– ಸಂಸದ ಪಿ.ಸಿ ಮೋಹನ್ – ಪ್ರದೀಪ್ ಈಶ್ವರ್ ನಡುವೆ ಜೋರು ಜಗಳ
ಬೆಂಗಳೂರು: ಇಲ್ಲಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯುತ್ತಿದ್ದ ಕಾರ್ಯಕ್ರಮದ ವೇಳೆ ಶಾಸಕ ಪ್ರದೀಪ್ ಈಶ್ವರ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದೆ. ಈ ವೇಳೆ ಆಕ್ರೋಶಭರಿತರಾದ ಪ್ರದೀಪ್ ಈಶ್ವರ್ ಬಿಜೆಪಿ ಕಾರ್ಯಕ್ರರ್ತರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಕೈವಾರ ತಾತಯ್ಯ ಯೋಗಿನಾರೇಯಣ ಯತೀಂದ್ರರ 299ನೇ ಜಯಂತ್ಯುತ್ಸವ ಕಾರ್ಯಕ್ರಮದ ವೇಳೆ ಪ್ರದೀಪ್ ಈಶ್ವರ್, ಮಕ್ಕಳ ಶಿಕ್ಷಣ ಕುರಿತಂತೆ ಮಾತನಾಡುತ್ತಿದ್ದರು. ಈ ವೇಳೆ ಕೆಲ ಬಿಜೆಪಿ ಕಾರ್ಯಕರ್ತರು ಆಕ್ಷೇಪ ಎತ್ತಿದರು. ಇದರಿಂದ ರೊಚ್ಚಿಗೆದ್ದ ಶಾಸಕ, ಕೂತ್ಕೊಳ್ರಿ.. ನೀವೆಲ್ಲ ಸಮುದಾಯ ಗುಣಗಾನ ಮಾಡೋಕೆ ಬಂದಿದ್ದೀರಿ.. ಇದೇನ್ ಬಿಜೆಪಿ ಪ್ರೋಗ್ರಾಮ್ ಅಂದುಕೊಂಡಿದ್ದೀರಾ? ಕಾಂಗ್ರೆಸ್ ಸರ್ಕಾರ ಇದೋದು, ಬಿಜೆಪಿ ಗುಣಗಾನ ಮಾಡೋದು ಮುಚ್ಚಬೇಕು ಇಲ್ಲಿ. ಬಾಯಿ ಮುಚ್ಕೊಂಡು ಕೂತ್ಕೊಬೇಕು. ಸಿದ್ದರಾಮಯ್ಯನ ಸರ್ಕಾರ ಇರೋದು ರಾಜ್ಯದಲ್ಲಿ ನಿಮ್ಮಪ್ಪನ ಸರ್ಕಾರ ಅಲ್ಲ ಅಂತ ಏಕವಚನದಲ್ಲೇ ಲೇವಡಿ ಮಾಡಿದ್ದಾರೆ.
ಮುಂದುವರಿದು… ಇದು ಸಿದ್ದರಾಮಯ್ಯನ ಪ್ರೋಗ್ರಾಂ, ನಿಮ್ಮಪ್ಪನ ಪ್ರೋಗ್ರಾಂ ಅಲ್ಲ, ಸಿದ್ದರಾಮಯ್ಯನ ಕಾರ್ಯಕ್ರಮ ನಡೆಯುತ್ತಿರೋದು ಇಲ್ಲಿ.. ಗೆಟ್ ಲಾಸ್ಟ್ ಅಂತ ಕಿಡಿ ಕಾರಿದ್ದಾರೆ. ನಮಗೂ ನಮ್ಮ ಪಾರ್ಟಿ ಸಿದ್ಧಾಂತಗಳಿರುತ್ತೆ. ನೀವು ನಿಮ್ಮ ಪಕ್ಷವನ್ನ ಗುಣಗಾನ ಮಾಡಿದ್ರೆ, ನಾವು ನಮ್ಮ ಪಕ್ಷವನ್ನ ಗುಣಗಾನ ಮಾಡಬೇಕಾಗುತ್ತೆ ಅಂತ ವಾರ್ನಿಂಗ್ ಕೊಟ್ಟಿದ್ದಾರೆ. ಈ ವೇಳೆ ಹಿಂಗೆಲ್ಲ ಹೇಳಬೇಡ್ರಿ ಅಂತ ಪ್ರದೀಪ್ ಈಶ್ವರ್ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.
ಈ ಬೆಳವಣಿಗೆಯಿಂದ ಅಸಮಾಧಾನಗೊಂಡ ಬಿಜೆಪಿ ಸಂಸದ ಪಿ.ಸಿ ಮೋಹನ್.. ಪ್ರದೀಪ್ ಈಶ್ವರ್ ಅವರೇ ನಿಮಗೆ ಉತ್ಸಾಹ ಇದೆ. ಆದ್ರೆ ನೀವು ಇಲ್ಲಿ ಕೂತ್ಕೊಂಡು ಇದು ಸಿದ್ದರಾಮಯ್ಯನ ಪ್ರೋಗ್ರಾಂ ಅಂದ್ರೆ, ನಾನು ಬಿಜೆಪಿ ಸಂಸದ ಇಲ್ಲಿ ಇರಬೇಕೋ ಬೇಡ್ವೋ ಹೇಳ್ರಿ? ಅಂತ ಜೋರು ದನಿಯಲ್ಲೇ ಕೂಗಿದ್ದಾರೆ. ಈ ವೇಳೆ ವೇದಿಕೆಯಲ್ಲಿದ್ದ ಗಣ್ಯರು ಹಾಗೂ ಕಾರ್ಯಕ್ರಮ ಆಯೋಜಕರು ಆಕ್ರೋಶಭರಿತರ ಮನವೊಲಿಸುವ ಪ್ರಯತ್ನ ಮಾಡಿದರು.
ಮೈಸೂರಿನಲ್ಲಿಂದು (Mysuru) ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ (BY Vijayendra) ಬಣದಿಂದ ಸುದ್ದಿಗೋಷ್ಠಿ ಹಮ್ಮಿಕೊಳ್ಳಲಾಗಿತ್ತು. ಮಾಜಿ ಸಚಿವ ರೇಣುಕಾಚಾರ್ಯ, ಕಟ್ಟಾ ಸುಬ್ರಹ್ಮಣ್ಯ ನಾಯ್ಡು, ಬಿ.ಸಿ ಪಾಟೀಲ್, ಹಾಲಪ್ಪ ಸೇರಿದಂತೆ ಹಲವರು ಸುದ್ದಿಗೋಷ್ಠಿಯಲ್ಲಿ ಭಾಗಿಯಾಗಿದ್ದರು. ಗೋಷ್ಠಿ ನಡುವೆ ʻಯತ್ನಾಳ್ ಉಚ್ಚಾಟಿಸಿ. ಬರೀ ಸುದ್ದಿಗೋಷ್ಠಿ ಮಾಡಿ ಏನೂ ಪ್ರಯೋಜನವಿಲ್ಲʼ ಎಂದು ಕಾರ್ಯಕರ್ತರು ಗದ್ದಲ ಎಬ್ಬಿಸಿದ್ದಾರೆ. ಯತ್ನಾಳ್ ವಿರುದ್ಧ ಧಿಕ್ಕಾರ ಕೂಗುತ್ತಾ, ಮೊದಲು ಅವನನ್ನ ಪಕ್ಷದಿಂದ ಕಿತ್ತೊಗೆಯಿರಿ ಎಂದು ಎಂದು ಆಕ್ರೋಶ ಹೊರಹಾಕಿದ್ದಾರೆ.
