Tag: ಬಿಜೆಪಿ ಮುಖಂಡ

  • ಕೊಲೆ ಮಾಡಿ ಹೆಣದ ಸುತ್ತ ಡ್ಯಾನ್ಸ್ ಮಾಡಿದ್ದ ಆರೋಪಿ

    ಕೊಲೆ ಮಾಡಿ ಹೆಣದ ಸುತ್ತ ಡ್ಯಾನ್ಸ್ ಮಾಡಿದ್ದ ಆರೋಪಿ

    ಮೈಸೂರು: ಬಿಜೆಪಿ ಮುಖಂಡ ಆನಂದ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹತ್ಯೆಯ ಬಳಿಕ ಆರೋಪಿ ಬಸವರಾಜ್ ಹೆಣದ ಪಕ್ಕ ಡ್ಯಾನ್ಸ್ ಮಾಡಿದ್ದಾನೆ ಎಂಬ ಮಾಹಿತಿಯೊಂದು ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.

    ಕೊಲೆ ಪ್ರಕರಣ ಸಂಬಂಧ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಮೈಸೂರಿನ ಜನತಾನಗರದ ನಿವಾಸಿ ಬಸವರಾಜು ಬಂಧಿತ ಆರೋಪಿ. ವೈಯಕ್ತಿಕ ದ್ವೇಷದಿಂದ ಬಿಜೆಪಿ ಮುಖಂಡ ಆನಂದ್‍ನನ್ನು ಬಸವರಾಜ್ ಕೊಲೆ ಮಾಡಿದ್ದಾನೆ ಎಂಬುದು ಮೇಲ್ನೋಟಕ್ಕೆ ಸ್ಪಷ್ಟವಾಗಿದೆ.

    ತನ್ನನ್ನು ಬೆಳೆಯಲು ಆನಂದ್ ಬಿಡುತ್ತಿಲ್ಲ ಎಂಬ ಕಾರಣಕ್ಕೆ ಬಸವರಾಜ್ ಇತ್ತೀಚೆಗೆ ತಾನೇ ಆನಂದ್ ಜೊತೆ ಜಗಳವಾಡಿದ್ದ. ಕಳೆದ ನಾಲ್ಕೈದು ದಿನಗಳ ಹಿಂದೆ ಸ್ನೇಹಿತರ ಎದುರು ಬಸವರಾಜು ಮೇಲೆ ಆನಂದ್ ಹಲ್ಲೆ ಮಾಡಿದ್ದ. ಇದೇ ದ್ವೇಷದ ಹಿನ್ನೆಲೆಯಲ್ಲಿ ಕಳೆದ ರಾತ್ರಿ ಆನಂದ್ ಬರ್ತ್ ಡೇ ಪಾರ್ಟಿಯ ಗುಂಗಿನಲ್ಲಿದ್ದಾಗಲ್ಲೇ ಸ್ಕೆಚ್ ಹಾಕಿ ಕೊಲೆ ಮಾಡಿದ್ದಾನೆ. ಕೊಲೆ ಮಾಡಿದ ಬಳಿಕ ಬಸವರಾಜ್ ಹೆಣದ ಪಕ್ಕ ಡ್ಯಾನ್ಸ್ ಮಾಡಿದ್ದಾನೆ. ಇದನ್ನೂ ಓದಿ: ಜೊತೆಗೆ ಅಪಾರ್ಟ್‍ಮೆಂಟಿಗೆ ಬಂದ ಸ್ನೇಹಿತರಿಂದ್ಲೇ ಬಿಜೆಪಿ ಮುಖಂಡ ಕೊಲೆ

    ಬಿಯರ್ ಬಾಟಲಿಯಲ್ಲಿದ್ದ ರಕ್ತವನ್ನು ಕೋಣೆಯಲ್ಲೆಲ್ಲಾ ಚೆಲ್ಲಾಡಿ ವಿಕೃತಿ ಮೆರೆದಿದ್ದಾನೆ. ಕೊಲೆ ನಡೆದಾಗ ಸ್ಥಳದಲ್ಲಿದ್ದ ಸುರೇಶ್, ಗಿರಿ, ಮಂಜು ಎಂಬವರು ಪರಾರಿಯಾಗಿದ್ದಾರೆ. ಘಟನೆಗೂ ಮುನ್ನ ಸ್ಥಳದಲ್ಲಿದ್ದ ಪರಮೇಶ್ ಹಾಗೂ ಕೃಷ್ಣ ಎಂಬವರನ್ನೂ ಪೊಲೀಸರು ವಿಚಾರಣೆಗೊಳಪಡಿಸಿದ್ದಾರೆ. ಉಳಿದ ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ. ಇದನ್ನೂ ಓದಿ: ಬಿಯರ್ ಬಾಟಲಿನಿಂದ ಚುಚ್ಚಿ ಬಿಜೆಪಿ ಮುಖಂಡನ ಬರ್ಬರ ಕೊಲೆ

