Tag: ಬಿಎಸ್ ಧನೋವಾ

  • ಮಿಗ್-21 ನಲ್ಲಿ ಹಾರಾಡಿದ ಅಭಿನಂದನ್

    ಮಿಗ್-21 ನಲ್ಲಿ ಹಾರಾಡಿದ ಅಭಿನಂದನ್

    ಪಠಾಣ್‍ಕೋಟ್: ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್ ಇಂದು ಏರ್ ಚೀಫ್ ಮಾರ್ಷಲ್ ಬಿಎಸ್ ಧನೋವಾ ಅವರೊಂದಿಗೆ ಮಿಗ್-21 ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿದ್ದಾರೆ.

    ಬಾಲಕೋಟ್ ಏರ್ ಸರ್ಜಿಕಲ್ ಸ್ಟ್ರೈಕ್ ಬಳಿಕ ಪಾಕಿಸ್ತಾನದ ಅತ್ಯಾಧುನಿಕ ಎಫ್-16 ಭಾರತದ ಗಡಿ ಪ್ರವೇಶಿಸಿತ್ತು. ಈ ವೇಳೆ ಕರ್ತವ್ಯದಲ್ಲಿದ್ದ ವಿಂಗ್ ಕಮಾಂಡರ್ ಅಭಿನಂದನ್ ಮಿಗ್-21 ಮೂಲಕವೇ ಎಫ್-16 ಯುದ್ಧ ವಿಮಾನವನ್ನು ಹೊಡೆದುರುಳಿಸಿದ್ದರು. ಸ್ವತಂತ್ರ ದಿನಾಚರಣೆಯಂದು ಅಭಿನಂದನ್ ಅವರಿಗೆ ವೀರ ಚಕ್ರ ನೀಡಿ ಭಾರತ ಸರ್ಕಾರ ಗೌರವಿಸಿತ್ತು.

    ಇಂದು ಪಂಜಾಬ್ ರಾಜ್ಯದ ಪಠಾಣಕೋಟ್ ವಾಯುನೆಲೆಯಿಂದ ಅಭಿನಂದನ್ ಮಿಗ್-21 ವಿಮಾನದಲ್ಲಿ ಹಾರಾಟ ನಡೆಸಿದರು. ವೈದ್ಯಕೀಯ ಪರೀಕ್ಷೆಯ ನಂತರ ಅಭಿನಂದನ್ ಅವರನ್ನು ವಿಮಾನ ಹಾರಾಟ ಹುದ್ದೆಗೆ ಪರಿಗಣಿಸಲಾಗಿತ್ತು. ಧನೋವಾರ ಜೊತೆ ಅಭಿನಂದನ್ ಸುಮಾರು ಅರ್ಧ ಗಂಟೆಗಳ ಕಾಲ ಹಾರಾಟ ನಡೆಸಿದ್ದಾರೆ ಎಂದು ವರದಿಯಾಗಿದೆ.

  • ಯಾವುದೇ ಸಮಯದಲ್ಲಿ ಯುದ್ಧ ನಡೆಯಬಹುದು, ಎಲ್ಲದಕ್ಕೂ ಸಿದ್ಧವಾಗಿರಿ: ಏರ್ ಚೀಫ್ ಮಾರ್ಷಲ್ ಪತ್ರ

    ಯಾವುದೇ ಸಮಯದಲ್ಲಿ ಯುದ್ಧ ನಡೆಯಬಹುದು, ಎಲ್ಲದಕ್ಕೂ ಸಿದ್ಧವಾಗಿರಿ: ಏರ್ ಚೀಫ್ ಮಾರ್ಷಲ್ ಪತ್ರ

    ನವದೆಹಲಿ: ಯಾವುದೇ ಕ್ಷಣದಲ್ಲಿ ಯುದ್ಧ ಎದುರಾಗುವ ಸಾಧ್ಯತೆ ಇದ್ದು ನೀವೆಲ್ಲರೂ ಸಿದ್ಧವಾಗಿರಿ ಎಂದು ಏರ್ ಚೀಫ್ ಮಾರ್ಷಲ್ ಬಿಎಸ್ ಧನೋವಾ ವಾಯುಪಡೆಯ ಪ್ರತಿಯೊಬ್ಬ ಅಧಿಕಾರಿಗೆ ವೈಯಕ್ತಿಕ ಪತ್ರ ಬರೆದಿದ್ದಾರೆ.

    ಈಗ ಇರುವ ಪರಿಸ್ಥಿತಿಯನ್ನು ಅವಲೋಕಿಸಿದರೆ, ನೆರೆ ರಾಷ್ಟ್ರಗಳ ಬಾಹ್ಯ ಬೆದರಿಕೆಯನ್ನು ನಾವು ಎದುರಿಸುತ್ತಿದ್ದೇವೆ. ಹೀಗಾಗಿ ಯಾವುದೇ ಸಮಯದಲ್ಲೂ ಕಾರ್ಯಾಚರಣೆ ನಡೆಸಲು ಸಿದ್ಧವಾಗಿರಿ ಎಂದು ಪತ್ರದಲ್ಲಿ ಬರೆದಿದ್ದಾರೆ.

    ವಾಯು ಸೇನೆಯ 12 ಸಾವಿರ ಅಧಿಕಾರಿಗಳಿಗೆ ಈ ಪತ್ರವನ್ನು ತಲುಪಿಸಲಾಗಿದೆ. ಈ ಪತ್ರದಲ್ಲಿ ನೆರೆ ರಾಷ್ಟ್ರಗಳಿಂದ ಭಾರತ ಎದುರಿಸುತ್ತಿರುವ ಯುದ್ಧ ಭಯವನ್ನು ಬಿಎಸ್ ಧನೋವಾ ಉಲ್ಲೇಖಿಸಿದ್ದಾರೆ. ಅಷ್ಟೇ ಅಲ್ಲದೇ ಈ ವಿಚಾರದಲ್ಲಿ ತರಬೇತಿಯನ್ನು ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

    ವಾಯುಸೇನೆಯ ಇತಿಹಾಸದಲ್ಲಿ ಇದೇ ಮೊದಲಬಾರಿಗೆ ಈ ರೀತಿಯ ಪತ್ರ ಬರೆಯಲಾಗಿದೆ. ಈ ಮೊದಲು ಮೇ 1, 1950ರಲ್ಲಿ ಜನರಲ್ ಕಾರ್ಯಪ್ಪ ಮತ್ತು ಫೆಬ್ರವರಿ 1,1986ರಲ್ಲಿ ಜನರಲ್ ಸುಂದರ್ಜಿ ಎಲ್ಲ ಅಧಿಕಾರಿಗಳಿಗೆ ಪತ್ರ ಬರೆದಿದ್ದರು.

    ಈ ವಿಚಾರದ ಬಗ್ಗೆ ವಾಯುಸೇನೆಯ ಅಧಿಕಾರಿಗಳನ್ನು ಸಂಪರ್ಕಿಸಿದಾಗ ಆಂತರಿಕ ಸಂವಹನಕ್ಕಾಗಿ ಈ ಪತ್ರ ಬರೆಯಲಾಗಿದೆ ಎಂದು ಹೇಳಿ ಈ ಪತ್ರದ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ.