Tag: ಬಿಗ್‌ ಬಾಸ್‌ ಕನ್ನಡ 12

  • ಬಿಗ್‌ಬಾಸ್‌ನಿಂದ ಇದುವರೆಗೂ 1 ರೂಪಾಯಿ ಹಣ ಬಂದಿಲ್ಲ ಎಂದ ಕಂಟೆಸ್ಟೆಂಟ್‌ ಸತೀಶ್

    ಬಿಗ್‌ಬಾಸ್‌ನಿಂದ ಇದುವರೆಗೂ 1 ರೂಪಾಯಿ ಹಣ ಬಂದಿಲ್ಲ ಎಂದ ಕಂಟೆಸ್ಟೆಂಟ್‌ ಸತೀಶ್

    ಬಿಗ್‌ಬಾಸ್ (Bigg Boss Kannada 12) ಕಾರ್ಯಕ್ರಮಕ್ಕೆ ಸ್ಪರ್ಧಿಯಾಗಿ ಹೋಗಿದ್ದ ಸತೀಶ್ (Satish) ಈಗ ಎಲಿಮಿನೇಶನ್ ಆಗುವ ಮೂಲಕ ಹೊರಬಂದಿದ್ದಾರೆ. ವೇದಿಕೆಯಲ್ಲೇ ಈ ಕಾರ್ಯಕ್ರಮಕ್ಕಾಗಿ 25 ಲಕ್ಷದ ಬಟ್ಟೆ ಖರೀದಿಸಿರುವುದಾಗಿ ಸತೀಶ್ ಹೇಳಿದ್ದರು. ಹಾಗಾದರೆ ಸ್ಪರ್ಧಿಯಾಗಿ ಒಳ ಹೋಗಲು ಅದೆಷ್ಟು ಸಂಭಾವನೆ ಪಡೆದಿರಬಹುದು ಅನ್ನೋ ಕುತೂಹಲ ಸಹಜ. ಆದರೆ, ‘ಪಬ್ಲಿಕ್ ಟಿವಿ’ಗೆ ನೀಡಿದ ಸಂದರ್ಶನದಲ್ಲಿ ಡಾಗ್ ಸತೀಶ್, ಬಿಗ್‌ಬಾಸ್ ತಮಗೆ ನೀಡಿರುವ ಸಂಭಾವನೆ ವಿಚಾರ ಬಿಚ್ಚಿಟ್ಟಿದ್ದಾರೆ. ಇದುವರೆಗೂ ಬಿಗ್‌ಬಾಸ್ ಕಾರ್ಯಕ್ರಮದಿಂದ ತಮಗೆ 1 ರೂಪಾಯಿ ಹಣ ತಮಗೆ ಬಂದಿಲ್ಲ ಅನ್ನೋದಾಗಿ ಹೇಳಿದ್ದಾರೆ.

    ಬಿಗ್‌ಬಾಸ್ ಕಾರ್ಯಕ್ರಮಕ್ಕೆ ಹೋಗುವ ವೇಳೆ ಪ್ರತಿ ಸ್ಪರ್ಧಿಯೂ ಒಂದೊಂದು ಮೊತ್ತದ ಸಂಭಾವನೆ ಪಡೆದಿರುತ್ತಾರೆ. ಪ್ರತಿ ವಾರವೂ ಅವರಿಗೆ ಹಣ ಸಂದಾಯವಾಗುತ್ತದೆ. ಆದರೆ, ಕಾರ್ಯಕ್ರಮಕ್ಕೆ ಎಂಟ್ರಿ ಕೊಡುವ ಪೂರ್ವದಲ್ಲೂ ಅಡ್ವಾನ್ಸ್ ಹಣ ಹಾಗೂ ಬಳಿಕವೂ ತಮಗೆ ಹಣ ಬಂದಿಲ್ಲ ಎಂದಿದ್ದಾರೆ ಸತೀಶ್. ಇದನ್ನೂ ಓದಿ: 100 ಕೋಟಿ ನಾಯಿ ಲಾಂಚ್ ಮಾಡ್ತೀನಿ- ಸವಾಲೆಸೆದ ಬಿಗ್‌ಬಾಸ್ ಸ್ಪರ್ಧಿ ಸತೀಶ್

