Tag: ಬಿಡದಿ

  • ಬಿಗ್‌ ಬಾಸ್‌ ಸ್ಪರ್ಧಿ ಅಶ್ವಿನಿ ಗೌಡ ವಿರುದ್ಧ ದೂರು ದಾಖಲು

    ಬಿಗ್‌ ಬಾಸ್‌ ಸ್ಪರ್ಧಿ ಅಶ್ವಿನಿ ಗೌಡ ವಿರುದ್ಧ ದೂರು ದಾಖಲು

    ಬೆಂಗಳೂರು: ಪರಿಸರ ನಿಯಮ ಉಲ್ಲಂಘನೆ ಮಾಡಿದ್ದಕ್ಕೆ ಮನೆಗೆ ಬೀಗ ಜಡಿದ ಪ್ರಕರಣ ಮಾಸುವ ಮುನ್ನವೇ ಬಿಗ್‌ಬಾಸ್‌ (Bigg Boss) ಸ್ಪರ್ಧಿ ಅಶ್ವಿನಿ ಗೌಡ (Ashwini Gowda) ವಿರುದ್ಧ ದೂರು ದಾಖಲಾಗಿದೆ.

    ಬಿಗ್ ಬಾಸ್ ಮನೆಯಲ್ಲಿ S ಪದ ಬಳಕೆ ಮಾಡಿದಕ್ಕೆ ಅಶ್ವಿನಿಗೌಡ ಮತ್ತು ಆಯೋಜಕರ ವಿರುದ್ಧ ಹೈಕೋರ್ಟ್ ವಕೀಲ ಪ್ರಶಾಂತ್ ಮೆತಾಲ್ ಬಿಡದಿ ಠಾಣೆಯಲ್ಲಿ ದೂರು ನೀಡಿದ್ದಾರೆ.

    ಸಹ ಸ್ಪರ್ಧಿ ರಕ್ಷಿತಾ (Rakshita Shetty) ಕುರಿತು ಈ ಮಾತನ್ನು ಆಡಿದ್ದಾರೆ. ಇದೊಂದು ವ್ಯಕ್ತಿತ್ವ ನಿಂದನೆ ಎಂದು ಆರೋಪಿಸಿ ಅಶ್ವಿನಿಗೌಡ, ಕಲರ್ಸ್ ಬ್ಯುಸಿನೆಸ್ ಹೆಡ್ ಪ್ರಶಾಂತ್ ನಾಯಕ್ , ಕ್ಲಸ್ಟರ್ ಹೆಡ್ ಸುಷ್ಮಾ ಮತ್ತು ಡೈರೆಕ್ಟರ್ ಪ್ರಕಾಶ್ ವಿರುದ್ಧ ದೂರು ನೀಡಿದ್ದರು.  ಬಿಡದಿ ಪೊಲೀಸರು ದೂರು ಸ್ವೀಕರಿಸಿ ಎನ್‌ಸಿಆರ್ (ಗಂಭೀರವಲ್ಲದ ಪ್ರಕರಣ) ದಾಖಲಿಸಿದ್ದಾರೆ.

    ದೂರಿನಲ್ಲಿ ಏನಿದೆ?
    ಬಿಗ್‌ಬಾಸ್ 12 ಕಾರ್ಯಕ್ರಮದಲ್ಲಿ ಕಂಟೆಸ್ಟೆಂಟ್ ರಕ್ಷಿತ ರವರಿಗೆ ‘She is S, ಆ Category  ನ  ಎಂದು  ಸ್ಪರ್ಧಿಯಾದ ಅಶ್ವಿನಿ ಗೌಡ ಅವರು ಪದ ಬಳಕೆಯನ್ನು ಮಾಡಿರುತ್ತಾರೆ.

    ಇದು ಜಾತಿ ನಿಂದನೆ ಮತ್ತು ವ್ಯಕ್ತಿತ್ವದ ನಿಂದನೆ ಮಾಡುವಂತಹ ವಿಷಯ. ಈ ಸಮಾಜದಲ್ಲಿ ಎಲ್ಲರೂ ಒಂದೇ ಯಾವ ಜಾತಿ ಅಥವಾ ಭೇದವನ್ನು ಹರಡುವಂತಿಲ್ಲ. ಅಶ್ವಿನಿ ಗೌಡ  ಹೇಳಿದ ಮಾತನ್ನು ತೆಗೆಯದೇ ತಮ್ಮ ಟಿಆರ್‌ಪಿ ಹೆಚ್ಚಾಗಲು ಇದನ್ನು ಪ್ರಸಾರ ಮಾಡಿರುತ್ತಾರೆ. ಇದರಿಂದ ಸಮಾಜಕ್ಕೆ ಒಂದು ಕೆಟ್ಟ ಸಂದೇಶವನ್ನು ಕಳುಹಿಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.

    ಬಿಗ್‌ಬಾಸ್‌ ಮನೆಯಲ್ಲಿ ಆಗಿದ್ದೇನು?
    ರಕ್ಷಿತಾ ರಾತ್ರಿ ಕ್ಯಾಮೆರಾ ಮುಂದೆ ಮಾತನಾಡುತ್ತಿರುವುದನ್ನು ನೋಡಿ ಮನೆಯವರಿಗೆಲ್ಲ ಫನ್‌ ಮಾಡಲು ರಾತ್ರಿ ಮಲಗಿದ್ದಾಗ ಜಾಹ್ನವಿ ಮತ್ತು ಅಶ್ವಿನಿ ಗೌಡ ಗೆಜ್ಜೆಯನ್ನು ಹಿಡಿದು ಅಲ್ಲಾಡಿಸಿದ್ದರು. ಮನೆಯವರು ಗೆಜ್ಜೆ ಧ್ವನಿ ಮಾಡಿದವರು ಯಾರು ಎಂದು ಕೇಳಿದಾಗ ಅದು ರಕ್ಷಿತಾಳ ಕೆಲಸ ಎಂದು ಸುಳ್ಳು ಹೇಳಿದ್ದರು.

    ಈ ವಿಚಾರದ ಬಗ್ಗೆ ರಕ್ಷಿತಾ ಪ್ರಶ್ನೆ ಮಾಡಿದಾಗ ಜಾಹ್ನವಿ ಮತ್ತು ಅಶ್ವಿನಿ ಗೌಡ ಜೋರು ಧ್ವನಿಯಲ್ಲಿ ಮಾತನಾಡಿ ಗಲಾಟೆ ಮಾಡಿದ್ದರು. ಗಲಾಟೆ ವಿಕೋಪಕ್ಕೆ ಹೋದಾಗಲೂ ಅಶ್ವಿನಿ ಮತ್ತು ಜಾಹ್ನವಿ ತಮ್ಮ ತಪ್ಪನ್ನು ಒಪ್ಪಿರಲಿಲ್ಲ.

