Tag: ಬಿಟಿಎಂ ಲೇಔಟ್

  • ಬೆಂಗಳೂರು ದೊಡ್ಡ ನಗರ, ಅಲ್ಲೊಂದು-ಇಲ್ಲೊಂದು ಕಿರುಕುಳ ಘಟನೆ ಆಗುತ್ತೆ: ಪರಮೇಶ್ವರ್ ಬೇಜವಾಬ್ದಾರಿ ಹೇಳಿಕೆ

    ಬೆಂಗಳೂರು ದೊಡ್ಡ ನಗರ, ಅಲ್ಲೊಂದು-ಇಲ್ಲೊಂದು ಕಿರುಕುಳ ಘಟನೆ ಆಗುತ್ತೆ: ಪರಮೇಶ್ವರ್ ಬೇಜವಾಬ್ದಾರಿ ಹೇಳಿಕೆ

    ಬೆಂಗಳೂರು: ಬಿಟಿಎಂ ಲೇಔಟ್‌ನಲ್ಲಿ (BTM Layout) ಯುವತಿ ಮೇಲಿನ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಮ್ಮೆ ಗೃಹ ಸಚಿವ ಪರಮೇಶ್ವರ್ (G Parameshwar) ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ. ಬೆಂಗಳೂರು (Bengaluru) ದೊಡ್ಡ ನಗರ ಇಂತಹ ಪಟ್ಟಣದಲ್ಲಿ ಅಲ್ಲೊಂದು ಇಲ್ಲೊಂದು ಘಟನೆ ನಡೆಯುತ್ತವೆ ಎಂದು ಉಡಾಫೆ ಉತ್ತರ ನೀಡಿದ್ದಾರೆ.

    ಘಟನೆಗೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಇಷ್ಟು ದೊಡ್ಡ ಸಿಟಿಯಲ್ಲಿ ಅಲ್ಲಿ ಇಲ್ಲಿ ಇಂತಹ ಒಂದು ಘಟನೆಗಳು ಆಗುತ್ತದೆ. ನಿತ್ಯವೂ ಪೊಲೀಸ್ ಕಮೀಷನರ್‌ಗೆ ಎಚ್ಚರಿಕೆಯಿಂದ ಇರಬೇಕು. ಬೀಟ್ ವ್ಯವಸ್ಥೆ ಚೆನ್ನಾಗಿ ಆಗಬೇಕು ಎಂದು ಹೇಳುತ್ತೇನೆ. ಪ್ರತಿ ಏರಿಯಾ ಮಾನಿಟರ್ ಮಾಡಬೇಕು. ಪೆಟ್ರೋಲಿಂಗ್ ಏನು ಆಗುತ್ತಿದೆ ಅದನ್ನು ಶಿಸ್ತಿನಿಂದ, ಪರಿಣಾಮಕಾರಿಯಾಗಿ ಮಾಡಬೇಕು ಎಮದು ನಿತ್ಯ ಸೂಚನೆ ಕೊಡುತ್ತೇನೆ ಎಂದರು. ಇದನ್ನೂ ಓದಿ: Black Monday| ಷೇರು ಮಾರುಕಟ್ಟೆಯಲ್ಲಿ ಅಲ್ಲೋಲ ಕಲ್ಲೋಲ – ಕರಗಿತು ಹೂಡಿಕೆದಾರರ19 ಲಕ್ಷ ಕೋಟಿ

    ಅಲ್ಲೊಂದು ಇಲ್ಲೊಂದು ಘಟನೆ ಆದಾಗ ಸ್ವಾಭಾವಿಕವಾಗಿ ಜನರ ಮನಸಿನಲ್ಲಿ ಗಮನ ಸೆಳೆಯುತ್ತದೆ. ಅಷ್ಟಕ್ಕೇ ನಾವು ಬಿಡೋದಿಲ್ಲ. ನಿರಂತರವಾಗಿ ಪೊಲೀಸ್ ಇಲಾಖೆ ಕೆಲಸ ಮಾಡುತ್ತಿದೆ. 24/7 ಮಳೆ, ಚಳಿ ಅನ್ನದೇ ಪೊಲೀಸರು ಕೆಲಸ ಮಾಡುತ್ತಿದ್ದಾರೆ. ಹೀಗಾಗಿ ಬೆಂಗಳೂರು ಶಾಂತವಾಗಿ ಇದೆ. ಇಷ್ಟು ದೊಡ್ಡ ಪಟ್ಟಣದಲ್ಲಿ ಅಲ್ಲೊಂದು ಇಲ್ಲೊಂದು ಘಟನೆ ಆಗುತ್ತೆ. ಅದಕ್ಕೆ ನಾವು ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ. ಬೀಟ್ ವ್ಯವಸ್ಥೆ ಮತ್ತಷ್ಟು ಪರಿಣಾಮವಾಗಿ ಮಾಡಿ ಎಂದು ಇವತ್ತು ಕೂಡ ಕಮೀಷನರ್‌ಗೆ ಸೂಚನೆ ನೀಡಿದ್ದೇನೆ ಎಂದು ಬೇಜವಾಬ್ದಾರಿ ಹೇಳಿಕೆ ಕೊಟ್ಟರು. ಇದನ್ನೂ ಓದಿ: ಎಂಜಿನ್ ವೈಫಲ್ಯ – ಬ್ರೆಜಿಲ್‌ನಲ್ಲಿ ನೇರವಾಗಿ ರಸ್ತೆಗೆ ಲ್ಯಾಂಡ್ ಆದ ವಿಮಾನ