ಸದ್ಯ ವಕ್ಫ್ ವಿರೋಧಿ ಹೋರಾಟದಲ್ಲಿ ಭುಗಿಲೆದ್ದಿರುವ ಭಿನ್ನಮತ ಶಮನಕ್ಕಾಗಿ ಹೈಕಮಾಂಡ್ ಮಧ್ಯಪ್ರವೇಶ ಮಾಡಿದ್ದು, ಡಿ.3ರಂದು ಕೋರ್ ಕಮಿಟಿ ಸಭೆ ನಿಗದಿ ಮಾಡಿದೆ. ಅಂದು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ತರುಣ್ ಚುಗ್ ರಾಜ್ಯಕ್ಕೆ ಬರಲಿದ್ದಾರೆ. ರಾಜ್ಯಾಧ್ಯಕ್ಷ ವಿಜಯೇಂದ್ರ ಬಣ ಹಾಗೂ ವಕ್ಫ್ ಅಭಿಯಾನ ಕೈಗೊಂಡಿರುವ ಯತ್ನಾಳ್ ಬಣದಿಂದ ಮಾಹಿತಿ ಸಂಗ್ರಹಿಸಲಿದ್ದಾರೆ. ತರುಣ್ ಚುಗ್ ವರದಿ ಆಧರಿಸಿ ದೆಹಲಿ ನಾಯಕರು ಕ್ರಮ ತೆಗೆದುಕೊಳ್ಳಲಿದ್ದಾರೆ ಎಂದು ಹೈಕಮಾಂಡ್ ಹೇಳಿದೆ.
ಇತ್ತೀಚೆಗೆ ವಿಜಯಪುರ ಸೇರಿದಂತೆ 5 ಜಿಲ್ಲೆಗಳಲ್ಲಿ ವಕ್ಫ್ ವಿರುದ್ಧ ಹೋರಾಟ ಹಮ್ಮಿಕೊಂಡಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಮಾಜಿ ಸಿಎಂ ಯಡಿಯೂರಪ್ಪ, ಹಿರಿಯ ನಾಯಕ ಡಿ.ವಿ ಸದಾನಂದಗೌಡ ಸೇರಿದಂತೆ ಹೈಕಮಾಂಡ್ ವಿರುದ್ಧ ಸರಣಿ ವಾಗ್ದಾಳಿ ನಡೆಸುತ್ತಿದ್ದಾರೆ. ಈ ಮಧ್ಯೆ ಮಾಜಿ ಸಚಿವ ಎಂ.ಪಿ ರೇಣುಕಾಚಾರ್ಯ ಎಂಟ್ರಿಯಾಗಿದ್ದು, ವಿಜಯೇಂದ್ರ ಪರ ಬ್ಯಾಟಿಂಗ್ ಮಾಡುತ್ತಾ, ಯತ್ನಾಳ್‌ರನ್ನ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ. ಅದರಂತೆ ಯತ್ನಾಳ್ ವಿಚಾರವಾಗಿ ಇಂದು ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸುವ ವೇಳೆ ಕಾರ್ಯಕರ್ತರು ಪಕ್ಷದಿಂದ ಉಚ್ಚಾಟಿಸುವಂತೆ ಒತ್ತಾಯಿಸಿದ್ದಾರೆ.
ಉಡುಪಿ: ವಕ್ಫ್ ವಿವಾದಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಹಾಗೂ ಸಚಿವ ಜಮೀರ್ ಅಹ್ಮದ್ ವಿರುದ್ಧ ಧಿಕ್ಕಾರ ಕೂಗುತ್ತಾ ಬಿಜೆಪಿ ಕಾರ್ಯಕರ್ತರು ಡಿಸಿ ಕಚೇರಿಗೆ ಮುತ್ತಿಗೆ ಹಾಕಿದರು.
ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ, ಜಿಲ್ಲಾ ಬಿಜೆಪಿ ಅಧ್ಯಕ್ಷ ಕಿಶೋರ್ ಕುಮಾರ್ ನೇತೃತ್ವದಲ್ಲಿ ಮಣಿಪಾಲದ ಕಾಯಿನ್ ಸರ್ಕಲ್‌ನಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ಪ್ರತಿಭಟನಾ ಮೆರವಣಿಗೆ ಮಾಡಲಾಯಿತು.
ಸಿಎಂ ಸಿದ್ದರಾಮಯ್ಯ ಹಾಗೂ ಸಚಿವ ಜಮೀರ್ ವಿರುದ್ಧ ಧಿಕ್ಕಾರ ಕೂಗಿ ಬಿಜೆಪಿ ಕಾರ್ಯಕರ್ತರು ಆಕ್ರೋಶ ಹೊರಹಾಕಿದರು. ಜಿಲ್ಲಾಧಿಕಾರಿ ಕಚೇರಿ ಗೇಟ್ ಮುಂದೆ ಪ್ರತಿಭಟನಾ ಸಭೆ ಆಯೋಜಿಸಿದ್ದರು. ಪ್ರತಿಭಟನಾ ಸಭೆಯ ಬಳಿಕ ಜಿಲ್ಲಾಧಿಕಾರಿ ಕಚೇರಿಗೆ ನುಗ್ಗಲು ಯತ್ನಿಸಿದರು.
ಈ ವೇಳೆ ಪೊಲೀಸರು ಮತ್ತು ಕಾರ್ಯಕರ್ತರ ನಡುವೆ ನೂಕಾಟ ತಳ್ಳಾಟವಾಯಿತು. ಜಿಲ್ಲಾಧಿಕಾರಿ ಕಚೇರಿಯ ದ್ವಾರಕ್ಕೆ ಬಂದ ಡಿಸಿ ಡಾ.ವಿದ್ಯಾ ಕುಮಾರಿ ಅವರಿಗೆ ಸೂಕ್ತ ಕ್ರಮಕ್ಕೆ ಆಗ್ರಹಿಸಿ ಮನವಿ ಸಲ್ಲಿಸಿದರು.