    ಮರುದಿನ ಮನೆಯ ವರಾಂಡದಲ್ಲಿ ಜಾಹ್ನವಿ ಜೊತೆ ಅಶ್ವಿನಿ ಕುಳಿತು ರಾತ್ರಿ ನಡೆದ ಗಲಾಟೆಯ ವಿಚಾರದ ಬಗ್ಗೆ ಮಾತನಾಡುತ್ತಿದ್ದರು. ಈ ಸಂದರ್ಭದಲ್ಲಿ ರಕ್ಷಿತಾ ಉದ್ದೇಶಿಸಿ ಅವಳು ʼಎಸ್‌ ಕೆಟಗೆರಿʼ ಎಂದು ಹೇಳಿದ್ದರು.

  • ಕಲಾವಿದರ ಮೇಲೆ ಸೇಡು ತೀರಿಸಿದ ನಟ್ಟು ಬೋಲ್ಟ್‌ ಮಿನಿಸ್ಟರ್‌- ಜೆಡಿಎಸ್‌ ಕಿಡಿ

    ಕಲಾವಿದರ ಮೇಲೆ ಸೇಡು ತೀರಿಸಿದ ನಟ್ಟು ಬೋಲ್ಟ್‌ ಮಿನಿಸ್ಟರ್‌- ಜೆಡಿಎಸ್‌ ಕಿಡಿ

    ಬೆಂಗಳೂರು: ಬಿಡದಿ (Bidadi) ಬಳಿ ನಡೆಯುತ್ತಿದ್ದ ಬಿಗ್‌ಬಾಸ್‌ ಶೋ (Bigg Boss) ನಡೆಯುತ್ತಿದ್ದ ಜಾಲಿವುಡ್‌ ಸ್ಟುಡಿಯೋಗೆ  ಬೀಗ ಹಾಕಿದ್ದಕೆ  ಜೆಡಿಎಸ್‌ (JDS) ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ವಿರುದ್ಧ ಸಿಟ್ಟು ಹೊರಹಾಕಿದೆ.

    ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಡೆಯುತ್ತಿದ್ದ ಬಿಗ್ ಬಾಸ್ ರಿಯಾಲಿಟಿ ಷೋ ಬಂದ್ ಮಾಡಿಸಿ, ಕಲಾವಿದರ ಮೇಲೆ ಸೇಡು ತೀರಿಸಿಕೊಂಡ ನಟ್ಟು ಬೋಲ್ಟ್ ಮಿನಿಸ್ಟರ್ ಡಿಕೆ ಶಿವಕುಮಾರ್‌ (DK Shivakumar) ಎಂದು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ಹೊರಹಾಕಿದೆ.

    ಮಾಲಿನ್ಯ ನಿಯಮ ಉಲ್ಲಂಘಿಸಿದ್ದಕ್ಕೆ ಬಿಗ್‌ ಬಾಸ್‌ ಶೋ ನಡೆಯುತ್ತಿದ್ದ ಜಾಲಿವುಡ್‌ ಸ್ಟುಡಿಯೋವನ್ನು ಬೆಂಗಳೂರು ದಕ್ಷಿಣ ಜಿಲ್ಲಾಡಳಿತ ಬಂದ್‌ ಮಾಡಿದೆ. ಪರಿಣಾಮ ಎಲ್ಲಾ ಸ್ಪರ್ಧಿಗಳು ಎರಡೇ ವಾರಕ್ಕೆ ಶೋದಿಂದ ಎಲಿಮಿನೇಟ್‌ ಆಗಿದ್ದಾರೆ.  ಇದನ್ನೂ ಓದಿ:  ಬಿಗ್‌ ಬಾಸ್‌ ಮನೆಗೆ ಬೀಗ – ರಕ್ಷಿತಾ ಹೇಳಿಕೆ ವೈರಲ್‌

    ಏನಿದು ನಟ್ಟು ಬೋಲ್ಟ್‌ ವಿವಾದ?
    16ನೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಉದ್ಘಾಟನಾ ಸಮಾರಂಭದಲ್ಲಿ ಸಿನಿಮಾ ಕಲಾವಿದರು ಭಾಗವಹಿಸಿರಲಿಲ್ಲ.  ಈ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಡಿಸಿಎಂ ಡಿಕೆ ಶಿವಕುಮಾರ್‌, ಇದು ನನ್ನ ವಾರ್ನಿಂಗ್ ಅಂತಾದ್ರೂ ಅಂದ್ಕೊಳ್ಳಿ, ಕೋರಿಕೆ ಅಂತಾದ್ರೂ ಅಂದ್ಕೊಳ್ಳಿ, ಚಿತ್ರರಂಗದವರ ನಟ್ಟು ಬೋಲ್ಟ್ ಹೇಗೆ ಟೈಟ್ ಮಾಡಬೇಕು ಅಂತ ಗೊತ್ತು ಎಂದು ಹೇಳಿಕೆ ನೀಡಿದ್ದು ದೊಡ್ಡ ಚರ್ಚೆಗೆ ಗ್ರಾಸವಾಗಿತ್ತು. ಇದನ್ನೂ ಓದಿ:  ಬಿಗ್‌ಬಾಸ್‌ ಸ್ಪರ್ಧಿಗಳು ಈಗಲ್‌ಟನ್‌ ರೆಸಾರ್ಟ್‌ಗೆ ಶಿಫ್ಟ್‌

    ಡಿಕೆಶಿ ಈ ಮೂಲಕ ಚಿತ್ರರಂಗದವರಿಗೆ ಬೆದರಿಕೆ ಹಾಕುತ್ತಿದ್ದಾರೆ ಎಂದು ನೆಟ್ಟಿಗರು ಅಂದೇ ಟೀಕೆ ವ್ಯಕ್ತಪಡಿಸಿದ್ದರು. ಈಗ ಮಾಜಿ ಸ್ಪರ್ಧಿ ಪ್ರಶಾಂತ್‌ ಸಂಬರಗಿ ಅವರು ವಿಧಾನಸಭಾ ಚುನಾವಣೆಯಲ್ಲಿ ಸುದೀಪ್‌ (Sudeep) ಬಿಜೆಪಿ ಪರ ಪ್ರಚಾರ ಮಾಡಿದ್ದಾರೆ ಎಂಬ ಕಾರಣಕ್ಕೆ ಡಿಕೆಶಿ ಬಿಗ್‌ಬಾಸ್‌ ಶೋ ರದ್ದು ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

