Tag: ಬಿಟೌನ್

  • ಕುಡಿಯಲ್ಲ, ಸಿಗರೇಟ್ ಸೇದಲ್ಲ: ಪಾರ್ಟಿ ಬಗ್ಗೆ ನಟಿ ತಾಪ್ಸಿ ಕಿಡಿಕಿಡಿ

    ಕುಡಿಯಲ್ಲ, ಸಿಗರೇಟ್ ಸೇದಲ್ಲ: ಪಾರ್ಟಿ ಬಗ್ಗೆ ನಟಿ ತಾಪ್ಸಿ ಕಿಡಿಕಿಡಿ

    ಬಾಲಿವುಡ್ (Bollywood) ನಟಿ ತಾಪ್ಸಿ ಪನ್ನು ಬಿಟೌನ್ ನಲ್ಲಿ ನಡೆಯುವ ಪಾರ್ಟಿ ಬಗ್ಗೆ ಮಾತನಾಡಿದ್ದಾರೆ. ಅವಕಾಶಕ್ಕಾಗಿ ಅಲ್ಲಿ ತಡರಾತ್ರಿ ಪಾರ್ಟಿ ಮಾಡಬೇಕು, ಸ್ಟಾರ್ ಗಳ ಜೊತೆ ಚಾಟ್ ಮಾಡಬೇಕು ಅಂತೆಲ್ಲ ಹೇಳಿದ್ದಾರೆ. ನಾನು ಕುಡಿಯಲ್ಲ, ಸಿಗರೇಟು ಸೇದಲ್ಲ. ಹಾಗಾಗಿ ಪಾರ್ಟಿಯಲ್ಲಿ ಕಾಣಿಸಿಕೊಂಡಿಲ್ಲ.  ಈ ಕಾರಣಕ್ಕಾಗಿಯೇ ನನಗೆ ಅವಕಾಶ ಸಾಕಷ್ಟು ಸಿಗಲಿಲ್ಲ ಎಂದು ಬೇಸರ ವ್ಯಕ್ತ ಪಡಿಸಿದ್ದಾರೆ.

    ಈ ನಡುವೆ ತಾಪ್ಸಿ ಪನ್ನು ಮದುವೆಯ ಸಡಗರದಲ್ಲಿದ್ದಾರೆ. ಬಾಲಿವುಡ್ ಅಂಗಳದಲ್ಲಿ ಮದುವೆಯ ಸಂಭ್ರಮ ಜೋರಾಗಿದೆ. ಕೆಲವು ದಿನಗಳ ಹಿಂದೆಯಷ್ಟೇ ರಕುಲ್ (Rakul Preet Singh) ಮತ್ತು ಜಾಕಿ ಭಗ್ನಾನಿ ಗೋವಾದಲ್ಲಿ ಅದ್ಧೂರಿಯಾಗಿ ಮದುವೆಯಾಗಿದ್ದರು. ಗೂಗ್ಲಿ ಬೆಡಗಿ ಕೃತಿ ಕರಬಂಧ ಮಾರ್ಚ್‌ನಲ್ಲಿ ಮದುವೆ ಆಗೋದಾಗಿ ಅನೌನ್ಸ್ ಮಾಡಿದ್ದರು. ಇದೀಗ ತಾಪ್ಸಿ ಸರದಿ.

    ತಾಪ್ಸಿ (Taapsee Pannu) ತಮ್ಮ ಬಹುಕಾಲದ ಗೆಳೆಯನ ಜೊತೆ ಮದುವೆಗೆ ರೆಡಿಯಾಗಿದ್ದು, ಮಾರ್ಚ್ ಅಂತ್ಯದಲ್ಲಿ ಉದಯಪುರದಲ್ಲಿ ಮದುವೆ (Wedding) ನಡೆಯಲಿದೆ. ಕ್ರಿಶ್ಚಿಯನ್ ಮತ್ತು ಸಿಖ್ ಸಂಪ್ರದಾಯದಂತೆ ಈ ಜೋಡಿ ಮದುವೆ ಆಗಲಿದೆ. ‌

    ಬ್ಯಾಡ್ಮಿಂಟನ್ ಆಟಗಾರ ಮಥಿಯಾಸ್ ಬೋ (Mathias Boe) ಜೊತೆ 10 ವರ್ಷಗಳ ಕಾಲ ಡೇಟಿಂಗ್ ಮಾಡ್ತಿದ್ದರು ತಾಪ್ಸಿ. ಈಗ ಗುರುಹಿರಿಯರ ಸಮ್ಮತಿಯ ಮೇರೆಗೆ ಮದುವೆಯಾಗುತ್ತಿದ್ದಾರೆ. ಮದುವೆಗೆ 2 ಕುಟುಂಬದವರು ಮತ್ತು ಆಪ್ತರಷ್ಟೇ ಭಾಗಿಯಾಗಲಿದ್ದಾರೆ. ಹಾಗಾಗಿ ಬಾಲಿವುಡ್ ಮತ್ತು ಸೌತ್ ಸಿನಿಮಾರಂಗದ ಸೆಲೆಬ್ರಿಟಿಗಳಿಗೆ ಮದುವೆಗೆ ಆಹ್ವಾನವಿಲ್ಲ ಎನ್ನಲಾಗುತ್ತಿದೆ.

