Tag: ಬಿಜೆಪಿ-ಜೆಡಿಎಸ್‌ ಮೈತ್ರಿ

  • ಬಿಜೆಪಿ-ಜೆಡಿಎಸ್ ಮೈತ್ರಿ ಜನ ಒಪ್ಪುವುದಿಲ್ಲ: ಜಿ.ಪರಮೇಶ್ವರ್‌

    ಬಿಜೆಪಿ-ಜೆಡಿಎಸ್ ಮೈತ್ರಿ ಜನ ಒಪ್ಪುವುದಿಲ್ಲ: ಜಿ.ಪರಮೇಶ್ವರ್‌

    ತುಮಕೂರು: ಲೋಕಸಭೆ ಚುನಾವಣೆಗೆ ಜೆಡಿಎಸ್–ಬಿಜೆಪಿ (BJP-JDS Alliance) ಮೈತ್ರಿ ಮಾಡಿಕೊಂಡಿದ್ದು, ಇದರಿಂದ ಕಾಂಗ್ರೆಸ್‌ಗೆ ಲಾಭವೂ ಇಲ್ಲ, ನಷ್ಟವೂ ಇಲ್ಲ. ಮೈತ್ರಿಯನ್ನು ಜನ ಒಪ್ಪುವುದಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ (G.Parameshwara) ಹೇಳಿದರು.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಕಳೆದ ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್‌ನೊಂದಿಗೆ ಮೈತ್ರಿ ಮಾಡಿಕೊಂಡಿದ್ದೆವು. ಇದರಿಂದ ಫಲಿತಾಂಶ ಏನಾಯಿತು ಎಂಬುದು ಎಲ್ಲರಿಗೂ ಗೊತ್ತಿದೆ. ನಂತರ ಬಿಜೆಪಿಯವರಿಗೂ ಗೊತ್ತಾಗಲಿದೆ ಎಂದು ವಿಶ್ಲೇಷಿಸಿದರು. ಇದನ್ನೂ ಓದಿ: ಮಹಿಳೆಯರಿಗೆ ವಂಚನೆ ಮಾಡಿ ಅಂತಲೇ ದೇವರು ಮೋದಿಯನ್ನ ಕಳುಹಿಸಿದ್ದಾ; ಸಿಎಂ ಪ್ರಶ್ನೆ

    ಕಳೆದ ಚುನಾವಣೆಯಲ್ಲಿ ದೇವೇಗೌಡ ಅವರು ಕಷ್ಟ ಬಿದ್ದು ಕೆಲಸ ಮಾಡಿದರೂ ಗೆಲ್ಲಲು ಸಾಧ್ಯವಾಗಲಿಲ್ಲ. ಈಗ ಜನರು ಏನು ಮಾಡುತ್ತಾರೆ ನೋಡಬೇಕು ಎಂದರು.

    ಜೆಡಿಎಸ್ ಗ್ರಾಮಾಂತರ ಕ್ಷೇತ್ರದ ಮಾಜಿ ಶಾಸಕ ಡಿ.ಸಿ.ಗೌರಿಶಂಕರ್ ನನ್ನನ್ನು ಭೇಟಿ ಮಾಡಿದ್ದರು. ಆದರೆ ರಾಜಕೀಯ ಚರ್ಚೆ ನಡೆದಿಲ್ಲ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಬೆಂಗಳೂರು-ಹೈದರಾಬಾದ್‌ ಸೇರಿ 9 ವಂದೇ ಭಾರತ್‌ ರೈಲುಗಳಿಗೆ ಮೋದಿ ಚಾಲನೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • BJP-JDS ಮೈತ್ರಿಗೆ ಜೆಡಿಎಸ್ ಹಾಲಿ, ಮಾಜಿ ಶಾಸಕರಿಂದ ಸಹಮತ

    BJP-JDS ಮೈತ್ರಿಗೆ ಜೆಡಿಎಸ್ ಹಾಲಿ, ಮಾಜಿ ಶಾಸಕರಿಂದ ಸಹಮತ

    ಚಿಕ್ಕಬಳ್ಳಾಪುರ: 2024ರ ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಬಿಜೆಪಿ ಜೊತೆ ಜೆಡಿಎಸ್ ಮೈತ್ರಿಗೆ ಅಖಂಡ ಕೋಲಾರ-ಚಿಕ್ಕಬಳ್ಳಾಪುರ ಅವಳಿ ಜಿಲ್ಲೆಯ ಜೆಡಿಎಸ್ ನ ಹಾಲಿ ಹಾಗೂ ಮಾಜಿ ಶಾಸಕರಿಂದ ಯಾವುದೇ ತಕರಾರಿರುವುದಿಲ್ಲ. ಬಿಜೆಪಿ ಜೊತೆ ಮೈತ್ರಿಗೆ ನಮ್ಮ ಸಹಮತ ಇರುವುದಾಗಿ ಜೆಡಿಎಸ್‌ನ (JDS) ಹಾಲಿ ಹಾಗೂ ಮಾಜಿ ಶಾಸಕರು ಸ್ಪಷ್ಟಪಡಿಸಿದ್ದಾರೆ.