  • ಬಿಗ್‌ಬಾಸ್‌ ಶೋ ಬಂದ್‌ – ರಾತ್ರೋರಾತ್ರಿ ಮನೆಯಿಂದ ಎಲ್ಲಾ ಸ್ಪರ್ಧಿಗಳು ಹೊರಕ್ಕೆ

    ಬಿಗ್‌ಬಾಸ್‌ ಶೋ ಬಂದ್‌ – ರಾತ್ರೋರಾತ್ರಿ ಮನೆಯಿಂದ ಎಲ್ಲಾ ಸ್ಪರ್ಧಿಗಳು ಹೊರಕ್ಕೆ

    ರಿಸರ ನಿಯಮ ಉಲ್ಲಂಘನೆ ಆರೋಪದಲ್ಲಿ ಜಾಲಿವುಡ್‌ ಸ್ಟುಡಿಯೋಸ್‌ಗೆ ಬೀಗ ಬಿದ್ದಿದ್ದು, ಅಲ್ಲೇ ನಡೆಯುವ ಬಿಗ್‌ಬಾಸ್‌ ಶೋ ಕೂಡ ಬಂದ್‌ ಆಗಿದೆ. ಬಿಗ್‌ಬಾಸ್‌ ಸ್ಪರ್ಧಿಗಳು ಮನೆಯಿಂದ ಹೊರಬಂದಿದ್ದಾರೆ.

    ಅಧಿಕೃತವಾಗಿ ಬಿಗ್‌ಬಾಸ್‌ ಮನೆಗೆ ಬೀಗ ಹಾಕಲಾಗಿದೆ. ಸ್ಪರ್ಧೆಯಲ್ಲಿದ್ದ ಎಲ್ಲರನ್ನೂ ರಾತ್ರಿ ಮನೆಯಿಂದ ಹೊರಹಾಕಲಾಗಿದೆ. ಸ್ವತಃ ತಹಶೀಲ್ದಾರ್‌ ತೇಜಸ್ವಿನಿಯವರು ಮುಂದೆ ನಿಂತು ಸ್ಪರ್ಧಿಗಳು ಹೊರಗೆ ಕರೆತಂದಿದ್ದಾರೆ.

    ಬಿಗ್‌ಬಾಸ್‌ ದಿಢೀರ್‌ ಸ್ಥಗಿತದಿಂದ ಸ್ಪರ್ಧಿಗಳು, ತಂತ್ರಜ್ಞರು ಸೇರಿದಂತೆ 700 ಕ್ಕೂ ಹೆಚ್ಚು ಜನರು ಮನೆಗೆ ವಾಪಸ್‌ ಆಗುವಂತಾಗಿದೆ. ಆರು ತಿಂಗಳ ಕಾಲ ಮೂರು ಶಿಫ್ಟ್‌ನಲ್ಲಿ ತಂತ್ರಜ್ಞರು ಕೆಲಸ ಮಾಡುತ್ತಿದ್ದರು.

    ಐದು ಕೋಟಿಗೂ ಅಧಿಕ ವೆಚ್ಚದಲ್ಲಿ ಬಿಗ್‌ ಬಾಸ್‌ ಮನೆ ನಿರ್ಮಾಣವಾಗಿತ್ತು. ಈಗ ತಾತ್ಕಾಲಿಕವಾಗಿ ಅನಾಥವಾಗಲಿದೆ. ಅರಮನೆ ವಿನ್ಯಾಸದಲ್ಲಿ ಬಿಗ್‌ ಬಾಸ್‌ ಮನೆಯನ್ನು ನಿರ್ಮಿಸಲಾಗಿತ್ತು. ಕಿಚ್ಚ ಸುದೀಪ್‌ ಆಶಯದಂತೆ ಇದೇ ಮೊದಲ ಬಾರಿಗೆ ಅದ್ಧೂರಿಯಾಗಿ ಮನೆ ನಿರ್ಮಾಣಗೊಂಡಿತ್ತು.

  • ಜಾಲಿವುಡ್‌ ಸ್ಟುಡಿಯೋಸ್‌ ಬಂದ್‌ಗೆ ನೋಟಿಸ್ -‌ ಬಿಗ್‌ ಬಾಸ್‌ ಮನೆಗೆ ಬೀಳುತ್ತಾ ಬೀಗ?

    ಜಾಲಿವುಡ್‌ ಸ್ಟುಡಿಯೋಸ್‌ ಬಂದ್‌ಗೆ ನೋಟಿಸ್ -‌ ಬಿಗ್‌ ಬಾಸ್‌ ಮನೆಗೆ ಬೀಳುತ್ತಾ ಬೀಗ?

    – ಅರಣ್ಯ ಸಚಿವ ಈಶ್ವರ ಖಂಡ್ರೆ ಸಮರ್ಥನೆ ಏನು?

    ರಾಮನಗರ: ಜಿಲ್ಲೆಯ ಬಿಡದಿ (Bidadi) ಬಳಿಯಿರುವ ವೆಲ್ಸ್ ಸ್ಟುಡಿಯೋಸ್ & ಎಂಟರ್‌ಟೈನ್ಮೆಂಟ್ ಪ್ರೈ.ಲಿ. (Jollywood Studios) ಜಲ ಕಾಯಿದೆ, ವಾಯು ಕಾಯಿದೆಯಡಿ ಅನುಮತಿ ಪಡೆಯದೆ ಕಾರ್ಯಾಚರಣೆ ಮಾಡುತ್ತಿರುವ ಹಿನ್ನೆಲೆಯಲ್ಲಿ ಮಾಲಿನ್ಯ ನಿಯಂತ್ರಣ ಮಂಡಳಿ ನೋಟಿಸ್ ನೀಡಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ತಿಳಿಸಿದರು.

    ವಿಕಾಸಸೌಧದಲ್ಲಿ ಮಂಗಳವಾರ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಬಿಗ್ ಬಾಸ್ (Bigg Boss Kannada 12) ಕಾರ್ಯಕ್ರಮ ನಡೆಯುತ್ತಿರುವ ಸ್ಟುಡಿಯೋಗೆ ನೋಟಿಸ್ ನೀಡಿರುವ ವಿಚಾರ ತಿಳಿಯಿತು. ಈ ಬಗ್ಗೆ ಮಾಹಿತಿ ಪಡೆದಾಗ, ರಾಮನಗರ ಪ್ರಾದೇಶಿಕ ಕಚೇರಿಯಿಂದ 2024ರಲ್ಲೇ 2 ಬಾರಿ ನೋಟಿಸ್ ನೀಡಿದ್ದರೂ ಅನುಪಾಲನೆ ಮಾಡಿದ ಕಾರಣ ಈ ನೋಟಿಸ್ ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ ಎಂದರು. ಇದನ್ನೂ ಓದಿ: ಅಕ್ಕ, ಬಾವನ ಜೊತೆ ಗಲಾಟೆ – ಬಿಗ್‌ ಬಾಸ್‌ ರಂಜಿತ್‌ ಮೇಲೆ ದೂರು ದಾಖಲು

