Tag: ಬಿಜೆಪಿ ಮುಖಂಡ

  • ಪ್ರವೀಣ್‌ ನೆಟ್ಟಾರು ಹತ್ಯೆ ಕೇಸ್‌ – NIAಯಿಂದ ಮತ್ತೊಬ್ಬ ಆರೋಪಿ ಬಂಧನ

    ಪ್ರವೀಣ್‌ ನೆಟ್ಟಾರು ಹತ್ಯೆ ಕೇಸ್‌ – NIAಯಿಂದ ಮತ್ತೊಬ್ಬ ಆರೋಪಿ ಬಂಧನ

    ಮಂಗಳೂರು: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು (Praveen Nettaru) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಆರೋಪಿಯನ್ನು ಎನ್‌ಐಎ (NIA) ಬಂಧಿಸಿದೆ.

    ದಕ್ಷಿಣ ಕನ್ನಡ (Dakshina Kannada) ಜಿಲ್ಲೆ ಸುಳ್ಯ ತಾಲೂಕಿನ ಬೆಳ್ಳಾರೆ ನಿವಾಸಿ ಶಾಹಿದ್ (40) ಬಂಧಿತ ಆರೋಪಿ. ಈ ಸಂಬಂಧ NIA ಅಧಿಕಾರಿಗಳು ಅಧಿಕೃತ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: 150 ವರ್ಷಗಳ ಬಳಿಕ ಧಾರವಾಡಕ್ಕೆ ಭೇಟಿ ನೀಡಿದ ಕನ್ನಡ ನಿಘಂಟು ತಜ್ಞ ಕಿಟೆಲ್ ಕುಟುಂಬ

    SDPI ಮುಖಂಡರಾದ ಶಾಫಿ ಬೆಳ್ಳಾರೆ ಮತ್ತು ಇಕ್ಬಾಲ್ ಬೆಳ್ಳಾರೆಯ ತಂಗಿ ಗಂಡ ಶಾಹಿದ್‌ನನ್ನು ಬಂಧಿಸಲಾಗಿದೆ. ಆರೋಪಿಯನ್ನು ಬಂಧಿಸಿ ಎನ್‌ಐಎ ತಂಡ ಬೆಂಗಳೂರಿಗೆ ಕರೆತಂದಿದೆ.

    ರಾಜ್ಯ ಬಿಜೆಪಿ ಯುವ ಮೋರ್ಚಾ ಸದಸ್ಯರಾಗಿದ್ದ ಪ್ರವೀಣ್‌ ಕುಮಾರ್‌ ನೆಟ್ಟಾರು ಹತ್ಯೆಯಾಗಿತ್ತು. ಹತ್ಯೆಗೆ ರಾಜ್ಯಾದ್ಯಂತ ತೀವ್ರ ಖಂಡನೆ ವ್ಯಕ್ತವಾಗಿತ್ತು. ಪ್ರಕರಣದ ಗಂಭೀರತೆ ಅರಿತ ಸರ್ಕಾರ ಕೇಸ್‌ನ್ನು ಎನ್‌ಐಎ ತನಿಖೆಗೆ ವಹಿಸಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೂ ಹಲವು ಆರೋಪಿಗಳನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ. ಇದನ್ನೂ ಓದಿ: ಅಪ್ರಾಪ್ತ ಬಾಲಕಿ ರೇಪ್‌ಕೇಸ್ – ಪ್ರಕರಣ ಭೇದಿಸಿದ ತನಿಖಾ ತಂಡಕ್ಕೆ 1 ಲಕ್ಷ ಬಹುಮಾನ

    Live Tv
    [brid partner=56869869 player=32851 video=960834 autoplay=true]

  • ನನ್ನನ್ನು ವೇಶ್ಯಾವಾಟಿಕೆಗೆ ಒತ್ತಾಯಿಸ್ತಿದ್ರು- ಅಂಕಿತಾ ಭಂಡಾರಿ ವಾಟ್ಸಾಪ್ ಸಂದೇಶ ವೈರಲ್

    ನನ್ನನ್ನು ವೇಶ್ಯಾವಾಟಿಕೆಗೆ ಒತ್ತಾಯಿಸ್ತಿದ್ರು- ಅಂಕಿತಾ ಭಂಡಾರಿ ವಾಟ್ಸಾಪ್ ಸಂದೇಶ ವೈರಲ್

    ಡೆಹ್ರಾಡೂನ್: ಇತ್ತೀಚೆಗಷ್ಟೇ ನಾಪತ್ತೆಯಾಗಿ ತಾನು ಕೆಲಸ ಮಾಡುತ್ತಿದ್ದ ರೆಸಾರ್ಟ್‌ನಲ್ಲಿಯೇ (Resort) ಶವವಾಗಿ ಪತ್ತೆಯಾಗಿದ್ದ ಉತ್ತರಾಖಂಡದ (Uttarakhand) ಯುವತಿ (Young Women) ಅಂಕಿತಾ ಭಂಡಾರಿ ಸಾವಿಗೂ ಮುನ್ನ ತನ್ನ ಸ್ನೇಹಿತರಿಗೆ ಕಳುಹಿಸಿದ್ದ ವಾಟ್ಸಾಪ್ ಸಂದೇಶಗಳು (WhatsApp Message) ಬಹಿರಂಗಗೊಂಡಿವೆ.

    ಹೌದು.. ಹತ್ಯೆಗೀಡಾದ ಉತ್ತರಾಖಂಡದ (Uttarakhand Murder) ಯುವತಿ `ನನ್ನನ್ನು ವೇಶ್ಯಾವಾಟಿಕೆ (Prostitute) ಮಾಡುವಂತೆ ಒತ್ತಾಯಿಸುತ್ತಿದ್ದಾರೆ, ಎಲ್ಲರೂ ನನ್ನನ್ನು ವೇಶ್ಯೆಯಾಗಿ ಮಾಡಲು ಪ್ರಯತ್ನಿಸುತ್ತಿದ್ದಾರೆ’ ಎಂದು ಸಾಯುವ ಮುನ್ನ ಸ್ನೇಹಿತರಿಗೆ ಕಳುಹಿಸಿದ್ದ ಸಂದೇಶಗಳು ಬೆಳಕಿಗೆ ಬಂದಿವೆ. ಈ ಸಂದೇಶಗಳು ಆರೋಪವನ್ನು ಬಲವಾಗಿ ದೃಢಪಡಿಸುವಂತೆ ಸೂಚಿಸುತ್ತಿವೆ.

