತ್ ಶಾ(Amit Shah) ಇದನ್ನು ಮೇಲ್ವಿಚಾರಣೆ ಮಾಡುತ್ತಿದ್ದು, ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ(JP Nadda), ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಇದರ ನೇತೃತ್ವ ವಹಿಸಿಕೊಂಡಿದ್ದಾರೆ. ಸಂಘಟನೆ ದುರ್ಬಲವಾದರೇ ಗೆಲುವು ಸುಲಭವಲ್ಲ. ಹೀಗಾಗಿ ಕಠಿಣ ಕ್ರಮದೊಂದಿಗೆ ಪಕ್ಷ ಕಟ್ಟುವಂತೆ ಅಮಿತ್ ಶಾ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.
ಕಳೆದ ಮೇ ತಿಂಗಳಲ್ಲಿ ಸಚಿವ ಸಂಪುಟ ಪುನಾರಚನೆ ಬಳಿಕ 144 ಕ್ಷೇತ್ರಗಳನ್ನು ಆಯ್ಕೆ ಮಾಡಲಾಗಿತ್ತು. ಅಗಸ್ಟ್ 31ರ ವೇಳೆಗೆ ವರದಿ ನೀಡಲು ಸೂಚನೆ ನೀಡಲಾಗಿತ್ತು. ಅದು ಸಾಧ್ಯವಾಗದ ಹಿನ್ನೆಲೆ ಸೆಪ್ಟೆಂಬರ್ ಅಂತ್ಯಕ್ಕೆ ವರದಿ ನೀಡಲು ಕೇಂದ್ರ ಸಚಿವರಿಗೆ ಸೂಚನೆ ನೀಡಲಾಗಿದೆ. ಅಲ್ಲದೇ ಅಕ್ಟೋಬರ್‍ನಿಂದ ಎರಡನೇ ಹಂತದ ಪ್ರವಾಸಕ್ಕೂ ಸಮಯ ನಿಗದಿ ಮಾಡಲಾಗಿದೆ. ಇದನ್ನೂ ಓದಿ:ಬಿಎಸ್‌ವೈ, ಕುಟುಂಬದ ವಿರುದ್ಧ ಭ್ರಷ್ಟಾಚಾರ ಆರೋಪ – ಮರು ವಿಚಾರಣೆ ನಡೆಸುವಂತೆ ಹೈಕೋರ್ಟ್ ಆದೇಶ
ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್, ಎಸ್ ಜೈಶಂಕರ್ ಪಿಯೂಷ್ ಗೋಯಲ್, ಧರ್ಮೇಂದ್ರ ಪ್ರಧಾನ್, ಭೂಪೇಂದ್ರ ಯಾದವ್, ಸ್ಮೃತಿ ಇರಾನಿ, ಗಜೇಂದ್ರ ಸಿಂಗ್ ಶೇಖಾವತ್, ಅನುರಾಗ್ ಠಾಕೂರ್‌ಗೆ ಹೆಚ್ಚಿನ ಜವಾಬ್ದಾರಿ ನೀಡಲಾಗಿದೆ. ಮುಖ್ಯವಾಗಿ ಪಶ್ಚಿಮ ಬಂಗಾಳ, ಆಂಧ್ರ ಪ್ರದೇಶ, ತೆಲಂಗಾಣ, ಒಡಿಶಾ, ತಮಿಳುನಾಡು ಮತ್ತು ಕೇರಳದಲ್ಲಿ ಪಕ್ಷವು ಹೆಚ್ಚಿನ ಸ್ಥಾನಗಳನ್ನು ಗೆಲ್ಲಲು ಬಿಜೆಪಿ ಪ್ರಯತ್ನಿಸುತ್ತಿದೆ.
