Tag: ಬಿಎಸ್ ಯಡಿಯರೂಪ್ಪ

  • ಶೀಘ್ರದಲ್ಲಿ ರಾಜೀನಾಮೆ ನೀಡಲಿದ್ದಾರೆ ಡಿಕೆಶಿ: ಬಿಎಸ್‍ವೈ ಭವಿಷ್ಯ

    ಶೀಘ್ರದಲ್ಲಿ ರಾಜೀನಾಮೆ ನೀಡಲಿದ್ದಾರೆ ಡಿಕೆಶಿ: ಬಿಎಸ್‍ವೈ ಭವಿಷ್ಯ

    ಕಾರವಾರ: ಆದಾಯ ತೆರಿಗೆ ದಾಳಿಗೆ ಒಳಗಾಗಿರುವ ಇಂಧನ ಸಚಿವ ಡಿ.ಕೆ ಶಿವಕುಮಾರ್ ಶೀಘ್ರದಲ್ಲಿಯೇ ರಾಜೀನಾಮೆ ನೀಡುವ ಸ್ಥಿತಿ ಬರಲಿದೆ ಎಂದು ಯಡಿಯೂರಪ್ಪ ಭವಿಷ್ಯ ನುಡಿದಿದ್ದಾರೆ.

    ಭಟ್ಕಳ ತಾಲೂಕಿನ ಮುರುಡೇಶ್ವರದಲ್ಲಿ ಮಾತನಾಡಿದ ಅವರು, ಡಿ.ಕೆ ಶಿವಕುಮಾರ್ ಅಕ್ರಮವಾಗಿ ಆಸ್ತಿ ಗಳಿಕೆ ಮಾಡಿರುವುದು ಖಚಿತವಾಗಿದೆ ಎಂದು ಹೇಳಿದರು.

    ಐಟಿ ದಾಳಿಯಿಂದ ಅಕ್ರಮ ಆಸ್ತಿ ಗಳಿಕೆಯ ಬಗ್ಗೆ ಮಾಹಿತಿ ಸಿಕ್ಕ ನಂತರವೇ ಇಡೀ ಕುಟುಂಬವನ್ನ ವಿಚಾರಣೆಗೆ ಒಳಪಡಿಸಲಾಗಿದೆ. ಈ ಬಗ್ಗೆ ಆದಾಯ ತೆರಿಗೆ ಹಾಗೂ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಶೀಘ್ರದಲ್ಲಿಯೇ ಕ್ರಮ ಕೈಗೊಳ್ಳಲಿದ್ದಾರೆ. ಇದಾದ ನಂತರ ಅನಿವಾರ್ಯವಾಗಿ ಡಿ.ಕೆ ಶಿವಕುಮಾರ್ ರಾಜೀನಾಮೆ ನೀಡುವ ಪರಿಸ್ಥಿತಿ ಬರಲಿದೆ ಎಂದು ಯಡಿಯೂರಪ್ಪ ತಿಳಿಸಿದರು.

    ಇದನ್ನೂ ಓದಿ: Exclusive: ಡಿಕೆ ಶಿವಕುಮಾರ್ ಮಗಳು ಐಶ್ವರ್ಯಗೆ ಐಟಿ ಕೇಳಿದ ಪ್ರಶ್ನೆಗಳು ಏನು?

     

    ಇದನ್ನೂ ಓದಿ: ನಾನು ತೆರೆದ ಪುಸ್ತಕ, ಯಾವುದಕ್ಕೂ ಭಯಪಡಲ್ಲ: ಡಿಕೆ ಶಿವಕುಮಾರ್

    ಇದನ್ನೂ ಓದಿ:  Exclusive: ಡಿಕೆ ಶಿವಕುಮಾರ್ ತಾಯಿ ಗೌರಮ್ಮಗೆ ಐಟಿ ಕೇಳಿದ ಪ್ರಶ್ನೆಗಳು ಏನು..?

