Tag: ಬಿಜೆಪಿ ಸರ್ಕಾರ

  • ಬಿಜೆಪಿ-ಆರ್‌ಎಸ್‌ಎಸ್‌ ನಡ್ವೆ ಕೆಲ ಭಿನ್ನಾಭಿಪ್ರಾಯ ಇರಬಹುದು, ಎಲ್ಲಿಯೂ ಸಂಘರ್ಷವಿಲ್ಲ: ಮೋಹನ್ ಭಾಗವತ್

    ಬಿಜೆಪಿ-ಆರ್‌ಎಸ್‌ಎಸ್‌ ನಡ್ವೆ ಕೆಲ ಭಿನ್ನಾಭಿಪ್ರಾಯ ಇರಬಹುದು, ಎಲ್ಲಿಯೂ ಸಂಘರ್ಷವಿಲ್ಲ: ಮೋಹನ್ ಭಾಗವತ್

    – ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ಆಯ್ಕೆಯಲ್ಲೂ ನಮ್ಮ ಪಾತ್ರ ಇಲ್ಲ ಎಂದ ಆರ್‌ಎಸ್‌ಎಸ್‌ ಮುಖ್ಯಸ್ಥ

    ನವದೆಹಲಿ: ಬಿಜೆಪಿ ಮತ್ತು ಆರ್‌ಎಸ್‌ಎಸ್ (BJP And RSS) ನಡುವೆ ಕೆಲವು ಭಿನ್ನಾಭಿಪ್ರಾಯ ಇರಬಹುದು, ಆದ್ರೆ ಎಲ್ಲಿಯೂ ಸಂಘರ್ಷವಿಲ್ಲ, ದ್ವೇಷವೂ ಇಲ್ಲ. ನಮ್ಮಲ್ಲಿ ಪರಸ್ಪರ ನಂಬಿಕೆ ಇದೆ ಎಂದು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್‌ (Mohan Bhagwat) ಹೇಳಿದ್ದಾರೆ.

    ಆರ್‌ಎಸ್‌ಎಸ್‌ಗೆ (RSS) 100 ವರ್ಷಗಳ ಶತಮಾನೋತ್ಸವ ಹಿನ್ನೆಲೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, 2024ರ ಲೋಕಸಭೆ ಚುನಾವಣೆಯಲ್ಲಿ ಆರ್‌ಎಸ್‌ಎಸ್ ಸಹಕಾರದ ಕೊರತೆಯಿಂದ ಬಿಜೆಪಿ ಬಹಮತದಿಂದ ದೂರ ಉಳಿಯುತೇ ಎನ್ನುವ ಪ್ರಶ್ನೆಗೆ ಅವರು ಉತ್ತರಿಸಿದರು. ಇದನ್ನೂ ಓದಿ: ಕೇಂದ್ರದಿಂದ ಬೀದಿ ಬದಿ ವ್ಯಾಪಾರಿಗಳಿಗೆ ಗಣೇಶ ಹಬ್ಬದ ಬಂಪರ್‌ ಗಿಫ್ಟ್‌ – ಪಿಎಂ ಸ್ವನಿಧಿ ಯೋಜನೆ 5 ವರ್ಷ ವಿಸ್ತರಣೆ

    ಇನ್ನೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ (BJP National President) ಆಯ್ಕೆ ಬಗ್ಗೆ ಮಾತನಾಡಿ, ಬಿಜೆಪಿ ಸರ್ಕಾರದಲ್ಲಿ ಆರ್‌ಎಸ್‌ಎಸ್ ಎಲ್ಲವನ್ನೂ ನಿರ್ಧರಿಸುತ್ತದೆ ಅನ್ನೋದು ತಪ್ಪು. ಎಲ್ಲವನ್ನೂ ನಿಯಂತ್ರಿಸಲು ಸಾಧ್ಯವಿಲ್ಲ. ಆದ್ರೆ ನಾವು ಪರಸ್ಪರ ಸಲಹೆಗಳನ್ನಷ್ಟೇ ನೀಡಬಹುದು ಎಂದು ಹೇಳಿದರು. ಇದನ್ನೂ ಓದಿ: Jammu Kashmir | ಅಕ್ರಮವಾಗಿ ಗಡಿ ನುಸುಳಲು ಯತ್ನ – ಇಬ್ಬರು ಉಗ್ರರ ಎನ್‌ಕೌಂಟರ್

    ಸರ್ಕಾರದೊಂದಿಗೆ ಸಂಘದ ಸಮನ್ವಯದ ಬಗ್ಗೆ ಮಾತನಾಡುತ್ತಾ, ಪ್ರಸ್ತುತ ಸರ್ಕಾರ ಮಾತ್ರವಲ್ಲ, ಪ್ರತಿಯೊಂದು ಸರ್ಕಾರದೊಂದಿಗೆ ನಮಗೆ ಉತ್ತಮ ಸಮನ್ವಯವಿದೆ ಎಲ್ಲಿಯೂ ಯಾವುದೇ ಜಗಳವಿಲ್ಲ ಎಂದರು. ಸಂಘವು ಬಿಜೆಪಿ ಹೊರತುಪಡಿಸಿ ಬೇರೆ ರಾಜಕೀಯ ಪಕ್ಷಗಳನ್ನು ಏಕೆ ಬೆಂಬಲಿಸುವುದಿಲ್ಲವೇ? ಎಂಬ ಪ್ರಶ್ನೆಗೆ ಉತ್ತರಿಸಿ, ಒಳ್ಳೆಯ ಕೆಲಸಕ್ಕಾಗಿ ನಮ್ಮಿಂದ ಸಹಾಯ ಕೇಳುವವರಿಗೆ ನಾವು ಸಹಾಯ ಮಾಡುತ್ತೇವೆ. ಓಡಿಹೋದವರಿಗೆ ಸಹಾಯ ಸಿಗುವುದಿಲ್ಲ ಎಂದರಲ್ಲದೇ ನಾವು ಪ್ರತಿಯೊಂದು ಸರ್ಕಾರದೊಂದಿಗೆ ಅಂದ್ರೆ ಕೇಂದ್ರ, ರಾಜ್ಯ ಸರ್ಕಾರಗಳೊಂದಿಗೆ ಉತ್ತಮ ಸಂಬಂಧ ಹೊಂದಿದ್ದೇವೆ, ಆದರೆ ಕೆಲವು ವ್ಯವಸ್ಥೆಗಳು ಕೆಲವು ಆಂತರಿಕ ವಿರೋಧಾಭಾಸ ಹೊಂದಿವೆ ಎಂದರು.

    ತಂತ್ರಜ್ಞಾನ ಮತ್ತು ಆಧುನೀಕರಣದ ಯುಗದಲ್ಲಿ ಸಂಸ್ಕೃತಿ ಮತ್ತು ಸಂಪ್ರದಾಯಗಳನ್ನು ಸಂರಕ್ಷಿಸುವ ಸವಾಲನ್ನು ಆರ್‌ಎಸ್‌ಎಸ್ ಹೇಗೆ ನೋಡುತ್ತದೆ? ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, ಅವರು ತಂತ್ರಜ್ಞಾನ ಮತ್ತು ಆಧುನಿಕತೆಯು ಶಿಕ್ಷಣಕ್ಕೆ ವಿರುದ್ಧವಾಗಿಲ್ಲ. ಶಿಕ್ಷಣ ಕೇವಲ ಮಾಹಿತಿಯಲ್ಲ, ಮನುಷ್ಯ ಸುಸಂಸ್ಕೃತನಾಗಬೇಕು. ಹೊಸ ಶಿಕ್ಷಣ ನೀತಿಯಲ್ಲಿ ಪಂಚಕೋಶಿ ಶಿಕ್ಷಣದ ನಿಬಂಧನೆ ಇದೆ. ಜನರು ತಂತ್ರಜ್ಞಾನದ ಮಾಸ್ಟರ್‌ಗಳಾಗಿರಬೇಕು, ತಂತ್ರಜ್ಞಾನ ನಮ್ಮ ಮಾಸ್ಟರ್‌ಗಳಾಗಬಾರದು ಎಂದು ಹೇಳಿದರು. ಇದನ್ನೂ ಓದಿ: 2030ರ ಕಾಮನ್‌ವೆಲ್ತ್ ಗೇಮ್ಸ್‌ನ ಹರಾಜು ಪ್ರಕ್ರಿಯೆಗೆ ಕೇಂದ್ರ ಅಸ್ತು

    ಶಿಕ್ಷಣ ಅಗತ್ಯ, ತಂತ್ರಜ್ಞಾನವು ಅವಿದ್ಯಾವಂತರ ಕೈಗೆ ಹೋದರೆ, ಅದು ವಿರುದ್ಧ ಪರಿಣಾಮವನ್ನು ಬೀರುತ್ತದೆ. ಶಿಕ್ಷಣ ಅಂದ್ರೆ ಕೇವಲ ಮಾಹಿತಿಯನ್ನು ನೆನಪಿಟ್ಟುಕೊಳ್ಳುವುದು ಎಂದಲ್ಲ. ನಮ್ಮ ಹಳೆಯ ಶಿಕ್ಷಣ ಕಣ್ಮರೆಯಾಯಿತು, ನಾವು ಗುಲಾಮರಾಗಿದ್ದಾಗ, ಹೊಸ ವ್ಯವಸ್ಥೆ ಬಂದಿತು. ಅವರು ವ್ಯವಸ್ಥೆಯನ್ನು ತಮ್ಮದೇ ಆದ ಪ್ರಕಾರ ಮಾಡಿದರು. ಆದರೆ ಈಗ ನಾವು ಸ್ವತಂತ್ರರಾಗಿದ್ದೇವೆ, ನಾವು ರಾಜ್ಯವನ್ನು ನಡೆಸಬೇಕು ಮಾತ್ರವಲ್ಲ, ಜನರು ಸಹ ಅದನ್ನು ಅನುಸರಿಸಬೇಕು. ನಾವು ಆ ದಿಕ್ಕಿನಲ್ಲಿ ಮುಂದುವರಿಯಬೇಕಾಗಿದೆ ಎಂದರು.

