Tag: ಬಿಜಾಪುರ

  • ಎನ್‌ಕೌಂಟರ್ ಭೀತಿ – ಏಕಕಾಲಕ್ಕೆ 103 ನಕ್ಸಲರ ಶರಣಾಗತಿ

    ಎನ್‌ಕೌಂಟರ್ ಭೀತಿ – ಏಕಕಾಲಕ್ಕೆ 103 ನಕ್ಸಲರ ಶರಣಾಗತಿ

    ರಾಯ್ಪುರ: ಛತ್ತೀಸ್‌ಗಢದ (Chhattisgarh) ಬಿಜಾಪುರ ಜಿಲ್ಲೆಯಲ್ಲಿ ಗುರುವಾರ 103 ಮಾವೋವಾದಿಗಳು (Maoists) ಹಿರಿಯ ಪೊಲೀಸ್ ಮತ್ತು ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಅಧಿಕಾರಿಗಳ ಮುಂದೆ ಶರಣಾಗಿದ್ದಾರೆ.

    ಈ ಹಿಂದೆ 46 ಮಂದಿ ನಕ್ಸಲರ ಪತ್ತೆಗೆ 1 ಕೋಟಿ ರೂ. ಹಣಕ್ಕೂ ಹೆಚ್ಚು ಬಹುಮಾನ ಘೋಷಿಸಲಾಗಿತ್ತು. ಇದೀಗ ಪೊಲೀಸ್ ಎನ್‌ಕೌಂಟರ್ ಭೀತಿಯ ಹಿನ್ನೆಲೆ ಆರ್‌ಪಿಸಿ ಮಾವೋವಾದಿ ಸಂಘಟನೆಯಲ್ಲಿ ಸಕ್ರಿಯರಾಗಿದ್ದ 22 ಮಹಿಳೆಯರು ಸೇರಿ 102 ಮಂದಿ ನಕ್ಸಲರು ಶರಣಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಚೆನ್ನೈ ಕಸ್ಟಮ್ಸ್‌ ಭಾರೀ ಲಂಚ- ಭಾರತದ ಕಾರ್ಯಾಚರಣೆ ನಿಲ್ಲಿಸುತ್ತೇವೆ ಎಂದ ಲಾಜಿಸ್ಟಿಕ್ಸ್ ಕಂಪನಿ

    ಪುನರ್ವಸತಿಯಾಗಿ ಉತ್ತೇಜಿಸುವ ರಾಜ್ಯ ನೇತೃತ್ವದ ಉಪಕ್ರಮವಾದ ಪುನಾ ಮಾರ್ಗೆಮ್‌ನ ಬ್ಯಾನರ್ ಅಡಿಯಲ್ಲಿ ಈ ಶರಣಾಗತಿ ಕಾರ್ಯಕ್ರಮ ನಡೆಯಿತು. ಶರಣಾದ ಮಾವೋವಾದಿಗಳಿಗೆ ತಲಾ 50,000 ರೂ.ಗಳ ಚೆಕ್ ಅನ್ನು ನೀಡಲಾಯಿತು. ಅಲ್ಲದೇ ಸರ್ಕಾರ ವತಿಯಿಂದ ಅವರಿಗೆ ಪುನರ್ವಸತಿ ಕಲ್ಪಿಸಲಾಗುವುದು ಎಂದಿದ್ದಾರೆ.

    ಮಾವೋವಾದಿಗಳ ವಿಭಾಗೀಯ ಸಮಿತಿ ಸದಸ್ಯ ಲಚ್ಚು ಪುನೆಮ್ ಅಲಿಯಾಸ್ ಸಂತೋಷ್ (36), ಪ್ಲಟೂನ್ ಪಕ್ಷದ ಸಮಿತಿ ಸದಸ್ಯರಾದ ಗುಡ್ಡು ಫರ್ಸಾ, ಭೀಮಾ ಸೋಧಿ, ಹಿಡ್ಮೆ ಫರ್ಸಾ ಮತ್ತು ಸುಖಮತಿ ಓಯಮ್‌ಗೆ ತಲಾ 8 ಲಕ್ಷ ರೂ. ಹಣವನ್ನು ಬಹುಮಾನವಾಗಿ ನೀಡಲಾಗಿದೆ.

    ಇನ್ನು ನಾಲ್ವರಿಗೆ ತಲಾ 5 ಲಕ್ಷ ರೂ. ಹಣ, 15 ಮಂದಿಗೆ ತಲಾ 2 ಲಕ್ಷ ರೂ. ಹಣ, ಹತ್ತು ಮಂದಿಗೆ ತಲಾ 1 ಲಕ್ಷ ರೂ., 12 ಮಂದಿಗೆ ತಲಾ 50,000 ರೂ., ಮೂವರಿಗೆ ತಲಾ 10,000 ರೂ. ಹಣವನ್ನು ಬಹುಮಾನದ ರೂಪದಲ್ಲಿ ನೀಡಲಾಗಿದೆ ಎಂದು ತಿಳಿಸಿದ್ದಾರೆ.

    ಶರಣಾದವರಲ್ಲಿ ಆರ್‌ಪಿಸಿ (ಕ್ರಾಂತಿಕಾರಿ ಪಕ್ಷದ ಸಮಿತಿ)ಯ ಮಾವೋವಾದಿಗಳ ಸಂಖ್ಯೆ ಹೆಚ್ಚಾಗಿದೆ. ಇತ್ತೀಚೆಗೆ ಹಲವಾರು ಮಾವೋವಾದಿ ಸಂಘಟನೆಯ ನಾಯಕರು ಭದ್ರತಾ ಪಡೆಗಳಿಂದ ಹತರಾಗಿದ್ದರು. ಇದೀಗ ಪೊಲೀಸ್ ಎನ್‌ಕೌಂಟರ್ ಭೀತಿ ಹಿನ್ನೆಲೆ 103 ಮಾವೋವಾದಿಗಳು ಶರಣಾಗಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

  • ಮಾವೋವಾದಿಗಳು ಇಟ್ಟಿದ್ದ ಐಇಡಿ ಸ್ಫೋಟ – ಓರ್ವ ಪೊಲೀಸ್ ಸಾವು, ಮೂವರಿಗೆ ಗಾಯ

    ಮಾವೋವಾದಿಗಳು ಇಟ್ಟಿದ್ದ ಐಇಡಿ ಸ್ಫೋಟ – ಓರ್ವ ಪೊಲೀಸ್ ಸಾವು, ಮೂವರಿಗೆ ಗಾಯ

    ರಾಯ್ಪುರ: ಮಾವೋವಾದಿಗಳು ಇಟ್ಟಿದ್ದ ಸುಧಾರಿತ ಸ್ಫೊಟಕ ಸಾಧನ (IED) ಸ್ಫೋಟಗೊಂಡು ಓರ್ವ ಪೊಲೀಸ್ ಜವಾನ್ ಮೃತಪಟ್ಟಿದ್ದು, ಮೂವರು ಸಿಬ್ಬಂದಿ ಗಾಯಗೊಂಡಿರುವ ಘಟನೆ ಛತ್ತೀಸ್‌ಗಢದ (Chhattisgarh) ಬಿಜಾಪುರ ಜಿಲ್ಲೆಯಲ್ಲಿ ನಡೆದಿದೆ.