2019ರ ಲೋಕಸಭಾ ಚುನಾವಣೆಗೆ ಮುಂಚಿತವಾಗಿ ಬಿಜೆಪಿಯು ಗೆಲ್ಲಲು ಸಾಧ್ಯವಾಗದ ಸುಮಾರು 115 ಕ್ಷೇತ್ರಗಳನ್ನು 2016ರಲ್ಲಿ ಹೊಸ ಜಲಾನಯನ ಪ್ರದೇಶ ಎಂದು ಬಿಜೆಪಿ ಗುರುತಿಸಿತ್ತು. ಒಡಿಶಾ, ಪಶ್ಚಿಮ ಬಂಗಾಳ, ಆಂಧ್ರಪ್ರದೇಶ, ತೆಲಂಗಾಣ, ತಮಿಳುನಾಡು, ಕೇರಳ ಮತ್ತು ಈಶಾನ್ಯ 6 ರಾಜ್ಯಗಳಲ್ಲಿ ಸಂಘಟನೆ ಆರಂಭಿಸಿತ್ತು. 2019ರ ಲೋಕಸಭೆ ಚುನಾವಣೆಯಲ್ಲಿ ಒಡಿಶಾ, ಪಶ್ಚಿಮ ಬಂಗಾಳ ಮತ್ತು ಈಶಾನ್ಯದಲ್ಲಿ ಬಿಜೆಪಿ ತನ್ನ ಸ್ಥಾನವನ್ನು ಸುಧಾರಿಸಿತ್ತು. ಹೀಗಾಗಿ ಇದೇ ಪ್ರಯತ್ನ ಪುನಾರಂಭಗೊಂಡಿದೆ. ಇದನ್ನೂ ಓದಿ: ರೈಲಿಗೆ ಸಿಲುಕಿ ಎರಡನೇ ತರಗತಿ ವಿದ್ಯಾರ್ಥಿ ಸಾವು
Live Tv
[brid partner=56869869 player=32851 video=960834 autoplay=true]
ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್ ಹೇಳಿಕೆಯ ಬೆನ್ನಲ್ಲೇ ಭಾನುವಾರ ಮಲ್ಲೇಶ್ವರದಲ್ಲಿರುವ ಬಿಜೆಪಿ ಕಚೇರಿಯಲ್ಲಿ ಹಿರಿಯ ನಾಯಕರು ಎರಡೂವರೆ ಗಂಟೆಗಳ ಕಾಲ ಮಹತ್ವದ ಸಭೆ ನಡೆಸಿದ್ದಾರೆ.
ಬಿ.ಎಲ್ ಸಂತೋಷ್ ಜೊತೆಗಿನ ಸಭೆ, ಸಿಎಂ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಮಾತುಕತೆ ನಡೆಸಿದ್ದಾರೆ.
ಬಿಜೆಪಿ ಗೃಹ ಸಚಿವ ಅಮಿತ್ ಶಾ ರಾಜ್ಯ ಪ್ರವಾಸದ ಬಗ್ಗೆ ನಾಯಕರು ಸಭೆ ನಡೆಸಿದ್ದಾರೆ ಎಂದು ನಾಯಕರು ಹೇಳಿದ್ದಾರೆ. ಆದರೆ ಬಿಎಲ್ ಸಂತೋಷ್ ಮೈಸೂರಿನಲ್ಲಿ ನೀಡಿದ ಹೇಳಿಕೆಯ ಬೆನ್ನಲ್ಲೇ ನಾಯಕರು ಎರಡೂವರೆ ಗಂಟೆ ಸಭೆ ನಡೆಸಿದ್ದರಿಂದ ಸಂಪುಟ ಪುನಾರಚನೆ, ಕೆಲ ಮಹತ್ವದ ಬದಲಾವಣೆ ಬಗ್ಗೆ ಚರ್ಚೆ ನಡೆದಿದ್ಯಾ ಎಂಬ ಪ್ರಶ್ನೆ ಎದ್ದಿದೆ.
ಸಂಪುಟ ಪುನರ್‌ರಚನೆ ಸರ್ಕಸ್ ನಡೆಯುತ್ತಿರುವಾಗಲೇ , ಸಂಘಟನೆಗಾಗಿ ದುಡಿದ ಹೊಸ ಮುಖಗಳಿಗೆ ಹೆಚ್ಚು ಅವಕಾಶ ನೀಡುತ್ತಿರುವುದಾಗಿ ಬಿಎಲ್ ಸಂತೋಷ್ ನೀಡಿರುವ ಹೇಳಿಕೆ ಕಮಲ ಪಾಳಯದಲ್ಲಿ ಸಂಚಲನ ಮೂಡಿಸಿದೆ.
