Tag: ಬಿಜೆಪಿ ಆಫರ್

  • ಪಕ್ಷ ನಿಷ್ಠನಾಗಿ ಅಂದು ಜೈಲುವಾಸ ಆಯ್ಕೆ ಮಾಡಿಕೊಂಡೆ – ಬಿಜೆಪಿ ಆಫರ್‌ ಬಗ್ಗೆ ಡಿಕೆಶಿ ಬಾಂಬ್‌

    ಪಕ್ಷ ನಿಷ್ಠನಾಗಿ ಅಂದು ಜೈಲುವಾಸ ಆಯ್ಕೆ ಮಾಡಿಕೊಂಡೆ – ಬಿಜೆಪಿ ಆಫರ್‌ ಬಗ್ಗೆ ಡಿಕೆಶಿ ಬಾಂಬ್‌

    – ಶಾಲಾ ಚುನಾವಣೆಯಲ್ಲಿಯೇ ಅನೇಕ ಒತ್ತಡಗಳಿಂದ ನನಗೆ ಬೇರೆ ಸ್ಥಾನ ನೀಡಲಾಗಿತ್ತು
    – 400 ಮತಗಳಿಂದ ಗೆಲ್ತೀಯಾ ಅಂದ್ರು, ಬೆಳಗ್ಗೆ ಯಾವ್ದೋ ಹುಡ್ಗಿ ಹೆಸರು ಘೋಷಣೆ ಮಾಡಿದ್ರು

    ಬೆಂಗಳೂರು: ಸಮ್ಮಿಶ್ರ ಸರ್ಕಾರ ಬಿದ್ದು ಹೋಗುವ ವೇಳೆ ಪಕ್ಷ ನಿಷ್ಠನಾಗಿ ಜೈಲುವಾಸ ಆಯ್ಕೆ ಮಾಡಿಕೊಂಡೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ (DK Shivakumar) ಅವರು ಬಿಜೆಪಿ ಆಫರ್‌ ಬಗ್ಗೆ ಹೊಸ ಬಾಂಬ್‌ ಸಿಡಿಸಿದರು.

    ನಗರದ ಎಫ್ ಕೆಸಿಸಿಐ ಸಭಾಂಗಣದಲ್ಲಿ ನಡೆದ ಕೆ.ಎಂ.ರಘು ಡೈರೆಕ್ಟರ್ ಅವರು ಬರೆದಿರುವ ಡಿ.ಕೆ. ಶಿವಕುಮಾರ್ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಡಿಸಿಎಂ ಮಾತನಾಡಿದರು. ಇದನ್ನೂ ಓದಿ: ಐನಾಕ್ಸ್‌ವಿಂಡ್‌ ಕಂಪನಿಯಿಂದ ಕುಷ್ಟಗಿಯಲ್ಲಿ 400 ಕೋಟಿ ಹೂಡಿಕೆ: ಎಂಬಿ ಪಾಟೀಲ್‌

    ಸಮ್ಮಿಶ್ರ ಸರ್ಕಾರದಲ್ಲಿ 10 ಜನ‌ ಶಾಸಕರು ರಾಜಿನಾಮೆ ನೀಡಲು ಹೊರಟಿದ್ದರು. ಕನಕಪುರದಲ್ಲಿದ್ದ ನಾನು ಬೆಂಗಳೂರಿಗೆ ಬಂದು ಐದಾರು ಜನರನ್ನು ವಾಪಸ್ ಕ್ವಾಟ್ರಸ್‌ಗೆ ಕರೆದುಕೊಂಡು ಬಂದೆ.‌ ಆಗ ನನಗೆ ಒಬ್ಬ ಆದಾಯ ತೆರಿಗೆ (Income Tax) ಆಡಿಟರ್ ಫೋನ್ ನಿಂದ ಕರೆ ಬಂದಿತ್ತು. ಬಿಜೆಪಿಯ (BJP) ಯಾರಿಂದ ಬಂತು ಅಂತ ಹೆಸರು ಹೇಳೋದು ಬೇಡ ಈಗ. ನನ್ನ ಜೊತೆ ಡಿಜಿಯೂ ಇದ್ದ‌ರು, ಡಿಕೆ ಸುರೇಶ್‌ ಕೂಡ ಇದ್ದರು. ಅವರು ದೂರವಾಣಿ ಕರೆಯಲ್ಲಿ ಮಾತನಾಡಿದರು. ಕರೆ ಮಾಡಿದವರು ʻನೀವು ಡಿಸಿಎಂ ಆಗುವಿರಾ ಅಥವಾ ಜೈಲಿಗೆ ಹೋಗುವಿರಾ?ʼ ಎಂದು ಕೇಳಿದರು. ಎಲ್ಲಾ ಶಾಸಕರನ್ನ ವಾಪಸ್‌ ಕರೆದುಕೊಂಡು ಬನ್ನಿ ಎಂದು ತಿಳಿಸಿದರು.