    ಚಿಕ್ಕಬಳ್ಳಾಪುರ (Chikkaballapura) ಜಿಲ್ಲೆಯ ಚಿಂತಾಮಣಿ ನಗರದ ಮಾಜಿ ಶಾಸಕ ಜೆ.ಕೆ ಕೃಷ್ಣಾರೆಡ್ಡಿಯವರ ಜೆಕೆ ಭವನದಲ್ಲಿ ಮಾಜಿ ಶಾಸಕ ಜೆ.ಕೆ ಕೃಷ್ಣಾರೆಡ್ಡಿ, ಶ್ರೀನಿವಾಸಪುರ ಶಾಸಕ ವೆಂಕಟಶಿವಾರೆಡ್ಡಿ, ಶಿಡ್ಲಘಟ್ಟ ಕ್ಷೇತ್ರದ ಶಾಸಕ ಮೇಲೂರು ರವಿಕುಮಾರ್, ಗೌರಿಬಿದನೂರು ಕ್ಷೇತ್ರದ ಜೆಡಿಎಸ್ ಮುಖಂಡ ಜೆಡ್.ಪಿ ನರಸಿಂಹಮೂರ್ತಿ ಸೇರಿದಂತೆ ಹಲವು ನಾಯಕರು ಸಭೆ ನಡೆಸಿ ಮಾತನಾಡಿದ್ದಾರೆ. ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳುವ ಜೆಡಿಎಸ್ ವರಿಷ್ಠರ ನಡೆಗೆ ನಮ್ಮ ಸಮ್ಮತಿ ಇದೆ. ಇದಕ್ಕೆ ಯಾರ ವಿರೋಧವೂ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಗಣೇಶ ಹಬ್ಬಕ್ಕೆ’ಕೆಂದಾವರೆ’ ಫಸ್ಟ್ ಲುಕ್ ರಿಲೀಸ್- ಹೊಸಬರ ತಂಡಕ್ಕೆ ಅಶ್ವಿನಿ ಪುನೀತ್ ಸಾಥ್

    ಚಿಂತಾಮಣಿ ಮಾಜಿ ಶಾಸಕ ಜೆ.ಕೆ ಕೃಷ್ಣಾರೆಡ್ಡಿ ‌ಮಾತನಾಡಿ, ಜೆಡಿಎಸ್ ವರಿಷ್ಠರ ಈಗಾಗಲೇ ನಮ್ಮ ಸಹಮತದ ಅಭಿಪ್ರಾಯದ ಬಗ್ಗೆ ತಿಳಿಸಲಾಗಿದೆ. ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿ ಬಹುತೇಕ ಫಿಕ್ಸ್ ಆಗಲಿದೆ. ಆದರೆ ಯಾವ-ಯಾವ ಕ್ಷೇತ್ರ ನಮಗೆ ಬಿಟ್ಟುಕೊಡಬೇಕು ಎಂಬುದು ತೀರ್ಮಾನವಾಗಿಲ್ಲ. ಈ ಬಗ್ಗೆ ವರಿಷ್ಠರು ಚರ್ಚೆ ನಡೆಸಿ ತೀರ್ಮಾನ ಮಾಡಿಕೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕರ್ನಾಟಕ ಸರ್ಕಾರಕ್ಕೆ ಮತ್ತೆ ಕಾವೇರಿ ಶಾಕ್ – ತ.ನಾಡಿಗೆ ಪ್ರತಿದಿನ 5,000 ಕ್ಯೂಸೆಕ್ ನೀರು ಹರಿಸಲು ಆದೇಶ