    ‘ಆಧಾರ್ ಹಾಗೂ ಪಾನ್ ಕಾರ್ಡ್ ಲಿಂಕ್ ಆಗಿಲ್ಲ. ನಿಮಗೆ ಹಣ ಟ್ರಾನ್ಸ್‌ಫರ್‌ ಆಗುತ್ತಿಲ್ಲ ಎಂದು ಟೀಮ್ ಹೇಳಿತ್ತು. ಆಗ ನಾನು ಹಣವನ್ನ ಕೊಡಿ ಅಂತ ನಿಮ್ಮನ್ನು ಕೇಳಿದ್ನಾ ಎಂದೆ. ನನಗೆ ಹಣ ಮುಖ್ಯವಲ್ಲ, ನನ್ನ ಟರ್ನ್ವೋವರ್ ಚೆನ್ನಾಗಿದೆ. ನನಗೆ ಜನರ ಮುಂದೆ ಗುರುತಿಸಿಕೊಳ್ಳುವುದು ಮುಖ್ಯ. ವೇದಿಕೆ ಮುಖ್ಯವಾಗಿತ್ತು. ನಾನು ಒಂದು ಸಿನಿಮಾ ಕಾರ್ಯಕ್ರಮಕ್ಕೆ ನಾಯಿ ಹಿಡಿದುಕೊಂಡು ಹೋದ್ರೆ ಸಾಕು ಲಕ್ಷ ಲಕ್ಷ ಹಣ ಕೊಡ್ತಾರೆ. ಬಿಗ್‌ಬಾಸ್‌ ಮನೆಯಲ್ಲಿ ಇರೋವ್ರೆಲ್ಲ ಗೆಸ್ಟ್ ಆಗಿ ಹೋದ್ರೆ ಮೂವತ್ತೋ ನಲವತ್ತೋ ಸಾವಿರ ಕೊಡ್ತಾರಂತೆ’ ಎಂದಿದ್ದಾರೆ.

    ಈ ಮೂಲಕ ಬಿಗ್‌ಬಾಸ್ ಕಾರ್ಯಕ್ರಮದಿಂದ ಬರುವ ಹಣ ತಮಗೆ ಮುಖ್ಯವಲ್ಲ ಅಂತ ಸತೀಶ್ ಹೇಳಿಕೊಂಡಿದ್ದಾರೆ. ಇದನ್ನೂ ಓದಿ: ಕಾಂತಾರ ಚಿತ್ರದ ಬಗ್ಗೆ ದೈವ ಯಾವುದೇ ಅಭಯ ನುಡಿ ನೀಡಿಲ್ಲ: ಬಲವಾಂಡಿ-ಪಿಲಿಚಂಡಿ ದೈವಸ್ಥಾನ ಸ್ಪಷ್ಟನೆ

  • ಬಿಗ್‌ಬಾಸ್‌ ಶೋ ಬಂದ್‌ – ರಾತ್ರೋರಾತ್ರಿ ಮನೆಯಿಂದ ಎಲ್ಲಾ ಸ್ಪರ್ಧಿಗಳು ಹೊರಕ್ಕೆ

    ಬಿಗ್‌ಬಾಸ್‌ ಶೋ ಬಂದ್‌ – ರಾತ್ರೋರಾತ್ರಿ ಮನೆಯಿಂದ ಎಲ್ಲಾ ಸ್ಪರ್ಧಿಗಳು ಹೊರಕ್ಕೆ

    ರಿಸರ ನಿಯಮ ಉಲ್ಲಂಘನೆ ಆರೋಪದಲ್ಲಿ ಜಾಲಿವುಡ್‌ ಸ್ಟುಡಿಯೋಸ್‌ಗೆ ಬೀಗ ಬಿದ್ದಿದ್ದು, ಅಲ್ಲೇ ನಡೆಯುವ ಬಿಗ್‌ಬಾಸ್‌ ಶೋ ಕೂಡ ಬಂದ್‌ ಆಗಿದೆ. ಬಿಗ್‌ಬಾಸ್‌ ಸ್ಪರ್ಧಿಗಳು ಮನೆಯಿಂದ ಹೊರಬಂದಿದ್ದಾರೆ.

    ಅಧಿಕೃತವಾಗಿ ಬಿಗ್‌ಬಾಸ್‌ ಮನೆಗೆ ಬೀಗ ಹಾಕಲಾಗಿದೆ. ಸ್ಪರ್ಧೆಯಲ್ಲಿದ್ದ ಎಲ್ಲರನ್ನೂ ರಾತ್ರಿ ಮನೆಯಿಂದ ಹೊರಹಾಕಲಾಗಿದೆ. ಸ್ವತಃ ತಹಶೀಲ್ದಾರ್‌ ತೇಜಸ್ವಿನಿಯವರು ಮುಂದೆ ನಿಂತು ಸ್ಪರ್ಧಿಗಳು ಹೊರಗೆ ಕರೆತಂದಿದ್ದಾರೆ.

