Tag: ಬಿಜೆಪಿ ಅಭ್ಯರ್ಥಿ

  • Delhi Assembly Election | 29 ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟಿಸಿದ ಬಿಜೆಪಿ

    Delhi Assembly Election | 29 ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟಿಸಿದ ಬಿಜೆಪಿ

    ನವದೆಹಲಿ: ವಿಧಾನಸಭೆ ಚುನಾವಣೆ (Delhi Assembly Elections) ಹಿನ್ನೆಲೆ ಕಾಂಗ್ರೆಸ್‌, ಆಪ್ ಬಳಿಕ ಬಿಜೆಪಿ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿ (BJP Candidate First List) ಬಿಡುಗಡೆ ಮಾಡಿದೆ. ಪಟ್ಟಿಯಲ್ಲಿ 29 ಅಭ್ಯರ್ಥಿಗಳ ಹೆಸರು ಘೋಷಿಸಿದ್ದು, ಕಾಲ್ಕಾಜಿಯಲ್ಲಿ ಮುಖ್ಯಮಂತ್ರಿ ಅತಿಶಿ ವಿರುದ್ಧ ಹಿರಿಯ ನಾಯಕ ರಮೇಶ್ ಬಿಧುರಿ, ನವದೆಹಲಿ ಕ್ಷೇತ್ರದಲ್ಲಿ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ (Arvind Kejriwal) ವಿರುದ್ಧ ಮಾಜಿ ಸಂಸದ ಪರ್ವೇಶ ವರ್ಮಾ ಅವರನ್ನು ಕಣಕ್ಕಿಳಿಸಿದೆ.

    ಬಿಜೆಪಿ ತನ್ನ ಗಾಂಧಿನಗರ ಶಾಸಕ ಅನಿಲ್ ಬಾಜ್‌ಪೇಯ್ ಅವರನ್ನು ಕೈಬಿಟ್ಟು ದೆಹಲಿಯ ಕಾಂಗ್ರೆಸ್ ಮಾಜಿ ಮುಖ್ಯಸ್ಥ ಅರವಿಂದರ್ ಸಿಂಗ್ ಲವ್ಲಿಗೆ ಟಿಕೆಟ್ ನೀಡಿದೆ. ಶೀಲಾ ದೀಕ್ಷಿತ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ (Congress Government) 2003 ರಿಂದ 2013ರ ವರೆಗೆ ಸಚಿವರಾಗಿದ್ದ ಲವ್ಲಿ ಕಳೆದ ವರ್ಷ ಬಿಜೆಪಿ ಸೇರಿದ್ದರು. ಮತ್ತೋರ್ವ ದೆಹಲಿಯ ಮಾಜಿ ಸಚಿವ ಮತ್ತು ಕಾಂಗ್ರೆಸ್ ನಾಯಕರಾಗಿದ್ದ ರಾಜ್‌ಕುಮಾರ್ ಚೌಹಾಣ್ ಅವರಿಗೆ ಬಿಜೆಪಿ ಮಂಗೋಲ್‌ಪುರಿಯಿಂದ ಟಿಕೆಟ್ ನೀಡಲಾಗಿದೆ.

    ಎಎಪಿ ಮಾಜಿ ಸಚಿವ, ಕೇಜ್ರಿವಾಲ್ ಆಪ್ತರಾಗಿದ್ದ ಕೈಲಾಶ್ ಗಹ್ಲೋಟ್ ಬಿಜೆಪಿಯಿಂದ ನಜಾಫ್‌ಗಢ್ ಬದಲಿಗೆ ಬಿಜ್ವಾಸನ್‌ನಿಂದ ಕಣಕ್ಕಿಳಿದಿದ್ದರೆ, ರಾಜ್ ಕುಮಾರ್ ಆನಂದ್ ಪಟೇಲ್ ನಗರದಿಂದ ಟಿಕೆಟ್ ಪಡೆದಿದ್ದಾರೆ. ಎಎಪಿಯಿಂದ ಬಿಜೆಪಿಗೆ ತೆರಳಿದ್ದ ಶಾಸಕ ಕರ್ತಾರ್ ಸಿಂಗ್ ತನ್ವಾರ್ ಅವರ ಛತ್ತರ್‌ಪುರ ಕ್ಷೇತ್ರದಿಂದ ಕಣಕ್ಕಿಳಿದಿದ್ದಾರೆ.

    ವಿಪಕ್ಷದ ನಾಯಕ ವಿಜೇಂದರ್ ಗುಪ್ತಾ, ಓಂ ಪ್ರಕಾಶ್ ಶರ್ಮಾ, ಅಜಯ್ ಮಹಾವರ್ ಮತ್ತು ಜಿತೇಂದರ್ ಮಹಾಜನ್ ಸೇರಿದಂತೆ ಬಿಜೆಪಿಯ ಹಾಲಿ ಶಾಸಕರು ಕ್ರಮವಾಗಿ ರೋಹಿಣಿ, ವಿಶ್ವಾಸ್ ನಗರ, ಘೋಂಡಾ ಮತ್ತು ರೋಹ್ತಾಸ್ ನಗರದಿಂದ ಸ್ಪರ್ಧಿಸಲಿದ್ದಾರೆ. ದೆಹಲಿ ಬಿಜೆಪಿ ಮಾಜಿ ಅಧ್ಯಕ್ಷ ಸತೀಶ್ ಉಪಾಧ್ಯಾಯ ಮಾಳವೀಯಾ ನಗರದಿಂದ ಚುನಾವಣೆಗೆ ಸ್ಪರ್ಧಿಸಲಿದ್ದು, ಮನೋಜ್ ಶೋಕೀನ್ ನಂಗ್ಲೋಯ್ ಜಾಟ್‌ನಿಂದ ಕಣಕ್ಕಿಳಿದಿದ್ದಾರೆ.

    ಎಎಪಿ ಈಗಾಗಲೇ ದೆಹಲಿಯ ಎಲ್ಲಾ 70 ವಿಧಾನಸಭಾ ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳನ್ನು ಘೋಷಿಸಿದ್ದು, ಕಾಂಗ್ರೆಸ್ ಇದುವರೆಗೆ 47 ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಪ್ರಕಟಿಸಿದೆ‌.

  • Haryana Poll | ಬಿಜೆಪಿಯಿಂದ 21 ಅಭ್ಯರ್ಥಿಗಳ 2ನೇ ಪಟ್ಟಿ ರಿಲೀಸ್‌ – ವಿನೇಶ್‌ ವಿರುದ್ಧ ಪ್ರಬಲ ಅಭ್ಯರ್ಥಿ ಅಖಾಡಕ್ಕೆ

    Haryana Poll | ಬಿಜೆಪಿಯಿಂದ 21 ಅಭ್ಯರ್ಥಿಗಳ 2ನೇ ಪಟ್ಟಿ ರಿಲೀಸ್‌ – ವಿನೇಶ್‌ ವಿರುದ್ಧ ಪ್ರಬಲ ಅಭ್ಯರ್ಥಿ ಅಖಾಡಕ್ಕೆ

    ಚಂಡೀಗಢ: ಹರಿಯಾಣ ವಿಧಾನಸಭೆ ಚುನಾವಣೆಗೆ (Haryana Elections) ಬಿಜೆಪಿಯು 21 ಅಭ್ಯರ್ಥಿಗಳ 2ನೇ ಪಟ್ಟಿಯನ್ನು ಮಂಗಳವಾರ ಬಿಡುಗಡೆ ಮಾಡಿದೆ.