ಮುಂದಿನ ದಿನಗಳಲ್ಲಿ ಅಹೋರಾತ್ರಿ ಹೋರಾಟದ ಎಚ್ಚರಿಕೆ ನೀಡಿದ್ದಾರೆ. ಗುರುವಾರ ಮತ್ತು ಶುಕ್ರವಾರ ಪಹಣಿ ಪರಿಶೀಲನೆ ಅಭಿಯಾನ ನಡೆಸಲಿದ್ದಾರೆ. ತಾಲೂಕು ಕಚೇರಿಗಳಿಗೆ ತೆರಳಿ ಬಿಜೆಪಿ ಕಾರ್ಯಕರ್ತರುಪರಿಶೀಲನೆ ನಡೆಸಿದ್ದಾರೆ. ಈ ಮೂಲಕ ಕಂದಾಯ ಇಲಾಖೆ ಹಾಗೂ ಸರ್ಕಾರಕ್ಕೆ ಒತ್ತಡ ಹೇರಲು ತಂತ್ರಗಾರಿಕೆ ರೂಪಿಸಿದ್ದಾರೆ.
– ಮೋದಿ ಸರ್ಕಾರ 10 ವರ್ಷಗಳಲ್ಲಿ ಕರ್ನಾಟಕಕ್ಕೆ 4.91 ಲಕ್ಷ ಕೋಟಿ ರೂ. ಅನುದಾನ ಕೊಟ್ಟಿದೆ
– ಪಾಕಿಸ್ತಾನದವರು ಬಾಂಬ್ ಹಾಕಿ ಹೋದರೂ ಮನಮೋಹನ್ ಸಿಂಗ್ ಸುಮ್ಮನಿದ್ದರು
– ಕಾಂಗ್ರೆಸ್, I.N.D.I.A ಒಕ್ಕೂಟದ ವಿರುದ್ಧ ಅಮಿತ್ ಶಾ ವಾಗ್ದಾಳಿ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಮ್ಮ ಖುರ್ಚಿ ಉಳಿಸಿಕೊಳ್ಳುವುದೇ ಚಿಂತೆಯಾಗಿದೆ. ಏಕೆಂದರೆ ಇನ್ನೊಬ್ಬರು ಸಿಎಂ ಕುರ್ಚಿ ಎಳೆಯುತ್ತಿದ್ದಾರೆ ಎಂದು ಕೇಂದ್ರ ಗೃಹಸಚಿವ ಅಮಿತ್ ಶಾ, ಸಿಎಂ-ಡಿಕೆಶಿ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದರು.
ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಬೃಹತ್ ಸಮಾವೇಶದಲ್ಲಿ ಮಾತನಾಡಿದ ಅವರು, ಸಿಎಂ-ಡಿಸಿಎಂ ವಿರುದ್ಧ ವಾಗ್ದಾಳಿ ನಡೆಸಿದರು. ಇದೇ ವೇಳೆ `ನನ್ನ ತೆರಿಗೆ ನನ್ನ ಹಕ್ಕು’ ಕಾಂಗ್ರೆಸ್ ಬೇಡಿಕೆಗೆ ತಿರುಗೇಟು ನೀಡಿದರು. 10 ವರ್ಷಗಳಲ್ಲಿ ಯುಪಿಎ ಕೇವಲ 1.52 ಲಕ್ಷ ಕೋಟಿ ರೂ. ಅನುದಾನ ಮಾತ್ರ ರಾಜ್ಯಕ್ಕೆ ಕೊಟ್ಟಿತ್ತು. ಆದ್ರೆ ಮೋದಿ ಸರ್ಕಾರ ಕಳೆದ 10 ವರ್ಷಗಳಲ್ಲಿ 4.91 ಲಕ್ಷ ಕೋಟಿ ರೂ. ಅನುದಾನ ಕೊಟ್ಟಿದೆ. ಇದು 3 ಪಟ್ಟು ಹೆಚ್ಚಿದೆ ಎಂದು ಹೇಳಿದರು.
ರಾಹುಲ್ ಪರ ಸಂಸದನ ಮನೆಯಲ್ಲಿ 350 ಕೋಟಿ ರೂ. ಸಿಕ್ಕಿದೆ:
ಇಂಡಿಯಾ ಒಕ್ಕೂಟದ ವಿರುದ್ಧ ವಾಗ್ದಾಳಿ ನಡೆಸಿದ ಅಮಿತ್ ಶಾ, ಪ್ರಜಾಪ್ರಭುತ್ವ ಉಳಿಸಿ ಅಂತಿದ್ದಾರೆ, ಪ್ರಜಾಪ್ರಭುತ್ವಕ್ಕೆ ಏನಾಗಿದೆ? 2014ರ ವರೆಗೆ ಭ್ರಷ್ಟಾಚಾರ ನಡೆಯುತ್ತಿತ್ತು. ಭ್ರಷ್ಟಾಚಾರಿಗಳನ್ನ ಜೈಲಿಗೆ ಹಾಕುವ ವಾಗ್ದಾನ ಕೊಟ್ಟಿದ್ದೆವು. ಆ ಕೆಲಸ ಆಗ್ತಿದೆ. ರಾಹುಲ್ ಗಾಂಧಿ ಪರ ಸಂಸದನ ಮನೆಯಲ್ಲಿ 350 ಕೋಟಿ ರೂಪಾಯಿ ಸಿಗುತ್ತೆ, ಮಮತಾ ಬ್ಯಾನರ್ಜಿ ಪಕ್ಷದ ನಾಯಕನ ಮನೆಯಲ್ಲಿ 51 ಕೋಟಿ ರೂಪಾಯಿ ಸಿಕ್ಕಿದೆ. ಅಂತಹವರನ್ನ ಜೈಲಿಗೆ ಹಾಕದೇ ಅರಮನೆಯಲ್ಲಿ ಇಡಬೇಕಾ ಎಂದು ಪ್ರತಿಪಕ್ಷ ನಾಯಕರ ಟೀಕೆಗೆ ತಿರುಗೇಟು ನೀಡಿದರು.
