ಬೆಂಗಳೂರು : ಭದ್ರಾ ಮೇಲ್ದಂಡೆ ಯೋಜನೆಗೆ (Upper Bhadra Project) ಅನುಮತಿ ಕೊಡಿ ಅಂತ ನಾನೇ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದೇನೆ ಅಂತ ಕಾಂಗ್ರೆಸ್ ನಾಯಕರಿಗೆ ಮಾಜಿ ಪ್ರಧಾನಿ ದೇವೇಗೌಡ (HD Devegowda) ತಿರುಗೇಟು ನೀಡಿದ್ದಾರೆ.
ಬಿಜೆಪಿ-ಜೆಡಿಎಸ್ (BJP-JDS) ಸಂಸದರು ರಾಜ್ಯದ ಪರವಾಗಿ, ಅನುದಾನ ಮತ್ತು ನೀರಾವರಿ ಯೋಜನೆ ಬಗ್ಗೆ ಮಾತಾಡ್ತಿಲ್ಲ ಎಂಬ ಕಾಂಗ್ರೆಸ್ ನಾಯಕರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ರಾಜ್ಯ ಸರ್ಕಾರದವರು ಅನೇಕ ಯೋಜನೆ ಮಾಡಿದ್ದೀರಿ. ನೀರಾವರಿಗೆ ಹಣ ಇಡಲಿಲ್ಲ. ಮಾಡಿದ ಯೋಜನೆಗೆ ಹಣ ಇಡಲಿಲ್ಲ. ಅದರ ಬಗ್ಗೆ ನಾನು ಯಾಕೆ ಚರ್ಚೆ ಮಾಡಲಿ. ಅವರು ಏನ್ ಮಾಡ್ತಾರೋ ಮಾಡಲಿ ಎಂದರು.
ಮಹದಾಯಿ ಯೋಜನೆ ವಿಚಾರ ಸುಪ್ರೀಂನಲ್ಲಿದ್ದು ಯೋಜನೆಗೆ ಗೋವಾ ವಿರೋಧ ಮಾಡಿದೆ. ಗೋವಾ ಸರ್ಕಾರ ಸುಪ್ರೀಂಕೋರ್ಟ್ ಅರ್ಜಿ ಹಾಕಿದೆ. ನಮ್ಮ ಸರ್ಕಾರ ಅವರು ಪ್ರತಿಯಾಗಿ ನೀರು ಬೇಕು ಅಂತ ಅರ್ಜಿ ಹಾಕಿದೆ. ಅದು ಸುಪ್ರೀಂಕೋರ್ಟ್ ನಲ್ಲಿ ಕೇಸ್ ನಡೆಯುತ್ತಿದೆ. ಅದಕ್ಕೂ ನಾನು ಹೋರಾಟ ಮಾಡ್ತೀನಿ. ನೀರಾವರಿ ವಿಚಾರದಲ್ಲಿ ನಾನು ರಾಜಕೀಯ ಮಾಡುವುದಿಲ್ಲ. ನೀರಾವರಿ ಯೋಜನೆಗಳಿಗಾಗಿ ನಾನು ಸದಾ ಹೋರಾಟ ಮಾಡೋಕೆ ಸಿದ್ದ ಅಂತ ಕಾಂಗ್ರೆಸ್ ನಾಯಕರಿಗೆ ದೇವೇಗೌಡರು ತಿರುಗೇಟು ನೀಡಿದರು.
– ಬಿಜೆಪಿ-ಜೆಡಿಎಸ್ ನಾಯಕರು ಮೊಸರಲ್ಲಿ ಕಲ್ಲು ಹುಡುಕೋದು ಬೇಡವೆಂದ ಡಿಸಿಎಂ
ಬೆಂಗಳೂರು: ವಿಪಕ್ಷಗಳು ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿವೆ. ವಿಷಯ ಇಲ್ಲದೇ ನಮ್ಮ ಸರ್ಕಾರದ ವಿರುದ್ಧ ಸುಳ್ಳು ಆರೋಪ ಮಾಡುತ್ತಿವೆ. ಮೋದಿ (DK Shivakumar) ಅವರು ಮೊದಲು ಕೊಟ್ಟಿರುವ ಭರವಸೆ ಈಡೇರಿಸುವ ಕೆಲಸ ಮಾಡಲಿ. ಉದ್ಯೋಗ ಸೃಷ್ಟಿ ಮಾಡೋ ಕೆಲಸ ಮಾಡಲಿ ರಾಜ್ಯದಲ್ಲಿ ಜಾಗ ಬೇಕಿದ್ರೆ ಹೇಳಲಿ, ನಾನೇ ನಿಂತು ಜಾಗ ಕೊಡಿಸುತ್ತೇನೆ ಉದ್ಯೋಗ ನೀಡಲಿ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ (DK Shivakumar) ಹೇಳಿದರು.
ಕೆಪಿಸಿಸಿ (KPCC) ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಗೆ, ಕುಮಾರಸ್ವಾಮಿಗೆ (HD Kumaraswamy) ನಮ್ಮ ಸರ್ಕಾರದ ಬಗ್ಗೆ ಹೇಳೋದಕ್ಕೆ ಏನೂ ಇಲ್ಲ. ಅವರ ಕಾಲದಲ್ಲಿ ಏನೇನು ಅನ್ಯಾಯ ಮಾಡಬೇಕೋ ಮಾಡಿದ್ರು. ಯಾವ ಬಡವರಿಗೂ ಸಹಾಯ ಮಾಡಲಿಲ್ಲ. ಒಂದು ಕಾರ್ಯಕ್ರಮ ಕೋಡೋದಕ್ಕೆ ಆಗಲಿಲ್ಲ ಎಂದು ತಿವಿದರು. ಇದನ್ನೂ ಓದಿ: ಸೆಮಿಕಂಡಕ್ಟರ್ ವಹಿವಾಟು 100 ಶತಕೋಟಿ ಡಾಲರ್ ನತ್ತ: ಟಾಟಾ ಎಲೆಕ್ಟ್ರಾನಿಕ್ಸ್‌ನ ಮೂರ್ತಿ ದಸಾಕ
ಅನ್ನಭಾಗ್ಯ ಕಾರ್ಯಕ್ರಮ ಅವರು ಮಾಡಿದ್ರಾ? ಪಿಂಚಣಿ ಕೊಡೋ ಕಾರ್ಯಕ್ರಮ ಅವರು ಮಾಡಿದ್ರಾ? ಸೈಟ್ ಕೊಡೋ ಕಾರ್ಯಕ್ರಮ ಅವರು ಮಾಡಿದ್ರಾ, ಜಮೀನು ಕೊಟ್ರಾ..? ಈಗ ಕೆಲವರು ಸರ್ಕಾರಿ ನೌಕಕರಿದ್ದಾರೆ. ಅನುಕೂಲಸ್ಥರಿದ್ದಾರೆ ಅವರಿಗೆ ಎಲ್ಲಾ ಸಿಗ್ತಿದೆ. ಅದನ್ನ ಸರ್ವೇ ಮಾಡ್ತಿದ್ದೇವೆ. ನಮ್ಮ ರಾಜ್ಯದಲ್ಲಿ ಅನುಕೂಲ ಇದೆ. ಬಡವರು ಯಾರು ಅನ್ನೋದು ಲಿಮಿಟೇಷನ್ ರಾಜ್ಯ ಸರ್ಕಾರವೇ ಮಾಡಿದೆ. ಕೆಲವರು ಜಿಎಸ್‌ಟಿ ಟ್ಯಾಕ್ಸ್ (GST Tax) ಕಟ್ಟುತ್ತಿದ್ದಾರೆ. ಅದರಲ್ಲಿ ಬಡವರು ಇದ್ದಾರೆ ಅಂದ್ರೆ ಮತ್ತೆ ಅವರಿಗೆ ಬಿಪಿಎಲ್ ಕಾರ್ಡ್ (BPL Card) ಕೊಡಬೇಕು ಎಂದು ನಿರ್ಧರಿಸಿದ್ದೇವೆ. ಈ ಬಗ್ಗೆ ನಿನ್ನೆಯೇ ಸಿಎಂ ಅವರು ಸೂಚನೆ ಕೊಟ್ಟಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ಬಿಪಿಎಲ್, ಎಪಿಎಲ್ ಯಾವ ಕಾರ್ಡ್ ರದ್ದಾಗಲ್ಲ: ಕೆ.ಹೆಚ್.ಮುನಿಯಪ್ಪ
ಯಾವ ಬಡವರಿಗೂ ತೊಂದ್ರೆ ಆಗಲ್ಲ. ವಿಪಕ್ಷಗಳು ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿವೆ. ಕುಮಾರಸ್ವಾಮಿ ರಾಜ್ಯಕ್ಕೆ ಏನು ಮಾಡಿದ್ದಾರೆ ರೀ? ಅವರ ಕೊಡುಗೆ ರಾಜ್ಯಕ್ಕೆ ಏನಿದೆ..? ಗಾಳಿಯಲ್ಲಿ ಗುಂಡು ಹೊಡೆಯೋದೇ ಕೊಡುಗೆನಾ? ನಾವು ಆರ್ಥಿಕ ಪರಿಸ್ಥಿತಿ ಸುಧಾರಿಸುತ್ತಿದ್ದೇವೆ. ರಾಜ್ಯದಲ್ಲಿ ಬಂಡವಾಳ ಹೂಡಿಕೆ ಮಾಡುವ ಕೆಲಸ ಮಾಡುತ್ತಿದ್ದೇವೆ. ಯಾರು ಏನೂ ಗಾಬರಿ ಪಡಬೇಕಾಗಿಲ್ಲ. ಮೋದಿ ಅವರು ಕೊಟ್ಟಿರುವ ಭರವಸೆ ಈಡೇರಿಸುವ ಕೆಲಸ ಮಾಡಲಿ. ಉದ್ಯೋಗ ಸೃಷ್ಟಿ ಮಾಡೋ ಕೆಲಸ ಮಾಡಲಿ ರಾಜ್ಯದಲ್ಲಿ ಜಾಗ ಬೇಕಿದ್ರೆ ಹೇಳಲಿ, ನಾನೇ ನಿಂತು ಜಾಗ ಕೊಡಿಸುತ್ತೇನೆ ಉದ್ಯೋಗ ನೀಡಲಿ ಎಂದು ಗುಡುಗಿದರು. ಇದನ್ನೂ ಓದಿ: ಗ್ರಾಮೀಣ ಪ್ರದೇಶದಲ್ಲಿ ಟೆಲಿಮೆಡಿಸಿನ್, ಟೆಲಿ-ಐಸಿಯುಗಳತ್ತ ಚಿತ್ತ: ದಿನೇಶ್ ಗುಂಡೂರಾವ್
-ಬಿಜೆಪಿ, ಜೆಡಿಎಸ್ ಒಗ್ಗಟ್ಟಿನ ಮಂತ್ರ ಜಪಿಸಬೇಕು -ಉಪಚುನಾವಣೆ ಹಿನ್ನೆಲೆಯಲ್ಲಿ ಡಿಸಿಎಂ ಧ್ವಜಾರೋಹಣ
ರಾಮನಗರ: ಕುಮಾರಸ್ವಾಮಿ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರುವ ಮೂಲಕ ಮುಡಾ ಹಗರಣ ಮುಚ್ಚಿ ಹಾಕಲು ಕಾಂಗ್ರೆಸ್ ಷಡ್ಯಂತ್ರ ಮಾಡುತ್ತಿದೆ ಎಂದು ನಿಖಿಲ್ ಕುಮಾರಸ್ವಾಮಿ (Nikhil Kumaraswamy) ವಾಗ್ದಾಳಿ ನಡೆಸಿದ್ದಾರೆ.