    90 ಸದಸ್ಯ ಬಲದ ಹರಿಯಾಣ ವಿಧಾನಸಭೆಗೆ ಬಿಜೆಪಿ ಈವರೆಗೆ 87 ಅಭ್ಯರ್ಥಿಗಳನ್ನು (BJP Candidates) ಘೋಷಣೆ ಮಾಡಿದೆ. ಇತ್ತೀಚೆಗಷ್ಟೇ ಕಾಂಗ್ರೆಸ್‌ ಸೇರ್ಪಡೆಯಾದ ಕುಸ್ತಿಪಟು ವಿನೇಶ್‌ ಫೋಗಟ್‌ (Vinesh Phogat) ವಿರುದ್ಧ ಜುಲಾನಾ ಕ್ಷೇತ್ರದಿಂದ ಕ್ಯಾಪ್ಟನ್‌ ಯೋಗೇಶ್‌ ಬೈರಾಗಿ ಅವರನ್ನು ಬಿಜೆಪಿ ಕಣಕ್ಕಿಳಿಸಿದೆ. ಇದನ್ನೂ ಓದಿ: Hit-and-Run Case | ಬಾರ್‌ನಿಂದ ಬಂದು ಹಲವು ಕಾರುಗಳಿಗೆ ಡಿಕ್ಕಿ – ಮಹಾರಾಷ್ಟ್ರ ಬಿಜೆಪಿ ಅಧ್ಯಕ್ಷನ ಪುತ್ರ ಪರಾರಿ

    67 ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ, ಪಕ್ಷವು ಹರಿಯಾಣ ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ (Nayab Singh Saini) ಅವರನ್ನು ಕರ್ನಾಲ್‌ನಿಂದ ಲಾಡ್ವಾ ಸ್ಥಾನಕ್ಕೆ ಕಣಕ್ಕಿಳಿಸಿದೆ. ಸೈನಿ ಅವರು 2019ರಿಂದ 2024ರ ಅವಧಿಯಲ್ಲಿ ಸಂಸದರಾಗಿ ಸೇವೆ ಸಲ್ಲಿಸಿದ್ದಾರೆ. ಅಲ್ಲದೇ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಆಗಿರುವ ಓಂ ಪ್ರಕಾಶ್ ಧನಕರ್ ಅವರನ್ನು ಬದ್ಲಿ ಕ್ಷೇತ್ರದಿಂದ ಕಣಕ್ಕಿಳಿಸಲಾಗಿದೆ. ಜೊತೆಗೆ ಮಾಜಿ ರಾಜ್ಯ ಸಚಿವ ಅನಿಲ್ ವಿಜ್ ಅವರು ತಮ್ಮ ಸಾಂಪ್ರದಾಯಿಕ ಭದ್ರಕೋಟೆಯಾದ ಅಂಬಾಲಾ ಕ್ಯಾಂಟ್‌ನಿಂದ ಸ್ಪರ್ಧಿಸಲು ಸಿದ್ಧರಾಗಿದ್ದಾರೆ. ಇದನ್ನೂ ಓದಿ: ವಯನಾಡು ದುರಂತದ ಬಳಿಕ ಸರ್ಕಾರ ಅಲರ್ಟ್- ಕಾಫಿನಾಡಲ್ಲಿ 40 ಅನಧಿಕೃತ ಹೋಂ ಸ್ಟೇ, ರೆಸಾರ್ಟ್‌ಗಳಿಗೆ ನೋಟಿಸ್

    ಈ ಬಾರಿ ಅಧಿಕಾರದ ಗದ್ದುಗೆ ಹಿಡಿಯಲು ಪಣ ತೊಟ್ಟಿರುವ ಬಿಜೆಪಿ ಪಕ್ಷದ ನಿಷ್ಠಾವಂತರಿಗೆ ಟಿಕೆಟ್‌ ನೀಡಿದೆ. ಈ ಹಿಂದೆ ಜನನಾಯಕ್ ಜನತಾ ಪಾರ್ಟಿ (ಜೆಜೆಪಿ)ಯಲ್ಲಿದ್ದ ದೇವೆಂದರ್ ಸಿಂಗ್ ಸದ್ಯ ಬಿಜೆಪಿಯಿಂದ ಬಬ್ಲಿ ಕ್ಷೇತ್ರದ ಅಭ್ಯರ್ಥಿಯಾಗಿದ್ದಾರೆ. ಹರಿಯಾಣದ ಮಾಜಿ ಸಿಎಂ ಬನ್ಸಿ ಲಾಲ್ ಅವರ ಮೊಮ್ಮಗಳು ಶ್ರುತಿ ಚೌಧರಿ ತೋಷಮ್‌ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಬಿಜೆಪಿ ಸತತ ಹ್ಯಾಟ್ರಿಕ್‌ ಗೆಲುವಿನ ವಿಶ್ವಾಸದಲ್ಲಿದೆ. ಇದನ್ನೂ ಓದಿ: ರೇಣುಕಾಸ್ವಾಮಿ ಕೊಲೆ ಕೇಸ್‌ – ಫಾಸ್ಟ್‌ ಟ್ರ್ಯಾಕ್‌ ಕೋರ್ಟ್‌ಗೆ ವರ್ಗಾಯಿಸಲು ಚಿಂತನೆ: ಬಿ.ದಯಾನಂದ್‌

    ಮುಂದಿನ ಅಕ್ಟೋಬರ್ 5 ರಂದು ವಿಧಾನಸಭಾ ಚುನಾವಣೆ ನಡೆಯಲಿದ್ದು, ಅಕ್ಟೋಬರ್ 8 ರಂದು ಮತ ಎಣಿಕೆ ಕಾರ್ಯ ನಡೆಯಲಿದೆ. ಇದನ್ನೂ ಓದಿ: ಭೂ ಸುಧಾರಣೆ ತಿದ್ದುಪಡಿ ಕಾಯ್ದೆ ರಾಜ್ಯದಲ್ಲಿ ರದ್ದು ಮಾಡಿ- ಸಿಎಂಗೆ ಕುರುಬೂರು ಶಾಂತಕುಮಾರ್ ಮನವಿ 

  • ಬುರ್ಖಾ ತೆಗೆದು ವೋಟರ್‌ ಐಡಿ ತೋರಿಸಲು ಹೇಳಿದ ಮಾಧವಿ ಲತಾ ವಿರುದ್ಧ ಪ್ರಕರಣ ದಾಖಲು

    ಬುರ್ಖಾ ತೆಗೆದು ವೋಟರ್‌ ಐಡಿ ತೋರಿಸಲು ಹೇಳಿದ ಮಾಧವಿ ಲತಾ ವಿರುದ್ಧ ಪ್ರಕರಣ ದಾಖಲು

    ಹೈದರಾಬಾದ್:‌ ಮುಸ್ಲಿಂ ಮಹಿಳೆಯರಿಗೆ ಬುರ್ಖಾ ತೆಗೆದು ವೋಟರ್‌ ಐಡಿ ತೋರಿಸುವಂತೆ ಒತ್ತಡ ಹೇರಿದ್ದಕ್ಕಾಗಿ ಹೈದರಾಬಾದ್‌ ಬಿಜೆಪಿ ಅಭ್ಯರ್ಥಿ ಮಾಧವಿ ಲತಾ (Madhavi Latha) ವಿರುದ್ಧ ಪ್ರಕರಣ ದಾಖಲಾಗಿದೆ.