  • ಜೊತೆಗೆ ಅಪಾರ್ಟ್‍ಮೆಂಟಿಗೆ ಬಂದ ಸ್ನೇಹಿತರಿಂದ್ಲೇ ಬಿಜೆಪಿ ಮುಖಂಡ ಕೊಲೆ

    ಜೊತೆಗೆ ಅಪಾರ್ಟ್‍ಮೆಂಟಿಗೆ ಬಂದ ಸ್ನೇಹಿತರಿಂದ್ಲೇ ಬಿಜೆಪಿ ಮುಖಂಡ ಕೊಲೆ

    – ಮೈಸೂರು ಪೊಲೀಸ್ ಆಯುಕ್ತರ ಶಂಕೆ

    ಮೈಸೂರು: ಬಿಜೆಪಿ ಮುಖಂಡ ಆನಂದ್ ಕೊಲೆ ನಡೆದ ಕುವೆಂಪು ನಗರದ ಸರ್ವಿಸ್ ಅಪಾರ್ಟ್‍ಮೆಂಟಿಗೆ ಮೈಸೂರು ನಗರ ಪೊಲೀಸ್ ಆಯುಕ್ತ ಚಂದ್ರಗುಪ್ತ ಅವರು ಡಿಸಿಪಿ ಪ್ರಕಾಶ್‍ಗೌಡ ಜೊತೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

    ಈ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಮುಂಜಾನೆ 3 ರಿಂದ 4 ಗಂಟೆ ವೇಳೆಯಲ್ಲಿ ಆನಂದ್ ಕೊಲೆಯಾಗಿದೆ. ಬಾಟಲ್‍ಗಳಿಂದ ಚುಚ್ಚಿ ಕೊಲೆ ಮಾಡಲಾಗಿದೆ. ಗುರುವಾರ ಆನಂದ್ ಹುಟ್ಟುಹಬ್ಬವಿತ್ತು. ಹೀಗಾಗಿ ಆನಂದ್ ಗೆಳೆಯರ ಜೊತೆ ಸೇರಿ ಪಾರ್ಟಿ ಮಾಡಿದ್ದ. ಮೊದಲು ಬೇರೆಡೆ ಪಾರ್ಟಿ ಮಾಡಿ ನಂತರ ಅಪಾರ್ಟ್‍ಮೆಂಟಿಗೆ ಬಂದಿದ್ದಾರೆ. ಇಲ್ಲಿಯೂ 5 ರಿಂದ 6 ಮಂದಿ ಪಾರ್ಟಿ ಮುಂದುವರೆಸಿದ್ದಾರೆ ಎಂದು ತಿಳಿಸಿದರು.

    ಪಾರ್ಟಿ ಮಾಡುವ ವೇಳೆ ಅಲ್ಲಿದ್ದವರಲ್ಲೇ ಗಲಾಟೆ ಆರಂಭವಾಗಿದೆ. ಆಗ ಬಾಟಲ್‍ನಲ್ಲಿ ಚುಚ್ಚಿ ಕೊಲೆ ಮಾಡಿರಬಹುದು. ಪಾರ್ಟಿಯಲ್ಲಿ ಯಾರ್ಯಾರು ಇದ್ದರು ಎಂಬ ಮಾಹಿತಿ ಗೊತ್ತಾಗಿದೆ. ಅವರೆಲ್ಲರನ್ನು ಹಿಡಿದು ವಿಚಾರಣೆ ಮಾಡುತ್ತೇವೆ. ಆದರೆ ಕೊಲೆ ಯಾವ ಕಾರಣಕ್ಕಾಗಿ ಆಗಿದೆ, ಯಾರು ಮಾಡಿದ್ದಾರೆ ಎಂಬುದನ್ನು ಈಗಲೇ ಹೇಳಲು ಸಾಧ್ಯವಿಲ್ಲ. ಕೊಲೆಯಾದ ವ್ಯಕ್ತಿಯ ಮಾಹಿತಿ ಕಲೆ ಹಾಕುತ್ತಿದ್ದೇವೆ ಎಂದು ಸ್ಪಷ್ಟಪಡಿಸಿದರು.

  • ಬಿಯರ್ ಬಾಟಲಿನಿಂದ ಚುಚ್ಚಿ ಬಿಜೆಪಿ ಮುಖಂಡನ ಬರ್ಬರ ಕೊಲೆ

    ಬಿಯರ್ ಬಾಟಲಿನಿಂದ ಚುಚ್ಚಿ ಬಿಜೆಪಿ ಮುಖಂಡನ ಬರ್ಬರ ಕೊಲೆ

    – ಬರ್ತ್ ಡೇ ದಿನವೇ ಪಾರ್ಟಿಯಲ್ಲಿ ಹೆಣವಾದ ರೌಡಿ ಶೀಟರ್
    – ಕೊಲೆಗೈದ ಸ್ನೇಹಿತರು ಪರಾರಿ

    ಮೈಸೂರು: ಬಿಯರ್ ಬಾಟಲಿನಿಂದ ಚುಚ್ಚಿ ಹುಟ್ಟುಹಬ್ಬದ ದಿನವೇ ಬಿಜೆಪಿ ಮುಖಂಡನನ್ನು ಆತನ ಸ್ನೇಹಿತರೇ ಕೊಲೆ ಮಾಡಿರುವ ಘಟನೆ ಮೈಸೂರಿನ ಕುವೆಂಪುನಗರದಲ್ಲಿ ನಡೆದಿದೆ.

    ಕೊಲೆಯಾದ ವ್ಯಕ್ತಿಯನ್ನು ಬಿಜೆಪಿಯ ಮೈಸೂರು ನಗರ ಸ್ಲಂ ಮೋರ್ಚಾ ಉಪಾಧ್ಯಕ್ಷ ಆನಂದ್ ಎಂದು ಗುರುತಿಸಲಾಗಿದೆ. ಗುರುವಾರ ಆನಂದ್ ಹುಟ್ಟುಹಬ್ಬವಿದ್ದು, ಕುವೆಂಪು ನಗರದ ಲವಕುಶ ಪಾರ್ಕ್ ಬಳಿಯ ಸರ್ವಿಸ್ ಅಪಾರ್ಟ್‍ಮೆಂಟ್‍ನಲ್ಲಿ ರೂಮ್ ಮಾಡಿಕೊಂಡು ಪಾರ್ಟಿ ಮಾಡುತ್ತಿದ್ದಾಗ ಸ್ನೇಹಿತರಿಂದಲೇ ಭೀಕರವಾಗಿ ಹತ್ಯೆಯಾಗಿದ್ದಾನೆ.