  • ಜೆಡಿಎಸ್‍ನ ಮಾಜಿ ಕಾರ್ಪೋರೇಟರ್ ಅರೆಸ್ಟ್

    ಜೆಡಿಎಸ್‍ನ ಮಾಜಿ ಕಾರ್ಪೋರೇಟರ್ ಅರೆಸ್ಟ್

    ಬೆಂಗಳೂರು: 176ನೇ ವಾರ್ಡ್‍ನ ಜೆಡಿಎಸ್ ಮಾಜಿ ಕಾರ್ಪೋರೇಟರ್ ದೇವದಾಸ್‍ರನ್ನು ಮದನಪಲ್ಲಿ ಪೊಲೀಸರಿಂದ ಬಂಧಿಸಲಾಗಿದೆ.

    ದೇವದಾಸ್ ಅವರು 2015 ರಿಂದ 20 ರವರೆಗೆ 176 ವಾರ್ಡ್‍ನಲ್ಲಿ ಕಾರ್ಪೋರೇಟರ್ ಆಗಿದ್ದರು. ವಂಚನೆ ಪ್ರಕರಣ ಆರೋಪದ ಹಿನ್ನೆಲೆ ಅವರನ್ನು ಇಂದು ಬಂಧಿಸಲಾಗಿದೆ. ಅವರು 1 ಕೋಟಿ ವಂಚಿಸಿದ್ದಾರೆಂದು ಮದಪಲ್ಲಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಇದನ್ನೂ ಓದಿ: ಬಿಜೆಪಿ ಶಾಸಕನಿಂದ 25 ವರ್ಷದ ಯುವತಿ ಕಿಡ್ನಾಪ್ – ಕೇಸ್ ದಾಖಲು

    ಮದನಪಲ್ಲಿ ಶಾಸಕ ಮಹಮ್ಮದ್ ನವಾಝ್ ಪಾಷಾ ಎಂಬವರಿಗೆ ಬಿಟಿಎಂ ಲೇಔಟ್‍ನಲ್ಲಿ ಜಾಗ ಕೊಡಿಸುವುದಾಗಿ ವಂಚಿಸಿದ್ದಾರೆ ಎಂಬ ಆರೋಪ ವ್ಯಕ್ತವಾಗಿದೆ. ಇದನ್ನೂ ಓದಿ: ಹಿಜಬ್ ಗಲಾಟೆ ಬೆನ್ನಲ್ಲೇ ರಾಜೀನಾಮೆ ನೀಡಿದ ಬೆಂಗಳೂರು ಶಿಕ್ಷಕಿ

    ಎಮ್‍ಎಲ್‍ಎಯು 75 ಲಕ್ಷ ರೂ. ನಗದು ಮತ್ತು 25 ಲಕ್ಷ ರೂ. ಬ್ಯಾಂಕ್ ವಿನಿಮಯ ಮಾಡಿದ್ದು, 2 ವರ್ಷದ ಹಿಂದೆಯೇ ಮದನಪಲ್ಲಿ ಶಾಸಕರಿಗೆ ಹಣ ನೀಡಿದ್ದರು. ಸದ್ಯ ಮಾಜಿ ಪಾಲಿಕೆ ಸದಸ್ಯ ದೇವದಾಸ್ ಬಿಜೆಪಿಯಲ್ಲಿದ್ದಾರೆ.

  • ಅನುದಾನ ಹಂಚಿಕೆಯಲ್ಲಿ ತಾರತಮ್ಯ – ಕಾಂಗ್ರೆಸ್‍ನಿಂದ ಪ್ರತಿಭಟನೆ

    ಅನುದಾನ ಹಂಚಿಕೆಯಲ್ಲಿ ತಾರತಮ್ಯ – ಕಾಂಗ್ರೆಸ್‍ನಿಂದ ಪ್ರತಿಭಟನೆ

    ಬೆಂಗಳೂರು: ಬಿಜೆಪಿ ಸರ್ಕಾರ ಅನುದಾನ ಹಂಚಿಕೆಯಲ್ಲಿ ತಾರತಮ್ಯ ಮಾಡಿದೆ ಎಂದು ಆರೋಪಿಸಿ ಬಿಟಿಎಂ ಲೇಔಟ್ ಹಾಗೂ ಜಯನಗರ ಕ್ಷೇತ್ರದ ಕಾಂಗ್ರೆಸ್ ಶಾಸಕರು ಹಾಗೂ ಕಾರ್ಯಕರ್ತರು ನಗರದ ಟೌನ್‍ಹಾಲ್ ಮುಂಭಾಗ ಬೃಹತ್ ಪ್ರತಿಭಟನೆ ನಡೆಸಿದರು.

