Tag: ಬಿಜೆಪಿ ಸಂಸದ

  • ಬಿಜೆಪಿ ಸಂಸದ ರತನ್ ಲಾಲ್ ಕಟಾರಿಯಾ ನಿಧನ

    ಬಿಜೆಪಿ ಸಂಸದ ರತನ್ ಲಾಲ್ ಕಟಾರಿಯಾ ನಿಧನ

    ಚಂಡೀಗಢ: ಕೇಂದ್ರದ ಮಾಜಿ ಸಚಿವ ಹಾಗೂ ಅಂಬಾಲಾದ ಬಿಜೆಪಿ ಸಂಸದ ರತನ್ ಲಾಲ್ ಕಟಾರಿಯಾ (Rattan Lal Kataria) (71) ಗುರುವಾರ ನಿಧನರಾಗಿದ್ದಾರೆ.

    ಅನಾರೋಗ್ಯದ ಹಿನ್ನೆಲೆಯಲ್ಲಿ ಕೆಲ ತಿಂಗಳುಗಳಿಂದ ರನತ್ ಅವರು ಪಿಜಿಐಎಂಇಆರ್ (PGIMER) ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತೊದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ನಸುಕಿನ ಜಾವ 3.30ರ ಸುಮಾರಿಗೆ ಆಸ್ಪತ್ರೆಯಲ್ಲಿಯೇ ರತನ್ ಕೊನೆಯುಸಿರೆಳೆದರು.

    ಕಟಾರಿಯಾ ಅವರ ಪಾರ್ಥಿವ ಶರೀರವನ್ನು ಪಂಚಕುಲದ ನಿವಾಸದಲ್ಲಿ ಇರಿಸಲಾಗಿದ್ದು ಸಾರ್ವಜನಿಕರು ಅಂತಿಮ ದರ್ಶನ ಪಡೆಯುತ್ತಿದ್ದಾರೆ. ಸಂಜೆ ಮಣಿಮಜ್ರಾದಲ್ಲಿ ಅಂತಿಮ ವಿಧಿವಿಧಾನಗಳನ್ನು ನೇರಿವೇರಿಸಲಾಗುವುದು ಎಂಬುದಾಗಿ ಅವರ ಕುಟುಂಬದ ಮೂಲಗಳು ಮಾಧ್ಯಮಕ್ಕೆ ತಿಳಿಸಿವೆ.

    ಕಟಾರಿಯಾ ಅವರು ಸಮಾಜದ ಹಿತಕ್ಕಾಗಿ ಮತ್ತು ಹರಿಯಾಣದ ಜನರ ಪ್ರಗತಿಗಾಗಿ ಸಂಸತ್ತಿನಲ್ಲಿ ಯಾವಾಗಲೂ ಧ್ವನಿ ಎತ್ತುತ್ತಿದ್ದರು. ಇದನ್ನೂ ಓದಿ: ಗಾಂಧಿ ಕುಟುಂಬದವರ ಆದೇಶಕ್ಕೆ ನಾವು ತಲೆ ಬಾಗಲೇಬೇಕು: ಡಿಕೆಶಿ

    ರತನ್ ಅವರು ಪತ್ನಿ, ಇಬ್ಬರು ಪುತ್ರಿಯರು ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ. ರತನ್ ನಿಧನಕ್ಕೆ ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ (Manohar Lal Khattar) ಹಾಗೂ ರಾಜ್ಯ ಬಿಜೆಪಿ ಘಟಕದ ಮುಖ್ಯಸ್ಥ ಓಂ ಪ್ರಕಾಶ್ ಧನ್ಕರ್ ಸೇರಿದಂತೆ ಬಿಜೆಪಿಯ ಹಿರಿಯ ನಾಯಕರು ಸಂತಾಪ ಸೂಚಿಸಿದ್ದಾರೆ. ಖಟ್ಟರ್ ಅವರು, ರತನ್ ನಿಧನವು ರಾಜಕೀಯಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಕಂಬನಿ ಮಿಡಿದಿದ್ದಾರೆ.

