ರಾಮನಗರ: ಬಿಡದಿ (Bidadi) ಪಟ್ಟಣದಲ್ಲಿ ಬೆಳ್ಳಂಬೆಳಗ್ಗೆ ಜೆಸಿಬಿಗಳು ಘರ್ಜನೆ ಮಾಡಿದ್ದು, ಪುರಸಭೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಫುಟ್‌ಪಾತ್ ಒತ್ತುವರಿ ತೆರವು ಮಾಡಿದ್ದಾರೆ.
ಬಿಡದಿಯ ಬಿಜಿಎಸ್ ಸರ್ಕಲ್‌ನಿಂದ ಸಿಲ್ಕ್ ಫಾರಂವರೆಗೆ ಫುಟ್‌ಪಾತ್ (Footpath) ಮೇಲೆ ಅಂಗಡಿ ಮಳಿಗೆಗಳ ನಿರ್ಮಾಣ ಮಾಡಿಕೊಂಡು ವ್ಯಾಪಾರ-ವಹಿವಾಟು ನಡೆಸಲಾಗುತ್ತಿತ್ತು. ಇದರಿಂದ ಪಾದಚಾರಿಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆ ಫುಟ್‌ಪಾತ್ ತೆರವು ಮಾಡುವಂತೆ ಅಂಗಡಿ ಮಾಲೀಕರಿಗೆ ಪುರಸಭೆ ನೋಟಿಸ್ ನೀಡಿತ್ತು. ಇದನ್ನೂ ಓದಿ: ದೇಶ ತೊರೆಯಿರಿ ಅಥವಾ ಜೈಲು ಶಿಕ್ಷೆ ಅನುಭವಿಸಿ: ವಿದೇಶಿ ಭಯೋತ್ಪಾದಕರಿಗೆ ಅಮೆರಿಕ ಎಚ್ಚರಿಕೆ
ನೋಟಿಸ್‌ಗೂ ಬಗ್ಗದ ಅಂಗಡಿ ಮಾಲೀಕರಿಗೆ ಇಂದು ಪುರಸಭೆ ಶಾಕ್ ನೀಡಿದ್ದು, ಬೆಳ್ಳಂಬೆಳಗ್ಗೆ ಜೆಸಿಬಿ ಮೂಲಕ ಪುರಸಭೆ ಅಧಿಕಾರಿಗಳೇ ತೆರವು ಕಾರ್ಯಾಚರಣೆ ನಡೆಸಿದ್ದಾರೆ. ಫುಟ್‌ಪಾತ್ ಒತ್ತುವರಿ ತೆರವು ಮಾಡಿ, ಸಾರ್ವಜನಿಕರ ಓಡಾಟಕ್ಕೆ ಅನುವು ಮಾಡಿ ಕೊಟ್ಟಿದ್ದಾರೆ. ಪೊಲೀಸ್ ಬಂದೋಬಸ್ತ್‌ನಲ್ಲಿ ತೆರವು ಕಾರ್ಯಾಚರಣೆ ನಡೆಸಿ, ಅಂಗಡಿ ಮಾಲೀಕರಿಗೆ ಮತ್ತೆ ಒತ್ತುವರಿ ಮಾಡದಂತೆ ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಗ್ಯಾಸ್ ಕಟರ್ ಬಳಸಿ ಎಟಿಎಂನಿಂದ 18 ಲಕ್ಷ ರೂ. ದೋಚಿದ ಖದೀಮರು
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಎರಡನೇ ವಿಮಾನ ನಿಲ್ದಾಣಕ್ಕೆ ಸ್ಥಳ ನಿಗದಿ ವಿಚಾರದಲ್ಲಿ ನಾವು ಏನು ಹೇಳಬೇಕು ಅದನ್ನ ಹೇಳಿದ್ದೇವೆ. ಈ ಹಿಂದೆ ಬಿಡದಿಯಲ್ಲಿ ಆಗಲ್ಲ ಎಂದು ತಾಂತ್ರಿಕ ಸಮಿತಿ ಹೇಳಿತ್ತು. ಆಗ ದೇವನಹಳ್ಳಿಗೆ ಶಿಫ್ಟ್ ಮಾಡಿದ್ದೆವು. ಈಗ ಮತ್ತೆ ಬಿಡದಿ ಭಾಗದಲ್ಲಿ ಆಗುತ್ತಾ? ಇಲ್ಲವಾ? ಏನು ಹೇಳುತ್ತಾರೆ ಎನ್ನುವುದನ್ನು ನೋಡಬೇಕು. ತಾಂತ್ರಿಕವಾಗಿ ಸಮಸ್ಯೆಯಿದ್ದು, ಅದಕ್ಕೆ ಒತ್ತಡ ಹಾಕಿದರೆ ಬದಲಾವಣೆ ಮಾಡಲು ಆಗುತ್ತಾ ಎಂದು ಪ್ರಶ್ನಿಸಿದರು.