    ಬಿಟಿಎಮ್ ಲೇಔಟ್ ವಿಧಾನಸಭಾ ಕ್ಷೇತ್ರಕ್ಕೆ ಸಮ್ಮಿಶ್ರ ಸರ್ಕಾರ 387 ಕೋಟಿ ರೂ.ಅನುದಾನ ನೀಡಿತ್ತು. ಆದರೆ ಬಿಜೆಪಿ ಸರ್ಕಾರ ಬಂದ ಮೇಲೆ 234 ಕೋಟಿ ರೂ.ಗೆ ಕಡಿತ ಮಾಡಿ ಕೇವಲ 152.84 ಕೋಟಿ ರೂ. ನಿಗದಿಪಡಿಸಿದೆ. ಹಾಗೆ ಜಯನಗರ ಕ್ಷೇತ್ರಕ್ಕೆ 194 ಕೋಟಿ ರೂ. ಅನುದಾನ ಕಡಿತಗೊಳಿಸಿ ಕೇವಲ 122 ಕೋಟಿ ರೂ. ಕೊಡಲಾಗಿದೆ. ಇದನ್ನು ವಿರೋಧಿಸಿ ಮಾಜಿ ಸಚಿವ ರಾಮಲಿಂಗಾರೆಡ್ಡಿ, ಶಾಸಕಿ ಸೌಮ್ಯರೆಡ್ಡಿ, ರಾಜ್ಯಸಭಾ ಸದಸ್ಯ ಹರಿಪ್ರಸಾದ್ ನೇತೃತ್ವದಲ್ಲಿ ಬಿಬಿಎಂಪಿ ಸದಸ್ಯರು ಹಾಗೂ ಬೆಂಬಲಿಗರು ಪ್ರತಿಭಟನೆ ನಡೆಸಿದರು.

    ಈ ವೇಳೆ ಮಾಜಿ ಸಚಿವ ರಾಮಲಿಂಗಾರೆಡ್ಡಿ ಮಾತನಾಡಿ, ಬಿಜೆಪಿ ಸೇಡಿನ ರಾಜಕಾರಣ ಮಾಡುತ್ತಿದೆ. ಭ್ರಷ್ಟ ಬಿಜೆಪಿಯನ್ನು ಸೋಲಿಸಿ ನಾವು ಅಧಿಕಾರಕ್ಕೆ ಬಂದಿದ್ದೆವು. ಆ ಸಂದರ್ಭದಲ್ಲಿ ನಾವು ಯಾವುದೇ ತಾರತಮ್ಯ, ದ್ವೇಷದ ರಾಜಕಾರಣ ಮಾಡಿಲ್ಲ. ಇಂದು ಬಿಜೆಪಿ ಅನುದಾನದಲ್ಲಿ ತಾರತಮ್ಯ ಮಾಡುತ್ತಿದೆ. ನಮ್ಮ ಬಜೆಟ್ ತಡೆ ಹಿಡಿದು, ಅನುದಾನ ನೀಡಿಲ್ಲ. ಡಿಪಿಆರ್, ವರ್ಕ್ ಆರ್ಡರ್ ಎಲ್ಲಾ ಆಗಿದ್ದರೂ ಕಾಮಗಾರಿಗಳನ್ನು ತಡೆಹಿಡಿದಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ರಾಜಿನಾಮೆ ನೀಡಿರುವ 5 ಕ್ಷೇತ್ರಗಳಿಗೆ 2700 ಕೋಟಿ ರೂ. ಅನುದಾನ ಕೊಟ್ಟಿದ್ದಾರೆ. ಆದರೆ ನಮ್ಮ ಕ್ಷೇತ್ರಗಳಿಗೆ ಅನ್ಯಾಯ ಮಾಡಿದ್ದು ಸರಿಯೇ ಎಂದು ಮಾಜಿ ಸಚಿವ ಪ್ರಶ್ನಿಸಿದರು.

    ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ನೀಡಿದ ಅನುದಾನವನ್ನು ಬಿಜೆಪಿ ಸರ್ಕಾರ ಬಂದಮೇಲೆ ಕಡಿತ ಮಾಡಿ, ರಾಜಿನಾಮೆ ನೀಡಿದ ಶಾಸಕರ ಕ್ಷೇತ್ರಕ್ಕೆ ಹೆಚ್ಚು ಅನುದಾನ ನೀಡಲಾಗಿದೆ. ಬಿಜೆಪಿ ಶಾಸಕರಿಗೆ ಸಾವಿರ ಕೋಟಿ ರೂ. ಅನುದಾನ ಕೊಡಲಿ ಆದರೆ ನಮ್ಮ ಅನುದಾನ ಕಡಿತ ಮಾಡಿರುವುದು ಸರಿಯಲ್ಲ. ಇದರಿಂದ ಕ್ಷೇತ್ರದ ಎಲ್ಲ ಅಭಿವೃದ್ಧಿ ಕೆಲಸಗಳು ಸ್ಥಗಿತಗೊಂಡಿದೆ ಎಂದರು ಆಕ್ರೋಶ ವ್ಯಕ್ತಪಡಿಸಿದರು.