    ಇದನ್ನೂ ಓದಿ: ಡಿಕೆಶಿ ಮೇಲೆ ಐಟಿ ದಾಳಿಗೆ ಪ್ಲ್ಯಾನ್ ನಡೆದಿದ್ದು ಹೀಗೆ

     

     

     

  • ಬಿಎಸ್‍ವೈಗೆ ಸೆಡ್ಡು ಹೊಡೆದು ಕಾಂಗ್ರೆಸ್ ಪರ ವಾತಾವರಣ ಮೂಡಿಸಲು ಸಿಎಂ ಮಾಸ್ಟರ್ ಪ್ಲಾನ್

    ಬಿಎಸ್‍ವೈಗೆ ಸೆಡ್ಡು ಹೊಡೆದು ಕಾಂಗ್ರೆಸ್ ಪರ ವಾತಾವರಣ ಮೂಡಿಸಲು ಸಿಎಂ ಮಾಸ್ಟರ್ ಪ್ಲಾನ್

    ಬೆಂಗಳೂರು: ಯಡಿಯೂರಪ್ಪ ಸೇರಿದಂತೆ ಕೆಲವು ಬಿಜೆಪಿ ಲಿಂಗಾಯತ ನಾಯಕರು ನಮ್ಮ ಸಮುದಾಯದ ವಿಷಯ ಬೇರೆಯವರಿಗೆ ಯಾಕೆ ಎಂದು ಸೆಡ್ಡು ಹೊಡೆದಿದ್ದಕ್ಕೆ ಎದುರೇಟು ನೀಡಲು ಸಿಎಂ ಸಿದ್ದರಾಮಯ್ಯ ಮಾಸ್ಟರ್ ಪ್ಲಾನ್ ರೂಪಿಸಿದ್ದಾರೆ.

    ಹೌದು. ಇಂಧನ ಸಚಿವ ಡಿಕೆ ಶಿವಕುಮಾರ್ ನಿವಾಸದ ಮೇಲೆ ಆದಾಯ ತೆರಿಗೆ ಇಲಾಖೆಯ ದಾಳಿ ಬಳಿಕ ತಣ್ಣಗೆ ಆಗಿದ್ದ ಪ್ರತ್ಯೇಕ ಲಿಂಗಾಯತ ಧರ್ಮ ವಿಚಾರಕ್ಕೆ ಮತ್ತೆ ಜೀವ ಬಂದಿದ್ದು, ಕಾಂಗ್ರೆಸ್ ಪರ ವಾತಾವರಣ ನಿರ್ಮಾಣವಾಗುವಂತೆ ಮಾಡಲು ಸಿದ್ದರಾಮಯ್ಯ ಮುಂದಾಗಿದ್ದಾರೆ.

    ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಗುರುವಾರ ಲಿಂಗಾಯತ ಪ್ರತ್ಯೇಕ ಧರ್ಮ ವಿಚಾರ ಸಂಬಂಧ ಸಭೆ ನಡೆಯಲಿದೆ. ಈ ಸಭೆಯಲ್ಲಿ ವಿವಿಧ ಮಠಾಧೀಶರು, ಸಮಾಜದ ಗಣ್ಯರು ಪಾಲ್ಗೊಳ್ಳಲಿದ್ದಾರೆ. ಈ ಸಭೆಯಲ್ಲಿ ವೀರಶೈವ ಹಾಗೂ ಲಿಂಗಾಯತ ಎಂಬ ಪ್ರತ್ಯೇಕತೆಯ ಗೊಂದಲ ಪರಿಹರಿಸಿಕೊಂಡು ಒಗ್ಗಟ್ಟಾಗಿ ಬನ್ನಿ ಎಂದು ಸಂಪುಟದ ಸಚಿವರೊಬ್ಬರಿಗೆ ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ ಎಂದು ಮೂಲಗಳಿಂದ ಪಬ್ಲಿಕ್ ಟಿವಿಗೆ ಸುದ್ದಿ ಸಿಕ್ಕಿದೆ.

    ಲಿಂಗಾಯತ ಪ್ರತ್ಯೇಕ ಧರ್ಮ ಬೇಡಿಕೆಗೆ ಕಾಂಗ್ರೆಸ್ ಪಕ್ಷ ಸ್ಪಂದಿಸಿದೆ. ಸರ್ಕಾರದ ನಿಲುವನ್ನು ಸಮರ್ಥಿಸುವಂತಹ ವಾತಾವರಣವನ್ನು ನಿರ್ಮಿಸುವಂತೆ ಲಿಂಗಾಯತ ಸಮುದಾಯದ ಪ್ರಭಾವಿ ಸಚಿವರೊಬ್ಬರು ಮತ್ತು ಮಾಜಿ ಸಚಿವರೊಬ್ಬರಿಗೆ ಸಿಎಂ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