    ಇಲ್ಲಿ ಎಸ್‌ಟಿಪಿ ಕಾರ್ಯನಿರ್ವಹಣೆ ಸೇರಿದಂತೆ ಸಮರ್ಪಕವಾಗಿ ತಾಜ್ಯ ವಿಲೇವಾರಿ ಆಗುತ್ತಿಲ್ಲ. ಜನರೇಟರ್ ಸೆಟ್‌ಗಳಿದ್ದು, ಅದಕ್ಕೂ ಅನುಮತಿ ಪಡೆದಿಲ್ಲ ಎಂದು ತಿಳಿಸಿದ್ದಾರೆ. ಕಾನೂನಿಗಿಂತ ಯಾರೂ ದೊಡ್ಡವರಲ್ಲ. ಹೀಗಾಗಿ, ಮಂಡಳಿ ಕ್ರಮ ಕೈಗೊಂಡಿದೆ ಎಂದು ಹೇಳಿದರು.

  • 3 ತಿಂಗಳು ನನ್ನ ಮನೆಮುಂದೆ ಮಾಧ್ಯಮಗಳು ಕಾಯೋ ಹಾಗೇ ಮಾಡಿದ್ದು ಯಾರ ಪ್ರೇರಣೆಯಿಂದ – HDD ಕಿಡಿ

    3 ತಿಂಗಳು ನನ್ನ ಮನೆಮುಂದೆ ಮಾಧ್ಯಮಗಳು ಕಾಯೋ ಹಾಗೇ ಮಾಡಿದ್ದು ಯಾರ ಪ್ರೇರಣೆಯಿಂದ – HDD ಕಿಡಿ

    – ಡಿಕೆಶಿ ಹೆಸರು ಹೇಳದೇ ಕಿಡಿಕಾರಿದ  ಹೆಚ್‌ಡಿ ದೇವೇಗೌಡ

    ಬೆಂಗಳೂರು: ದೇವೇಗೌಡ, ಕುಮಾರಸ್ವಾಮಿ ಫ್ಯಾಮಿಲಿ ನನ್ನನ್ನು ಜೈಲಿಗೆ ಹಾಕೋಕೆ ಕಾಯ್ತಿದ್ದಾರೆ ಎಂಬ ಡಿಸಿಎಂ ಡಿಕೆಶಿವಕುಮಾರ್ (DK Shivakumar) ಆರೋಪಕ್ಕೆ ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡ (HD Devegowda) ಹೆಸರು ಹೇಳದೇ ಡಿಕೆಶಿ ವಿರುದ್ದ ಕಿಡಿಕಾರಿದ್ದಾರೆ.

    ಜೆಪಿ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದಯಮಾಡಿ ಬೇರೊಬ್ಬರ ಹೆಸರು ತೆಗೆದು ಚರ್ಚೆ ಮಾಡೋದು ಬೇಡ. ನಾನು ಆ ವಿಷಯದಲ್ಲಿ ಮಾತಾಡುವುದಿಲ್ಲ. 3 ತಿಂಗಳು ನಮ್ಮ ಮನೆ ಮುಂದೆ ಮಾಧ್ಯಮಗಳು ಹಗಲು ರಾತ್ರಿ ಇದ್ದವು. ಯಾರ ಪ್ರೇರಣೆಯಿಂದ ಇದೆಲ್ಲ ಆಯ್ತು. ನಾನು ಆಪಾದನೆ ಮಾಡಲ್ಲ. ಆವತ್ತು ನಾನು ಮಾತಾಡಿಲ್ಲ. ಇವತ್ತು ಮಾತಾಡಲ್ಲ. ಆ ದಿನಗಳನ್ನು ನೀವೇ ನೋಡಿದ್ದೀರಿ. ಅದರ ಹಿಂದೆ ಯಾವ ಶಕ್ತಿ ಇತ್ತು ಅಂತ ನಿಮಗೆ ಗೊತ್ತಿದೆ ಎಂದು ಪರೋಕ್ಷವಾಗಿ ಡಿಕೆಶಿ ವಿರುದ್ಧ ಆರೋಪ ಮಾಡಿದ್ದಾರೆ.ಇದನ್ನೂ ಓದಿ: ರಾಜ್ಯದಲ್ಲಿ ಮುಂದೆ ಬರುವ ಎಲ್ಲಾ ಚುನಾವಣೆಗಳಿಗೂ ಬಿಜೆಪಿ-ಜೆಡಿಎಸ್ ಮೈತ್ರಿ: ಹೆಚ್‌ಡಿಡಿ ಘೋಷಣೆ

    ಯಾರು ಏನೇ ಮಾತಾಡಿದ್ರು ನಾವು ಸಣ್ಣ ರಾಜಕೀಯ ಪಕ್ಷದವರು. ಅದನ್ನ ಉಳಿಸಿಕೊಳ್ಳೋಕೆ ಶಕ್ತಿ ಮೀರಿ ಕೆಲಸ ಮಾಡ್ತೀವಿ. ಡಿಕೆಶಿವಕುಮಾರ್ ಬಗ್ಗೆ ನಾನು ಮಾತಾಡಲ್ಲ. 20 ವರ್ಷದ ಹಿಂದೆ ಚುನಾವಣೆಗೆ ಸ್ಪರ್ಧೆ ಮಾಡಿದ್ದಾಗಿನಿಂದ ನಾನು ಮಾತಾಡಿಲ್ಲ ಎಂದು ಹೆಸರು ಹೇಳದೇ ವಾಗ್ದಾಳಿ ನಡೆಸಿದ್ದಾರೆ.

    ಬಿಡದಿ ಟೌನ್‌ಶಿಪ್ ಮಾಡೋಕೆ ಡಿಕೆಶಿವಕುಮಾರ್ ಮುಂದಾಗಿರೋ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಬಿಡದಿಯಲ್ಲಿ ನಮ್ಮ ಪಕ್ಷದವರು ಇದರ ವಿರುದ್ಧ ಪ್ರತಿಭಟನೆ ಮಾಡಿದರು. ನಾನು ನೋಡಿದೆ. ಈಗ ಅವರ ಸರ್ಕಾರ ಇದೆ. ಅವರು ಏನೇ ಹೇಳಿದರೂ ತಿರಸ್ಕಾರ ಮನೋಭಾವದಿಂದ ನೋಡಿ. ಚುನಾವಣೆ ಬಂದಾಗ ಜನ ತೀರ್ಪು ಕೊಡಬೇಕು. ಅಲ್ಲಿವರೆಗೂ ನೀವು ಕಾಯಬೇಕು.ಇದನ್ನೂ ಓದಿ: ಕಾಂತಾರ ಚಾಪ್ಟರ್‌ 1 ಸಿನಿಮಾ ನೋಡಿ ಹಾಡಿಹೊಗಳಿದ ಯಶ್‌