  • ಗ್ರಾಪಂ ಸದಸ್ಯ 15 ಲಕ್ಷ ಲಂಚ ಪಡೆಯುವುದು ಭ್ರಷ್ಟಾಚಾರವಲ್ಲ: ಬಿಜೆಪಿ ಸಂಸದ

    ಗ್ರಾಪಂ ಸದಸ್ಯ 15 ಲಕ್ಷ ಲಂಚ ಪಡೆಯುವುದು ಭ್ರಷ್ಟಾಚಾರವಲ್ಲ: ಬಿಜೆಪಿ ಸಂಸದ

    ಭೋಪಾಲ್: ಗ್ರಾಮ ಪಂಚಾಯಿತಿ ಸದಸ್ಯ 15 ಲಕ್ಷ ರೂ. ಲಂಚ ಪಡೆಯುವುದು ಸಾಮಾನ್ಯ. ಅದನ್ನು ಭ್ರಷ್ಟಾಚಾರ ಎನ್ನಲಾಗದು ಎಂದು ಮಧ್ಯಪ್ರದೇಶದ ಬಿಜೆಪಿ ಸಂಸದ ಜನಾರ್ದನ್ ಮಿಶ್ರಾ ವಿವಾದಾತ್ಮಕ ಹೇಳಿಕೆ ನೀಡಿದರು.

    ಮಧ್ಯಪ್ರದೇಶದ ರೇವಾದಲ್ಲಿ ಸಾರ್ವಜನಿಕ ರ‍್ಯಾಲಿಯಲ್ಲಿ ಮಾತನಾಡಿದ ಅವರು, ಗ್ರಾಮ ಪಂಚಾಯಿತಿ ಸದಸ್ಯ 15 ಲಕ್ಷ ರೂ.ಗಿಂತ ಅಧಿಕ ಹಣ ಪಡೆದಾಗ ಮಾತ್ರ ಅದು ಭ್ರಷ್ಟಾಚಾರವಾಗುತ್ತದೆ. ಆಗ ಮಾತ್ರ ದೂರು ನೀಡಲು ಬನ್ನಿ ಎಂದು ತಿಳಿಸಿದರು.

    BRIBE

    ಜನರು ಗ್ರಾಪಂ ಸದಸ್ಯ ಲಂಚ ಪಡೆಯುತ್ತಾನೆ ಎಂದು ದೂರು ನೀಡಲು ಬರುತ್ತಾರೆ. ಆದರೆ ಆತ ಚುನಾವಣೆಯಲ್ಲಿ ಗೆಲ್ಲಲು 7 ಲಕ್ಷ ರೂ. ಖರ್ಚು ಮಾಡುತ್ತಾನೆ. ಗೆದ್ದ ನಂತರ ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲ್ಲಲು ಲಕ್ಷಾಂತರ ಹಣ ಖರ್ಚು ಮಾಡಬೇಕಾಗುತ್ತದೆ. ಹಣದುಬ್ಬರ ಕಾರಣದಿಂದ ಇನ್ನೊಂದು ಲಕ್ಷ ರೂ. ಹೆಚ್ಚಿರುತ್ತದೆ ಎಂದು ಹೇಳಿದರು. ಇದನ್ನೂ ಓದಿ: ಹಾರ್ನ್ ಹಾಕುವುದನ್ನು ಕಮ್ಮಿ ಮಾಡಿ – 32 ವರ್ಷಗಳಿಂದ ಸಂದೇಶ ಸಾರ್ತಿದ್ದಾರೆ ಸೈಲೆಂಟ್ ಕ್ರುಸೇಡರ್