ಬೆಂಗಳೂರಿಗೆ ಅಮಿತ್ ಷಾ ಆಗಮಿಸುವ ಎರಡು ದಿನ ಮೊದಲೇ ಸಂತೋಷ್ ಅವರ ಮಾತುಗಳ ಹಿಂದಿನ ಮರ್ಮ ಏನು ಎಂಬುದರ ಬಗ್ಗೆ ನಾನಾ ದೃಷ್ಟಿಕೋನಗಳಿಂದ ಬಿಜೆಪಿ ಒಳಗೆ ಚರ್ಚೆಗಳು ಶುರುವಾಗಿವೆ. ಸಂಘಟನೆಯ ನಾಯಕತ್ವದಲ್ಲಿ ಬದಲಾವಣೆ ತರಬಹುದಾ? ಸರ್ಕಾರದ ನಾಯಕತ್ವದಲ್ಲಿ ಬದಲಾವಣೆ ತರಬಹುದಾ? ಮುಂದಿನ ಚುನಾವಣೆಯ ಭವಿಷ್ಯದ ನಾಯಕತ್ವದಲ್ಲಿಬದಲಾವಣೆ ತರುವ ಮಾತುಗಳ ಎಂಬುದಕ್ಕೆ ಸ್ಪಷ್ಟತೆ ಸಿಗುತ್ತಿಲ್ಲ. ಕುಟುಂಬ ರಾಜಕಾರಣ ವಿರೋಧಿಸಿ ಸಿಎಂ ಕುರ್ಚಿಗೆ ವಯಸ್ಸಿನ ಮಿತಿಯನ್ನ ಫಿಕ್ಸ್ ಮಾಡಿ ಸಂತೋಷ್ ಆಡಿರುವ ಮಾತುಗಳು ಹೆಚ್ಚು ಮಹತ್ವವನ್ನ ಪಡೆದುಕೊಂಡಿವೆ. ಇದನ್ನೂ ಓದಿ: ಯೋಗಿ ಆದಿತ್ಯನಾಥ್ ಜತೆ ಕಂಗನಾ ರಣಾವತ್ ಮೀಟಿಂಗ್?
ಈಗಾಗಲೇ ಗುಜರಾತ್ ಮತ್ತು ಉತ್ತರ ಪ್ರದೇಶದಲ್ಲಿ ಹಿರಿಯ ನಾಯಕರನ್ನು ಕೈ ಬಿಟ್ಟು ಯುವ ಮುಖಗಳಿಗೆ ಬಿಜೆಪಿ ಮಣೆ ಹಾಕಿದೆ. ಪಕ್ಷ ಸಂಘಟನೆ ದೃಷ್ಟಿಯಿಂದ ನೀಡಿದ ಈ ಪ್ರಯೋಗ ಯಶಸ್ವಿಯಾಗಿದ್ದು ಎರಡೂ ಕಡೆಯೂ ಬಿಜೆಪಿ ಜಯಗಳಿಸಿದೆ. ಮುಂದೆ ಕರ್ನಾಟಕದಲ್ಲೂ ಚುನಾವಣೆ ನಡೆಯಲಿರುವ ಕಾರಣ ಇಲ್ಲೂ ಈ ಪ್ರಯೋಗ ನಡೆಯುತ್ತಾ ಎನ್ನುವುದೇ ಕುತೂಹಲ.
ಬೆಂಗಳೂರು: ಭಜರಂಗದಳದ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣದ ಕುರಿತಾಗಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಟ್ವೀಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಟ್ವೀಟ್‍ನಲ್ಲಿ ಏನಿದೆ?: ಶಿವಮೊಗ್ಗದಲ್ಲಿ ರಾಷ್ಟ್ರ ವಿರೋಧಿ, ಹಿಂದೂ ವಿರೋಧಿ ಮೂಲಭೂತವಾದಿ ಶಕ್ತಿಗಳಿಂದ ಹರ್ಷ ಹತ್ಯೆಗೀಡಾಗಿದ್ದಾನೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಇದು ಮೊದಲ ಮೊದಲ ಪುಟದಲ್ಲಿ ಸುದ್ದಿಯಾಗುವುದಿಲ್ಲ. ಯಾಕೆಂದರೆ ಅವರು ಹಿಂದೂ ಆಗಿದ್ದರು. ಅವರು ರಾಷ್ಟ್ರೀಯವಾದಿಯಾಗಿದ್ದರು. ಹರ್ಷ ಕುಟುಂಬದ ಪರವಾಗಿ ನಿಲ್ಲೋಣ ಎಂದು ಟ್ವೀಟ್ ಮಾಡಿದ್ದಾರೆ.