ಎರಡನೇ ವಿಮಾನ ನಿಲ್ದಾಣಕ್ಕೆ ನೆಲಮಂಗಲ, ಬಿಡದಿ ಎರಡು ಸ್ಥಳಗಳನ್ನ ಗುರುತಿಸಿದ್ದಾರೆ. ಟೆಕ್ನಿಕಲ್ ಕಮಿಟಿ ಏನು ರಿಪೋರ್ಟ್ ಕೊಡುತ್ತಾರೆ ನೋಡೋಣ. ಫಿಸಿಬಲಿಟಿ ರಿಪೋರ್ಟ್ ಕೊಟ್ಟ ಬಳಿಕ ಗೊತ್ತಾಗುತ್ತದೆ. ಯಾರ ಒತ್ತಡದ ಬಗ್ಗೆಯೂ ನನಗೆ ಗೊತ್ತಿಲ್ಲ. ಆದರೆ ಹಾಗೆ ಮಾಡಲು ಬರಲ್ಲ ಎಂದು ಹೇಳಿದರು.ಇದನ್ನೂ ಓದಿ: 64 ವರ್ಷಗಳ ಬಳಿಕ ಗುಜರಾತ್‌ನಲ್ಲಿ ಎಐಸಿಸಿ ಅಧಿವೇಶನ – ಹಲವು ಮಹತ್ವದ ನಿರ್ಣಯ ಸಾಧ್ಯತೆ
ರಾಮನಗರ: ಬಿಡದಿಯ ರೈಲ್ವೆ ನಿಲ್ದಾಣಕ್ಕೆ (Bidadi Railway Station) ಹುಸಿ ಬಾಂಬ್ ಬೆದರಿಕೆಯೊಂದು (Bomb Threat) ಬಂದಿದ್ದು, ತಡರಾತ್ರಿ ಕಂಟ್ರೋಲ್ ರೂಂಗೆ ಕರೆಮಾಡಿ ಬಾಂಬ್ ಬೆದರಿಕೆ ಹಾಕಲಾಗಿದೆ.
ಕಿಡಿಗೇಡಿಗಳ ಕೃತ್ಯವನ್ನ ಕಾರ್ಖಾನೆಯ ಆಡಳಿತ ಮಂಡಳಿ ನೋಟಿಸ್ ಬೋರ್ಡ್‌ನಲ್ಲಿ ಹಾಕಿದ್ದು, ಈ ರೀತಿಯ ಬರವಣಿಗೆ ಉದ್ಯೋಗಿಗಳ ಮನಸ್ಸಿನಲ್ಲಿ ಅಶಾಂತಿ ಸೃಷ್ಟಿಸುವುದಲ್ಲದೇ ಸಂಸ್ಥೆಯಲ್ಲಿ ತೀವ್ರ ರೀತಿಯ ಅಶಿಸ್ತಿನ ಬೆಳವಣಿಗೆಗೆ ಕಾರಣವಾಗುತ್ತದೆ. ಇದು ಮುಂದುವರೆದು ದೇಶದ ಕಾನೂನಿನ ಚೌಕಟ್ಟಿನಲ್ಲಿ ದೇಶದ್ರೋಹಿ ಅಪರಾಧವಾಗುತ್ತದೆ. ಅಂತಹ ಕಾರ್ಮಿಕರನ್ನ ಪೊಲೀಸರಿಗೆ ಒಪ್ಪಿಸಿ, ಜೈಲು ವಾಸವಾಗುವಂತೆ ಕ್ರಮವಹಿಸುತ್ತೇವೆ ಎಂದು ಎಚ್ಚರಿಕೆ ನೀಡಿ ಕೈತೊಳೆದುಕೊಂಡಿದೆ. ಅಲ್ಲದೇ ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡದೆ ಸುಮ್ಮನಾಗಿದೆ. ಇದನ್ನೂ ಓದಿ: IPL 2025 | 10 ತಂಡಗಳ ನಾಯಕರ ಹೆಸರು ಫೈನಲ್ – 9 ಮಂದಿ ಭಾರತೀಯರದ್ದೇ ಆರ್ಭಟ
ವಿಚಾರ ತಿಳಿಯುತ್ತಿದ್ದಂತೆಯೇ ಶುಕ್ರವಾರ ರಾತ್ರಿ ಕಾರ್ಖಾನೆಗೆ ದೌಡಾಯಿಸಿದ ಪೊಲೀಸರು, ಬರಹ ಬರೆದ ಶೌಚಾಲಯದ ಸ್ಥಳ ಪರಿಶೀಲನೆ ಮಾಡಿದರು. ಬಳಿಕ ಕಾರ್ಖಾನೆಯ ಆಡಳಿತ ಮಂಡಳಿ ಹಾಗೂ ಕಾರ್ಮಿಕರಿಂದ ಮಾಹಿತಿ ಪಡೆದು, ಕಾರ್ಖಾನೆಯ ಸಿಸಿಟಿವಿ ಕ್ಯಾಮೆರಾವನ್ನು ಪರಿಶೀಲನೆ ಮಾಡಿದರು. ಕಾರ್‌ನ ಸೀಟ್‌ಗಳನ್ನ ತಯಾರು ಮಾಡುವ ಕಾರ್ಖಾನೆಯಲ್ಲಿ ಸುಮಾರು 400 ಜನ ಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ. ಇದನ್ನೂ ಓದಿ: ಉಡುಪಿ ಶ್ರೀಕೃಷ್ಣನ ರಥೋತ್ಸವ ಸೇವೆಯಲ್ಲಿ ಭಾಗಿಯಾದ ತೇಜಸ್ವಿ ಸೂರ್ಯ ದಂಪತಿ