    ಉತ್ತರ ಪ್ರದೇಶದ ಕಾನ್ಪುರದ ಜಿಲ್ಲಾ ನ್ಯಾಯಾಲಯವು ತೆರಿಗೆ ವಂಚನೆ ಪ್ರಕರಣದಲ್ಲಿ ವ್ಯಾಪಾರಿ ಪಿಯೂಷ್ ಜೈನ್ ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದ್ದಾರೆ. ಇದಾದ ಒಂದು ದಿನದ ನಂತರ ಸಂಸದರು ಈ ಹೇಳಿಕೆ ನೀಡಿದ್ದಾರೆ. ಜೈನ್ ಬಂಧನದ ಬಗ್ಗೆ ಬಿಜೆಪಿ ಮತ್ತು ಸಮಾಜವಾದಿ ಪಕ್ಷದ ನಡುವೆ ಮಾತಿನ ಸಮರ ನಡೆಯುತ್ತಿದೆ. ಎರಡೂ ಪಕ್ಷಗಳು ಜೈನ್ ಅವರೊಂದಿಗೆ ಸಂಪರ್ಕ ಹೊಂದಿವೆ ಎಂಬ ಆರೋಪವಿದೆ. ಇದನ್ನೂ ಓದಿ: ಪ್ರಧಾನಿ ಭದ್ರತೆಗಾಗಿ 12 ಕೋಟಿಯ ದುಬಾರಿ ಕಾರು- ವಿಶೇಷತೆ ಏನು..?

  • ವೇದಿಕೆ ಮೇಲೆಯೇ ಕುಸ್ತಿಪಟುವಿಗೆ ಕಪಾಳಮೋಕ್ಷ ಮಾಡಿದ ಬಿಜೆಪಿ ಸಂಸದ!

    ವೇದಿಕೆ ಮೇಲೆಯೇ ಕುಸ್ತಿಪಟುವಿಗೆ ಕಪಾಳಮೋಕ್ಷ ಮಾಡಿದ ಬಿಜೆಪಿ ಸಂಸದ!

    ರಾಂಚಿ: ಕಾರ್ಯಕ್ರಮ ನಡೆಯುತ್ತಿದ್ದ ವೇಳೆ ವೇದಿಕೆ ಮೇಲೆಯೇ ಕುಸ್ತಿಪಟುವಿಗೆ ಬಿಜೆಪಿ ಸಂಸದ ಬ್ರಿಜುಭೂಷಣ್‌ ಶರಣ್‌ ಸಿಂಗ್‌ ಕಪಾಳಮೋಕ್ಷ ಮಾಡಿರುವ ವೀಡಿಯೋ ಎಲ್ಲೆಡೆ ವೈರಲ್‌ ಆಗಿದೆ.

    ಜಾರ್ಖಂಡ್‌ನ ರಾಜಧಾನಿ ರಾಂಚಿಯಲ್ಲಿ ರಾಷ್ಟ್ರೀಯ ಚಾಂಪಿಯನ್ ಶಿಪ್‌ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದ ವೇಳೆ ಕುಸ್ತಿಪಟು ವೇದಿಕೆ ಮೇಲೆ ಆಗಮಿಸಿದ್ದಾರೆ. ಆಗ ಕುಸ್ತಿಪಟುವಿಗೆ ಬಿಜೆಪಿ ಸಂಸದರು ಕಪಾಳಮೋಕ್ಷ ಮಾಡಿರುವ ದೃಶ್ಯ ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆಗಿದೆ. ಇದನ್ನೂ ಓದಿ: ದಕ್ಷಿಣ ಆಫ್ರಿಕಾ ಟೆಸ್ಟ್ ಸರಣಿಗೆ ಕನ್ನಡಿಗ ಕೆ.ಎಲ್ ರಾಹುಲ್ ಟೀಂ ಇಂಡಿಯಾದ ಉಪನಾಯಕ?

    15 ವರ್ಷದೊಳಗಿನವರ ರಾಷ್ಟ್ರೀಯ ಕುಸ್ತಿ ಚಾಂಪಿಯನ್‌ ಶಿಪ್‌ ಕಾರ್ಯಕ್ರಮಕ್ಕೆ ಸಂಸದ ಸಿಂಗ್‌ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು.