    ಹೈದರಾಬಾದ್ ಲೋಕಸಭಾ ಕ್ಷೇತ್ರದಿಂದ (Loksabha Elections 2024) ಸ್ಪರ್ಧಿಸುತ್ತಿರುವ ಮಾಧವಿ ಲತಾ ಅವರು ಸೋಮವಾರ ಮತದಾನ ಕೇಂದ್ರದಲ್ಲಿ ಮುಸ್ಲಿಂ ಮಹಿಳೆಯರ ಬಳಿ ಹೋಗಿ ಬುರ್ಖಾ ತೆಗೆಯುವಂತೆ ಹೇಳುತ್ತಿರುವ ವೀಡಿಯೋ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದ್ದು, ಭಾರೀ ವಿವಾದ ಸೃಷ್ಟಿಸಿತ್ತು.

    ವೈರಲ್ ಆದ ವೀಡಿಯೊದಲ್ಲಿ, ಮಾಧವಿ ಲತಾ ಅವರು ಬುರ್ಖಾ ಧರಿಸಿದ ಮುಸ್ಲಿಂ ಮಹಿಳೆಯರನ್ನು ಪರಿಶೀಲನೆಗಾಗಿ ತಮ್ಮ ಬುರ್ಖಾ ತೆಗೆಯುವಂತೆ ಹೇಳುತ್ತಿರುವುದನ್ನು ಕಾಣಬಹುದಾಗಿದೆ. ಅಲ್ಲದೇ ನೀವು ಎಷ್ಟು ವರ್ಷಗಳ ಹಿಂದೆ ಇದನ್ನು (Voter ID) ಮಾಡಿದ್ದೀರಿ ಎಂದು ಇದೇ ವೇಳೆ ಮುಸ್ಲಿಂ ಮಹಿಳೆಯರನ್ನು ಪ್ರಶ್ನಿಸಿದ್ದಾರೆ. ಜೊತೆಗೆ ಹೆಚ್ಚಿನ ಪರಿಶೀಲನೆಗಾಗಿ ಆಧಾರ್‌ ಕಾರ್ಡ್‌ (Adhar Card) ಕೂಡ ಕೊಡುವಂತೆ ಮನವಿ ಮಾಡಿದ್ದಾರೆ.

    ಈ ದೃಶ್ಯ ವೈರಲ್‌ ಆಗುತ್ತಿದ್ದಂತೆಯೇ ಪ್ರತಿಕ್ರಿಯಿಸಿದ ಮಾಧವಿ ಲತಾ, ತಮ್ಮ ಕ್ರಮವನ್ನು ಸಮರ್ಥಿಸಿಕೊಂಡಿದ್ದಾರೆ. ನಾನು ಒಬ್ಬಳು ಅಭ್ಯರ್ಥಿಯಾಗಿದ್ದು, ಕಾನೂನಿನ ಪ್ರಕಾರ ಮುಖಕ್ಕೆ ಮಾಸ್ಕ್ ಇಲ್ಲದೆ ಗುರುತಿನ ಚೀಟಿಗಳನ್ನು ಪರಿಶೀಲಿಸುವ ಹಕ್ಕು ಇದೆ. ಮುಸ್ಲಿಂ ಮಹಿಳೆಯರ ಬಳಿ ತಮ್ಮ ಬುರ್ಖಾವನ್ನು ತೆಗೆಯುವಂತೆ ಕೇಳುವುದು ದೊಡ್ಡ ವಿಷಯವಲ್ಲ, ಏಕೆಂದರೆ ನಾನು ಪರುಷ ಅಲ್ಲ, ತಾನೂ ಮಹಿಳೆಯಾಗಿದ್ದೇನೆ ಎಂದು ಅವರು ಹೇಳಿದ್ದಾರೆ.

    ದಯವಿಟ್ಟು ನಾನು ಐಡಿ ಕಾರ್ಡ್‌ಗಳನ್ನು ನೋಡಿ ಮತ್ತು ಪರಿಶೀಲಿಸಬಹುದೇ ಎಂದು ತುಂಬಾ ವಿನಮ್ರತೆಯಿಂದ ಅವರಲ್ಲಿ ವಿನಂತಿಸಿದ್ದೇನೆ. ಆದರೆ ಯಾರಿಗಾದರೂ ಅದನ್ನು ದೊಡ್ಡ ಸಮಸ್ಯೆಯನ್ನು ಮಾಡಬೇಕು ಎಂದು ಬಯಸಿದರೆ, ಅವರಿಗೆ ಭಯವಿದೆ ಎಂದು ಅರ್ಥ ಅಂತಾ ಮಾಧವಿ ಲತಾ ತಿಳಿಸಿದ್ದಾರೆ. ಇತ್ತ ವೀಡಿಯೋ ವೈರಲ್‌ ಆಗುತ್ತಾ ವಿವಾದವಾಗುತ್ತಿದ್ದಂತೆಯೇ ಮಾಧವಿ ಲತಾ ವಿರುದ್ಧ ಮಲಕಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಧರೆಗುರುಳಿದ ಬೃಹತ್ ಬಿಲ್ ಬೋರ್ಡ್- ಸಾವಿನ ಸಂಖ್ಯೆ 14ಕ್ಕೆ ಏರಿಕೆ

    ಈ ಹಿಂದೆ ರಾಮನವಮಿ ಮೆರವಣಿಗೆಯ ಸಂದರ್ಭದಲ್ಲಿ ಮಸೀದಿಯತ್ತ ಬಾಣ ಬಿಡುವ ಕ್ರಿಯೆಯನ್ನು ಅನುಕರಿಸುವ ವೀಡಿಯೋ ಕೂಡ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿತ್ತು. ಈ ಬೆನ್ನಲ್ಲೇ ಮಾಧವಿ ಲತಾ ಅವರು ಮತ್ತೊಂದು ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ಒಟ್ಟಿನಲ್ಲಿ ಇದೀಗ ಮಾಧವಿ ಲತಾ ವಿರುದ್ಧ ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಉದ್ದೇಶಪೂರ್ವಕ ಕೃತ್ಯಗಳನ್ನು ತಿಳಿಸುವ 295A ಸೇರಿದಂತೆ ಐಪಿಸಿಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ದೂರು ದಾಖಲಿಸಲಾಗಿದೆ.