#YesToUniform_NoToHijabಅನ್ನು ಬೆಂಬಲಿಸಿದ್ದಕ್ಕಾಗಿ ಶಿವಮೊಗ್ಗದಲ್ಲಿ ಅವರ ಮನೆಯ ಮುಂದೆಯೇ ಜಿಹಾದಿ ಮೂಲಭೂತವಾದಿಗಳು ಹರ್ಷನನ್ನು ಬರ್ಬರವಾಗಿ ಕೊಂದಿದ್ದಾರೆ. ಬಲಿದಾನಗೈದ ಹರ್ಷ ಅವರಿಗೆ ನಮನಗಳು. ಈ ದುಃಖದ ಸಮಯದಲ್ಲಿ ನಾವು ಅವರ ಕುಟುಂಬದ ಬೆಂಬಲಕ್ಕೆ ನಿಲ್ಲುತ್ತೇವೆ ಎಂದು ಟ್ವೀಟ್ ಮಾಡಿದ್ದಾರೆ. ಮಂಗಳೂರು ಮುಸ್ಲಿಂ ಫೇಸ್‍ಬುಕ್ ಖಾತೆಯಲ್ಲಿ ಬರೆಯಾಗಿರವ ಒಂದು ಸ್ಕ್ರೀನ್ ಶಾರ್ಟ್ ಕೂಡ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಯುವಕನ ಕೊಲೆ ಪ್ರಕರಣ- ಓರ್ವ ಆರೋಪಿ ವಶಕ್ಕೆ, ನಾಲ್ವರಿಗಾಗಿ ಹುಡುಕಾಟ
Harsha was killed by anti national , anti Hindu fundamentalist forces in Shivamogga . No FOE for him . No front page support or tributes to him by international lobby . He was Hindu . He was nationalist . Let’s stand by the family . Let’s stand by the cause .
???????????? pic.twitter.com/4JsQMZ53MM
ಫೇಸ್‍ಬುಕ್ ಪೋಸ್ಟ್‌ನಲ್ಲಿ ಏನಿದೆ?: ಹರ್ಷ ಶಿವಮೊಗ್ಗ ಎನ್ನುವ ಹಿಂದುತ್ವದ ಭಯೋತ್ಪಾದಕ ಸಂಘನೆಯ ಕಾರ್ಯಕರ್ತನಿಂದ ಪ್ರವಾದಿ ಮಹಮ್ಮದ್ ಮುಸ್ತಫ ಸ.ಅ ಹಾಘು ಅಲ್ಲಾಹುನ ಬಗ್ಗೆ ಅಶ್ಲೀಲ ಪದಗಳಿಂದ ನಿಂದನೆ ಮಾಡಿದ್ದು, ಹಾಗೂ ಕಅಬಾದ ಫೋಟೋವನ್ನು ಅಶ್ಳೀಲವಾಗಿ ಎಡಿಟ್ ಮಾಡಿ ಸಾಮಾಜಿಕ ತಾಣಗಳಲ್ಲಿ ಹರಿಬಿಡುತ್ತಿದ್ದಾನೆ. ಶಿವಮೊಗ್ಗದ ಜನತೆ ಈತನನ್ನು ಸರಿಯಾಗಿ ವಿಚಾರಿಸಿ ಹತ್ತಿರದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಹಾಗೂ ಈತನಿಗೆ ನೀಡಬೇಕಾದ ಚಿಕಿತ್ಸೆ ನೀಡಬೇಕಾಗಿ ವಿನಂತಿ. ಕರಾವಳಿಯ ಸಹೋದರರೆ ಈತನ ಮೇಲೆ ಹಲವಾರು ಪ್ರಕರಣ ದಾಖಲಿಸಿ ಈತನನ್ನು ಜೈಲಿನಲ್ಲಿ ಕೊಳೆಯುವಂತೆ ಮಾಡಬೇಕು ಅಥವಾ ಪೊಲೀಸ್ ಠಾಣೆ ಹಾಗೂ ಕೋರ್ಟ್‍ಗೆ ಅಲೆದಾಡುವಂತೆ ಮಾಡಬೇಕು ಎಂದು ಮಂಗಳೂರು ಮುಸ್ಲಿಂ ಫೇಸ್‍ಬುಕ್ ಖಾತೆಯಲ್ಲಿ ಈ ಹಿಂದೆ ಬರೆದ ಪೋಸ್ಟ್ ಅನ್ನು ಅಪ್ಲೋಡ್ ಮಾಡಿದ್ದಾರೆ. ಇದನ್ನೂ ಓದಿ:2 ವರ್ಷದ ಹಿಂದೆಯೇ 10 ಲಕ್ಷಕ್ಕೆ ಸುಪಾರಿ ಕೊಟ್ಟಿದ್ದರು: ಮೃತನ ಸಂಬಂಧಿ ಹೇಳಿಕೆ