ಸಿದ್ದರಾಮಯ್ಯ ವಿರುದ್ಧ ಕೆಂಡ:
ಮೋದಿ ಸಿಎಎ ಜಾರಿಗೆಗೊಳಿಸಿದಾಗ ಅದನ್ನೂ ಕಾಂಗ್ರೆಸ್ ಜನ ವಿರೋಧಿಸಿದರು. ಯುಪಿಎ 10 ವರ್ಷ ಅಧಿಕಾರದಲ್ಲಿದ್ದಾಗ ಏನಾಯ್ತು ಅನ್ನೋದನ್ನ ಸಿದ್ದರಾಮಯ್ಯ ವಿವರಿಸಲಿ. ಪಾಕಿಸ್ತಾನದಿಂದ ಬಂದು ಬಾಂಬ್ ಹಾಕಿ ಹೋಗ್ತಿದ್ದರೂ, ಅಂದಿನ ಮನಮೋಹನ್ ಸಿಂಗ್ ಮೌನವಾಗಿದ್ದರು. ಆದ್ರೆ ಮೋದಿ ಅವರು ಪಾಕಿಸ್ತಾನದ ಮೇಲೆ ಸರ್ಜಿಕಲ್ ಸ್ಟ್ರೈಕ್ ಮಾಡಿಸಿದರು. ಇದೇ ನಮಗೂ ಅವರಿಗೂ ಇರುವ ವ್ಯತ್ಯಾಸ. ದೇಶದ ಆರ್ಥಿಕತೆ 11ನೇ ಸ್ಥಾನದಲ್ಲಿ ಇತ್ತು, ಈಗ 5ನೇ ಸ್ಥಾನಕ್ಕೆ ಬಂದಿದೆ. ಮತ್ತೊಮ್ಮೆ ಮೋದಿಯನ್ನ ಗೆಲ್ಲಿಸಿದರೆ, ದೇಶ 3ನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮಲಿದೆ ಎಂದು ಶ್ಲಾಘಿಸಿದರು.
ಮೋದಿ ಎಂಬ ಭಾವದಿಂದ ಮತ ಕೇಳಿ:
ಲೋಕಸಭಾ ಚುನಾವಣೆ ತಯಾರಿಗಾಗಿ ಮೋದಿ ನೇತೃತ್ವದಲ್ಲಿ ಚುನಾವಣಾ ಕಣದಲ್ಲಿದ್ದೇವೆ. ಆದ್ರೆ ಮತ್ತೊಂದು ಕಡೆ ಪರಿವಾರ ವಾದ, ಭ್ರಷ್ಟಾಚಾರ ತುಂಬಿರುವ ಐ.ಎನ್.ಡಿ.ಐ.ಎ ಒಕ್ಕೂಟ ಇದೆ. ಎಲ್ಲೇ ಹೋದರೂ ಮೋದಿ ಮೋದಿ ಹೆಸರು ಕೇಳಿ ಬರ್ತಿದೆ. ಕರ್ನಾಟಕದಲ್ಲಿ 2014 ರಲ್ಲಿ ಬಿಜೆಪಿಗೆ 43% ಮತ ಕೊಡೋ ಮೂಲಕ ಗೆಲ್ಲಿಸಿದ್ರಿ, ಈ ಸಲ 60% ಮತ ಕೋಡೋ ಮೂಲಕ ಕರ್ನಾಟಕದ 28 ಕ್ಷೇತ್ರಗಳಲ್ಲಿಯೂ ಗೆಲ್ಲಿಸಬೇಕು. ಬೂತ್ ಮಟ್ಟದ ಪ್ರತಿಯೊಬ್ಬ ಕಾರ್ಯಕರ್ತರು ಸಹ ಮೋದಿ ಎಂಬ ಭಾವನೆಯಿಂದ ಮತ ಕೇಳಿ ಎಂದು ಕರೆ ಕೊಟ್ಟರು.
ಮೋದಿ ಗುಜರಾತ್ ಸಿಎಂ ಆಗಿದ್ದ ಅವಧಿಯಲ್ಲಿ 25 ಪೈಸೆಯಷ್ಟೂ ಭ್ರಷ್ಟಾಚಾರ ಆರೋಪ ಮಾಡಲು ವಿಪಕ್ಷಗಳಿಗೆ ಸಾಧ್ಯವಾಗಲಿಲ್ಲ. ಆದ್ರೆ 10 ವರ್ಷ ಯುಪಿಎ ಅವಧಿಯಲ್ಲಿ 12 ಲಕ್ಷ ಕೋಟಿ ಮೊತ್ತದ ಅಕ್ರಮ ನಡೆದಿದೆ. ಡಿಕೆ ಶಿವಕುಮಾರ್‌ಗೂ ಭ್ರಷ್ಟಾಚಾರಕ್ಕೂ ಬಿಡದ ನಂಟಿದೆ. ಇಂತಃ ಭ್ರಷ್ಟ ಕಾಂಗ್ರೆಸ್ ಮೋದಿ ಎದುರು ನಿಂತಿದೆ ಎಂದು ಹೇಳಿದರು.
ಭ್ರಷ್ಟಾಚಾರ ಮಾಡೋರು ಜನಸೇವೆ ಮಾಡಲ್ಲ:
ಕಾಂಗ್ರೆಸ್ ವಿರುದ್ಧ ವಾಗ್ದಾಳಿ ಮುಂದುವರಿಸಿದ ಅಮಿತ್ ಶಾ, ಭ್ರಷ್ಟಾಚಾರ ಮಾಡೋರು ಯಾವತ್ತಿಗೂ ಜನಸೇವೆ ಮಾಡಲ್ಲ. ಮೋದಿ 10 ಲಕ್ಷ ಮಹಿಳೆಯರಿಗೆ ಉಜ್ವಲ ಗ್ಯಾಸ್ ಕೊಟ್ಟಿದ್ದಾರೆ, 14 ಲಕ್ಷ ಜನರಿಗೆ ನಲ್ಲಿ ನೀರು, 60 ಲಕ್ಷ ಬಡವರಿಗೆ 5 ಲಕ್ಷ ರೂ.ವರೆಗೆ ವಿಮೆ ಸಿಗುವಂತೆ ಮಾಡಿ ಬಡವರಿಗೆ ಹೊಸ ಜೀವನೋತ್ಸಾಹ ತುಂಬಿದ್ದಾರೆ. 370ನೇ ವಿಧಿ ರದ್ದು ಮಾಡಿದ್ದಾರೆ. 370ನೇ ವಿಧಿ ರದ್ದು ಮಾಡಿದಾಗ ಕಾಂಗ್ರೆಸ್ ರಕ್ತದ ಹೊಳೆ ಹರಿಯುತ್ತದೆ ಎಂದಿದ್ದರು, ಆದರೀಗ ಒಂದು ಸಣ್ಣ ಕಲ್ಲೂ ಸಹ ಹೊಡೆಯಲಾಗುತ್ತಿಲ್ಲ ಎಂದು ತಿರುಗೇಟು ನೀಡಿದರು.