  • ಬಿಡದಿಯ ಕೇತಗಾನಹಳ್ಳಿ‌ ಬಳಿ ಸರ್ಕಾರಿ ಜಮೀನು ಒತ್ತುವರಿ ಆರೋಪ – ಹೆಚ್‌ಡಿಕೆಗೆ ಹೈಕೋರ್ಟ್ ಶಾಕ್

    ಬಿಡದಿಯ ಕೇತಗಾನಹಳ್ಳಿ‌ ಬಳಿ ಸರ್ಕಾರಿ ಜಮೀನು ಒತ್ತುವರಿ ಆರೋಪ – ಹೆಚ್‌ಡಿಕೆಗೆ ಹೈಕೋರ್ಟ್ ಶಾಕ್

    ಬೆಂಗಳೂರು: ಬಿಡದಿಯ ಕೇತಗಾನಹಳ್ಳಿ‌ ಬಳಿ ಸರ್ಕಾರಿ ಜಮೀನು ಒತ್ತುವರಿ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿಗೆ (H.D.Kumaraswamy) ಹೈಕೋರ್ಟ್ ಶಾಕ್ ಕೊಟ್ಟಿದೆ.

    ಎಸ್‌ಐಟಿ ರಚನೆಗೆ ಏಕಸದಸ್ಯ ಪೀಠ ತಡೆಯಾಜ್ಞೆ ನೀಡಿತ್ತು. ಈ ಆದೇಶಕ್ಕೆ ಸಿಜೆ ವಿಭು ಬಖ್ರು, ನ್ಯಾ.ಸಿ.ಎಂ.ಜೋಷಿ ಅವರಿದ್ದ ಪೀಠ ಮಧ್ಯಂತರ ತಡೆ ನೀಡಿದೆ. ನವೆಂಬರ್ 26 ರವರೆಗೆ ಏಕಸದಸ್ಯ ಪೀಠದ ಆದೇಶಕ್ಕೆ ಮಧ್ಯಂತರ ತಡೆ ನೀಡಿದೆ. ಇದನ್ನೂ ಓದಿ: ಕೇತಗಾನಹಳ್ಳಿ ಭೂ ಒತ್ತುವರಿ ಪ್ರಕರಣ – ಹೆಚ್‌ಡಿಕೆಗೆ ಬಿಗ್ ರಿಲೀಫ್

    ಜಮೀನು ಒತ್ತುವರಿ ಆರೋಪ ಪ್ರಕರಣ ಸಂಬಂಧ ಎಸ್ಐಟಿ ರಚನೆಗೆ ಏಕಸದಸ್ಯ ಪೀಠ ತಡೆಯಾಜ್ಞೆ ನೀಡಿತ್ತು. ಪೀಠದ ಆದೇಶ ಪ್ರಶ್ನಿಸಿ ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಸರ್ಕಾರ ಮೇಲ್ಮನವಿ ಸಲ್ಲಿಸಿತ್ತು.

    6 ಎಕರೆ ಒತ್ತುವರಿ ತೆರವಿಗೆ ಸರ್ಕಾರ ಕ್ರಮ ಕೈಗೊಂಡಿದೆ. ದಾಖಲೆಗಳನ್ನು ಹಾಜರುಪಡಿಸುವಂತೆ ಎಸ್ಐಟಿ ನೋಟಿಸ್ ಜಾರಿಗೊಳಿಸಿದೆ. ಆದರೆ, ಎಸ್ಐಟಿ ರಚನೆಗೆ ಏಕಸದಸ್ಯ ಪೀಠ ತಡೆ ನೀಡಿದೆ. ಹೀಗಾಗಿ, ತಡೆಯಾಜ್ಞೆ ತೆರವಿಗೆ ಎಜಿ ಶಶಿಕಿರಣ್ ಶೆಟ್ಟಿ ಮನವಿ ಮಾಡಿದರು.

    ಈಗ ಹೈಕೋರ್ಟ್ ಆದೇಶದಿಂದ ಎಸ್ಐಟಿ ತನಿಖೆ ಮುಂದುವರಿಯಲಿದೆ. ಇದನ್ನೂ ಓದಿ: ಕೇತಗಾನಹಳ್ಳಿ‌ ಸರ್ಕಾರಿ ಜಮೀನು ಒತ್ತುವರಿ ಪ್ರಕರಣ; ಹೆಚ್‌ಡಿಕೆ ಸಲ್ಲಿಸಿದ್ದ ಅರ್ಜಿ ಇತ್ಯರ್ಥಪಡಿಸಿದ ಸುಪ್ರೀಂ

  • ಕೇತಗಾನಹಳ್ಳಿ ಭೂ ಒತ್ತುವರಿ ಪ್ರಕರಣ – ಹೆಚ್‌ಡಿಕೆಗೆ ಬಿಗ್ ರಿಲೀಫ್

    ಕೇತಗಾನಹಳ್ಳಿ ಭೂ ಒತ್ತುವರಿ ಪ್ರಕರಣ – ಹೆಚ್‌ಡಿಕೆಗೆ ಬಿಗ್ ರಿಲೀಫ್

    ಬೆಂಗಳೂರು: ಕೇತಗಾನಹಳ್ಳಿ ಭೂ ಒತ್ತುವರಿ ಪ್ರಕರಣದಲ್ಲಿ(Kethaganahalli Land Encroachment Case) ಕೇಂದ್ರ ಭಾರೀ ಕೈಗಾರಿಕಾ ಸಚಿವ ಕುಮಾರಸ್ವಾಮಿಗೆ (HD Kumaraswamy) ಹೈಕೋರ್ಟ್‌ನಿಂದ (High Court) ಬಿಗ್ ರಿಲೀಫ್ ಸಿಕ್ಕಿದೆ.