    ಯುವತಿ ಸಂದೇಶ ಏನಿತ್ತು?
    ಸಾಯವ ಮುನ್ನ ಯುವತಿ `10 ಸಾವಿರ ಹಣ ನೀಡಿ ನನ್ನನ್ನು ವೇಶ್ಯಾವಾಟಿಕೆ ಮಾಡುವಂತೆ ಒತ್ತಾಯಿಸುತ್ತಿದ್ದಾರೆ, ವ್ಯಕ್ತಿಯೊಬ್ಬ ಅನುಚಿತವಾಗಿ ಸ್ಪರ್ಶಿಸುತ್ತಿದ್ದಾನೆ ಎಂಬುದಾಗಿ ವಾಟ್ಸಾಪ್ (WhatsApp Message) ಮಾಡಿದ್ದಾಳೆ. ಸಂತ್ರಸ್ತೆಯ ವಾಟ್ಸಾಪ್‌ ಸಂದೇಶದ ಸ್ಕ್ರೀನ್‌ಶಾಟ್‌ಗಳು ಜಾಲತಾಣದಲ್ಲಿ ಹರಿದಾಡುತ್ತಿವೆ. ಈ ಸಂದೇಶಗಳು ಸಾಯುವ ಮುನ್ನ ಮೃತ ಯುವತಿಯಿಂದಲೇ ಬಂದಿವೆ ಎಂಬುದನ್ನು ಪ್ರಾಥಮಿಕ ತನಿಖೆ ದೃಢಪಡಿಸಿದೆ. ಅದರ ಹೊರತಾಗಿಯೂ ವಿಧಿ ವಿಜ್ಞಾನ (Forensic Investigation) ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು (Police) ತಿಳಿಸಿದ್ದಾರೆ.

    ಸಂತ್ರಸ್ತ ಮಹಿಳೆಯಿಂದ ರೆಸಾರ್ಟ್ ಉದ್ಯೋಗಿಯೊಬ್ಬರಿಗೆ ಕರೆ ಮಾಡಿದ ಕಾಲ್ ರೆಕಾರ್ಡ್ ಕ್ಲಿಪ್ ಸಹ ಪೊಲೀಸರಿಗೆ ಲಭ್ಯವಾಗಿದೆ. ರೆಸಾರ್ಟ್ ಅತಿಥಿಗಳಿಗೆ ವಿಶೇಷ ಲೈಂಗಿಕ ಸೇವೆ ಒದಗಿಸುವಂತೆ ರೆಸಾರ್ಟ್ ಮಾಲೀಕ ಒತ್ತಡ ಹೇರುತ್ತಿದ್ದರು ಎಂಬ ಸ್ಫೋಟಕ ಸತ್ಯ ಆಡಿಯೋನಲ್ಲಿ ಕೇಳಿಬಂದಿದೆ ಎಂದು ಉತ್ತರಾಖಂಡದ ಉನ್ನತ ಪೊಲೀಸ್ ಅಶೋಕ್ ಕುಮಾರ್ ಹೇಳಿದ್ದಾರೆ.

    ಏನಿದು ಪ್ರಕರಣ?
    ಇತ್ತೀಚೆಗೆ ಉತ್ತರಾಖಂಡದ ಬಿಜೆಪಿ ಮುಖಂಡನ ಮಾಲೀಕತ್ವದಲ್ಲಿದ್ದ ರೆಸಾರ್ಟ್‌ನಲ್ಲಿ ಅಂಕಿತಾ ಭಂಡಾರಿ (19) ಯುವತಿ ಶವವಾಗಿ ಪತ್ತೆಯಾಗಿದ್ದಳು. ಈ ಕುರಿತು ತನಿಖೆ ಕೈಗೊಂಡಿರುವ ಪೊಲೀಸರು ಬಿಜೆಪಿ ಮುಖಂಡ ಸೇರಿದಂತೆ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಹೆಚ್ಚಿನ ತನಿಖೆ ನಡೆಯುತ್ತಿದೆ.

    Live Tv
    [brid partner=56869869 player=32851 video=960834 autoplay=true]

  • ಬಟ್ಟೆ ಮಳಿಗೆಯಲ್ಲಿ ಭೀಕರ ಗುಂಡಿನ ದಾಳಿ – ಬಿಜೆಪಿ ಮುಖಂಡನ ಬರ್ಬರ ಹತ್ಯೆ

    ಬಟ್ಟೆ ಮಳಿಗೆಯಲ್ಲಿ ಭೀಕರ ಗುಂಡಿನ ದಾಳಿ – ಬಿಜೆಪಿ ಮುಖಂಡನ ಬರ್ಬರ ಹತ್ಯೆ

    ಚಂಡೀಗಢ: ಸ್ಥಳೀಯ ಬಿಜೆಪಿ ಮುಖಂಡನನ್ನು ಐವರು ದುಷ್ಕರ್ಮಿಗಳು ಮನಬಂದಂತೆ ಗುಂಡಿಕ್ಕಿ ಕೊಂದಿರುವ ಘಟನೆ ಇಂದು ಹರಿಯಾಣದ ಗುರುಗ್ರಾಮದಲ್ಲಿ ನಡೆದಿದೆ.

    ಇಲ್ಲಿನ ದರ್ ಬಜಾರ್ ಬಳಿಯ ಗುರುದ್ವಾರದ ರಸ್ತೆಯಲ್ಲಿರುವ ಬಟ್ಟೆ ಮಳಿಗೆಯೊಂದರಲ್ಲಿ ಗುಂಡಿನ ದಾಳಿ ನಡೆಸಲಾಗಿದ್ದು, ಬಿಜೆಪಿ ಮುಖಂಡ ಸುಖಬೀರ್ ಖತಾನ ಅವರನ್ನು ಹತ್ಯೆ ಮಾಡಲಾಗಿದೆ. ಸ್ಥಳಕ್ಕೆ ಭೆಟಿ ನೀಡಿರುವ ಪೊಲೀಸರು ಆರೋಪಿಗಳ ಪತ್ತೆಗಾಗಿ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸುತ್ತಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಇದನ್ನೂ ಓದಿ: ಆಗಸ್ಟ್‌ ಜಿಎಸ್‌ಟಿ ಶೇ.28 ಏರಿಕೆ – 1.43 ಲಕ್ಷ ಕೋಟಿ ರೂ.ನಲ್ಲಿ ಯಾವ ರಾಜ್ಯದ ಪಾಲು ಎಷ್ಟು?

    bjP

    ಸುಖಬೀರ್ ಖನಾತಾ ಅವರು ಬಟ್ಟೆ ಬಳಿಗೆ(ಶೋ ರೂಮ್) ಪ್ರವೇಶಿಸುತ್ತಿದ್ದಂತೆ ದುಷ್ಕರ್ಮಿಗಳು ಮನಬಂದಂತೆ ಗುಂಡಿನ ದಾಳಿ ನಡೆಸಿದ್ದಾರೆ. ಗುಂಡಿನ ಶಬ್ಧ ಕೇಳುತ್ತಿದ್ದಂತೆ ಇತರ ವ್ಯಾಪಾರಿಗಳೂ ಸ್ಥಳದಿಂದ ಹೆದರಿ ಓಡಿ ಹೋಗಿದ್ದಾರೆ. ಗುಂಡಿನ ದಾಳಿಯಿಂದ ತೀವ್ರವಾಗಿ ಗಾಯಗೊಂಡಿದ್ದ ಖತಾನ ಅವರನ್ನು ಖಾಸಗಿ ಆಸ್ಪತ್ರೆಗೆ ಸಾಗಿಸಲಾಗುತ್ತಿತ್ತು, ಮಾರ್ಗಮಧ್ಯದಲ್ಲೇ ಅವರು ಮೃತಪಟ್ಟಿದ್ದಾರೆ ಎಂದು ಪೊಲೀಸ್ ಅಧಿಕಾರಿ ದೀಪಕ್ ಸಹರಾನ್ ತಿಳಿಸಿದ್ದಾರೆ. ಇದನ್ನೂ ಓದಿ: ನಿರ್ಮಾಪಕ ರವೀಂದರ್‌ ಕೈ ಹಿಡಿದ ನಟಿ, ಖ್ಯಾತ ನಿರೂಪಕಿ ಮಹಾಲಕ್ಷ್ಮೀ