    ಈಜೀಪುರ ಮೇಲ್ಸೇತುವೆ ಕೆಲಸ ನಿಂತು ಹೋಗಿದೆ. ಬಿಜೆಪಿಗರಲ್ಲಿ ಅಧಿಕಾರದ ಮದ ತುಂಬಿದೆ. ವೈಟ್ ಟಾಪಿಂಗ್ ಬೇಡ, ಹೆಚ್ಚು ವೆಚ್ಚವಾಗುತ್ತದೆ ಕಿತ್ತು ಹಾಕಿ ಎಂದು ನಾವೇ ಹೇಳಿದ್ದೆವು. ಆದರೆ ಉತ್ತಮ ಟಾರ್ ರಸ್ತೆ ನೀಡಲಿ. ಬೆಂಗಳೂರು ಶಾಸಕರೆಲ್ಲ ಸೇರಿ ಮುಖ್ಯಮಂತ್ರಿಗಳ ಮನೆ ಮುಂದೆ ಪ್ರತಿಭಟನೆ ನಡೆಸಲಿದ್ದೇವೆ, ಅಧಿವೇಶನದ ಸಮಯದಲ್ಲಿ ವಿಧಾನಸೌಧದ ಮುಂದೆಯೂ ಪ್ರತಿಭಟನೆ ನಡೆಸುತ್ತೇವೆ ಎಂದು ಎಚ್ಚರಿಸಿದರು.

    ಜಯನಗರ ಶಾಸಕಿ ಸೌಮ್ಯಾ ರೆಡ್ಡಿ ಮಾತನಾಡಿ, ಆಪರೇಷನ್ ಕಮಲ ನಡೆಸಲು ಸಾವಿರಾರು ಕೋಟಿ ರೂ. ಖರ್ಚು ಮಾಡಿದ್ದಾರೆ. ಆದರೆ ಈಗ ನೆರೆ ಪರಿಹಾರ ನೀಡುವುದಕ್ಕೆ ಸರ್ಕಾರದ ಬಳಿ ದುಡ್ಡಿಲ್ಲ ಎನ್ನುತ್ತಿದ್ದಾರೆ. ನಮ್ಮ ಕ್ಷೇತ್ರದ 316 ಕೋಟಿ ರೂ. ಅನುದಾನದಲ್ಲಿ ಕಡಿತ ಮಾಡಿ ಕೇವಲ 122 ಕೋಟಿ ರೂ.ನೀಡಿದ್ದಾರೆ. ಅನುದಾನ ನೀಡುವುದರಲ್ಲಿ ತಾರತಮ್ಯ ಮಾಡಿದ್ದಾರೆ. ಅಲ್ಲದೆ ಸಿಎಂ ನಗರ ಪ್ರದಕ್ಷಿಣೆ ವೇಳೆಯೂ ಸ್ಥಳೀಯ ಕಾಂಗ್ರೆಸ್ ಶಾಸಕರನ್ನು ಕಡೆಗಣಿಸಲಾಗುತ್ತಿದೆ ಎಂದು ದೂರಿದರು.

  • ರಾಮಲಿಂಗಾ ರೆಡ್ಡಿ ರಾಜೀನಾಮೆ ವಾಪಸ್

    ರಾಮಲಿಂಗಾ ರೆಡ್ಡಿ ರಾಜೀನಾಮೆ ವಾಪಸ್

    ಬೆಂಗಳೂರು: ಬಿಟಿಎಂ ಲೇಔಟ್ ಶಾಸಕ ರಾಮಲಿಂಗಾ ರೆಡ್ಡಿ ತಾವು ನೀಡಿದ್ದ ರಾಜೀನಾಮೆಯನ್ನು ಹಿಂದಕ್ಕೆ ಪಡೆಯುವುದಾಗಿ ತಿಳಿಸಿದ್ದಾರೆ.

    ನಾನು ಕಾಂಗ್ರೆಸ್ ಪಕ್ಷದಲ್ಲಿ ಮುಂದುವರಿಯುತ್ತೇನೆ ಎಂದು ಹೇಳಿರುವ ರೆಡ್ಡಿ ಗುರುವಾರ ಬೆಳಗ್ಗೆ ರಾಜೀನಾಮೆಯನ್ನು ಹಿಂದಕ್ಕೆ ಪಡೆಯುವುದಾಗಿ ಸ್ಪಷ್ಟನೆ ನೀಡಿದ್ದಾರೆ. ಈ ಸಂಬಂಧ ಮಾಧ್ಯಮ ಹೇಳಿಕೆಯನ್ನು ಬಿಡುಗಡೆ ಮಾಡಿ ತಮ್ಮ ನಿರ್ಧಾರವನ್ನು ತಿಳಿಸಿದ್ದಾರೆ.