    ಇನ್ನೂ ಶಿಡ್ಲಘಟ್ಟ ಹಾಲಿ ಶಾಸಕ ಮೇಲೂರು ರವಿಕುಮಾರ್ ಮಾತನಾಡಿ, 2024ರ ಲೋಕಸಭಾ ಚುನಾವಣೆಯಲ್ಲಿ ನಮ್ಮ ಪಕ್ಷದ ವರಿಷ್ಠರ ತೀರ್ಮಾನಕ್ಕೆ ಎರಡೂ ಜಿಲ್ಲೆಯ ನಾಯಕರು ಒಮ್ಮತದಿಂದ ಸಹಮತ ವ್ಯಕ್ತಪಡಿಸುತ್ತೇವೆ. ನಾವು ಬಿಜೆಪಿಗೆ ಸಪೋರ್ಟ್ ಅಂತ ಹೇಳುವುದಲ್ಲ. ಹಳೇ ಮೈಸೂರು ಭಾಗದಲ್ಲಿ ಜೆಡಿಎಸ್‌ಗೆ ಶಕ್ತಿ ಇದೆ. ಹಾಗಾಗಿ ಈ ಭಾಗದಲ್ಲಿ ಬಿಜೆಪಿ ನಮಗೆ ಸಪೋರ್ಟ್ ಮಾಡಲಿದೆ. ಹಾಗಾಗಿ ನಮ್ಮ ವರಿಷ್ಠರ ತೀರ್ಮಾನವೇ ನಮ್ಮೆಲ್ಲರ ತೀರ್ಮಾನ ಅಂತ ಸ್ಪಷ್ಟಪಡಿಸಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಅನಿಷ್ಟ ಸರ್ಕಾರದ ವಿರುದ್ಧ ಹೋರಾಟಕ್ಕೆ ಮೈತ್ರಿ ಅನಿವಾರ್ಯ: ಬೊಮ್ಮಾಯಿ

    ಅನಿಷ್ಟ ಸರ್ಕಾರದ ವಿರುದ್ಧ ಹೋರಾಟಕ್ಕೆ ಮೈತ್ರಿ ಅನಿವಾರ್ಯ: ಬೊಮ್ಮಾಯಿ

    ಬೆಂಗಳೂರು: ಈ ಅನಿಷ್ಟ ಸರ್ಕಾರದ ವಿರುದ್ಧ ಹೋರಾಟ ಅವಶ್ಯಕತೆ ಇದೆ. ಹಾಗಾಗಿ ಜೆಡಿಎಸ್ ಜೊತೆ ಮೈತ್ರಿ ಅನಿವಾರ್ಯ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಹೇಳಿದ್ದಾರೆ.

    ಮಂಗಳವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈಗಾಗಲೇ ಎರಡೂ ವಿರೋಧ ಪಕ್ಷಗಳು ಒಂದಾಗಬೇಕು ಎಂಬ ನಿರೀಕ್ಷೆ ಇದೆ. ಮುಂದಿನ ಸಾಧಕ-ಬಾಧಕಗಳ ಬಗ್ಗೆ ಚರ್ಚೆಯಾಗಬೇಕಿದೆ. ಎರಡೂ ಪಕ್ಷದ ವರಿಷ್ಠರು ಸೇರಿ ತೀರ್ಮಾನ ಮಾಡಲಿದ್ದಾರೆ ಎಂದರು. ಇದನ್ನೂ ಓದಿ: ಯಲಹಂಕ ದೊಡ್ಡದೇನಲ್ಲ ನನಗೆ. ಬಾರಲೇ ಅಲ್ಲಿಗೆ ಬರೀನಿ ಬಾ: ಸಚಿವ ಸುಧಾಕರ್‌ ಧಮ್ಕಿ

    ಎರಡೂ ಪಕ್ಷಗಳು ಅಸಹಾಯಕವಾಗಿವೆ ಎಂದು ಕಾಂಗ್ರೆಸ್ ಟೀಕೆ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಈಗ ಐಎನ್‌ಡಿಐಎ ಒಕ್ಕೂಟ ಒಗ್ಗಟ್ಟಾಗಿದ್ದಾರೆ. ಒಬ್ಬರಿಗೊಬ್ಬರು ಆಗದ ಮಮತಾ ಬ್ಯಾನರ್ಜಿ, ಸಿಪಿಐ, ಸಿಪಿಎಂ, ಅರವಿಂದ ಕೇಜ್ರಿವಾಲ್, ಕಾಂಗ್ರೆಸ್ ಎಲ್ಲರೂ ಒಟ್ಟಾಗಿದ್ದಾರೆ. ಎಲ್ಲ ವಿರೋಧ ಪಕ್ಷಗಳು ಒಟ್ಟಾಗಿವೆ. ಹಾಗಾದರೆ ಅವು ಅಸಹಾಯಕರಾ? ರಾಜಕಾರಣದ ಇತಿಹಾಸದಲ್ಲಿ ಅನೇಕ ಬದಲಾವಣೆ ಆಗಿದೆ ಎಂದು ಹೇಳಿದರು.