    ಲಿಂಗಾಯತ ಪ್ರತ್ಯೇಕ ಧರ್ಮದ ಬೇಡಿಕೆ ಈಡೇರಿಕೆ ಸಂಬಂಧ ಸಂಪೂರ್ಣ ಕ್ರೆಡಿಟ್ ಕಾಂಗ್ರೆಸ್ ಪಕ್ಷಕ್ಕೆ ಸಿಗಬೇಕು. ಈ ಸಭೆಯಲ್ಲಿ ಕಾಂಗ್ರೆಸ್ ಪಕ್ಷ ನಮ್ಮ ಜೊತೆಗಿದೆ ಎಂಬ ಅಭಿಪ್ರಾಯ ಸರ್ವಸಮ್ಮತವಾಗಿ ಮೂಡವಂತೆ ರೂಪಿಸಿ ಎಂದು ಸಿಎಂ ಇಬ್ಬರು ನಾಯಕರಿಗೆ ಸೂಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

  • ಮೆಗ್ಗಾನ್ ಆಸ್ಪತ್ರೆಯಲ್ಲಿ ಅಮಾನವೀಯ ಘಟನೆ: ಪ್ರತಿಕ್ರಿಯೆ ನೀಡಲು ನಿರಾಕರಿಸಿದ ಬಿಎಸ್‍ವೈ

    ಮೆಗ್ಗಾನ್ ಆಸ್ಪತ್ರೆಯಲ್ಲಿ ಅಮಾನವೀಯ ಘಟನೆ: ಪ್ರತಿಕ್ರಿಯೆ ನೀಡಲು ನಿರಾಕರಿಸಿದ ಬಿಎಸ್‍ವೈ

    ಕಲಬುರಗಿ: ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯ ಅಮಾನವೀಯ ಘಟನೆ ಕುರಿತು ಪ್ರತಿಕ್ರಿಯಿಸಲು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್.ಯಡಿಯೂರಪ್ಪ ನಿರಾಕರಿಸಿದ್ದಾರೆ.

    ಪ್ರಕರಣ ಸಂಬಂಧ ಕಲಬುರಗಿಯ ಐವಾನ್ ಎ ಶಾಹಿ ಅತಿಥಿ ಗೃಹಕ್ಕೆ ಮಾಧ್ಯಮದವರು ತೆರಳಿದ್ದರು. ಮೆಗ್ಗಾನ್ ಆಸ್ಪತ್ರೆಯ ಅಮಾನವೀಯ ಘಟನೆ ಬಗ್ಗೆ ಪ್ರತಿಕ್ರಿಯೆ ಕೇಳಿದ್ದಕ್ಕೆ ‘ನೋ ರಿಯಾಕ್ಟ್’ ಎಂದಷ್ಟೇ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.

    ಮುಖ್ಯಮಂತ್ರಿ ಕನಸು ಕಾಣುತ್ತಿರುವ ಬಿಎಸ್ ಯಡಿಯೂರಪ್ಪ ಅವರು ತಮ್ಮ ಸ್ವಕ್ಷೇತ್ರದಲ್ಲಿ ನಡೆದ ಈ ಘಟನೆಯ ಬಗ್ಗೆ ಪ್ರತಿಕ್ರಿಯೆ ನೀಡದೇ ಇರುವುದಕ್ಕೆ ಜನಸಾಮಾನ್ಯರಿಂದ ಬೇಸರ ವ್ಯಕ್ತವಾಗಿದೆ.

    ಏನಿದು ಪ್ರಕರಣ?
    ಮೆಗ್ಗಾನ್ ಆಸ್ಪತ್ರೆಯ ಕಾರಿಡಾರ್‍ನಲ್ಲಿ ವಯೋವೃದ್ಧರೊಬ್ಬರನ್ನು ಅವರ ಪತ್ನಿ ನೆಲದ ಮೇಲೆ ಮಲಗಿಸಿ ಪ್ರಾಣಿಯಂತೆ ಎಳೆದುಕೊಂಡು ಹೋಗುತ್ತಿರುವ ದೃಶ್ಯ ಗುರುವಾರ ಮಧ್ಯಾಹ್ನ ಕಂಡು ಬಂದಿತ್ತು.