    ಆಗ ನಾನು ನನಗೆ ಇಷ್ಟೆಲ್ಲಾ ಸ್ಥಾನ ನೀಡಿರುವ ಪಕ್ಷವನ್ನ ಬಿಡುವುದಿಲ್ಲ. ಪಕ್ಷನಿಷ್ಠೆಗಾಗಿ ಬೇಕಾದರೆ ಜೈಲಿಗೆ ಹೋಗುತ್ತೇನೆ ಎಂದೆ. ನಾನು ವಿದ್ಯಾರ್ಥಿ ನಾಯಕನಾಗಿದ್ದಾಗ ರಾಜೀವ್ ಗಾಂಧಿ ಅವರು ನನಗೆ ಟಿಕೆಟ್ ನೀಡಿ, ಮಂತ್ರಿ ಮಾಡಿದ್ದರು. ಬಂಗಾರಪ್ಪ ಅವರು ನನಗೆ ಸಹಕಾರ ನೀಡಿದ್ದರು. ಈ ಪಕ್ಷದಿಂದ ಈ ಮಟ್ಟಕ್ಕೆ ಬೆಳೆದಿದ್ದೇನೆ ಎಂದು ಜೈಲು ಆಯ್ಕೆ ಮಾಡಿಕೊಂಡೆ. ಅಂದು ನಾನು ಬೇರೆ ಆಯ್ಕೆ ಮಾಡಿದ್ದರೆ ಏನೇನು ಆಗುತ್ತಾ ಇತ್ತೋ ಗೊತ್ತಿಲ್ಲ ಎಂದರು. ಇದನ್ನೂ ಓದಿ: ಜಾತಿ ಸಮೀಕ್ಷೆಯಲ್ಲಿ ಭಾಗವಹಿಸಲ್ಲ ಎಂದ ಸುಧಾ, ನಾರಾಯಣ ಮೂರ್ತಿ ದಂಪತಿ

    ಯಾವುದೋ ಹುಡುಗಿಯ ಹೆಸರು ಘೋಷಣೆ ಮಾಡಲಾಯಿತು
    ನಾನು ವಿದ್ಯಾರ್ಥಿ ದೆಸೆಯಿಂದಲೇ ರಾಜಕೀಯ ನಾಯಕನಾಗಬೇಕು ಎನ್ನುವ ಅಭಿಲಾಷೆ ಹೊಂದಿದ್ದವನು. ಮೌಂಟ್ ಕಾರ್ಮೆಲ್ ಶಾಲಾ ಚುನಾವಣೆಯಲ್ಲಿ ಗೆದ್ದಿದ್ದ ನನಗೆ ಅಂದೇ ಅನೇಕ ಒತ್ತಡಗಳಿಂದ ಪ್ರತ್ಯೇಕ ಸ್ಥಾನ ನೀಡಲಾಯಿತು. ಚುನಾವಣೆಯ ಕೌಂಟಿಂಗ್ ಪ್ರತಿನಿಧಿಯಾಗಿದ್ದ ನನ್ನ ಸಹಪಾಠಿ ಮಾಧವ ನಾಯಕ್ ನೀನು 400 ಮತಗಳಿಂದ ಗೆಲ್ಲುತ್ತೀಯಾ ಎಂದಿದ್ದನು. ಆದರೆ ಬೆಳಗ್ಗೆ ಫಲಿತಾಂಶ ಘೋಷಣೆ ಮಾಡುವಾಗ ಬೇರೆ ಯಾವುದೋ ಹುಡುಗಿಯ ಹೆಸರನ್ನು ಘೋಷಣೆ ಮಾಡಲಾಯಿತು. ನನಗೆ ಪ್ರತ್ಯೇಕವಾಗಿ ಕ್ರೀಡಾ ಕಾರ್ಯದರ್ಶಿ ಹುದ್ದೆ ನೀಡಲಾಯಿತು ಎಂದರು.

    ರಾಜಕಾರಣದಲ್ಲಿಯೂ ಸುಮಾರು ಶೇ.80‌ ರಷ್ಟು ಜನ ದುಡಿಯುತ್ತಲೇ ಇದ್ದಾರೆ. ಶೇ.20 ರಷ್ಟು ಜನರಿಗೆ ಮಾತ್ರ ಸಣ್ಣಪುಟ್ಟ ಸ್ಥಾನಮಾನ ಸಿಕ್ಕಿದೆ. ನನಗೂ 63 ವರ್ಷವಾಯಿತು.‌ ನಾವುಗಳೇ ಇನ್ನೆಷ್ಟು ದಿನ ರಾಜಕಾರಣ ಮಾಡಲು ಸಾಧ್ಯ.? ಹೊಸಬರು ಬರಬೇಕು. ಐದು ಪಾಲಿಕೆಗಳು ಮಾಡಿದ‌ ಕಾರಣಕ್ಕೆ ಬೆಂಗಳೂರಿನಲ್ಲಿ ಹೊಸದಾಗಿ 500ಕ್ಕೂ ಹೆಚ್ಚು ನಾಯಕರು ಬೆಳಕಿಗೆ ಬರಲಿದ್ದಾರೆ ಎಂದರು.