    ಇಂದ್ರಾವತಿ ರಾಷ್ಟ್ರೀಯ ಉದ್ಯಾನವನ ಪ್ರದೇಶದಲ್ಲಿ ಸೋಮವಾರ ಬೆಳಗ್ಗೆ ಜಿಲ್ಲಾ ಮೀಸಲು ಪಡೆ (DRJ) ತಂಡವು ನಕ್ಸಲ್ ವಿರೋಧಿ ಕಾರ್ಯಾಚರಣೆಗೆ ತೆರಳಿದ್ದಾಗ ಸ್ಫೋಟ ಸಂಭವಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: ಇಂದು ಪ್ರಧಾನಿ ಮೋದಿ ಭೇಟಿಯಾಗಲಿದ್ದಾರೆ ಗಗನಯಾತ್ರಿ ಶುಭಾಂಶು ಶುಕ್ಲಾ

    ಸ್ಫೋಟದಲ್ಲಿ ಆರ್‌ಜಿ ಪೊಲೀಸ್ ಜವಾನ್‌(Police Jawan) ದಿನೇಶ್ ನಾಗ್ ಮೃತಪಟ್ಟಿದ್ದಾರೆ. ಅಲ್ಲದೇ ಮೂವರು ಸಿಬ್ಬಂದಿ ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ಪ್ರಾಥಮಿಕ ಚಿಕಿತ್ಸೆಯನ್ನು ನೀಡಲಾಗಿದ್ದು, ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಭಾರತ-ಪಾಕ್‌ ಪರಿಸ್ಥಿತಿಯನ್ನ ಅಮೆರಿಕ ಸೂಕ್ಷ್ಮವಾಗಿ ಗಮನಿಸ್ತಿದೆ – ಕದನ ವಿರಾಮ ಕುಸಿಯಬಹುದು: ಮಾರ್ಕೊ ರೂಬಿಯೊ

    ಕಳೆದವಾರವೂ ಬಿಜಾಪುರ ಜಿಲ್ಲೆಯಲ್ಲಿ ಮಾವೋವಾದಿಗಳು ಇಟ್ಟಿದ್ದ ಐಇಡಿ ಸ್ಫೋಟಗೊಂಡು ಡಿಆರ್‌ಜಿಯ ಅಧಿಕಾರಿಯೊಬ್ಬರು ಗಾಯಗೊಂಡಿದ್ದರು.

  • ಛತ್ತೀಸ್‌ಗಢದ ದಂತೇವಾಡ-ಬಿಜಾಪುರ ಗಡಿಯಲ್ಲಿ ಎನ್‌ಕೌಂಟರ್: ಮೂವರು ನಕ್ಸಲರು ಹತ್ಯೆ

    ಛತ್ತೀಸ್‌ಗಢದ ದಂತೇವಾಡ-ಬಿಜಾಪುರ ಗಡಿಯಲ್ಲಿ ಎನ್‌ಕೌಂಟರ್: ಮೂವರು ನಕ್ಸಲರು ಹತ್ಯೆ

    ಜಗದಲ್‌ಪುರ: ಛತ್ತೀಸ್‌ಗಢದ (Chhattisgarh) ದಂತೇವಾಡ (Dantewada) ಮತ್ತು ಬಿಜಾಪುರ (Bijapura) ಜಿಲ್ಲೆಗಳ ಗಡಿಭಾಗದ ಅರಣ್ಯ ಪ್ರದೇಶದಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ತೀವ್ರ ಗುಂಡಿನ ಚಕಮಕಿಯಲ್ಲಿ ಮೂವರು ನಕ್ಸಲರು ಹತರಾಗಿದ್ದಾರೆ.

    ಮಂಗಳವಾರ ಬೆಳಗ್ಗೆ ನಡೆದ ಈ ಎನ್‌ಕೌಂಟರ್, ನಕ್ಸಲೀಯರ ವಿರುದ್ಧ ಭದ್ರತಾ ಪಡೆಗಳು ನಡೆಸುತ್ತಿರುವ ಶೋಧ ಕಾರ್ಯಾಚರಣೆಯ ಭಾಗವಾಗಿ ಸಂಭವಿಸಿದೆ ಎಂದು ರಾಜ್ಯ ಪೊಲೀಸ್ ಇಲಾಖೆ ತಿಳಿಸಿದೆ. ಗುಪ್ತಚರ ಮಾಹಿತಿಗಳ ಪ್ರಕಾರ, ಈ ಪ್ರದೇಶದಲ್ಲಿ ನಕ್ಸಲರು ಚಟುವಟಿಕೆಗಳನ್ನು ನಡೆಸುತ್ತಿರುವ ಬಗ್ಗೆ ನಿಖರ ಮಾಹಿತಿ ಲಭಿಸಿತ್ತು. ಈ ಮಾಹಿತಿಯ ಆಧಾರದ ಮೇಲೆ ಛತ್ತೀಸ್‌ಗಢ ರಾಜ್ಯ ಪೊಲೀಸರು ಮತ್ತು ಕೇಂದ್ರೀಯ ಮೀಸಲು ಪೊಲೀಸ್ ಪಡೆ ಸಿಬ್ಬಂದಿಯ ಜಂಟಿ ತಂಡ ಸೋಮವಾರ ರಾತ್ರಿಯಿಂದಲೇ ಶೋಧ ಕಾರ್ಯಾಚರಣೆಗೆ ತೆರಳಿತ್ತು. ಇದನ್ನೂ ಓದಿ: ಮೇಕೆದಾಟು ಯೋಜನೆಗೆ ಡಿಕೆಶಿಯವರು ಸ್ಟಾಲಿನ್‌ರನ್ನು ಒಪ್ಪಿಸಲಿ: ನಿಖಿಲ್ ಸವಾಲ್

    ಮಂಗಳವಾರ ಈ ತಂಡವು ಕಾಡಿನ ಒಳಗೆ ಮುನ್ನಡೆಯುತ್ತಿದ್ದಾಗ, ಅಡಗಿದ್ದ ನಕ್ಸಲರು ಏಕಾಏಕಿ ಗುಂಡಿನ ದಾಳಿ ಆರಂಭಿಸಿದರು. ಈ ದಾಳಿಗೆ ತಕ್ಷಣವೇ ಪ್ರತಿಕ್ರಿಯಿಸಿದ ಭದ್ರತಾ ಪಡೆಗಳು ಪ್ರತಿದಾಳಿ ನಡೆಸಿದವು. ಸುಮಾರು ಒಂದು ಗಂಟೆಗೂ ಅಧಿಕ ಕಾಲ ನಡೆದ ಈ ಗುಂಡಿನ ಕಾಳಗದಲ್ಲಿ ಐವರು ಮೃತಪಟ್ಟಿದ್ದಾರೆ ಎನ್ನಲಾಗಿದ್ದು, ಮೂವರು ನಕ್ಸಲರ ಮೃತದೇಹ ಸಿಕ್ಕಿದೆ. ಇದನ್ನೂ ಓದಿ: ರೀಲ್ಸ್ ತಂದ ಸಂಕಷ್ಟ: ವಿಚಾರಣೆಗೆ ಜೊತೆಯಾಗಿ ಹಾಜರಾದ ವಿನಯ್, ರಜತ್