ಕಾಂಗ್ರೆಸ್ (Congress) ರಾಜಭವನ ಚಲೋ ವಿಚಾರವಾಗಿ ಮಾತನಾಡಿ, ಕುಮಾರಸ್ವಾಮಿ ವಿರುದ್ಧ ಪ್ರಾಸಿಕ್ಯೂಷನ್‌ಗೆ (Prosecution) ಅನುಮತಿ ಕೋರಿ ಕಾಂಗ್ರೆಸ್ ಮುಡಾ (MUDA) ಹಗರಣವನ್ನು ಮುಚ್ಚಿ ಹಾಕುವ ತಂತ್ರ ಮಾಡುತ್ತಿದ್ದಾರೆ. ಅದಕ್ಕಾಗಿಯೇ ಆ.31 ರಂದು ಕಾಂಗ್ರೆಸ್‌ನಿಂದ ರಾಜಭವನ ಚಲೋ ಹಮ್ಮಿಕೊಂಡಿದ್ದಾರೆ. ಇವರ ಹೋರಾಟದಲ್ಲಿ ಯಾವುದೇ ಹುರುಳಿಲ್ಲ. ಕುಮಾರಸ್ವಾಮಿ ಅವರು ವೆಂಕಟೇಶ್ವರ ಮೈನಿಂಗ್ ವಿಚಾರವಾಗಿ ಆರೋಪ ಮಾಡ್ತಿದ್ದಾರೆ. ಆದರೆ ಈ ವಿಚಾರ ಸುಪ್ರೀಂಕೋರ್ಟ್‌ನಲ್ಲಿದೆ. ಎಸ್‌ಐಟಿ (SIT), ಲೋಕಾಯುಕ್ತಗೆ ವರದಿ ಕೊಡುವಂತೆ ಕೋರ್ಟ್ ಸೂಚಿಸಿದ್ದರೂ ವರದಿ ಕೊಟ್ಟಿಲ್ಲ. ಈಗ ಹೆಚ್‌ಡಿಕೆ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೇಳೋದು ಅನಗತ್ಯ ಎಂದು ಹೇಳಿದರು.ಇದನ್ನೂ ಓದಿ: MUDA Scam; ಸಿಎಂ ಸಿದ್ದರಾಮಯ್ಯಗೆ ತಾತ್ಕಾಲಿಕ ರಿಲೀಫ್ – ಆ.31 ಕ್ಕೆ ವಿಚಾರಣೆ ಮುಂದೂಡಿಕೆ
ಜಿಲ್ಲೆಯ ಚನ್ನಪಟ್ಟಣ (Channapatna)ತಾಲೂಕಿನ ಕೋಡಂಬಳ್ಳಿ ಗ್ರಾಮದಲ್ಲಿ ಏರ್ಪಡಿಸಿದ್ದ ಸಭೆಯಲ್ಲಿ ಮಾತನಾಡಿದ ಅವರು, ಕಳೆದ ಐದು ವರ್ಷ ಕುಮಾರಸ್ವಾಮಿ ಅವರ ನಾಯಕತ್ವಕ್ಕೆ ಕ್ಷೇತ್ರದ ಜನ ಬೆಂಬಲ ಕೊಟ್ಟಿದ್ದಾರೆ. ಈಗ ಕೇಂದ್ರ ಸಚಿವರಾಗಿ ಕೆಲಸ ಮಾಡ್ತಿದ್ದಾರೆ. ಉಪಚುನಾವಣೆ ಎದುರಾಗಿರುವ ಹಿನ್ನೆಲೆ ಮುಖಂಡರು, ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸುತ್ತಿದ್ದೇವೆ. ಕ್ಷೇತ್ರವನ್ನು ಜೆಡಿಎಸ್‌ಗೆ ಉಳಿಸಿಕೊಳ್ಳುವಂತೆ ಅವರು ಒತ್ತಾಯಿಸುತ್ತಿದ್ದಾರೆ ಎಂದರು.
ಕ್ಷೇತ್ರದಲ್ಲಿ ಎನ್‌ಡಿಎ ಅಭ್ಯರ್ಥಿ ಕಣಕ್ಕಿಳಿಯುತ್ತಾರೆ. ಜೆಡಿಎಸ್ ಕೂಡಾ ಎನ್‌ಡಿಎ ಕೂಟದ ಒಂದು ಭಾಗ. ಹಾಗಾಗಿ ಕ್ಷೇತ್ರದಲ್ಲಿ ಎನ್‌ಡಿಎ ಅಭ್ಯರ್ಥಿ ಗೆಲ್ಲಬೇಕು. ಅದಕ್ಕಾಗಿ ಪಕ್ಷದ ಕಾರ್ಯಕರ್ತರು ಸಜ್ಜಾಗಬೇಕು. ಸಿಪಿವೈ ಪರ ಬಿಜೆಪಿ (BJP) ನಾಯಕರು ಕಣಕ್ಕಿಳಿಯಲಿದ್ದಾರೆ. ಬಿಜೆಪಿಯ ಕೆಲ ರಾಜ್ಯನಾಯಕರು ಅವರವರ ಅಭಿಪ್ರಾಯ ತಿಳಿಸಿದ್ದಾರೆ. ಅದನ್ನ ನಾವು ವಿರೋಧ ಮಾಡಲ್ಲ, ಸ್ವಾಗತ ಮಾಡುತ್ತೇವೆ. ಆದರೆ ಅಂತಿಮವಾಗಿ ಬಿಜೆಪಿ ವರಿಷ್ಠರು ಹಾಗೂ ಕುಮಾರಸ್ವಾಮಿ ಅವರು ತೀರ್ಮಾನ ಮಾಡುತ್ತಾರೆ. ಸೂಕ್ತ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುತ್ತದೆ. ಯಾರೇ ಅಭ್ಯರ್ಥಿ ಆದರೂ ಎರಡೂ ಪಕ್ಷಗಳು ಬೆಂಬಲ ಕೊಡಬೇಕು. ಬಿಜೆಪಿ-ಜೆಡಿಎಸ್ ಒಗ್ಗಟ್ಟಿನ ಮಂತ್ರ ಜಪಿಸಬೇಕು ಎಂದು ಹೇಳಿದರು.ಇದನ್ನೂ ಓದಿ: ಬ್ಯಾಕ್‌ಲೆಸ್ ಬ್ಲೌಸ್ ಜೊತೆ ಸೀರೆಯುಟ್ಟು ಮಿಂಚಿದ ‘ಉಪಾಧ್ಯಕ್ಷ’ ನಟಿ
ಬೆಂಗಳೂರು ಗ್ರಾಮಾಂತರದಲ್ಲಿ ಅವರ ಸಹೋದರ ಮೂರು ಬಾರಿ ಸಂಸದರಾಗಿದ್ದರು. ಆಗ ಆ ಕ್ಷೇತ್ರವನ್ನೇ ಕಳೆದುಕೊಂಡಿದ್ದರು. ಈ ಕ್ಷೇತ್ರವನ್ನು ಡಿಕೆಶಿ ಅವರು ಕಬ್ಜ ಮಾಡುವ ಪ್ಲ್ಯಾನ್‌ನಲ್ಲಿದ್ದಾರೆ. ಐದು ಕ್ಷೇತ್ರಗಳಲ್ಲಿ ಮಿತ್ರಪಕ್ಷಕ್ಕೆ ಹೆಚ್ಚು ಲೀಡ್ ಸಿಕ್ಕಿದೆ. ಎನ್‌ಡಿಎ (NDA) ಪಕ್ಷಕ್ಕೆ ಜನರ ಬೆಂಬಲ, ಆಶೀರ್ವಾದ ಇರೋದು ಸ್ಪಷ್ಟವಾಗಿದೆ. ಕನಕಪುರ, ಚನ್ನಪಟ್ಟಣದಲ್ಲೂ ದೊಡ್ಡ ಮಟ್ಟದ ಲೀಡ್ ಸಿಕ್ಕಿದೆ. ಹಾಗಾಗಿ ಈ ಕ್ಷೇತ್ರದಲ್ಲಿ ಮೈತ್ರಿ ಪಕ್ಷದ ಗೆಲುವು ಖಚಿತ ಎಂದು ಸ್ಪಷ್ಟನೆ ನೀಡಿದ್ದಾರೆ.
