Tag: ಬಿಗ್ ಬಾಸ್ ಸೀಸನ್ 11

  • BBK 11| ಹನುಮಂತು ಮುಂದೆ ಗಾಂಧೀಜಿ ನಿಂತಿದ್ರೂ ಹನುಮಂತುನೇ ಗೆಲ್ತಿದ್ರು: ರಜತ್ ಕಿಶನ್

    BBK 11| ಹನುಮಂತು ಮುಂದೆ ಗಾಂಧೀಜಿ ನಿಂತಿದ್ರೂ ಹನುಮಂತುನೇ ಗೆಲ್ತಿದ್ರು: ರಜತ್ ಕಿಶನ್

    ಬೆಂಗಳೂರು: ಹನುಮಂತು (Hanumantha) ಮುಂದೆ ಗಾಂಧೀಜಿ ನಿಂತಿದ್ದರು ಹನುಮಂತುನೇ ಗೆಲ್ಲುತ್ತಿದ್ದರು ಎಂದು ಬಿಗ್ ಬಾಸ್ ಸೀಸನ್ 11ರ (Bigg Boss 11) ಸೆಕೆಂಡ್ ರನ್ನರ್ ಅಪ್ ರಜತ್ ಕಿಶನ್ (Rajath Kishan) ಸಂತಸ ವ್ಯಕ್ತಪಡಿಸಿದರು.

    ಬಿಗ್ ಬಾಸ್ 11ರ ಗ್ರ್ಯಾಂಡ್ ಫಿನಾಲೆ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬಿಗ್ ಬಾಸ್ ಜರ್ನಿ ಚೆನ್ನಾಗಿತ್ತು. ಶಾರ್ಟ್ ಟೈಂನಲ್ಲಿ ಇಷ್ಟೊಂದು ಪ್ರೀತಿ ವಿಶ್ವಾಸ ಸಿಕ್ಕಿರೋದು ಖುಷಿ ಇದೆ ಎಂದು ಹರ್ಷ ವ್ಯಕ್ತಪಡಿಸಿದರು. ಇದನ್ನೂ ಓದಿ: ದೇವರಾಣೆ ಗೆಲ್ತೀನಿ ಅಂತ ಬಂದಿರಲಿಲ್ಲ, ಹೋಗಿ ಮಜಾ ಮಾಡಿ ಬರೋಣ ಅಂತ ಬಂದಿದ್ದೆ: ಹನುಮಂತ

    ಇನ್ನು ಮಾಜಿ ಪ್ರೇಯಸಿ ಜೊತೆ ಪೋಟೋ ವೈರಲ್ ಮಾಡಿ ಟ್ರೋಲ್ ಪೇಜ್‌ಗಳು ಬೆದರಿಕೆ ವಿಚಾರದ ಕುರಿತು ಪ್ರತಿಕ್ರಿಯಿಸಿದ ಅವರು, ನಾನು ಹೊರಗಡೆ ಬಂದಿದ್ದೀನಲ್ಲ, ನೋಡಿಕೊಳ್ಳುತ್ತೇನೆ ಬಿಡಿ ಎಂದರು. ಇದನ್ನೂ ಓದಿ: BBK 11: ಬಿಗ್‌ ಬಾಸ್‌ ಟ್ರೋಫಿ ಗೆದ್ದು ಸುದೀಪ್‌ ಕಾಲಿಗೆ ಬಿದ್ದ ಹನುಮಂತ

    ಬಿಗ್ ಬಾಸ್ ಸೀಸನ್ 11ರಲ್ಲಿ ಹನುಮಂತ ವಿನ್ನರ್ ಆಗಿ ಹೊರಹೊಮ್ಮಿದ್ರೆ, ತ್ರಿವಿಕ್ರಮ್ ರನ್ನರ್ ಅಪ್ ಆಗಿದ್ದಾರೆ. ಇನ್ನು ಬಿಗ್ ಬಾಸ್ 11ರ ಶೋಗೆ ವೈಲ್ಡ್ ಕಾರ್ಡ್ ಸ್ಪರ್ಧಿಯಾಗಿ ಬಂದಿದ್ದ ರಜತ್ ಅವರು ಮನೆಯಲ್ಲಿ ವೈಲ್ಡ್ ಆಗಿ ಆಟ ಆಡಿ ಸೆಕೆಂಡ್ ರನ್ನರ್ ಅಪ್ ಪಟ್ಟ ಸ್ವೀಕರಿಸಿದ್ದಾರೆ.‌ ಇದನ್ನೂ ಓದಿ: BBK 11: ಹನುಮಂತ ಟ್ರೋಫಿ ಗೆದ್ದಿರೋದು ಖುಷಿಯಿದೆ- ತ್ರಿವಿಕ್ರಮ್‌ ರಿಯಾಕ್ಷನ್‌