    ನಾನು ಜಾತ್ಯತೀತ ತತ್ವದಲ್ಲಿ ಬೆಳೆದವನು
    ಜಾತ್ಯಾತೀತ ತತ್ವದಲ್ಲಿ ಬೆಳೆದವನು ನಾನು. ಸದನದಲ್ಲಿ ಆರ್‌ಎಸ್‌ಎಸ್‌ ಬಗ್ಗೆ ತಿಳಿದಿದೆ ಎಂದು ಹೇಳಿದೆ ಅಷ್ಟೇ ‌ಅದನ್ನೇ ದೊಡ್ಡದಾಗಿ ಬಿಂಬಿಸಲಾಯಿತು. ಕಾರ್ಯಕರ್ತರಿಗೆ, ನನ್ನ ನಂಬಿಕೊಂಡವರಿಗೆ ನೋವಾಗಬಾರದು ಎಂದು ನಾನು ಏನೂ ಮಾತನಾಡಲಿಲ್ಲ. ನಾನು ಪುಸ್ತಕ ಓದುವವನಲ್ಲ. ಶಾಲಾ, ಕಾಲೇಜುಗಳಲ್ಲಿ ಓದಲಿಲ್ಲ. ಅಂದಿನಿಂದಲೂ ರಾಜಕಾರಣ ಮಾಡಿಕೊಂಡು ಬೆಳೆದವನು ನಾನು. ಅಂತಿಮ ಪದವಿ ಓದುವಾಗ ಟಿಕೆಟ್ ದೊರೆಯಿತು. ಇದನ್ನು ಯಾರೂ ಸಹ ಊಹಿಸಲೂ ಸಾಧ್ಯವಿಲ್ಲ. ಅಂದಿನಿಂದ 8 ಬಾರಿ ಶಾಸಕನಾಗಿ ಇಂದು ಉಪಮುಖ್ಯಮಂತ್ರಿಯಾಗಿದ್ದೇನೆ ಎಂದರು. ಇದನ್ನೂ ಓದಿ: ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಕೇಸ್ – ಕರೆ ಮಾಡಿದವನ ಮೂಲ ಪತ್ತೆ, ಅರೆಸ್ಟ್‌ಗೆ ಮುಂದಾದ ಪೊಲೀಸರು

    ನಾನು ರಾಜೀವ್ ಗಾಂಧಿ ಮಾತಿನ ಮೇಲೆ ನಂಬಿಕೆ ಇಟ್ಟವನು
    ಈ ಪುಸ್ತಕ ರಾಜಕೀಯದಲ್ಲಿ ಬೆಳೆಯಬೇಕು ಎನ್ನುವವರಿಗೆ ಒಂದಷ್ಟು ಮಾರ್ಗದರ್ಶನ ‌ನೀಡಬಹುದು. ಏಕೆಂದರೆ ನಾನು ರಾಜೀವ್ ಗಾಂಧಿ ಅವರ ಮಾತಿನ ಮೇಲೆ ನಂಬಿಕೆ ಇಟ್ಟವನು. ಹಿಂಬಾಲಕರನ್ನ ಸೃಷ್ಟಿಸಬೇಡಿ ನಾಯಕರನ್ನು ಸೃಷ್ಟಿಸಿ ಎನ್ನುವ ಮಾತನ್ನು ಹೆಚ್ಚು ನಂಬುವವನು. ನಾನು ಇಷ್ಟು ‌ಎತ್ತರಕ್ಕೆ ಬೆಳೆಯಲು ನನ್ನ ಕ್ಷೇತ್ರದ ಜನತೆ ಹಾಗೂ ಪಕ್ಷದ ಕಾರ್ಯಕರ್ತರು ಕಾರಣ.‌ ತಿಹಾರ್ ಜೈಲಿಗೆ ನನ್ನ ಮೇಲೆ ಷಡ್ಯಂತ್ರ ‌ಮಾಡಿ ಕಳುಹಿಸಿದಾಗಲೂ ಈ ಜನ ನನ್ನ ಜೊತೆ ನಿಂತಿದ್ದಾರೆ‌. ಲಕ್ಷಾಂತರ ಜನರು, ತಾಯಂದಿರು ಹರಕೆ ಕಟ್ಟಿಕೊಂಡು ನನ್ನ ಪರವಾಗಿ ಪ್ರಾರ್ಥನೆ ಮಾಡಿದ್ದರು. ಎಲ್ಲರ ಹರಕೆ,‌ ಹಾರೈಕೆಯಿಂದ ನಾನು ನಿಮ್ಮ ಮುಂದೆ ನಿಂತಿದ್ದೇನೆ ಎಂದರು.