ಅಷ್ಟೇ ಅಲ್ಲ ಶತಮಾನಗಳಿಂದ ಬಗೆಹರಿಯದ ಸಮಸ್ಯೆಗೆ ಮೋದಿ ಅವರ ಕಾಲದಲ್ಲಿ ಪರಿಹಾರ ಸಿಕ್ಕಿತು. ಮೋದಿಯವರು ರಾಮಮಂದಿರ ಕಟ್ಟಿಸಿ, ಪ್ರಾಣಪ್ರತಿಷ್ಠಾಪನೆಯನ್ನೂ ನೇರವೇರಿಸಿದರು. ಸೋನಿಯಾ, ರಾಹುಲ್, ಖರ್ಗೆ ಎಲ್ಲರಿಗೂ ಪ್ರಾಣ ಪ್ರತಿಷ್ಠಾಪನೆಗೆ ಆಹ್ವಾನ ನೀಡಲಾಗಿತ್ತು. ಆದ್ರೆ ವೋಟ್ ಬ್ಯಾಂಕ್ ಹೋಗಿಬಿಡುತ್ತೆ ಅನ್ನೋ ಭಯದಿಂದ ರಾಮಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೂ ಬರಲಿಲ್ಲ ಎಂದು ತಿವಿದರು.
ಬೆಂಗಳೂರು: ಪಕ್ಷದಲ್ಲಿ ಟಿಕೆಟ್ (BJP Ticket) ಘೋಷಣೆ ಆದ ಬಳಿಕ ನಿಮ್ಮ ಅಸಮಾಧಾನದ ಹೇಳಿಕೆಗಳು ನಮ್ಮ ಗಮನಕ್ಕೆ ಬಂದಿದೆ. ಎಲ್ಲರ ಹೇಳಿಕೆಗಳನ್ನೂ ಗಮನಿಸಿದ್ದೇವೆ, ಎಲ್ಲಾ ಮಾಹಿತಿ ನಮ್ಮ ಬಳಿಯಿದೆ ಎಂದು ಕೇಂದ್ರ ಗೃಹಸಚಿವ ಅಮಿತ್ ಶಾ (Amit Shah) ಪಕ್ಷದಲ್ಲಿ ಅಸಮಾಧಾನಿತ ನಾಯಕರಿಗೆ ವಾರ್ನಿಂಗ್ ಕೊಟ್ಟಿದ್ದಾರೆ.
ಬೆಂಗಳೂರಿನ ಅರಮನೆ ಮೈದಾನದಲ್ಲಿ (Bengaluru Palace Grounds) ನಡೆದ ಬಿಜೆಪಿ ಕಾರ್ಯಕರ್ತರ ಬೃಹತ್ ಸಮಾವೇಶದಲ್ಲಿ ಮಾಜಿ ಸಚಿವ ಮಾಧುಸ್ವಾಮಿ ಸೇರಿದಂತೆ ಪ್ರಮುಖರು ಗೈರಾಗಿದ್ದರು. ಇದರಿಂದ ಕಾರ್ಯಕ್ರಮದ ಬಳಿಕ ನಡೆದ ಪಕ್ಷದ ಮುಖಂಡರ ಸಭೆಯಲ್ಲಿ ಅಸಮಾಧಾನಿತ ನಾಯಕರಿಗೆ ಬಿಸಿ ಮುಟ್ಟಿಸಿದ್ದಾರೆ. ಇದನ್ನೂ ಓದಿ: ಹೊಸ ಮಧ್ಯ ನೀತಿಯಲ್ಲಿ ಅಕ್ರಮ ಹಣ ವರ್ಗಾವಣೆ ಆರೋಪ – ಎಎಪಿ ಸಂಸದ ಸಂಜಯ್ ಸಿಂಗ್‌ಗೆ ಸುಪ್ರೀಂ ಜಾಮೀನು
ಟಿಕೆಟ್ ಘೋಷಣೆ ಆದ ಬಳಿಕ ನಿಮ್ಮ ಅಸಮಾಧಾನದ ಹೇಳಿಕೆಗಳು ನಮ್ಮ ಗಮನಕ್ಕೆ ಬಂದಿದೆ. ಎಲ್ಲರ ಹೇಳಿಕೆಗಳನ್ನೂ ಗಮನಿಸಿದ್ದು ಎಲ್ಲಾ ಮಾಹಿತಿ ನಮ್ಮ ಬಳಿ ಇದೆ. ಟಿಕೆಟ್ ಅನ್ನು ಸಂಸದೀಯ ಮಂಡಳಿ ಸಭೆ ನಿರ್ಧಾರ ಮಾಡಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಬಿಜೆಪಿ ಸೇರಿ ಇಲ್ಲವೇ ಬಂಧನಕ್ಕೆ ಸಿದ್ಧರಾಗಿ – ಆಪ್ ಸಚಿವೆ ಅತಿಶಿ ಗಂಭೀರ ಆರೋಪ
ಸಂಸದೀಯ ಮಂಡಳಿಯಲ್ಲಿ ಮೋದಿ ಮತ್ತು ನಾನು ಸೇರಿದಂತೆ ಎಲ್ಲರೂ ಚರ್ಚೆ ಮಾಡಿ ತಿರ್ಮಾನ ಮಾಡಿದ್ದೇವೆ. ಟಿಕೆಟ್ ಘೋಷಣೆಯಾಗಿದೆ ಎಲ್ಲರೂ ಒಪ್ಪಿ ಅಭ್ಯರ್ಥಿ ಪರ ಪ್ರಚಾರ ಶುರು ಮಾಡಿ. ಯಾವುದೇ ಕಾರಣಕ್ಕೂ ಪಕ್ಷ ವಿರೋಧಿ ಚಟುವಟಿಕೆ ಮಾಡಬಾರದು. ನಿಮಗೆ ಮುಂದೆ ಒಳ್ಳೆ ಭವಿಷ್ಯ ಇದೆ. ಈಗ ಮೋದಿ ಮತ್ತೊಮ್ಮೆ ಪ್ರಧಾನಿ ಮಾಡುವುದೇ ನಮ್ಮ ಗುರಿಯಾಗಿರಬೇಕು ಎಂದು ಕರೆ ಕೊಟ್ಟಿದ್ದಾರೆ.
ಕಲಬುರಗಿ: ಜಿಲ್ಲೆಯಲ್ಲಿ ಇತ್ತೀಚೆಗೆ ಹತ್ಯೆಗೊಳಗಾದ ಪಕ್ಷದ ಇಬ್ಬರು ಕಾರ್ಯಕರ್ತರ (BJP Workers) ಕುಟುಂಬಗಳ ಸದಸ್ಯರನ್ನು ಪ್ರತಿಪಕ್ಷದ ನಾಯಕ ಆರ್. ಅಶೋಕ್ (R Ashoka) ಅವರು ಸೋಮವಾರ ಭೇಟಿ ಮಾಡಿ ಸಾಂತ್ವನ ಹೇಳಲಿದ್ದಾರೆ.