  • ನಾನಿನ್ನೂ ಜೀವಂತವಾಗಿದ್ದೇನೆ – ಬಿಗ್ ಬಾಸ್ ಸ್ಪರ್ಧಿ ಗೋಲ್ಡ್ ಸುರೇಶ್ ತಂದೆ ಸ್ಪಷ್ಟನೆ

    ನಾನಿನ್ನೂ ಜೀವಂತವಾಗಿದ್ದೇನೆ – ಬಿಗ್ ಬಾಸ್ ಸ್ಪರ್ಧಿ ಗೋಲ್ಡ್ ಸುರೇಶ್ ತಂದೆ ಸ್ಪಷ್ಟನೆ

    ಚಿಕ್ಕೋಡಿ: ಬಿಗ್ ಬಾಸ್ ಸೀಸನ್ 11ರ (Bigg Boss Kannada 11) ಸ್ಪರ್ಧಿ ಗೋಲ್ಡ್ ಸುರೇಶ್ (Gold Suresh) ದಿಢೀರ್ ಬಿಗ್ ಬಾಸ್ ಮನೆಯಿಂದ ಹೊರ ಬಂದ ವಿಚಾರದಿಂದ ಹಬ್ಬಿದ್ದ ವದಂತಿಗಳಿಗೆ ತೆರೆಬಿದ್ದಿದೆ.

    ಬೆಳಗಾವಿಯ ಅಥಣಿ ತಾಲೂಕಿನ ಪಾರ್ಥನಹಳ್ಳಿಯ ನಿವಾಸಿ ಗೋಲ್ಡ್ ಸುರೇಶ್ ಬಿಗ್ ಬಾಸ್‍ನಲ್ಲಿ ಅತ್ಯಂತ ಪ್ರಬಲ ಸ್ಪರ್ಧಿಯಾಗಿದ್ದರು. ಈ ವಾರ ಕ್ಯಾಪ್ಟನ್ ಸಹ ಆಗಿದ್ದರು. ಆದರೆ ಗೋಲ್ಡ್ ಸುರೇಶ್ ಇದ್ದಕ್ಕಿದ್ದಂತೆ ಮನೆಯಿಂದ ಆಚೆ ಬಂದಿದ್ದಾರೆ. ಗೋಲ್ಡ್ ಸುರೇಶ್ ಕುಟುಂಬದಲ್ಲಿ ತುರ್ತು ಪರಿಸ್ಥಿತಿ ಉಂಟಾಗಿದ್ದು, ಅವರ ಅವಶ್ಯಕತೆ ಬಿಗ್ ಬಾಸ್ ಮನೆಗಿಂತ ಕುಟುಂಬದವರಿಗೆ ಹೆಚ್ಚು ಅಗತ್ಯವಿದೆ. ಗೋಲ್ಡ್ ಸುರೇಶ್ ಹೆಚ್ಚು ತಡ ಮಾಡದೇ ನಿಮ್ಮ ವಸ್ತುಗಳನ್ನು ಪ್ಯಾಕ್ ಮಾಡಿಕೊಂಡು ಹೊರಗೆ ಬನ್ನಿ ಎಂದು ಬಿಗ್ ಬಾಸ್ ಆದೇಶಿಸಿತ್ತು.

    ಈ ವಿಚಾರ ಹೊರಬರುತ್ತಿದ್ದಂತೆ ಸಾಮಾಜಿಕ ಜಾಲತಾಣದಲ್ಲಿ ಗೋಲ್ಡ್ ಸುರೇಶ್ ತಂದೆ ನಿಧನರಾಗಿದ್ದಾರೆ ಎಂದು ಸುಳ್ಳು ವದಂತಿ ಹಬ್ಬಿಸಲಾಗಿತ್ತು. ಈ ಬಗ್ಗೆ ಸುರೇಶ್ ತಂದೆ ಶಿವಗೌಡ ಪ್ರತಿಕ್ರಿಯೆ ನೀಡಿದ್ದು, ನನ್ನ ಕಾಲಿಗೆ ನೋವಾಗಿದೆ. ನಾನು ಸತ್ತಿಲ್ಲ, ಆ ರೀತಿ ವದಂತಿ ಹಬ್ಬಿಸಲಾಗಿದೆ ಎಂದು ಸ್ಪಷ್ಟನೆ ನೀಡಿದ್ದಾರೆ. ಇದೇ ವೇಳೆ ಬಿಗ್ ಬಾಸ್‍ನಲ್ಲಿ ನನ್ನ ಮಗ ಒಳ್ಳೆಯ ಆಟ ಆಡುತ್ತಿದ್ದಾನೆ. ಉತ್ತರ ಕರ್ನಾಟಕದ ಹೆಸರು ಗಳಿಸುತ್ತಾನೆ ಎಂದಿದ್ದಾರೆ.

    ಒಟ್ಟಿನಲ್ಲಿ ಸುಳ್ಳು ವದಂತಿಯಿಂದ ಸುರೇಶ್ ಬಿಗ್ ಬಾಸ್‍ನಿಂದ ಹೊರಗಡೆ ಬಂದಿದ್ದಾರೆ. ಅವರಿಗೆ ಬಿಗ್ ಬಾಸ್ ಮತ್ತೊಂದು ಕೊನೆಯ ಅವಕಾಶ ನೀಡುತ್ತದೆಯೇ ಎಂದು ಕಾದು ನೋಡಬೇಕಿದೆ.