    ಬಿಗ್‌ಬಾಸ್‌ ದಿಢೀರ್‌ ಸ್ಥಗಿತದಿಂದ ಸ್ಪರ್ಧಿಗಳು, ತಂತ್ರಜ್ಞರು ಸೇರಿದಂತೆ 700 ಕ್ಕೂ ಹೆಚ್ಚು ಜನರು ಮನೆಗೆ ವಾಪಸ್‌ ಆಗುವಂತಾಗಿದೆ. ಆರು ತಿಂಗಳ ಕಾಲ ಮೂರು ಶಿಫ್ಟ್‌ನಲ್ಲಿ ತಂತ್ರಜ್ಞರು ಕೆಲಸ ಮಾಡುತ್ತಿದ್ದರು.

    ಐದು ಕೋಟಿಗೂ ಅಧಿಕ ವೆಚ್ಚದಲ್ಲಿ ಬಿಗ್‌ ಬಾಸ್‌ ಮನೆ ನಿರ್ಮಾಣವಾಗಿತ್ತು. ಈಗ ತಾತ್ಕಾಲಿಕವಾಗಿ ಅನಾಥವಾಗಲಿದೆ. ಅರಮನೆ ವಿನ್ಯಾಸದಲ್ಲಿ ಬಿಗ್‌ ಬಾಸ್‌ ಮನೆಯನ್ನು ನಿರ್ಮಿಸಲಾಗಿತ್ತು. ಕಿಚ್ಚ ಸುದೀಪ್‌ ಆಶಯದಂತೆ ಇದೇ ಮೊದಲ ಬಾರಿಗೆ ಅದ್ಧೂರಿಯಾಗಿ ಮನೆ ನಿರ್ಮಾಣಗೊಂಡಿತ್ತು.

  • ಜಾಲಿವುಡ್‌ ಸ್ಟುಡಿಯೋಸ್‌ಗೆ ಬಿತ್ತು ಬೀಗ – ಬಿಗ್‌ ಬಾಸ್‌ ಸ್ಥಗಿತಕ್ಕೆ ಸೂಚನೆ

    ಜಾಲಿವುಡ್‌ ಸ್ಟುಡಿಯೋಸ್‌ಗೆ ಬಿತ್ತು ಬೀಗ – ಬಿಗ್‌ ಬಾಸ್‌ ಸ್ಥಗಿತಕ್ಕೆ ಸೂಚನೆ

    ರಾಮನಗರ: ಪರಿಸರ ನಿಯಮ ಉಲ್ಲಂಘನೆ ಆರೋಪದಲ್ಲಿ ಜಾಲಿವುಡ್‌ ಸ್ಟುಡಿಯೋಸ್‌ಗೆ (Jollywood Studios) ಬೀಗ ಬಿದ್ದಿದೆ. ಬಿಗ್‌ ಬಾಸ್‌ (Bigg Boss  Kannada 12) ನಡೆಯುತ್ತಿರುವ ಜಾಗಕ್ಕೆ ಕಂದಾಯ ಇಲಾಖೆ ಅಧಿಕಾರಿಗಳು ಬೀಗ ಜಡಿದಿದ್ದಾರೆ.

    ನಿಯಮ ಮೀರಿ ಜಾಲಿವುಡ್‌ ಸ್ಟುಡಿಯೋಸ್‌ ನಡೆಸುತ್ತಿರುವ ಬಗ್ಗೆ ನೋಟಿಸ್‌ ನೀಡಲಾಗಿತ್ತು. ಆದರೆ, ಯಾವುದೇ ಪಾಲನೆ ಆಗದ ಹಿನ್ನೆಲೆಯಲ್ಲಿ ಕಂದಾಯ ಇಲಾಖೆ ಅಧಿಕಾರಿಗಳು ಇಂದು ಸಂಜೆ ಸ್ಟುಡಿಯೋಸ್‌ಗೆ ಭೇಟಿ ನೀಡಿದರು. ಇದನ್ನೂ ಓದಿ: ಜಾಲಿವುಡ್‌ ಸ್ಟುಡಿಯೋಸ್‌ ಬಂದ್‌ಗೆ ನೋಟಿಸ್ -‌ ಬಿಗ್‌ ಬಾಸ್‌ ಮನೆಗೆ ಬೀಳುತ್ತಾ ಬೀಗ?