    ಉತ್ತನಹಳ್ಳಿ ಸಮೀಪ ಖಾಸಗಿ ಕಲ್ಯಾಣ ಮಂಟಪದಲ್ಲಿ ಪಾರ್ಟಿ ಮುಗಿಸಿ ಬಂದಿದ್ದ ಆನಂದ್, ನಂತರ ವಾಪಸ್ ಬಂದು ಸರ್ವಿಸ್ ಅಪಾರ್ಟ್‍ಮೆಂಟ್ ನಲ್ಲಿ ರೂಮ್ ಫಿಕ್ಸ್ ಮಾಡಿ ಸ್ನೇಹಿತರ ಜೊತೆ ಪಾರ್ಟಿ ಮಾಡುತ್ತಿದ್ದ. ಪಾರ್ಟಿ ನಡೆಯುವಾಗಲೇ ಸ್ನೇಹಿತರೊಂದಿಗೆ ಮಾತಿನ ಚಕಮಕಿಯಾಗಿದೆ. ಮಾತಿನ ಚಕಮಕಿ ವಿಕೋಪಕ್ಕೆ ತಿರುಗಿ ಬಿಯರ್ ಬಾಟಲಿಯಿಂದ ಸ್ನೇಹಿತರೇ ಆನಂದನಿಗೆ ಚುಚ್ಚಿ ಭೀಕರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ.

    ಕೊಲೆ ಮಾಡಿದ್ದ ಆನಂದ್
    ಬಿಜೆಪಿ ಮುಖಂಡ ರಾಜೀವ್ ಬೆಂಬಲಿಗನಾಗಿದ್ದ ಆನಂದ್, ರಿಯಲ್ ಎಸ್ಟೇಟ್ ಹಾಗೂ ಫೈನಾನ್ಸ್ ನಡೆಸುತ್ತಿದ್ದ. ಕಳೆದ 13 ವರ್ಷಗಳ ಹಿಂದೆ ಜನತಾನಗರದ ಮಾರುತಿ ಟೆಂಟ್ ರಸ್ತೆಯಲ್ಲಿ ಕುಮಾರಸ್ವಾಮಿ ಎಂಬಾತನನ್ನು ಮರ್ಡರ್ ಮಾಡಿದ್ದ. ನಂತರ ಜೈಲು ಶಿಕ್ಷೆ ಅನುಭವಿಸಿ ವಾಪಸ್ ಆಗಿದ್ದ. ಆತನ ಮೇಲೆ ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ರೌಡಿ ಶೀಟರ್ ಓಪನ್ ಮಾಡಲಾಗಿತ್ತು. ಆದ್ದರಿಂದ ಹಳೇ ವೈಷಮ್ಯದ ಮೇಲೆ ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದೆ.

    ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಕುವೆಂಪುನಗರ ಪೊಲೀಸರು, ಘಟನಾ ಸ್ಥಳಕ್ಕೆ ಬಂದು ಪರಿಶೀಲನೆ ಮಾಡಿದ್ದಾರೆ. ಜೊತೆಗೆ ಓರ್ವ ಆರೋಪಿಯನ್ನು ಬಂಧಿಸಿದ್ದು, ವಿಚಾರಣೆ ಮುಂದುವರಿಸಿದ್ದಾರೆ.

  • ಬಿಜೆಪಿ ಯುವ ಮುಖಂಡನಿಗೆ ಮುಸುಕುಧಾರಿಗಳಿಂದ ಚಾಕು ಇರಿತ

    ಬಿಜೆಪಿ ಯುವ ಮುಖಂಡನಿಗೆ ಮುಸುಕುಧಾರಿಗಳಿಂದ ಚಾಕು ಇರಿತ

    ಬೆಂಗಳೂರು: ಸಿವಿ ರಾಮನ್ ಕ್ಷೇತ್ರದ ಶಾಸಕ ರಘು ಆಪ್ತ ಹಾಗೂ ಬಿಜೆಪಿ ಯುವ ಮುಖಂಡ ಲೋಕೇಶ್ ಎಂಬಾತನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ.

    ಬೈಕ್ ನಲ್ಲಿ ಹೆಲ್ಮೆಟ್ ಧರಿಸಿ ಮುಸುಕುಧಾರಿಗಳಾಗಿ ಬಂದಿದ್ದ ಮೂವರು ಆರೋಪಿಗಳು ಏಕಾಏಕಿ ಹಲ್ಲೆಗೆ ಮುಂದಾಗಿದ್ದಾರೆ. ಗುರುವಾರ ರಾತ್ರಿ 10:30ರ ಸುಮಾರಿಗೆ ಲೋಕೇಶ್ ರ ಲಕ್ಷ್ಮೀಪುರ ನಿವಾಸದ ಬಳಿ ಕಾರಿಂದ ಕೆಳಗಿಳಿಯೋ ವೇಳೆ ಹಿಂಬದಿಯಿಂದ ಅಟ್ಯಾಕ್ ಮಾಡಿರೋ ಮುಸುಕುಧಾರಿಗಳು ಬೆನ್ನು ಹಾಗೂ ಪಕ್ಕೆಲುಬಿಗೆ ಚಾಕುವಿನಿಂದ ಇರಿದಿದ್ದಾರೆ.