ಇದೇ ವೇಳೆ ಡಿಕೆಶಿ ಕುರಿತು ಮಾತಾನಾಡಿದ ಅವರು, ಡಿಕೆಶಿಯವರು ಉದ್ಯೋಗ ಮೇಳ ಧ್ವಜಾರೋಹಣ ಮಾಡಿ ಕ್ಷೇತ್ರದ ಜನರನ್ನು ಓಲೈಕೆ ಮಾಡುವ ವಿಚಾರದಲ್ಲಿದ್ದಾರೆ. ಪ್ರೋಟೊಕಾಲ್ ಪ್ರಕಾರ ಜಿಲ್ಲಾ ಉಸ್ತುವಾರಿ ಸಚಿವರು ಧ್ವಜಾರೋಹಣ ಮಾಡಬೇಕು. ಆದರೆ ಉಪಚುನಾವಣೆ ಗಮನದಲ್ಲಿಟ್ಟುಕೊಂಡು ಚನ್ನಪಟ್ಟಣದಲ್ಲಿ ಧ್ವಜಾರೋಹಣ ಮಾಡಿದ್ದಾರೆ. ಅದೇನೋ 20 ಜನ ಪಿಡಿಓ ಬದಲಾವಣೆ ಮಾಡ್ತೀವಿ, ಸೈಟ್ ಕೊಡ್ತೀವಿ ಅಂತ ಆಶ್ವಾಸನೆ ಕೊಡ್ತಿದ್ದಾರೆ. ಆದರೆ ರಾಜ್ಯದ ಜನತೆಗೆ ಕೊಟ್ಟಿರುವ ಆಶ್ವಾಸನೆಗಳನ್ನೇ ಅವರು ಈಡೇರಿಸಿಲ್ಲ.ಇದನ್ನೂ ಓದಿ: ಪಬ್ಲಿಕ್ ಟಿವಿ ಇಂಪ್ಯಾಕ್ಟ್ | ಗಂಗಾವತಿಯಲ್ಲಿ ಬಿಲ್ಲು, ಬಾಣಗಳಿರುವ ವಿದ್ಯುತ್ ಕಂಬ ತೆರವು – ಆದೇಶ ಹಿಂಪಡೆದ ತಹಶೀಲ್ದಾರ್
ಇನ್ನೂ ಚನ್ನಪಟ್ಟಣಕ್ಕೂ ಇದೇ ಸ್ಥಿತಿ ಬರುತ್ತದೆ. ಇದಕ್ಕೆ ದೊಡ್ಡಮಟ್ಟದ ಪ್ರಚಾರ ಕೊಡುವ ಅಗತ್ಯ ಇಲ್ಲ. ಸರ್ಕಾರದ ಸಾಕಷ್ಟು ಮಂತ್ರಿಗಳು ಪಂಚಾಯಿತಿ ಮಟ್ಟಕ್ಕೆ ಬರ್ತಿದ್ದಾರೆ. ರಾಜ್ಯದಲ್ಲಿ ಚನ್ನಪಟ್ಟಣ ಉಪಚುನಾವಣೆ ಗಮನ ಸೆಳೆಯಲಿದೆ. ಏನೇ ಇದ್ರೂ ಕ್ಷೇತ್ರದ ಜನರು ಅಂತಿಮವಾಗಿ ತೀರ್ಮಾನ ಮಾಡುತ್ತಾರೆ. ಅವರೇ ಇದಕ್ಕೆ ತಕ್ಕ ಉತ್ತರ ಕೊಡುತ್ತಾರೆ ಎಂದರು.
– ಬಿಜೆಪಿ–ಜೆಡಿಎಸ್ ಪಕ್ಷಗಳ ವಿವೇಕ ಶೂನ್ಯ ನಾಯಕರಿಂದು ಜನರೆದುರು ಬೆತ್ತಲಾಗಿದ್ದಾರೆ: ಸಿಎಂ
ಬೆಂಗಳೂರು: ವೈಟ್ನರ್ (Whitener) ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿಡಿಯೋ ಸಮೇತ ಸ್ಪಷ್ಟೀಕರಣ ನೀಡಿದ್ದಾರೆ. ವೈಟ್ನರ್ ಹಾಕಿರುವ ಸಾಲಿಗೆ ಲೈಟ್ ಬಿಟ್ಟು ವಿಡಿಯೋ ಮಾಡಲಾಗಿದ್ದು, ಅದರಲ್ಲಿನ ಸಾಲುಗಳು ಏನಿತ್ತು ಎಂಬುದನ್ನ ಟ್ವೀಟ್ ಮಾಡಿ ಸ್ಪಷ್ಟಪಡಿಸಿದ್ದಾರೆ. ಇದರಲ್ಲಿ ಟಿಪ್ಪಣಿಯೂ ಇಲ್ಲ, ಆದೇಶವೂ ಇಲ್ಲ, ಅಪ್ಪಣೆಯೂ ಇಲ್ಲ. ತನಗೆ ಸೇರಿದ ಭೂಮಿಯಲ್ಲೇ ನಿವೇಶನ ಕೊಡಿ ಎಂಬ ಮನವಿ ಅಷ್ಟೆ ಇದೆ ಎಂದು ವಿಪಕ್ಷಗಳ ವಿರುದ್ಧ ಸಿಎಂ ಸಿದ್ದರಾಮಯ್ಯ (Siddaramaiah) ಟಕ್ಕರ್ ಕೊಟ್ಟಿದ್ದಾರೆ.
ಮುಡಾ ಅಕ್ರಮವಾಗಿ ಸ್ವಾದೀನಪಡಿಸಿಕೊಂಡ ನಮ್ಮ ಕುಟುಂಬದ ಜಮೀನಿಗೆ ಬದಲಿ ಭೂಮಿ ನೀಡುವಂತೆ ನನ್ನ ಪತ್ನಿ ಸಲ್ಲಿಸಿದ್ದ ಅರ್ಜಿಯಲ್ಲಿ ನಾಲ್ಕೈದು ಪದಗಳಿಗೆ ವೈಟ್ನರ್ ಹೆಚ್ಚಿದನ್ನೇ ಮಹಾನ್ ಅಪಾರಾಧವೆಂಬಂತೆ ಗಂಟಲು ಹರಿದುಕೊಂಡ ಬಿಜೆಪಿ – ಜೆಡಿಎಸ್ ನಾಯಕರೇ, ವೈಟ್ನರ್ ಹಿಂದಿರುವ ಅಕ್ಷರಗಳೇನು ಎಂಬುದು ಈ ವೀಡಿಯೋದಲ್ಲಿ ಸ್ಪಷ್ಟವಾಗಿ ಕಾಣುತ್ತಿದೆ,… pic.twitter.com/NMQfgViKNp
ಸಿಎಂ ಎಕ್ಸ್ ಖಾತೆಯಲ್ಲಿ ಏನಿದೆ?