    ರಾಮನಗರ ತಹಶೀಲ್ದಾರ್‌ ತೇಜಸ್ವಿನಿ, ಕಂದಾಯ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರ ಸ್ಥಳಕ್ಕೆ ಭೇಟಿ ನೀಡಿ ಜಾಲಿವುಡ್‌ ಒಳಗೆ ಪರಿಶೀಲನೆ ನಡೆಸಿದರು.

    ನೋಟಿಸ್ ತೆಗೆದುಕೊಳ್ಳಲು ಜಾಲಿವುಡ್ ಆಡಳಿತ ಮಂಡಳಿ ನಕಾರ ಮಾಡಿತು. ಆಗ ಜಾಲಿವುಡ್ ಸ್ಟುಡಿಯೋಸ್‌ ಸಿಬ್ಬಂದಿಯನ್ನು ತಹಶೀಲ್ದಾರ್ ತರಾಟೆಗೆ ತೆಗೆದುಕೊಂಡರು. ನೋಟಿಸ್ ಸ್ವೀಕರಿಸೋದಕ್ಕೆ ಬರಲು ಅರ್ಧ ಗಂಟೆ ಬೇಕಾ ಎಂದು ಗರಂ ಆದರು. ಇದನ್ನೂ ಓದಿ: ಅಕ್ಕ, ಬಾವನ ಜೊತೆ ಗಲಾಟೆ – ಬಿಗ್‌ ಬಾಸ್‌ ರಂಜಿತ್‌ ಮೇಲೆ ದೂರು ದಾಖಲು

    ಕೂಡಲೇ ನೋಟೀಸ್ ತೆಗೆದುಕೊಳ್ಳಿ. ಅಧಿಕೃತವಾಗಿ ಇಂದು ಸೀಜ್ ಮಾಡ್ತೀವಿ. ಸಾರ್ವಜನಿಕರಿಗೆ ತೊಂದರೆ ಆಗದಂತೆ ಸಂಜೆ 7 ಗಂಟೆ ವರೆಗೂ ಎಕ್ಸಿಟ್ ಗೇಟ್ ಓಪನ್ ಮಾಡಿಕೊಳ್ಳಿ. ಕೂಡಲೇ ಜಾಲಿವುಡ್ ಸ್ಟುಡಿಯೋ ಕ್ಲೋಸ್ ಮಾಡುವಂತೆ ಸೂಚನೆ ನೀಡಿದರು.

    ಕೊನೆಗೆ ಜಾಲಿವುಡ್ ಆಡಳಿತ ಮಂಡಳಿ ನೋಟಿಸ್‌ ಸ್ವೀಕರಿಸಿತು. ನಾಳೆಯಿಂದ ಜಾಲಿವುಡ್ ಸ್ಟುಡಿಯೋಸ್‌ ಯಾವುದೇ ಕಾರ್ಯಾಚರಣೆ ಮಾಡಬಾರದು. ಎಲ್ಲಾ ರೀತಿಯ ಕಾರ್ಯಚಟುವಟಿಕೆ ಸ್ಥಗಿತ ಮಾಡುವಂತೆ ಸೂಚನೆ ನೀಡಲಾಯಿತು. ಸ್ಟುಡಿಯೋಸ್‌ ಸ್ವತಃ ತಾವೇ ನಿಂತು ತಹಶೀಲ್ದಾರ್‌ ಬೀಗ ಹಾಕಿದರು. ಬಿಗ್‌ ಬಾಸ್‌ ಸ್ಥಗಿತಕ್ಕೂ ಸೂಚನೆ ನೀಡಿದರು.

    ಬಿಗ್ ಬಾಸ್‌ನಿಂದ ಆಚೆ ಬರ್ತಾರಾ ಸ್ಪರ್ಧಿಗಳು?
    ಸೀಲ್‌ಡೌನ್ ಆದಮೇಲೆ ಒಳಗೆ ಯಾವುದೇ ಆಕ್ಟಿವಿಟಿ ನಡೆಯುವಂತಿಲ್ಲ. ಯಾವುದೇ ವ್ಯಕ್ತಿಗಳೂ ಇರುವಂತಿಲ್ಲ. ಹಾಗಾಗಿ, ಬಿಗ್ ಬಾಸ್ ಮನೆಯಿಂದ ಸ್ಪರ್ಧಿಗಳನ್ನ ಆಚೆ ಕಳುಹಿಸುವ ಸಾಧ್ಯತೆ ಇದೆ.