    ಈ ವೇಳೆ ಲೋಕೇಶ್ ಜೊತೆಯಲ್ಲಿದ್ದ ಆತನ ಸಹೋದರ ಹರೀಶ್ ಮೇಲೂ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಸಹೋದರರನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಸದ್ಯ ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಸಂಬಂಧ ಇಂದಿರಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗಾಗಿ ಪೊಲೀಸರು ಬಲೆಬೀಸಿದ್ದಾರೆ.

  • ಬಿಜೆಪಿ ಮುಖಂಡನಿಂದ ಸೊಸೆಗೆ ಲೈಂಗಿಕ ಕಿರುಕುಳ!

    ಬಿಜೆಪಿ ಮುಖಂಡನಿಂದ ಸೊಸೆಗೆ ಲೈಂಗಿಕ ಕಿರುಕುಳ!

    ಲಕ್ನೋ: ಬಿಜೆಪಿ ಮುಖಂಡನೊಬ್ಬ ತನ್ನ ಸೊಸೆಗೆ ಲೈಂಗಿಕ ಕಿರಿಕುಳ ನೀಡಿರುವ ಘಟನೆ ಉತ್ತರ ಪ್ರದೇಶದ ಮುಜಾಫರ್‍ನಗರ ಜಿಲ್ಲೆಯ ಜನಸತ್ ಪಟ್ಟಣದಲ್ಲಿ ನಡೆದಿದೆ.

    ಬಿಜೆಪಿ ವಿಭಾಗೀಯ ಪ್ರಧಾನ ಕಾರ್ಯದರ್ಶಿ ಮಹೇಶ್ ಚಂದ್ ಶರ್ಮಾ ವಿರುದ್ಧ ಈ ಆರೋಪ ಕೇಳಿ ಬಂದಿದೆ. ಮಗ ಮತ್ತು ಸೊಸೆಯ ನಡುವಿನ ಆಸ್ತಿ ವಿವಾದದಿಂದಾಗಿ ಈ ಪ್ರಕರಣದಲ್ಲಿ ನನ್ನ ಮೇಲೆ ಸುಳ್ಳು ಆರೋಪ ಹೊರಿಸಲಾಗಿದೆ. ನಾನು ಲೈಂಗಿಕ ಕಿರುಕುಳ ನೀಡಿಲ್ಲ ಎಂದು ಮಹೇಶ್ ಚಂದ್ ಶರ್ಮಾ ಸ್ಪಷ್ಟಪಡಿಸಿದ್ದಾರೆ.

    ಮಹೇಶ್ ಚಂದ್ ಶರ್ಮಾ ವಿರುದ್ಧ ಸೊಸೆ ಸಲ್ಲಿಸಿದ್ದ ದೂರಿನ ಆಧಾರದ ಮೇಲೆ ಐಪಿಸಿ ಸೆಕ್ಷನ್ 354(ಮಹಿಳೆಯ ಮುಗ್ದತೆ ದುರುಪಯೋಗ ಪಡಿಸಿಕೊಂಡು ಆಕೆಯ ಮೇಲೆ ಹಲ್ಲೆ ಅಥವಾ ಕ್ರಿಮಿನಲ್ ಫೋರ್ಸ್) ಅಡಿ ಶುಕ್ರವಾರ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಮಹಿಳೆಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ಮತ್ತೊಂದು ಪ್ರಕರಣದಲ್ಲಿ, ಜನಸತ್ ಪೊಲೀಸ್ ಠಾಣೆ ಪ್ರದೇಶದ ಹಳ್ಳಿಯಲ್ಲಿ ಐವರು ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ್ದು, ಪ್ರಶ್ನಿಸಿದ ಆಕೆಯ ಕುಟುಂಬದ ಸದಸ್ಯರನ್ನೂ ಸಹ ಥಳಿಸಿದ್ದಾರೆ. ಪರಾರಿಯಾಗಿದ್ದ ಐವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

  • ತಲ್ವಾರ್ ಹಿಡಿದು ಕೇಕ್ ಕತ್ತರಿಸಿದ ಬಿಜೆಪಿ ಮುಖಂಡ

    ತಲ್ವಾರ್ ಹಿಡಿದು ಕೇಕ್ ಕತ್ತರಿಸಿದ ಬಿಜೆಪಿ ಮುಖಂಡ

    ಕಲಬುರಗಿ: ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುತ್ತಿದ್ದಂತೆ ಪಕ್ಷದ ಕೆಲವರು ಬಾಲ ಬಿಚ್ಚಲು ಆರಂಭಿಸಿದ್ದು, ಬಿಜೆಪಿ ಮುಖಂಡ ಹಾಗೂ ಶ್ರೀರಾಮ ಸೇನೆಯ ತಾಲೂಕು ಅಧ್ಯಕ್ಷ ತನ್ನ ಹುಟ್ಟುಹಬ್ಬದ ಸಂದರ್ಭದಲ್ಲಿ ತಲ್ವಾರಿನಿಂದ ಕೇಕ್ ಕತ್ತರಿಸಿ ವಿವಾದ ಸೃಷ್ಟಿಸಿದ್ದಾರೆ.

    ಈ ಘಟನೆ ಜಿಲ್ಲೆಯ ಜೇವರ್ಗಿ ಪಟ್ಟಣದಲ್ಲಿ ನಡೆದಿದ್ದು, ಎರಡು ದಿನ ಹಿಂದೆ ಬಿಜೆಪಿ ಮುಖಂಡ ಶರಣು ಕೋಳಕುರ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಈ ವೇಳೆ ಕಾರ್ಯಕರ್ತರ ಜೊತೆ ತಲ್ವಾರಿನಿಂದ ಕೇಕ್ ಕಟ್ ಮಾಡಿ ಸಂಭ್ರಮಿಸಿದ್ದಾರೆ.