    ಸಿಎಂ ಸಿದ್ದರಾಮಯ್ಯ, ಅಡ್ವಾಣಿ ಅವರನ್ನು ಭೇಟಿ ಆಗಿದ್ದರು ಎಂಬ ಬಿ.ಕೆ. ಹರಿಪ್ರಸಾದ್ ಹೇಳಿಕೆ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಈಗಾಗಲೇ ಸಿದ್ದರಾಮಯ್ಯನವರೇ ಉತ್ತರ ನೀಡಿದ್ದಾರೆ. ನಾಯಕರ ಭೇಟಿ ಮಾಡಿದರೆ ಸಿದ್ಧಾಂತ ಬದಲಾಗುವುದಿಲ್ಲ ಎಂದು ಹೇಳಿದ್ದಾರೆ. ಅದರ ಅರ್ಥ ಏನು ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಡಿಕೆ ಬ್ರದರ್ಸ್‌ಗೆ ಠಕ್ಕರ್‌ – ಲೋಕಸಭೆಗೆ ಹೆಚ್‌ಡಿಕೆ ಸ್ಪರ್ಧೆ?



    ಇಂದಿನಿಂದ ರಾಜ್ಯ ಸರ್ಕಾರ ತಮಿಳುನಾಡಿಗೆ ಕಾವೇರಿ ನೀರು ಬಿಡುವುದಿಲ್ಲ ಅಂತ ಸುಪ್ರೀಂ ಕೋರ್ಟಿಗೆ ಅಫಿಡವಿಟ್ ಸಲ್ಲಿಸಿದೆ. ಸರ್ಕಾರ ತನ್ನ ಮಾತಿಗೆ ಎಷ್ಟು ಗಟ್ಟಿಯಾಗಿ ನಿಲ್ಲುತ್ತದೆ ಎಂದು ನೋಡೋಣ ಎಂದರು.

    ಸಚಿವ ಡಿ. ಸುಧಾಕರ್ ವಿರುದ್ಧ ಎಫ್‌ಐಆರ್ ಆಗಿದ್ದು, ಈ ಬಗ್ಗೆ ಸಮಗ್ರ ತನಿಖೆ ಆಗಬೇಕು. ಯಾರೆಷ್ಟೇ ದೊಡ್ಡವರಿದ್ರೂ ತಪ್ಪು ಮಾಡಿದ್ರೆ ಶಿಕ್ಷೆ ಆಗಲಿ‌ ಎಂದು ಆಗ್ರಹಿಸಿದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಜೆಡಿಎಸ್-ಬಿಜೆಪಿ ಮೈತ್ರಿ ಮಾತುಕತೆ ಆರಂಭಿಕ ಹಂತದಲ್ಲಿದೆ: ಹೆಚ್.ಡಿ.ಕುಮಾರಸ್ವಾಮಿ

    ಜೆಡಿಎಸ್-ಬಿಜೆಪಿ ಮೈತ್ರಿ ಮಾತುಕತೆ ಆರಂಭಿಕ ಹಂತದಲ್ಲಿದೆ: ಹೆಚ್.ಡಿ.ಕುಮಾರಸ್ವಾಮಿ

    – ಮೂರೇ ತಿಂಗಳಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ಆಡಳಿತ ವಿರೋಧಿ ಅಲೆ; ಕಾದು ನೋಡಿ ಎಂದ ಮಾಜಿ ಸಿಎಂ

    ಬೆಂಗಳೂರು: ಜೆಡಿಎಸ್ ಮತ್ತು ಬಿಜೆಪಿ ಮೈತ್ರಿಯ (BJP-JDS Alliance) ಬಗ್ಗೆ ಮೊದಲ ಬಾರಿಗೆ ಹೇಳಿಕೆ ನೀಡಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ (H.D.Kumaraswamy), ಎಲ್ಲಾ ವಿಚಾರಗಳು ಆರಂಭಿಕ ಹಂತದಲ್ಲಿದೆ. ಈವರೆಗೂ ಕ್ಷೇತ್ರ ಹಂಚಿಕೆ ಬಗ್ಗೆ ಚರ್ಚೆ ನಡೆದಿಲ್ಲ. ಮುಂದೆ ಈ ಬಗ್ಗೆ ಹೇಳುತ್ತೇವೆ ಎಂದಿದ್ದಾರೆ.