    ಸುಖಬೀರ್ ಖತಾನ ಅವರು ಗುರ್ಗಾಂವ್‌ನ ಸೊಹ್ನಾ ಮಾರುಕಟ್ಟೆ ಸಮಿತಿಯ ಮಾಜಿ ಉಪಾಧ್ಯಕ್ಷರಾಗಿದ್ದರು ಹಾಗೂ ಮಾಜಿ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್‌ಗೆ ಆಪ್ತರಾಗಿದ್ದರು. ನಗರದ ಸಮೀಪದ ರಿಥೋಜ್ ಗ್ರಾಮದಿಂದ ಜಿಲ್ಲಾ ಪರಿಷತ್ ಚುನಾವಣೆಗೆ ಸಿದ್ಧತೆ ನಡೆಸಿದ್ದರು ಅಷ್ಟರಲ್ಲೇ ಗುಂಡಿನ ದಾಳಿಗೆ ಬಲಿಯಾಗಿದ್ದಾರೆ.

    ಸ್ಥಳೀಯ ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಹಣದ ವಿಚಾರಕ್ಕೆ ಟಿಎಂಸಿ ಬೆಂಬಲಿಗನನ್ನು ಹಿಗ್ಗಾಮುಗ್ಗಾ ಥಳಿಸಿದ ಬಿಜೆಪಿ ಮುಖಂಡ

    ಹಣದ ವಿಚಾರಕ್ಕೆ ಟಿಎಂಸಿ ಬೆಂಬಲಿಗನನ್ನು ಹಿಗ್ಗಾಮುಗ್ಗಾ ಥಳಿಸಿದ ಬಿಜೆಪಿ ಮುಖಂಡ

    ಕೋಲ್ಕತ್ತಾ: ಹಣ ನೀಡದೇ ವಂಚಿಸಿದ್ದಕ್ಕೆ ಟಿಎಂಸಿ ಕಾರ್ಯಕರ್ತನನ್ನು ಬಿಜೆಪಿ ಯುವ ಘಟಕದ ಮುಖಂಡರೊಬ್ಬರು ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಕೋಲ್ಕತ್ತಾದಲ್ಲಿ ನಡೆದಿದೆ.

    ಶನಿವಾರ ಕೋಲ್ಕತ್ತಾದ ಐಸಿಸಿಆರ್ ಸಭಾಂಗಣದಲ್ಲಿ ‘ಮೋದಿ@20: ಡ್ರೀಮ್ಸ್ ಮೀಟ್ ಡೆಲಿವರಿ’ ಪುಸ್ತಕ ಕುರಿತಂತೆ ಚರ್ಚೆ ನಡೆಸಲು ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮಕ್ಕೆ ಮುಖ್ಯ ಅಥಿತಿಗಳಾಗಿ ಆಗಮಿಸಿದ್ದ ಮಾಜಿ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಅವರ ಭಾಷಣ ಮುಗಿಯುತ್ತಿದ್ದಂತೆ ಬಿಜೆಪಿ ಯುವ ಮುಖಂಡ ಅಭಿಜಿತ್ ನಹಾ ಅವರು, ರಾಯ್ ಚೌಧರಿ ಎಂಬವರನ್ನು ಸಭಾಂಗಣದ ಹೊರಗೆ ಎಳೆದುಕೊಂಡು ಹೋಗಿ ಥಳಿಸಿದ್ದಾರೆ. ಈ ವೀಡಿಯೋ ಕ್ಯಾಮೆರಾದಲ್ಲಿ ಸೆರೆಯಾಗಿದೆ.

    ತೃಣಮೂಲ ಕಾಂಗ್ರೆಸ್ ಬೆಂಬಲಿಗನಾಗಿರುವ ರಾಯ್ ಚೌಧರಿ ತನ್ನ ಬಳಿ ಹಣ ಪಡೆದು ವಂಚಿಸಿದ್ದಾನೆ. ಅಲ್ಲದೇ ತನ್ನ ಪಕ್ಷದಲ್ಲಿ ಇಲ್ಲದೇ ಇರುವ ಇತರರ ಬಳಿಯೂ ಹಣ ಪಡೆದು ಹಿಂತಿರುಗಿಸಿಲ್ಲ. ಐಪಿಎಸ್ ಅಧಿಕಾರಿಗಳ ಹೆಸರಿನಲ್ಲಿ ಹಣ ಪಡೆದು ಹೀಗೆ ಹಲವರಿಗೆ ಮೋಸ ಮಾಡಿದ್ದಾನೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಡ್ಯೂಟಿ ಬಿಟ್ಟು ಸಮವಸ್ತ್ರದಲ್ಲೇ ಬ್ಯೂಟಿ ಕಡೆ ವಾಲಿ ಕೆಲಸ ಕಳೆದುಕೊಂಡ ಇನ್ಸ್‌ಪೆಕ್ಟರ್!

    ರಾಯ್ ಚೌಧರಿ ಅವರು ವೃತ್ತಿಯಲ್ಲಿ ವಕೀಲರಾಗಿದ್ದು, ಬಿಜೆಪಿ ನಾಯಕ ಸಮಿಕ್ ಭಟ್ಟಾಚಾರ್ಯ ಅವರನ್ನು ಭೇಟಿಯಾಗಲು ಕಾರ್ಯಕ್ರಮಕ್ಕೆ ಬಂದಿದ್ದ ವೇಳೆ ಈ ವೇಳೆ ಘಟನೆ ಜರುಗಿದೆ. ಅಲ್ಲದೇ ಚೌಧರಿ ಅವರ ಪರಿಚಯವಿರುವುದಾಗಿ ಸಮಿಕ್ ಭಟ್ಟಾಚಾರ್ಯರು ಸಹ ಒಪ್ಪಿಕೊಂಡರು. ಇದನ್ನೂ ಓದಿ: ಮಲಗಿದ್ದ ತಾಯಿಯ ಪಕ್ಕದಿಂದ ಮಗು ಕದ್ದು ಓಡಿದ – ಖತರ್ನಾಕ್ ಕಳ್ಳನ ವೀಡಿಯೋ ವೈರಲ್

    Live Tv
    [brid partner=56869869 player=32851 video=960834 autoplay=true]

  • ನಿವಾಸದಲ್ಲಿ ಬಿಜೆಪಿ ಮುಖಂಡನ ಮೃತದೇಹ ಪತ್ತೆ

    ನಿವಾಸದಲ್ಲಿ ಬಿಜೆಪಿ ಮುಖಂಡನ ಮೃತದೇಹ ಪತ್ತೆ

    ಹೈದರಾಬಾದ್: ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕ ಜ್ಞಾನೇಂದ್ರ ಪ್ರಸಾದ್ ತಮ್ಮ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ. ‌

    ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ನೋಡಿದಾಗ ಫ್ಯಾನ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪ್ರಸಾದ್‌ ಮೃತದೇಹ ಪತ್ತೆಯಾಗಿದೆ. ಇದನ್ನೂ ಓದಿ: ಸಿಬಲ್‌ ವಿರುದ್ದ ನ್ಯಾಯಾಂಗ ನಿಂದನೆ ಕೇಸ್‌: ಅಟಾರ್ನಿ ಜನರಲ್‌ಗೆ ಮನವಿ

    ಮಿಯಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಸೋಮವಾರ ಬೆಳಗ್ಗೆ ಮಿಯಾಪುರ ಪೊಲೀಸರಿಗೆ ಮಾಹಿತಿ ಲಭಿಸಿತ್ತು. ನಂತರ ಘಟನೆ ಬೆಳಕಿಗೆ ಬಂದಿದೆ.