  • ದೆಹಲಿ ಸರ್ಕಾರದಿಂದ ಯೂಟರ್ನ್ – ಅವಧಿ ಮೀರಿದ ವಾಹನಗಳಿಗೆ ಹೇರಿದ್ದ ಇಂಧನ ನಿಷೇಧ ಆದೇಶ ವಾಪಸ್

    ದೆಹಲಿ ಸರ್ಕಾರದಿಂದ ಯೂಟರ್ನ್ – ಅವಧಿ ಮೀರಿದ ವಾಹನಗಳಿಗೆ ಹೇರಿದ್ದ ಇಂಧನ ನಿಷೇಧ ಆದೇಶ ವಾಪಸ್

    ನವದೆಹಲಿ: ವಾಯುಮಾಲಿನ್ಯ ನಿಯಂತ್ರಣ ಉದ್ದೇಶದಿಂದ ದೆಹಲಿಯಲ್ಲಿ (Delhi) ಅವಧಿ ಮೀರಿದ ಹಳೆಯ ವಾಹನಗಳಿಗೆ ಇಂಧನ ನಿಷೇಧಿಸುವ ನಿರ್ಧಾರಕ್ಕೆ ವ್ಯಾಪಕ ಟೀಕೆ ವ್ಯಕ್ತವಾದ ಬೆನ್ನಲ್ಲೇ ದೆಹಲಿಯ ಬಿಜೆಪಿ ಸರ್ಕಾರ (BJP Government) ಯೂಟರ್ನ್ ಹೊಡೆದಿದೆ. ಯೋಜನೆಯಲ್ಲಿ ತಾಂತ್ರಿಕ ಸಮಸ್ಯೆ ಕಾರಣ ನೀಡಿ ಹಳೆಯ ವಾಹನಗಳ ಮೇಲಿನ ಇಂಧನ ನಿಷೇಧ ಆದೇಶವನ್ನು ವಾಪಸ್ ಪಡೆದಿದೆ.

    ಸರ್ಕಾರ ಜನಾಕ್ರೋಶದ ಬೆನ್ನಲ್ಲೇ ತಾಂತ್ರಿಕ ಸಮಸ್ಯೆ ಕಾರಣ ನೀಡಿ ಹಳೆಯ ವಾಹನಗಳ ಮೇಲಿನ ಇಂಧನ ನಿಷೇಧವನ್ನು ತೆಗೆದುಹಾಕುವಂತೆ ವಾಯು ಗುಣಮಟ್ಟ ನಿರ್ವಹಣಾ ಆಯೋಗಕ್ಕೆ ಪತ್ರ ಬರೆದಿತ್ತು.ಇದನ್ನೂ ಓದಿ: ಉತ್ತರ ಕನ್ನಡ ಜಿಲ್ಲೆಯಲ್ಲಿ ಜುಲೈ ತಿಂಗಳಲ್ಲಿ ಭೂಕುಸಿತ ಎಚ್ಚರಿಕೆ ನೀಡಿದ ಭೂವಿಜ್ಞಾನಿಗಳು

    ಪತ್ರದಲ್ಲಿ, ಸ್ವಯಂಚಾಲಿತ ನಂಬರ್ ಪ್ಲೇಟ್ ಗುರುತಿಸುವಿಕೆ ವ್ಯವಸ್ಥೆ (ANPR) ಕ್ಯಾಮೆರಾಗಳಲ್ಲಿ ತಾಂತ್ರಿಕ ದೋಷಗಳು ಕಂಡುಬಂದಿದೆ ಹಾಗೂ ಸ್ಪೀಕರ್ ಕಾರ್ಯನಿರ್ವಹಿಸದಿರುವಂತಹ ಮುಂತಾದ ಸಮಸ್ಯೆಗಳಿವೆ. ಇನ್ನೂ ನೆರೆಯ ರಾಜ್ಯಗಳ ಪೆಟ್ರೋಲ್ ಪಂಪ್‌ಗಳಲ್ಲಿ ಎಎನ್‌ಪಿಆರ್ ವ್ಯವಸ್ಥೆಯನ್ನು ಜಾರಿಗೆ ತಂದಿಲ್ಲ. ಹೀಗಾಗಿ ಜನರಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ. ಈ ಕಾರಣಗಳಿಂದ ಹಳೆಯ ವಾಹನಗಳ ಮೇಲಿನ ಇಂಧನ ನಿಷೇಧವನ್ನು ತೆಗೆದುಹಾಕಲು ಪತ್ರ ಬರೆದಿತ್ತು. ಸರ್ಕಾರದ ಪತ್ರದ ಬೆನ್ನಲ್ಲೇ ಆದೇಶವನ್ನು ಹಿಂಪಡೆಯಲಾಗಿದೆ.

    ಸರ್ಕಾರದ ಬದಲಾದ ನಿರ್ಧಾರದಿಂದಾಗಿ 10 ವರ್ಷಕ್ಕಿಂತ ಹಳೆಯದಾದ (ಡೀಸೆಲ್) ಮತ್ತು 15 ವರ್ಷ ಹಳೆಯದಾದ (ಪೆಟ್ರೋಲ್) ವಾಹನಗಳಿಗೆ ದೆಹಲಿಯ ಪೆಟ್ರೋಲ್ ಪಂಪ್‌ಗಳಲ್ಲಿ ಇಂಧನ ಹಾಕಿಸಬಹುದು. ಪೆಟ್ರೋಲ್ ಪಂಪ್‌ಗಳು ಇನ್ನು ಮುಂದೆ ಹಳೆಯ ವಾಹನಗಳನ್ನು ಅವುಗಳ ವರ್ಷದ ಆಧಾರದ ಮೇಲೆ ಸೇವೆಯನ್ನು ನಿರಾಕರಿಸುವಂತಿಲ್ಲ. ಪಂಪ್‌ಗಳಲ್ಲಿರುವ ಕ್ಯಾಮೆರಾಗಳು ದಾಖಲೆಗಾಗಿ ಕಾರ್ಯನಿರ್ವಹಿಸಿದರೂ, ಈ ಹಿಂದೆ ಘೋಷಿಸಲಾಗಿದ್ದ ಇಂಧನ ನಿಷೇಧವನ್ನು ಜಾರಿಗೊಳಿಸುವಂತಿಲ್ಲ ಎಂದು ತಿಳಿಸಿದೆ.

    ಈ ಕುರಿತು ಪರಿಸರ ಕಾರ್ಯಕರ್ತರು, ಸರ್ಕಾರವು ವಾಹನವನ್ನು ಅದರ ವರ್ಷಗಳ ಆಧಾರದ ಮೇಲೆ ಗುರುತಿಸುವುದಕ್ಕಿಂತ ಹೆಚ್ಚಾಗಿ ಎಲೆಕ್ಟ್ರಿಕ್‌ ವಾಹನಗಳನ್ನು ಉತ್ತೇಜಿಸುವುದು ಒಳ್ಳೆಯದು ಹಾಗೂ ಸಾರ್ವಜನಿಕ ಸಾರಿಗೆಗೆ ಹೆಚ್ಚಿನ ಉತ್ತೇಜನ ನೀಡಬೇಕು ಎಂದು ಒತ್ತಾಯಿಸಿದ್ದಾರೆ.ಇದನ್ನೂ ಓದಿ: ಉಡುಪಿ | `ರಕ್ತಕ್ಕೆ ರಕ್ತವೇ ಬೇಕು’ ಅಂತ ಸ್ಟೇಟಸ್ ಹಾಕಿದ್ದ ಯುವಕ ಅರೆಸ್ಟ್

  • BJP ಸ್ಥಿರ ಸರ್ಕಾರದಿಂದ ದೇಶದ ಸರ್ವಾಂಗೀಣ ಅಭಿವೃದ್ಧಿ ಸಾಧ್ಯವಾಗಿದೆ – ತೇಜಸ್ವಿ ಸೂರ್ಯ

    BJP ಸ್ಥಿರ ಸರ್ಕಾರದಿಂದ ದೇಶದ ಸರ್ವಾಂಗೀಣ ಅಭಿವೃದ್ಧಿ ಸಾಧ್ಯವಾಗಿದೆ – ತೇಜಸ್ವಿ ಸೂರ್ಯ

    – 2014, 2019ರ ಲೋಕಸಭೆ ಚುನಾವಣೆಗಳಿಂದ ದೇಶದಲ್ಲಿ ಸ್ಥಿರ ಸರ್ಕಾರ ಸ್ಥಾಪನೆ
    – 2009ಕ್ಕೆ ಹೋಲಿಸಿದ್ರೆ 12% ಯುವ ಮತದಾರರ ಸಂಖ್ಯೆ ಹೆಚ್ಚಳ

    ಬೆಂಗಳೂರು: ಬಿಜೆಪಿ (BJP) ನೇತೃತ್ವದ ಸ್ಥಿರ ಕೇಂದ್ರ ಸರ್ಕಾರದಿಂದ ದೇಶದ ಸರ್ವಾಂಗೀಣ ಅಭಿವೃದ್ಧಿ ಸಾಧ್ಯವಾಗಿದೆ ಎಂದು ಸಂಸದ ತೇಜಸ್ವಿ ಸೂರ್ಯ (Tejasvi Surya) ಶ್ಲಾಘಿಸಿದರು.