    ಮಾಧವಿ ಲತಾ ಅವರು ಹೈದರಾಬಾದ್‌ನ ಹಾಲಿ ಸಂಸದ ಮತ್ತು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಮತ್ತು ಹಿರಿಯ ಬಿಆರ್‌ಎಸ್ ನಾಯಕ ಗದ್ದಂ ಶ್ರೀನಿವಾಸ್ ಯಾದವ್ ವಿರುದ್ಧ ಕಣಕ್ಕಿಳಿದಿದ್ದಾರೆ.

  • ಚುನಾವಣಾ ಪ್ರಚಾರದ ವೇಳೆ ರಸ್ತೆ ಬದಿ ಅಂಗಡಿಯಲ್ಲಿ ಟೀ ಕುಡಿದ ಕಿಚ್ಚ ಸುದೀಪ್‌

    ಚುನಾವಣಾ ಪ್ರಚಾರದ ವೇಳೆ ರಸ್ತೆ ಬದಿ ಅಂಗಡಿಯಲ್ಲಿ ಟೀ ಕುಡಿದ ಕಿಚ್ಚ ಸುದೀಪ್‌

    – ದೇವದುರ್ಗದಲ್ಲಿ ರೋಡ್ ಶೋ; ಶಿವನಗೌಡ ನಾಯಕ್‌ ಪರ ಪ್ರಚಾರ

    ರಾಯಚೂರು: ನಟ ಕಿಚ್ಚ ಸುದೀಪ್ (Kichcha Sudeepa) ಜಿಲ್ಲೆಯ ದೇವದುರ್ಗದಲ್ಲಿ ಬಿಜೆಪಿ ಅಭ್ಯರ್ಥಿ (BJP Candidate) ಶಿವನಗೌಡ ನಾಯಕ್ ಪರ ರೋಡ್ ಶೋ (Sudeep RoadShow) ಮೂಲಕ ಮತಪ್ರಚಾರ ನಡೆಸಿದರು.

    ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಭಾಷಣ ಮಾಡಿದ ಸುದೀಪ್ ನಮ್ಮ ಹಿರಿಯ ಸಹೋದರ ಶಿವನಗೌಡ ನಾಯಕ್ ರನ್ನ 4 ಸಾರಿ ಗೆಲ್ಲಿಸಿದ್ದಿರಾ ಅಂದ್ರೆ, ಅವರು ಒಳ್ಳೆಯವರು ಅಂತಾ ಅರ್ಥ. ಜನರೂ ಬುದ್ಧಿವಂತರಾಗಿದ್ದಾರೆ ಎಂದರ್ಥ. ಎಜುಕೇಶನ್ ಲೇಔಟ್ ಮಾಡಿ ಶಿವನಗೌಡ ಸಕ್ಸಸ್ ಮಾಡಿದ್ದಾರೆ. ಅವರನ್ನ ಮತ್ತೊಮ್ಮೆ ಗೆಲ್ಲಿಸಿ ಎಂದು ಮನವಿ ಮಾಡಿದರು. ಇದನ್ನೂ ಓದಿ: ಕಿರುಕುಳ ನೀಡುವ ಬಜರಂಗದಳಕ್ಕೂ ಆಂಜನೇಯನಿಗೂ ಯಾವುದೇ ಸಂಬಂಧವಿಲ್ಲ: ಎಚ್ ವಿಶ್ವನಾಥ್

    ಶಿವನಗೌಡ ನಾಯಕ್ ಬೇರೆ ಯಾರೂ ಅಲ್ಲ ಅವ ನಮ್ಮವ. ಶಿವನಗೌಡ ಅವ್ರಿಗೆ ವೋಟ್ ಹಾಕೋದು ಒಂದೇ ನನ್ನ ಗೆಲ್ಲಿಸೋದು ಒಂದೇ. ನಾನು ಪ್ರಚಾರ ಮಾಡ್ತಿರಬಹುದು. ಆದ್ರೆ ನಾನೋಬ್ಬ ಸಾಮಾನ್ಯ ಕಲಾವಿದ. ಶಿವನಗೌಡ ಅವರು ಮಾಡಿದ್ದು ಸರಿ ಅನ್ನಿಸಿದ್ರೆ, ಅವರು ನಿಮ್ಮವರು ಅನಿಸಿಕೊಂಡಿದ್ರೆ ಉಳಿಸಿಕೊಳ್ಳಿ. 10ನೇ ತಾರೀಕು ತಪ್ಪದೇ ಮತದಾನ ಮಾಡಿ ಎಂದು ಮನವಿ ಮಾಡಿದರು. ಇದನ್ನೂ ಓದಿ: ಅಮಿತ್ ಶಾ ತಮ್ಮ ಮಗನನ್ನು ಬಜರಂಗದಳದ ರಾಷ್ಟ್ರಾಧ್ಯಕ್ಷನನ್ನಾಗಿ ಮಾಡಲಿ – ಕಾಂಗ್ರೆಸ್ ಕಿಡಿ

    ಇನ್ನೂ ರೋಡ್ ಶೋ ಮಧ್ಯೆ ರಸ್ತೆ ಬದಿಯ ಸಣ್ಣ ಚಹಾ ಅಂಗಡಿಯಲ್ಲಿ ಚಹಾ ಕುಡಿದು ಕಿಚ್ಚ ಸುದೀಪ್ ಚೆನ್ನಾಗಿದೆ ಅಂತಾ ಖುಷಿ ವ್ಯಕ್ತಪಡಿಸಿದರು. ದೇವದುರ್ಗದ ಬಸವೇಶ್ವರ ವೃತ್ತದಲ್ಲಿ ರೋಡ್ ಶೋ ವೇಳೆ ಚಹಾದಂಗಡಿಯ ಅಭಿಮಾನಿ ಕಿಚ್ಚನಿಗೆ ಟೀ ತಂದು ಕೊಟ್ಟರು. ಟೀ ಸೂಪರ್ ಅಂತಾ ಸನ್ನೆ ಮಾಡುತ್ತಾ ಕಿಚ್ಚ ಖುಷಿ ವ್ಯಕ್ತಪಡಿಸಿದರು. ಟೀ ಕುಡಿದು ಮತ್ತೆ ಪ್ರಚಾರದಲ್ಲಿ ತೊಡಗಿ ಬಿಜೆಪಿ ಅಭ್ಯರ್ಥಿ ಪರ ಮತಯಾಚನೆ ಮಾಡಿದರು.

  • ಮದಕರಿ ಡೈಲಾಗ್ ಹೇಳಿದ್ರೆ ಜಾತೀಯತೆ ಮಾಡ್ತೀನಿ ಅಂತಾರೆ ಏನ್ಮಾಡ್ಲಿ – ಕಿಚ್ಚ ಸುದೀಪ್

    ಮದಕರಿ ಡೈಲಾಗ್ ಹೇಳಿದ್ರೆ ಜಾತೀಯತೆ ಮಾಡ್ತೀನಿ ಅಂತಾರೆ ಏನ್ಮಾಡ್ಲಿ – ಕಿಚ್ಚ ಸುದೀಪ್

    ಬಾಗಲಕೋಟೆ: ಕಳೆದ ಕೆಲವು ದಿನಗಳಿಂದ ರಾಜಕೀಯ ಅಖಾಡಕ್ಕಿಳಿದಿರುವ ನಟ ಕಿಚ್ಚ ಸುದೀಪ್ (Kiccha Sudeep) ಸ್ಟಾರ್ ಪ್ರಚಾರಕರಾಗಿ ಬಿಜೆಪಿ ಅಭ್ಯರ್ಥಿಗಳ (BJP Candidates) ಪರ ಪ್ರಚಾರ ನಡೆಸುತ್ತಿದ್ದಾರೆ.