  • ಜಾಲಿವುಡ್‌ ಸ್ಟುಡಿಯೋಸ್‌ ಬಂದ್‌ಗೆ ನೋಟಿಸ್ -‌ ಬಿಗ್‌ ಬಾಸ್‌ ಮನೆಗೆ ಬೀಳುತ್ತಾ ಬೀಗ?

    ಜಾಲಿವುಡ್‌ ಸ್ಟುಡಿಯೋಸ್‌ ಬಂದ್‌ಗೆ ನೋಟಿಸ್ -‌ ಬಿಗ್‌ ಬಾಸ್‌ ಮನೆಗೆ ಬೀಳುತ್ತಾ ಬೀಗ?

    – ಅರಣ್ಯ ಸಚಿವ ಈಶ್ವರ ಖಂಡ್ರೆ ಸಮರ್ಥನೆ ಏನು?

    ರಾಮನಗರ: ಜಿಲ್ಲೆಯ ಬಿಡದಿ (Bidadi) ಬಳಿಯಿರುವ ವೆಲ್ಸ್ ಸ್ಟುಡಿಯೋಸ್ & ಎಂಟರ್‌ಟೈನ್ಮೆಂಟ್ ಪ್ರೈ.ಲಿ. (Jollywood Studios) ಜಲ ಕಾಯಿದೆ, ವಾಯು ಕಾಯಿದೆಯಡಿ ಅನುಮತಿ ಪಡೆಯದೆ ಕಾರ್ಯಾಚರಣೆ ಮಾಡುತ್ತಿರುವ ಹಿನ್ನೆಲೆಯಲ್ಲಿ ಮಾಲಿನ್ಯ ನಿಯಂತ್ರಣ ಮಂಡಳಿ ನೋಟಿಸ್ ನೀಡಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ತಿಳಿಸಿದರು.

    ವಿಕಾಸಸೌಧದಲ್ಲಿ ಮಂಗಳವಾರ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಬಿಗ್ ಬಾಸ್ (Bigg Boss Kannada 12) ಕಾರ್ಯಕ್ರಮ ನಡೆಯುತ್ತಿರುವ ಸ್ಟುಡಿಯೋಗೆ ನೋಟಿಸ್ ನೀಡಿರುವ ವಿಚಾರ ತಿಳಿಯಿತು. ಈ ಬಗ್ಗೆ ಮಾಹಿತಿ ಪಡೆದಾಗ, ರಾಮನಗರ ಪ್ರಾದೇಶಿಕ ಕಚೇರಿಯಿಂದ 2024ರಲ್ಲೇ 2 ಬಾರಿ ನೋಟಿಸ್ ನೀಡಿದ್ದರೂ ಅನುಪಾಲನೆ ಮಾಡಿದ ಕಾರಣ ಈ ನೋಟಿಸ್ ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ ಎಂದರು. ಇದನ್ನೂ ಓದಿ: ಅಕ್ಕ, ಬಾವನ ಜೊತೆ ಗಲಾಟೆ – ಬಿಗ್‌ ಬಾಸ್‌ ರಂಜಿತ್‌ ಮೇಲೆ ದೂರು ದಾಖಲು

    ಇಲ್ಲಿ ಎಸ್‌ಟಿಪಿ ಕಾರ್ಯನಿರ್ವಹಣೆ ಸೇರಿದಂತೆ ಸಮರ್ಪಕವಾಗಿ ತಾಜ್ಯ ವಿಲೇವಾರಿ ಆಗುತ್ತಿಲ್ಲ. ಜನರೇಟರ್ ಸೆಟ್‌ಗಳಿದ್ದು, ಅದಕ್ಕೂ ಅನುಮತಿ ಪಡೆದಿಲ್ಲ ಎಂದು ತಿಳಿಸಿದ್ದಾರೆ. ಕಾನೂನಿಗಿಂತ ಯಾರೂ ದೊಡ್ಡವರಲ್ಲ. ಹೀಗಾಗಿ, ಮಂಡಳಿ ಕ್ರಮ ಕೈಗೊಂಡಿದೆ ಎಂದು ಹೇಳಿದರು.