     

    ಸದ್ಯ ಪಡ್ಡೆಹುಡುಗರ ನೆಚ್ಚಿನ ನಟಿ ತಾಪ್ಸಿ ಮದುವೆಗೆ ಸಿದ್ಧತೆ ಮಾಡಿಕೊಳ್ತಿರೋದಕ್ಕೆ ನಿರಾಸೆಯಾಗಿದ್ದಾರೆ. ಏನೇ ಆಗಲಿ ನಮ್ಮ ನಾಯಕಿಗೆ ಶುಭವಾಗಲಿ ಎಂದು ಹಾರೈಸುತ್ತಿದ್ದಾರೆ ಫ್ಯಾನ್ಸ್.

  • 600 ಕೋಟಿ ರೂಪಾಯಿ ಕಲೆಕ್ಷನ್ ಮಾಡಿ ಬಿಟೌನ್ ನಲ್ಲಿ ದಾಖಲೆ ಬರೆದ ಜವಾನ್

    600 ಕೋಟಿ ರೂಪಾಯಿ ಕಲೆಕ್ಷನ್ ಮಾಡಿ ಬಿಟೌನ್ ನಲ್ಲಿ ದಾಖಲೆ ಬರೆದ ಜವಾನ್

    ಶಾರುಖ್ ಖಾನ್ ನಟನೆಯ ‘ಜವಾನ್’ ಸಿನಿಮಾ ದಾಖಲೆ ರೀತಿಯಲ್ಲಿ ಕಲೆಕ್ಷನ್ (Collection) ಮಾಡಿದೆ. ಸಾವಿರಾರು ಕೋಟಿ ರೂಪಾಯಿಯನ್ನು ಈಗಾಗಲೇ ಅದು ಬಾಚಿಕೊಂಡಿದೆ. ಕರ್ನಾಟಕದಲ್ಲೇ ಅದು ಗಳಿಸಿದ ಒಟ್ಟು ಮೊತ್ತ ಅಂದಾಜು 600 ಕೋಟಿ ರೂಪಾಯಿ ಆಗಿದೆ. ಈ ಪ್ರಮಾಣದಲ್ಲಿ ಹಣ ಗಳಿಕೆ ಮಾಡಿದ ಮೊದಲ ಹಿಂದಿ ಸಿನಿಮಾ ಎನ್ನುವ ದಾಖಲೆ ಕೂಡ ಬರೆದಿದೆ.

    ಸಿನಿಮಾ ಭರ್ಜರಿ ಗೆಲುವು ಕಾಣುತ್ತಿದ್ದಂತೆಯೇ ಸಿನಿಮಾ ನಿರ್ದೇಶಕ ಅಟ್ಲಿ (Atli) ತಮ್ಮ ಅಭಿಮಾನಿಗಳಿಗೆ ಭರ್ಜರಿ ಸುದ್ದಿಯೊಂದನ್ನು ನೀಡಿದ್ದಾರೆ. ‘ಜವಾನ್’ ಯಶಸ್ಸಿನ ಬೆನ್ನಲ್ಲೇ ಅವರು ‘ಜವಾನ್ 2’ (Jawan 2) ಸಿನಿಮಾ ಮಾಡಲು ಮುಂದಾಗಿದ್ದು, ಇದರ ಜೊತೆಗೆ ಶಾರುಖ್ ಖಾನ್ (Shahrukh Khan) ಅಭಿಮಾನಿಗಳಿಗೆ ಮತ್ತೊಂದು ಸರ್ ಪ್ರೈಸ್ ನೀಡಿದ್ದಾರೆ. ಇದನ್ನೂ ಓದಿ:ಕುತೂಹಲ ಮೂಡಿಸುವ ‘ವೇಷ’ ಸಿನಿಮಾದ ಟ್ರೈಲರ್ ರಿಲೀಸ್

    ಜವಾನ್ ಸಿನಿಮಾ ಬಾಕ್ಸ್ ಆಫೀಸಿನಲ್ಲಿ ಸಾವಿರಾರು ಕೋಟಿ ಬ್ಯುಸಿನೆಸ್ ಮಾಡಿದೆ. ಈ ಖುಷಿಯಲ್ಲೇ ಅಟ್ಲಿ ಜವಾನ್ 2 ಸಿನಿಮಾ ಘೋಷಣೆ ಮಾಡಿದ್ದಾರೆ. ಜೊತೆಗೆ ಶಾರುಖ್ ಖಾನ್ ಮತ್ತು ವಿಜಯ್ ಕಾಂಬಿನೇಷನ್ ನಲ್ಲಿ ಮತ್ತೊಂದು ಸಿನಿಮಾ ಮಾಡುವ ಆಲೋಚನೆಯನ್ನೂ ಅವರು ಹೇಳಿಕೊಂಡಿದ್ದಾರೆ.

     

    ಜವಾನ್ 2 ಸಿನಿಮಾದಲ್ಲಿ ವಿಕ್ರಮ್ ರಾಥೋಡ್ ಪಾತ್ರದ ಮೇಲೆ ಹೆಚ್ಚು ಫೋಕಸ್ ಮಾಡಲಾಗುವುದು ಮತ್ತು ಈ ಸಿನಿಮಾ ಇನ್ನೂ ವಿಶೇಷವಾಗಿ ಇರುತ್ತದೆ ಎಂದು ಹೇಳಿಕೊಂಡಿದ್ದಾರೆ ಅಟ್ಲಿ. ಜವಾನ್ ಸಿನಿಮಾ ಭಾರೀ ಗೆಲುವು ಸಾಧಿಸುತ್ತಿದ್ದಂತೆಯೇ ಬಾಲಿವುಡ್ ನಲ್ಲೂ ಅಟ್ಲಿ ಅವರಿಗೆ ಅಭಿಮಾನಿಗಳು ಹುಟ್ಟಿಕೊಂಡಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]