ಸೋಮವಾರ ಮಧ್ಯಾಹ್ನ ಕಲಬುರಗಿ ರೈಲು ನಿಲ್ದಾಣದಲ್ಲಿ (Kalaburagi Railway Station) ಅಯೋಧ್ಯೆಗೆ ತೆರಳಲಿರುವ ಭಕ್ತರ ಪ್ರಯಾಣಕ್ಕೆ ಚಾಲನೆ ನೀಡಲಿದ್ದಾರೆ. ಬಳಿಕ ಅವರು ಆಳಂದ ಮತ್ತು ಅಫಜಲಪುರ ತಾಲ್ಲೂಕು ಪ್ರವಾಸ ಕೈಗೊಳ್ಳಲಿದ್ದಾರೆ. ಇದನ್ನೂ ಓದಿ: ಕಣ್ಣಿಗೆ ಖಾರದ ಪುಡಿ ಎರಚಿ ಸಂಸದ ಉಮೇಶ್ ಜಾಧವ್ ಬೆಂಬಲಿಗನ ಬರ್ಬರ ಹತ್ಯೆ
ಆಳಂದ ತಾಲ್ಲೂಕಿನ ಸರಸಂಬ ಗ್ರಾಮಕ್ಕೆ ತೆರಳಿ ದುಷ್ಕರ್ಮಿಗಳಿಂದ ಹತ್ಯೆಗೊಳಗಾದ ಬಿಜೆಪಿ ಜಿಲ್ಲಾ ಮಾಜಿ ಉಪಾಧ್ಯಕ್ಷ ಹನುಮಂತಪ್ಪ ಆಲೂರೆ ಅವರ ನಿವಾಸಕ್ಕೆ ಭೇಟಿ ನೀಡಲಿದ್ದಾರೆ. ಆಲೂರೆ ಅವರ ಕುಟುಂಬ ಸದಸ್ಯರ ಜತೆ ಸಮಾಲೋಚನೆ ನಡೆಸಿ ಅವರಿಗೆ ಸಾಂತ್ವನ ಹೇಳಲಿದ್ದಾರೆ.
ಮಂಗಳವಾರ ಬೆಳಗಾವಿಗೆ ಪ್ರಯಾಣ ಬೆಳೆಸಲಿರುವ ಅಶೋಕ್ ಅವರು ಸಂಜೆ ಕೆಎಲ್‌ಇ ಜೀರಿಗೆ ಸಭಾಂಗಣದಲ್ಲಿ ನಡೆಯುವ ಪ್ರಬುದ್ಧರ ಸಭೆಯಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಅವರ ಜತೆ ಪಾಲ್ಗೊಳ್ಳಲಿದ್ದಾರೆ.
ಘಟನೆ – 1: ಕಳೆದ ಫೆಬ್ರವರಿ 29ರಂದು ಹಿರಿಯ ಬಿಜೆಪಿ ಮುಖಂಡ ಮಹಾಂತಪ್ಪಾ ಆಲೂರೆ ಅವರ ಮೇಲೆ ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಸರಸಂಬಾ ಗ್ರಾಮದ ಹೊರವಲಯದಲ್ಲಿ ಹಲ್ಲೆ ನಡೆದಿತ್ತು. ಮೂವರು ಅಪರಿಚಿತರು ರಾಡ್, ತಲ್ವಾರ್‌ನಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿ ಪರಾರಿಯಾಗಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ಸೇರಿಸಿದರೂ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದರು.
ಘಟನೆ – 2: ಮಹಾಂತಪ್ಪಾ ಆಲೂರೆ ಅವರ ಹತ್ಯೆ ಬೆನ್ನಲ್ಲೇ ಅಫಜಲಪುರ ತಾಲೂಕಿನ ಸಾಗನೂರ ಗ್ರಾಮದ ಜಮೀನಿನಲ್ಲಿ ಸಂಸದ ಡಾ.ಉಮೇಶ್ ಜಾಧವ್ ಬಲಗೈ ಬಂಟ ಗಿರೀಶ್ ಚಕ್ರ ಅವರನ್ನ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಬೆಳಕಿಗೆ ಬಂದಿತ್ತು.
ಮೈಸೂರು: ಕಾಂಗ್ರೆಸ್ (Congress) ರಾಜ್ಯದಲ್ಲಿ ಅಧಿಕಾರಕ್ಕೆ ಬಂದಮೇಲೆ ಬಿಜೆಪಿ ಕಾರ್ಯಕರ್ತರು (BJP Workers) ಅಪಾಯದಲ್ಲಿದ್ದಾರೆ ಎಂದು ಸಂಸದ ಪ್ರತಾಪ್ ಸಿಂಹ (Pratap Simha) ಆತಂಕಪಟ್ಟಿದ್ದಾರೆ.
ಮೈಸೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಾಂಗ್ರೆಸ್ ಅಧಿಕಾರಕ್ಕೆ ಬಂದಮೇಲೆ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಉತ್ಸಾಹ ಜಾಸ್ತಿಯಾಗಿ, ನಮ್ಮ ಕಾರ್ಯಕರ್ತರನ್ನ ಟಾರ್ಗೆಟ್ ಮಾಡುತ್ತಿದ್ದಾರೆ, ಇದರಿಂದ ಬಿಜೆಪಿ ಕಾರ್ಯಕರ್ತರು ಅಪಾಯದಲ್ಲಿದ್ದಾರೆ. ಬಿಜೆಪಿ ಕಾರ್ಯಕರ್ತರನ್ನ ಅಪಾಯಕ್ಕೆ ಸಿಲುಕಿಸಿದ್ದಕ್ಕಾಗಿ ನಾವು ಕ್ಷಮೆ ಕೇಳುತ್ತೇವೆ. ಮುಂದಿನ ದಿನಗಳಲ್ಲಿ ಉತ್ತಮ ರಾಜಕಾರಣ ಮಾಡೋಣ ಎಂದು ಹೇಳಿದ್ದಾರೆ. ಇದನ್ನೂ ಓದಿ: 200 ಯೂನಿಟ್ ಒಳಗೆ ವಿದ್ಯುತ್ ಬಿಲ್ ಬಂದರೆ ಯಾರೂ ಕಟ್ಟಬೇಡಿ: ಪ್ರತಾಪ್ ಸಿಂಹ
ಬಿಜೆಪಿ ಕೇಂದ್ರ ಸರ್ಕಾರದಲ್ಲಿ ಉತ್ತಮ ಕೆಲಸಗಳನ್ನ ಮಾಡಿದೆ. ರಾಜ್ಯದಲ್ಲಿಯೂ ಬಸವರಾಜ ಬೊಮ್ಮಾಯಿ (Basavaraj Bommai) ನೇತೃತ್ವದ ಸರ್ಕಾರ ಉತ್ತಮ ಸೇವೆ ಮಾಡಿತ್ತು. ಆದ್ರೆ ನಾವು ಅವುಗಳನ್ನ ಜನರಿಗೆ ತಿಳಿಸುವಲ್ಲಿ ವಿಫಲರಾಗಿದ್ದೇವೆ. ಕಾಂಗ್ರೆಸ್ ಗ್ಯಾರಂಟಿ (Congress Guarantee) ಕಾರ್ಡ್ ನೋಡಿದ ಕೂಡಲೇ ಜನರು ಗ್ಯಾರಂಟಿ ಕೊಟ್ಟೇ ಬಿಟ್ರು ಅಂತಾ ವೋಟ್ ಹಾಕಿದ್ದಾರೆ. ನಾನು ಗ್ಯಾರಂಟಿಗಳ ಪರ ಇದ್ದೇನೆ. ಆದ್ರೆ ಅರ್ಥವ್ಯವಸ್ಥೆಗೆ ಹೊಡೆತ ಬೀಳದಂತೆ ನೋಡಿಕೊಳ್ಳಬೇಕು ಅಷ್ಟೇ ಎಂದು ಮನವಿ ಮಾಡಿದ್ದಾರೆ.