    ಮೃತರ ಗುರುತು ಇನ್ನೂ ಖಚಿತವಾಗಿಲ್ಲವಾದರೂ, ಇವರು ಸ್ಥಳೀಯ ಮಾವೋವಾದಿ ಗುಂಪಿನ ಸದಸ್ಯರಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಎನ್‌ಕೌಂಟರ್ ಸ್ಥಳದಿಂದ ಒಂದು ಎಕೆ-47 ರೈಫಲ್, ಎರಡು ಸ್ಥಳೀಯವಾಗಿ ತಯಾರಿಸಿದ ಬಂದೂಕುಗಳು, ಸ್ಫೋಟಕ ವಸ್ತುಗಳು ಮತ್ತು ಗುಂಡುಗಳನ್ನು ಒಳಗೊಂಡ ಶಸ್ತ್ರಸಾಮಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಇದರ ಜೊತೆಗೆ, ನಕ್ಸಲರ ಬಳಕೆಯ ದಿನಚರಿ ವಸ್ತುಗಳು, ಕೆಲವು ದಾಖಲೆಗಳು ಮತ್ತು ಸಂಪರ್ಕ ಸಾಧನಗಳು ಸಹ ದೊರೆತಿವೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: ಸಂವಿಧಾನ ಬದಲಾವಣೆ ಮಾಡ್ತೀನಿ ಅಂದರೆ ಜನರೇ ಡಿಕೆಶಿ ನೆಟ್ಟು-ಬೋಲ್ಟ್‌ ಟೈಟ್ ಮಾಡ್ತಾರೆ: ನಿಖಿಲ್ ಕುಮಾರಸ್ವಾಮಿ

    ಈ ಎನ್‌ಕೌಂಟರ್‌ನಲ್ಲಿ ಭದ್ರತಾ ಪಡೆಗಳಿಗೆ ಯಾವುದೇ ಪ್ರಾಣಹಾನಿ ಅಥವಾ ಗಾಯಗಳಾಗಿಲ್ಲ ಎಂದು ದೃಢಪಡಿಸಲಾಗಿದೆ. ಆದಾಗ್ಯೂ, ಹೆಚ್ಚುವರಿ ಭದ್ರತಾ ಸಿಬ್ಬಂದಿಯನ್ನು ಘಟನಾ ಸ್ಥಳಕ್ಕೆ ಕಳುಹಿಸಲಾಗಿದ್ದು, ಸುತ್ತಮುತ್ತಲಿನ ಗ್ರಾಮಗಳಲ್ಲಿ ತಪಾಸಣೆ ಮತ್ತು ಪರಿಶೀಲನೆ ನಡೆಸಲಾಗುತ್ತಿದೆ. ಇದನ್ನೂ ಓದಿ: ಒಂದೇ ದಿನ ಎರಡು ಕಡೆ 80 ಕ್ಕೂ ಹೆಚ್ಚು ಹಂದಿಗಳ ಕಳ್ಳತನ – ಕಳ್ಳರ ಕಾಟಕ್ಕೆ ಹೈರಾಣಾದ ಸಾಕಾಣಿಕೆದಾರರು

    ಈ ಘಟನೆ ಕುರಿತು ಪ್ರತಿಕ್ರಿಯಿಸಿದ ದಂತೇವಾಡ ಜಿಲ್ಲೆಯ ಪೊಲೀಸ್ ಅಧೀಕ್ಷಕರು, ನಕ್ಸಲೀಯರ ವಿರುದ್ಧ ನಮ್ಮ ಕಾರ್ಯಾಚರಣೆಗಳು ಯಶಸ್ವಿಯಾಗಿ ಮುಂದುವರೆದಿವೆ. ಈ ಎನ್‌ಕೌಂಟರ್‌ನಲ್ಲಿ ಮೂವರು ನಕ್ಸಲರು ಹತರಾಗಿದ್ದು, ಪ್ರದೇಶದಲ್ಲಿ ಶಾಂತಿ ಸ್ಥಾಪನೆಗೆ ನಾವು ಬದ್ಧರಾಗಿದ್ದೇವೆ. ಶೋಧ ಕಾರ್ಯ ಮುಂದುವರೆದಿದ್ದು, ಹೆಚ್ಚಿನ ಮಾಹಿತಿ ಶೀಘ್ರದಲ್ಲಿ ಲಭ್ಯವಾಗಲಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ರಾಜಣ್ಣ ದೂರು ಕೊಡಬೇಕಲ್ಲವಾ? ನೀವು ಎಷ್ಟು ಬಾರಿ ತಿರುಗಿಸಿ ಮುರುಗಿಸಿ ಕೇಳಿದ್ರು ಅಷ್ಟೇ: ಪರಮೇಶ್ವರ್

    ಮಾರ್ಚ್ 20 ರಂದು ಸೈನಿಕರು ಛತ್ತೀಸ್‌ಗಢದ ಬಿಜಾಪುರ ಮತ್ತು ಕಾಂಕೇರ್ ಜಿಲ್ಲೆಗಳಲ್ಲಿ ನಕ್ಸಲರು ಮತ್ತು ಭದ್ರತಾ ಪಡೆಗಳ ನಡುವೆ ಪ್ರತ್ಯೇಕ ಎನ್‌ಕೌಂಟರ್‌ಗಳು ನಡೆದವು. ಬಿಜಾಪುರದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ 26 ನಕ್ಸಲರು ಹತರಾದರು ಮತ್ತು ಬಿಜಾಪುರ ಜಿಲ್ಲಾ ಮೀಸಲು ಪಡೆಯ (ಡಿಆರ್‌ಜಿ) ಒಬ್ಬ ಜವಾನ ಹುತಾತ್ಮರಾದರು. ಇದೇ ಸಮಯದಲ್ಲಿ, ಕಾಂಕೇರ್‌ನಲ್ಲಿ ನಾಲ್ವರು ನಕ್ಸಲರು ಕೊಲ್ಲಲ್ಪಟ್ಟಿದ್ದಾರೆ. ಎಲ್ಲಾ 30 ನಕ್ಸಲರ ಶವಗಳನ್ನು ವಶಪಡಿಸಿಕೊಳ್ಳಲಾಗಿದೆ. ಇದನ್ನೂ ಓದಿ: ಬ್ಲಡ್‌ ಕ್ಯಾನ್ಸರ್‌ನಿಂದ ತಮಿಳು ನಟ ಶಿಹಾನ್‌ ಹುಸೈನಿ ನಿಧನ

  • ಛತ್ತೀಸ್‌ಗಢ – ಪ್ರತ್ಯೇಕ ಪ್ರಕರಣದಲ್ಲಿ 22 ನಕ್ಸಲರ ಎನ್‌ಕೌಂಟರ್

    ಛತ್ತೀಸ್‌ಗಢ – ಪ್ರತ್ಯೇಕ ಪ್ರಕರಣದಲ್ಲಿ 22 ನಕ್ಸಲರ ಎನ್‌ಕೌಂಟರ್

    ರಾಯ್‌ಪುರ: ಛತ್ತೀಸ್‌ಗಢದ (Chhattisgarh) ಬಿಜಾಪುರ ಮತ್ತು ಕಂಕೇರ್ ಜಿಲ್ಲೆಗಳಲ್ಲಿ ನಡೆದ ಪ್ರತ್ಯೇಕ ನಕ್ಸಲ್ ನಿಗ್ರಹ ಪಡೆಯ ಕಾರ್ಯಾಚರಣೆಯಲ್ಲಿ 22 ನಕ್ಸಲರು ಹತರಾಗಿದ್ದಾರೆ. ಗುಂಡಿನ ಚಕಮಕಿಯಲ್ಲಿ ಓರ್ವ ಭದ್ರತಾ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