    ಟೀಕೆಗಳನ್ನು ಮುಕ್ತವಾಗಿ ಸ್ವೀಕರಿಸುವೆ
    ಟೀಕೆಗಳನ್ನು ಮುಕ್ತವಾಗಿ ನಾನು ಸ್ವೀಕಾರ ಮಾಡುತ್ತೇನೆ. ಸ್ನೇಹಿತರು ಟೀಕೆ ಮಾಡುತ್ತಾರೆ. ವೈರಿಗಳು ನನ್ನ ಬಗ್ಗೆ ಇಲ್ಲ ಸಲ್ಲದ ಸಂಗತಿಗಳನ್ನು ಕಟ್ಟಿ ಮಾತನಾಡುತ್ತಾರೆ. ಆಪಾದನೆಗಳನ್ನು ‌ಮಾಡುತ್ತಾರೆ. ಆದರೂ ನಾನು ಸಂತೋಷದಿಂದ ಕೇಳಿಸಿಕೊಳ್ಳುತ್ತೇನೆ ಎಂದರು.

    “ದೇವೆಗೌಡರು, ಕುಮಾರಸ್ವಾಮಿ ವಿರುದ್ಧ ರಾಜಕೀಯ ‌ಮಾಡಿದ್ದೇನೆ. ಜಾತ್ಯಾತೀತತೇ ಉಳಿಯಬೇಕು ಎನ್ನುವ ಕಾರಣಕ್ಕೆ, ಹೈಕಮಾಂಡ್ ಹೇಳಿದಕ್ಕೆ ಅವರ ಕೈ ಹಿಡಿದು ಮೇಲಕ್ಕೆತ್ತಿ ಮುಖ್ಯಮಂತ್ರಿ ಮಾಡಿದ್ದೇವೆ. ನನ್ನ ಮನಸ್ಸು ಒಪ್ಪಿತೋ ಇಲ್ಲವೋ ಬೇರೆ ವಿಚಾರ‌. ಆದರೆ ಪಕ್ಷದ ಮಾತಿಗೆ ನಿಷ್ಠನಾಗಿ ನಡೆದುಕೊಂಡೆ. ನಾನು ಜೈಲಿಗೆ ಹೋದ ತಕ್ಷಣ ನಾವೇನಾದರೂ ದುಡ್ಡು ಹೊಡೆಯಲು ಹೇಳಿದ್ದೆವೇಯೇ ಎನ್ನುವ ಮಾತನ್ನೂ ಇದೇ ಕಿವಿಯಲ್ಲಿ ಕೇಳಿದ್ದೇನೆ ಎಂದರು.

    ಪುಸ್ತಕದಲ್ಲಿ 99%ರಷ್ಟು ಸತ್ಯ ಸಂಗತಿಗಳು ಕಾಣುತ್ತಿವೆ
    “ಪುಸ್ತಕದ ಲೇಖಕ ರಘು ನನಗೆ ಪರಿಚಿತನಲ್ಲ, ಪುಸ್ತಕ ಬರೆಯುತ್ತೇನೆ ಎಂದು ಅನುಮತಿ ಪಡೆದಿಲ್ಲ, ನನ್ನ ಬಳಿ ಹತ್ತು ನಿಮಿಷ ಮಾತನಾಡಿಲ್ಲ. ಆದರೆ ತನ್ನದೇ ಆದ ಮಾದರಿಯಲ್ಲಿ ಸಂಶೋಧನೆ ಮಾಡಿದ್ದಾರೆ. ನನ್ನ ಭಾಷಣಗಳು ಸೇರಿದಂತೆ ಇತರೇ ಮಾತುಗಳನ್ನು ಕೇಳಿ ಮಾಹಿತಿ ಸಂಗ್ರಹ ಮಾಡಿದ್ದಾರೆ‌. ಇದರಲ್ಲಿ ಶೇ.99 ರಷ್ಟು ಸತ್ಯ ಸಂಗತಿಗಳು ‌ಕಾಣುತ್ತಿವೆ” ಎಂದರು.

    “ಮೈಸೂರಿನ ರಮ್ಯ ಎಂಬ ಪಿಹೆಚ್‌ಡಿ ವಿದ್ಯಾರ್ಥಿನಿ ನನ್ನ ಬಗ್ಗೆ ಕಳೆದ 6-7 ವರ್ಷಗಳಿಂದ ಸಂಶೋಧನೆ ನಡೆಸಿ ಡಾಕ್ಟರೇಟ್ ಪಡೆದಿದ್ದಾರೆ. ಆಕೆ ಸಹ ನನ್ನ ಬಗ್ಗೆ ಬರೆದಿರುವ ಪುಸ್ತಕ ಬಿಡುಗಡೆಗೆ ಬಂದಿಲ್ಲ. ಈಗ ನನ್ನ ಬಗ್ಗೆ ಅತ್ಯುತ್ತಮವಾಗಿ ಸಂಶೋಧನೆ ನಡೆಸಿ ರಘು ಅವರು ಪುಸ್ತಕ ಬರೆದಿದ್ದಾರೆ. ನನ್ನ ಬಗ್ಗೆ ತಿಳಿದುಕೊಳ್ಳಲು, ನನ್ನ ಹೆಜ್ಜೆಗಳನ್ನು ಅರಿಯಲು ಈ ಪುಸ್ತಕ ನೆರವಾಗುತ್ತದೆ.‌ ನನ್ನ ಶ್ರಮ, ಫಲವನ್ನು ಈ ಪುಸ್ತಕದ ‌ಮೂಲಕ ತಿಳಿದುಕೊಳ್ಳಬಹುದು ಎಂದರು.