Harsha was killed by jihadi fundamentalists brutally in front of his home in Shivamogga for supporting #YesToUniform_NoToHijab . He was a marked man by anti Hindu forces . Tributes to Balidani Harsha . We will stand by his family in this hour of grief . ???????????? pic.twitter.com/Tb1GLINvv4
ನಡೆದಿದ್ದೇನು?: ಭಾನುವಾರ ರಾತ್ರಿ ಹರ್ಷ ಕ್ಯಾಂಟೀನ್ ಬಳಿ ಟೀ ಕುಡಿಯುತ್ತಾ ನಿಂತಿದ್ದ ವೇಳೆ ಕಾರಿನಲ್ಲಿ ಬಂದ ಯುವಕರ ಗುಂಪು ಏಕಾಏಕಿ ಹರ್ಷನ ಮೇಲೆ ದಾಳಿ ನಡೆಸಿದೆ. ನಂತರ ದಾಳಿ ನಡೆಸಿದ ತಂಡ ಸ್ಥಳದಿಂದ ಪರಾರಿಯಾಗಿದೆ. ಈ ವೇಳೆ ದಾಳಿಗೆ ಒಳಗಾದ ಹರ್ಷ ಸ್ಥಳದಲ್ಲೇ ಕುಸಿದು ಬಿದ್ದಿದ್ದಾನೆ. ನಂತರ ಆತನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಆದರೆ ತೀವ್ರವಾಗಿ ಹಲ್ಲೆಗೊಳಗಾಗಿದ್ದ ಹರ್ಷ ಮೆಗ್ಗಾನ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಈ ವಿಷಯ ತಿಳಿಯುತ್ತಿದ್ದಂತೆ ಎರಡು ಕೋಮಿನ ಯುವಕರ ಗುಂಪು ಮೆಗ್ಗಾನ್ ಆಸ್ಪತ್ರೆ ಬಳಿ ಜಮಾಯಿಸಿತು. ಹೀಗಾಗಿ ಮೆಗ್ಗಾನ್ ಆಸ್ಪತ್ರೆ ಬಳಿ ಬಿಗುವಿನ ವಾತಾವರಣ ಸೃಷ್ಟಿಯಾಗಿತ್ತು.
ಬೆಂಗಳೂರು: ರಾಜ್ಯ ಸಚಿವ ಸಂಪುಟಕ್ಕೆ ಸಂಕ್ರಾಂತಿ ವೇಳೆ ಮೇಜರ್ ಸರ್ಜರಿ ಆಗಲಿದೆ ಎಂಬ ಸುದ್ದಿಯ ನಡುವೆ ಜನವರಿ 8, 9ಕ್ಕೆ ಬಿಜೆಪಿ ಮಹತ್ವದ ಸಭೆ ಫಿಕ್ಸ್ ಆಗಿದೆ. ನಂದಿಬೆಟ್ಟದಲ್ಲಿ ಸಚಿವರ ಜೊತೆ ಸಭೆ ನಡೆಸಲು ಹೈಕಮಾಂಡ್ ನಾಯಕರು ಪ್ಲ್ಯಾನ್ ಮಾಡಿದ್ದು, ಸಚಿವರ ಕಾರ್ಯವೈಖರಿ, ಮೌಲ್ಯಮಾಪನ, ಪಕ್ಷ ಸಂಘಟನೆ ಬಗ್ಗೆ ಸುದೀರ್ಘ ಸಮಾಲೋಚನೆ ನಡೆಸಲಿದ್ದಾರೆ ಎನ್ನಲಾಗಿದೆ.
ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಗೃಹ ಸಚಿವ ಅಮಿತ್ ಶಾ, ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಸಭೆಯಲ್ಲಿ ಭಾಗಿಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಸಚಿವ ಸಂಪುಟ ಪುನರ್ ರಚನೆ ಸುಳಿವು ಬೆನ್ನಲ್ಲೇ ಸಚಿವರ ಜೊತೆ ಸಭೆ ಕುತೂಹಲ ಮೂಡಿಸಿದೆ. ಕೆಲ ಸಚಿವರ ಕಾರ್ಯವೈಖರಿ ಬಗ್ಗೆ ಹೈಕಮಾಂಡ್ ಗೆ ಅತೃಪ್ತಿ ಹೊಂದಿದ್ದು, ಸಚಿವರ ಜೊತೆ ಹೈಕಮಾಂಡ್ ಸಭೆ ಮಹತ್ವ ಪಡೆದುಕೊಂಡಿದೆ. ಇದೇ ವೇಳೆ ರಾಜ್ಯ ಬಿಜೆಪಿ ಕೋರ್ ಕಮಿಟಿ ಸದಸ್ಯರ ಸಭೆ, ಪದಾಧಿಕಾರಿಗಳ ಸಭೆ ಕೂಡ ನಿಗದಿಯಾಗಿದ್ದು ಸಂಕ್ರಾಂತಿ ನಂತರದ ಸಂಪುಟ ಪುನಾರಚನೆಗೆ ವೇದಿಕೆ ಆಗುತ್ತಾ ಎಂಬ ಪ್ರಶ್ನೆ ಎದ್ದಿದೆ. ಇದನ್ನೂ ಓದಿ: ಸಿಎಂ ಬೊಮ್ಮಾಯಿ ಸಂಪುಟದ 6 ಸಚಿವರಿಗೆ ಕೊಕ್?
ಬಸವರಾಜ ಬೊಮ್ಮಾಯಿ ಕ್ಯಾಬಿನೆಟ್ ಗೆ ಅಗ್ನಿಪರೀಕ್ಷೆನಾ? ಸಚಿವರಿಗೆ ಮಾರ್ಕ್ಸ್ ಫಿಕ್ಸ್ ಮಾಡುತ್ತಾ ಬಿಜೆಪಿ ಹೈಕಮಾಂಡ್? ಅನ್ನೋ ಚರ್ಚೆ ಶುರುವಾಗಿದೆ. ಬಿಜೆಪಿಯ ಆಂತರಿಕ ವಲಯದಲ್ಲಿ ನಾನಾ ಲೆಕ್ಕಾಚಾರ ಆರಂಭವಾಗಿದೆ. ಪಾಸ್ ಆದವರಷ್ಟೇ ಕ್ಯಾಬಿನೆಟ್ ನಲ್ಲಿ ಉಳಿದುಕೊಳ್ತಾರಾ? ಫೇಲ್ ಆದವರು ಕ್ಯಾಬಿನೆಟ್ ನಿಂದ ಹೊರಗೆ ಹೋಗ್ತಾರಾ? ಹೊಸ ವರ್ಷದ ಎರಡನೇ ವಾರದಲ್ಲೇ ಹೈಕಮಾಂಡ್ ಶಾಕ್ ಕೊಡುತ್ತಾ ಎಂಬುದನ್ನು ಕಾದುನೋಡಬೇಕಿದೆ. ಇದನ್ನೂ ಓದಿ: ಸಿದ್ದರಾಮಯ್ಯ ಕಾಂಗ್ರೆಸ್ ಪಕ್ಷವನ್ನು ಮುಗಿಸಲು ಹೊರಟಿದ್ದಾರೆ: ಶ್ರೀರಾಮುಲು