    ಹೇಳಿಕೆಯಲ್ಲಿ ಏನಿದೆ?
    ಕಾಂಗ್ರೆಸ್ ಹೈ ಕಮಾಂಡ್ ಹಾಗೂ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಮಾಜಿ ಸಚಿವ ರಾಮಲಿಂಗಾ ರೆಡ್ಡಿ ಮಾಡುವ ವಿಜ್ಞಾಪನೆಗಳು. ಕರ್ನಾಟಕದಲ್ಲಿ ನಡೆಯುತ್ತಿರುವ ಬಹುತೇಕ ರಾಜಕೀಯ ವಿದ್ಯಮಾನಗಳ ಬಗ್ಗೆ ಕಾಂಗ್ರೆಸ್ ಹೈ ಕಮಾಂಡ್ ಹಾಗೂ ಕಾರ್ಯಕರ್ತರಿಗೆ ಬಹುತೇಕ ಅರಿವಿದೆ. ಕಾಂಗ್ರೆಸ್ ಪಕ್ಷದಲ್ಲಿನ ಕೆಲವು ವಿದ್ಯಾಮಾನಗಳಿಂದ ಬೇಸರವಾಗಿ (ಕಾರಣಗಳನ್ನು ಅನೇಕ ಬಾರಿ ಮಾಧ್ಯಮ ಮುಖಾಂತರ ತಿಳಿಸಿದ್ದೇನೆ) ಜುಲೈ 6 ರಂದು ನಾನು ಆಯ್ಕೆಯಾಗಿರುವ ಬಿಟಿಎಂ ವಿಧಾನಸಭಾ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುತ್ತೇನೆ, ನಾನೆಂದು ಸಚಿವ ಸ್ಥಾನಕ್ಕಾಗಿ ಬೇಡಿಕೆ ಇಟ್ಟವನಲ್ಲ ಸ್ಥಾನಮಾನ ಪಡೆಯಲು ನಾನು ಎಂದೂ ಆಸೆಪಟ್ಟವನಲ್ಲ,

    ಕಳೆದ 45 ವರ್ಷದ ಸುಧೀರ್ಘ ರಾಜಕೀಯ ಜೀವನದಲ್ಲಿ ನಿಷ್ಟಾವಂತ ಕಾಂಗ್ರೆಸ್ ಕಾರ್ಯಕರ್ತನಾಗಿ, 7 ಬಾರಿ ಶಾಸಕನಾಗಿ ಪಕ್ಷದ ಶ್ರೇಯೋಭಿವೃದ್ದಿಗಾಗಿ ಹಾಗೂ ನನ್ನ ಮತಕ್ಷೇತ್ರದ ಅಭಿವೃದ್ಧಿಗಾಗಿ ಮತ್ತು ಸಚಿವನಾಗಿದ್ದಂತಹ ಸಂದರ್ಭದಲ್ಲಿ ರಾಜ್ಯಕ್ಕೆ ನಿಸ್ವಾರ್ಥ ಸೇವೆ ಸಲ್ಲಿಸಿದ್ದೇನೆ. ಕಾಂಗ್ರೆಸ್‍ನ ಹಲವಾರು ವಿದ್ಯಾಮಾನಗಳಿಂದ ಶಾಸಕ ಸ್ಥಾನಕ್ಕೆ ಮಾತ್ರ ನನ್ನ ರಾಜೀನಾಮೆ ಹೊರತು ಪಕ್ಷಕ್ಕಲ್ಲ ಎಂದು ಹಿಂದೆಯೂ ಸ್ಪಷ್ಟಪಡಿಸಿದ್ದೇನೆ. ಕಾಂಗ್ರೆಸ್ ನ ಹಿರಿಯನಾಯಕರು ರಾಜೀನಾಮೆ ವಾಪಾಸ್ ಪಡೆದು ಪಕ್ಷದಲ್ಲಿರುವಂತೆ ಕೋರಿರುತ್ತಾರೆ. ರಾಜ್ಯದ ಉದ್ದಗಲಕ್ಕೂ ಕಾಂಗ್ರೆಸ್ ಕಾರ್ಯಕರ್ತರು ರಾಜೀನಾಮೆ ವಾಪಾಸ್ ಪಡೆಯಲು ಮನವಿ ಮಾಡಿಕೊಂಡಿದ್ದಾರೆ. ಈ ಎಲ್ಲ ಬೆಳವಣಿಗೆಗಳಿಂದ ನಾನು ಕಾಂಗ್ರೆಸ್ ಪಕ್ಷದಲ್ಲೇ ಮುಂದುವರೆಯಲು ತೀರ್ಮಾನಿಸಿದ್ದು ನಾನು ಕಾಂಗ್ರೆಸ್ ಪಕ್ಷದಲ್ಲಿ ಮುಂದುವರಿಯುತ್ತಿದ್ದೇನೆ.