    ಎರಡನೇ ಮಳಿಗೆಯಿಂದ ಈ ವೃದ್ಧರನ್ನು ಕೆಳಗೆ ಕರೆದುಕೊಂಡು ಹೋಗಲು ಗಾಲಿ ಕುರ್ಚಿ ಕೇಳಿದರೂ ಆಸ್ಪತ್ರೆ ಸಿಬ್ಬಂದಿ ಕೊಟ್ಟಿಲ್ಲ. ಎಕ್ಸ್ ರೇ ತೆಗೆಸದಿದ್ದರೆ ತೊಂದರೆ ಆದೀತು ಎಂದು ಫಾಮಿದಾ ಗಂಡನನ್ನು ಎಳೆದುಕೊಂಡು ಎಕ್ಸ್ ರೇ ತೆಗೆಸಲು ಹೋಗಿದ್ದರು.

    ಈ ಬಗ್ಗೆ ಆರೋಗ್ಯ ಸಚಿವ ರಮೇಶ್ ಕುಮಾರ್ ಪ್ರತಿಕ್ರಿಯಿಸಿದ್ದು ರಾಜ್ಯದ ಜನತೆಯ ಕ್ಷಮೆ ಕೇಳಿದ್ದಾರೆ. ನಮಗೆ ಈ ಸ್ಥಾನದಲ್ಲಿ ಕುಳಿತುಕೊಳ್ಳೊದಕ್ಕೂ ನಾಚಿಕ ಆಗುತ್ತದೆ.ನಾನು ಈಗಾಗಲೇ ಶಿವಮೊಗ್ಗ ಜಿಲ್ಲಾಧಿಕಾರಿಗಳ ಜೊತೆ ಮಾತನಾಡಿ ಆಸ್ಪತ್ರೆಗೆ ಭೇಟಿ ಮಾಡಲು ತಿಳಿಸಿದ್ದೇನೆ. ವೈದ್ಯಕೀಯ ಶಿಕ್ಷಣ ಸಚಿವರ ಜೊತೆ ಮಾತನಾಡಿ ಕೂಡಲೇ ಕ್ರಮ ಕೈಗೊಳ್ಳಲು ಮನವಿ ಮಾಡಿದ್ದೇನೆ ಅಂದ್ರು.

    ಇದನ್ನೂ ಓದಿ: ಮೆಗ್ಗಾನ್ ಆಸ್ಪತ್ರೆಯಲ್ಲಿ ಅಮಾನವೀಯ ಘಟನೆ: ಪ್ರಶ್ನೆ ಕೇಳಿದ್ದಕ್ಕೆ ಗರಂ ಆಗಿ ಉಡಾಫೆಯ ಉತ್ತರ ನೀಡಿದ ಸಿಎಂ

  • ನಿನ್ನಂಥ ಕ್ಷುಲ್ಲಕ, ಯೋಗ್ಯವಲ್ಲದ ವ್ಯಕ್ತಿ ಪಕ್ಷಕ್ಕೆ ಬೇಡ: ಈಶ್ವರಪ್ಪ ವಿರುದ್ಧ ಏಕವಚನದಲ್ಲಿ ಅಶ್ವಥ್ ನಾರಾಯಣ ವಾಗ್ದಾಳಿ

    ನಿನ್ನಂಥ ಕ್ಷುಲ್ಲಕ, ಯೋಗ್ಯವಲ್ಲದ ವ್ಯಕ್ತಿ ಪಕ್ಷಕ್ಕೆ ಬೇಡ: ಈಶ್ವರಪ್ಪ ವಿರುದ್ಧ ಏಕವಚನದಲ್ಲಿ ಅಶ್ವಥ್ ನಾರಾಯಣ ವಾಗ್ದಾಳಿ

    ಬೆಂಗಳೂರು: ನೀನು ಪಕ್ಷದಲ್ಲಿ ಇಷ್ಟು ದೊಡ್ಡವನಾಗಿದ್ದು ಹೇಗೆ? ಬೆಳೆದು ಬಂದಿದ್ದು ಹೇಗೆ ಅಂತ ಯೋಚಿಸು ಎಂದು ಈಶ್ವರಪ್ಪ ವಿರುದ್ಧ ಶಾಸಕ ಅಶ್ವಥ್ ನಾರಾಯಣ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದಾರೆ.