    ಬಿಡದಿಯ ಕೇತಗಾನಹಳ್ಳಿ ಬಳಿಯ ಸರ್ವೆ ನಂಬರ್ 7,8,9 ರ ಜಮೀನನ್ನು ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ಆರೋಪಿಸಲಾಗಿತ್ತು ಆರೋಪದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕೂಡ ತನಿಖೆಗೆ ಎಸ್‌ಐಟಿ ರಚನೆ ಮಾಡಿತ್ತು.  ಇದನ್ನೂ ಓದಿ: Thug Life | ಹಿಂಸಾಚಾರ, ಬೆದರಿಕೆ ಹಾಕಿದವರ ವಿರುದ್ಧ ಕ್ರಮ ಯಾಕಿಲ್ಲ – ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಪ್ರಶ್ನೆ

     

    ಎಸ್‌ಐಟಿ ರಚನೆ ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದ ಕುಮಾರಸ್ವಾಮಿ ಪರ ವಕೀಲರಾದ ಉದಯ್ ಹೊಳ್ಳ ರಾಜ್ಯ ಸರ್ಕಾರ ಎಸ್‌ಐಟಿ ರಚನೆ ಸಂದರ್ಭದಲ್ಲಿ ಔಪಚಾರಿಕವಾಗಿ ಯಾವುದೇ ತೆರನಾದ ಅಧಿಸೂಚನೆಯನ್ನು ಪ್ರಕಟಿಸಿಲ್ಲ ಎಂದು ಮಂಡಿಸಿದರು. ಇದನ್ನೂ ಓದಿ: ಬೆಂಗಳೂರು | ಮರದ ಕೊಂಬೆ ಬಿದ್ದು ಗಾಯಗೊಂಡಿದ್ದ ಅಕ್ಷಯ್ ಸಾವು

    ವಾದ ಪುರಸ್ಕರಿಸಿದ ಹೈಕೋರ್ಟ್ ಏಕ ಸದಸ್ಯ ಪೀಠ ಮಧ್ಯಂತರ ತಡೆಯಾಜ್ಞೆಯನ್ನು ನೀಡಿದೆ. ಜೊತೆಗೆ ಎಸ್‌ಐಟಿ ರಚನೆಯ ಬಳಿಕ ಕುಮಾರಸ್ವಾಮಿಗೆ ನೀಡಿದ್ದ ಸಮನ್ಸ್ ಅನ್ನು ಕೂಡ ತಡೆ ಹಿಡಿದಿದ್ದು, ರಾಮನಗರ ಜಿಲ್ಲಾಧಿಕಾರಿ ಮತ್ತು ತಹಸಿಲ್ದಾರ್‌ಗೆ ನೋಟಿಸ್ ಜಾರಿ ಮಾಡಿ ವಿಚಾರಣೆಯನ್ನು ಮುಂದೂಡಿಕೆ ಮಾಡಿದೆ.

  • Ramanagara | ಹತ್ಯೆಯಾದ ಅಪ್ರಾಪ್ತ ಬಾಲಕಿ ಮನೆಗೆ ಸಂಸದ ಡಾ.ಮಂಜುನಾಥ್ ಭೇಟಿ, ಸಾಂತ್ವನ

    Ramanagara | ಹತ್ಯೆಯಾದ ಅಪ್ರಾಪ್ತ ಬಾಲಕಿ ಮನೆಗೆ ಸಂಸದ ಡಾ.ಮಂಜುನಾಥ್ ಭೇಟಿ, ಸಾಂತ್ವನ

    ರಾಮನಗರ: ಬಿಡದಿಯ (Bidadi) ಭದ್ರಾಪುರ (Bhadrapura) ಗ್ರಾಮದ ಅಪ್ರಾಪ್ತ ಬಾಲಕಿ ಹತ್ಯೆ ಪ್ರಕರಣ ಹಿನ್ನೆಲೆ ಇಂದು ಭದ್ರಾಪುರ ಗ್ರಾಮಕ್ಕೆ ಸಂಸದ ಡಾ.ಮಂಜುನಾಥ್ ಭೇಟಿ ನೀಡಿ ಮೃತ ಬಾಲಕಿ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ.

    ಮೃತ ಬಾಲಕಿ ತಾಯಿಗೆ ಧೈರ್ಯ ತುಂಬಿದ ಸಂಸದರು, ಘಟನೆ ಕುರಿತು ಪೊಲೀಸರಿಂದಲೂ ಮಾಹಿತಿ ಸಂಗ್ರಹಿಸಿದ್ದಾರೆ. ವಿಕಲಚೇತನ ಬಾಲಕಿ ಹತ್ಯೆಗೆ ವಿಷಾದ ವ್ಯಕ್ತಪಡಿಸಿದ ಸಂಸದರು, ಈ ಬಗ್ಗೆ ಕೂಲಂಕಷವಾಗಿ ತನಿಖೆ ನಡೆಸುವಂತೆ ಪೊಲೀಸರಿಗೆ ಸೂಚನೆ ನೀಡಿದರು. ಇದನ್ನೂ ಓದಿ: 13 ಎಟಿಎಂ ದೋಚಿದ್ದ ಖದೀಮನಿಗೆ ಪೊಲೀಸರಿಂದ ಗುಂಡೇಟು

    ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, 14 ವರ್ಷದ ಬಾಲಕಿಯನ್ನ ಹತ್ಯೆ ಮಾಡಿರೋದು ವಿಕೃತಿ. ಯಾವ ಕಾರಣಕ್ಕೆ ಹತ್ಯೆಯಾಗಿದೆ ಎಂಬುದು ಮರಣೋತ್ತರ ವರದಿ ಹಾಗೂ ಎಫ್‌ಎಸ್‌ಎಲ್ ವರದಿಯಲ್ಲಿ ಬಹಿರಂಗವಾಗಬೇಕಿದೆ. ಈಗಾಗಲೇ ಎರಡು-ಮೂರು ತಂಡಗಳ ರಚನೆ ಮಾಡಿಕೊಂಡು ಪೊಲೀಸರು ತನಿಖೆ ಮಾಡುತ್ತಿದ್ದಾರೆ. ಬಾಲಕಿ ಸಾವಿಗೆ ನ್ಯಾಯ ಒದಗಿಸುವ ಕೆಲಸ ಆಗಬೇಕು. ಗ್ರಾಮಕ್ಕೆ ಕೆಲ ಮೂಲಭೂತ ಸೌಕರ್ಯಗಳ ಕೊರತೆ ಇದೆ. ಅದನ್ನೂ ಸರಿಪಡಿಸುವ ನಿಟ್ಟಿನಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇವೆ ತಿಳಿಸಿದರು. ಇದನ್ನೂ ಓದಿ: ಆಂಧ್ರ ಪ್ರದೇಶ ಬಹುಕೋಟಿ ಅಬಕಾರಿ ಹಗರಣ – ಪ್ರಮುಖ ಆರೋಪಿ ಬಾಲಾಜಿ ಗೋವಿಂದಪ್ಪ ಎಸ್‌ಐಟಿ ವಶಕ್ಕೆ