    ಸಮಾರಂಭದ ನಂತರ ಮಾಧ್ಯಮಗಳಿಗೆ ಹೇಳಿಕೆ ನೀಡಿದ ಡಿಸಿಎಂ ಅವರು ಜಾತಿಗಣತಿಗೆ ಮಾಹಿತಿ ನೀಡುವುದಿಲ್ಲ ಎನ್ನುವ ಸುಧಾಮೂರ್ತಿ ಅವರ ಹೇಳಿಕೆ ಬಗ್ಗೆ ಕೇಳಿದಾಗ, ʻಯಾರನ್ನೂ ಮಾಹಿತಿ ನೀಡಿ ಎಂದು ಬಲವಂತ ಮಾಡಲು ಆಗುವುದಿಲ್ಲ. ಇದು ಅವರ ಇಚ್ಚೆʼ ಎಂದರು.

  • ಅವನ್ಯಾರು ನನಗೆ ಮಂತ್ರಿಗಿರಿ ಕೊಡೋಕೆ, ನಾನು ಸೇಲ್ ಆಗಿಲ್ಲ: ವಿಶ್ವನಾಥ್ ತಿರುಗೇಟು

    ಅವನ್ಯಾರು ನನಗೆ ಮಂತ್ರಿಗಿರಿ ಕೊಡೋಕೆ, ನಾನು ಸೇಲ್ ಆಗಿಲ್ಲ: ವಿಶ್ವನಾಥ್ ತಿರುಗೇಟು

    ಬೆಂಗಳೂರು: ಅವನ್ಯಾರು ನನಗೆ ಮಂತ್ರಿ ಸ್ಥಾನ ಕೊಡೋಕೆ? ನಾನು ಸೇಲ್ ಆಗಿಲ್ಲ ಎಂದು ವಿಶ್ವನಾಥ್ ಅವರು ಸಚಿವ ಸಾರಾ ಮಹೇಶ್ ಆರೋಪಕ್ಕೆ ಕೆಂಡಾಮಂಡಲರಾಗಿದ್ದಾರೆ.

    ಪಬ್ಲಿಕ್ ಟಿವಿ ಜೊತೆ ಮತನಾಡಿದ ಅವರು, ನಾನು ಸಾರಾ ಮಹೇಶ್ ಆರೋಪ ಮಾಡಿರುವುದನ್ನ ನೋಡಿದೆ. ಅವರು ತೋಟದ ಮನೆ ವಿಚಾರ ನಿಜ. ಅಲ್ಲಿಗೆ ನಾನು ಸ್ನೇಹಿತನಾಗಿ ಹೋಗಿದ್ದೆ. ನಾವು ಚುನಾವಣೆಯಲ್ಲಿ ಮಾಡಿಕೊಂಡಿದ್ದಂತಹ ಸಾಲದ ಬಗ್ಗೆ ಕೂಡ ನಾವು ಮಾತನಾಡಿದ್ದೇವು. ಆದರೆ 28 ಕೋಟಿಗೆ ನಾವು ಸೇಲ್ ಆಗಿದ್ದೇವೆ ಎಂದು ಸಾರಾ ಮಹೇಶ್ ಹೇಳಿದ್ದು ನಿಜಕ್ಕೂ ಮನಸಿಗೆ ನೋವಾಯ್ತು ಎಂದರು.

    ಸುಮಾರು 40 ವರ್ಷದಿಂದ ಪ್ರಮಾಣಿಕತೆಯನ್ನು ನಾನು ಕಾಪಾಡಿಕೊಂಡು ಬಂದಿದ್ದೇನೆ. ಈಗ ನಾನು ಸದನದಲ್ಲಿ ಇಲ್ಲವಲ್ಲ, ನಾನು ವಾಪಾಸ್ ಬಂದಮೇಲೆ ಅವರಿಗೆ ಉತ್ತರ ಕೊಡುತ್ತೇನೆ. ಸದನದಲ್ಲಿ ಓರ್ವ ಶಾಸಕ ಗೈರು ಹಾಜರಿ ಹಾಕಿರುವಾಗ ಅವರ ಬಗ್ಗೆ ಬೇರೆ ನಾಯಕರು ಈ ರೀತಿ ಮಾತನಾಡಲು ಸ್ಪೀಕರ್ ಅವಕಾಶ ಕೊಟ್ಟಿರುವುದು ಸರಿಯಲ್ಲ. ಮಾತನಾಡಲು ಬೇಕಾದಷ್ಟಿದೆ, ಸಿಎಂ ನಮ್ಮನ್ನು ಯಾವ ರೀತಿ ನಡೆಸಿಕೊಂಡರು ಎನ್ನುವ ಬಗ್ಗೆ ಆಮೇಲೆ ಹೇಳುತ್ತೇನೆ. ಸಾರಾ ಮಹೇಶ್ ಆರೋಪವನ್ನು ನಾನು ತಿರಸ್ಕಾರ ಮಾಡುತ್ತಿದ್ದೇನೆ. ಮುಂದೆ ಈ ಬಗ್ಗೆ ನಾನು ಕಾನೂನು ಹೋರಾಟವನ್ನು ಕೂಡ ಮಾಡುತ್ತೇನೆ. ಶಾಸನ ಸಭೆಯಲ್ಲೂ ಕೂಡ ಈ ಬಗ್ಗೆ ನಾನು ಪ್ರಸ್ತಾಪ ಮಾಡುತ್ತೇನೆ ಎಂದರು.