ಮುಡಾ ಅಕ್ರಮವಾಗಿ ಸ್ವಾದೀನಪಡಿಸಿಕೊಂಡ ನಮ್ಮ ಕುಟುಂಬದ ಜಮೀನಿಗೆ ಬದಲಿ ಭೂಮಿ ನೀಡುವಂತೆ ನನ್ನ ಪತ್ನಿ ಸಲ್ಲಿಸಿದ್ದ ಅರ್ಜಿಯಲ್ಲಿ ನಾಲ್ಕೈದು ಪದಗಳಿಗೆ ವೈಟ್ನರ್ ಹೆಚ್ಚಿದನ್ನೇ ಮಹಾನ್ ಅಪಾರಾಧವೆಂಬಂತೆ ಗಂಟಲು ಹರಿದುಕೊಂಡ ಬಿಜೆಪಿ – ಜೆಡಿಎಸ್ ನಾಯಕರೇ, ವೈಟ್ನರ್ ಹಿಂದಿರುವ ಅಕ್ಷರಗಳೇನು ಎಂಬುದು ಈ ವೀಡಿಯೋದಲ್ಲಿ ಸ್ಪಷ್ಟವಾಗಿ ಕಾಣುತ್ತಿದೆ. ನಿಮ್ಮ ದ್ವೇಷದ ಕನ್ನಡಕ ಕಳಚಿಟ್ಟು ಸರಿಯಾಗಿ ಕಣ್ಣುಬಿಟ್ಟು ನೋಡಿ. ಇದನ್ನೂ ಓದಿ: Jammu Kashmir Election | ಘೋಷಿಸಿದ ಪಟ್ಟಿ ಹಿಂಪಡೆದು ಕೊನೆಗೂ 15 ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್ ಮಾಡಿದ ಬಿಜೆಪಿ
ನನ್ನ ಪತ್ನಿ ಬದಲೀ ಭೂಮಿ ಕೇಳಿದ್ದು ತನ್ನದೇ ಜಮೀನನ್ನು ಮುಡಾ ವಶಕ್ಕೆ ಪಡೆದು ಅಭಿವೃದ್ಧಿಪಡಿಸಲಾದ ದೇವನೂರು 3ನೇ ಹಂತದ ಬಡಾವಣೆಯಲ್ಲಿ ಅಥವಾ ನಂತರ ಪ್ರಾಧಿಕಾರವು ಅಭಿವೃದ್ಧಿ ಪಡಿಸಿದ ಸಮಾನಾಂತರ ಬಡಾವಣೆಯಲ್ಲಿ. ಅಲ್ಲಿ ನಿವೇಶನಗಳು ಲಭ್ಯವಿರದ ಕಾರಣಕ್ಕೆ “ದೇವನೂರು 3ನೇ ಹಂತದ ಬಡಾವಣೆಯಲ್ಲಿ ಅಥವಾ ನಂತರ” ಎಂಬ ನಾಲ್ಕೈದು ಪದಗಳಿಗೆ ವೈಟ್ನರ್ ಹಾಕಿ, ಪ್ರಾಧಿಕಾರ ಅಭಿವೃದ್ಧಿ ಪಡಿಸಿದ ಸಮಾನಂತರ ಬಡಾವಣೆಯಲ್ಲಿ ನಿವೇಶನ ನೀಡಬೇಕೆಂಬ ಮನವಿ ಮಾಡಿದ್ದಾರೆ. ಇದರಲ್ಲಿ ಟಿಪ್ಪಣಿಯೂ ಇಲ್ಲ, ಆದೇಶವೂ ಇಲ್ಲ, ಅಪ್ಪಣೆಯೂ ಇಲ್ಲ. ತನಗೆ ಸೇರಿದ ಭೂಮಿಯಲ್ಲೇ ನಿವೇಶನ ಕೊಡಿ ಎಂಬ ಮನವಿ ಅಷ್ಟೆ ಇದೆ.
ವೈಟ್ನರ್ ಹಚ್ಚಿ ಕಪ್ಪು ಚುಕ್ಕೆ ಅಳಿಸಿಕೊಳ್ಳಲು ಸಾಧ್ಯವಿಲ್ಲ, ಸಿಎಂ ಪತ್ನಿ ನಿವೇಶನ ಕೇಳಿದ್ದು ವಿಜಯನಗರದಲ್ಲಿ, ಮುಡಾ ವಿಚಾರ ಚರ್ಚೆಗೆ ಬಂದ ನಂತರ ಸಿದ್ದರಾಮಯ್ಯ ಅವರ ಪರವಾಗಿ ಯಾರೋ ಹೋಗಿ ವೈಟ್ನರ್ ಹಚ್ಚಿ ಬಂದಿದ್ದಾರೆಂದು ಬೊಬ್ಬೆ ಹಾಕುತ್ತಿದ್ದ ಸ್ವಯಂ ಘೋಷಿತ ಕಾನೂನು ಪಂಡಿತರು ಈಗೇನು ಹೇಳುತ್ತಾರೆ? ಆತುರದಲ್ಲಿ ಮೂಗು ಕತ್ತರಿಸಿಕೊಂಡು, ರಾತ್ರಿಯೆಲ್ಲ ಕನ್ನಡಿ ಮುಂದೆ ನಿಂತು ಕಣ್ಣೀರು ಹಾಕಿದ್ದರಂತೆ ಹಾಗಾಯಿತು ಕೆಲವು ಅತಿ ಬುದ್ದಿವಂತರ ಕತೆ. ಇದನ್ನೂ ಓದಿ: ಗೃಹ ಸಚಿವರೇ ನಿಮ್ಮದು ಯಾವ ನ್ಯಾಯ? ಗುಬ್ಬಿ ಮೇಲೆ ಬ್ರಹ್ಮಾಸ್ತ್ರ ಏಕೆ?- ಸಾರ್ವಜನಿಕರಿಂದ ತರಾಟೆ
ಕಪೋಲ ಕಲ್ಪಿತ ಕಟ್ಟುಕತೆಗಳ ಮೂಲಕ ನನ್ನನ್ನು ಹಾಗೂ ನನ್ನ ಕುಟುಂಬವನ್ನು ವಿನಾಃಕಾರಣ ಅಪರಾಧಿಗಳಂತೆ ಬಿಂಬಿಸಿ ಬಾಯಿಗೆ ಬಂದಂತೆ ಮಾತನಾಡಿರುವ ಬಿಜೆಪಿ – ಜೆಡಿಎಸ್ ಪಕ್ಷಗಳ ವಿವೇಕ ಶೂನ್ಯ ನಾಯಕರು ಇಂದು ಜನರೆದುರು ಬೆತ್ತಲಾಗಿದ್ದಾರೆ. ಸತ್ಯ ಹಾಗೆಯೇ, ಅರಿವಿಗೆ ಬರುವುದು ಸ್ವಲ್ಪ ತಡವಾಗಬಹುದು, ಆದರೆ ಅಂತಿಮ ಗೆಲುವು ಸತ್ಯದ್ದೇ ಆಗಿರುತ್ತದೆ ಅಂತ ಬರೆದುಕೊಂಡಿದ್ದಾರೆ.
ಹಾಸನ: ಅಧಿಕಾರಿಗಳು 50:50 ನಿವೇಶನ ಕೊಡುವುದನ್ನು ಯಾವುದೇ ಕಾರಣಕ್ಕೂ ಸಭೆಗೆ ಮಂಡಿಸಲ್ಲ. ಅವರಿಗೆ ಆ ಅಧಿಕಾರವಿದೆ. ಮುಡಾ ಹಗರಣಕ್ಕೆ (MUDA Scam) ಅಧಿಕಾರಿಗಳು ಕಾರಣವೇ ಹೊರತು, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಸಮಿತಿಯಲ್ಲ ಎಂದು ಶಾಸಕ ರಮೇಶ್ ಬಂಡಿಸಿದ್ದೇಗೌಡ (Ramesha Bandisiddegowda) ಹೇಳಿದರು.
ನಗರದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ (Siddaramaiah) ಅವರು ನೇರ ಅರ್ಜಿದಾರರಲ್ಲ. ಸಿದ್ದರಾಮಯ್ಯ ಅವರ ಒಂದೇ ಒಂದು ಸಹಿ ಇಲ್ಲ. ಯಾರ ಗಮನಕ್ಕೂ ತರದೇ ಅಧಿಕಾರಿಗಳೇ ಇದನ್ನ ಮಾಡಿದ್ದಾರೆ. ಇದು ಮುಡಾ ಅಧ್ಯಕ್ಷರು ಮತ್ತು ಯಾವ ಸದಸ್ಯರ ಗಮನಕ್ಕೂ ಬರಲ್ಲ. ಅಧಿಕಾರ ದುರುಪಯೋಗಪಡಿಸಿಕೊಂಡಿರುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ. ಸವಲತ್ತು ಪಡೆದಿರುವ ಎಲ್ಲರ ಹೆಸರು ಹೇಳಬೇಕು. ತನಿಖೆ ನಡೆಯುತ್ತಿದೆ ಸತ್ಯಾಂಶ ಹೊರಬರುತ್ತದೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: Fashion Tips| ಹೆಣ್ಣಿಗೆ ಸೀರೆ ಯಾಕೆ ಅಂದ?- ನಾರಿಮಣಿಯರ ಗಮನ ಸೆಳೆದ ಬನಾರಸ್ ಸೀರೆ
ನಾನು ಒಬ್ಬ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯ. ನಾನು ಮೂರು ಬಾರಿ ಶಾಸಕನಾಗಿ ಮುಡಾದಲ್ಲಿ ಕೆಲಸ ಮಾಡಿದ್ದೇನೆ. ಅರ್ಜಿ ಇಲ್ಲದೇನೆ ಹೇಗೆ ಮಂಜೂರಾತಿ ಮಾಡಲು ಆಗುತ್ತೆ? ಅರ್ಜಿ ಇಲ್ಲ ಎಂದು ನಾವೇನು ಹೇಳಿಲ್ಲ. ಮಂಜೂರಾತಿ ಮಾಡಿಕೊಡಿ ಎಂದು ಅರ್ಜಿ ಕೊಟ್ಟಿದ್ದಾರೆ. ತಪ್ಪು ಬರೆದಾಗ ವೈಟ್ನರ್ ಹಾಕೋದು ಸಹಜ. ನ್ಯಾಯಾಂಗ ತನಿಖೆಗೆ ಕೊಟ್ಟಿದ್ದೇವೆ ಪರಿಶೀಲನೆ ಮಾಡಲಿ ಎಂದು ತಿಳಿಸಿದರು. ಇದನ್ನೂ ಓದಿ: ಮಂಕಿಪಾಕ್ಸ್ ಕಾಯಿಲೆ ಮುಂಜಾಗ್ರತ ಕ್ರಮವಾಗಿ ವಿಕ್ಟೋರಿಯಾದಲ್ಲಿ 50 ಬೆಡ್ ಮೀಸಲು – ಶರಣ ಪ್ರಕಾಶ್ ಪಾಟೀಲ್
ಯಡಿಯೂರಪ್ಪ (BS Yediyurappa) ಅವರ ತಂಗಿ ಮಕ್ಕಳಿಗೆ ನಿವೇಶನಗಳನ್ನು ಕೊಟ್ಟಿಲ್ವಾ? 50:50 ಯಲ್ಲಿ ನಿವೇಶನ ತಗೊಂಡಿಲ್ವಾ? ಪ್ರಾಮಾಣಿಕರಾಗಿದ್ದರೆ ಅವರು ತಿಳಿಸಲಿ. ಜೆಡಿಎಸ್ ಶಾಸಕರು (JDS MLAs) 50:50 ಹಂಚಿಕೆ ಅಡಿಯಲ್ಲಿ ಎಷ್ಟು ನಿವೇಶನ ತೆಗೆದುಕೊಂಡಿದ್ದಾರೆ? 1800-2000 ಸೈಟ್‌ಗಳನ್ನು ವ್ಯವಸ್ಥಿತವಾಗಿ ತೆಗೆದುಕೊಂಡಿದ್ದಾರಲ್ಲಾ? ಅದು ಯಾರದ್ದು? ಇವರು, ಇವರ ತಮ್ಮನ ಮಕ್ಕಳು, ಅಕ್ಕನ ಮಕ್ಕಳು, ಚಿಕ್ಕಪ್ಪ, ದೊಡ್ಡಪ್ಪನ ಮಕ್ಕಳಿಗೆ ಕೊಟ್ಟಿಲ್ವಾ? ಎಂದು ಕಿಡಿಕಾರಿದರು.