    ವಯಸ್ಸು ಮೀರಿದ್ದ ಕಾರಣ ಕುಸ್ತಿಪಟುವೊಬ್ಬರಿಗೆ ಸ್ಪರ್ಧೆಗೆ ಅವಕಾಶ ನೀಡಿರಲಿಲ್ಲ. ಹೀಗಾಗಿ 15 ವರ್ಷದೊಳಗಿನವರ ಕುಸ್ತಿ ಸ್ಪರ್ಧೆಯಲ್ಲಿ ಪಾಲ್ಗೊಳ್ಳಲು ತನಗೆ ಅವಕಾಶ ಮಾಡಿಕೊಡುವಂತೆ ಕೇಳಿಕೊಳ್ಳಲು ಸಂಸದರ ಬಳಿಗೆ ಕುಸ್ತಿಪಟು ತೆರಳಿದ್ದಾರೆ. ವೇದಿಕೆ ಮೇಲೆ ಕುಸ್ತಿಪಟು ಆಗಮಿಸುತ್ತಿದ್ದಂತೆ ಕೋಪಗೊಂಡ ಸಂಸದರು ಆತನ ಕಪಾಳಕ್ಕೆ ಹೊಡೆದಿದ್ದಾರೆ. ನಂತರ ಕುಸ್ತಿಪಟು ಮುಜುಗರ ಪಟ್ಟುಕೊಂಡು ವೇದಿಕೆಯಿಂದ ನಿರ್ಗಮಿಸಿದ್ದಾರೆ. ಇದನ್ನೂ ಓದಿ: ಟ್ರಾಫಿಕ್ ಪೊಲೀಸರಿಗೆ ಧನ್ಯವಾದ ತಿಳಿಸಿದ ಸಚಿನ್ ತೆಂಡೂಲ್ಕರ್

  • ಆತ್ಮಹತ್ಯೆ ಯತ್ನಕ್ಕೂ ಮುನ್ನ ವೀಡಿಯೋ ಮಾಡಿದ ಬಿಜೆಪಿ ಸಂಸದನ ಸೊಸೆ!

    ಆತ್ಮಹತ್ಯೆ ಯತ್ನಕ್ಕೂ ಮುನ್ನ ವೀಡಿಯೋ ಮಾಡಿದ ಬಿಜೆಪಿ ಸಂಸದನ ಸೊಸೆ!

    – ವೀಡಿಯೋದಲ್ಲಿ ಅಂಕಿತಾ ಆರೋಪಿಸಿದ್ದೇನು..?

    ನವದೆಹಲಿ: ಬಿಜೆಪಿ ಸಂಸದ ಕೌಶಲ್ ಕಿಶೋರ್ ಅವರ ಸೊಸೆ ಲಕ್ನೋ ಬಳಿಯ ಕಾಕೋರಿಯಲ್ಲಿರುವ ರಾಜಕಾರಣಿಗಳ ಮನೆಯ ಹೊರಗೆ ಆತ್ಮಹತ್ಯೆಗೆ ಯತ್ನಿಸುವ ಮೊದಲು ವೀಡಿಯೋವೊಂದನ್ನು ಬಿಡುಗಡೆ ಮಾಡಿದ್ದಾರೆ.

    ಕೌಶಲ್ ಕಿಶೋರ್ ಮೋಹನ್ ಲಾಲ್ಗಂಜ್ ಸ್ಥಾನದಿಂದ ಲೋಕಸಭಾ ಸಂಸದರಾಗಿದ್ದಾರೆ. ವೀಡಿಯೋದಲ್ಲಿ ಅಂಕಿತಾ ತನ್ನ ಪತಿ ಆಯುಷ್, ಮಾವ ಕೌಶಲ್ ಕಿಶೋರ್, ಅತ್ತೆ ಜೈ ದೇವಿ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಅಲ್ಲದೆ ನಾನು ಈ ನಿರ್ಧಾರ ತೆಗೆದುಕೊಳ್ಳಲು ಅವರೇ ನೇರ ಕಾರಣ ಎಂದು ತಿಳಿಸಿದ್ದಾರೆ.

    ಆತ್ಮಹತ್ಯೆಗೆ ಯತ್ನಿಸಿದನ್ನು ಗಮನಿಸಿದ ಕೂಡಲೇ ಅಂಕಿತಾರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಂಕಿತಾ ಸ್ಥಿತಿ ಸ್ಥಿರವಾಗಿದೆ ಎಂದು ವೈದ್ಯರು ಹೇಳಿದ್ದಾರೆ.

    ಲಕ್ನೋದಲ್ಲಿ ಬಿಜೆಪಿ ಸಂಸದರ ಮಗನ ಮೇಲೆ ಗುಂಡು ಹಾರಿಸಲಾಗಿದೆ ಎಂದು ವರದಿಯಾದ ಕೆಲವೇ ದಿನಗಳಲ್ಲಿ ಈ ವೀಡಿಯೋ ಬಂದಿದೆ. ಮೋಹನ್‍ಲಾಲ್‍ಗಂಜ್ ಕ್ಷೇತ್ರದ ಬಿಜೆಪಿ ಸಂಸದ ಪುತ್ರ ಆಯುಷ್ (30) ಗೆ ಮಡಿಯಾನ್ ಪ್ರದೇಶದಲ್ಲಿ ಗುಂಡು ಹಾರಿಸಲಾಗಿದೆ. ಪ್ರಥಮ ಚಿಕಿತ್ಸಾ ನಂತರ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿತ್ತು. ಈ ಸಂಬಂಧ ಪೊಲೀಸರು, ಕೆಲ ವ್ಯಕ್ತಿಗಳ ಮೂಲಕ ಆತನ ಸೋದರ ಮಾವನೇ ಈ ಕೃತ್ಯ ಎಸಗಿದ್ದಾರೆ ಎಂದು ಶಂಕಿಸಿದ್ದರು.

  • ಫೋನ್ ಆರ್ಡರ್ ಮಾಡಿದ್ದ ಬಿಜೆಪಿ ಎಂಪಿಗೆ ಬಂದಿದ್ದು ಎರಡು ಕಲ್ಲು

    ಫೋನ್ ಆರ್ಡರ್ ಮಾಡಿದ್ದ ಬಿಜೆಪಿ ಎಂಪಿಗೆ ಬಂದಿದ್ದು ಎರಡು ಕಲ್ಲು

    ಕೋಲ್ಕತ್ತಾ: ದೀಪಾವಳಿ ಹಬ್ಬದ ಪ್ರಯುಕ್ತ ಫೋನ್ ಆರ್ಡರ್ ಮಾಡಿದ ಸಂಸದರೊಬ್ಬರಿಗೆ ಆನ್‍ಲೈನ್ ಸಂಸ್ಥೆ ಎರಡು ಕಲ್ಲನ್ನು ಕಳುಹಿಸಿದೆ.

    ಪಶ್ಚಿಮ ಬಂಗಾಳದ ಮಾಲ್ಡಾ ಕ್ಷೇತ್ರದ ಬಿಜೆಪಿ ಸಂಸದ ಖಾಗನ್ ಮುರ್ಮು ಅವರು ದೀಪಾವಳಿ ಹಬ್ಬಕ್ಕೆಂದು ಇ-ಕಾಮರ್ಸ್ ಎಂಬ ಆನ್‍ಲೈನ್ ಕಂಪನಿಯ ಮೂಲಕ ಸ್ಯಾಮ್ಸಂಗ್ ಕಂಪನಿಯ ಮೊಬೈಲ್ ಫೋನ್ ಅನ್ನು ಆರ್ಡರ್ ಮಾಡಿದ್ದಾರೆ. ಆದರೆ ಫೋನಿನ ಬದಲು ಅವರಿಗೆ ಎರಡು ಕಲ್ಲನ್ನು ಪಾರ್ಸೆಲ್ ಮಾಡಲಾಗಿದೆ.