    ತಕ್ಷಣವೇ ಒಂದು ತಂಡವನ್ನು ಸ್ಥಳಕ್ಕೆ ಕಳುಹಿಸಲಾಯಿತು. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ನೋಡಿದಾಗ ನೇಣು ಬಿಗಿದ ಸ್ಥಿತಿಯಲ್ಲಿ ಪ್ರಸಾದ್‌ ಮೃತದೇಹ ಕಂಡುಬಂದಿದೆ. ಇದನ್ನೂ ಓದಿ: ಮಹಿಳಾ ಬ್ಯಾಂಕ್ ಮ್ಯಾನೇಜರ್ ಮೇಲೆ ಆ್ಯಸಿಡ್ ದಾಳಿ

    ಪ್ರಸಾದ್‌ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಪ್ರಸಾದ್ ಕಳೆದ ಕೆಲವು ದಿನಗಳಿಂದ ತಮ್ಮ ಪೆಂಟ್‌ಹೌಸ್‌ನಲ್ಲಿ ವಾಸಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

    ಸಿಆರ್‌ಪಿಸಿ ಸೆಕ್ಷನ್ 174ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಈ ಸಂಬಂಧ ಹೆಚ್ಚಿನ ತನಿಖೆಗಳು ನಡೆಯುತ್ತಿವೆ.

    Live Tv
    [brid partner=56869869 player=32851 video=960834 autoplay=true]

  • ಪ್ರವೀಣ್‌ ಮನೆಗೆ ಮಾಜಿ ಸಿಎಂ ಹೆಚ್‌ಡಿಕೆ ಭೇಟಿ – ನೆಟ್ಟಾರು ಕುಟುಂಬಕ್ಕೆ 5 ಲಕ್ಷ ಪರಿಹಾರ

    ಪ್ರವೀಣ್‌ ಮನೆಗೆ ಮಾಜಿ ಸಿಎಂ ಹೆಚ್‌ಡಿಕೆ ಭೇಟಿ – ನೆಟ್ಟಾರು ಕುಟುಂಬಕ್ಕೆ 5 ಲಕ್ಷ ಪರಿಹಾರ

    ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಬಿಜೆಪಿ ಮುಖಂಡ ಪ್ರವೀಣ್‌ ನೆಟ್ಟಾರು ಮನೆಗೆ ಮಾಜಿ ಮುಖ್ಯಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಇದೇ ವೇಳೆ ಸಂತ್ರಸ್ತರಿಗೆ 5 ಲಕ್ಷ ಪರಿಹಾರ ನೀಡಿದರು.

    ಭೇಟಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಟುಂಬ ಸಂಪೂರ್ಣ ಕಷ್ಟದಲ್ಲಿ ಇರೋದು ಮಾತುಕತೆ ನಂತರ ಗೊತ್ತಾಗಿದೆ. ಸಾವಿಗೆ ಕಾರಣಕರ್ತರಾದವರಿಗೆ ಕಠಿಣ ಶಿಕ್ಷೆ ಆಗಬೇಕು. ಕುಟುಂಬದ ಅಭಿಪ್ರಾಯ ಕೂಡಾ ಅದೇ ಆಗಿದೆ. ನೋವನ್ನ ನಮ್ಮ ಮುಂದೆ ಹೇಳಿಕೊಂಡಿದ್ದಾರೆ. ಕಾಟಾಚಾರದ ತನಿಖೆ ಆಗಬಾರದು. ವಿಧವೆ ತಂಗಿಯನ್ನು ಸಾಕುವ ಜವಾಬ್ದಾರಿ ಇದೆ ಎಂದು ಹೇಳಿದರು. ಇದನ್ನೂ ಓದಿ: ಸರಣಿ ಹತ್ಯೆ ಪ್ರಕರಣ- ದಕ್ಷಿಣ ಕನ್ನಡಕ್ಕೆ DGP ಪ್ರವೀಣ್ ಸೂದ್ ಭೇಟಿ

    ಸರ್ಕಾರ ತನ್ನ ಜವಾಬ್ದಾರಿ ನಿರ್ವಹಿಸಲು ಆಗದೆ ತನಿಖಾ ಅಧಿಕಾರ ಹಸ್ತಾಂತರ ಮಾಡಿದೆ. ರಾಜ್ಯ ಬಿಜೆಪಿ ಸರ್ಕಾರ ಬೇಜವಾಬ್ದಾರಿ ತೀರ್ಮಾನ ತೆಗೆದುಕೊಂಡಿದೆ. ನಮ್ಮ ಅಧಿಕಾರಿಗಳು ಬಹಳ ಸಮರ್ಥವಾಗಿ ಕಾರ್ಯ ನಿರ್ವಹಿಸುತ್ತಿದ್ದರು. ರಾಜ್ಯದ ಪೊಲೀಸರ ಮನೋಸ್ಥೈರ್ಯ ಕುಗ್ಗಿಸುವ ನಡೆ ಇದು. ಈ ಹಿಂದೆ NIA ಕೊಟ್ಟ ಪ್ರಕರಣಗಳ ರಿಸಲ್ಟ್ ಏನು? ನಮ್ಮ ರಾಜ್ಯದಲ್ಲಿ ಅದೆಷ್ಟೋ ದಕ್ಷ ಅಧಿಕಾರಿಗಳಿದ್ದಾರೆ ಎಂದು ಸರ್ಕಾರದ ವಿರುದ್ಧ ಹರಿಹಾಯ್ದರು.