ಸಿಎಂ, ಡಿಸಿಎಂ ದೆಹಲಿ ಭೇಟಿಯ ವಿಚಾರ ತಿಳಿಸಿದ ಅವರು, ಎಲ್ಲಾ ಶಾಸಕರು ದೆಹಲಿಗೆ ಹೋಗಿಲ್ಲ. ಸಿಎಂ ಮತ್ತು ಡಿಸಿಎಂ ಅವರು ರಾಜ್ಯದ ಇವತ್ತಿನ ಪರಿಸ್ಥಿತಿ ಬಗ್ಗೆ ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮಾಹಿತಿ ನೀಡಲು ದೆಹಲಿಗೆ ಹೋಗಿದ್ದಾರೆ. ಅವರನ್ನು ದೆಹಲಿಗೆ ಹೋಗುವುದಕ್ಕೆ ಎಲ್ಲಾ ಶಾಸಕರು ಒತ್ತಾಯ ಮಾಡಿದ್ದೇವೆ ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: ಸಂಬಂಧಿಕನಿಂದಲೇ 10ರ ಬಾಲಕಿ ಮೇಲೆ ಅತ್ಯಾಚಾರ – ಅರೆಬೆತ್ತಲೆ ಸ್ಥಿತಿಯಲ್ಲಿ ಶವ ಪತ್ತೆ; ಕಾಮುಕ ಅರೆಸ್ಟ್
ರಾಷ್ಟ್ರಪತಿ ಅವರನ್ನು ಭೇಟಿ ಮಾಡೋಣ ಎಂದಿದ್ದೇವೆ. ಬಿಜೆಪಿ-ಜೆಡಿಎಸ್ ನವರು ಗದಾಪ್ರಹಾರ ಮಾಡುತ್ತಿದ್ದಾರೆ. ಅದನ್ನು ರಾಷ್ಟ್ರಪತಿಗಳಿಗೆ ಮನದಟ್ಟು ಮಾಡಿಕೊಡೋಣ ಎಂದು ಹೇಳಿದ್ದೇವೆ. ಆದಷ್ಟು ಬೇಗ ಎಲ್ಲಾ ಶಾಸಕರು ಹೋಗಿ ರಾಷ್ಟ್ರಪತಿಗಳನ್ನು ಭೇಟಿ ಮಾಡುತ್ತೇವೆ ಎಂದು ಹೇಳಿದರು.
– ಸಿಎಂ ಬೆನ್ನಿಗೆ ನಿಂತ ಕೈ ನಾಯಕರು; ಮೈತ್ರಿಕೂಟದ ವಿರುದ್ಧ ಕೌಂಟರ್ ಅಟ್ಯಾಕ್
– ಡಿಕೆಶಿ ಭಾಷಣದ ವೇಳೆ ʻಗೃಹಲಕ್ಷ್ಮಿʼ ಬರ್ತಿಲ್ಲ, ಬರ್ತಿಲ್ಲ ಅಂತ ಘೋಷಣೆ
ಮಂಡ್ಯ: ಬಿಜೆಪಿ-ಜೆಡಿಎಸ್ ಪಾದಯಾತ್ರೆಗೆ (BJP JDS Padayatra) ಕೌಂಟರ್ ಕೊಡಲು ಇಂದಿನಿಂದ (ಆ.5) ಎರಡು ದಿನಗಳ ಕಾಲ ಕಾಂಗ್ರೆಸ್ ಜನಾಂದೋಲನ ಆರಂಭಿಸಿದೆ. ಮದ್ದೂರು ತಾಲೂಕು ಕ್ರೀಡಾಂಗಣದಲ್ಲಿ ಆರಂಭಗೊಂಡಿರುವ ಜನಾಂದೋಲನ ಸಮಾವೇಶ ಮೊದಲ ದಿನ ಕಾಂಗ್ರೆಸ್ ಸಚಿವರು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಪರ ಬ್ಯಾಟ್ ಬೀಸಿದ್ದಾರೆ. ಅಲ್ಲದೇ ಬಿಜೆಪಿ – ಜೆಡಿಎಸ್ ಮೈತ್ರಿಕೂಟದ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ್ದಾರೆ.
ಸಮಾವೇಶದಲ್ಲಿ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ (DK Shivakumar) ಭಾಷಣ ಮಾಡುತ್ತಾ, ಸಿದ್ದರಾಮಯ್ಯ ಏನು ಮಾಡಬಾರದ ತಪ್ಪು ಮಾಡಿದ್ದಾರೆ? ಸಿದ್ದರಾಮಯ್ಯ ಕಳ್ಳತನ ಮಾಡಿದ್ದಾರ? ಸರ್ಕಾರಿ ಜಮೀನು ಒಡೆದಿದ್ದಾರ? ಸರ್ಕಾರ ಪಡೆದು ಬೇರೆ ಜಾಗ ಕೊಟ್ಟಿದೆ ತಪ್ಪೇನಿದೆ? ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಸಂಜಯ್ ಲೀಲಾ ಬನ್ಸಾಲಿ ಚಿತ್ರದಲ್ಲಿ ನನ್ನಂತಹ ನಟರ ಅಗತ್ಯವಿಲ್ಲ: ಮನೋಜ್ ಬಾಜಪೇಯಿ
ನಿಮ್ಮ (ಬಿಜೆಪಿ) ಸರ್ಕಾರದಲ್ಲಾದ ಹಗರಣಗಳ ಬಗ್ಗೆ ಮೊದಲು ಉತ್ತರ ಕೊಡಿ. ಆನಂತರ ಪಾದಯಾತ್ರೆ ಮಾಡಿ. ಸಿದ್ದರಾಮಯ್ಯರನ್ನ ಮುಟ್ಟಲು ನಿಮ್ಮ ಹಣೆಯಲ್ಲೂ ಬರೆದಿಲ್ಲ. ಹಿಂದುಳಿದ ವರ್ಗದ ನಾಯಕ 2ನೇ ಬಾರಿಗೆ ಸಿಎಂ ಆಗಿದ್ದು ನಿಮಗೆ ಸಹಿಸಲು ಆಗ್ತಿಲ್ಲ. ಸರ್ಕಾರ ಮಾಡುವ ಅವಕಾಶ ನಮಗೆ ಸಿಗಲಿಲ್ಲ ಎಂದು ಸಾಯುತ್ತಿದ್ದಾರೆ ಎಂದು ಬಿಜೆಪಿ ಜೆಡಿಎಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಕೋಚಿಂಗ್ ಸೆಂಟರ್‌ಗಳು ಡೆತ್ ಚೇಂಬರ್‌ಗಳಾಗಿ ಮಾರ್ಪಟ್ಟಿವೆ – ಸುಪ್ರೀಂ ಚಾಟಿ
ಗೃಹಲಕ್ಷ್ಮಿ ಯೋಜನೆ ಹಣ ಬರ್ತಿಲ್ಲ, ಬರ್ತಿಲ್ಲ:
ಮದ್ದೂರಿನಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಜನಾಂದೋಲನ ಸಮಾವೇಶದಲ್ಲಿ, ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿಗಳನ್ನು ಪ್ರಸ್ತಾಪಿಸಿ ಡಿಕೆಶಿ ಭಾಷಣ ಮಾಡುತ್ತಿದ್ದರು. ಈ ವೇಳೆ ಈ ವೇಳೆ ಗೃಹಲಕ್ಷ್ಮಿ ಯೋಜನೆಯ 2 ಸಾವಿರ ರೂ. ಬರ್ತಿದೆಯೋ – ಇಲ್ವೋ? ಎಂದು ಪ್ರಶ್ನಿಸಿದಾಗ ಗೃಹಲಕ್ಷ್ಮಿ ಯೋಜನೆ ಹಣ ಬರ್ತಿಲ್ಲ, ಬರ್ತಿಲ್ಲ ಎಂದು ಮಹಿಳೆಯರು ಕೂಗಿದ ದೃಶ್ಯವೂ ಕಂಡುಬಂದಿತು. ತಕ್ಷಣ ಎಚ್ಚೆತ್ತ ಡಿಕೆಶಿ, ಬರುತ್ತೆ ಬರುತ್ತೆ ಎಂದು ಸಮಾಧಾನಪಡಿಸಿದರು.