    ಸಾರಾ ಮಹೇಶ್ ಅವರು ಎಲ್ಲರನ್ನೂ ಜಾತಿ ಆಧಾರದ ಮೇಲೆ ಮಾತನಾಡಿಸುತ್ತಾರೆ. ಅದಕ್ಕೆ ನಾನು ಹಲವು ಸಾರಿ ಸಿಎಂ ಬಳಿ ಈ ಬಗ್ಗೆ ಹೇಳಿದ್ದೆ, ನಿಮ್ಮ ಸಚಿವ ಸಾರಾಸಗಟಾಗಿ ಎಲ್ಲರ ಬಗ್ಗೆ ಜಾತಿ ಹಿಡಿದು ಮಾತನಾಡುತ್ತಾರೆ ಎಂದು ಗಮನಕ್ಕೆ ತಂದಿದ್ದೆ. ಸಾರಾ ಮಹೇಶ್ ಅವರು ಬರೀ ಚಾಡಿ ಹೇಳುತ್ತಾರೆ. ಸರ್ಕಾರದ ಈ ಸ್ಥಿತಿಗೆ ಅವರು ಕೂಡ ಒಂದು ರೀತಿ ನೇರ ಕಾರಣ. ಅವರ ದುರಹಂಕಾರ, ತಿಂಗಳು ತಿಂಗಳಿಗೆ ಕೊಡುತ್ತೇನೆ ತೆಗೆದುಕೊಂಡು ಹೋಗು ಅನ್ನೋಕೆ ನಮ್ಮನ್ನೆಲ್ಲಾ ಏನು ಅಂದುಕೊಂಡಿದ್ದಾನೆ ಎಂದು ಪ್ರಶ್ನಿಸಿ ಗರಂ ಆದರು.

    ನಾನು ವಿಶೇಷ ವಿಮಾನದಲ್ಲಿ ಪ್ರಯಾಣಿಸಿದ್ದು ಬೇರೆಯ ವಿಚಾರ. ಆ ಸಂದರ್ಭ ಬಂದಾಗ ನಾನು ಅದರ ಬಗ್ಗೆ ಮಾತನಾಡುತ್ತೆನೆ. ವಿಮಾನದಲ್ಲಿ ಹೋಗುವವರೆಲ್ಲ ಯಾರ ಹತ್ತಿರವಾದರೂ ದುಡ್ಡು ತೆಗೆದುಕೊಂಡೆ ಹೋಗುತ್ತಾರಾ? ಹಾಗೆ ಹೋಗಿ ಬರುತ್ತಾರೆ. ಅದು ಬೇರೆಯ ವಿಚಾರವಾಗುತ್ತದೆ ಎಂದು ಕಿಡಿಕಾರಿದರು. ನಾನು 28 ಕೋಟಿ ತೆಗೆದುಕೊಂಡಿರುವುದನ್ನ ಇವರು ಸಾಬೀತು ಮಾಡಲಿ. ಈ ದುಡ್ಡು ಯಾರು ಕೊಟ್ಟರು? ಇವನೆಲ್ಲಿ ಅದನ್ನು ನೋಡಿದ? ಎನ್ನುವುದನ್ನ ಸಾಬೀತು ಮಾಡಲಿ. ನಾನು ಸಾಲ ಮಾಡಿದ್ದು ನಿಜ, ಇವತ್ತಿಗೂ ಸಾಲ ಇದೆ. ಚುನಾವಣೆ ಸಾಲ ಮಾಡದಿದ್ದರೆ ಹೇಗೆ ಆಗುತ್ತೆ. ಪಾಪ ಸಾರಾ ಮಹೇಶ್ ಕರಿಯುತ್ತಿದ್ದಾರೆ ಅಂತ ತೋಟಕ್ಕೆ ಹೋದೆ. ಆಗ ನಿಮ್ಮ ಸಾಲ ಇದ್ದರೆ ತೀರಿಸು ಎಂದು ಸಿಎಂ ನನಗೆ ಹೇಳಿದ್ದಾರೆ ಎಂದರು. ಇವೆಲ್ಲಾ ವಿಚಾರ ಸಿಎಂ ಅವರಿಗೂ ಗೊತ್ತಿದೆ ಎಂದು ಏಕವಚನದಲ್ಲೆ ವಾಗ್ದಾಳಿ ನಡೆಸಿದರು.

    ಆದ್ರೆ ನಮ್ಮ ಅಸಹಾಯಕತೆಯನ್ನ ಇವರು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ. ಮಂತ್ರಿ ಸ್ಥಾನ ಬೇಕು ಅಂತ ನನಗೆ ಕೇಳೋಕೆ ಇವನ್ಯಾರು? ಮುಖ್ಯಮಂತ್ರಿನಾ? ನಾನು ಮೊದಲೆ ಹೇಳಿದ್ದೆ ನನಗೆ ಮಂತ್ರಿಗಿರಿ ಬೇಡ ಎಂದು ಸಿಎಂಗೆ ಹೇಳಿದ್ದೆ. ಸರ್ಕಾರದಲ್ಲಿ ನಿಮ್ಮ ಜೊತೆ ನಿಂತು ಕೆಲಸ ಮಾಡಲು ಇಷ್ಟ ಪಡುತ್ತೇನೆ ಆದ್ರೆ ಸಚಿವ ಸ್ಥಾನ ಬೇಡ ಅಂದಿದ್ದೆ.

    ಏನು ನಡಿತೋ, ಏನು ಗೊತ್ತಾಯ್ತೋ. ಇವರು ಮಾತ್ರ ಸುಳ್ಳಿನ ಕಂತೆ ಹೇಳಿಕೊಂಡು ಇದ್ದಾರೆ. ಇವತ್ತಿನ ಸದನದಲ್ಲಿ ಯಾರು ಯಾರ ಮೇಲೆ ಆರೋಪ ಮಾಡಬೇಕು ಅನ್ನೊದನ್ನ ನಿರ್ಧರಿಸಿಕೊಂಡು ಬಂದ ಹಾಗೆ ಇದೆ. ಸಿಎಂ ಗೆ ಎಲ್ಲಾ ಮಾಹಿತಿ ಗೊತ್ತಿದ್ದರೆ ಇಟ್ಟುಕೊಟ್ಟಲಿ. ಇಲ್ಲವಾದರೆ ಜನರಿಗೆ ಹೇಳಲಿ ಅದಕ್ಕೇನು? ನಾನು ಸ್ವತಂತ್ರ ವ್ಯಕ್ತಿ. ನಾನು ಎಲ್ಲಿಗೆ ಹೋಗಿದ್ದೆ ಎಂದು ಕೇಳಲು ಇವರ್ಯಾರು? ನಾನು ಸ್ವಚ್ಛವಾಗಿದ್ದೆನೆ, ನನಗೆ ಬೆರಳು ಮಾಡಿ ಹೇಳುವಂತ ಕೆಲಸವನ್ನ ನಾನು ಮಾಡಿಲ್ಲ. ಇಲ್ಲಿ ಶಕ್ತಿವಂತನಲ್ಲದಿದ್ದರೂ ಪ್ರಾಮಾಣಿಕತೆಯಿಂದ ಬದುಕುವವರ ಪಟ್ಟಿಯಲ್ಲಿ ನಾನಿದ್ದೇನೆ. ನನ್ನ ಮೇಲೆ ಆರೋಪ ಮಾಡಿದಕ್ಕೆ ಸಿಎಂ ಹಾಗೂ ಮಹೇಶ್ ಮೇಲೆ ನನಗೆ ಬೇಸರವಾಯ್ತು. ಸಾರಾ ಮಹೇಶ್ ಅವರಿಂದ ನನ್ನ ವಿರುದ್ಧ ಆರೋಪ ಮಾಡುವಂತೆ ಹೇಳಿಕೊಟ್ಟಿದ್ದಾರೆ ಎಂದು ಹೇಳಿದರು.

    ಇವತ್ತು ನನ್ನ ವಿರುದ್ಧ ಮಾಡಿರುವ ಆರೋಪಕ್ಕೆ ನಾನು ಕಾನೂನಾತ್ಮಕವಾಗಿ ಹೋರಾಡುತ್ತೇನೆ. ಮಹೇಶ್ ಸವಾಲು ಸ್ವೀಕರಿಸಲು ನಾನು ಸಿದ್ಧನಿದ್ದೇನೆ ಎಂದರು.

    ಸಾರಾ ಮಹೇಶ್ ಹೇಳಿದ್ದೇನು?