    ಮಲ್ಲೇಶ್ವರದ ಬಿಜೆಪಿ (BJP) ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿಂದು ʻಲೋಕಸಭಾ ಕ್ಷೇತ್ರಗಳ ಮತದಾರರ ಚೇತನ ಮಹಾ ಅಭಿಯಾನʼ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 2014 ಮತ್ತು 2019ರ ಚುನಾವಣೆಗಳು ದೇಶಕ್ಕೆ ಸ್ಥಿರ ಸರ್ಕಾರ ನೀಡಿವೆ. 2009ರ ಚುನಾವಣೆಗೆ ಹೋಲಿಸಿದ್ರೆ ಸುಮಾರು 12% ಯುವ ಮತದಾರರು ಹೆಚ್ಚುವರಿಯಾಗಿ ಮತದಾನ ಮಾಡಿದ್ದರು. ಅವರು ಬಿಜೆಪಿ, ಮೋದಿಜಿ (Narendra Modi) ಅವರಿಗೆ ಮಾಡಿದ ಆಶೀರ್ವಾದದಿಂದ 34 ವರ್ಷದ ಬಳಿಕ ಈ ದೇಶದಲ್ಲಿ ಸ್ಥಿರ, ಸದೃಢ ಸರ್ಕಾರ ಬಂತು ಎಂದು ವಿಶ್ಲೇಷಿಸಿದರು.  

    ಸ್ಥಿರ, ಸದೃಢ ಸರ್ಕಾರದ ಫಲವಾಗಿ ಕಳೆದ 9 ವರ್ಷಗಳಲ್ಲಿ ದೇಶದಲ್ಲಿ ಎಲ್ಲ ಕ್ಷೇತ್ರಗಳಲ್ಲಿ ಸರ್ವಾಂಗೀಣ ಅಭಿವೃದ್ಧಿ ಸಾಧ್ಯವಾಗಿದೆ ಎಂದ ಅವರು, ಮುಂದಿನ ಕೆಲವು ತಿಂಗಳಿನಲ್ಲಿ ಮತದಾರರ ಪಟ್ಟಿಯನ್ನು ಚುನಾವಣಾ ಆಯೋಗ ಪರಿಷ್ಕರಿಸಲಿದ್ದು, ಅದಕ್ಕೆ ಬಿಜೆಪಿ ಸಹಕಾರ ಕೊಡಲಿದೆ ಎಂದರು. ಇದನ್ನೂ ಓದಿ: ಮಾರ್ಗ ಮಧ್ಯೆ ಕೈಕೊಟ್ಟ ಅಂಬುಲೆನ್ಸ್ – ಆನೆ ದಾಳಿಯಿಂದ ಗಾಯಗೊಂಡಿದ್ದ ಶಾರ್ಪ್ ಶೂಟರ್ ಅರಣ್ಯ ಸಿಬ್ಬಂದಿ ಸಾವು

    50 ಕೋಟಿ ಬಡಜನರ ಜನ್‍ಧನ್ ಬ್ಯಾಂಕ್ ಖಾತೆ ತೆರೆಯಲು ಮತದಾರರು ನೆರವಾಗಿದ್ದಾರೆ. 29 ಲಕ್ಷ ಡಿಬಿಟಿ ಹಣ ವರ್ಗಾವಣೆ ಆಗಿದೆ. 4.5 ಕೋಟಿ ಬಡಜನರಿಗೆ ಮನೆಗಳ ನಿರ್ಮಾಣವಾಗಿದೆ. ದೇಶದ ಹಳ್ಳಿಗಳಲ್ಲಿ ಸ್ವಚ್ಛ ಭಾರತ್ ಮಿಷನ್‌ ಅಡಿಯಲ್ಲಿ 11 ಕೋಟಿ ಶೌಚಾಲಯ ನಿರ್ಮಾಣ ಮಾಡಿಸಲು ಮತದಾರರು ತಮ್ಮ ಮತದ ಮೂಲಕ ಅವಕಾಶ ಕೊಟ್ಟಿದ್ದಾರೆ. 23 ಕೋಟಿ ಬಡ ಕುಟುಂಬಗಳಿಗೆ ಆಯುಷ್ಮಾನ್ ವಿಮೆ ಲಭಿಸಿದೆ. 20 ಕೋಟಿ ಎಸ್ಸಿ, ಎಸ್ಟಿ, ಒಬಿಸಿ ಮಹಿಳೆಯರಿಗೆ ಮುದ್ರಾ ಯೋಜನೆಯಡಿ ಸಾಲ ಲಭಿಸಿದೆ ಎಂದು ವಿವರಿಸಿದರು.

    ಒಂದು ಮತದ ಫಲವಾಗಿ ಭಾರತ ಚಂದ್ರಯಾನ-3 (Chandrayaan-3) ಮಾಡಿ ದೇಶದ, ವಿಶ್ವದ ದಕ್ಷಿಣ ಧ್ರುವಕ್ಕೆ ತೆರಳಿದ ಮೊದಲ ದೇಶ ಎಂಬ ಕೀರ್ತಿಯನ್ನ ತನ್ನದಾಗಿಸಿಕೊಂಡಿದೆ. ಪಾಕಿಸ್ತಾನದ ಒಳಗೆ ನುಗ್ಗಿ ಸರ್ಜಿಕಲ್ ಸ್ಟ್ರೈಕ್ ಮಾಡುವ ಶಕ್ತಿ ದೇಶಕ್ಕೆ ಸಿಕ್ಕಿದೆ. 500 ವರ್ಷಗಳಿಂದ ಜನರು ಕಾಯುತ್ತಿದ್ದ ಶ್ರೀರಾಮಮಂದಿರದ ನಿರ್ಮಾಣ ಆಗಿದೆ. ಆರ್ಟಿಕಲ್ 370 ರದ್ದು ಮಾಡುವ ಮೂಲಕ ಮತ್ತು ಭಾರತ ಸಂವಿಧಾನವನ್ನ ಜಮ್ಮುಕಾಶ್ಮೀರಕ್ಕೆ ಅನುಷ್ಠಾನಕ್ಕೆ ತರುವ ಕೆಲಸ ಮಾಡಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಅಮೆಜಾನ್ ಮ್ಯಾನೇಜರ್ ಹತ್ಯೆ ಕೇಸ್; ಪೊಲೀಸರನ್ನೇ ಬೆಚ್ಚಿ ಬೀಳಿಸಿದ್ದ 18ರ ಯುವಕನ `ಮಾಯಾ ಗ್ಯಾಂಗ್’

    ಈ ಅಭಿವೃದ್ಧಿಗೆ ದೇಶದ ಮತದಾರರು ಕಾರಣ. ಸದೃಢ ಸರ್ಕಾರ ನೀಡಿದ ಮತದಾರರನ್ನ ನಾನು ಅಭಿನಂದಿಸುತ್ತೇನೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಜನರನ್ನು ಮತದಾನಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಅಭಿಯಾನ ನಡೆಯಲಿದೆ. ಅಭಿಯಾನದ ಯಶಸ್ಸಿಗೆ ತಂಡ ರಚಿಸಿದ್ದು, ಪಿ.ರಾಜೀವ್, ಅರವಿಂದ ಬೆಲ್ಲದ್‌, ವಿವೇಕ್ ರೆಡ್ಡಿ, ಲೋಕೇಶ್ ಹಾಗೂ ನಾನು ರಾಜ್ಯ ಸಂಚಾಲನಾ ಸಮಿತಿಯಲ್ಲಿ ಇದ್ದೇವೆ. ಇದೇ ರೀತಿಯ ತಂಡಗಳನ್ನ ಜಿಲ್ಲೆ, ವಿಧಾನಸಭಾ ಕ್ಷೇತ್ರ ಮಟ್ಟದಲ್ಲಿ ರಚನೆಯಾಗಿವೆ ಎಂದು ವಿವರಿಸಿದರು.

    ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಡಿ.ವಿ.ಸದಾನಂದಗೌಡ, ಮಾಜಿ ಡಿಸಿಎಂ ಗೋವಿಂದ ಕಾರಜೋಳ, ಕೇಂದ್ರ ಸಚಿವ ನಾರಾಯಣಸ್ವಾಮಿ, ರಾಜ್ಯ ಉಪಾಧ್ಯಕ್ಷರಾದ ನಿರ್ಮಲ್‍ಕುಮಾರ್ ಸುರಾಣ, ಮಾಲೀಕಯ್ಯ ಗುತ್ತೇದಾರ, ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಜಿ.ವಿ ರಾಜೇಶ್, ಮಾಜಿ ಸಚಿವರಾದ ಬಿ.ಶ್ರೀರಾಮುಲು, ಡಾ.ಸಿ.ಎನ್ ಅಶ್ವಥ್‌ ನಾರಾಯಣ್‌ ಪ್ರಮುಖರು ಭಾಗವಹಿಸಿದ್ದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಯಾರದ್ದೋ ಮೀಸಲಾತಿ ಕಿತ್ತು ಒಕ್ಕಲಿಗರಿಗೆ ಹಂಚಿದ್ದಾರೆ: ನಂಜಾವಧೂತ ಶ್ರೀ ಕಿಡಿ

    ಯಾರದ್ದೋ ಮೀಸಲಾತಿ ಕಿತ್ತು ಒಕ್ಕಲಿಗರಿಗೆ ಹಂಚಿದ್ದಾರೆ: ನಂಜಾವಧೂತ ಶ್ರೀ ಕಿಡಿ

    ಮಂಡ್ಯ: ಯಾರದ್ದೋ ಮೀಸಲಾತಿ ಕಿತ್ತು ಶೇ.2 ಮೀಸಲಾತಿ ಹೆಚ್ಚಿಸಿದ್ದಾರೆ. ಬಕಾಸುರನ ಹೊಟ್ಟೆಗೆ ಅರೆಪಾವು ಮಜ್ಜಿಗೆ ಕೊಟ್ಟಂತಾಗಿದೆ. ಒಕ್ಕಲಿಗರು (Okkaliga Reservation) ಬೇರೆಯವರ ಅನ್ನವನ್ನ ಕಿತ್ತು ತಿನ್ನುವವರಲ್ಲ ಎಂದು ಬಿಜೆಪಿ ಸರ್ಕಾರದ ವಿರುದ್ಧ ಸ್ಪಟಿಕಪುರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ನಂಜಾವಧೂತ ಸ್ವಾಮೀಜಿ (Nanjavadhootha Swamiji) ಅಸಾಮಾಧಾನ ಹೊರಹಾಕಿದ್ದಾರೆ.

    ಒಕ್ಕಲಿಗರಿಗೆ ಶೇ.4 ರಿಂದ ಶೇ.6 ಗೆ ಮೀಸಲಾತಿ ಏರಿಕೆ ವಿಚಾರ ಕುರಿತು ಪ್ರತಿಕ್ರಿಯಿಸಿ, ಒಕ್ಕಲಿಗರು ರಾಜ್ಯದ ಜನಸಂಖ್ಯೆಯಲ್ಲಿ ಶೇ.16 ಇದ್ದಾರೆ. ನಾವು ಕೇಳಿದ್ದು ಶೇ.4 ರಿಂದ ಶೇ.16 ಗೆ ಮೀಸಲಾತಿ ಹೆಚ್ಚಳ ಮಾಡಿ ಅಂತ. ಆದರೆ ಯಾರದ್ದೋ ಶೇ.2 ಕಿತ್ತು ಶೇ.6 ಗೆ ಮೀಸಲಾತಿ ಏರಿಕೆ ಮಾಡಿದ್ದಾರೆ. ಒಕ್ಕಲಿಗರು ಬೇರೆಯವರ ಅನ್ನವನ್ನು ಕಸಿದು ತಿನ್ನಬೇಕು ಎನ್ನುವವರಲ್ಲ. ನಾಡಿನ ಒಕ್ಕಲಿಗ ಮಕ್ಕಳು ತಾವು ದುಡಿದಿದ್ದನ್ನ ಹಂಚಿ, ಉಳಿದ್ರೆ ತಾವು ತಿನ್ನಬೇಕು ಎಂಬ ಧ್ಯೇಯ ಇಟ್ಟುಕೊಂಡಿದ್ದಾರೆ ಎಂದರು.

    ರಾಜ್ಯದಲ್ಲಿ ಶೇ.16 ಒಕ್ಕಲಿಗರಿದ್ದು 4 ಮೀಸಲಾತಿ ಕೊಟ್ಟಿದ್ರಿ. ಅದರಲ್ಲಿ ಹತ್ತಾರು ಸಮುದಾಯ ಸೇರಿಸಿದ್ದು, ಒಕ್ಕಲಿಗರಿಗೆ ಶೇ.1.5 ನಿಂದ ಶೇ.2 ಮೀಸಲಾತಿ ಮಾತ್ರ ಸಿಗೋದು. ಇದರಿಂದ ಎಲ್ಲ ಅವಕಾಶಗಳಿಂದ ಒಕ್ಕಲಿಗ ಮಕ್ಕಳು ವಂಚಿತರಾಗ್ತಿದ್ದಾರೆ. ಶೇ.6 ಗೆ ಮೀಸಲಾತಿ ಏರಿಸಿದ್ರು ಎಂದು ಸ್ವಾಮೀಜಿ ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ಲಿಂಗಾಯತರಿಗೆ ಶೇ.7, ಒಕ್ಕಲಿಗರಿಗೆ ಶೇ.6ರಷ್ಟು ಮೀಸಲಾತಿ – SC ಒಳ ಮೀಸಲಾತಿಗೆ ಸಂಪುಟ ಅಸ್ತು

    ಪ್ರಸ್ತುತ ರಾಜಕೀಯ ಪಕ್ಷಗಳ ಪ್ರಣಾಳಿಕೆ ಬಗ್ಗೆ ನಂಜಾವಧೂತ ಸ್ವಾಮೀಜಿ ಬೇಸರ ವ್ಯಕ್ತಪಡಿಸಿ, ಹಲವು ರಾಜ್ಯಗಳ ಸರ್ಕಾರಗಳನ್ನ ನೋಡ್ತಿದ್ದೇವೆ. ಚೀಪ್ ಪಾಪ್ಯುಲಾರಿಟಿ ಪ್ರೋಗ್ರಾಂಗಳನ್ನ ಕೊಡ್ತಾರೆ. ಅಗತ್ಯಕ್ಕೂ ಮೀರಿ ಜನರ ಮೇಲೆ ಸಾಲದ ಹೊರೆ ಹೊರಿಸುತ್ತಾರೆ. ಅಂತಹದ್ದೇ ರಾಜ್ಯ ನಮ್ಮದು ಆಗಬಾರದು. ಅಭಿವೃದ್ದಿ ಇಲ್ಲ, ಆದರೆ ಎಲ್ಲ ಸೌಲಭ್ಯಗಳನ್ನ ಜನರ ಮನೆ ಬಾಗಿಲಿಗೆ ಕೊಡ್ತೀರಿ. ರಸ್ತೆ ಸರಿಯಿಲ್ಲ, ನೀರಾವರಿ ವ್ಯವಸ್ಥೆ ಇಲ್ಲ. ಮೂಲಭೂತ ಸೌಕರ್ಯಗಳಿಲ್ಲ. ಕೊನೆಗೆ ಅದೇ ಜನರು ನಿಮ್ಮ ಮೇಲೆ ತಿರುಗಿ ಬಿಳ್ತಾರೆ. ಆದ್ದರಿಂದ ದುಡಿಯ ವರ್ಗವನ್ನ ಸರ್ಕಾರಗಳು ಸೃಷ್ಟಿ ಮಾಡಬೇಕು. ನಮ್ಮ ಜನರನ್ನ ಸ್ವಶಕ್ತರಾಗಿ, ಆರ್ಥಿಕ ಸಬಲರನ್ನಾಗಿ ಮಾಡಬೇಕು. ಆ ತರಹದ ಯೋಜನೆಗಳನ್ನ ಈ ವ್ಯವಸ್ಥೆಯಲ್ಲಿ ತರಬೇಕು ಎಂದು ಸ್ವಾಮೀಜಿ ಹೇಳಿದರು.

  • ಸ್ಯಾಂಟ್ರೋ ರವಿ ವಿರುದ್ಧ 1995 ರಿಂದಲೂ ಕೇಸ್‍ಗಳನ್ನು ಜಾಲಾಡ್ತಿರೋ ಪೊಲೀಸರು

    ಸ್ಯಾಂಟ್ರೋ ರವಿ ವಿರುದ್ಧ 1995 ರಿಂದಲೂ ಕೇಸ್‍ಗಳನ್ನು ಜಾಲಾಡ್ತಿರೋ ಪೊಲೀಸರು

    ಬೆಂಗಳೂರು: ರಾಜ್ಯ ಬಿಜೆಪಿ ಸರ್ಕಾರ (BJP Government) ಕ್ಕೆ ಭಾರೀ ಮುಜುಗರ ತಂದಿದ್ದ ಜೊತೆಗೆ ತಲೆನೋವೂ ಆಗಿದ್ದ ಸ್ಯಾಂಟ್ರೋ ರವಿ (Santro Ravi) ಕೊನೆಗೂ ಪೊಲೀಸರ ಖೆಡ್ಡಾಕ್ಕೆ ಬಿದ್ದಿದ್ದಾನೆ. ಬಂಧಿತ ಸ್ಯಾಂಟ್ರೋ ರವಿಯನ್ನು ಪೊಲೀಸರು ದೂರದ ಗುಜರಾತ್‍ನಿಂದ ರಾಜ್ಯಕ್ಕೆ ಕರೆತಂದಿದ್ದಾರೆ. ಸ್ಯಾಂಟ್ರೋ ರವಿ ಪ್ರಕರಣವನ್ನು ರಾಜ್ಯ ಸರ್ಕಾರ ಬಹಳ ಗಂಭೀರವಾಗಿ ತೆಗೆದುಕೊಂಡಿದ್ದು, ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಲು ಗೃಹ ಇಲಾಖೆಗೆ ಸೂಚಿಸಲಾಗಿದೆ. ಸ್ಯಾಂಟ್ರೋ ರವಿಯಿಂದಾಗಿ ಸರ್ಕಾರಕ್ಕೂ, ವೈಯಕ್ತಿಕವಾಗಿ ತಮಗೂ ಮುಜುಗರ ಆಗಿರೋದ್ರಿಂದ ಖುದ್ದು ಸಿಎಂ ಬೊಮ್ಮಾಯಿ (Basavaraj Bommai) ಸ್ಯಾಂಟ್ರೋ ರವಿ ಪ್ರಕರಣದ ತನಿಖೆಯಲ್ಲಿ ಆಸಕ್ತಿ ವಹಿಸಿದ್ದಾರೆ.

    ಸ್ಯಾಂಟ್ರೋ ರವಿ ಮೇಲೆ 1995 ರಿಂದಲೂ ವಿವಿಧ ಕ್ರಿಮಿನಲ್ ಕೇಸ್ ಗಳಿವೆ ಎನ್ನಲಾಗಿದೆ. ಮೈಸೂರು, ಬೆಂಗಳೂರುಗಳಲ್ಲೇ ಹೆಚ್ಚಿನ ಕೇಸ್‍ಗಳು ದಾಖಲಾಗಿವೆ. ಹೀಗಾಗಿ ಸ್ಯಾಂಟ್ರೋ ರವಿ ವಿರುದ್ಧ ಕಳೆದ 20 ವರ್ಷಗಳಿಗೂ ಹೆಚ್ಚು ಕಾಲದಿಂದಲೂ ಆತನ ಮೇಲಿರುವ ಎಲ್ಲ ಕೇಸ್‍ಗಳು ಹಾಗೂ ಆತನಿಗಿರುವ ರಾಜಕಾರಣಿಗಳ ಸಂಪರ್ಕದ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಪೊಲೀಸರಿಗೆ ಸಿಎಂ ಬೊಮ್ಮಾಯಿ ತಾಕೀತು ಮಾಡಿದ್ದಾರೆ. ಇದನ್ನೂ ಓದಿ: ಎಲ್ಲರ ಕಣ್ತಪ್ಪಿಸಿ ಸ್ಯಾಂಟ್ರೋ ರವಿ ಶಿಫ್ಟ್ – ವಿಐಪಿ ಗೇಟ್‍ನಲ್ಲಿ ಕರೆದೊಯ್ದ ಬಗ್ಗೆ ಹೆಚ್‍ಡಿಕೆ ಕಿಡಿ

    ಸ್ಯಾಂಟ್ರೊ ರವಿ ಏನೇನು ಮಾಡಿದ್ದಾನೆ, ಯಾವ ಯಾವ ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಾನೆ. ಕಳೆದ 20 ವರ್ಷಗಳಲ್ಲಿ ಯಾರ್ಯಾರ ಸಂಪರ್ಕದಲ್ಲಿದ್ದಾನೆ. ಯಾವ್ಯಾವ ಸರ್ಕಾರಗಳ ಅವಧಿಯಲ್ಲಿ ಏನೇನು ಡೀಲ್ ಗಳನ್ನು ನಡೆಸಿದ್ದಾನೆ, ಯಾರ್ಯಾರ ಖಾತೆಗಳಿಗೆ ಹಣ ವರ್ಗಾವಣೆ ಮಾಡಿದ್ದಾನೆ, ವರ್ಗಾವಣೆ ಮಾಡಿಸಿಕೊಂಡಿದ್ದಾನೆ. ಈ ಬಗ್ಗೆ ನಿಖರವಾಗಿ, ಕರಾರುವಕ್ಕಾಗಿ ತನಿಖೆ ಮಾಡುವಂತೆ ಎಂದು ಪೊಲೀಸರಿಗೆ ಸಿಎಂ ಸೂಚಿಸಿದ್ದದಾರೆ. ಒಟ್ಟಿನಲ್ಲಿ ಸ್ಯಾಂಟ್ರೋ ರವಿ ವಿರುದ್ಧ ಇರುವ ಪ್ರಕರಣಗಳನ್ನು ಸರ್ಕಾರ ಬಹಳ ಗಂಭೀರವಾಗಿ ತೆಗೆದುಕೊಂಡಿದೆ.

    ಒಟ್ಟಿನಲ್ಲಿ ಸ್ಯಾಂಟ್ರೋ ರವಿಯ ವಿರುದ್ಧ ಸಮಗ್ರ ತನಿಖೆ ನಡೆಸಿ ಪುರಾವೆಗಳನ್ನು ಸಂಗ್ರಹಿಸುವ ಕೆಲಸ ಮಾಡುವ ನಿಟ್ಟಿನಲ್ಲಿ ಸರ್ಕಾರ ಮುಂದಾಗಿದೆ. ಸ್ಯಾಂಟ್ರೋ ರವಿಯ ಸುಳಿಯಲ್ಲಿ ಯಾರಿದ್ದಾರೆ..? ಯಾರಿಲ್ಲ..? ಯಾರು ಸಿಕ್ಕಿ ಹಾಕ್ಕೋಳ್ತಾರೆ..?, ಯಾರು ಬಚಾವ್ ಆಗ್ತಾರೆ..? ಯಾರ್ಯಾರ ಬಣ್ಣ ಬಣ್ಣ ಬಯಲಾಗುತ್ತೆ..? ಅನ್ನೋದು ತನಿಖೆ ನಂತರವೇ ಗೊತ್ತಾಗುತ್ತೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • BJP ಸರ್ಕಾರ ಕರ್ನಾಟಕಕ್ಕೆ `ಕಳಂಕಿತ ರಾಜ್ಯ’ ಅನ್ನೋ ಬಿರುದು ತಂದುಕೊಟ್ಟಿದೆ – ಡಿಕೆಶಿ

    BJP ಸರ್ಕಾರ ಕರ್ನಾಟಕಕ್ಕೆ `ಕಳಂಕಿತ ರಾಜ್ಯ’ ಅನ್ನೋ ಬಿರುದು ತಂದುಕೊಟ್ಟಿದೆ – ಡಿಕೆಶಿ

    ಬೆಂಗಳೂರು: ಐಟಿ-ಬಿಟಿ (ITBT), ಕೆಂಪೇಗೌಡರ ನಾಡು ಅಂತಾ ಕರೆಯುತ್ತಿದ್ದ ಕರ್ನಾಟಕಕ್ಕೆ ಬಿಜೆಪಿ ಸರ್ಕಾರ `ಕಳಂಕಿತ ರಾಜ್ಯ’ ಅನ್ನೋ ಬಿರುದು ತಂದುಕೊಟ್ಟಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ (DK Shivakumar) ಕಿಡಿಕಾರಿದ್ದಾರೆ.

    ಕರ್ನಾಟಕದಲ್ಲೂ ಏಕರೂಪ ನಾಗರಿಕ ಸಂಹಿತೆ ಜಾರಿಗೊಳಿಸುವ ನಿರ್ಧಾರ ಕುರಿತು ಕೆಪಿಸಿಸಿ (KPCC) ಕಚೇರಿಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರೊಂದಿಗೆ ನಡೆಸಿದ ಜಂಟಿ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಬಿಟ್ಟು ಬಿಜೆಪಿಗೆ ಬಂದಿದ್ದಕ್ಕೆ ಜನ ನನ್ನ ಸೋಲಿಸಿಬಿಟ್ರು: ಎಂಟಿಬಿ ನಾಗರಾಜ್

    ಐಟಿ-ಬಿಟಿ, ಕೆಂಪೇಗೌಡರ ನಾಡು ಎಂದೇ ಕರೆಯುತ್ತಿದ್ದ ಕರ್ನಾಟಕಕ್ಕೆ ಕಳಂಕಿತ ರಾಜ್ಯ ಅನ್ನೋ ಬಿರುದನ್ನು ಬಿಜೆಪಿ ಸರ್ಕಾರ (BJP Government) ತಂದುಕೊಟ್ಟಿದೆ. ಪ್ರತಿಯೊಂದರಲ್ಲೂ ಭ್ರಷ್ಟ ರಾಜ್ಯ ಆಗಿದೆ. ಜನರು ತಮ್ಮ ಮತದಾನದ ಹಕ್ಕನ್ನಾದರೂ ಉಳಿಸಿಕೊಳ್ಳಬೇಕಿದೆ ಎಂದು ಕರೆ ನೀಡಿದ್ದಾರೆ. ಇದನ್ನೂ ಓದಿ: ವೈಷ್ಣವಿ ಹಾಗೂ ವಿದ್ಯಾಭರಣ್ ಪರಿಚಯವಾಗಿದ್ದು 2017ರಲ್ಲಿ: ಚಾಕೋಲೇಟ್ ಬಾಯ್ ಸ್ಟೋರಿ

    ಕೇಂದ್ರ ಚುನಾವಣಾ ಆಯೋಗಕ್ಕೆ (Election Commission Of India) ವೋಟರ್ ಐಡಿ (Voter ID) ದುರುಪಯೋಗ ಮಾಡಿಕೊಂಡಿದ್ದಾರೆ ಅಂತ ದೆಹಲಿಯಲ್ಲಿ ದೂರು ನೀಡಿದ್ದೇವೆ. ಅದರಂತೆ ಉಪ ಆಯುಕ್ತರೇ ಇಲ್ಲಿ ಬಂದು, ಕ್ರಮ ತೆಗೆದುಕೊಂಡಿರುವುದು ಸ್ವಾಗತಾರ್ಹ. ಸರ್ಕಾರ ತಮ್ಮ ಅಧಿಕಾರ ದುರ್ಬಳಕೆ ಮಾಡಿಕೊಂಡಿರುವ ಕೆಲ ಅಧಿಕಾರಗಳನ್ನ ಅಮಾನತು ಮಾಡಿದ್ದಾರೆ. ಚುನಾವಣಾ ಆಯೋಗದ ಕ್ರಮವನ್ನ ಸ್ವಾಗತ ಮಾಡ್ತೇವೆ ಎಂದು ಹೇಳಿದ್ದಾರೆ.

    ಅಕ್ರಮ ಡೇಟಾ ವಾಪಸ್ ಪಡೆಯಬೇಕು ಅಂತ ಹೇಳಿದ್ದಾರೆ. ಡೇಟಾ ಈಗಾಗಲೇ ಬಿಜೆಪಿ (BJP) ನಾಯಕನ ಬಳಿ ಇದೆ. ಇದೊಂದು ಕ್ರಿಮಿನಲ್ ಕೆಲಸ. ಬಿಜೆಪಿ ಕೆಲ ಶಾಸಕರು ಇದರಲ್ಲಿ ಶಾಮೀಲಾಗಿದ್ದಾರೆ. ಇದಕ್ಕೆ ದಾಖಲೆಗಳು ಕೂಡಾ ಇವೆ. ಇಂತಹ ಅಕ್ರಮ ಬೊಮ್ಮಾಯಿ (Basavaraj Bommai) ಸರ್ಕಾರದ ಅವಧಿಯಲ್ಲಿ ದೇಶದಲ್ಲೇ ಮೊದಲ ಬಾರಿಗೆ ಆಗಿದೆ. ಯಾವ ನಾಯಕರು ಯಾರ ಸಂಪರ್ಕದಲ್ಲಿದ್ದಾರೆ ಅಂತಾ ತನಿಖೆ ಆಗಬೇಕು ಎಂದು ಒತ್ತಾಯಿಸಿದ್ದಾರೆ.

    ಅಂಕಪಟ್ಟಿ ಸೇರಿದಂತೆ ಎಲ್ಲ ಮಾಹಿತಿ ಕಳವು ಮಾಡಲಾಗಿದೆ. ಈಗ ವೋಟ್‌ಗಳನ್ನು ಕದ್ದು ದುರ್ಬಳಕೆ ಮಾಡಿಕೊಂಡಿದ್ದಾರೆ. ಕರ್ನಾಟಕಕ್ಕೆ ಕಳಂಕಿತ ರಾಜ್ಯ ಅಂತ ಹೆಸರು ಈ ಸರ್ಕಾರ ಕೊಟ್ಟಿದೆ. ರಾಜ್ಯದ ಜನರು ತಮ್ಮ ಮತದಾನದ ಹಕ್ಕು ಉಳಿಸಿಕೊಳ್ಳಬೇಕು ಎಂದು ಹೇಳಿದ್ದಾರೆ.

    ಬೆಂಗಳೂರಿನ ಮೂರು ಕ್ಷೇತ್ರ ಮಾತ್ರವಲ್ಲ, 28 ಕ್ಷೇತ್ರ ಮತ್ತು ರಾಜ್ಯದ 224 ಕ್ಷೇತ್ರದ ಮತಗಳು ಕೂಡಾ ಸರಿ ಮಾಡೋ ಕೆಲಸ ಆಗಬೇಕು. ಅಕ್ರಮದಲ್ಲಿ ಭಾಗಿಯಾಗಿರೋ ರಾಜಕಾರಣಿ, ಅಧಿಕಾರಿಗಳು, ಚುನಾವಣಾ ಆಯೋಗದ ಅಧಿಕಾರಿಗಳ ಹೆಸರು ಬಹಿರಂಗ ಆಗಬೇಕು. ನಮ್ಮ ಕಾಲದಲ್ಲಿ ಅಕ್ರಮ ಆಗಿದ್ದರೆ ನಮ್ಮ ಮೇಲೂ ದೂರು ಕೊಡಿ, ಕ್ರಮ ಆಗಲಿ ಎಂದು ಆಗ್ರಹಿಸಿದ್ದಾರೆ.

    ಅಕ್ರಮದಲ್ಲಿ ಬೊಮ್ಮಾಯಿ ಕಿಂಗ್‌ಪಿನ್: ವಿಪಕ್ಷ ನಾಯಕ ಸಿದ್ದರಾಮಯ್ಯ ಮಾತನಾಡಿ, ವೋಟರ್ ಐಡಿ ಅಕ್ರಮದಲ್ಲಿ ಕಿಂಗ್‌ಪಿನ್ ಸಿಎಂ ಬೊಮ್ಮಾಯಿ ಆಗಿದ್ದಾರೆ. ಕೂಡಲೇ ಬೊಮ್ಮಾಯಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಹೇಳಿದ್ದಾರೆ.

    ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರದಲ್ಲಿ ಹೊಸ ಪಟ್ಟಿ ಆಗಬೇಕು. ನಿಷ್ಪಕ್ಷಪಾತವಾಗಿ ಚುನಾವಣಾ ಆಯೋಗ ತನಿಖೆ ಮಾಡಬೇಕು. ಜನರು ಯಾರನ್ನ ಬೇಕಾದ್ರೂ ಗೆಲ್ಲಿಸಲಿ. ಆದರೆ ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ಈ ಅಕ್ರಮ ತನಿಖೆ ಆಗಬೇಕು. ಅಕ್ರಮ ಮಾಡಿರೋ ಫ್ರಾಡ್‌ಗಳಿಗೆ ತಕ್ಕ ಶಿಕ್ಷೆ ಆಗಬೇಕು ಎಂದು ಒತ್ತಾಯಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಶೀಘ್ರವೇ ಸರ್ಕಾರ ಕ್ರಮ ಕೈಗೊಳ್ಳದಿದ್ರೆ ಕಾಶ್ಮೀರದಲ್ಲಿ ಹಿಂದೂಗಳೇ ಇರುವುದಿಲ್ಲ: ಫಾರೂಕ್ ಅಬ್ದುಲ್ಲಾ

    ಶೀಘ್ರವೇ ಸರ್ಕಾರ ಕ್ರಮ ಕೈಗೊಳ್ಳದಿದ್ರೆ ಕಾಶ್ಮೀರದಲ್ಲಿ ಹಿಂದೂಗಳೇ ಇರುವುದಿಲ್ಲ: ಫಾರೂಕ್ ಅಬ್ದುಲ್ಲಾ

    ಶ್ರೀನಗರ: ಕೇಂದ್ರಾಡಳಿತ ಪ್ರದೇಶದಲ್ಲಿ ಕಾಶ್ಮೀರಿ ಪಂಡಿತರ (Kashmiri Pandits) ಹತ್ಯೆಗಳು ಹೆಚ್ಚುತ್ತಿದೆ. ಈ ಹಿನ್ನೆಲೆ ಶೀಘ್ರದಲ್ಲಿಯೇ ಸರ್ಕಾರ ಏನನ್ನು ಮಾಡದೇ ಹೋದರೆ ಕಾಶ್ಮೀರದಲ್ಲಿ ಖಂಡಿತ 100% ಹಿಂದೂಗಳು ಕಡಿಮೆಯಾಗುತ್ತಾರೆ ಎಂದು ಜಮ್ಮು ಮತ್ತು ಕಾಶ್ಮೀರ ನ್ಯಾಷನಲ್ ಕಾನ್ಫರೆನ್ಸ್ (ಜೆಕೆಎನ್‍ಸಿ) (Jammu and Kashmir National Conference) ಅಧ್ಯಕ್ಷ ಮತ್ತು ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ (Farooq Abdullah) ಹೇಳಿದ್ದಾರೆ.

    ಈ ಕುರಿತಂತೆ ಮಾಧ್ಯಮವೊಂದರ ಸಂದರ್ಶನದಲ್ಲಿ ಮಾತನಾಡಿದ ಅವರು, 1990ರಲ್ಲಿ ಸಂಭವಿಸಿದ್ದ ಪರಿಸ್ಥಿತಿಗಳು ಕಾಶ್ಮೀರಿ ಪಂಡಿತರಿಗೆ ಪುನಃ ಬಂದಿದೆ. ಈ ವಿಚಾರವಾಗಿ ಸರ್ಕಾರ ಕೂಡಲೇ ಏನ್ನಾನಾದರೂ ಮಾಡಲಿಲ್ಲ ಎಂದರೆ ಮುಂದಿನ ದಿನಗಳಲ್ಲಿ ಕಾಶ್ಮೀರದಲ್ಲಿ ಶೇ. 100% ಹಿಂದೂಗಳು ಕಡಿಮೆಯಾಗುತ್ತಾರೆ. ಅಲ್ಲದೇ ನಾನು ಯಾವುದೇ ಭಯೋತ್ಪಾದಕರ ಪರ ಹೇಳಿಕೆಗಳನ್ನು ನೀಡಿಲ್ಲ ಎಂದು ತಿಳಿಸಿದ್ದಾರೆ.

    ಈ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿ (Prime Minister Narendra Modi) ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಮಧ್ಯಸ್ಥಿಕೆ ವಹಿಸಬೇಕು. ಈ ಬಗ್ಗೆ ಗಮನ ಹರಿಸಬೇಕು. ಕಾಶ್ಮೀರಿ ಪಂಡಿತರ ಉದ್ದೇಶಿತ ಹತ್ಯೆಗಳು ಮತ್ತು ಅಲ್ಪಸಂಖ್ಯಾತ ಹಿಂದೂಗಳ ವಲಸೆಯ ಬಗ್ಗೆ ಸರ್ವಪಕ್ಷ ಸಭೆಯನ್ನು ಕರೆಯಬೇಕು ಎಂದು ಮನವಿ ಮಾಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಕರ್ನಾಟಕದ 21 ಐಎಎಸ್ ಅಧಿಕಾರಿಗಳ ವರ್ಗಾವಣೆ

    ಕರ್ನಾಟಕದ 21 ಐಎಎಸ್ ಅಧಿಕಾರಿಗಳ ವರ್ಗಾವಣೆ

    ಬೆಂಗಳೂರು: ಮೈಸೂರು, ಮಂಡ್ಯ, ದಕ್ಷಿಣ ಕನ್ನಡ, ಉತ್ತರ ಕನ್ನಡ ಡಿಸಿಗಳು ಸೇರಿದಂತೆ 21 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

    ಮೈಸೂರಿನ ಜಿಲ್ಲಾಧಿಕಾರಿಯಾಗಿದ್ದ ಡಾ. ಬಗಾದಿ ಗೌತಮ್ ಅವರನ್ನು ಬೆಂಗಳೂರಿನ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ನಿರ್ದೇಶಕರಾಗಿ ವರ್ಗಾಯಿಸಲಾಗಿದೆ. ಚಾಮರಾಜನಗರದ ಜಿಲ್ಲಾಧಿಕಾರಿಯಾಗಿದ್ದ ಚಾರುಲತಾ ಸೋಮಲ್ ಅವರನ್ನು ಬೇರೆಡೆಗೆ ವರ್ಗಾವಣೆ ಮಾಡಿ, ಆ ಸ್ಥಾನಕ್ಕೆ ರಮೇಶ್ ಡಿ.ಎಸ್ ಅವರನ್ನು ನಿಯೋಜಿಸಲಾಗಿದೆ. ಇದನ್ನೂ ಓದಿ: 4ರ ಬಾಲಕಿ ಮೇಲೆ ಪ್ರಾಂಶುಪಾಲರ ಚಾಲಕನಿಂದ ಅತ್ಯಾಚಾರ – ಶಾಲೆಯನ್ನೇ ಮುಚ್ಚಿಸಿದ ಸರ್ಕಾರ

    ಮಂಡ್ಯ ಜಿಲ್ಲಾಧಿಕಾರಿ ಅಶ್ವತಿ ಎಸ್ ಅವರನ್ನು ಬೆಂಗಳೂರಿನ ಪಶುಸಂಗೋಪನೆ ಮತ್ತು ಪಶುವೈದ್ಯಕೀಯ ಸೇವೆಗಳ ಇಲಾಖೆಗೆ ಆಯುಕ್ತರಾಗಿ ವರ್ಗಾಯಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿದ್ದ ಡಾ. ರಾಜೇಂದ್ರ ಕೆ.ವಿ ಅವರನ್ನು ಮೈಸೂರು ಜಿಲ್ಲಾಧಿಕಾರಿಯಾಗಿ ವರ್ಗಾಯಿಸಲಾಗಿದೆ. ಉತ್ತರ ಕನ್ನಡ ಜಿಲ್ಲಾಧಿಕಾರಿಯಾಗಿದ್ದ ಮುಲೈ ಮುಹಿಲನ್ ಅವರನ್ನು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಆಯುಕ್ತರಾಗಿ ವರ್ಗಾವಣೆ ಮಾಡಲಾಗಿದೆ.

    ಹಾವೇರಿ ಜಿಲ್ಲಾಧಿಕಾರಿಯಾಗಿ ರಘುನಂದನ್ ಮೂರ್ತಿ ಅವರನ್ನು ವರ್ಗಾಯಿಸಲಾಗಿದೆ. ಹೀಗೆ 21 ಐಎಎಸ್ ಅಧಿಕಾರಿಗಳನ್ನು ವರ್ಗಾಯಿಸಿ ಸರ್ಕಾರ ಆದೇಶಿಸಿದೆ. ಇದನ್ನೂ ಓದಿ: ನಿಮ್ಮ ಬಳಿ ಬಟ್ಟೆ ಹಾವಿದ್ರೆ, ನನ್ನ ಬಳಿ ನಿಜವಾದ ಹಾವಿದೆ: ಬಿಜೆಪಿ ನಾಯಕರಿಗೇ ಯತ್ನಾಳ್ ಟಾಂಗ್

    Live Tv
    [brid partner=56869869 player=32851 video=960834 autoplay=true]

  • ಬಿಜೆಪಿ ಗೆದ್ದಿರೋ ಪ್ರತಿಯೊಂದು ಸ್ಥಾನದ ಹಿಂದೆ ಪರೇಶ್‍ನಂತಹ ಅಮಾಯಕರ ರಕ್ತ ಇದೆ: ಸಿದ್ದರಾಮಯ್ಯ

    ಬಿಜೆಪಿ ಗೆದ್ದಿರೋ ಪ್ರತಿಯೊಂದು ಸ್ಥಾನದ ಹಿಂದೆ ಪರೇಶ್‍ನಂತಹ ಅಮಾಯಕರ ರಕ್ತ ಇದೆ: ಸಿದ್ದರಾಮಯ್ಯ

    ಬೆಂಗಳೂರು: ಉತ್ತರ ಕನ್ನಡ (Uttara Kannada) ಜಿಲ್ಲೆಯ ಹೊನ್ನಾವರ ತಾಲೂಕಿನಲ್ಲಿ ಅನುಮಾನಸ್ಪದವಾಗಿ ಸಾವನ್ನಪ್ಪಿದ್ದ ಪರೇಶ್ ಮೇಸ್ತಾ (Paresh Mestha) ನನ್ನು ಹತ್ಯೆ ಮಾಡಿಲ್ಲ. ಅದು ಆಕಸ್ಮಿಕವಾಗಿ ನಡೆದ ಸಾವು ಎಂದು ಸಿಬಿಐ ಹೊನ್ನಾವರ ನ್ಯಾಯಾಲಯಕ್ಕೆ ವರದಿ ಸಲ್ಲಿಸಿದೆ. ಈ ಬೆನ್ನಲ್ಲೇ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ರಾಜ್ಯ ಸರ್ಕಾರವನ್ನು ಟೀಕಿಸಿದ್ದಾರೆ.

    ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಹೊನ್ನಾವರದ ಪರೇಶ್ ಮೇಸ್ತಾನದ್ದು ಹತ್ಯೆ ಅಲ್ಲ, ಆಕಸ್ಮಿಕ ಸಾವು ಎಂಬ ಕೇಂದ್ರೀಯ ತನಿಖಾ ದಳ (CBI)ನ ವಿಚಾರಣಾ ವರದಿ ರಾಜ್ಯ ಸರ್ಕಾರ (State Government) ಮುಖಕ್ಕೆ ಬಡಿದ ತಪರಾಕಿ. ಬಿಜೆಪಿ (BJP) ಗೆ ಮಾನ-ಮರ್ಯಾದೆ ಇದ್ದರೆ ನಮ್ಮ ಮೇಲೆ ಮಾಡಿದ್ದ ಸುಳ್ಳು ಆರೋಪಕ್ಕಾಗಿ ಕ್ಷಮೆ ಕೋರಬೇಕು.

    ಬಿಜೆಪಿ ಗೆದ್ದಿರುವ ಪ್ರತಿಯೊಂದು ಸ್ಥಾನದ ಹಿಂದೆ ಪರೇಶ್ ಮೇಸ್ತಾನಂತಹ ಅಮಾಯಕ ಯುವಕರ ರಕ್ತ ಇದೆ. ಬಿಜೆಪಿ ನಾಯಕರೇ, ನೀವು ಅನುಭವಿಸುತ್ತಿರುವ ಅಧಿಕಾರದ ಕುರ್ಚಿಗೆ ಮೇಸ್ತಾನಂತಹ ಯುವಕರ ರಕ್ತದ ಕಲೆ ಅಂಟಿಕೊಂಡಿದೆ ಎಂದು ಬರೆದುಕೊಳ್ಳುವ ಮೂಲಕ ಸಿದ್ಯರಾಮಯ್ಯ (Siddaramaiah) ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಇದನ್ನೂ ಓದಿ: ಪರೇಶ್ ಮೇಸ್ತಾ ಹತ್ಯೆಯಲ್ಲ, ಅದು ಆಕಸ್ಮಿಕ ಸಾವು – ಸಿಬಿಐ ವರದಿ ಸಲ್ಲಿಕೆ

    ಏನಿದು ಘಟನೆ..? 2017ರ ಡಿಸೆಂಬರ್ 6ರಂದು ಹೊನ್ನಾವರದಲ್ಲಿ ನಡೆದ ಗಲಭೆಯಲ್ಲಿ ಹೊನ್ನಾವರದ ಮೀನುಗಾರ ಯುವಕ ಪರೇಶ್ ಮೇಸ್ತಾ ಕಾಣೆಯಾಗಿದ್ದ. ಡಿಸೆಂಬರ್ 8ರಂದು ಹೊನ್ನಾವರ ನಗರದ ಶನಿದೇವಾಸ್ಥಾನದ ಹಿಂಭಾಗದ ಶಟ್ಟಿ ಕೆರೆಯಲ್ಲಿ ಶವವಾಗಿ ಪರೇಶ್ ಮೇಸ್ತಾ ಪತ್ತೆಯಾಗಿದ್ದ. ಆತನನ್ನು ಅನ್ಯ ಕೋಮಿನವರು ಹತ್ಯೆ ಮಾಡಿದ್ದಾರೆಂದು ಹಿಂದೂ ಸಂಘಟನೆಗಳು ಹಾಗೂ ಬಿಜೆಪಿ ನಾಯಕರು ಆರೋಪಿಸಿದ್ದರು. ಅಷ್ಟೇ ಅಲ್ಲದೇ ಈತನನ್ನು ಹಿಂದೂ ಸಂಘಟನೆಗಳು ಹಿಂದೂ ಕಾರ್ಯಕರ್ತ (Hindu Activist) ಎಂದು ಬಿಂಬಿಸಿದ್ದರಿಂದ ಕೊಮು ಸಂಘರ್ಷಕ್ಕೆ ಕಾರಣವಾಗಿತ್ತು.

    ಹೊನ್ನಾವರ ರಣರಂಗವಾಗುತ್ತಿದ್ದಂತೆ ಎಚ್ಚೆತ್ತ ಅಂದಿನ ಸಿದ್ದರಾಮಯ್ಯ ಸರ್ಕಾರ ಪರೇಶ್ ಮೇಸ್ತಾ ಪ್ರಕರಣವನ್ನು ಸಿಬಿಐಗೆ ವಹಿಸಿತ್ತು. ನಂತರ ಘಟನೆಗೆ ಸಂಬಂಧಿಸಿದಂತೆ ಐದು ಜನರನ್ನು ಬಂಧಿಸಲಾಗಿತ್ತು. ನಾಲ್ಕೂವರೆ ವರ್ಷದ ನಂತರ ಸಿಬಿಐನಿಂದ ವರದಿ ಸಲ್ಲಿಸಿದೆ.

    Live Tv
    [brid partner=56869869 player=32851 video=960834 autoplay=true]

  • ಮುರುಘಾ ಶ್ರೀಗಳ ಬಂಧನ ಪ್ರಕರಣ – ಸರ್ಕಾರ ಕಾನೂನಾತ್ಮಕವಾಗಿ ತನಿಖೆ ಮಾಡಲಿ: ಕುಮಾರಸ್ವಾಮಿ

    ಮುರುಘಾ ಶ್ರೀಗಳ ಬಂಧನ ಪ್ರಕರಣ – ಸರ್ಕಾರ ಕಾನೂನಾತ್ಮಕವಾಗಿ ತನಿಖೆ ಮಾಡಲಿ: ಕುಮಾರಸ್ವಾಮಿ

    ಬೆಂಗಳೂರು: ಮುರುಘಾ ಶ್ರೀಗಳ ಬಂಧನ ವಿಚಾರದಲ್ಲಿ ಸರ್ಕಾರ ಜವಾಬ್ದಾರಿಯುತವಾಗಿ ಕಾನೂನಾತ್ಮಕವಾಗಿ ತೀರ್ಮಾನ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.

    ಶ್ರೀಗಳ ಬಂಧನ ವಿಚಾರಕ್ಕೆ ಜೆಪಿ ಭವನದಲ್ಲಿ ಮಾತನಾಡಿದ ಅವರು, ಶ್ರೀಗಳ ಬಂಧನದ ಬಗ್ಗೆ ನಾನು ಚರ್ಚೆ ಮಾಡದೇ ಇರುವುದು ಸೂಕ್ತ. ಇದೊಂದು ಸೂಕ್ಷ್ಮ ವಿಚಾರ. ಸರ್ಕಾರ ಜವಾಬ್ದಾರಿಯುತವಾಗಿ ಏನೇನು ತೀರ್ಮಾನ ಮಾಡಬೇಕೋ ಮಾಡಲಿ ಅಂತ ಸಲಹೆ ಕೊಟ್ಟರು. ಇದನ್ನೂ ಓದಿ: ಲೋಕಕಲ್ಯಾಣಕ್ಕಾಗಿ 220 ಕಿ.ಮೀ. ಉರುಳು ಸೇವೆ ಮಾಡಿದ ಪಂಡರಪುರದ ವಿಠ್ಠಲನ ಭಕ್ತ

    ಈ ರೀತಿಯ ಘಟನೆ ನಡೆಯಬಾರದಿತ್ತು ಎನ್ನುವುದು ನನ್ನ ಅಭಿಪ್ರಾಯ. ಇವೆಲ್ಲಾ ತುಂಬಾ ಸೂಕ್ಷ್ಮ ವಿಚಾರ. ಮೊದಲೇ ನಮ್ಮ ರಾಜ್ಯ ಭಾವನಾತ್ಮಕ, ಆಚಾರ ವಿಚಾರಗಳನ್ನು ಇಟ್ಟುಕೊಂಡಿದೆ. ಇಂತಹ ವಿಚಾರಗಳಲ್ಲಿ ನಾವು ಚರ್ಚೆ ಮಾಡದೇ ಇರುವುದೇ ಸೂಕ್ತ ಎಂದರು. ಇದನ್ನೂ ಓದಿ: ಪೈಲಟ್‍ಗಳ ಮುಷ್ಕರದಿಂದ ವಿಮಾನ ಸಂಚಾರ ರದ್ದು – ದೆಹಲಿ ವಿಮಾನ ನಿಲ್ದಾಣದಲ್ಲಿ ಜನಜಂಗುಳಿ

    ಸರ್ಕಾರದ ಮಟ್ಟದಲ್ಲಿ ಏನು ತನಿಖೆ ಮಾಡಬೇಕೋ ಅದನ್ನು ಮಾಡಲಿ. ತನಿಖೆ ವಿಳಂಬ ವಿಚಾರ ಸರ್ಕಾರಕ್ಕೆ ಸಂಬಂಧಿಸಿದ್ದು, ನಾನು ಈಗ ಬಗ್ಗೆ ಹೆಚ್ಚು ಚರ್ಚೆ ಮಾಡುವುದಿಲ್ಲ ಎಂದು ಹೇಳಿದರು.

    Live Tv
    [brid partner=56869869 player=32851 video=960834 autoplay=true]