  • ಭದ್ರಾಪುರದಲ್ಲಿ ಹತ್ಯೆಯಾದ ಬಾಲಕಿ ಮನೆಗೆ ಡಿಕೆಶಿ ಭೇಟಿ – ಪರಿಹಾರ ಚೆಕ್ ವಿತರಣೆ

    ಭದ್ರಾಪುರದಲ್ಲಿ ಹತ್ಯೆಯಾದ ಬಾಲಕಿ ಮನೆಗೆ ಡಿಕೆಶಿ ಭೇಟಿ – ಪರಿಹಾರ ಚೆಕ್ ವಿತರಣೆ

    – ಪೋಷಕರಿಗೆ ಸಾಂತ್ವನ ಹೇಳಿ ಧೈರ್ಯ ತುಂಬಿದ ಡಿಸಿಎಂ

    ರಾಮನಗರ: ಬಿಡದಿ ಹೋಬಳಿಯ ಭದ್ರಾಪುರ (Bhadrapura) ಗ್ರಾಮದ ಅಪ್ರಾಪ್ತ ಬಾಲಕಿ ಖುಷಿ ಹತ್ಯೆಯ ಹಿನ್ನೆಲೆ ಭದ್ರಾಪುರ ಗ್ರಾಮಕ್ಕೆ ಇಂದು ಡಿಸಿಎಂ ಡಿಕೆಶಿ (DK Shivakumar) ಭೇಟಿ ನೀಡಿ ಮೃತ ಬಾಲಕಿ ಕುಟುಂಬಕ್ಕೆ ಸಾಂತ್ವನ ಹೇಳಿ ಧೈರ್ಯ ತುಂಬಿದರು.

    ಬಳಿಕ ಜಿಲ್ಲಾಡಳಿತ ಪರವಾಗಿ 4.12 ಲಕ್ಷ ರೂ. ಹಾಗೂ ಗ್ರಾ.ಪಂ ವತಿಯಿಂದ 50,000 ರೂ. ಪರಿಹಾರ ಚೆಕ್ ವಿತರಿಸಿದರು. ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಈ ಅನುಮಾನಾಸ್ಪದ ಸಾವಿನ ಪ್ರಕರಣದ ಬಗ್ಗೆ ಪೊಲೀಸರು ತನಿಖೆ ಮಾಡುತ್ತಿದ್ದಾರೆ. ಈ ವಿಚಾರದಲ್ಲಿ ಯಾರ ಒತ್ತಡಕ್ಕೂ ಒಳಗಾಗದೆ ನ್ಯಾಯಪರ, ನಿಷ್ಠುರವಾಗಿ ತನಿಖೆ ನಡೆಯಲಿದೆ. ಯಾರ ಮೇಲಾದರೂ ಅನುಮಾನವಿದೆಯೇ ಎಂದು ಬಾಲಕಿಯ ಕುಟುಂಬಸ್ಥರ ಬಳಿ ಕೇಳಿದೆ. ಅವರು ಇಲ್ಲ ಎಂದು ಹೇಳುತ್ತಿದ್ದಾರೆ. ತನಿಖೆ ಮಾಡುವುದು ಪೊಲೀಸ್ ಇಲಾಖೆ ಕರ್ತವ್ಯ ಎಂದರು. ಇದನ್ನೂ ಓದಿ: ಡ್ರೋನ್‌ಗಳನ್ನು ಧ್ವಂಸ ಮಾಡೋ ಭಾರ್ಗವಾಸ್ತ್ರ ಪ್ರಯೋಗ ಯಶಸ್ವಿ!

    ಎಲ್ಲಾ ಆಯಾಮದಲ್ಲಿಯೂ ಪೊಲೀಸರು ತನಿಖೆ ಮಾಡಲಿದ್ದಾರೆ. ದ್ವೇಷದಿಂದ ನಡೆದಿದೆಯೇ? ಅತ್ಯಾಚಾರವಾಗಿದೆಯೇ? ಏನಾದರೂ ಬೇರೆ ಕಾರಣ ಇದೆಯೇ ಎಂಬುದು ತನಿಖೆಯಿಂದ ಗೊತ್ತಾಗಲಿದೆ. ನ್ಯಾಯ ಒದಗಿಸುವುದು ನಮ್ಮ ಜವಾಬ್ದಾರಿ ಎಂದು ತಿಳಿಸಿದರು. ಇದನ್ನೂ ಓದಿ: ಜಪಾನ್ ಕಾನ್ಸುಲ್ ಜನರಲ್ ಜೊತೆ ಸಚಿವ ಶರಣ ಪ್ರಕಾಶ್ ಪಾಟೀಲ್ ಚರ್ಚೆ

  • ಬಿಡದಿ ಟೌನ್‌ಶಿಪ್ ನಿರ್ಮಾಣ ವಿಚಾರ – ರೈತರ ಭೂಮಿ ಸ್ವಾಧೀನಕ್ಕೆ ಹೆಚ್‌ಡಿಡಿ ತೀವ್ರ ವಿರೋಧ

    ಬಿಡದಿ ಟೌನ್‌ಶಿಪ್ ನಿರ್ಮಾಣ ವಿಚಾರ – ರೈತರ ಭೂಮಿ ಸ್ವಾಧೀನಕ್ಕೆ ಹೆಚ್‌ಡಿಡಿ ತೀವ್ರ ವಿರೋಧ

    – ಸಿಎಂಗೆ ಪತ್ರ ಬರೆದು ಭೂಸ್ವಾಧೀನ ನಿಲ್ಲಿಸಲು ಮಾಜಿ ಪ್ರಧಾನಿ ಒತ್ತಾಯ

    ರಾಮನಗರ: ಬಿಡದಿ (Bidadi) ಹೋಬಳಿ ವ್ಯಾಪ್ತಿಯಲ್ಲಿ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ ಟೌನ್‌ಶಿಪ್ ನಿರ್ಮಾಣ ಸಂಬಂಧ ರೈತರ ಭೂಮಿ ಸ್ವಾಧೀನಕ್ಕೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ (H D Devegowda) ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

    ಈ ಬಗ್ಗೆ ಸಿಎಂ ಸಿದ್ದರಾಮಯ್ಯ (Siddaramaiah) ಅವರಿಗೆ ದೇವೇಗೌಡ ಅವರು ಪತ್ರದ ಮೂಲಕ ಭೂಸ್ವಾಧೀನ ನಿಲ್ಲಿಸುವಂತೆ ಒತ್ತಾಯಿಸಿದ್ದಾರೆ.