    ಪ್ರವೀಣ್ ಕುಟುಂಬಕ್ಕೆ ನನ್ನ ಮೊಬೈಲ್ ನಂಬರ್ ನೀಡಿದ್ದೇನೆ. ಯಾವುದೇ ಸಂದರ್ಭದಲ್ಲಿ ಸಮಸ್ಯೆಯಾದರೆ ನೇರವಾಗಿ ಕರೆ ಮಾಡಿ ಮಾತನಾಡಬಹುದು. ಅಗತ್ಯಬಿದ್ದರೆ ಮತ್ತೆ ಆರ್ಥಿಕ ಹಣಕಾಸು ನೀಡುತ್ತೇವೆ ಎಂದು ಭರವಸೆ ನೀಡಿದರು. ಇದನ್ನೂ ಓದಿ: ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆ ಪ್ರಕರಣ- ಮತ್ತಿಬ್ಬರು ಪೊಲೀಸರ ವಶಕ್ಕೆ

    Live Tv
    [brid partner=56869869 player=32851 video=960834 autoplay=true]

  • ಪ್ರವಾದಿ ಮೊಹಮ್ಮದ್ ಕುರಿತು ಅವಹೇಳನಕಾರಿ ಟ್ವೀಟ್ – ಬಿಜೆಪಿ ಮುಖಂಡ ಅರೆಸ್ಟ್

    ಪ್ರವಾದಿ ಮೊಹಮ್ಮದ್ ಕುರಿತು ಅವಹೇಳನಕಾರಿ ಟ್ವೀಟ್ – ಬಿಜೆಪಿ ಮುಖಂಡ ಅರೆಸ್ಟ್

    ಲಕ್ನೋ: ಪ್ರವಾದಿ ಮೊಹಮ್ಮದ್ ಪೈಗಂಬರ್ ಅವರ ಕುರಿತು ಅವಹೇಳನಕಾರಿ ಟ್ವೀಟ್ ಮಾಡಿದ್ದ ಉತ್ತರ ಪ್ರದೇಶದ ಬಿಜೆಪಿ ಮುಖಂಡನನ್ನು ಪೊಲೀಸರು ಬಂಧಿಸಿದ್ದಾರೆ.

    ಕಾನ್ಪುರದ ಬಿಜೆಪಿ ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಹರ್ಷಿತ್ ಶ್ರೀವಾಸ್ತವನನ್ನು ಬಂಧಿಸಿದ ಪೊಲೀಸರು ಆತನ ವಿರುದ್ಧ ಪ್ರಕರಣ ದಾಖಲಿಸಿ ಟ್ವೀಟ್ ಅನ್ನು ಡಿಲೀಟ್ ಮಾಡಿದ್ದಾರೆ. ಇದನ್ನೂ ಓದಿ: ಬಿಜೆಪಿ ಮಾಜಿ ವಕ್ತಾರೆ ನೂಪುರ್ ಶರ್ಮಾಗೆ ಮುಂಬೈ ಪೊಲೀಸರಿಂದ ಸಮನ್ಸ್

    ಕಾನ್ಪುರದಲ್ಲಿ ಕೋಮುಗಲಭೆ ನಡೆದ ನಾಲ್ಕು ದಿನಗಳ ಬಳಿಕ ಈ ಘಟನೆ ನಡೆದಿದೆ. ಹರ್ಷಿತ್ ಮಾಡಿದ್ದ ಟ್ವೀಟ್‌ನಿಂದಾಗಿ ಇನ್ನಷ್ಟು ಗೊಂದಲದ ಪರಿಸ್ಥಿತಿ ಎದುರಾಗುವ ಸಾಧ್ಯತೆ ಇತ್ತು. ಹರ್ಷಿತ್ ಅವರ ಟ್ವೀಟ್ ವೈರಲ್ ಆಗುತ್ತಿದ್ದಂತೆ ಪೊಲೀಸರು ಕಾರ್ಯೋನ್ಮುಖರಾಗಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

    ಬಿಜೆಪಿಯ ವಕ್ತಾರರಾಗಿದ್ದ ನೂಪುರ್ ಶರ್ಮಾ ಜ್ಞಾನವಾಪಿ ಮಸೀದಿ ಕುರಿತು ನಡೆಯುತ್ತಿದ್ದ ಚರ್ಚೆ ವೇಳೆ ಪ್ರವಾದಿ ಮೊಹಮ್ಮದ್ ಅವರ ವಿರುದ್ಧ ನೀಡಿದ ವಿವಾದಾತ್ಮಕ ಹೇಳಿಕೆ ರಾಷ್ಟ್ರವ್ಯಾಪಿಯಾಗಿ ವಿವಾದ ಹರಡಿತ್ತು. ಅದೇ ವಿಚಾರವಾಗಿ ಕಾನ್ಪುರದಲ್ಲೂ ಹಿಂಸಾಚಾರ ನಡೆದಿತ್ತು. ಹಲವು ರಾಷ್ಟ್ರಗಳಿಂದ ಖಂಡನೆಯೂ ವ್ಯಕ್ತವಾಗಿದ್ದು, ಇಂಡೋನೇಷ್ಯಾ ಸರ್ಕಾರದಿಂದ ಭಾರತದ ರಾಯಭಾರಿಗೆ ಸಮನ್ಸ್ ಸಹ ನೀಡಲಾಗಿದೆ. ಇದನ್ನೂ ಓದಿ: ಅತ್ಯಾಚಾರ, ಕೊಲೆ ಬೆದರಿಕೆ – ವಿವಾದಿತ ಬಿಜೆಪಿ ನಾಯಕಿ ನೂಪುರ್ ಶರ್ಮಾಗೆ ದೆಹಲಿ ಪೊಲೀಸರಿಂದ ಭದ್ರತೆ 

    ರಾಷ್ಟ್ರಪತಿ ರಾಮನಾಥ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ್ದ ಸಮಯದಲ್ಲೇ ಕಾನ್ಪುರದಲ್ಲಿ ಹಿಂಸಾಚಾರ ನಡೆದಿತ್ತು. ಗಲಭೆಗೆ ಸಂಬಂಧಿಸಿದಂತೆ ಕನಿಷ್ಠ 50 ಜನರನ್ನು ಬಂಧಿಸಲಾಗಿದ್ದು, ಸುಮಾರು 10 ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ. ಇದನ್ನೂ ಓದಿ: ಪ್ರವಾದಿ ಮೊಹಮ್ಮದ್‍ ಕುರಿತು ಆಕ್ಷೇಪಾರ್ಹ ಹೇಳಿಕೆ – ಬಿಜೆಪಿ ರಾಷ್ಟ್ರೀಯ ವಕ್ತಾರೆ ನೂಪುರ್ ಶರ್ಮಾ ಅಮಾನತು

    ಈ ಬೆನ್ನಲ್ಲೇ ಹರ್ಷಿತ್ ಟ್ವೀಟ್ ಉತ್ತರ ಪ್ರದೇಶ ಸರ್ಕಾರದ ನಿದ್ದೆಗೆಡಿಸುವಂತೆ ಮಾಡಿದೆ. ಸದ್ಯ ಆತನ ವಿರುದ್ಧ ಕರ್ನೈಲ್‌ಗಂಜ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಟ್ವೀಟ್ ಅನ್ನು ಅಳಿಸಿ ಹಾಕಲಾಗಿದೆ.