    ಮಂಗಳವಾರ ಬಾಗಲಕೋಟೆ (Bagalkot) ಜಿಲ್ಲೆಯ ಜಮಖಂಡಿ ನಗರ ಹಾಗೂ ಬೀಳಗಿ ಕ್ಷೇತ್ರದಲ್ಲೂ ಬಿಜೆಪಿ ಅಭ್ಯರ್ಥಿ ಪರ ಭರ್ಜರಿ ಪ್ರಚಾರ ನಡೆಸಿದರು. ಜಮಖಂಡಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಗದೀಶ್ ಗುಡಗುಂಟಿ ಪರ, ರೋಡ್ ಶೋ ಆರಂಭಿಸಿದ ಕಿಚ್ಚ ಸುದೀಪ್, ನಗರದ ಕಟ್ಟೆ ಕೆರೆಯಿಂದ, ದೇಸಾಯಿ ಸರ್ಖ್ ವರೆಗೆ ರೋಡ್ ಶೋ ನಡೆಸಿದರು. ಬೀಳಗಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮುರುಗೇಶ ನಿರಾಣಿ ಪರವಾಗಿಯೂ ಪ್ರಚಾರ ನಡೆಸಿದರು. ಇದನ್ನೂ ಓದಿ: ಭಯೋತ್ಪಾದನೆಗೆ ಉತ್ತೇಜನ ಕೊಟ್ರೆ, PFI, ಭಜರಂಗದಳ ಆದ್ರೂ ಬ್ಯಾನ್ ಮಾಡಲಾಗುತ್ತೆ: ಬಿ.ಕೆ‌ ಹರಿಪ್ರಸಾದ್

    ಕಿಚ್ಚ ಸುದೀಪ್ ಹೋದಲೆಲ್ಲಾ ರಸ್ತೆಯುದ್ದಕ್ಕೂ ಅಭಿಮಾನಿಗಳು ಕಿಕ್ಕಿರಿದಿದ್ದರು. ಬೀಳಗಿ ಕ್ಷೇತ್ರದ ಅಂಬೇಡ್ಕರ್ ವೃತ್ತದಲ್ಲಿ ಭಾಷಣ ಮಾಡುತ್ತಿದ್ದ ವೇಳೆ ಅಭಿಮಾನಿಗಳ ಒತ್ತಾಯದ ಮೇರೆಗೆ `ಸಾವು ಅಂದ್ರೆ ಭಯಪಡೋದಕ್ಕೆ ಗಲ್‌ಗಲ್ಲಿ ತಿರ್ಗೋ ಕಂತ್ರಿ, ಕಜ್ಜಿ ಗೂಂಡಾ ರೌಡಿ ಅನ್ಕೊಂಡ್ರೆನೋ ನನ್ನನ್ನ, ಮದಕರಿ…. ವೀರ ಮದಕರಿ…’ ಚಿತ್ರದ ಡೈಲಾಗ್ ಹೇಳುವ ಮೂಲಕ ಅಭಿಮಾನಿಗಳನ್ನು ಹುಚ್ಚೆದ್ದು ಕುಣಿಯುವಂತೆ ಮಾಡಿದರು. ಇದನ್ನೂ ಓದಿ: ಭಯೋತ್ಪಾದನೆಗೆ ಉತ್ತೇಜನ ಕೊಟ್ರೆ, PFI, ಭಜರಂಗದಳ ಆದ್ರೂ ಬ್ಯಾನ್ ಮಾಡಲಾಗುತ್ತೆ: ಬಿ.ಕೆ‌ ಹರಿಪ್ರಸಾದ್

    ಇದೇ ವೇಳೆ ಮಾತನಾಡಿ, ನೀವು ಮದಕರಿ ಡೈಲಾಗ್ ಕೇಳ್ತೀರಾ ಸರ್, ಆದ್ರೆ ನಾನು ಜಾತಿಯತೆ ಮಾಡ್ತೀನಿ ಅಂತಾರೆ, ಆದ್ರೆ ನಾವು ಸಿನೆಮಾರಂಗದವ್ರು. ಆದ್ರೆ ಮೂರು ಬಾರಿ ಗೆದ್ದಿರುವ ನಿರಾಣಿಯವರ ಮೇಲೆ ಜನರ ಪ್ರೀತಿ ಸಾಕಷ್ಟಿದೆ. 75 ಸಾವಿರ ಜನರಿಗೆ ನಿರಾಣಿಯವರು ಉದ್ಯೋಗ ನೀಡಿದ್ದಾರೆ. ಈ ಬಾರಿಯೂ ಬಹುಮತದಿಂದ ನಿರಾಣಿಯವರನ್ನ ಗೆಲ್ಲಿಸಿ ಅಂತಾ ಮನವಿ ಮಾಡಿದರು.

  • ವೇದಿಕೆಯಲ್ಲೇ ಕೊಳ್ಳೇಗಾಲ ಟಿಕೆಟ್ ಫೈನಲ್ ಮಾಡಿದ ಬಿಎಸ್‌ವೈ- ಯಾರು ಅಭ್ಯರ್ಥಿ?

    ವೇದಿಕೆಯಲ್ಲೇ ಕೊಳ್ಳೇಗಾಲ ಟಿಕೆಟ್ ಫೈನಲ್ ಮಾಡಿದ ಬಿಎಸ್‌ವೈ- ಯಾರು ಅಭ್ಯರ್ಥಿ?

    ಚಾಮರಾಜನಗರ: ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ನಾ ಮುಂದು, ತಾ ಮುಂದು ಎಂಬಂತೆ ಇರುವ ಐದಾರು ಮಂದಿ ಟಿಕೆಟ್‌ ಆಕಾಂಕ್ಷಿಗಳಿಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಶಾಕ್ ನೀಡಿದ್ದು, ಚುನಾವಣೆಗೆ ಇನ್ನೂ ಒಂದು ವರ್ಷವಿರುವಾಗಲೇ ಅಭ್ಯರ್ಥಿ ಹೆಸರನ್ನು ಅಂತಿಮಗೊಳಿಸಿದ್ದಾರೆ.