    ಪತ್ರದಲ್ಲಿ ಉಲ್ಲೇಖಿಸಿರುವ ಅಂಶಗಳು:
    ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದ ಬಿಡದಿ ಹೋಬಳಿಯ ಬೈರಮಂಗಲ, ಕಂಚುಗಾರನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ 24 ಗ್ರಾಮಗಳಲ್ಲಿನ ಹಲವಾರು ಸರ್ವೆ ನಂಬರ್‌ಗಳಲ್ಲಿರುವ ಸುಮಾರು 10,000 ಎಕ್ರೆ ಜಮೀನನ್ನು ಸರ್ಕಾರ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಟೌನ್‌ಶಿಪ್ ಯೋಜನೆ ನಿರ್ಮಾಣಕ್ಕೆ ಭೂಸ್ವಾಧೀನ ಪ್ರಕ್ರಿಯೆ ಪ್ರಾರಂಭಿಸಿರುವುದಾಗಿ ವರದಿಯಾಗಿದೆ. ಇದನ್ನೂ ಓದಿ: Pahalgam Terrorist Attack | ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಭರತ್ ಭೂಷಣ್ ಅಂತ್ಯಕ್ರಿಯೆ

    ಜಿಲ್ಲೆಯ ರಾಮನಗರ (Ramanagara) ಮತ್ತು ಕನಕಪುರ ತಾಲೂಕಿನಲ್ಲಿ ಈಗಾಗಲೇ ರಾಜ್ಯ ಸರ್ಕಾರ ಸಾವಿರಾರು ಎಕ್ರೆ ರೈತರ ಭೂಮಿಯನ್ನು ವಶಪಡಿಸಿಕೊಂಡು ಕೈಗಾರಿಕಾಭಿವೃದ್ಧಿ ಪ್ರದೇಶವನ್ನಾಗಿ ಸ್ಥಾಪಿಸಿದೆ. ಜಿಲ್ಲೆಯು ಬೆಂಗಳೂರು ಮಹಾನಗರಕ್ಕೆ ಹೊಂದಿಕೊಂಡಂತೆ ಇದ್ದು, ಇಲ್ಲಿ ಹವವಾರು ಉದ್ಯಮಿಗಳು ಖಾಸಗಿಯಾಗಿ ಕೈಗಾರಿಕೆಗಳನ್ನು ಸ್ಥಾಪಿಸಿದ್ದಾರೆ. ಇದನ್ನೂ ಓದಿ: ಕೊಲೆಯಾಗಿದ್ದ ಮಹಿಳೆ ಪತ್ತೆ ಕೇಸ್; 2 ವರ್ಷ ಜೈಲುಶಿಕ್ಷೆ ಅನುಭವಿಸಿ ನಿರಪರಾಧಿಯಾಗಿ ಬಿಡುಗಡೆಯಾದ ಸುರೇಶ್

    ಉಳಿದಂತೆ ಇರುವ ಕೃಷಿ ಭೂಮಿಯಲ್ಲಿ ರೈತರು ತಮ್ಮ ಜೀವನ ನಿರ್ವಹಣೆಗೆ ಹೈನುಗಾರಿಕೆ, ರೇಷ್ಮೆ, ತೋಟಗಾರಿಕೆ, ಕೃಷಿ ಅವಲಂಬಿತರಾಗಿದ್ದಾರೆ. ಬಹುಪಾಲು ರೈತರು ಅತೀ ಸಣ್ಣ ಮತ್ತು ಸಣ್ಣ ಹಿಡುವಳಿದಾರರಾಗಿದ್ದು, ಬಡ ಕುಟುಂಬಕ್ಕೆ ಸೇರಿದವರಾಗಿದ್ದಾರೆ. ರೈತರು ತಮ್ಮ ಜಮೀನಿನಲ್ಲಿ ಮತ್ತು ಸುತ್ತಮುತ್ತ ಲಕ್ಷಾಂತರ ಮರಗಿಡಗಳನ್ನು ಬೆಳೆಸಿದ್ದಾರೆ. ಇಂತಹ ಪ್ರದೇಶವನ್ನು ಟೌನ್‌ಶಿಪ್ ಯೋಜನೆಗೆ ಸ್ವಾಧೀನ ಪಡಿಸಿಕೊಂಡರೆ ಪರಿಸರಕ್ಕೆ ಅಪಾರ ಹಾನಿ ಉಂಟಾಗುತ್ತದೆ. ಇದನ್ನೂ ಓದಿ: ಪಾಕ್ ನಟನ ಬಾಲಿವುಡ್ ಸಿನಿಮಾ ರಿಲೀಸ್‌ಗೆ ಬಹಿಷ್ಕಾರ

    ಸಾವಿರಾರು ಕುಟುಂಬಗಳ ಜೀವನ ನಿರ್ವಹಣೆಗೆ ಧಕ್ಕೆ ಉಂಟಾಗಿ, ರೈತ ಕುಟುಂಬದ ಯುವಕರು ನಿರುದ್ಯೋಗಿಗಳಾಗಿ ಬೀದಿಪಾಲಾಗುತ್ತಾರೆ. ಈ ಬಡ ರೈತರ ಜೀವನೋಪಾಯಕ್ಕೆ ಕೃಷಿ ಭೂಮಿಯೇ ಆಧಾರವಾಗಿದೆ. ಇದಲ್ಲದೇ ಕರ್ನಾಟಕ ಹೌಸಿಂಗ್ ಬೋರ್ಡ್ ಹಾಗೂ ಇತರೆ ಸರ್ಕಾರಿ ಪ್ರಾಧಿಕಾರಗಳು ಬಿಡದಿಯ ಸುತ್ತಮುತ್ತಲೂ ಹಲವಾರು ವಸತಿ ಯೋಜನೆಗಳನ್ನು ರೂಪಿಸಿ, ರೈತರ ಜಮೀನನ್ನು ಸ್ವಾಧೀನಪಡಿಸಿಕೊಂಡು ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿವೆ. ಇದನ್ನೂ ಓದಿ: ನೀರು ನಿಲ್ಲಿಸೋದು ಯುದ್ಧಕ್ಕೆ ಆಹ್ವಾನಿಸಿದಂತೆ – ಭಾರತದ ಪ್ರತೀಕಾರ ನಿರ್ಧಾರದಿಂದ ಕೋಪಗೊಂಡ ಪಾಕ್‌

    ಬಡ ರೈತರ ಹಿತದೃಷ್ಠಿಯಿಂದ ರಾಜ್ಯ ಸರ್ಕಾರ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ ನಿರ್ಮಿಸುತ್ತಿರುವ ಟೌನ್‌ಶಿಪ್ ಯೋಜನೆಗೆ ರೈತರ ಭೂಮಿ ಸ್ವಾಧೀನಪಡಿಸಿಕೊಳ್ಳುತ್ತಿರುವ ಪ್ರಕ್ರಿಯೆಯನ್ನು ಕೈಬಿಡಬೇಕೆಂದು ಈ ಮೂಲಕ ಒತ್ತಾಯಿಸುತ್ತೇನೆ ಎಂದು ಹೆಚ್.ಡಿ.ದೇವೇಗೌಡ ಅವರು ಪತ್ರದ ಮೂಲಕ ವಿರೋಧ ವ್ಯಕ್ತಪಡಿಸಿದ್ದಾರೆ.