  • ಕೈ ಹಿರಿಯ ನಾಯಕರ ವಿರುದ್ಧ ರೆಡ್ಡಿ ಬೆಂಬಲಿಗರ ಆಕ್ರೋಶ – ರಹಸ್ಯವಾಗಿ ಬಿಜೆಪಿ ಶಾಸಕರಿಂದ ಭೇಟಿ

    ಕೈ ಹಿರಿಯ ನಾಯಕರ ವಿರುದ್ಧ ರೆಡ್ಡಿ ಬೆಂಬಲಿಗರ ಆಕ್ರೋಶ – ರಹಸ್ಯವಾಗಿ ಬಿಜೆಪಿ ಶಾಸಕರಿಂದ ಭೇಟಿ

    ಬೆಂಗಳೂರು: ಹಿರಿಯ ಮುಖಂಡ ರಾಮಲಿಂಗಾರೆಡ್ಡಿ ಅವರಿಗೆ ಸಚಿವ ಸ್ಥಾನ ತಪ್ಪಿದ್ದಕ್ಕೆ ಬೆಂಗಳೂರಿನ ಕಾಂಗ್ರೆಸ್ ನಾಯಕರು ಹಿರಿಯ ಕೈ ಮುಖಂಡರ ವಿರುದ್ಧ ತೀವ್ರ ಆಕ್ರೋಶವನ್ನು ಹೊರ ಹಾಕಿದ್ದಾರೆ.

    ಪಕ್ಷಕ್ಕಾಗಿ ದುಡಿದು ಉತ್ತಮ ಕೆಲಸ ಮಾಡಿದ್ದರೂ ಸಚಿವ ಸ್ಥಾನ ನೀಡದೇ ವಂಚಿಸಿದ್ದಾರೆ. ಹಿರಿತನಕ್ಕೆ ಪಕ್ಷದಲ್ಲಿ ಬೆಲೆ ಇಲ್ಲ. ಹೀಗಾಗಿ ರಾಮಲಿಂಗಾರೆಡ್ಡಿ ಅವರನ್ನು ಬೆಂಬಲಿಸಿ ರಾಜೀನಾಮೆ ನೀಡಲು ಬಿಬಿಎಂಪಿಯ ಕೆಲ ಪಾಲಿಕೆ ಸದಸ್ಯರು ಮುಂದಾಗಿದ್ದಾರೆ ಎನ್ನುವ ವಿಚಾರ ಮೂಲಗಳಿಂದ ಸಿಕ್ಕಿದೆ.

    ಜಯನಗರ, ಬಿಟಿಎಂ ಲೇಔಟ್ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರು, ರೆಡ್ಡಿ ಬೆಂಬಲಿಗರು ಸೇರಿದಂತೆ ಹಲವರು ಮೌರ್ಯ ಹೋಟೆಲ್‍ನಲ್ಲಿ ಸಭೆ ನಡೆಸುತ್ತಿದ್ದಾರೆ. ಈ ಸಭೆಯಲ್ಲಿ ಮಾಜಿ ಮೇಯರ್ ಮಂಜುನಾಥ ರೆಡ್ಡಿ, ಪಾಲಿಕೆ ಸದಸ್ಯರಾದ ರಿಜ್ವಾನ್ ನವಾಬ್, ಚಂದ್ರಪ್ಪ, ಅನ್ಸರ್ ಪಾಷಾ ಸೇರಿದಂತೆ ಹಲವರು ಸಭೆಯಲ್ಲಿ ಭಾಗಿಯಾಗಿದ್ದಾರೆ.

    ಕೈ ನಾಯಕರಿಗೆ ಎಚ್ಚರಿಕೆ:
    ಕೆಲಸ ಮಾಡದ ಸಚಿವರನ್ನು ತೆಗೆದುಹಾಕಿ. ಪಕ್ಷಕ್ಕಾಗಿ ಹಗಲಿರುಳು ದುಡಿದ ರಾಮಲಿಂಗಾರೆಡ್ಡಿ ಅವರಿಗೆ ಸಚಿವ ಸ್ಥಾನ ಕೊಡಿ. ಸಚಿವ ಸ್ಥಾನ ಸಿಗದೇ ಇದ್ದರೆ ತೀವ್ರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಮಾಜಿ ಮೇಯರ್ ಮಂಜುನಾಥ್ ರೆಡ್ಡಿ ರಾಜ್ಯದ ಕಾಂಗ್ರೆಸ್ ನಾಯಕರಿಗೆ ಎಚ್ಚರಿಕೆ ನೀಡಿದ್ದಾರೆ.