    ತುಮಕೂರು ಜಿಲ್ಲೆಯ ಬಿಜೆಪಿ ಪಕ್ಷದ ವತಿಯಿಂದ ಅರಮನೆ ಮೈದಾನದಲ್ಲಿ ಆಯೋಜನೆಗೊಂಡಿದ್ದ ‘ಸಂಘಟನೆ ಉಳಿಸಿ ಸಮಾವೇಶ’ದಲ್ಲಿ ಬಿಎಸ್ ಯಡಿಯೂರಪ್ಪ ವಿರುದ್ಧ ಈಶ್ವರಪ್ಪ ವಾಗ್ದಾಳಿ ನಡೆಸಿದ್ದಕ್ಕೆ ಮಲ್ಲೇಶ್ವರಂ ನಲ್ಲಿರುವ ಪಕ್ಷದ ಕಚೇರಿಯಲ್ಲಿ ಬಿಎಸ್‍ವೈ ಬಣ ಸುದ್ದಿಗೋಷ್ಠಿ ನಡೆಸಿ ವಾಗ್ದಾಳಿ ನಡೆಸಿದೆ.

    ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅಶ್ವಥ್ ನಾರಾಯಣ, ಯಾರು ಪಕ್ಷದಲ್ಲಿ ಯಡಿಯೂರಪ್ಪ ನಾಯಕತ್ವವನ್ನು ಪ್ರಶ್ನಿಸುತ್ತಿದ್ದಾರೋ ಅವರು ಪಕ್ಷಕ್ಕೆ ಬೇಕಿಲ್ಲ. ನಿನ್ನಂಥ ಕ್ಷುಲ್ಲಕ, ಯೋಗ್ಯವಲ್ಲದ ವ್ಯಕ್ತಿ ಪಕ್ಷಕ್ಕೆ ಬೇಡ. ನೀನು ಪಕ್ಷದಲ್ಲಿ ಇಷ್ಟು ದೊಡ್ಡವನಾಗಿದ್ದು ಹೇಗೆ? ಬೆಳೆದು ಬಂದಿದ್ದು ಹೇಗೆ ಅಂತ ಯೋಚಿಸು ಎಂದು ಪ್ರಶ್ನಿಸಿ ಕಿಡಿಕಾರಿದರು.

    ಅತೃಪ್ತರ ಸಭೆ ನಡೆದಿದ್ದು ಖಂಡನೀಯವಾಗಿದ್ದು, ಪಕ್ಷದ ಸಂಘಟನೆಯಲ್ಲಿ ಇಂತಹ ಸಭೆಗಳು ಸರಿಯಲ್ಲ. ಪಕ್ಷ ಸಂಘಟನೆ ಬಗ್ಗೆ ನಾವೆಲ್ಲ ಶ್ರಮಿಸುತ್ತಿದ್ದೇವೆ. ಆದರೆ ಈ ಅತೃಪ್ತರು ಪಕ್ಷದ ಸಂಘಟನೆ ಹಾಳು ಮಾಡುತ್ತಿದ್ದಾರೆ. ಕೂಡಲೇ ಪಕ್ಷ ವಿರೋಧಿ ಚಟುವಟಿಕೆ ನಡೆಸುವವರು ವಿರುದ್ಧ ಕ್ರಮ ಕೈಗೊಳ್ಳಬೇಕು. ಚುನಾವಣೆಯಲ್ಲಿ ಠೇವಣಿ ಕಳೆದುಕೊಂಡವರಿಗೆ ವಿಪಕ್ಷ ನಾಯಕ ಸ್ಥಾನ ಕೊಟ್ಟಿದ್ದು ನಮಗೆ ಅಗೌರವ. ಯೋಗ್ಯತೆ ಗೊತ್ತಿದೆ, ಕೂಡಲೇ ಈಶ್ವರಪ್ಪ ಅವರನ್ನ ಪಕ್ಷದಿಂದ ಕಿತ್ತು ಹಾಕಲಿ ಎಂದು ಅಶ್ವಥನಾರಾಯಣ ಆಗ್ರಹಿಸಿದರು.