    ಹುಟ್ಟುಹಬ್ಬಕ್ಕೆ ಆಗಮಿಸಿದ ಕಾರ್ಯಕರ್ತರು ಸಹ ತಲ್ವಾರ್ ಹಿಡಿದು ಫೋಟೋಗೇ ಪೋಸ್ ಕೊಟ್ಟಿದ್ದು, ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

    ಈ ಹಿಂದೆ ವಿಜಯಪುರ ಜಿಲ್ಲೆಯ ಕಾಂಗ್ರೆಸ್ ಕಾರ್ಯಕರ್ತೆಯೊಬ್ಬರು ತಲ್ವಾರಿನಿಂದ ಕೇಕ್ ಕತ್ತರಿಸಿ ವಿವಾದ ಸೃಷ್ಟಿಸಿದ್ದರು. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಗ್ರಾಮ ಇಸ್ಲಾಂಪುರದ ಅಮೀರಾ ದೇಸಾಯಿ ಎಂಬುವರು ತಲ್ವಾರ್ ನಿಂದ ಕೇಕ್ ಕತ್ತರಿಸಿ ಸುದ್ದಿಯಾಗಿದ್ದರು. ಈ ಕುರಿತು ಯಮಕನಮರಡಿ ಫೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

  • ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ಗೆ ಬಿಜೆಪಿ ಮುಖಂಡ ಬಲಿ

    ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ಗೆ ಬಿಜೆಪಿ ಮುಖಂಡ ಬಲಿ

    – ನಾಲ್ವರು ಆಸ್ಪತ್ರೆಗೆ ದಾಖಲು

    ಕೋಲಾರ: ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ ನಿಂದ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಬಿಜೆಪಿ ಮುಖಂಡ ಉಸಿರುಗಟ್ಟಿ ಸಾವನ್ನಪ್ಪಿದ್ರೆ, ಮನೆಯಲ್ಲಿದ್ದ ಉಳಿದ ನಾಲ್ಕು ಜನ ಪ್ರಾಣಾಪಾಯದಿಂದ ಪಾರಾಗಿ ಆಸ್ಪತ್ರೆ ಪಾಲಾಗಿದ್ದಾರೆ.

    ಇಂದು ಮುಂಜಾನೆ 5 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಮನೆಯಲ್ಲಿದ್ದ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಟಿ.ಎಸ್. ನಾಗಪ್ರಕಾಶ್(58) ಸಾವನ್ನಪ್ಪಿದ್ದಾರೆ. ಕೋಲಾರ ಜಿಲ್ಲೆಯ ಬಂಗಾರಪೇಟೆ ಪಟ್ಟಣದ ಬಜಾರ್ ರಸ್ತೆಯಲ್ಲಿಂದು ಮುಂಜಾನೆ ಈ ಘಟನೆ ನಡೆದಿದೆ.

    ಮನೆಯಲ್ಲಿದ್ದ ಶೋಭ, ಸ್ವರೂಪ್, ಹಾಗೂ ಸತ್ಯನಾರಾಯಣ ಎಂಬವರು ಪ್ರಾಣಾಪಾಯದಿಂದ ಪಾರಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ದುರ್ಘಟನೆ ಮುಂಜಾನೆ ನಡೆದಿದ್ದರಿಂದ ನಾಗಪ್ರಕಾಶ್ ಉಸಿರುಗಟ್ಟಿ ಹೃದಯಾಘಾತವಾಗಿರಬಹುದು ಎನ್ನಲಾಗಿದೆ. ಮನೆಯಲ್ಲಿದ್ದ ಗೃಹಪಯೋಗಿ ವಸ್ತುಗಳು ಸಂಪೂರ್ಣ ಬೆಂಕಿಗಾಹುತಿಯಾಗಿದ್ದು, ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಭೇಟಿ ನೀಡಿ ಬೆಂಕಿ ನಂದಿಸುವ ಕಾರ್ಯ ನಡೆಸಿದ್ದಾರೆ.

    ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

  • ವಿಡಿಯೋ: ನೀನು ನನ್ನ ಹಿಟ್ ಲಿಸ್ಟ್‌ನಲ್ಲಿದ್ದಿ- ಅಧಿಕಾರಿಗೆ ಬಿಜೆಪಿ ಮುಖಂಡ ಬೆದರಿಕೆ

    ವಿಡಿಯೋ: ನೀನು ನನ್ನ ಹಿಟ್ ಲಿಸ್ಟ್‌ನಲ್ಲಿದ್ದಿ- ಅಧಿಕಾರಿಗೆ ಬಿಜೆಪಿ ಮುಖಂಡ ಬೆದರಿಕೆ

    ಲಕ್ನೋ: ಮತದಾನದ ವೇಳೆ ಬಿಜೆಪಿ ಮುಖಂಡ ಹಾಗೂ ಪೊಲೀಸ್ ಅಧಿಕಾರಿ ಮಧ್ಯೆ ವಾಗ್ವಾದ ನಡೆದಿದ್ದು, ಈ ವೇಳೆ ಬಿಜೆಪಿ ಮುಖಂಡ ಅಧಿಕಾರಿಗೆ ಬೆದರಿಕೆ ಹಾಕಿದ ಘಟನೆ ನಡೆದಿದೆ.