    ರೆಡ್ಡಿಗೆ ಗಾಳ?
    ಭಾನುವಾರ ಬೆಂಗಳೂರಿನಲ್ಲಿ ರಾಮಲಿಂಗಾರೆಡ್ಡಿ ಜತೆ ಬಿಜೆಪಿ ಇಬ್ಬರು ಶಾಸಕರು ಭೋಜನ ಸವಿದಿದ್ದಾರೆ. ಶಾಸಕರಾದ ಸತೀಶ್ ರೆಡ್ಡಿ, ಕೃಷ್ಣಪ್ಪ ಅವರು ರಹಸ್ಯ ಭೇಟಿ ರಾಮಲಿಂಗಾರೆಡ್ಡಿಗೆ ಸಮಾಧಾನ ಹೇಳಿದ್ದಾರೆ. ರಾಮಲಿಂಗಾರೆಡ್ಡಿ ಪುತ್ರಿ ಸೌಮ್ಯರೆಡ್ಡಿ ಜತೆಯೂ ಶಾಸಕರಿಬ್ಬರು ಮಾತುಕತೆ ನಡೆಸಿದ್ದಾರೆ ಎನ್ನುವ ವಿಚಾರ ಮೂಲಗಳಿಂದ ಪಬ್ಲಿಕ್ ಟಿವಿಗೆ ಸಿಕ್ಕಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಗೃಹ ಸಚಿವ ರಾಮಲಿಂಗಾರೆಡ್ಡಿ ಸೋಲಿಸಲು ಶಾ ಪ್ಲಾನ್

    ಗೃಹ ಸಚಿವ ರಾಮಲಿಂಗಾರೆಡ್ಡಿ ಸೋಲಿಸಲು ಶಾ ಪ್ಲಾನ್

    ಬೆಂಗಳೂರು: ಗೃಹ ಸಚಿವ ರಾಮಲಿಂಗಾರೆಡ್ಡಿ ಅವರನ್ನು ಈ ಬಾರಿ ಸೋಲಿಸಲು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಪ್ಲಾನ್ ಮಾಡಿದ್ದಾರೆ. ತನ್ನ ಯೋಜನೆಯನ್ನು ಕಾರ್ಯಗತಗೊಳಿಸಲು ತನ್ನ ಆಪ್ತನಾಗಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಭೂಪೇಂದ್ರ ಯಾದವ್ ಅವರನ್ನು ಬಿಟಿಎಂ ಕ್ಷೇತ್ರದಲ್ಲಿ ಪಕ್ಷವನ್ನು ಬಲಪಡಿಸಲು ನಿಯೋಜಿಸಿದ್ದಾರೆ.

    ಇಂದು ಬೆಂಗಳೂರಿಗೆ ಭೂಪೇಂದ್ರ ಯಾದವ್ ಆಗಮಿಸಲಿದ್ದು, ಸಂಜೆ ಬಿಟಿಎಂ ಲೇಔಟ್ ಕ್ಷೇತ್ರದ ಮಹತ್ವದ ಸಭೆಯನ್ನು  ಕರೆದಿದ್ದಾರೆ.

    ಪ್ರಧಾನಿ ನರೇಂದ್ರ ಮೋದಿ ಮತ್ತು ಶಾ ಅವರಿಗೆ ಪ್ರತಿಷ್ಠೆಯ ಕಣವಾಗಿದ್ದ ಉತ್ತರ ಪ್ರದೇಶ, ಗುಜರಾತ್‍ನಂತಹ ರಾಜ್ಯಗಳಲ್ಲಿ ಬಿಜೆಪಿ ಜಯಗಳಿಸಲು ತೆರೆಮರೆಯಲ್ಲಿ ಮುಖ್ಯಪಾತ್ರವನ್ನು ಭೂಪೇಂದ್ರ ಯಾದವ್ ವಹಿಸಿದ್ದರು.

    ತಾನು ತೆರಳುವ ರಾಜ್ಯಕ್ಕೆ ಹೋಗುವ ಮೊದಲೇ ಆ ರಾಜ್ಯದಲ್ಲಿ ಬಿಜೆಪಿಯ ಸ್ಥಿತಿಗತಿ ಹೇಗಿದೆ ಎನ್ನುವ ಮಾಹಿತಿಯನ್ನು ಪಡೆದುಕೊಂಡು ನಂತರ ಅಲ್ಲಿಗೆ ಭೇಟಿ ನೀಡುವುದು ಭುಪೇಂದ್ರ ಯಾದವ್ ಕಾರ್ಯಶೈಲಿ. ಯಾದವ್ ನೀಡಿದ ವರದಿಯನ್ನು ಇಟ್ಟುಕೊಂಡು ಚುನಾವಣಾ ರಣರಂಗಕ್ಕೆ ಇಳಿಯುವುದು ಶಾ ತಂತ್ರ. ಈ ಕಾರಣಕ್ಕೆ ಶಾ ಭೂಪೇಂದ್ರ ಯಾದವ್ ಅವರನ್ನು ರಾಜ್ಯ ಚುನಾವಣೆಗೆ ನಿಯೋಜಿಸಿದ್ದಾರೆ.