ಈ ಬಾರಿ ಕಾಂಗ್ರೆಸ್ ಗೆದ್ದಿದೆ ಅಂದ ಮಾತ್ರಕ್ಕೆ ಎಲ್ಲವೂ ಮುಗಿದು ಹೋಯಿತು, ಇದೇ ಶಾಶ್ವತ ಎಂದಲ್ಲ. ಪ್ರತೀ ಚುನಾವಣೆಯಲ್ಲೂ ಫಲಿತಾಂಶ ಬದಲಾಗುತ್ತೆ. ಮೀಸಲಾತಿ ನೀಡಿ ಒಳ್ಳೆ ಕೆಲಸ ಮಾಡಿದ್ದರೂ ನಾವು ಮನವರಿಕೆ ಮಾಡಿಕೊಡುವಲ್ಲಿ ವಿಫಲರಾದ್ವಿ. ನಾವು ಉಚಿತ ಬಸ್ ಪಾಸ್ ಸೇವೆ ಮಾಡಿದ್ವಿ, ಪ್ರಧಾನ ಮಂತ್ರಿ ಅನ್ನ ಕಲ್ಯಾಣ ಯೋಜನೆ ಮಾಡಿದ್ವಿ, ಅವುಗಳನ್ನ ಜಾರಿ ಮಾಡಿದ್ದರೆ ಇವತ್ತು ಈ ಪರಿಸ್ಥಿತಿ ಬರುತ್ತಿರಲಿಲ್ಲ. ಇದರ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳುತ್ತೇವೆ. ಇದನ್ನೂ ಓದಿ: ತಮಿಳುನಾಡಿನಲ್ಲಿ ಅಮುಲ್ ಹಾಲು ಸಂಗ್ರಹಿಸುವುದನ್ನು ನಿಲ್ಲಿಸಿ: ಅಮಿತ್ ಶಾಗೆ ಸ್ಟಾಲಿನ್ ಪತ್ರ
ನಾನು ನಮ್ಮ ಕಾರ್ಯಕರ್ತರಿಗೆ ಅಂತರಾಳದಿಂದ ಕೇಳುತ್ತೇನೆ. ಏಕೆಂದರೆ ಚುನಾವಣೆಯಲ್ಲಿ ನಮ್ಮ ಪರವಾಗಿ ಓಡಾಡಿಕೊಂಡು ಕೆಲಸ ಮಾಡೋರು ಅವರು, ಸೋತ ಅಭ್ಯರ್ಥಿ ಇನ್ನು 5 ವರ್ಷ ಬೇರೆ ವ್ಯವಹಾರ ಮಾಡಿಕೊಂಡಿರ್ತಾರೆ. ಆದ್ರೆ ನಮ್ಮ ಪಕ್ಷ ಅಧಿಕಾರಕ್ಕೆ ಬಂದಿಲ್ಲ ಅಂತಾ ನಿಜವಾಗಿಯೂ ನೋವಾಗಿರೋದು ನಮ್ಮ ಕಾರ್ಯಕರ್ತರಿಗೆ. ಜೊತೆಗೆ ಮಂಗಳೂರು, ಕೊಡಗು ಭಾಗಗಳಲ್ಲಿ ಘರ್ಷಣೆಗಳಾಗುತ್ತಿದ್ದು, ನಮ್ಮ ಕಾರ್ತಕರ್ತರನ್ನ ಅಪಾಯಕ್ಕೆ ಸಿಲುಕಿಸಿದ್ದೇವೆ. ಅದಕ್ಕಾಗಿ ನಾನು ಕ್ಷಮೆ ಕೇಳುತ್ತೇನೆ ಭಾವುಕರಾದರು.
ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆ (Karnataka Election 2023) ಹಿನ್ನಲೆಯಲ್ಲಿ ಬಿಜೆಪಿ (BJP) ಅಭ್ಯರ್ಥಿಗಳ ಗೆಲುವಿಗಾಗಿ ಪಕ್ಷದ ಹೈಕಮಾಂಡ್ ಫುಲ್ ಅಲರ್ಟ್ ಆಗಿದೆ. ಚುನಾವಣೆ ಸಂದರ್ಭದಲ್ಲಿ ಪಕ್ಷದ ಪರವಾಗಿ ಹೆಚ್ಚು ಸಕ್ರಿಯರಾಗಿ ತೊಡಗಿಸಿಕೊಳ್ಳುವಂತೆ ಕಾರ್ಯಕರ್ತರಲ್ಲಿ ಹುರುಪು ತುಂಬಲಾಗುತ್ತಿದೆ. ಈ ಹಿನ್ನೆಲೆಯಲ್ಲಿ 50 ಲಕ್ಷ ಕಾರ್ಯಕರ್ತರೊಂದಿಗೆ ಇಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಸಂವಾದ ನಡೆಸಿದರು.
ಮೋದಿ ನೀಡಿದ ಸಂದೇಶಗಳೇನು?