    ಈ ಘಟನೆ ಉತ್ತರಪ್ರದೇಶದ ಕಾನ್ಪುರದಲ್ಲಿ ನಡೆದಿದೆ. ಪೊಲೀಸ್ ಅಧಿಕಾರಿಗೆ ಬಿಜೆಪಿ ಮುಖಂಡ ಬೆದರಿಕೆ ಹಾಕುತ್ತಿರುವುದನ್ನು ಸ್ಥಳದಲ್ಲಿದ್ದವರು ತಮ್ಮ ಮೊಬೈಲ್ ನಲ್ಲಿ ಸೆರೆಹಿಡಿದಿದ್ದಾರೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿದೆ.

    ವಿಡಿಯೋದಲ್ಲೇನಿದೆ?:
    ಬಿಜೆಪಿ ಮುಖಂಡ ಸುರೇಶ್ ಅವಾಸ್ಥಿ, ನೀನು ನನ್ನ ಹಿಟ್ ಲಿಸ್ಟ್ ನಲ್ಲಿದ್ದಿ. ನಿನ್ನನ್ನು ನಾಳೆ ನೋಡಿಕೊಳ್ಳುತ್ತೇನೆ ಎಂದು ಪೊಲೀಸ್ ಅಧಿಕಾರಿಗೆ ಬೆದರಿಕೆ ಹಾಕುವುದನ್ನು ನಾವು ವಿಡಿಯೋದಲ್ಲಿ ಕಾಣಬಹುದು. ಈ ಕುರಿತು ಪ್ರತಿಕ್ರಿಯಿಸಿರುವ ಪೊಲೀಸ್ ಅಧಿಕಾರಿ, ಅವನೇನು ಮಾಡಿಕೊಳ್ಳುತ್ತಾನೋ ಮಾಡಲಿ ಎಂದು ಖಾರವಾಗಿಯೇ ಉತ್ತರಿಸಿದ್ದಾರೆ.

    ಘಟನೆಯ ವೇಳೆ ಮೇಯರ್ ಪ್ರಮಿಳಾ ಪಾಂಡೆ ಹಾಗೂ ಇತರ ಬಿಜೆಪಿ ನಾಯಕರು ಸ್ಥಳದಲ್ಲಿದ್ದರು. ಆದರೆ ಅವರು ಬೆದರಿಕೆ ಹಾಕುವ ಬಿಜೆಪಿ ನಾಯಕನ್ನು ತಡೆಯುವ ಪ್ರಯತ್ನ ಮಾಡದಿರುವುದು ಇದೀಗ ಭಾರೀ ಚರ್ಚೆಗೆ ಗ್ರಾಸವಾಗಿದೆ.

  • ಬಿಜೆಪಿ ಮುಖಂಡನ ಮನೆ ಮೇಲೆ ರೇಡ್ ಮಾಡಲು ಹೋದ ಅಧಿಕಾರಿಗಳೇ ಕನ್ಫ್ಯೂಸ್!

    ಬಿಜೆಪಿ ಮುಖಂಡನ ಮನೆ ಮೇಲೆ ರೇಡ್ ಮಾಡಲು ಹೋದ ಅಧಿಕಾರಿಗಳೇ ಕನ್ಫ್ಯೂಸ್!

    ರಾಯಚೂರು: ಜಿಲ್ಲೆಯ ಬಿಜೆಪಿ ಮುಖಂಡರೊಬ್ಬರ ಮನೆ ಮೇಲೆ ಐಟಿ ದಾಳಿ ನಡೆಸಲು ಹೋದ ಅಧಿಕಾರಿಗಳು ವಿಳಾಸ ಸಿಗದೇ ಕಕ್ಕಾಬಿಕ್ಕಿಯಾಗಿ ಬೀದಿಯಲ್ಲೇ ಪರದಾಡಿದ ಘಟನೆ ನಡೆದಿದೆ.

    ಹೌದು. ಬಿಜೆಪಿ ಮುಖಂಡ ಬಂಡೇಶ್ ಅವರ ಮನೆಗೆ ದಾಳಿ ನಡೆಸಲು ಚುನಾವಣಾ ಫ್ಲೈಯಿಂಗ್ ಸ್ಕ್ವಾಡ್, ಸಹಾಯಕ ಆಯುಕ್ತೆ, ಜಿಪಂ ಸಿಇಓ ತಂಡ ಮುಂದಾಗಿತ್ತು. ಆದ್ರೆ ಅಧಿಕಾರಿಗಳೆಲ್ಲ ಬಂದಿರುವುದನ್ನ ನೋಡಿ ಸ್ವತಃ ಬಿಜೆಪಿ ಮುಖಂಡ ಹೊರಗಡೆ ಬಂದು ಹೋದರೂ ಅಧಿಕಾರಿಗಳಿಗೆ ಗೊತ್ತೇ ಆಗ್ಲಿಲ್ಲವಂತೆ.

    ಬಾತ್ ರೂಂನಲ್ಲಿ ದುಡ್ಡು ಇಟ್ಟಿದ್ದರೂ, ಸ್ಟೆಪ್ನಿಯಲ್ಲಿ ದುಡ್ಡು ಇಟ್ಟಿದ್ದರೂ ಹುಡುಕಿ ತೆಗೆಯೋ ಐಟಿ ಅಧಿಕಾರಿಗಳಿಗೆ ವಿಳಾಸ ಪತ್ತೆ ಹಚ್ಚೋದು ಕಷ್ಟವಾಗಿದ್ದು, ಸುಮಾರು ಹೊತ್ತು ಕಾದು ನೋಡಿ ಮರಳಿ ಹೋಗಿರುವ ಪ್ರಹಸನ ನಡೆದಿದೆ.