  • ಕಲುಷಿತ ನೀರು ಸೇವಿಸಿ-60ಕ್ಕೂ ಹೆಚ್ಚು ಜನರು ಆಸ್ಪತ್ರೆ ಪಾಲು

    ಕಲುಷಿತ ನೀರು ಸೇವಿಸಿ-60ಕ್ಕೂ ಹೆಚ್ಚು ಜನರು ಆಸ್ಪತ್ರೆ ಪಾಲು

    ಬೆಂಗಳೂರು: ಒಳಚರಂಡಿ ಪೈಪ್‍ಲೈನ್ ಒಡೆದು ಕುಡಿಯುವ ನೀರಿಗೆ ಕಲುಷಿತ ನೀರು ಮಿಶ್ರಣವಾಗಿದ್ದು. ಈ ನೀರನ್ನು ಸೇವಿಸಿರುವ 60ಕ್ಕೂ ಹೆಚ್ಚು ಜನರು ಆನಾರೋಗ್ಯಕ್ಕೆ ಒಳಗಾಗಿ ಆಸ್ಪತ್ರೆ ಸೇರಿರುವ ಘಟನೆ ಬೆಂಗಳೂರಿನ ಬಿಟಿಎಂ ಲೇಔಟ್‍ನ 10 ಕ್ರಾಸ್‍ನಲ್ಲಿ ನಡೆದಿದೆ.

    ಕಳೆದ ಮೂರು ದಿನಗಳಿಂದ ಲೇಔಟ್‍ನ 5ನೇ ಕ್ರಾಸ್‍ನಲ್ಲಿ ಒಳಚರಂಡಿ ಪೈಪ್‍ಲೈನ್ ಒಡೆದು ಹೋಗಿದ್ದು, ಮನೆಗಳಿಗೆ ಬರುವ ಕುಡಿಯುವ ನೀರಿಗೆ ಕಲುಷಿತ ನೀರು ಮಿಶ್ರಣವಾಗಿ ಬರುತ್ತಿದೆ. ಪೈಪ್ ಸರಿಪಡಿಸಲು ಬಿಬಿಎಂಪಿ ಅಧಿಕಾರಿಗಳಿಗೆ ತಿಳಿಸಿದರು ಯಾವುದೇ ಪ್ರಯೋಜನವಿಲ್ಲ ಎಂದು ಸ್ಥಳೀಯರು ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.

    ಕಲುಷಿತ ನೀರನ್ನು ಕುಡಿದ ಜನರು ತೀವ್ರ ಅನಾರೋಗ್ಯಕ್ಕೆ ಒಳಗಾಗುತ್ತಿದ್ದು, ವಾಂತಿ, ಭೇದಿ, ಜ್ವರದಿಂದ ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ. ಯಾವುದೇ ಅಧಿಕಾರಿಗಳು ಇದರ ಬಗ್ಗೆ ಗಮನ ನೀಡುತ್ತಿಲ್ಲ. ಇನ್ನೂ ಇದೇ ನೀರನ್ನು ಸ್ನಾನಕ್ಕೆ ಬಳಸಲು ಸಾಧ್ಯವಿಲ್ಲದಷ್ಟು ಕೆಟ್ಟ ವಾಸನೆ ಬರುತ್ತಿದೆ. ಏರಿಯಾದ ಎಲ್ಲಾ ಮಕ್ಕಳ ಆರೋಗ್ಯ ಮೇಲು ಕೆಟ್ಟ ಪರಿಣಾಮ ಬೀರಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

    ಇದು ರಾಜ್ಯದ ಗೃಹ ಸಚಿವರ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಪ್ರದೇಶವಾಗಿದೆ. ಪ್ರಸ್ತುತ ಇದುವರೆಗೂ ಕಲುಷಿತ ನೀರು ಸೇವಿಸಿ 60 ಕ್ಕೂ ಹೆಚ್ಚು ಜನ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೀಗಿದ್ದರು ಒಮ್ಮೆಯೂ ಬಿಡಬ್ಲ್ಯೂಎಸ್‍ಎಸ್‍ಪಿ ಭೇಟಿ ಕೊಟ್ಟಿಲ್ಲ. ಜಲಮಂಡಳಿಯವರು ಈ ಪೈಪ್ ಲೈನ್ ಸರಿಪಡಿಸುವ ಗೋಜಿಗೆ ಹೋಗಿಲ್ಲ. ಒಟ್ಟಾರೆ ರಾಜ್ಯದ ಗೃಹ ಸಚಿವರ ಕ್ಷೇತ್ರದ ಜನರು ಕಲುಷಿತ ನೀರು ಕುಡಿದು ಅನುಭವಿಸುತ್ತಿರುವ ಕಷ್ಟಗಳಿಗೆ ಅಧಿಕಾರಿಗಳು ಅದಷ್ಟು ಬೇಗ ಪರಿಹಾರ ನೀಡಬೇಕಿದೆ.