    ಈ ವಿಚಾರದ ಬಗ್ಗೆ ಮಾತನಾಡಿರುವ ಮುರ್ಮು ಅವರು ಸೋಮವಾರ ಬೆಳಗ್ಗೆ ಪಾರ್ಸೆಲ್ ಬಂದಿದೆ. ಆಗ ನಾನು ಮನೆಯಲ್ಲಿ ಇರಲಿಲ್ಲ. ನನ್ನ ಹೆಂಡತಿ ಪಾರ್ಸೆಲ್ ಪಡೆದು 11,999 ರೂ ಕ್ಯಾಶ್ ನೀಡಿದ್ದಾಳೆ. ನಂತರ ನಾನು ಮನೆಗೆ ಬಂದು ಬಾಕ್ಸ್ ತರೆದು ನೋಡಿದಾಗ ಅಲ್ಲಿ ಎರಡು ಕಲ್ಲುಗಳು ಮಾತ್ರ ಇದ್ದವು. ವಿಶೇಷವೆಂದರೆ ನಾವು ಸ್ಯಾಮ್ಸಂಗ್ ಮೊಬೈಲ್ ಬುಕ್ ಮಾಡಿದರೆ ಅವರು ರೆಡ್‍ಮಿ ಮೊಬೈಲ್ ಬಾಕ್ಸ್ ನಲ್ಲಿ ಕಲ್ಲನ್ನು ಪಾರ್ಸೆಲ್ ಮಾಡಿದ್ದಾರೆ ಎಂದು ಹೇಳಿದ್ದಾರೆ.

    ನಾನು ಯಾವತ್ತು ಆನ್‍ಲೈನ್ ಅಲ್ಲಿ ವ್ಯಾಪಾರ ಮಾಡಿದ ವ್ಯಕ್ತಿ ಅಲ್ಲ. ಆದರೆ ಇದನ್ನು ನನ್ನ ಮಗ ನನಗಾಗಿ ಬುಕ್ ಮಾಡಿದ್ದ. ಆದರೆ ನಾವು ತೆಗೆಯುವ ಮುಂಚೆಯೇ ಯಾರೋ ಬಾಕ್ಸ್ ಓಪನ್ ಮಾಡಿದ್ದಾರೆ. ಬೇಕೆಂದೆ ಎರಡು ಕಲ್ಲು ಇಟ್ಟುಕೊಟ್ಟಿದ್ದಾರೆ. ಈ ಸಂಬಂಧ ನಾನು ಬಜಾರ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಈ ವಿಷಯವನ್ನು ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವರಿಗೆ ವರದಿ ಮಾಡುತ್ತೇನೆ ಎಂದು ಹೇಳಿದ್ದಾರೆ.

    ಈ ಪ್ರಕರಣದ ಬಗ್ಗೆ ಮಾಹಿತಿ ನೀಡಿರುವ ಮಾಲ್ಡಾ ಠಾಣೆಯ ಪೊಲೀಸ್ ಅಧಿಕಾರಿ ಅಲೋಕ್ ರಾಜೋರಿಯಾ, ಇದು ಸಂಸ್ಥೆಯಿಂದ ಆಗಿರುವ ಸಮಸ್ಯೆ ಅಲ್ಲ. ಇದರ ಮಧ್ಯೆ ಯಾರೋ ಬೇಕಂತಲೇ ಹೀಗೆ ಮಾಡಿದ್ದಾರೆ. ನಾವು ಈ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡು ಕ್ರಮ ತೆಗೆದುಕೊಳ್ಳುತ್ತೇನೆ ಎಂದು ಹೇಳಿದ್ದಾರೆ.