    ಹೌದು‌‌, ಧಾರ್ಮಿಕ ಕಾರ್ಯಕ್ರಮಕ್ಕಾಗಿ ಯಳಂದೂರು ತಾಲೂಕಿನ ಗೌಡಹಳ್ಳಿ ಗ್ರಾಮಕ್ಕೆ ಆಗಮಿಸಿದ್ದ ಯಡಿಯೂರಪ್ಪ ಮಾತನಾಡಿ, ಕಳೆದ ಬಾರಿ ಮಹೇಶ್‌ ಅವರನ್ನು ಶಾಸನಸಭೆಗೆ ಕಳುಹಿಸಿದಂತೆ ಮುಂದಿನ ಬಾರಿಯೂ ಅವರನ್ನು ಆರಿಸಿ ಕಳುಹಿಸಿಕೊಡಿ ಎಂದು ಜನತೆಯಲ್ಲಿ ಮನವಿ ಮಾಡುವ ಮೂಲಕ ಎನ್‌.ಮಹೇಶ್ ಅವರೇ ಬಿಜೆಪಿ ಅಭ್ಯರ್ಥಿ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ನಂಬಿಕೊಂಡವರನ್ನು ಯಡಿಯೂರಪ್ಪ ಎಂದಿಗೂ ಕೈಬಿಟ್ಟಿಲ್ಲ: ಶಾಸಕ ಎನ್.ಮಹೇಶ್

    ಯಡಿಯೂರಪ್ಪ ಅವರ ಹೇಳಿಕೆಯಿಂದ ಈಗಾಗಲೇ ಟಿಕೆಟ್ ಮೇಲೆ ಕಣ್ಣಿಟ್ಟಿದ್ದ ಮಾಜಿ‌ ಶಾಸಕ ಜಿ‌.ಎನ್‌‌‌.ನಂಜುಂಡಸ್ವಾಮಿ, ಸಂಸದ ವಿ.ಶ್ರೀನಿವಾಸಪ್ರಸಾದ್ ಅಳಿಯ ಡಾ.ಮೋಹನ್, ಚಾಮರಾಜನಗರ ಸಿಪಿಐ ಬಿ‌‌.ಪುಟ್ಟಸ್ವಾಮಿ, ಕಿನಕಹಳ್ಳಿ ರಾಚಯ್ಯ ಅವರಿಗೆ ಬಿಎಸ್‌ವೈ ಹೇಳಿಕೆಯಿಂದ ಬೇಸರವಾಗಿದ್ದರೂ ಅಚ್ಚರಿಯಿಲ್ಲ.

    ಮುಂದಿನ ಚುನಾವಣೆಗೆ ಕೊಳ್ಳೇಗಾಲ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯಾರು ಎಂಬ ಹತ್ತಾರು ಮಾತುಗಳಿಗೆ ಯಡಿಯೂರಪ್ಪ ಇಂದು ಪೂರ್ಣ ವಿರಾಮ ಹಾಕಿದ್ದಾರೆ. ಮಹೇಶ್ ಅವರೇ ಮುಂದಿನ ಬಿಜೆಪಿ ಅಭ್ಯರ್ಥಿ ಎಂದು ಘೋಷಿಸಿದ್ದಾರೆ. ಇದನ್ನೂ ಓದಿ: ಬ್ಯಾಂಕ್, ಎಟಿಎಂ ಬಾಗಿಲಿನಲ್ಲಿ ಮಲ ವಿಸರ್ಜನೆ ಮಾಡಿ ವಿಕೃತಿ

  • ಗೆಲುವಿನ ವಿಶ್ವಾಸದಲ್ಲಿ ಮುನಿರತ್ನ – ಇತ್ತ ಕುಸುಮಾರಿಂದ ಟೆಂಪಲ್ ರನ್

    ಗೆಲುವಿನ ವಿಶ್ವಾಸದಲ್ಲಿ ಮುನಿರತ್ನ – ಇತ್ತ ಕುಸುಮಾರಿಂದ ಟೆಂಪಲ್ ರನ್

    ಬೆಂಗಳೂರು: ತುಮಕೂರಿನ ಶಿರಾ ಹಾಗೂ ಬೆಂಗಳೂರಿನ ಆರ್ ಆರ್ ನಗರ ಉಪಚುನಾವಣೆಯ ಫಲಿತಾಂಶ ಇಂದು ಹೊರಬೀಳಲಿದ್ದು, ಅಭ್ಯರ್ಥಿಗಳ ಎದೆಯಲ್ಲಿ ಢವಢವ ಆರಂಭವಾಗಿದೆ.

    ಆರ್‍ಆರ್ ನಗರ ಬಿಜೆಪಿ ಅಭ್ಯರ್ಥಿ ಮುನಿರತ್ನ ಅವರು ಗೆಲುವಿನ ವಿಶ್ವಾಸದಲ್ಲಿದ್ದಾರೆ. ಕೌಂಟಿಂಗ್ ಆರಂಭದ ಬಳಿಕ ಮತ ಎಣಿಕಾ ಕೇಂದ್ರದ ಕಡೆ ಹೋಗಲು ನಿರ್ಧಾರ ಮಾಡಿದ್ದಾರೆ. ಸದ್ಯ ಟಿವಿಯಲ್ಲಿಯೇ ಬೆಳವಣಿಗೆಗಳನ್ನು ವೀಕ್ಷಿಸ್ತಿರೊ ಮುನಿರತ್ನ ಅವರು, ಚುನಾವಣಾ ಫಲಿತಾಂಶಕ್ಕೂ ಮುನ್ನ ತಿರುಪತಿ ತಿಮ್ಮಪ್ಪನ ದರ್ಶನ ಪಡೆದು ನಿನ್ನೆ ಆಗಮಿಸಿದ್ದಾರೆ.

    ಇತ್ತ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಅವರು ಕುಟುಂಬಸ್ಥರ ಜೊತೆ ಶೇಷಾದ್ರಿಪುರಂನಲ್ಲಿರೋ ಶ್ರೀ ಸುಬ್ರಮಣ್ಯ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ಅಲ್ಲದೆ ವಿಜಯನಗರದ ಆದಿಚುಂಚನಗಿರಿ ಮಠದ ಶಿವ ದೇವಾಲಯ ಹಾಗೂ ರಾಜರಾಜೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ.

  • ಶಿವರಾಂ ಹೆಬ್ಬಾರ್ ಭರ್ಜರಿ ವಿಜಯೋತ್ಸವ – 2 ಕ್ವಿಂಟಾಲ್ ಸೇಬಿನ ಹಾರ ಸಮರ್ಪಣೆ

    ಶಿವರಾಂ ಹೆಬ್ಬಾರ್ ಭರ್ಜರಿ ವಿಜಯೋತ್ಸವ – 2 ಕ್ವಿಂಟಾಲ್ ಸೇಬಿನ ಹಾರ ಸಮರ್ಪಣೆ

    ಕಾರವಾರ: ಉಪಚುನಾವಣಾ ಫಲಿತಾಂಶದ ಬಳಿಕ ಬಿಜೆಪಿ ಅಭ್ಯರ್ಥಿ ಶಿವರಾಂ ಹೆಬ್ಬಾರ್ ಭರ್ಜರಿ ವಿಜಯೋತ್ಸವ ಆಚರಿಸಿದರು.