    ಸಂಸದ ಪಿ.ಸಿ.ಮೋಹನ್ ಮಾತನಾಡಿ ಈಶ್ವರಪ್ಪನವರು ನಾಲ್ಕು ಗೋಡೆಗಳ ಮಧ್ಯೆ ಸಮಸ್ಯೆ ಬಗೆಹರಿಸಿಕೊಳ್ಳಬೇಕಿತ್ತು. ಈಶ್ವರಪ್ಪ ಕರೆದಿದ್ದ ಸಭೆಗೆ ಸಾವಿರ ಜನ ಇರಲಿಲ್ಲ ಬಿಎಸ್‍ವೈ ಸಭೆ ಕರೆದ್ರೆ 2 ಲಕ್ಷ ಜನ ಬರುತ್ತಾರೆ. ಇದು ಪಕ್ಷ ವಿರೋಧಿ ಚಟುವಟಿಕೆ ಎಂದು ಟೀಕಿಸಿದರು.

    ಸುದ್ದಿಗೋಷ್ಠಿಯಲ್ಲಿ ಮುನಿರಾಜು, ನಾರಾಯಣಸ್ವಾಮಿ, ಪರಿಷತ್ ಸದಸ್ಯರಾದ ಪುಟ್ಟಸ್ವಾಮಿ, ಲೆಹರ್ ಸಿಂಗ್, ಮಾಜಿ ಶಾಸಕ ಕಟ್ಟಾ ಸುಬ್ರಮಣ್ಯನಾಯ್ಡು, ಬೆಂಗಳೂರು ನಗರಾಧ್ಯಕ್ಷ ಸದಾಶಿವ ಉಪಸ್ಥಿತರಿದ್ದರು.

    ಇದನ್ನೂ ಓದಿ: ಸಮಸ್ಯೆ ಪರಿಹಾರಕ್ಕೆ ಬಿಎಸ್‍ವೈಗೆ ಭಿನ್ನರಿಂದ ಡೆಡ್‍ಲೈನ್ ಫಿಕ್ಸ್

    https://www.youtube.com/watch?v=nFYZuu2deRU

    ಇದನ್ನೂ ಓದಿ: ನಾವು ತಂದೆ, ತಾಯಿಗೆ ಹುಟ್ಟಿದ ಜನ. ನಾವು ಪಕ್ಷ ಬಿಡಲ್ಲ, ಬೇರೆ ಪಕ್ಷ ಕಟ್ಟಲ್ಲ: ಬಿಎಸ್‍ವೈ ವಿರುದ್ಧ ಈಶ್ವರಪ್ಪ ಗುಡುಗು
    ಇದನ್ನೂ ಓದಿ: ಬಿಜೆಪಿ ಸಂಘಟನಾ ಸಮಾವೇಶದಲ್ಲಿ ಬಿಎಸ್‍ವೈ-ಈಶ್ವರಪ್ಪ ಬೆಂಬಲಿಗರ ಮಾರಾಮಾರಿ: ವಿಡಿಯೋ ನೋಡಿ

    https://www.youtube.com/watch?v=FnDvcFgKDoQ

  • ಬಿಜೆಪಿ ಸಂಘಟನಾ ಸಮಾವೇಶದಲ್ಲಿ ಬಿಎಸ್‍ವೈ-ಈಶ್ವರಪ್ಪ ಬೆಂಬಲಿಗರ ಮಾರಾಮಾರಿ: ವಿಡಿಯೋ ನೋಡಿ

    ಬಿಜೆಪಿ ಸಂಘಟನಾ ಸಮಾವೇಶದಲ್ಲಿ ಬಿಎಸ್‍ವೈ-ಈಶ್ವರಪ್ಪ ಬೆಂಬಲಿಗರ ಮಾರಾಮಾರಿ: ವಿಡಿಯೋ ನೋಡಿ

    ಬೆಂಗಳೂರು: ಬಿಎಸ್ ಯಡಿಯೂರಪ್ಪ ಮತ್ತು ಈಶ್ವರಪ್ಪ ಬೆಂಬಲಿಗರ ಬಹಿರಂಗ ಅಸಮಾಧಾನ ಈಗ ಬೀದಿಗೆ ಬಂದಿದೆ. ಎರಡೂ ನಾಯಕರ ಬೆಂಬಲಿಗರ ಮಧ್ಯೆ ಮಾರಾಮಾರಿ ನಡೆದಿದೆ.