    ಬಿಜಾಪುರದಲ್ಲಿ (Bijapur) ದಾಂತೇವಾಡ (Dantewada) ಜಿಲ್ಲೆಯ ಗಡಿಯಲ್ಲಿ ಬೆಳಗ್ಗೆ 7 ಗಂಟೆ ಸುಮಾರಿಗೆ ಗಂಗಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಭದ್ರತಾ ಸಿಬ್ಬಂದಿ 2 ತಂಡಗಳಾಗಿ ಕಾರ್ಯಾಚರಣೆ ಮಾಡಿದಾಗ ಗುಂಡಿನ ಚಕಮಕಿ ನಡೆದಿದೆ. ಇದನ್ನೂ ಓದಿ: ನನ್ನ ಮೇಲೆ ಹನಿಟ್ರ್ಯಾಪ್‌ಗೆ ಯತ್ನ ಆಗಿದೆ – ಸದನದಲ್ಲೇ ಸಚಿವ ಕೆ.ಎನ್‌ ರಾಜಣ್ಣ ಬಾಂಬ್‌

    18 ನಕ್ಸಲರ ಶವಗಳು, ಬಂದೂಕುಗಳು ಮತ್ತು ಸ್ಫೋಟಕಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಂಕೇರ್‌ನಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ನಾಲ್ವರು ನಕ್ಸಲರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಇದನ್ನೂ ಓದಿ: ಮಾ.30ರಂದು ರಿಲೀಸ್‌ ಆಗಲಿದೆ ಸಲ್ಮಾನ್‌ ಖಾನ್‌ ನಟನೆಯ ‘ಸಿಕಂದರ್‌’ ಸಿನಿಮಾ

    ರಾಜ್ಯ ಕಾರ್ಯಪಡೆ ಮತ್ತು ಜಿಲ್ಲಾ ಮೀಸಲು ಪಡೆ ಹಾಗೂ ನಕ್ಸಲರ ನಡುವೆ ಗುಂಡಿನ ಚಕಮಕಿ ನಡೆದಿದೆ. ವಿಶೇಷ ಪಡೆಗಳ ಕಾರ್ಯಾಚರಣೆ ಎರಡೂ ಸ್ಥಳಗಳಲ್ಲಿ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

  • Chhattisgarh | 31 ನಕ್ಸಲರ ಎನ್‌ಕೌಂಟರ್ – ಇಬ್ಬರು ಭದ್ರತಾ ಸಿಬ್ಬಂದಿ ಸಾವು

    Chhattisgarh | 31 ನಕ್ಸಲರ ಎನ್‌ಕೌಂಟರ್ – ಇಬ್ಬರು ಭದ್ರತಾ ಸಿಬ್ಬಂದಿ ಸಾವು

    ರಾಯ್ಪುರ: ಭದ್ರತಾ ಸಿಬ್ಬಂದಿ (Security Personnel) ಹಾಗೂ ನಕ್ಸಲರ (Maoists) ನಡುವೆ ನಡೆದ ಎನ್‌ಕೌಂಟರ್‌ನಲ್ಲಿ (Encounter) 31 ನಕ್ಸಲರು ಬಲಿಯಾಗಿದ್ದು, ಇಬ್ಬರು ಭದ್ರತಾ ಸಿಬ್ಬಂದಿ ಸಾವನ್ನಪ್ಪಿದ ಘಟನೆ ಛತ್ತೀಸ್‌ಗಢದ (Chhattisgarh) ಬಿಜಾಪುರ ಜಿಲ್ಲೆಯಲ್ಲಿ ನಡೆದಿದೆ.

    ಇಂದ್ರಾವತಿ ರಾಷ್ಟ್ರೀಯ ಉದ್ಯಾನವನ ಪ್ರದೇಶದ ಅರಣ್ಯದಲ್ಲಿ ಭದ್ರತಾ ತಂಡ ಮಾವೋವಾದಿ ವಿರೋಧಿ ಕಾರ್ಯಾಚರಣೆ ನಡೆಸುತ್ತಿದ್ದಾಗ ಎನ್‌ಕೌಂಟರ್ ಪ್ರಾರಂಭವಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಗುಂಡಿನ ಚಕಮಕಿಯಲ್ಲಿ 31 ನಕ್ಸಲರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: ಆಪ್, ಕಾಂಗ್ರೆಸ್ ನಿರ್ಧಾರದಿಂದ ಬಿಜೆಪಿಗೆ ಲಾಭ – ಸಚಿವ ಚಲುವರಾಯಸ್ವಾಮಿ

    ಎನ್‌ಕೌಂಟರ್‌ನಲ್ಲಿ ಇಬ್ಬರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ. ಗುಂಡಿನ ಚಕಮಕಿಯಲ್ಲಿ ಸಾವನ್ನಪ್ಪಿದ ನಕ್ಸಲರ ಗುರುತನ್ನು ಪತ್ತೆಹಚ್ಚಲಾಗುತ್ತಿದೆ. ಘಟನಾ ಸ್ಥಳದಿಂದ ಭದ್ರತಾ ಪಡೆ ಸಿಬ್ಬಂದಿ ಶಸ್ತ್ರಾಸ್ತ್ರ ಮತ್ತು ಸ್ಫೋಟಕಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಸೋಲು ಒಪ್ಕೋತೀವಿ ಆದ್ರೆ ಇವಿಎಂ ಮೇಲೆ ಅನುಮಾನ ಇದೆ: ಶಿವರಾಜ್ ತಂಗಡಗಿ

    ಘಟನೆ ಸಂಬಂಧ ಶೋಧ ಕಾರ್ಯಾಚರಣೆ ಮುಂದುವರಿದಿದ್ದು, ಎನ್‌ಕೌಂಟರ್ ಸ್ಥಳಕ್ಕೆ ಹೆಚ್ಚಿನ ಪಡೆಗಳನ್ನು ರವಾನಿಸಲಾಗಿದೆ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ಡಿಬಾಸ್ ಫ್ಯಾನ್ಸ್‌ಗೆ ಸಿಹಿಸುದ್ದಿ- ಫೆ.16ರಂದು ರಿಲೀಸ್ ಆಗಲಿದೆ ‘ಡೆವಿಲ್’ ಚಿತ್ರದ ಟೀಸರ್

  • ಛತ್ತೀಸ್‌ಗಢ| ಇಬ್ಬರು ನಾಗರಿಕರ ಹತ್ಯೆ ಮಾಡಿದ ನಕ್ಸಲರು

    ಛತ್ತೀಸ್‌ಗಢ| ಇಬ್ಬರು ನಾಗರಿಕರ ಹತ್ಯೆ ಮಾಡಿದ ನಕ್ಸಲರು

    ರಾಯ್ಪುರ: ಛತ್ತೀಸ್‌ಗಢದ (Chhattisgarh) ಬಿಜಾಪುರ (Bijapura) ಜಿಲ್ಲೆಯ ಗ್ರಾಮವೊಂದರಲ್ಲಿ ನಕ್ಸಲರು ಇಬ್ಬರು ನಾಗರಿಕರನ್ನು ಹತ್ಯೆ ಮಾಡಿದ್ದಾರೆ.