    ವಾಹನದಲ್ಲಿ ಶಿರಸಿಯಾದ್ಯಂತ ಶಿವರಾಂ ಹೆಬ್ಬಾರ್ ಅವರಿಗೆ ಭರ್ಜರಿ ಮೆರವಣಿಗೆ ಮಾಡಲಾಯಿತು. ಪಟಾಕಿ ಹೊಡೆದು, ಕ್ರೇನ್ ಮೂಲಕ ಬೃಹತ್ ಸೇಬಿನ ಹಾರ ಹಾಕಿ ಅಭಿಮಾನಿಗಳಿಂದ ಸ್ವಾಗತಿಸಿ ಸಂಭ್ರಮಿಸಿದರು.

    2 ಕ್ವಿಂಟಾಲ್ ಭಾರದ ಈ ಮಾಲೆಗೆ 1500ಕ್ಕೂ ಅಧಿಕ ಸೇಬು ಹಣ್ಣನ್ನು ಬಳಸಲಾಗಿದೆ. ಈ ಸಂದರ್ಭದಲ್ಲಿ ಸೇಬಿಗಾಗಿ ಅಭಿಮಾನಿಗಳು ಮುಗಿಬಿದ್ದು ಹಣ್ಣುಗಳನ್ನು ಕಿತ್ತುಕೊಂಡರು. ನಗರದ ಪ್ರಮುಖ ಬೀದಿಯಲ್ಲಿ ಮೆರವಣಿಗೆಯಲ್ಲಿ ಆಗಮಿಸಿದ ಶಿವರಾಂ ಅವರು ಶಿರಸಿ ಮಾರಿಕಾಂಬಾ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

    ಯಲ್ಲಾಪುರ- ಮುಂಡಗೋಡ ವಿಧಾನಸಭಾ ಕ್ಷೇತ್ರದ ಶಿವರಾಂ ಹೆಬ್ಬಾರ್ ಅವರು 80,440 ಮತಗಳನ್ನು ಪಡೆದು ಭರ್ಜರಿ ಗೆಲುವು ದಾಖಲಿಸಿದರು. ಸಮೀಪದ ಸ್ಪರ್ಧಿ ಕಾಂಗ್ರೆಸ್ ಪಕ್ಷದ ಭೀಮಣ್ಣ ನಾಯ್ಕ ಅವರನ್ನು 31,406 ಮತಗಳ ಅಂತರದಿಂದ ಸೋಲಿಸಿದ್ದಾರೆ.

    ಕಾಂಗ್ರೆಸ್‍ನಿಂದ ಗೆದ್ದು ಶಾಸಕರಾಗಿದ್ದ ಶಿವರಾಂ ಹೆಬ್ಬಾರ್ ಅವರ ರಾಜೀನಾಮೆ ಹಾಗೂ ಅನರ್ಹತೆಯಿಂದಾಗಿ ಕ್ಷೇತ್ರಕ್ಕೆ ಡಿ. 5ರಂದು ಉಪಚುನಾವಣೆಯ ಮತದಾನ ನಡೆದಿತ್ತು. 1.72 ಲಕ್ಷ ಮತದಾರರಿದ್ದ ಕ್ಷೇತ್ರದಲ್ಲಿ ಶೇ. 77.52 ಮತದಾನವಾಗಿತ್ತು. 65,381 ಪುರುಷ ಹಾಗೂ 68,182 ಮಹಿಳೆಯರು ಸೇರಿ ಒಟ್ಟು 1,33,564 ಮಂದಿಯಿಂದ ಮತದಾನವಾಗಿತ್ತು.

  • ಅಯೋಗ್ಯ ಸರ್ಕಾರ ಬೀಳಿಸಿ, ಸ್ಥಿರ ಸರ್ಕಾರ ಸ್ಥಾಪಿಸಿದ ತೃಪ್ತಿ ನನಗಿದೆ : ವಿಶ್ವನಾಥ್

    ಅಯೋಗ್ಯ ಸರ್ಕಾರ ಬೀಳಿಸಿ, ಸ್ಥಿರ ಸರ್ಕಾರ ಸ್ಥಾಪಿಸಿದ ತೃಪ್ತಿ ನನಗಿದೆ : ವಿಶ್ವನಾಥ್

    ಮೈಸೂರು: ಅಯೋಗ್ಯ ಸರ್ಕಾರ ಬೀಳಿಸಿ, ಸ್ಥಿರ ಸರ್ಕಾರ ಸ್ಥಾಪಿಸಿದ ತೃಪ್ತಿ ನನಗಿದೆ ಎಂದು ಹುಣಸೂರಿನಲ್ಲಿ ಸೋತ ಬಿಜೆಪಿ ಅಭ್ಯರ್ಥಿ ಎಚ್. ವಿಶ್ವನಾಥ್ ಹೇಳಿದ್ದಾರೆ.

    ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಇದು ಮತದಾರನ ತೀರ್ಪು. ಗೆಲುವು-ಸೋಲು ಎಲ್ಲ ಅವರ ಕೈಯಲ್ಲಿ ಇದೆ. ಅವರು ನನಗೆ ಸೋಲಿನ ತೀರ್ಪು ನೀಡಿದರು. ನಾನು ಅದನ್ನು ಒಪ್ಪಿಕೊಳ್ಳುತ್ತೇನೆ. ನಾನು ಸೋಲನ್ನು ನಿರೀಕ್ಷಿಸಿರಲಿಲ್ಲ. ಅಂತಹ ವಾತಾವರಣಗಳು ಇರಲಿಲ್ಲ. ಜೆಡಿಎಸ್ ಮತ ಕಾಂಗ್ರೆಸ್‍ಗೆ ಶಿಫ್ಟ್ ಆದವು. ಹಾಗಾಗಿ ಈ ಸೋಲನ್ನು ನಾನು ಅನುಭವಿಸಬೇಕಾಯಿತು ಎಂದರು.

    ಒಂದು ಕೆಟ್ಟ, ಅಯೋಗ್ಯ ಸರ್ಕಾರ. ಅಯೋಗ್ಯ ಸರ್ಕಾರವನ್ನು ಕೆಡವುದಕ್ಕೆ ನಾನು ಮುಂದೆ ನಿಂತೆ. ಅದು ಅವರಿಗೆ ಕಾರಣವಾಯಿತು. ಇದರಿಂದ ನನ್ನ ಮನಸ್ಸಿಗೆ ನೋವಾಗಿಲ್ಲ. ಒಂದು ಅಯೋಗ್ಯ ಸರ್ಕಾರ ಕೆಡವಿ, ಇನ್ನೊಂದು ಸರ್ಕಾರ ಸ್ಥಾಪನೆಯಾಗಿ, ಸ್ಥಾಪನೆಯಾದ ಸರ್ಕಾರ ಸ್ಥಿರ ಸರ್ಕಾರವಾಗಿ ಇಂದು 12 ಜನ ಬಿಜೆಪಿಯವರೇ ಗೆದ್ದಿದೆ. ಬಿಎಸ್‍ವೈಗೆ ಸ್ಥಿರ ಸರ್ಕಾರ ಕೊಡುವುದರ ಜೊತೆಗೆ ಅನರ್ಹರು ಎಂದು ಹೇಳುತ್ತಿದ್ದವರಿಗೆ ಅರ್ಹರು ಎಂಬ ಪಟ್ಟವನ್ನು ರಾಜ್ಯದ ಮತದಾರರು ಕೊಟ್ಟಿದ್ದಾರೆ ಎಂಬ ಖುಷಿಯಿದೆ ಎಂದರು.