ಬಿಜೆಪಿಗೆ ಬಹುಮತ ಬರಲು ಶ್ರಮಿಸಿ ಹಾಗೂ ಬಹುಮತ ಸರ್ಕಾರದ ಮಹತ್ವ ಮತದಾರರಿಗೆ ಅರ್ಥ ಮಾಡಿಸಿ. ಬಿಜೆಪಿಗೆ ಮತ ಹಾಕುವುದರಿಂದ ಕೇಂದ್ರ ಮತ್ತು ರಾಜ್ಯದಲ್ಲಿ ಡಬಲ್ ಎಂಜಿನ್ ಸರ್ಕಾರದಿಂದ ಏನೇನು ಲಾಭವಿದೆ ಎಂದು ಮನವರಿಕೆ ಮಾಡಿ. ಪ್ರತಿಯೊಂದು ಬೂತ್ನ ಜನರ ಜತೆ ವೈಯಕ್ತಿಕವಾಗಿ ಮಾತಾಡಿ, ಅವರ ಮನಸ್ಸು ಗೆಲ್ಲಿ. ಜನರ ಜತೆ ಹೆಚ್ಚು ಬೆರೆಯುವುದರಿಂದ ಅವರಿಗೆ ಬಿಜೆಪಿ ಕೆಲಸಗಳನ್ನು ಮನವರಿಕೆ ಮಾಡೋದ್ರಿಂದ ಚುನಾವಣೆಯಲ್ಲಿ ಸುಲಭವಾಗಿ ಗೆಲ್ಲಬಹುದು.
ಡಬಲ್ ಎಂಜಿನ್ ಸರ್ಕಾರದ ಮಹತ್ವ ತಿಳಿಸಿ. ಡಬಲ್ ಎಂಜಿನ್ ಸರ್ಕಾರದಿಂದಲೇ ಕರ್ನಾಟಕದ ಅಭಿವೃದ್ಧಿ ಎಂಬುದನ್ನು ಮನವರಿಕೆ ಮಾಡಿ. 2014 ರ ಬಳಿಕ ದೇಶ, ರಾಜ್ಯದಲ್ಲಿ ಆದ ಗಮನಾರ್ಹ ಬದಲಾವಣೆ, ಅಭಿವೃದ್ಧಿ ಬಗ್ಗೆ ಕಾರ್ಯಕರ್ತರಿಗೆ ವಿವರಿಸಿ. ಯುಪಿಎ ಸಂದರ್ಭದಲ್ಲಿ ವಿಳಂಬ ಅಭಿವೃದ್ಧಿ, ಈಗ ವಿಕಾಸ ವೇಗಗತಿಯಲ್ಲಿ ಸಾಗ್ತಿದೆ ಅಂತ ತಿಳಿ ಹೇಳಿ ಎಂದು ಸಲಹೆ ನೀಡಿದ್ದಾರೆ. ಇದನ್ನೂ ಓದಿ: ಚುನಾವಣೆಗೆ ಅಣಿಗೊಳಿಸಲು ಮೋದಿ ರಣತಂತ್ರ – 50 ಲಕ್ಷ ಬಿಜೆಪಿ ಕಾರ್ಯಕರ್ತರೊಂದಿಗೆ ಸಂವಾದ
ಬೀದರ್: ಪೊಲೀಸರೇ (Police) ನೀವು ಜನರ ಸೇವೆ ಮಾತ್ರ ಮಾಡಿ, ಅದನ್ನ ಬಿಟ್ಟು ನಮ್ಮ ಕಾರ್ಯಕರ್ತರಿಗೆ ಧಮ್ಕಿ ಹಾಕಬೇಡಿ ನಮ್ಮ ಕಾರ್ಯಕರ್ತ ಮೇಲೆ ನಿಮ್ಮ ದರ್ಪ ನಡೆಯಲ್ಲ ಎಂದು ಕೇಂದ್ರ ಸಚಿವ ಭಗವಂತ ಖೂಬಾ (Bhagawanth Khuba) ಪೊಲೀಸರಿಗೆ ಎಚ್ಚರಿಕೆ ಕೊಟ್ಟಿದ್ದಾರೆ.
ನಮ್ಮ ಧರ್ಮ, ಸಂಸ್ಕೃತಿಯನ್ನು ಕಾಪಾಡಿದ ಹಿಂದೂ ಹೃದಯ ಸಾಮ್ರಾಟ್ ಶಿವಾಜಿ ಮಹಾರಾಜರನ್ನು ನಾವೆಲ್ಲರೂ ಪ್ರತಿನಿತ್ಯ ನೆನೆಯೋಣ, ನಮ್ಮ ಮಕ್ಕಳಿಗೆ ಅವರ ವೀರ ಪರಂಪರೆಯನ್ನು ತಿಳಿಸೋಣವೆಂದು ಕರೆಕೊಟ್ಟೆ.
ಈ ಕಾರ್ಯಕ್ರಮದಲ್ಲಿ ತಾಯಂದಿರು, ಸಹೋದರಿಯರು, ಹಿರಿಯರು, ಯುವಕರು ಹಾಗೂ ಮಕ್ಕಳು, ಜೈ ಭವಾನಿ, ಜೈ ಶಿವಾಜಿ, (2/3) pic.twitter.com/rjQR1DadKv
ಪೊಲೀಸರೇ ನಿಮಗೆ ನೌಕರಿ ಕೊಟ್ಟಿದ್ದು ಜನರ ಸೇವೆ ಮಾಡೋಕೆ, ಜನರ ತೆರಿಗೆ ದುಡ್ಡಿನಿಂದಲೇ ನಿಮಗೆ ವೇತನ ಬರುತ್ತೆ. ಆದ್ದರಿಂದ ನಮ್ಮ ಕಾರ್ಯಕರ್ತ ಮೇಲೆ ನಿಮ್ಮ ದರ್ಪ ನಡೆಯಲ್ಲ ಎಂದು ಪೊಲೀಸರ ವಿರುದ್ಧ ಹರಿಹಾಯ್ದಿದ್ದಾರೆ. ಇದನ್ನೂ ಓದಿ: ಆಂಧ್ರ ಸಿಎಂ ಸಹೋದರಿ ಅರೆಸ್ಟ್; ಎಸ್ಸಿ-ಎಸ್ಟಿ ದೌರ್ಜನ್ಯ ತಡೆ ಕೇಸ್ ದಾಖಲು
ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ಜಯಂತ್ಯೋತ್ಸವದ ನಿಮಿತ್ಯ, ಔರಾದನಲ್ಲಿ ಮರಾಠಾ ಸಮಾಜದ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿದೇ.
ಪೊಲೀಸರೇ ನೀವು ಜನರ ಸೇವೆ ಮಾತ್ರ ಮಾಡಿ, ನಮ್ಮ ಕಾರ್ಯಕರ್ತರಿಗೆ ಧಮ್ಕಿ ಹಾಕಬೇಡಿ. ಒಂದು ವೇಳೆ ಪೊಲೀಸರು ದರ್ಪ ತೋರಿದ್ರೆ, ಧಮ್ಕಿ ಹಾಕಿದ್ರೆ ಆ ವಿಡಿಯೋ ಮಾಡಿ ನನಗೆ ಕಳಿಸಿ ಎಂದು ಪಕ್ಷದ ಕಾರ್ಯಕರ್ತರಿಗೆ ತಿಳಿಸಿದ್ದಾರೆ.
LIVE TV
[brid partner=56869869 player=32851 video=960834 autoplay=true]