    ಮೃತರನ್ನು ಕರಮ್ ರಾಜು (32) ಮತ್ತು ಮದ್ವಿ ಮುನ್ನಾ (27) ಎಂದು ಗುರುತಿಸಲಾಗಿದೆ. ಅದೇ ಊರಿನ ಗ್ರಾಮಸ್ಥರು ಎಂದು ತಿಳಿಯಲಾಗಿದೆ.ಇದನ್ನೂ ಓದಿ: ಉತ್ತರಾಖಂಡದ ಬಳಿಕ ಗುಜರಾತ್‌ನಲ್ಲೂ ಏಕರೂಪ ನಾಗರಿಕ ಸಂಹಿತೆ ಜಾರಿಗೆ ಸಿದ್ಧತೆ

    ಈ ಕುರಿತು ಪೊಲೀಸರು ಮಾಹಿತಿ ನೀಡಿದ್ದು, ಸೋಮವಾರ ರಾತ್ರಿ ನಕ್ಸಲರು ಬುಗ್ಡಿಚೆರು ಗ್ರಾಮದಲ್ಲಿ ಇಬ್ಬರನ್ನು ಕತ್ತು ಸೀಳಿ ಕೊಲೆ ಮಾಡಿದ್ದಾರೆ. ಪರಿಣಾಮ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

    ಮಂಗಳವಾರ ಬೆಳಿಗ್ಗೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಮೃತ ಇಬ್ಬರು ಪೊಲೀಸರಿಗೆ ತಮ್ಮ ಬಗ್ಗೆ ಮಾಹಿತಿ ನೀಡುತ್ತಿದ್ದಾರೆ ಎಂದು ಶಂಕಿಸಿ ನಕ್ಸಲರು ಹತ್ಯೆ ಮಾಡಿದ್ದಾರೆ ಎಂದು ಗ್ರಾಮಸ್ಥರು ಪೊಲೀಸರಿಗೆ ತಿಳಿಸಿದ್ದಾರೆ. ಈ ಘಟನೆ ತರೆಮ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

    ಇದಕ್ಕೂ ಮುನ್ನ ಜನವರಿ 16 ಮತ್ತು 26 ರಂದು ನಕ್ಸಲರು ಇಬ್ಬರು ಗ್ರಾಮಸ್ಥರನ್ನು ಪೊಲೀಸ್‌ರಿಗೆ ಮಾಹಿತಿ ನೀಡುತ್ತಾರೆ ಎಂದು ಶಂಕಿಸಿ ಹತ್ಯೆ ಮಾಡಿದ್ದರು. ಕಳೆದ ವರ್ಷ ಬಿಜಾಪುರದ 7 ಜಿಲ್ಲೆಗಳನ್ನು ಒಳಗೊಂಡು ಬಸ್ತಾರ್ ಪ್ರದೇಶದಲ್ಲಿ 68 ನಾಗರಿಕರನ್ನು ಹತ್ಯೆ ಮಾಡಿದ್ದರು.ಇದನ್ನೂ ಓದಿ: ಜೆಸಿಬಿ ಬಳಸಿ ಕಾಲ್ತುಳಿತದ ಸ್ಥಳದಲ್ಲಿ ಸಾಕ್ಷ್ಯ ನಾಶ: ಅಖಿಲೇಶ್‌ ಕಿಡಿ

  • ಛತ್ತೀಸ್‌ಗಢದಲ್ಲಿ 8 ನಕ್ಸಲರ ಎನ್‌ಕೌಂಟರ್

    ಛತ್ತೀಸ್‌ಗಢದಲ್ಲಿ 8 ನಕ್ಸಲರ ಎನ್‌ಕೌಂಟರ್

    ರಾಯ್ಪುರ: ಭದ್ರತಾ ಪಡೆ (Security Force) ನಡೆಸಿದ ಗುಂಡಿನ ಚಕಮಕಿಯಲ್ಲಿ ಎಂಟು ನಕ್ಸಲರು ಸಾವನ್ನಪ್ಪಿದ ಘಟನೆ ಛತ್ತೀಸ್‌ಗಢದ (Chhattisgarh) ಬಿಜಾಪುರದಲ್ಲಿ (Bijapur) ನಡೆದಿದೆ.

    ಶನಿವಾರ ಬೆಳಗ್ಗೆ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಎಂಟು ನಕ್ಸಲರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಗಂಗಲೂರ್ ಪೊಲೀಸ್ ಠಾಣೆ ಪ್ರದೇಶದ ಅರಣ್ಯದಲ್ಲಿ ಬೆಳಿಗ್ಗೆ 8:30ರ ಸುಮಾರಿಗೆ ಭದ್ರತಾ ಸಿಬ್ಬಂದಿಯ ಜಂಟಿ ತಂಡ ನಕ್ಸಲ ವಿರೋಧಿ ಕಾರ್ಯಾಚರಣೆ ನಡೆಸುತ್ತಿದ್ದಾಗ ಗುಂಡಿನ ಚಕಮಕಿ ಪ್ರಾರಂಭವಾಗಿದೆ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ಸಚಿವರ ವೇತನಕ್ಕೆ ಬಜೆಟ್‌ನಲ್ಲಿ 1,024 ಕೋಟಿ ರೂ. ಹಂಚಿಕೆ

    ಈ ಪ್ರದೇಶದಲ್ಲಿ ಪಶ್ಚಿಮ ಬಸ್ತಾರ್ ವಿಭಾಗದ ಮಾವೋವಾದಿಗಳ ಉಪಸ್ಥಿತಿಯ ಬಗ್ಗೆ ಗುಪ್ತಚರ ಮಾಹಿತಿಯ ನಂತರ ಶುಕ್ರವಾರ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: 12 ಲಕ್ಷ ಆದಾಯಕ್ಕೆ ಯಾವುದೇ ತೆರಿಗೆ ಇಲ್ಲ – ಇಲ್ಲಿದೆ ಸರಳ ಲೆಕ್ಕಾಚಾರ

    ಜಿಲ್ಲಾ ಮೀಸಲು ಗಾರ್ಡ್ (ಡಿಆರ್‌ಜಿ), ರಾಜ್ಯ ಪೊಲೀಸರ ವಿಶೇಷ ಕಾರ್ಯಪಡೆ (ಎಸ್‌ಟಿಎಫ್) ಮತ್ತು ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್), ಅದರ ಗಣ್ಯ ಘಟಕ ಕೋಬ್ರಾ (ಕಮಾಂಡೋ ಬೆಟಾಲಿಯನ್ ಫಾರ್ ರೆಸಲ್ಯೂಟ್ ಆಕ್ಷನ್) ಸೇರಿದಂತೆ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು. ಇದನ್ನೂ ಓದಿ: ರಕ್ತಾಭಿಷೇಕ ನಡೆದಿದ್ದು ಬಲಪಡಿಸೋದಕ್ಕಲ್ಲ, ನನ್ನ ವಶೀಕರಣಕ್ಕೆ – ಸ್ನೇಹಮಯಿ ಕೃಷ್ಣ ದೂರು

    ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ಮತ್ತು ಹೆಚ್ಚಿನ ಗುಪ್ತಚರ ಮಾಹಿತಿಯನ್ನು ಸಂಗ್ರಹಿಸಲು ಪ್ರದೇಶದಲ್ಲಿ ಗಸ್ತು ಮತ್ತು ಶೋಧ ಕಾರ್ಯಾಚರಣೆಗಳು ಮುಂದುವರಿದಿವೆ. ಇದನ್ನೂ ಓದಿ: ಮಧ್ಯಮ ವರ್ಗಕ್ಕೆ ಆರ್ಥಿಕ ಶಕ್ತಿ ತುಂಬುವ ಐತಿಹಾಸಿಕ ಬಜೆಟ್: ನಿಖಿಲ್

  • Chhattisgarh| ಭದ್ರತಾ ಪಡೆಗಳೊಂದಿಗೆ ಗುಂಡಿನ ಚಕಮಕಿ- 12 ಮಾವೋವಾದಿಗಳು ಬಲಿ

    Chhattisgarh| ಭದ್ರತಾ ಪಡೆಗಳೊಂದಿಗೆ ಗುಂಡಿನ ಚಕಮಕಿ- 12 ಮಾವೋವಾದಿಗಳು ಬಲಿ

    ರಾಯ್ಪುರ: ಭದ್ರತಾ ಪಡೆಗಳು (Security Force) ಹಾಗೂ ಮಾವೋವಾದಿಗಳ (Maoists) ನಡುವೆ ನಡೆದ ಭೀಕರ ಗುಂಡಿನ ಚಕಮಕಿಯಲ್ಲಿ 12 ಮಾವೋವಾದಿಗಳು ಮೃತಪಟ್ಟಿರುವ ಘಟನೆ ಛತ್ತೀಸ್‌ಗಢದ (Chhattisgarh) ಬಿಜಾಪುರ (Bijapur) ಜಿಲ್ಲೆಯಲ್ಲಿ ನಡೆದಿದೆ.

    ದಕ್ಷಿಣ ಬಿಜಾಪುರದ ಕಾಡಿನಲ್ಲಿ ಬೆಳಗ್ಗೆ 9 ಗಂಟೆಯ ಸುಮಾರಿಗೆ ಭದ್ರತಾ ಸಿಬ್ಬಂದಿಯ ಜಂಟಿ ತಂಡ ಮಾವೋವಾದಿ ವಿರೋಧಿ ಕಾರ್ಯಾಚರಣೆಗೆ ಹೊರಟಿದ್ದ ವೇಳೆ ಗುಂಡಿನ ಚಕಮಕಿ ನಡೆದಿದೆ. ಮೂರು ಜಿಲ್ಲೆಗಳಿಂದ ರಾಜ್ಯ ಪೊಲೀಸರ ಜಿಲ್ಲಾ ಮೀಸಲು ಗಾರ್ಡ್‌ಗೆ (ಡಿಆರ್‌ಜಿ) ಸೇರಿದ ಸಿಬ್ಬಂದಿ, ಕೋಬ್ರಾದ ಐದು ಬೆಟಾಲಿಯನ್‌ಗಳು ಮತ್ತು ಸಿಆರ್‌ಪಿಎಫ್‌ನ 229ನೇ ಬೆಟಾಲಿಯನ್ ಕಾರ್ಯಾಚರಣೆಯಲ್ಲಿ ಭಾಗಿಯಾಗಿವೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: 500 ರೂ.ಗೆ ಗ್ಯಾಸ್ ಸಿಲಿಂಡರ್, 300 ಯೂನಿಟ್ ವಿದ್ಯುತ್ ಉಚಿತ – ದೆಹಲಿ ಚುನಾವಣೆಗೆ `ಕೈ’ ಗ್ಯಾರಂಟಿ

    ಪ್ರಾಥಮಿಕ ಮಾಹಿತಿಯ ಪ್ರಕಾರ, ಗುಂಡಿನ ಚಕಮಕಿಯಲ್ಲಿ 12 ನಕ್ಸಲರು ಸಾವನ್ನಪ್ಪಿದ್ದಾರೆ. ಪ್ರದೇಶದಲ್ಲಿ ಇನ್ನೂ ಶೋಧ ಕಾರ್ಯಾಚರಣೆ ನಡೆಯುತ್ತಿದೆ. ಘಟನೆಯಲ್ಲಿ ಭದ್ರತಾ ಪಡೆಯ ಸಿಬ್ಬಂದಿಗೆ ಯಾವುದೇ ಹಾನಿ ವರದಿಯಾಗಿಲ್ಲ ಎಂದು ಪೊಲಿಸ್ ಮೂಲಗಳು ತಿಳಿಸಿವೆ. ಇದನ್ನೂ ಓದಿ: ನ್ಯೂಕ್ಲಿಯರ್ ಶಕ್ತಿಗಿಂತ ಆಧ್ಯಾತ್ಮಿಕ ಶಕ್ತಿ ದೊಡ್ಡದು- ಉಪರಾಷ್ಟ್ರಪತಿ ಜಗದೀಪ್ ಧನಕರ್

    ಜನವರಿ ತಿಂಗಳಿನಲ್ಲಿ ಇಲ್ಲಿಯವರೆಗೆ ಛತ್ತೀಸ್‌ಗಢದಲ್ಲಿ ನಡೆದ ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ ಒಟ್ಟು 26 ಮಾವೋವಾದಿಗಳು ಮೃತಪಟ್ಟಿದ್ದಾರೆ. ಜ.12ರಂದು ಬಿಜಾಪುರ ಜಿಲ್ಲೆಯ ಮದ್ದೇಡ್ ಪೊಲೀಸ್ ಠಾಣೆ ಪ್ರದೇಶದಲ್ಲಿ ಭದ್ರತಾ ಸಿಬ್ಬಂದಿಯೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ಒಟ್ಟು 5 ಮಾವೋವಾದಿಗಳು ಸಾವನ್ನಪ್ಪಿದ್ದರು. ಇದನ್ನೂ ಓದಿ: ಯಕ್ಷಗಾನದ ಟೆಂಟ್‌ಗೆ ನುಗ್ಗಿದ ಪೊಲೀಸರು – ಈಗ ಕಾಂಗ್ರೆಸ್ Vs ಬಿಜೆಪಿ ಜಟಾಪಟಿ

     

  • Chhattisgarh | ಭದ್ರತಾ ಸಿಬ್ಬಂದಿಯಿದ್ದ ವಾಹನ ಸ್ಫೋಟಿಸಿದ ನಕ್ಸಲರು – 9 ಮಂದಿ ದುರ್ಮರಣ

    Chhattisgarh | ಭದ್ರತಾ ಸಿಬ್ಬಂದಿಯಿದ್ದ ವಾಹನ ಸ್ಫೋಟಿಸಿದ ನಕ್ಸಲರು – 9 ಮಂದಿ ದುರ್ಮರಣ

    ರಾಯ್‌ಪುರ: ಭದ್ರತಾ ಸಿಬ್ಬಂದಿಯಿದ್ದ ವಾಹನವನ್ನು ನಕ್ಸಲರು (Naxals) ಐಇಡಿ (ಸುಧಾರಿತ ಸ್ಫೋಟಕ ಸಾಧನ) ಬಳಸಿ ಸ್ಫೋಟಿಸಿದ್ದಾರೆ (IED Blast). ಘಟನೆಯಲ್ಲಿ 8 ಮಂದಿ ಭದ್ರತಾ ಸಿಬ್ಬಂದಿ ಹಾಗೂ ಓರ್ವ ಚಾಲಕ ಸೇರಿ 9 ಮಂದಿ ಸಾವನ್ನಪ್ಪಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

    ಕಾರ್ಯಾಚರಣೆ ಮುಗಿಸಿ ಹಿಂದಿರುಗುತ್ತಿದ್ದ ವೇಳೆ ಛತ್ತೀಸ್‌ಗಢದ (Chhattisgarh) ಬಿಜಾಪುರ ಜಿಲ್ಲೆಯ ಬೇದ್ರೆ-ಕುತ್ರು ರಸ್ತೆಯಲ್ಲಿ ಜಿಲ್ಲಾ ಮೀಸಲು ಗಾರ್ಡ್ (ಡಿಆರ್‌ಜಿ) ಸಿಬ್ಬಂದಿಯಿದ್ದ ವಾಹನವನ್ನು ನಕ್ಸಲರು ಐಇಡಿಯಿಂದ ಸ್ಫೋಟಿಸಿದ್ದಾರೆ.