    ನನ್ನ ಸೋಲಿಗೆ ನೋವಿಲ್ಲ ಬದಲಾಗಿ ಅನರ್ಹರು ಎಂಬ ಪಟ್ಟವನ್ನು ಮತದಾರರು ತೆಗೆದಿದ್ದಾರೆ ಎಂಬುದು ಖುಷಿಯಿದೆ. ಕಾಂಗ್ರೆಸ್ ಹಾಗೂ ಜೆಡಿಎಸ್ ಅನರ್ಹರು, ಅವರಿಗೆ ಮತ ಹಾಕಬೇಡಿ ಎಂದು ಹೇಳುತ್ತಿದ್ದರು. ಆದರೆ ಈಗ ಬಿಜೆಪಿಯಲ್ಲಿ 12 ಮಂದಿ ಗೆದ್ದಿದ್ದಾರೆ. ನಾನು ಇಂದು ಸೋತಿರಬಹುದು. ಆದರೆ 12 ಮಂದಿ ಗೆದ್ದಿದ್ದಾರೆ. ನನಗೆ ಸೋಲಿನಿಂದ ನೋವಾಗಿಲ್ಲ. ವೈಯಕ್ತಿಕ ಕಾರಣದಿಂದ ಸೋತಿದ್ದೇನೆ. ಬಿಎಸ್‍ವೈ ಅವರ ಮೂರುವರೆ ವರ್ಷದ ಅಭಿವೃದ್ಧಿಗೆ ಮತದಾರರು ಸಾಥ್ ನೀಡಿದ್ದಾರೆ ಎಂದು ಪ್ರತಿಕ್ರಿಯಿಸಿದರು.

    ನಾನು ರಾಜೀನಾಮೆ ನೀಡಿದ್ದು ಸರಿಯಾಗಿದೆ. ಕುಮಾರಸ್ವಾಮಿ ಹಾಗೂ ಸಿದ್ದರಾಮಯ್ಯ ಅವರ ಸರ್ಕಾರ ಕೇವಲ ಮೂರು, ನಾಲ್ಕು ಜನರಿಗಿದ್ದ ಅಯೋಗ್ಯ ಸರ್ಕಾರ ಕೆಡವಿದ್ದು ಸರಿ. ಮತ್ತು ಹೊಸ ಸರ್ಕಾರದ ಸ್ಥಾಪನೆ ಮಾಡುವುದರಲ್ಲಿ ನನ್ನ ತ್ಯಾಗವಿದೆ ಎಂದರು. ಇದೇ ವೇಳೆ ಹುಣಸೂರು ಜನರ ಬಳಿ ಕ್ಷಮೆ ಕೇಳಬೇಕೆಂಬ ಎಚ್.ಪಿ ಮಂಜುನಾಥ್ ಅವರ ಹೇಳಿಕೆಗೆ ಈ ಮಾತು ಅಯೋಗ್ಯವಾದ ಮಾತು. ಮಂಜುನಾಥ್ ಅವರು ಈ ಮಾತನ್ನು ವಾಪಸ್ ಪಡೆಯಬೇಕು ಎಂದರು.

  • ‘ಅನರ್ಹ ಮಾಡಿದವರಿಗೆ ಪಾಠ ಕಲಿಸಿದ್ದಾರೆ’ – ಯಲ್ಲಾಪುರದಲ್ಲಿ ಶಿವರಾಂ ಹೆಬ್ಬಾರ್ ಗೆಲುವು

    ‘ಅನರ್ಹ ಮಾಡಿದವರಿಗೆ ಪಾಠ ಕಲಿಸಿದ್ದಾರೆ’ – ಯಲ್ಲಾಪುರದಲ್ಲಿ ಶಿವರಾಂ ಹೆಬ್ಬಾರ್ ಗೆಲುವು

    ಕಾರವಾರ: ಯಲ್ಲಾಪುರದಲ್ಲಿ ಬಿಜೆಪಿ ಅಭ್ಯರ್ಥಿ ಶಿವರಾಂ ಹೆಬ್ಬಾರ್ 30 ಸಾವಿರಕ್ಕೂ ಅಧಿಕ ಮತಗಳಿಂದ ಜಯಗಳಿಸಿದ್ದಾರೆ.

    17 ಸುತ್ತುಗಳು ಮುಕ್ತಾಯಗೊಂಡಿದ್ದು ಶಿವರಾಂ ಹೆಬ್ಬಾರ್ 31,406 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಶಿವರಾಂ ಹೆಬ್ಬಾರ್ 80,440 ಮತಗಳನ್ನು ಪಡೆದರೆ ಕಾಂಗ್ರೆಸ್ಸಿನ ಭೀಮಣ್ಣ ನಾಯ್ಕ್ 49,034 ಮತಗಳು ಪಡೆದಿದ್ದಾರೆ. ಜಡಿಎಸ್‍ನಿಂದ ಸ್ಪರ್ಧಿಸಿದ್ದ ಚೈತ್ರಾ ಗೌಡ 1,235 ಮತಗಳು ಪಡೆದಿದ್ದು 1,444 ನೋಟಾ ಮತ ಚಲಾವಣೆಯಾಗಿದೆ.

    ಪಬ್ಲಿಕ್ ಟಿವಿಗೆ ಪ್ರತಿಕ್ರಿಯಿಸಿದ ಶಿವರಾಂ ಹೆಬ್ಬಾರ್, ಅನರ್ಹ ಮಾಡಿದವರಿಗೆ ಪಾಠ ಕಲಿಸಿದ್ದಾರೆ. ಜನ ನನಗೆ ಆಶೀರ್ವಾದ ಮಾಡಿದ್ದಾರೆ ಎಂದು ತಿಳಿಸಿದರು.

    ಬೆಳಗ್ಗೆ 10.30ರ ವೇಳೆಗೆ ಬಿಜೆಪಿ 12 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದರೆ ಕಾಂಗ್ರೆಸ್ 2, ಹೊಸಕೋಟೆಯಲ್ಲಿ ಶರತ್ ಬಚ್ಚೇಗೌಡ ಮುನ್ನಡೆ ಸಾಧಿಸಿದ್ದಾರೆ.

    ಕಾಗವಾಡ, ಅಥಣಿ, ಗೋಕಾಕ್, ಕೆಆರ್ ಪುರಂ, ಚಿಕ್ಕಬಳ್ಳಾಪುರ, ಹಿರೇಕೆರೂರು, ಮಹಾಲಕ್ಷ್ಮಿ ಲೇಔಟ್, ರಾಣೇಬೆನ್ನೂರು, ಕೆಆರ್ ಪೇಟೆ, ಯಶವಂತಪುರ, ವಿಜಯನಗರದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಶಿವಾಜಿನಗರ ಮತ್ತು ಹುಣಸೂರಿನಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ.