Tag: ಬಿಜೆಪಿ ಸಿದ್ದರಾಮಯ್ಯ

  • 50 ಶಾಸಕರು BJP ಹೈಕಮಾಂಡ್ ಸಂಪರ್ಕದಲ್ಲಿದ್ದಾರೆ – ಕಾಂಗ್ರೆಸ್‌ ಸರ್ಕಾರದ ಪತನ ಗ್ಯಾರಂಟಿ: ನಿರಾಣಿ ಬಾಂಬ್‌

    50 ಶಾಸಕರು BJP ಹೈಕಮಾಂಡ್ ಸಂಪರ್ಕದಲ್ಲಿದ್ದಾರೆ – ಕಾಂಗ್ರೆಸ್‌ ಸರ್ಕಾರದ ಪತನ ಗ್ಯಾರಂಟಿ: ನಿರಾಣಿ ಬಾಂಬ್‌

    ವಿಜಯಪುರ: ಕಾಂಗ್ರೆಸ್‌ (Congress) ಹೇಳುವುದು ಒಂದು ಮಾಡುವುದು ಇನ್ನೊಂದು, ಈ ಸರ್ಕಾರ 5 ವರ್ಷ ಉಳಿಯಲ್ಲ. ಈಗಾಗಲೇ 50 ಕಾಂಗ್ರೆಸ್‌ ಶಾಸಕರು ಬಿಜೆಪಿ ಹೈಕಮಾಂಡ್‌ (BJP HighCommand) ಸಂಪರ್ಕದಲ್ಲಿದ್ದು, ಪತನ ಆಗೋದು ಗ್ಯಾರಂಟಿ ಎಂದು ಮಾಜಿ ಸಚಿವ ಮುರುಗೇಶ್‌ ನಿರಾಣಿ (Murugesh Nirani) ಹೊಸ ಬಾಂಬ್‌ ಸಿಡಿಸಿದ್ದಾರೆ.

    ವಿಜಯಪುರದ ಜುಮನಾಳ ಗ್ರಾಮದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು‌, ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಗರೀಬ್ ಕಲ್ಯಾಣ್ ಅನ್ನ ಯೋಜನೆ ಮುಂದಿನ ಐದು ವರ್ಷಕ್ಕೆ ವಿಸ್ತರಣೆ: ಮೋದಿ ಘೋಷಣೆ

    ಕಾಂಗ್ರೆಸ್‌ನಲ್ಲಿ ಮೇಲ್ನೋಟಕ್ಕೆ ಎರಡು ಬಣವಿದ್ದರೂ, ಒಳಗೆ ನಾಲ್ಕು ಬಣ ಸೃಷ್ಟಿಯಾಗಿದೆ. 4 ಡಿಸಿಎಂ ಹುದ್ದೆ ಕೇಳುತ್ತಿದ್ದಾರೆ. ಸಿಎಂ ವಿಚಾರದಲ್ಲೂ ಗೊಂದಲ ಸೃಷ್ಟಿಯಾಗಿದೆ, ರಾಜ್ಯ ಸರ್ಕಾರವೇ (Government Of Karnataka) ಗೊಂದಲದಲ್ಲಿದೆ. ಈ ಸರ್ಕಾರ ಖಂಡಿತವಾಗಿಯೂ 5 ವರ್ಷ ಮುಂದುವರಿಯಲ್ಲ. 50 ಶಾಸಕರು ಬಿಜೆಪಿ ಹೈಕಮಾಂಡ್‌ ಸಂಪರ್ಕದಲ್ಲಿದ್ದಾರೆ. ಡಿಸಿಎಂ ಆಕಾಂಕ್ಷಿ ಸಚಿವರು, ಸಚಿವ ಸ್ಥಾನ ವಂಚಿತ ಶಾಸಕರು, ಅಸಮಾಧಾನಿತ ಶಾಸಕರು ಸಂಪರ್ಕದಲ್ಲಿದ್ದಾರೆ. ಅವರೇ ಬಂದು ಬಿಜೆಪಿ ಬಾಗಿಲು ತಟ್ಟುತ್ತಿದ್ದಾರೆ. ನಾವು ಸರ್ಕಾರ ಕೆಡವಲ್ಲ, ತಾನಾಗಿಯೇ ಪತನವಾಗುತ್ತೆ ಎಂದು ಭವಿಷ್ಯ ನುಡಿದಿದ್ದಾರೆ.

    ಮುಂದುವರಿದು, ಕಾಂಗ್ರೆಸ್‌ ಸರ್ಕಾರ ರಾಜ್ಯದಲ್ಲಿ ಇದೆಯಾ ಅನ್ನೋದು ಗೊತ್ತಿಲ್ಲ. ಗ್ಯಾರಂಟಿಗಳ ಮೋಸದಿಂದ ಅಧಿಕಾರಕ್ಕೆ ಬಂದಿದ್ದಾರೆ. ಫ್ರೀ ಕರೆಂಟ್‌ ಕೊಡ್ತೀವಿ ಅಂತ ಈಗ ಪವರ್‌ ಕಟ್‌ ಮಾಡ್ತಿದ್ದಾರೆ. ಮಹಿಳೆಯರಿಗೆ ಫ್ರಿ ಬಸ್‌ ಅಂತ ಹೇಳಿ ಬಸ್‌ ಕಡಿಮೆ ಮಾಡಿದ್ದಾರೆ. ಹಿಂದಿನ ಸರ್ಕಾರದ ಕಾಮಗಾರಿಗಳೂ ನಡೆಯುತ್ತಿಲ್ಲ. ಹಣ ಕೊಟ್ಟರೆ ಮಾತ್ರ ಕೆಲಸ ಮಾಡ್ತಿದ್ದಾರೆ. ಒಟ್ಟಿನಲ್ಲಿ ಈ ರಾಜ್ಯದ ಜನರಿಗೆ ಕಾಂಗ್ರೆಸ್‌ ಮೋಸ ಮಾಡಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

    ಇದೇ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಆಕಾಂಕ್ಷಿ ವಿಚಾರಕ್ಕೆ ಪ್ರತಿಕ್ರಿಯಿಸಿ, ನನಗೆ ರಾಜ್ಯಾಧ್ಯಕ್ಷನಾಗುವ ಆಸೆಯಿಲ್ಲ. ಹೈಕಮಾಂಡ್ ನಿರ್ಧಾರಕ್ಕೆ ಬದ್ಧ. ಅರ್ಹತೆಗೆ ಅನುಗುಣವಾಗಿ ಕೊಟ್ಟ ಕೆಲಸ ಮಾಡ್ತೇನೆ. ಟಿಕೆಟ್‌ ಕೊಡದೆ ಕಾರ್ಯಕರ್ತನಾಗಿ ಕೆಲಸ ಮಾಡು ಅಂದರೂ ಮಾಡ್ತೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ: World Cup 2023: ಶತಕ ಸಿಡಿಸಿ ಮೆರೆದಾಡಿದ ರಚಿನ್‌ – ಪಾಕಿಸ್ತಾನಕ್ಕೆ 402 ರನ್‌ಗಳ ಗುರಿ

  • ಸಿದ್ದರಾಮಯ್ಯ ಅವ್ರು ಒಂದೇ ಕಲ್ಲಿನಲ್ಲಿ ಹಲವು ಹಕ್ಕಿ ಹೊಡೆದಿದ್ದಾರೆ: ಕುಟುಕಿದ ಬಿಜೆಪಿ

    ಸಿದ್ದರಾಮಯ್ಯ ಅವ್ರು ಒಂದೇ ಕಲ್ಲಿನಲ್ಲಿ ಹಲವು ಹಕ್ಕಿ ಹೊಡೆದಿದ್ದಾರೆ: ಕುಟುಕಿದ ಬಿಜೆಪಿ

    ಬೆಂಗಳೂರು: ಬಿಟ್ ಕಾಯಿನ್ ಹಗರಣ ವಿಚಾರವಾಗಿ ರಾಜಕೀಯ ಪಕ್ಷಗಳ ಆರೋಪ-ಪ್ರತ್ಯಾರೋಪ ವಾಗ್ಬಾಣ ಮುಂದುವರಿದಿದೆ. ಇದರ ನಡುವೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಬಿಜೆಪಿ ಟ್ವಿಟರ್‌ನಲ್ಲಿ ಹರಿಹಾಯ್ದಿದೆ.

    ಶಂಕಿತ ಬಿಟ್ ಕಾಯಿನ್ ಹಗರಣದಿಂದ ಸಿದ್ದರಾಮಯ್ಯ ಅವರು ಒಂದೇ ಕಲ್ಲಿನಲ್ಲಿ ಹಲವು ಹಕ್ಕಿ ಹೊಡೆದಿದ್ದಾರೆ ಎಂದು ರಾಜ್ಯ ಬಿಜೆಪಿ ಟ್ವೀಟ್ ಮಾಡಿ ಕುಟುಕಿದೆ. ಇದನ್ನೂ ಓದಿ: ಬಸ್ಸಿನಲ್ಲಿ ಬಿಟ್ಟು ಹೋಗಿದ್ದ ಆಭರಣಗಳನ್ನು ಪ್ರಯಾಣಿಕರಿಗೆ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಕಂಡಕ್ಟರ್!

    ತಮ್ಮನ್ನು ಸುತ್ತಿಕೊಂಡ ದಲಿತ ವಿರೋಧಿ ಆರೋಪದಿಂದ ತಪ್ಪಿಸಿಕೊಳ್ಳಲು ಸಿದ್ದರಾಮಯ್ಯ ಅವರು ಬಿಟ್ ಕಾಯಿನ್ ವಿಚಾರವನ್ನು ಮುನ್ನೆಲೆಗೆ ತರುತ್ತಿದ್ದಾರೆ. ಬಿಜೆಪಿ ವಿರುದ್ಧ ಸಲ್ಲದ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಟೀಕಿಸಿದೆ.

    ಡಿ.ಕೆ.ಶಿವಕುಮಾರ್ ವಿರುದ್ಧ ಮಾತನಾಡಿದ್ದ ತಮ್ಮ ಆಪ್ತ ಉಗ್ರಪ್ಪ ಅವರನ್ನು ಶಿಸ್ತುಕ್ರಮದಿಂದ ರಕ್ಷಿಸುವುದು, ಮೊಹಮ್ಮದ್ ನಲಪಾಡ್ ಅವರಿಗೆ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ತಪ್ಪಿಸುವುದು ಹಾಗೂ ಡಿಕೆಶಿ ಅವರನ್ನು ರಾಜಕೀಯವಾಗಿ ಮೂಲೆಗುಂಪು ಮಾಡುವುದು ಸಿದ್ದರಾಮಯ್ಯ ಅವರ ಉದ್ದೇಶವಾಗಿದೆ ಎಂದು ಬಿಜೆಪಿ ಆರೋಪಿಸಿದೆ. ಇದನ್ನೂ ಓದಿ: ಕೀಳು ರಾಜಕೀಯದ ಆಲೋಚನೆಗಳು ಯಾರನ್ನು ಮೆಚ್ಚಿಸಲು ಗೊತ್ತಿದೆ ಖರ್ಗೆಗೆ ಸುಧಾಕರ್ ಟಾಂಗ್

    ಜನವರಿಯಲ್ಲಿ ನನಗೆ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ಸಿಗುತ್ತದೆ ಎಂಬ ಕಾರಣಕ್ಕೆ ನನ್ನನ್ನು ಸಿಲುಕಿಸಲಾಗುತ್ತಿದೆ ಎಂದು ನಲಪಾಡ್ ಆರೋಪಿಸಿದ್ದಾರೆ. ತಮ್ಮ ಆಪ್ತನ ಪುತ್ರ ರಕ್ಷಾ ರಾಮಯ್ಯಗಾಗಿ ಸಿದ್ದರಾಮಯ್ಯ ಅವರು ನಲಪಾಡ್ ವಿರೋಧಿಸಿದ್ದು ರಾಜ್ಯಕ್ಕೆ ತಿಳಿದಿದೆ. ಹಾಗಾದರೆ ಇದರ ಹಿಂದಿರುವುದೇನು ಎಂದು ಬಿಜೆಪಿ ಪ್ರಶ್ನಿಸಿದೆ.

    ಬಿಟ್ ಕಾಯಿನ್ ವಿಚಾರವನ್ನು ಮೊದಲು ಪ್ರಸ್ತಾಪಿಸಿದ್ದು ಸಿದ್ದರಾಮಯ್ಯ. ಡಿಕೆಶಿ ಬಣದ ನಲಪಾಡ್‍ಗೆ ಅಧಿಕಾರ ತಪ್ಪಿಸುವುದು, ವಿನಾಕಾರಣ ಒಂದು ರಾಜಕೀಯ ಹುಯಿಲೆಬ್ಬಿಸುವುದೇ ಇದರ ಉದ್ದೇಶ. ಬಿಟ್ ಕಾಯಿನ್ ವಿಚಾರ ಕಾಂಗ್ರೆಸ್ ನಾಯಕರಿಬ್ಬರ ನಡುವೆ ಇರುವ ರಾಜಕೀಯ ವೈಷಮ್ಯದ ಪ್ರತಿಫಲವಷ್ಟೇ, ಅದರಿಂದೀಚೆಗೆ ಬೇರೇನಿಲ್ಲ ಎಂದು ತಿಳಿಸಿದೆ.