    ಒಂದು ದಿನದ ಹಿಂದೆಯಷ್ಟೇ ಛತ್ತಿಸ್‌ಗಢದ ಬಸ್ತಾರ್‌ ಪ್ರದೇಶದಲ್ಲಿ ಭದ್ರತಾ ಪಡೆ (Security Personnel) ಹಾಗೂ ಮಾವೋವಾದಿಗಳ (Maoists) ನಡುವೆ ನಡೆದ ಎನ್‌ಕೌಂಟರ್‌ನಲ್ಲಿ ನಾಲ್ವರು ಮಾವೋವಾದಿಗಳು ಸಾವನ್ನಪ್ಪಿದರು. ಇದನ್ನೂ ಓದಿ: ಭದ್ರತಾ ಪಡೆ ಗುಂಡಿನ ದಾಳಿಗೆ ನಾಲ್ವರು ಮಾವೋವಾದಿಗಳು ಬಲಿ – ಓರ್ವ ಸಿಬ್ಬಂದಿ ಸಾವು 

    ನಾರಾಯಣಪುರ ಮತ್ತು ದಾಂತೇವಾಡ ಜಿಲ್ಲೆಗಳ ಗಡಿಯಲ್ಲಿರುವ ದಕ್ಷಿಣ ಅಬುಜ್‌ಮಾದ್‌ನ ಕಾಡಿನಲ್ಲಿ ಭದ್ರತಾ ಸಿಬ್ಬಂದಿ ಹಾಗೂ ಮಾವೋವಾದಿಗಳ ನಡುವೆ ಗುಂಡಿನ ಚಕಮಕಿ ನಡೆದಿತ್ತು. ಗುಂಡಿನ ದಾಳಿಗೆ ನಾಲ್ವರು ಮಾವೋವಾದಿಗಳು ಬಲಿಯಾಗಿದ್ದಾರೆ. ಅಲ್ಲದೇ ಜಿಲ್ಲಾ ಮೀಸಲು ಗಾರ್ಡ್‌ನ (DRG) ಹೆಡ್ ಕಾನ್ಸ್‌ಟೇಬಲ್ ಸನ್ನು ಕರಮ್ ತೀವ್ರಗಾಯಗೊಂಡು ಸಾವನ್ನಪ್ಪಿದ್ದರು. ಇದನ್ನೂ ಓದಿ: ಬೀಳ್ಕೊಡುಗೆ ಸಮಾರಂಭದ ವೇಳೆ ವಿದ್ಯಾರ್ಥಿಗಳಿಂದ ಗಾಳಿಯಲ್ಲಿ ಗುಂಡು – ಕೇಸ್‌ ದಾಖಲು

    ಗುಂಡಿನ ದಾಳಿ ಬಳಿಕ ನಾಲ್ವರು ಮಾವೋವಾದಿಗಳ ಮೃತದೇಹ ಮತ್ತು ಎಕೆ -47 ರೈಫಲ್ ಮತ್ತು ಸ್ವಯಂ ಲೋಡಿಂಗ್ ರೈಫಲ್ (SLR) ಸೇರಿದಂತೆ ಸ್ವಯಂಚಾಲಿತ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಇದಾದ ಒಂದು ದಿನ ನಂತರ ನಕ್ಸಲರು ಪ್ರತಿದಾಳಿ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

  • 81ರ ಇಳಿ ವಯಸ್ಸಿನಲ್ಲೂ ಇಂಗ್ಲಿಷ್ ಎಂಎ ಪರೀಕ್ಷೆ ಬರೆದು ಯುವಕರಿಗೆ ಸ್ಫೂರ್ತಿಯಾದ ವೃದ್ಧ

    81ರ ಇಳಿ ವಯಸ್ಸಿನಲ್ಲೂ ಇಂಗ್ಲಿಷ್ ಎಂಎ ಪರೀಕ್ಷೆ ಬರೆದು ಯುವಕರಿಗೆ ಸ್ಫೂರ್ತಿಯಾದ ವೃದ್ಧ

    ವಿಜಯಪುರ: ಕಲಿಕೆಗೆ ವಯಸ್ಸು ಎಂಬುವುದಿಲ್ಲ. ದೇಹಕ್ಕೆ ವಯಸ್ಸಾಗಬಹುದೇ ಹೊರತು ಕಲಿಕಾಸಕ್ತಿಗೆ ಇಲ್ಲ ಎಂಬುದನ್ನು ವಿಜಯಪುರದ (Vijayapura) 81 ವರ್ಷದ ಹಿರಿಯ ನಾಗರಿಕರೊಬ್ಬರು ಪರೀಕ್ಷೆ ಬರೆಯುವ ಮೂಲಕ ತೋರಿಸಿ ಕೊಟ್ಟಿದ್ದಾರೆ.

    ನಗರದ ಪ್ರತಿಷ್ಠಿತ ಬಿಎಲ್‌ಡಿಇ (BLDE) ಸಂಸ್ಥೆಯ ನರ್ಸಿಂಗ್ ಕಾಲೇಜಿನಲ್ಲಿ ನಡೆಯುತ್ತಿರುವ ಇಗ್ನೋ (ಇಂದಿರಾ ಗಾಂಧಿ ಮುಕ್ತ ವಿಶ್ವವಿದ್ಯಾಲಯ) ಪರೀಕ್ಷೆಯಲ್ಲಿ ಎಂಎ ಇಂಗ್ಲಿಷ್ (MA English) ಅಂತಿಮ ವರ್ಷದ ಪರೀಕ್ಷೆ ಬರೆಯುವ ಮೂಲಕ ನಿಂಗಯ್ಯ ಒಡೆಯರ ಎಲ್ಲರ ಗಮನ ಸೆಳೆದಿದ್ದಾರೆ. ನಿಂಗಯ್ಯ ಒಡೆಯರ ಅವರ 5ನೇ ಸ್ನಾತಕೋತ್ತರ ಪರೀಕ್ಷೆ ಇದಾಗಿದ್ದು, ಅವರಲ್ಲಿ ಓದಿನ ಬಗ್ಗೆ ಇರುವ ಹಂಬಲ ಮತ್ತು ಇಚ್ಛಾಶಕ್ತಿ, ವಿದ್ಯಾಭ್ಯಾಸವನ್ನು ಅರ್ಧಕ್ಕೆ ಮೊಟಕುಗೊಳಿಸುವವರಿಗೆ ಮಾದರಿಯಾಗಿದೆ. ಇದನ್ನೂ ಓದಿ: ಕರೆಂಟ್ ಬಿಲ್ ಏರಿಕೆಯ ಬೆನ್ನಲ್ಲೇ ಸದ್ದಿಲ್ಲದೆ ಮದ್ಯ ಬೆಲೆ ಏರಿಕೆ ಮಾಡಿದ ಅಬಕಾರಿ ಇಲಾಖೆ