    ವಿಶ್ವನಾಥ್‍ಗೆ ಬಿಜೆಪಿ ಅವರು 28 ಕೋಟಿ ರೂ. ಆಫರ್ ಕೊಟ್ಟಿದ್ದಾರೆ ಎಂದು ಸಾರಾ ಮಹೇಶ್ ಗಂಭೀರವಾಗಿ ಆರೋಪ ಮಾಡಿದ್ದಾರೆ. ಲೋಕಸಭಾ ಚುನಾವಣೆಗೆ ಮೊದಲು ಅಂದರೆ ನಾಲ್ಕು ತಿಂಗಳ ಹಿಂದೆ ಅವರೇ, “ಪ್ರತಿಪಕ್ಷಗಳಿಗೆ ಅಧಿಕಾರ ಹಿಡಿಯುವ ಹಂಬಲ, ಕಾತುರ ಇರುವುದು ಸಹಜವಾಗಿದೆ. ಆದರೆ ಅದಕ್ಕಾಗಿ ವಾಮ ಮಾರ್ಗ ಹಿಡಿಯುವುದು ಸರಿಯಿಲ್ಲ. ರಾಜ್ಯದಲ್ಲಿ ಸಂವಿಧಾನಾತ್ಮಕವಾಗಿ ಮೈತ್ರಿ ಸರ್ಕಾರ ಆಡಳಿತದಲ್ಲಿದೆ. ಅದನ್ನು ಉರುಳಿಸುತ್ತಿರುವ ಪ್ರಯತ್ನಕ್ಕೆ ಕೈ ಹಾಕುತ್ತಿರುವುದು ಬಿಜೆಪಿಗೆ ಶೋಭೆ ತರುವುದಲ್ಲ. ಅದೇ ರೀತಿ ಕಪ್ಪು ಹಣ ಉಪಯೋಗಿಸಬಾರದು” ಎಂದು ಹೇಳಿಕೆ ಕೊಟ್ಟಿದ್ದರು.

    ಆದರೆ ನಾನು ಅಮೆರಿಕಕ್ಕೆ ಹೋಗುವ ಮೊದಲು ಸಾ.ರಾ ಮಹೇಶ್ ಸರಿಯಿಲ್ಲ. ಅವರ ಧೋರಣೆಗೆ ಬೇಸತ್ತು ಹೋಗುತ್ತಿದ್ದೇನೆ ಎಂದು ಹೇಳಿದ್ದರು. ಆಗ ನಾನು ಅವರನ್ನು ತೋಟಕ್ಕೆ ಕರೆಸಿ, ಏನ್ ಸರ್ ಮಂತ್ರಿ ಆಗಬೇಕೆಂಬ ಆಸೆ ಇದೆಯೇ ಹೇಳಿ ಸರ್ ಎಂದು ಕೇಳಿದೆ. ಅದಕ್ಕೆ ಅವರು ಇಲ್ಲ, ಇಲ್ಲ ನನಗೆ ಅದೇನು ಬೇಡ ಎಂದರು. ಅದಕ್ಕೆ ನಾನು ಮತ್ತೆ ಬೇರೆ ಏನ್ ಬೇಕು ಹೇಳಿ ಸರ್ ಎಂದು ಕೇಳಿದೆ. ಅದಕ್ಕೆ ಅವರು ಚುನಾವಣೆಗೆ ನಾನು ಸಾಲ ಮಾಡಿಕೊಂಡಿದ್ದೇನೆ. ಅದರಿಂದ ಸಮಸ್ಯೆಯಾಗಿದೆ ಎಂದಿದ್ದರು.

    ಇದೇ ವೇಳೆ ಅವರು, ನನ್ನನ್ನು ಬಿಜೆಪಿಯವರು ಕರೆದಿದ್ದರು. ಜೊತೆಗೆ 28 ಕೋಟಿ ರೂ. ಕೊಡುತ್ತೇನೆ ಎಂದಿದ್ದಾರೆ. ಆದರೆ ದೇವೇಗೌಡರು ಈ ಕಾಲದಲ್ಲಿ ನನ್ನನ್ನು ನಂಬಿ ಮೂಲೆಯಲ್ಲಿ ಇದ್ದವನ ಕರೆದುಕೊಂಡು ಬಂದು ಶಾಸಕನ ಸ್ಥಾನ ಕೊಟ್ಟರು. ಅವರಿಗೆ ಮೋಸ ಮಾಡಲ್ಲ ಎಂದಿದ್ದೇನೆ. ನೀವು ಸಾಲ ತೀರಿಸಲು ಒಂದು ವ್ಯವಸ್ಥೆ ಮಾಡಿ ಎಂದು ಕೇಳಿಕೊಂಡರು. ಬೇಕಿದ್ದರೆ ಅವರನ್ನು ಕರೆಸಿ ಇಲ್ಲೆ ಕೇಳಿ ನಾನು ಹೇಳುತ್ತಿರುವುದು ಸತ್ಯ. ಇಲ್ಲವಾದಲ್ಲಿ ಇನ್ಮುಂದೆ ಯಾವತ್ತು ಬಿಳಿ ಬಟ್ಟೆ ಹಾಕಲ್ಲ. ಕೈ ಮುಗಿದು ಸಾರ್ವಜನಿಕರ ಮುಂದೆ ವೋಟು ಕೇಳಲ್ಲ ಎಂದು ಮಹೇಶ್ ಶಪಥ ಮಾಡಿದರು.