ಇನ್ನೊಂದೆಡೆ ಸಂಪುಟ ಪುನಾರಚನೆಗೆ ಗ್ರೀನ್ ಸಿಗ್ನಲ್ ಕೊಡುತ್ತಾ ಬಿಜೆಪಿ ಹೈಕಮಾಂಡ್? ಅನುಮತಿ ನೀಡಿದರೆ 6+4 ಸೂತ್ರದಡಿಯಲ್ಲಿ ಸಂಪುಟ ಪುನಾರಚನೆ ಆಗುತ್ತಾ? ಎಂಬ ಚರ್ಚೆ ಕೂಡ ಜೋರಾಗಿಯೇ ಇದೆ. ವಲಸಿಗರಲ್ಲಿ ಮೂರು, ಮೂಲದಲ್ಲಿ ಮೂರು ಜನ ಹೊರಕ್ಕೆ ಹೋಗುವ ಸಾಧ್ಯತೆ ಇದ್ದು, ಸಂಕ್ರಾಂತಿ ಬಳಿಕ ಎಲೆಕ್ಷನ್ ಕ್ಯಾಬಿನೆಟ್ ರಚನೆಯಾಗುತ್ತಾ ಎಂಬ ಪ್ರಶ್ನೆಗೆ ಜನವರಿ ಎರಡು, ಮೂರನೇ ವಾರದಲ್ಲಿ ಉತ್ತರ ಸಿಗಲಿದೆ.
ಶಬ್ಬೀರ್ ನಿಡಗುಂದಿ ನವದೆಹಲಿ: ಅಣ್ಣಾಮಲೈ ಬಳಿಕ ರಾಜ್ಯದ ಮತ್ತೊಬ್ಬ ಐಪಿಎಸ್ ಅಧಿಕಾರಿ ರವಿ ಡಿ ಚನ್ನಣ್ಣನವರ್ ಶೀಘ್ರದಲ್ಲಿ ಬಿಜೆಪಿ ಸೇರುವ ತಯಾರಿಯಲ್ಲಿದ್ದಾರಾ ಎಂಬ ಪ್ರಶ್ನೆ ಎದ್ದಿದೆ.
ಹೌದು. ಉನ್ನತ ಹುದ್ದೆಯ ಕನಸು ಕಂಡು ಹಗಲಿರುಳು ಓದಿ ದಕ್ಕಿಸಿಕೊಂಡ ಐಎಎಸ್, ಐಪಿಎಸ್ ನಂತಹ ಉನ್ನತ ಸ್ಥಾನಗಳನ್ನು ತೊರೆದು ರಾಜಕೀಯಕ್ಕೆ ಎಂಟ್ರಿ ಕೊಡುವ ಅಧಿಕಾರಿಗಳ ಸಂಖ್ಯೆ ಹೆಚ್ಚಾಗುತ್ತಿದೆ. 2014ರಲ್ಲಿ ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಇಂತಹದೊಂದು ಟ್ರೆಂಡ್ ಶುರುವಾಗಿದ್ದು ಯುವ ಅಧಿಕಾರಿಗಳು ರಾಜಕೀಯದತ್ತ ಮುಖ ಮಾಡಿದ್ದು ಈಗ ಚನ್ನಣ್ಣನವರ್ ಬಿಜೆಪಿ ಸೇರುವ ಬಗ್ಗೆ ಮಾತುಕತೆ ನಡೆಯುತ್ತಿದೆ ಎಂಬ ವಿಚಾರವನ್ನು ಮೂಲಗಳು ಪಬ್ಲಿಕ್ ಟಿವಿಗೆ ತಿಳಿಸಿವೆ.
ರಾಜ್ಯದಲ್ಲಿ ಸೂಪರ್ ಕಾಪ್ ಎಂದೇ ಫೇಮಸ್ ಆಗಿರುವ ರವಿ ಡಿ ಚನ್ನಣ್ಣನವರ್‍ರನ್ನ ಬಿಜೆಪಿ ಸೆಳೆಯಲು ಮುಂದಾಗಿದೆಯಂತೆ. ಈ ಬಗ್ಗೆ ಪ್ರಾಥಮಿಕ ಮಾತುಕತೆಗಳು ನಡೆಯುತ್ತಿದ್ದು ರವಿ ಡಿ ಚನ್ನಣ್ಣನವರ್ ಪೂರಕವಾಗಿ ಸ್ಪಂದಿಸಿದ್ದಾರೆ ಎಂದು ಬಿಜೆಪಿ ಮೂಲಗಳು ಹೇಳುತ್ತಿವೆ.