  • ಬಿಜೆಪಿ ಮುಖಂಡ ಅನಂತ್ ರಾಜು ಆತ್ಮಹತ್ಯೆ ಕೇಸ್- 2 ಡೆತ್ ನೋಟ್‍ಗಳು ಲಭ್ಯ

    ಬಿಜೆಪಿ ಮುಖಂಡ ಅನಂತ್ ರಾಜು ಆತ್ಮಹತ್ಯೆ ಕೇಸ್- 2 ಡೆತ್ ನೋಟ್‍ಗಳು ಲಭ್ಯ

    ಬೆಂಗಳೂರು: ಬಿಜೆಪಿ ಮುಖಂಡ ಅನಂತ್ ರಾಜು ಆತ್ಮಹತ್ಯೆ ಸಂಬಂಧ ಡೆತ್ ನೋಟ್ ಇದೀಗ ಹೊರಬಂದಿದೆ. ಡೆತ್ ನೋಟ್ ಮೇಲೆ ರೇಖಾ ಅರೆಸ್ಟ್ ಬಳಿಕ ಸುಮಾ ರೋಲ್ ಬಗ್ಗೆಯೂ ಸಾಕಷ್ಟು ಆಡಿಯೊಗಳು ಹೊರಬಂದಿದ್ದವು. ಇದೀಗ ಡೆತ್ ನೋಟ್ ನ ಅಸಲಿ ಪ್ರತಿ ಪಬ್ಲಿಕ್ ಟಿವಿಗೆ ಸಿಕ್ಕಿದೆ.

    ಡೆತ್‍ನೋಟ್‍ನಲ್ಲಿ ಏನಿದೆ..?
    ಪ್ರಿಯ ಪತ್ನಿ ಕ್ಷಮಿಸಿ ಬಿಡು, ನಿನಗೆ ಮೋಸ ಮಾಡಿದ್ದೇನೆ. ನಿನ್ನಲ್ಲಿ ಕ್ಷಮೆ ಕೇಳಲು ನಾನು ಅರ್ಹನಲ್ಲ. ಹೆಣ್ಣಿನ ಸಹವಾಸ ಮಾಡಿ ಅವಳಿಂದ ಫೋಟೋ ವೀಡಿಯೊಗಳ ಟ್ರ್ಯಾಪ್ ಗೆ ಸಿಲುಕಿದ್ದೆ. ಬ್ಲ್ಯಾಕ್ ಮೇಲ್ ಮಾಡಿಸಿಕೊಂಡು ನಿನಗೆ ಮುಖ ತೋರಿಸಲು ಸಾಧ್ಯವಾಗ್ತಿಲ್ಲ. ಮಕ್ಕಳನ್ನ ಚೆನ್ನಾಗಿ ನೋಡಿಕೋ. ಇಂತಿ ನಿನ್ನ ಮೋಸಗಾರ ಎಂದು ಹೇಳಿದ್ದಾರೆ. ಅಲ್ಲದೆ ಇನ್ಸ್ ಪೆಕ್ಟರ್ ನನಗೆ ಕಿರುಕುಳ ನೀಡಿ ಬ್ಲ್ಯಾಕ್ ಮೇಲ್ ಮಾಡಿದವರ ಮೇಲೆ ಕಾನೂನು ಕ್ರಮ ಕೈಗೊಳ್ಳಿ ಅಂತ ಪತ್ರದಲ್ಲಿ ಅನಂತ್ ರಾಜು ತಿಳಿಸಿದ್ದಾರೆ. ಇದನ್ನೂ ಓದಿ: ಸಂಬಂಧದ ವಿಚಾರ ಗೊತ್ತಾಗಿ ನೋವಿನಿಂದ ಗಲಾಟೆ ಮಾಡಿದ್ದು ನಿಜ, ಆದ್ರೆ ಕೊಲೆ ಮಾಡಿಲ್ಲ: ಅನಂತರಾಜು ಪತ್ನಿ

    ಇನ್ಸ್ ಪೆಕ್ಟರ್ ಬರೆದ ಡೆತ್ ನೋಟ್ ಕೂಡ ವೈರಲ್ ಆಗಿದೆ. ಇದೇ ಡೆತ್ ನೋಟ್ ಗಳ ಮೇಲೆ ಅನಂತ್ ರಾಜು ಪತ್ನಿ ಸುಮಾ ದೂರು ನೀಡಿದ್ದರು. ಎಫ್‍ಐಆರ್ ದಾಖಲಿಸಿದ್ದ ಪೊಲೀಸರು ರೇಖಾಳನ್ನ ಬ್ಲಾಕ್ ಮೇಲ್ ಮತ್ತು ಹನಿಟ್ರ್ಯಾಪ್ ನಡಿ ಬಂಧಿಸಿದ್ರು. ಯಾವಾಗ ರೇಖಾ ಬಂಧನವಾಯಿತೋ ಅವಾಗ ರೇಖಾ, ತನ್ನ ಬಳಿಯಿದ್ದ ಸುಮಾ ಜೊತೆ ಮಾತನಾಡಿದ್ದ ಆಡಿಯೋ ಹೊರಗೆ ಬಿಟ್ಟಿದ್ರು. ಇದ್ರಲ್ಲಿ ಸುಮಾ ಕಿರುಕುಳ ಕೊಡುತ್ತಿದ್ದರ ಬಗ್ಗೆ ಗೊತ್ತಾಗಿತ್ತು. ಹನಿಟ್ರ್ಯಾಪ್ ಮಾಡೋದಾಗಿದ್ರೆ 6 ವರ್ಷ ಜೊತೆಯಲ್ಲಿ ಇರಬೇಕಿರಲಿಲ್ಲ ಅಂತಾ ಕೂಡ ರೇಖಾ ಹೇಳಿದ್ರು. ಈ ಹಿಂದೆ ಸ್ಯೂಸೈಡ್ ಅಟೆಂಪ್ಟ್ ಮಾಡಿದ್ದಾಗ ಬರೆಸಿಟ್ಟುಕೊಂಡಿರುವ ಡೆತ್ ನೋಟ್ ಅಂತಾ ರೇಖಾ ಆರೋಪಿಸುತ್ತಿದ್ದಾರೆ.

  • ಅನಂತ ರಾಜು ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ ಮೇಲೆ ಟ್ವಿಸ್ಟ್- ಜೈಲಿನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ ರೇಖಾ..?

    ಅನಂತ ರಾಜು ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ ಮೇಲೆ ಟ್ವಿಸ್ಟ್- ಜೈಲಿನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ ರೇಖಾ..?

    ಬೆಂಗಳೂರು: ಬಿಜೆಪಿ ಮುಖಂಡ ಅನಂತರಾಜು ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ ಮೇಲೆ ಟ್ವಿಸ್ಟ್ ಸಿಗ್ತಿದೆ. ಈ ಕೇಸ್‌ನಲ್ಲಿ ಮತ್ತೊಂದು ಆಡಿಯೋ ಬಹಿರಂಗವಾಗಿದೆ. ಇನ್ನು ಅನಂತರಾಜು ಸ್ನೇಹಿತೆ ಆತ್ಮಹತ್ಯೆಗೆ ಯತ್ನಿಸಿದ ಘಟನೆಯೂ ನಡೆದಿದೆ.