    ಇದೇ ವೇಳೆ ಪಕ್ಕದಲ್ಲಿರುವ ಬಿಜೆಪಿ ಮುಖಂಡ ರವಿ ಜಲ್ದಾರ್ ಕಚೇರಿ ಹಾಗೂ ಪರಿಶೀಲನೆ ಮಾಡಿ ಮರಳಿದ್ದಾರೆ. ಇದಕ್ಕೂ ಮುನ್ನ ಮೈತ್ರಿ ಅಭ್ಯರ್ಥಿ ಬಿ.ವಿ.ನಾಯಕ್ ಅಳಿಯ ಜಿ.ಪಂ.ಸದಸ್ಯ ಸಂದೀಪ್ ನಾಯಕ್ ಮನೆ ಮೇಲೆ ಚುನಾವಣಾ ಅಧಿಕಾರಿಗಳು ದಾಳಿ ನಡೆಸಿ ಒಟ್ಟು ಎರಡು ಲಕ್ಷ ರೂಪಾಯಿ ಜಪ್ತಿ ಮಾಡಿದ್ದಾರೆ. ಐಟಿ ಅಧಿಕಾರಿಗಳು ಸಹ ದಾಳಿ ನಡೆಸಿ ಮಾಹಿತಿ ಪಡೆದಿದ್ದಾರೆ. ನಗರದ ಲಿಂಗಸುಗೂರು ರಸ್ತೆಯಲ್ಲಿರುವ ಕೃಷ್ಣಾ ಮೇಡೌಸ್ ನಲ್ಲಿರುವ ಮನೆ ಮೇಲೆ ದಾಳಿ ನಡೆದು ಹಣ ಜಪ್ತಿ ಮಾಡಿದ್ದಾರೆ.

  • ಅಪಘಾತವೆಂದು ಬಿಂಬಿಸಿ ಕೊಡಗು ಬಿಜೆಪಿ ಮುಖಂಡನ ಕೊಲೆಗೈದ ಆರೋಪಿಗಳು ಅಂದರ್

    ಅಪಘಾತವೆಂದು ಬಿಂಬಿಸಿ ಕೊಡಗು ಬಿಜೆಪಿ ಮುಖಂಡನ ಕೊಲೆಗೈದ ಆರೋಪಿಗಳು ಅಂದರ್

    ಮಡಿಕೇರಿ: ಅಪಘಾತದಿಂದ ಮೃತಪಟ್ಟಿದ್ದಾರೆ ಎಂದು ಬಿಂಬಿಸಲ್ಪಟ್ಟಿದ್ದ ಕೊಡಗು ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಬಾಲಚಂದ್ರ ಕಳಗಿ(47) ಅವರ ಕೊಲೆ ಪ್ರಕರಣವನ್ನು ಕೊಡಗು ಪೊಲೀಸರು ಬೇಧಿಸಿದ್ದಾರೆ.

    ಬಾಲಚಂದ್ರ ಅವರ ಚಿಕ್ಕಪ್ಪ ರಾಜಾರಾಮ ಕಳಗಿ ಸಲ್ಲಿಸಿದ ಸಂಶಯಾಸ್ಪದ ಬಗ್ಗೆ ದೂರು ಪರಿಗಣಿಸಿ ತನಿಖೆ ನಡೆಸಿದ ಮಡಿಕೇರಿ ಗ್ರಾಮಾಂತರ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಸಂಪತ್ ಕುಮಾರ್(34), ಹರಿಪ್ರಸಾದ್(36), ಜಯನ್(34) ಬಂಧಿತ ಆರೋಪಿಗಳು. ಬಂಧಿತರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಸತ್ಯ ಬೆಳಕಿಗೆ ಬಂದಿದೆ.

    ಹತ್ಯೆ ಮಾಡಿದ್ದು ಯಾಕೆ?
    ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿದ್ದ ಬಾಲಚಂದ್ರ ಕಳಗಿ ಅವರಲ್ಲಿ ಸಂಪತ್ ವೈನ್ ಶಾಪ್ ತೆರೆಯಲು ಅನುಮತಿ ಕೇಳಿದ್ದಾನೆ. ಕಳಗಿ ಅವರು ವೈನ್ ಶಾಪ್ ತೆರೆಯಲು ಅನುಮತಿ ನೀಡಿರಲಿಲ್ಲ. ರಿಕ್ರಿಯೇಶನ್ ಕ್ಲಬ್ ಮಾಡುವುದಕ್ಕೂ ಕಳಗಿ ವಿರೋಧ ವ್ಯಕ್ತಪಡಿಸಿದ್ದರು. ಅನುಮತಿ ನೀಡದ್ದಕ್ಕೆ ಅಸಮಾಧಾನಗೊಂಡಿದ್ದ ಸಂಪತ್ ಕೊಲೆ ಮಾಡಲು ಪ್ಲಾನ್ ಮಾಡಿದ್ದ.