ಕಳೆದ ಮಂಗಳವಾರ ದೆಹಲಿಯಲ್ಲಿ ರವಿ ಚನ್ನಣ್ಣನವರ್ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರನ್ನು ಭೇಟಿಯಾಗಿದ್ದಾರೆ. ಕೊಳ್ಳೇಗಾಲದ ಶಾಸಕ ಎನ್ ಮಹೇಶ್ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಸೇರ್ಪಡೆಗೂ ಮುನ್ನ ಮಹೇಶ್ ಸಂತೋಷ್ ಅವರನ್ನು ಭೇಟಿಯಾಗಿದ್ದರು. ಇದೇ ಸಂದರ್ಭದಲ್ಲಿ ರವಿ ಚನ್ನಣ್ಣನವರ್ ಕೂಡಾ ಇದ್ದರು ಎಂದು ಮೂಲಗಳು ಹೇಳಿದ್ದು, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಸಮ್ಮುಖದಲ್ಲಿ ಸಭೆ ಕೂಡಾ ನಡೆದಿದೆ ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ: ಜೋಗ ವೀಕ್ಷಣೆಗೆ ಕೊರೊನಾ ನೆಗೆಟಿವ್ ವರದಿ ಕಡ್ಡಾಯ
ಅಣ್ಣಾಮಲೈ ತಮಿಳುನಾಡು ರಾಜ್ಯ ಬಿಜೆಪಿ ಅಧ್ಯಕ್ಷರಾದ ಬಳಿಕ ರವಿ ಚನ್ನಣ್ಣನವರ್ ಕೂಡಾ ರಾಜಕೀಯಕ್ಕೆ ಸೇರಲು ಉತ್ಸುಕರಾಗಿದ್ದು ಮುಂದಿನ ದಿನಗಳಲ್ಲಿ ಅಣ್ಣಾಮಲೈ ದಾರಿ ಹಿಡಿಯಬಹುದು ಎಂದು ಹೇಳಲಾಗುತ್ತಿದೆ. ರಾಜ್ಯದಲ್ಲೂ ಜನಪ್ರಿಯ ಅಧಿಕಾರಿಗಳಿಗೆ ಆದ್ಯತೆ ನೀಡಲು ಬಿಜೆಪಿ ಪ್ಲ್ಯಾನ್ ಮಾಡಿದ್ದು ವರ್ಚಸ್ಸು ಹೆಚ್ಚಿಸುವ ಲೆಕ್ಕ ಲೆಕ್ಕಚಾರದಲ್ಲಿ ಇದೆಯಂತೆ.
ರಾಜ್ಯದ ಮಟ್ಟಿಗೆ ರವಿ ಡಿ ಚನ್ನಣ್ಣನವರ್ ಪ್ರಖ್ಯಾತಿ ಪಡೆದಿದ್ದು ಸಿಂಗಂ ಎಂದು ಕರೆಸಿಕೊಳ್ಳುತ್ತಿದ್ದಾರೆ. ಗದಗ ಮೂಲದ ಈ ಐಪಿಎಸ್ ಅಧಿಕಾರಿಯನ್ನು ರಾಜ್ಯದ ದೊಡ್ಡ ಪ್ರಮಾಣದ ಯುವ ಸಮುದಾಯದ ಸ್ಫೂರ್ತಿಯಾಗಿಸಿಕೊಂಡಿದ್ದು ಮುಂದಿನ ಚುನಾವಣೆಗೆ ಇವರನ್ನು ಚುನಾವಣಾ ಅಖಾಡಕ್ಕೆ ಇಳಿಸುವ ಲೆಕ್ಕಚಾರದಲ್ಲಿ ಬಿಜೆಪಿ ಇದೆ ಎನ್ನಲಾಗುತ್ತಿದೆ.