    ಬಿಜೆಪಿ ಮುಖಂಡ ಅನಂತರಾಜು ಆತ್ಮಹತ್ಯೆ ಕೇಸ್ ದಿನದಿಂದ ದಿನಕ್ಕೆ ತಿರುವು ಪಡೆದುಕೊಳ್ತಿದೆ. ಇದು ನಿಜಕ್ಕೂ ಆತ್ಮಹತ್ಯೆಯೋ..? ಪ್ರಚೋದನೆಯೋ..? ಎನ್ನುವ ಕುರಿತು ಪ್ರಕರಣದ ತನಿಖೆ ನಡೀತಾ ಇದೆ. ಆದ್ರೆ ತನಿಖೆ ಮಾಡಬೇಕಾದ ಪೊಲೀಸ್ರು ಪ್ರಭಾವಕ್ಕೆ ಒಳಗಾದಂತೆ ಕಾಣ್ತಿದೆ. ಯಾಕಂದ್ರೆ ಪ್ರಕರಣದಲ್ಲಿ ಜೈಲು ಪಾಲಾಗಿ ಬೇಲ್ ಮೇಲೆ ಹೊರಗೆ ಬಂದಿರೋ ಅನಂತರಾಜು ಸ್ನೇಹಿತೆ ರೇಖಾ ಕೆಲವೊಂದು ಸಂಗತಿಗಳನ್ನ ಬಿಚ್ಚಿಟ್ಟಿದ್ದಾರೆ. ಇದನ್ನೂ ಓದಿ: ಗಂಗಾ ನದಿಯಲ್ಲಿ ಮೀನಿನ ವೈವಿಧ್ಯತೆ ಶೇ.36 ರಷ್ಟು ಹೆಚ್ಚಳ

    ಅನಂತರಾಜುಗೆ ಪತ್ನಿ ಟಾರ್ಚರ್ ಇತ್ತು ಅಂತ ರೇಖಾ ಆರೋಪಿದ್ದಾರೆ. ಈ ಬಗ್ಗೆ ಆಡಿಯೋಗಳನ್ನ ಪೊಲೀಸ್ರಿಗೆ ಕೊಟ್ಟೆ. ಆದ್ರೆ ಸಾಕ್ಷಿ ಕೊಟ್ಟರೂ ಸಹ ಪೊಲೀಸರು ನನ್ನನ್ನೇ ಜೈಲಿಗೆ ಕಳಿಸಿದ್ರು. ಇದರಿಂದ ಮನನೊಂದು ಜೈಲಲ್ಲಿ ನಾನೂ ಆತ್ಮಹತ್ಯೆಗೆ ಯತ್ನಿಸಿದೆ. ನಾನು ಹನಿಟ್ರ್ಯಾಪ್‌ ಮಾಡಿದ್ರೆ ಶೂಟೌಟ್ ಮಾಡಿಕೊಳ್ತೇನೆ ಅಂತಾ ಕಣ್ಣೀರು ಹಾಕಿದ್ದಾರೆ. ಇದನ್ನೂ ಓದಿ: ರಜೆ ಬೇಕೆಂದ್ರೆ ಲಾಡ್ಜ್‌ಗೆ ಬನ್ನಿ – ಮಹಿಳಾ ನೌಕರರಿಗೆ ಎಸ್‌ಪಿ ಕಚೇರಿ ಅಧಿಕಾರಿಯಿಂದ ಕಿರುಕುಳ

    ಗೃಹಬಂಧನದಲ್ಲಿದ್ರಾ ಅನಂತ ರಾಜು?: 45 ದಿನಗಳ ಕಾಲ ಅನಂತರಾಜು ನನ್ನ ಪತ್ನಿ ಸುಮಾ ಗೃಹ ಬಂಧನದಲ್ಲಿರಿಸಿದ್ದರಂತೆ. ಈ ಹಿಂದೆಯೇ ಅನಂತರಾಜು ಆತ್ಮಹತ್ಯೆಗೆ ಯತ್ನಿಸಿ ಜಿಎಮ್ ಆಸ್ಪತ್ರೆಗೆ ಸೇರಿಸಿದ್ದರು. ಆಗಲೇ ಡೆತ್ ನೋಟ್ ಬರೆಸಿಟ್ಟುಕೊಂಡಿದ್ರು ಅಂತ ರೇಖಾ ಟ್ವಿಸ್ಟ್ ಕೊಟ್ಟಿದ್ದಾರೆ. 45 ದಿನಗಳ ಕಾಲ ಅನಂತನನ್ನು ಗೃಹ ಬಂಧನದಲ್ಲಿರಿಸಿದ್ರು. ಬಟ್ಟೆ ಕೊಡದೇ ಇದ್ದಿದ್ದರಿಂದ ಹೊರಗೆ ಬಂದಿರಲಿಲ್ಲ. ಈ ಹಿಂದೆಯೇ ಅನಂತ್ ನಿದ್ರೆ ಮಾತ್ರೆ ತಿಂದು ಆತ್ಮಹತ್ಯೆಗೆ ಯತ್ನಿಸಿ ಜಿಎಮ್ ಆಸ್ಪತ್ರೆಗೆ ಸೇರಿಸಿದ್ದರು. ಆಗ ಡೆತ್ ನೋಟ್ ಬರೆಸಿಟ್ಟುಕೊಂಡಿದ್ದರು. ಹನಿಟ್ರ್ಯಾಪ್‌ ಮಾಡೋದಾಗಿದ್ರೆ 6 ವರ್ಷ ಸಂಬಂಧದಲ್ಲಿ ಇರಬೇಕಾಗಿರಲಿಲ್ಲ. ನನ್ನ ಮಗಳಿಗೆ ಮೆಡಿಕಲ್ ಮಾಡಿಸೊ ಭರವಸೆ ಒಂದನ್ನ ಕೊಟ್ಟಿದ್ರು ಅಷ್ಟೆ. ನಾನು ಹನಿಟ್ರಾಪ್ ಮಾಡಿಲ್ಲ, ಹಣಕ್ಕೆ ಬೇಡಿಕೆ ಇಟ್ಟಿಲ್ಲ ಪಬ್ಲಿಕ್ ಟಿವಿಯೊಂದಿಗೆ ಹೇಳಿಕೊಂಡಿದ್ದಾರೆ.

    ಈ ಮಧ್ಯೆ ಸುಮಾ-ರೇಖಾ ನಡುವಿನ ಸಂಭಾಷಣೆ ತನಿಖೆಗೆ ಮತ್ತೊಂದು ಆಯಾಮ ಕೊಟ್ಟಿದೆ. ಡೆತ್‌ನೋಟ್ ಇಟ್ಟುಕೊಂಡು ರೇಖಾಗೆ ಅನಂತರಾಜು ಪತ್ನಿ ಸುಮಾ ಧಮ್ಕಿ ಹಾಕಿರುವ ಆಡಿಯೋ ಲಭ್ಯ ಆಗಿದೆ. ಅದ್ಯಾಕೊ ಗೊತ್ತಿಲ್ಲ ಬ್ಯಾಡರಹಳ್ಳಿ ಪೊಲೀಸ್ರು ಈ ಕೇಸಲ್ಲಿ ಎಲ್ಲವನ್ನೂ ಮರೆಮಾಚುವ ಕೆಲಸ ಮಾಡ್ತಿದ್ದಾರೆ. ಅನಂತ್‌ರಾಜ್ ಸಾವು ಆತ್ಮಹತ್ಯೆಯೋ..? ಪ್ರಚೋದನೆಯೋ..? ಪೊಲೀಸರು ನಿಷ್ಪಕ್ಷಪಾತವಾಗಿ ತನಿಖೆ ನಡೆಸಿ ಸತ್ಯ ಬಯಲಿಗೆಳೆಯಬೇಕಿದೆ.