– ಬಿಜೆಪಿ-ಜೆಡಿಎಸ್‌ನಿಂದ ರಾಜ್ಯ ಸರ್ಕಾರ ಉರುಳಿಸಲು ಸಂಚು: ಆರೋಪ
ಚಿಕ್ಕಮಗಳೂರು: ಕೇಂದ್ರ ಸರ್ಕಾರದಿಂದ ಮೇಕೆದಾಟು ಯೋಜನೆಗೆ (Mekedatu Project) ಅನುಮತಿ ಕೊಡಿಸಿ, ಆಗ ಕಾಂಗ್ರೆಸ್ಸಿಗನಾಗಿ ನಾನೇ ನಿಮಗೆ ಕೈಮುಗಿದು ಧನ್ಯವಾದ ಹೇಳುತ್ತೇನೆ ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿಗೆ ಸಚಿವ ಕೃಷ್ಣಬೈರೇಗೌಡ (Krishna Byre gowda) ಹೇಳಿದ್ದಾರೆ.
ಚಿಕ್ಕಮಗಳೂರಿನಲ್ಲಿ (Chikkamagaluru) ಮಾತನಾಡಿದ ಅವರು, ಭದ್ರಾ ಮೇಲ್ದಂಡೆ, ಕಳಸ ಬಂಡೂರಿ ಯೋಜನೆಯನ್ನ ಕೇಂದ್ರ ಸರ್ಕಾರ ಕೆಳಗೆ ಹಾಕಿಕೊಂಡು ಕೂತಿದೆ. ಮೇಕೆದಾಟು ಯೋಜನೆಗೆ ಕೇಂದ್ರದಿಂದ ಅನುಮತಿ ಕೊಡಿಸಿ. ಆವಾಗ ನಾನು ಕಾಂಗ್ರೆಸ್ಸಿಗನಾಗಿ ನಿಮಗೆ ಕೈಮುಗಿದು ಧನ್ಯವಾದ ತಿಳಿಸುತ್ತೇನೆ. ಇದನ್ನು ಮಾಡಿದರೆ ನೀವು ಕೇಂದ್ರದಲ್ಲಿ ಮಂತ್ರಿಯಾಗಿದ್ದಕ್ಕೆ ಸಾರ್ಥಕವಾಗುತ್ತದೆ ಎಂದು ಸಲಹೆ ನೀಡಿದ್ದಾರೆ. ಇದನ್ನೂ ಓದಿ: ಶೇಖ್ ಹಸೀನಾ ಭಾರತದ ಮೂಲಕ ಲಂಡನ್‌ಗೆ ಪಲಾಯನ; ಭಾರತ-ಬಾಂಗ್ಲಾ ಗಡಿಯಲ್ಲಿ ಹೈಅಲರ್ಟ್
ಡಿಸೆಂಬರ್ ವೇಳೆಗೆ ಸರ್ಕಾರ ಬಿದ್ದು ಹೋಗುತ್ತದೆ ಎನ್ನುವ ಹೆಚ್.ಡಿ.ಕುಮಾರಸ್ವಾಮಿ (HD Kumaraswamy) ಅವರ ಹೇಳಿಕೆಗೆ ಪ್ರತಿಕ್ರಿಯಿಸಿ, ಕೇಂದ್ರ ಎನ್‌ಡಿಎ ಸರ್ಕಾರದಲ್ಲಿ ಕುಮಾರಸ್ವಾಮಿ ಮಂತ್ರಿಯಾಗಿದ್ದಾರೆ. ಕರ್ನಾಟಕಕ್ಕೆ ನಿಮ್ಮ ಕೊಡುಗೆ ಏನು ಸ್ವಾಮಿ? ಕಾಂಗ್ರೆಸ್ ಸರ್ಕಾರವನ್ನು ಬೀಳಿಸಬೇಕು ಎನ್ನುವುದೇ ನಿಮ್ಮ ಕೊಡುಗೆನಾ? ಸರ್ಕಾರವನ್ನು ಬೀಳಿಸುವುದಕ್ಕೆ, ಎತ್ತುವುದಕ್ಕೆ ವೋಟ್ ಹಾಕಿರುವ ಜನರಿದ್ದಾರೆ. ನೀವೆಲ್ಲಾ ಸೇರಿ ಕೇಂದ್ರದಲ್ಲಿ ಸರ್ಕಾರ ರಚನೆ ಮಾಡಿದ್ದೀರಲ್ಲ, ಕರ್ನಾಟಕಕ್ಕೆ ನಿಮ್ಮಿಂದ ಸಿಕ್ಕ ಕೊಡುಗೆ ಏನು? ಆಪರೇಷನ್ ಮಾಡಿ ಕರ್ನಾಟಕದಲ್ಲಿ ಸರ್ಕಾರ ಬೀಳಿಸಿದರೆ ರಾಜ್ಯಕ್ಕೆ ಅದೇ ನಿಮ್ಮ ಕೊಡುಗೆನಾ? ಜನರಿಂದ ಆಯ್ಕೆಯಾಗಿರುವ ಸರ್ಕಾರವನ್ನು ಉರುಳಿಸಬೇಕು ಎನ್ನುವುದು ಮಾತ್ರ ನಿಮ್ಮ ಪ್ರಯತ್ನವಾ? ಎಂದು ಸರಣಿ ಪ್ರಶ್ನೆಗಳ ಮೂಲಕ ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ರಾಮೇಶ್ವರಂ ಕೆಫೆ ಸ್ಫೋಟ ಕೇಸ್- ಆರೋಪಿಯನ್ನು ಕರೆ ತಂದು ಮರು ಸೃಷ್ಟಿ ಹೇಗೆ ಮಾಡಲಾಯ್ತು?
ಆ ಕಡೆ ಪ್ರಹ್ಲಾದ್ ಜೋಶಿ, ಈ ಕಡೆ ಕುಮಾರಸ್ವಾಮಿ ಇವರಿಬ್ಬರಿಂದ ಕಾಂಗ್ರೆಸ್ ಸರ್ಕಾರ ಬೀಳಿಸುವ ತಂತ್ರ ನಡೆಯುತ್ತಿದೆ. ಸರ್ಕಾರ ಬೀಳಿಸಿದ್ರೆ ಕರ್ನಾಟಕಕ್ಕೆ ಏನು ಸಿಗುತ್ತೆ? ನೀವು ಇವತ್ತು ಮಂತ್ರಿಯಾಗಿರೋದು ಬರೀ ದ್ವೇಷ ಸಾಧನೆ ಮಾಡೋದಕ್ಕಾ? ಸರ್ಕಾರ ಬೀಳಿಸುತ್ತೇವೆ ಎನ್ನುವುದು ಯಾವ ಪುರುಷಾರ್ಥಕ್ಕಾಗಿ? ಅದಕ್ಕಾಗಿಯೇ ಜನ ನಿಮ್ಮನ್ನ ದೆಹಲಿಗೆ ಕಳುಹಿಸಿರುವುದಾ? ಕೇಂದ್ರ ಬಿಜೆಪಿಯಿಂದ ಕರ್ನಾಟಕಕ್ಕೆ ಆಗುತ್ತಿರುವ ಅನ್ಯಾಯ ಮುಚ್ಚಿ ಹಾಕುವುದಕ್ಕೆ ಇವೆಲ್ಲ ಗಿಮಿಕ್ ಮಾಡುತ್ತಿದ್ದಾರೆ. ಬಿಜೆಪಿ-ಜೆಡಿಎಸ್ ಎರಡು ಪಕ್ಷಗಳು ಸೇರಿ, ಏನಾದರೂ ಮಾಡಿ ಸರ್ಕಾರ ಉರುಳಿಸಬೇಕು ಎಂದು ಪ್ರಯತ್ನ ಮಾಡುತ್ತಿದೆ ಎಂದು ಕೆಂಡಾಮಂಡಲವಾಗಿದ್ದಾರೆ. ಇದನ್ನೂ ಓದಿ: ಶುಭ ಮುಹೂರ್ತ ನೋಡಿ ಅಕ್ರಮದ ದಾಖಲೆ ಬಿಡುಗಡೆ ಮಾಡಿ: ಹೆಚ್‍ಡಿಕೆ ವಿರುದ್ಧ ಡಿಕೆಶಿ ವಾಗ್ದಾಳಿ
ಮಂಡ್ಯ: ಲೋಕಸಭಾ ಚುನಾವಣೆಯ ಮಂಡ್ಯ ಕ್ಷೇತ್ರ ಫಲಿತಾಂಶದಲ್ಲಿ ಬಿಜೆಪಿ-ಜೆಡಿಎಸ್ (BJP- JDS) ಮೈತ್ರಿ ಅಭ್ಯರ್ಥಿ ಹೆಚ್.ಡಿ ಕುಮಾರಸ್ವಾಮಿ ಬಹುತೇಕ ಗೆಲುವು ಸಾಧಿಸಿದ್ದು, ಅಧಿಕೃತ ಘೋಷಣೆಯೊಂದೇ ಬಾಕಿ ಉಳಿದಿದೆ.
ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು (Star Chandru) ವಿರುದ್ಧ ಹೆಚ್‌ಡಿಕೆ 2,71,344 ಮತಗಳ ಅಂತರದಲ್ಲಿ ಮುನ್ನಡೆ ಸಾಧಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಹೆಚ್‌ಡಿಕೆ ಗೆಲುವು ಬಹುತೇಕ ಖಚಿತವಾಗಿದೆ. ಮತಎಣಿಕೆ ಆರಂಭವಾದಿಗಿನಿಂದಲೂ ಕುಮಾರಸ್ವಾಮಿ ಮುನ್ನಡೆ ಕಾಯ್ದುಕೊಂಡು ಬಂದಿದ್ದರು.
ಒಕ್ಕಲಿಗ ಸಮುದಾಯದ ಪ್ರಾಬಲ್ಯವಿರುವ ಮಂಡ್ಯ ಕ್ಷೇತ್ರದಲ್ಲಿ ಒಕ್ಕಲಿಗರಿಬ್ಬರ ಮಧ್ಯೆಯೇ ಭಾರೀ ಪೈಪೋಟಿ ಏರ್ಪಟ್ಟಿತ್ತು. ಎನ್‌ಡಿಎ ಅಭ್ಯರ್ಥಿ, ಜೆಡಿಎಸ್‌ನ ಹೆಚ್‌ಡಿ ಕುಮಾರಸ್ವಾಮಿ (HD Kumaraswamy) ಹಾಗೂ ಕಾಂಗ್ರೆಸ್‌ನ ವೆಂಕಟರಮಣೇಗೌಡ ಅಲಿಯಾಸ್ ಸ್ಟಾರ್ ಚಂದ್ರು ನಡುವೆ ಇಲ್ಲಿ ಫೈಟ್ ಇತ್ತು. ಇದೀಗ ಸ್ಟಾರ್ ಚಂದ್ರು ವಿರುದ್ಧ ಹೆಚ್‌ಡಿಕೆ ಗೆಲುವು ಸಾಧಿಸಿದರೂ ಚುನಾವಣಾ ಆಯೋಗದಿಂದ ಅಧಿಕೃತ ಘೋಷಣೆ ಆಗಬೇಕಷ್ಟೇ.
ಕಳೆದ 2019ರ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಅಖಾಡಕ್ಕಿಳಿದಿದ್ದರು. ಇತ್ತ ಸ್ವತಂತ್ರ ಅಭ್ಯರ್ಥಿಯಾಗಿ ಸುಮಲತಾ ಅಂಬರೀಶ್ ಕಣಕ್ಕಿಳಿದು ನಿಖಿಲ್ ವಿರುದ್ಧ ಭರ್ಜರಿ ಜಯಗಳಿಸಿದ್ದರು. ಈ ಬಾರಿಯೂ ನಿಖಿಲ್ ಕುಮಾರಸ್ವಾಮಿ ಮಂಡ್ಯದಿಂದ ಸ್ಪರ್ಧೆ ಮಾಡ್ತಾರೆ ಅಂತ ಹೇಳಲಾಗ್ತಿತ್ತು. ಈ ನಡುವೆ ಸುಮಲತಾ ಅಂಬರೀಶ್ ಕೂಡ ಬಿಜೆಪಿಯಿಂದ ಟಿಕೆಟ್‌ಗಾಗಿ ಭಾರೀ ಕಸರತ್ತು ನಡೆಸಿದ್ದರು. ಆದರೆ ಕೊನೆಗೆ ಹೆಚ್.ಡಿ ಕುಮಾರಸ್ವಾಮಿ (HD Kumaraswamy) ಅವರೇ ಸ್ವತಃ ಕಣಕ್ಕಿಳಿದಿದ್ರು.
ವಿಜಯೋತ್ಸವಕ್ಕೆ ಬ್ರೇಕ್: ವಿಜಯೋತ್ಸವ, ಸಂಭ್ರಮಾಚರಣೆ, ಪಟಾಕಿ ಸಿಡಿಸುವುದಕ್ಕೆ ಸಂಪೂರ್ಣ ಬ್ರೇಕ್ ಹಾಕಿರುವ ಮಂಡ್ಯ ಜಿಲ್ಲಾಡಳಿತ ಜೂನ್ 4 ರ ಬೆಳಗ್ಗೆ 6 ಗಂಟೆಯಿಂದ ಜೂನ್ 5ರ ಬೆಳಗ್ಗೆ 6 ರವರೆಗೆ ಜಿಲ್ಲಾದ್ಯಂತ 144 ಸೆಕ್ಷನ್ ಜಾರಿ ಮಾಡಿದೆ. ಅಲ್ಲದೇ ಮಂಡ್ಯ ನಗರ ವ್ಯಾಪ್ತಿಯಲ್ಲಿ ಜೂನ್ 3ರ ಸಂಜೆ 6 ಗಂಟೆಯಿಂದ 5 ರ ಬೆಳಿಗ್ಗೆ 6 ಗಂಟೆಯವರೆಗೆ ಮದ್ಯ ಮಾರಾಟ ನಿಷೇಧ ಮಾಡಲಾಗಿದೆ.
ಚಿಕ್ಕಬಳ್ಳಾಪುರ: ಈ ಬಾರಿ `ಲೋಕ’ಸಮರದಲ್ಲಿ (Lok Sabha Elections) ರಾಜ್ಯದಲ್ಲಿ 20ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲೇಬೇಕೆಂದು ಪಣ ತೊಟ್ಟಿರುವ ಮೈತ್ರಿ ಪಕ್ಷವು ಜಂಟಿಯಾಗಿ ಕಸರತ್ತು ನಡೆಸುತ್ತಿದೆ. ಹೀಗಾಗಿ ರಾಜ್ಯದಲ್ಲಿ ಪ್ರಧಾನಿ ಮೋದಿ-ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡರ (HD DeveGowda) ದಂಡಯಾತ್ರೆ ಮುಂದುವರಿಯಲಿದೆ.
ಮೈಸೂರಿನಲ್ಲಿ ಅದ್ಧೂರಿ ಸಮಾವೇಶದ ಬಳಿಕ ಚಿಕ್ಕಬಳ್ಳಾಪುರ (Chikkaballapur) ತುಮಕೂರು, ಬೆಂಗಳೂರು ಗ್ರಾಮಾಂತರ ಕ್ಷೇತ್ರಗಳನ್ನು ಗುರಿಯಾಗಿಸಿಕೊಂಡು ಮೈತ್ರಿ ಪಕ್ಷ ಪ್ರಚಾರ ನಡೆಸಲು ಪ್ಲ್ಯಾನ್ ಮಾಡಿದೆ. ಇದೇ ಏಪ್ರಿಲ್ 20 ರಂದು ಚಿಕ್ಕಬಳ್ಳಾಪುರದ ದೇವನಹಳ್ಳಿಯಲ್ಲಿ ಮತ್ತೊಂದು ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಈ ಸಮಾವೇಶದಲ್ಲೂ ಪ್ರಧಾನಿ ಮೋದಿ-ಹೆಚ್‌ಡಿಡಿ ಜೊತೆಯಾಗಿ ಕಾಣಿಸಿಕೊಳ್ಳಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಪ್ರಧಾನಿ ಮೋದಿ ಅಭಿವೃದ್ಧಿ ಮಂತ್ರ, ದೊಡ್ಡಗೌಡರ ಒಕ್ಕಲಿಗ ದಾಳವೇ ದೋಸ್ತಿಗೆ ಬಿಗ್ ಬೂಸ್ಟ್ ನೀಡಲಿದ್ದು, ರಾಜ್ಯದಲ್ಲಿ ಹೆಚ್ಚುಸ್ಥಾನಗಳಲ್ಲಿ ಜಯಭೇರಿ ಬಾರಿಸುತ್ತಾ ಎಂಬುದನ್ನು ಕಾದು ನೋಡಬೇಕಿದೆ. ಇದನ್ನೂ ಓದಿ: ಹಿಂದುತ್ವದ ಭದ್ರಕೋಟೆಯಲ್ಲಿ ಮೋದಿ ಕಮಾಲ್- ಫೋಟೋಗಳಲ್ಲಿ ನೋಡಿ
ಸದ್ಯ ರಾಜ್ಯ ಚುನಾವಣಾ ಅಖಾಡಕ್ಕೆ ಪ್ರಧಾನಿ ಮೋದಿಯವರ (PM Modi) ಅದ್ಧೂರಿ ಪ್ರವೇಶವಾಗಿದೆ. ಒಂದೇ ದಿನ ಮೈಸೂರಿನಲ್ಲಿ ರ‍್ಯಾಲಿ, ಮಂಗಳೂರಿನಲ್ಲಿ ರೋಡ್ ಶೋ ನಡೆಸಿ ಅಬ್ಬರಿದ್ದಾರೆ. ಇದರೊಂದಿಗೆ ಮೋದಿ ಇದ್ದ ವೇದಿಕೆಯಲ್ಲೇ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ಕಾಣಿಸಿಕೊಂಡಿದ್ದು, ಪ್ರತಿಪಕ್ಷಗಳ ವಿರುದ್ಧ ಗುಡುಗಿದ್ದಾರೆ.