    ಗುರುವಾರ ಅರಮನೆ ಮೈದಾನದಲ್ಲಿ ಬಿಜೆಪಿ ಸಂಘಟನಾ ಸಮಾವೇಶವನ್ನು ಆಯೋಜಿಸಲಾಗಿತ್ತು. ಈ ವೇಳೆ ಪರಿಷತ್ ಸದಸ್ಯ ಭಾನುಪ್ರಕಾಶ್ ಪ್ರಾಸ್ತಾವಿಕ ಭಾಷಣ ಮಾಡುತ್ತಾ, ಪದಾಧಿಕಾರಿಗಳ ನೇಮಕದಲ್ಲಿ ಅನ್ಯಾಯವಾಗಿದೆ. ಪಕ್ಷದಲ್ಲೇ ಇಲ್ಲದವರು ಜಿಲ್ಲಾಧ್ಯಕ್ಷರಾಗಿದ್ದಾರೆ. ನಮ್ಮ ಅಭಿಪ್ರಾಯವನ್ನು ಮೊದಲೇ ತಿಳಿದಿದ್ದೇವೆ. ಆದರೆ ಪಕ್ಷದಲ್ಲಿ ಯಾವುದೇ ಬದಲಾವಣೆ ಆಗಲಿಲ್ಲ. ಇವತ್ತಿನ ಸಭೆ ಅತೃಪ್ತರ ಸಭೆನೂ ಅಲ್ಲ. ಇಂದಿನ ಸಭೆ ಭಿನ್ನರ ಸಭೆಯೂ ಅಲ್ಲ. ಬೇರೆ ಪಕ್ಷ ಕಟ್ಟಿದವರೇ ಈಗ ಪಕ್ಷ ಆಳುತ್ತಿದ್ದಾರೆ ಎಂದು ಸಮಾವೇಶದಲ್ಲಿ ಬಿಎಸ್ ವೈ ವಿರುದ್ಧ ವಾಗ್ದಾಳಿ ನಡೆಸಿದರು.

    ಭಾನುಪ್ರಕಾಶ್ ಭಾಷಣದ ವೇಳೆ ಬಿಎಸ್‍ವೈ ಬೆಂಬಲಿಗರೊಬ್ಬರು, ನೀನು ಅಯೋಗ್ಯ, ಅವರ ಬಗ್ಗೆ ಏಕೆ ಮಾತಾಡ್ತೀಯಾ ಎಂದು ಪ್ರಶ್ನಿಸಿದಾಗ ಈಶ್ವರಪ್ಪ ಬೆಂಬಲಿಗರು ಅವರ ಮೇಲೆ ಹಲ್ಲೆ ನಡೆಸಿದರು. ಬಿಎಸ್‍ವೈ ಬೆಂಬಲಿಗನಿಗೆ ಈಶ್ವರಪ್ಪ ಬೆಂಬಲಿಗರು ಹಿಗ್ಗಾಮುಗ್ಗಾ ಥಳಿಸಿದರು.

    ಥಳಿಸಿದ ಬಳಿಕ ಬಿಎಸ್ ವೈ ಬೆಂಬಲಿಗನನ್ನು ಈಶ್ವರಪ್ಪ ಬೆಂಬಲಿಗರು ಹೊರಗೆ ಕಳುಹಿಸಿದರು. ಈ ಗೊಂದಲದಿಂದಾಗಿ ಕೆಲಕಾಲ ಸಮಾವೇಶದಲ್ಲಿ ಗದ್ದಲದ ವಾತಾವರಣ ನಿರ್ಮಾಣವಾಗಿತ್ತು.

    https://www.youtube.com/watch?v=Z61LNlYeEl8

  • ಮತ್ತೆ ಬಿಎಸ್‍ವೈ ವರ್ಸಸ್ ಈಶ್ವರಪ್ಪ: ತುಮಕೂರಲ್ಲಿ ರಹಸ್ಯ ಸಭೆ

    ಮತ್ತೆ ಬಿಎಸ್‍ವೈ ವರ್ಸಸ್ ಈಶ್ವರಪ್ಪ: ತುಮಕೂರಲ್ಲಿ ರಹಸ್ಯ ಸಭೆ

    ತುಮಕೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪನವರಿಗೆ ಈಶ್ವರಪ್ಪ ಸೆಡ್ಡುಹೊಡೆಯಲು ಮತ್ತೆ ಮುಂದಾಗಿದ್ದಾರಾ ಹೀಗೊಂದು ಪ್ರಶ್ನೆ ಈಗ ಮತ್ತೊಮ್ಮೆ ಎದ್ದಿದೆ.