    ಕೊಲೆ ನಡೆಸಲು ಜಯ ಮತ್ತು ಹರಿಪ್ರಸಾದ್‍ಗೆ ಸಂಪತ್ ಸುಪಾರಿ ನೀಡಿದ್ದ. ಹಿಂದೆ ಜಯನ ವಾಹನ ಅಪಘಾತಗೊಂಡಿದ್ದಾಗ ಸಂಪತ್ ಬಿಡಿಸಿಕೊಟ್ಟಿದ್ದ. ಹೀಗಾಗಿ ಜಯ ಮತ್ತು ಸಂಪತ್ ಸ್ನೇಹಿತರಾಗಿದ್ದರು. ಹತ್ಯೆ ಮಾಡಿದ್ರೆ 1.5 ಲಕ್ಷದ ಲೋನ್ ಕ್ಲಿಯರ್ ಮಾಡಿಕೊಡುತ್ತೇನೆ ಎಂದು ಸುಪಾರಿ ನೀಡಿದ್ದ. ಈ ಕೃತ್ಯಕ್ಕೆ ಸ್ನೇಹಿತ ಹರಿಪ್ರಸಾದ್ ಸಹಕರಿಸುವುದಾಗಿ ತಿಳಿಸಿದ್ದ.

    ಪ್ಲಾನ್ ಹೀಗಿತ್ತು:
    ಕಳಗಿಯನ್ನು ಹತ್ಯೆ ಮಾಡಲು ಮೂವರು ಒಂದು ತಿಂಗಳಿನಿಂದ ಸರಿಯಾದ ಸಮಯವನ್ನು ಕಾಯುತ್ತಿದ್ದರು. ಮಾರ್ಚ್ 19 ರಂದು ಕಳಗಿ ಅವರು ಮಡಿಕೇರಿಗೆ ತೆರಳಿ ಮರಳಿ ಮನೆಗೆ ಬರುತ್ತಿದ್ದಾಗ ಡ್ರೈವರ್ ಆಗಿದ್ದ ಜಯ ತಾಳತ್ತಮನೆ ಸಮೀಪ ಲಾರಿಯನ್ನು ಓಮ್ನಿಗೆ ಗುದ್ದಿಸಿದ್ದ. ಪರಿಣಾಮ ಕಳಗಿ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದರು.

    ಅನುಮಾನ ಬಂದಿದ್ದು ಹೇಗೆ?
    ಬಾಲಚಂದ್ರ ಕಳಗಿ ಸಾವಿನ ಬಗ್ಗೆ ಹಲವು ಸಂಶಯಗಳು ಹುಟ್ಟಿಕೊಂಡಿದ್ದು, ಸೂಕ್ತ ತನಿಖೆ ನಡೆಸಿ ಸತ್ಯಾಂಶವನ್ನು ಬಯಲಿಗೆ ಎಳೆಯುವಂತೆ ಮೃತರ ಚಿಕ್ಕಪ್ಪ ಹಾಗೂ ಬಿಜೆಪಿ ಪ್ರಮುಖ ರಾಜಾರಾಮ ಕಳಗಿ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಮಾರ್ಚ್ 23 ರಂದು ದೂರು ದಾಖಲಿಸಿದ್ದರು.

    ಸಾವಿನ ಬಗ್ಗೆ ಮೃತರ ಸಂಬಂಧಿಕರು ಹಾಗೂ ಸ್ಥಳೀಯರು ಅನುಮಾನ ವ್ಯಕ್ತಪಡಿಸಿದ್ದರು. ಇದರ ಬೆನ್ನಲ್ಲೇ ಜಿಲ್ಲಾ ಬಿಜೆಪಿಯೂ ಕಳಗಿ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿ ಸೂಕ್ತ ತನಿಖೆ ನಡೆಸುವಂತೆ ಆಗ್ರಹಿಸಿತ್ತು. ಮೃತರ ಚಿಕ್ಕಪ್ಪ ನೀಡಿರುವ ದೂರಿನ ಬೆನ್ನಲ್ಲೇ ಡಿವೈಎಸ್‍ಪಿ ಕೆ.ಎಸ್.ಸುಂದರರಾಜ್ ನೇತೃತ್ವದಲ್ಲಿ ಗ್ರಾಮಾಂತರ ಪೊಲೀಸ್ ನಿರೀಕ್ಷಕ ಸಿದ್ದಯ್ಯ ಹಾಗೂ ಠಾಣಾಧಿಕಾರಿ ಚೇತನ್ ತನಿಖೆ ಆರಂಭಿಸಿದ್ದರು.

    ಸಿಕ್ಕಿಬಿದ್ದಿದ್ದು ಹೇಗೆ?
    ಬಲವಾದ ಶಂಕೆ ಹಿನ್ನೆಲೆಯಲ್ಲಿ ವಶಕ್ಕೆ ಪಡೆದು ಜಯನನ್ನು ಶುಕ್ರವಾರ ಪೊಲೀಸರು ಠಾಣೆಗೆ ಕರೆದು ವಿಚಾರಣೆ ನಡೆಸಿದ್ದಾರೆ. ಈ ವಿಚಾರಣೆ ವೇಳೆ ಜಯ ಸತ್ಯವನ್ನು ಹೇಳಿದ್ದು, ವೈನ್, ಮರಳು ಮಾಫಿಯಾ, ರಿಕ್ರಿಯೇಶನ್ ಕ್ಲಬ್ ಮಾಡಲು ಬಿಡದಕ್ಕೆ ಹತ್ಯೆ ಮಾಡಿದ್ದಾಗಿ ಒಪ್ಪಿಕೊಂಡಿದ್ದಾನೆ. ಈತ ತಿಳಿಸಿದ ಮಾಹಿತಿ ಆಧಾರದ ಹಿನ್ನೆಲೆಯಲ್ಲಿ ಉಳಿದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಹರಿಪ್ರಸಾದನ ಸ್ವಿಫ್ಟ್ ಕಾರು ಮತ್ತು ಅಪಘಾತದ ಲಾರಿ ವಶಕ್ಕೆ ಪಡೆಯಲಾಗಿದೆ.