  • ಪತ್ನಿ ಕ್ಷಮಿಸಿ ಬಿಡು, ನಿನಗೆ ಮೋಸ ಮಾಡಿದ್ದೇನೆ – ಬಿಜೆಪಿ ಮುಖಂಡನ ಆತ್ಮಹತ್ಯೆ ಸೀಕ್ರೆಟ್ ರಿವೀಲ್

    ಪತ್ನಿ ಕ್ಷಮಿಸಿ ಬಿಡು, ನಿನಗೆ ಮೋಸ ಮಾಡಿದ್ದೇನೆ – ಬಿಜೆಪಿ ಮುಖಂಡನ ಆತ್ಮಹತ್ಯೆ ಸೀಕ್ರೆಟ್ ರಿವೀಲ್

    ಬೆಂಗಳೂರು: ಪ್ರಿಯ ಪತ್ನಿ ಸುಮ ಕ್ಷಮಿಸಿ ಬಿಡು, ನಿನಗೆ ಮೋಸ ಮಾಡಿದ್ದೇನೆ ಎಂದು ನಗರದ ಹೇರೋಹಳ್ಳಿ ವಾರ್ಡ್‍ನ ಬಿಜೆಪಿ ಮುಖಂಡ ಅನಂತರಾಜು ಆತ್ಮಹತ್ಯೆಗೂ ಮುನ್ನ ಬರೆದಿರುವ ಡೇತ್ ನೋಟ್‍ನಲ್ಲಿ ಆತ್ಮಹತ್ಯೆಗೆ ಕಾರಣವನ್ನು ಬಹಿರಂಗಪಡಿಸಿದ್ದಾರೆ.

    ಡೇತ್ ನೋಟ್‍ನಲ್ಲಿ ಏನಿದೆ?
    ಪ್ರಿಯ ಪತ್ನಿ ಸುಮ ಕ್ಷಮಿಸಿ ಬಿಡು, ನಿನಗೆ ಮೋಸ ಮಾಡಿದ್ದೇನೆ. ನಿನ್ನಲ್ಲಿ ಕ್ಷಮೆ ಕೇಳಲು ನಾನು ಅರ್ಹನಲ್ಲ. ಹೆಣ್ಣಿನ ಸಹವಾಸ ಮಾಡಿ ಅವಳಿಂದ ಪೋಟೋ ವೀಡಿಯೋಗಳ ಟ್ರ್ಯಾಪ್‍ಗೆ ಸಿಲುಕಿ, ಬ್ಲ್ಯಾಕ್‍ಮೇಲ್ ಮಾಡಿಸಿಕೊಂಡು ನಿನಗೆ ಮುಖ ತೋರಿಸಲು ಸಾಧ್ಯವಾಗ್ತಿಲ್ಲ. ತೃಪ್ತಿ, ತನ್ಮಯ ಮತ್ತು ಅಭಯ್‍ನನ್ನು ಚೆನ್ನಾಗಿ ನೋಡಿಕೊ. ಇಂತಿ ನಿನ್ನ ಮೋಸಗಾರ. ಇದನ್ನೂ ಓದಿ: ಬೆಂಗಳೂರಿನ ಬಿಜೆಪಿ ಮುಖಂಡ ನೇಣಿಗೆ ಶರಣು

    ಅನಂತರಾಜು ಹನಿಟ್ರ್ಯಾಪ್‍ಗೆ ಸಿಲುಕಿ ಮೇ 12ರಂದು ಬ್ಯಾಡರಹಳ್ಳಿಯ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಆತ್ಮಹತ್ಯೆಗೂ ಮುನ್ನ ಡೇತ್ ನೋಟ್‍ನಲ್ಲಿ ರೇಖಾ, ವಿನೋದ್, ಸ್ಪಂದನ ಎಂಬುವರಿಂದ ಹನಿಟ್ರ್ಯಾಪ್‍ಗೆ ಒಳಗಾಗಿದ್ದೇನೆ. ಕೆಅರ್‌ಪುರದ ರೇಖಾ ಎಂಬಾಕೆ ಫೇಸ್‍ಬುಕ್ ಮುಖಾಂತರ ಪರಿಚಯವಾಗಿದ್ಲು. ಆ ಬಳಿಕ ಖಾಸಗಿ ವೀಡಿಯೋಗಳನ್ನು ಮಾಡಿಟ್ಟುಕೊಂಡು ಬೆದರಿಕೆ ಹಾಕ್ತಿದ್ಲು. ಹಣ ಕೊಡದಿದ್ರೆ ಮಾಧ್ಯಮಗಳಿಗೆ, ರಾಜಕೀಯ ನಾಯಕರಿಗೆ ಫೋಟೋ ವೀಡಿಯೋ ಕಳುಹಿಸಿಕೊಡುವುದಾಗಿ ಬ್ಲ್ಯಾಕ್‍ಮೇಲ್ ಮಾಡುತ್ತಾ ಈ ಮೂಲಕ ಮಾನ ಮರ್ಯಾದೆ ಕಳೆಯೋದಾಗಿ ಬೆದರಿಕೆ ಹಾಕಿದ್ದರು. ಸಾಕಷ್ಟು ಹಣ ಕೊಟ್ಟು ಸಾಕಾಗಿದೆ ಎಂದು ಅನಂತರಾಜು ಡೇತ್ ನೋಟ್‍ನಲ್ಲಿ ಉಲ್ಲೇಖಿಸಿದ್ದಾರೆ. ಇದನ್ನೂ ಓದಿ: ಮಗಳಿಗಾಗಿ 36 ವರ್ಷ ಪುರುಷನ ವೇಷದಲ್ಲಿದ್ದ ತಾಯಿ

    ಎರಡು ಬಾರಿ ಬಿಬಿಎಂಪಿ ಚುನಾವಣೆಯಲ್ಲಿ ಸ್ಪರ್ಧಿಸಿ ಸೋತಿದ್ದ ಅನಂತರಾಜು ಈ ಬಾರಿ ಬಿಬಿಎಂಪಿ ಚುನಾವಣೆಗೆ ಸ್ಪರ್ಧಿಸಲು ತಯಾರಿ ಮಾಡಿಕೊಳ್ಳುತ್ತಿದ್ದರು. ಈ ನಡುವೆ ಹನಿಟ್ರ್ಯಾಪ್‍ಗೆ ಸಿಲುಕಿ ಆತ್ಮಹತ್ಯೆ ಶರಣಾಗಿದ್ದರು. ಇದೀಗ ಈ ಬಗ್ಗೆ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಅನಂತರಾಜು ಪತ್ನಿ ಸುಮ ದೂರು ದಾಖಲಿಸಿದ್ದಾರೆ.