    ಈಶ್ವರಪ್ಪ ಅವರು ಇಂದು ದಿಢೀರ್ ಎಂಬಂತೆ ಮಾಜಿ ಸಚಿವ, ಬಿಜೆಪಿಯ ಹಿರಿಯ ನಾಯಕ ಸೊಗಡು ಶಿವಣ್ಣ ಅವರನ್ನು ಭೇಟಿ ಮಾಡಿ ರಹಸ್ಯ ಸಭೆ ನಡೆಸಿದ ಕಾರಣ ಈ ಪ್ರಶ್ನೆ ಈಗ ಎದ್ದಿದೆ.

    ತುಮಕೂರು ಹೊರವಲಯದಲ್ಲಿರುವ ಸೊಗಡು ನಿವಾಸದಲ್ಲಿ ಈಶ್ವರಪ್ಪ ಅವರು ಒಂದು ಗಂಟೆಗಳ ಕಾಲ ಮಾತುಕತೆ ನಡೆಸಿದ್ದಾರೆ. ಈ ವೇಳೆ ಮುಂದಿನ ರಾಜಕೀಯ ನಡೆ ಮತ್ತು ರಾಯಣ್ಣ ಬ್ರಿಗೇಡ್ ವಿಸ್ತರಿಸುವ ಬಗ್ಗೆ ಚರ್ಚೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ.

    ಸಭೆ ಮುಗಿದ ಬಳಿಕ ಈಗ ಬಂದೆ ಎಂದು ಹೇಳಿ ಮಾಧ್ಯಮಗಳ ಕಣ್ಣುತಪ್ಪಿಸಿ ಹಿಂದಿನ ಬಾಗಿಲಿನಿಂದ ಈಶ್ವರಪ್ಪ ತೆರಳಿದ್ದಾರೆ. ಈ ಸಭೆಯಲ್ಲಿ ಮಾಜಿ ಸಚಿವ ರವೀಂದ್ರನಾಥ್, ಭಾನುಪ್ರಕಾಶ್, ಸೋಮಣ್ಣ ಬೇವಿನಮರದ, ಸಿದ್ದರಾಜು ಸೇರಿದಂತೆ ಹಲವರು ಭಾಗವಹಿಸಿದ್ದರು.

    ಮಾಧ್ಯಮಗಳ ಜೊತೆ ಮಾತನಾಡಿದ ಸೊಗಡು ಶಿವಣ್ಣ, ಇಷ್ಟು ದಿನ ಕಳೆದರೂ ಕೂಡ ಇನ್ನೂ ಕೆಲ ಜಿಲ್ಲೆಗಳಲ್ಲಿ ಅಧ್ಯಕ್ಷರ ಬದಲಾವಣೆಯಾಗದಿದ್ದಕ್ಕೆ ಮತ್ತೊಮ್ಮೆ ರಾಷ್ಟ್ರೀಯ ಅಧ್ಯಕ್ಷರ ಗಮನಕ್ಕೆ ತರುವ ಬಗ್ಗೆ ಚರ್ಚಿಸಲಾಯಿತು. ಇದರ ಜೊತೆ ಗುಂಡ್ಲುಪೇಟೆ, ನಂಜನಗೂಡು ಉಪಚುನಾವಣೆ ಬಗ್ಗೆ ಇಂದಿನ ಸಭೆಯಲ್ಲಿ ಚರ್ಚಿಸಲಾಗಿದೆ ಎಂದು ತಿಳಿಸಿದರು.

    ಈ ಬಗ್ಗೆ 27 ರಂದು ಬೆಂಗಳೂರಿನಲ್ಲಿ ಪಕ್ಷದ ಕಾರ್ಯಕರ್ತರ ಸಮಾವೇಶವನ್ನ ಹಮ್ಮಿಕೊಳ್ಳಲಾಗಿದ್ದು, ಇದರಲ್ಲಿ ಭಾಗವಹಿಸುವ ಬಗ್ಗೆ ಚರ್ಚಿಸಿದ್ದಾರೆ. ಸಮಾವೇಶದಲ್ಲಿ ಬ್ರಿಗೇಡ್ ನ ಎಲ್ಲರೂ ಭಾಗವಹಿಸಲಿದ್ದಾರೆ ಎಂದು ಹೇಳಿದರು.