    ಬಾಗಲಕೋಟೆ (Bagalkote) ಜಿಲ್ಲೆಯ ಇಳಕಲ್ (Ilkal) ತಾಲೂಕಿನ ಗುಡೂರು ಬಳಿಯ ಎಸ್‌ಸಿ ಹಳ್ಳಿಯವರಾಗಿರುವ ನಿಂಗಯ್ಯ ಒಡೆಯರ ಅವರಿಗೆ ಇಬ್ಬರು ಗಂಡು ಮತ್ತು ಓರ್ವ ಹೆಣ್ಣು ಮಗಳಿದ್ದಾಳೆ. ಅಲ್ಲದೇ ಐದು ಜನ ಮೊಮ್ಮಕ್ಕಳಿದ್ದಾರೆ. ಆದರೆ ಇವರ ವಿದ್ಯಾರ್ಜನೆಗೆ ಯಾವುದೂ ಅಡ್ಡಿಯಾಗಿಲ್ಲ. ಇವರ ಮಗಳು ಕೂಡ ಪಿಎಚ್‌ಡಿ (PhD) ಪದವಿ ಪಡೆದಿದ್ದಾರೆ. ಇನ್ನು ಗಂಡು ಮಕ್ಕಳು ಖಾಸಗಿ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ಇದನ್ನೂ ಓದಿ: ಒಡಿಶಾ ರೈಲು ಅಪಘಾತದಲ್ಲಿ ಬದುಕುಳಿದ ಯಾತ್ರಿಕ ಹೃದಯಾಘಾತದಿಂದ ಸಾವು

    ಸರ್ಕಾರಿ ನೌಕರಿಯಲ್ಲಿದ್ದ ಇವರು ಸೇವಾ ನಿವೃತ್ತಿಯ ನಂತರ ಮತ್ತಷ್ಟು ಕಲಿಯಬೇಕು ಎಂಬ ಹಂಬಲದಿಂದ ಈಗಾಗಲೇ ಕನ್ನಡ, ಹಿಂದಿ ಮತ್ತು ಇಂಗ್ಲಿಷ್ ವಿಷಯಗಳಲ್ಲಿ ಕರ್ನಾಟಕ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಅಲ್ಲದೇ ಇಗ್ನೋದಿಂದ (IGNOU) ಸಮಾಜಶಾಸ್ತ್ರ ಸ್ನಾತಕೋತ್ತರ ಪದವಿಯನ್ನೂ ಇವರು ಪಡೆದಿದ್ದಾರೆ. ಆದರೂ ಇವರಿಗೆ ಓದುವ ಮತ್ತು ಪರೀಕ್ಷೆ ಬರೆಯುವ ಹವ್ಯಾಸ ಮಾತ್ರ ಕಡಿಮೆಯಾಗದಿರುವುದು ಗಮನಾರ್ಹವಾಗಿದೆ. ಇದನ್ನೂ ಓದಿ: ಇಲಿ ಕೊಲ್ಲಲೆಂದು ವಿಷ ಸವರಿ ಇಟ್ಟ ಹಣ್ಣು ತಿಂದು ಯುವತಿ ಸಾವು!

    ತಮ್ಮ ಈ ಸಾಧನೆಗೆ ತಮ್ಮ ಧರ್ಮ ಪತ್ನಿ ಕಾರಣ ಎಂದು ಸಂತಸದಿಂದ ಹೇಳುವ ನಿಂಗಯ್ಯ ಒಡೆಯರ, 81ರ ಇಳಿ ವಯಸ್ಸಿನಲ್ಲಿಯೂ ಯೋಗಪಟುವಾಗಿದ್ದಾರೆ. ವಿಶಿಷ್ಠವಾದ ಸಾಹಸಗಳನ್ನ ಮಾಡುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ. ಇದೀಗ ನಡೆಯುತ್ತಿರುವ ಸ್ನಾತಕೋತ್ತರ ಪರೀಕ್ಷೆಯಲ್ಲಿ ನಿಂಗಯ್ಯ ಒಡೆಯರ ಎಲ್ಲರ ಆಕರ್ಷಣೆಯ ಕೇಂದ್ರ ಬಿಂದುವಾಗಿದ್ದು, ಪರೀಕ್ಷೆಗೆ ಹಾಜರಾಗುತ್ತಿರುವ ಇತರ ಅಭ್ಯರ್ಥಿಗಳಿಗೆ ಸ್ಪೂರ್ತಿಯಾಗಿದ್ದಾರೆ ಎಂದು ಇಗ್ನೋ ಅಧ್ಯಯನ ಕೇಂದ್ರದ ಸಂಯೋಜಕ ಡಾ. ನಿಂಗನಗೌಡ ಪಾಟೀಲ್ ಹೇಳಿದ್ದಾರೆ. ಇದನ್ನೂ ಓದಿ: ಕರಾವಳಿಯಿಂದ 640 ಕಿ.ಮೀ ದೂರದಲ್ಲಿರೋ ಬಿಪರ್ಜೋಯ್ ಚಂಡಮಾರುತ – ಕರ್ನಾಟಕ ಸೇರಿ 3 ರಾಜ್ಯಗಳಿಗೆ ಅಲರ್ಟ್

    ನಿಂಗಯ್ಯ ಒಡೆಯರ ಅವರ ಈ ಹುಮ್ಮಸ್ಸಿನ ಬಗ್ಗೆ ಇಗ್ನೋ ಪ್ರಾಂತ ನಿರ್ದೇಶಕ ಡಾ.ಎ.ವರದರಾಜನ್, ಸಹಾಯಕ ನಿರ್ದೇಶಕ ಡಾ.ಬಿ.ಎನ್.ದೇವೇಂದ್ರ, ಬಿ.ಎಲ್.ಡಿ.ಇ ನರ್ಸಿಂಗ್ ಕಾಲೇಜಿನ ಪ್ರಾಚಾರ್ಯ ಡಾ. ಶಾಲ್ಮೊನ್ ಚೋಪಡೆ, ಇಗ್ನೋ ಸಹ ಸಂಯೋಜಕ ಡಾ. ಸತೀಶ್ ನಡಗಡ್ಡಿ ಸಂತಸ ವ್ಯಕ್ತಪಡಿಸಿದ್ದು, ಅಭಿನಂದನೆ ಸಲ್ಲಿಸಿದ್ದಾರೆ. ಇದನ್ನೂ ಓದಿ: ಬಳ್ಳಾರಿಯಲ್ಲಿ ಆರಂಭವಾಯ್ತಾ ದ್ವೇಷ ರಾಜಕಾರಣ?- ಪರೋಕ್ಷವಾಗಿ ಶ್ರೀರಾಮುಲುಗೆ ಎಚ್ಚರಿಕೆ ಕೊಟ್ಟ ಸಚಿವ ನಾಗೇಂದ್ರ