ಸರ್ಕಾರದ ವಿರುದ್ಧ ಕಿಡಿ, ಮೋದಿ ಗುಣಗಾನ:
ಮೋದಿ ಇದ್ದ ವೇದಿಕೆಯಲ್ಲಿ ದೇವೇಗೌಡರು ಕೂಡ ಆರ್ಭಟಿಸಿದ್ದಾರೆ. ಕುಮಾರಸ್ವಾಮಿ ವಿರುದ್ಧ ಫೋನ್ ಟ್ಯಾಪಿಂಗ್, ಒಕ್ಕಲಿಗರ ಮಠ ಒಡೆದ ಆರೋಪದ ಹಿನ್ನೆಲೆಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಸಿಎಂ ಸಿದ್ದರಾಮಯ್ಯ ವಿರುದ್ಧ ಮಾಜಿ ಪ್ರಧಾನಿ ದೇವೇಗೌಡರು ರೋಷಾವೇಶದಿಂದ ವಾಗ್ದಾಳಿ ನಡೆಸಿದ್ದಾರೆ. ಮೈಸೂರಿನಲ್ಲಿ ನಡೆದ ದೋಸ್ತಿ ಪಕ್ಷಗಳ ಸಮಾವೇಶದಲ್ಲಿ ಪ್ರಧಾನಿ ಮೋದಿಯನ್ನು ಕೊಂಡಾಡಿದ ಮಾಜಿ ಪ್ರಧಾನಿ ದೇವೇಗೌಡರು, ದೇಶಕ್ಕೆ ಕೀರ್ತಿ ತಂದು ಕೊಟ್ಟ ನಾಯಕ ಮೋದಿ. ಬುದ್ದಿಯಿದ್ದೇ ಮೋದಿ ಜೊತೆ ಹೋಗಲು ಕುಮಾರಸ್ವಾಮಿಗೆ ಹೇಳಿದ್ದೇನೆ. 64 ವರ್ಷದ ರಾಜಕೀಯ ಜೀವನದಲ್ಲಿ ಇಂಥ ರಾಜ್ಯ ಸರ್ಕಾರವನ್ನು ನೋಡಿಲ್ಲ. ಎಲ್ಲಾ ಕಡೆ ಬಾಚೋದೇ ಬಾಚೋದು. ರಾಜ್ಯ ಆಳ್ತಿರೋ ಮಹಾನುಭಾವರು, ಪುಣ್ಯಾತ್ಮರಿಗೆ ನಮೋ ನಮಃ. ಮೋದಿ ಬಗ್ಗೆ ಕೇವಲವಾಗಿ ಮಾತಾಡ್ತಾರೆ. ಯಡಿಯೂರಪ್ಪ ಎಲ್ಲಿಗೇ ಪ್ರಚಾರಕ್ಕೆ ಕರೆದೂ ನಾನು ಬರ್ತೇನೆ. ರಾಜ್ಯದಲ್ಲಿ ಕನಿಷ್ಠ 24 ಸೀಟ್ ಗೆಲ್ಲಬೇಕು ಎಂದು ಕರೆ ಕೊಟ್ಟಿದ್ದಾರೆ. ಇದನ್ನೂ ಓದಿ: ಯಡಿಯೂರಪ್ಪನವ್ರೇ ನೀವು ಕರೆದಲ್ಲಿ ಬಂದು ಪ್ರಚಾರ ಮಾಡ್ತೀನಿ: ಹೆಚ್ಡಿಡಿ
ಚಾಮರಾಜನಗರ: ಗ್ರಾಮ ಪಂಚಾಯಿತಿ ಅಧ್ಯಕ್ಷ – ಉಪಾಧ್ಯಕ್ಷ ಚುನಾವಣೆ ವೇಳೆ ಬಿಜೆಪಿ-ಜೆಡಿಎಸ್ ಬೆಂಬಲಿತ ಸದಸ್ಯರು ಮೈತ್ರಿ ಧರ್ಮ ಪಾಲನೆ ಮಾಡಿ ಮಾತುಕತೆಯಂತೆ ಆಣೆ ಪ್ರಮಾಣ ಮಾಡಿರುವ ವೀಡಿಯೋವೊಂದು ಇದೀಗ ವೈರಲ್ ಆಗಿರುವುದು ಭಾರೀ ಚರ್ಚೆಗೆ ಗ್ರಾಸವಾಗಿದೆ.
ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಕಣ್ಣೂರು ಗ್ರಾಮ ಪಂಚಾಯಿತಿಯಲ್ಲಿ 15 ಸದಸ್ಯ ಬಲವಿದ್ದು ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ 3 ಪಕ್ಷಗಳ ತಲಾ 5 ಬೆಂಬಲಿತರು ಗೆದ್ದಿದ್ದರು. ಆದರೆ ಇಲ್ಲಿ ಅಧಿಕಾರ ಹಿಡಿಯಲು ಯಾವುದಾದರೂ 2 ಪಕ್ಷಗಳು ಮೈತ್ರಿ ಮಾಡಿಕೊಳ್ಳುವುದು ಅವಶ್ಯಕವಾಗಿತ್ತು. ಈ ಹಿನ್ನೆಲೆ ಬಿಜೆಪಿ-ಜೆಡಿಎಸ್ ಮೈತ್ರಿಗೆ ಸಿದ್ಧವಾಗಿ 2 ಪಕ್ಷಗಳ ಸದಸ್ಯರು ಧರ್ಮಸ್ಥಳಕ್ಕೆ ಪ್ರವಾಸಕ್ಕೆ ಹೊರಟಿದ್ದರು. ಈ ವೇಳೆ ಕೆಲ ಸದಸ್ಯರು ಧರ್ಮಸ್ಥಳದ ಮಂಜುನಾಥ ಸ್ವಾಮಿ ದೇವಾಲಯದ ಮುಂಭಾಗ ಕರ್ಪೂರ ಹಚ್ಚಿ ನಾವೆಲ್ಲ ಆಡಿದ ಮಾತಿನಂತೆ ನಡೆದುಕೊಳ್ಳುತ್ತೇವೆ ಎಂದು ಪ್ರಮಾಣ ಮಾಡಿದ್ದಾರೆ.
ಮತ್ತೊಂದು ವೀಡಿಯೋದಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾ ಹನೂರು ತಾಲೂಕು ಘಟಕದ ಅಧ್ಯಕ್ಷ ಕಣ್ಣೂರು ಬಸವರಾಜಪ್ಪ ಮಾತನಾಡಿ ಮೊದಲ 10 ತಿಂಗಳ ಅವಧಿಗೆ ಬಸವರಾಜು, ಮುಂದಿನ 12 ತಿಂಗಳು ಮಮತಾರಾಣಿ ಮತ್ತು ಉಳಿದ 8 ತಿಂಗಳಿಗೆ ಶಬಾನ ಖಾನಮ್ ಅವರು ಅಧ್ಯಕ್ಷರಾಗಲಿದ್ದಾರೆ. ಏನೇ ಆದರೂ ನಾವೆಲ್ಲಾ 50:50 ಯಲ್ಲಿ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದ್ದಾರೆ.
ಇದೇ ವೇಳೆ ಮತ್ತೊರ್ವ ಮುಖಂಡ ಫೈರೋಜ್ ಮಾತನಾಡಿದ್ದು 5 ವರ್ಷ ಈಗ ಹೇಗಿದ್ದೇವೆ ಹಾಗೆಯೇ ಇರಬೇಕು, ಯಾರಾದರು ಒಬ್ಬರು ಹೆಚ್ಚು ಕಡಿಮೆ ಮಾಡಿದರೆ ಅವರ ಮನೆ ಮುರಿದು ಹೋಗುತ್ತದೆ ಎಂದು ಹೇಳಿದ್ದಾರೆ. ಈ ಎರಡು ವಿಡಿಯೋಗಳು ಭಾರೀ ಚರ್ಚೆಗೆ ಗ್ರಾಸವಾಗಿದ್ದು, ಮುಂದಿನ ದಿನಗಳಲ್ಲಿ ಯಾವ ತಿರುವು ಪಡೆಯಲಿದೆ ಅಥವಾ ಚುನಾವಣಾ ಆಯೋಗ ಮಧ್ಯೆ ಪ್ರವೇಶಿಸಿ ಏನಾದರೂ ಕ್ರಮ ಕೈಗೊಳ್ಳಲಿದೆಯೇ ಎಂಬುದನ್ನು ಕಾದುನೋಡಬೇಕಿದೆ.