    ಬೆಂಗಳೂರಿನಲ್ಲಿ ತಮ್ಮನ್ನು ಭೇಟಿಯಾದ ಮಾಧ್ಯಮಗಳ ಜತೆ ಮಾತನಾಡಿದ ಅವರು, ಮೈತ್ರಿಗೆ ಮಾಜಿ ಪ್ರಧಾನಿ ದೇವೇಗೌಡರು (H.D.Devegowda) ಒಪ್ಪಿಗೆ ಸೂಚಿದ್ದಾರಾ ಎನ್ನುವ ಪ್ರಶ್ನೆಗೂ, ಕಾದು ನೋಡಿ ಎಂದಷ್ಟೇ ಉತ್ತರಿಸಿದ್ದಾರೆ. ಇದನ್ನೂ ಓದಿ: ಬಿಜೆಪಿ-ಜೆಡಿಎಸ್ ಮೈತ್ರಿ ಬಗ್ಗೆ ನಾವು ತಲೆಕೆಡಿಸಿಕೊಂಡಿಲ್ಲ: ಡಿಕೆಶಿ ಟಾಂಗ್

    ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ (B.S.Yediyurappa) ಅವರು ಮೈತ್ರಿ ಬಗ್ಗೆ ಮಾತನಾಡಿದ್ದಾರೆ. ಅವರಿಗೆ ನಾನು ಅಭಾರಿ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಮೈತ್ರಿಕೂಟದ ಬಗ್ಗೆ ಅವರು ಹೇಳಿದ್ದಾರೆ. ರಾಜ್ಯದ ಜನರನ್ನು ಲೂಟಿ ಮಾಡುತ್ತಿರುವವರಿಗೆ ಕಡಿವಾಣ ಹಾಕಬೇಕಿದೆ. 2006 ರಲ್ಲಿಯೂ ನಾನು ಬಿಜೆಪಿ ಜತೆ ಸೇರಿ ಸರ್ಕಾರ ಮಾಡಿದ್ದೆ ಎಂದಿದ್ದಾರೆ.

    ರಾಜ್ಯದಲ್ಲಿ ಕಾಂಗ್ರೆಸ್ (Congress) ಸರ್ಕಾರದ ವಿರುದ್ಧ ಮೂರೇ ತಿಂಗಳಿಗೆ ಜನರು ರೋಸಿ ಹೋಗಿದ್ದಾರೆ. ಯಾವುದೇ ಸರ್ಕಾರಕ್ಕೆ ನಾಲ್ಕು ವರ್ಷ ಕಳೆದ ಮೇಲೆ ಆಡಳಿತ ವಿರೋಧಿ ಅಲೆ ಎದುರಾಗುತ್ತದೆ. ಆದರೆ ಈ ಸರ್ಕಾರ ಮೂರೇ ತಿಂಗಳಿಗೆ ಆಡಳಿತ ವಿರೋಧಿ ಅಲೆ ಎದುರಿಸುತ್ತಿದೆ. ಇಂಥ ಸರ್ಕಾರದ ವಿರುದ್ಧ ಸಂಘಟಿತವಾಗಿ ಹೋರಾಟ ನಡೆಸಬೇಕಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ನಿರ್ನಾಮ ಮಾಡುವ ಸಲುವಾಗಿ ಬಿಜೆಪಿ-ಜೆಡಿಎಸ್ ಜೊತೆ ಮೈತ್ರಿ: ಈಶ್ವರಪ್ಪ

    ಮೈತ್ರಿಯ ಮಾತುಕತೆ ಪ್ರಾಥಮಿಕ ಹಂತದಲ್ಲಿದೆ. ರಾಜ್ಯದ ಹಿತದೃಷ್ಟಿಯಿಂದ ಈ ರೀತಿಯ ಕೆಲವು ತೀರ್ಮಾನವಾಗುತ್ತದೆ. ಕೆಲದಿನ ಕಾದು ನೋಡಿ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದ್ದಾರೆ.

    ಕೆಲವರು ಸಿದ್ಧಾಂತಗಳ ಬಗ್ಗೆ ಮಾತನಾಡುತ್ತಾರೆ. ಅದರ ಬಗ್ಗೆ ಮುಂದೆ ಮಾತಾಡೋಣ. ಇನ್ನು ಮೈತ್ರಿ ವಿಷಯಕ್ಕೆ ಬಂದರೆ, ಅದಕ್ಕೆ ಇನ್ನೂ ಸಮಯ ಇದೆ. ಇನ್ನು ಹಲವಾರು ವಿಚಾರಗಳ ಬಗ್ಗೆ ಚರ್ಚೆ ಆಗಬೇಕಿದೆ. ಇಲ್ಲಿ ಪರಸ್ಪರ ಕೊಟ್ಟು ತೆಗೆದುಕೊಳ್ಳುವುದಲ್ಲ. ವಿಶ್ವಾಸ, ಗೌರವ ಮುಖ್ಯ ಎಂದು ಮಾತನಾಡಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]