ಈ ಬಗ್ಗೆ ಬಿಡದಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಅನಾಮಧೇಯ ವ್ಯಕ್ತಿ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಶೌಚಾಲಯದಲ್ಲಿ ಪಾಕಿಸ್ತಾನದ ಪರ ಕನ್ನಡಿಗರ ವಿರುದ್ಧವೂ ಅವಹೇಳನ ಬರಹ ಹಿನ್ನೆಲೆ ಕಿಡಿಗೇಡಿಗಳ ಬಂಧನಕ್ಕೆ ಕನ್ನಡಪರ ಸಂಘಟನೆಗಳು ಒತ್ತಾಯಿಸಿ ಕಾರ್ಖಾನೆ ಎದುರು ಪ್ರತಿಭಟನೆ ನಡೆಸಿದರು. ಇದು ದೇಶದ್ರೋಹದ ಕೆಲಸ, ಇಂತಹ ಕೃತ್ಯ ಎಸಗಿರುವವರನ್ನ ಗಡಿಪಾರು ಮಾಡುವಂತೆ ಒತ್ತಾಯಿಸಿದರು. ಇದನ್ನೂ ಓದಿ: ಕೈಗಾದಲ್ಲಿ ಉದ್ಯೋಗ ಮಾಹಿತಿ ನೀಡದೇ ಕನ್ನಡಿಗರಿಗೆ ವಂಚನೆ!
ಕಾರ್ಖಾನೆ ಆಡಳಿತ ಮಂಡಳಿ ಕೇವಲ ನೋಟಿಸ್ ಬೋರ್ಡ್‌ನಲ್ಲಿ ಎಚ್ಚರಿಕೆ ನೀಡಿ ಸುಮ್ಮನಾಗಿದೆ. ಈ ಬಗ್ಗೆ ಪೊಲೀಸರಿಗೆ ದೂರು ಕೊಡಲು ವಿಳಂಬ ಮಾಡಿದೆ ಎಂದು ಕಿಡಿಕಾರಿದರು. ಅಲ್ಲದೇ ಕಾರ್ಖಾನೆ ಆಡಳಿತ ಮಂಡಳಿ ನಿರ್ಲಕ್ಷ್ಯದ ವಿರುದ್ಧವೂ ಆಕ್ರೋಶ ಹೊರಹಾಕಿದರು. ಇದನ್ನೂ ಓದಿ: ಇಂದು ಸುಮಲತಾ ಅಂಬರೀಶ್ ಮೊಮ್ಮಗನ ನಾಮಕರಣ – ಸಮಾರಂಭಕ್ಕೆ ಮನೆಮಗ ದರ್ಶನ್ ಬರ್ತಾರಾ?
ರಾಮನಗರ: ರಾಜ್ಯ ಸರ್ಕಾರದ ಮಹಾತ್ವಾಕಾಂಕ್ಷೆ ಯೋಜನೆ ಗ್ರೇಟರ್ ಬೆಂಗಳೂರು (Greater Bengaluru) ಪ್ರಾಧಿಕಾರ ಮಸೂದೆ ವಿಧಾನಸಭೆಯಲ್ಲಿ ಅಂಗೀಕಾರವಾದ ಬೆನ್ನಲ್ಲೇ ಯೋಜನೆಯನ್ನ ವಿರೋಧಿಸಿ ಬಿಡದಿ (Bidadi) ಭಾಗದ ರೈತರು ಹೋರಾಟಕ್ಕೆ ಮುಂದಾಗಿದ್ದಾರೆ. ಗ್ರೇಟರ್ ಬೆಂಗಳೂರು ಹೆಸರಿನಲ್ಲಿ ರೈತರ ಜಮೀನುಗಳನ್ನು ಕಬಳಿಸುವ ಕೆಲಸ ಆಗುತ್ತಿದೆ ಎಂದು ಭೂ ಸ್ವಾಧೀನ ಪ್ರಕ್ರಿಯೆ ಕೈಬಿಡುವಂತೆ ರೈತರು ಸರ್ಕಾರಕ್ಕೆ ಆಗ್ರಹಿಸಿದ್ದಾರೆ.
ಗ್ರೇಟರ್ ಬೆಂಗಳೂರು ವ್ಯಾಪ್ತಿಗೆ ಬಿಡದಿ ಭಾಗದ 24 ಗ್ರಾಮಗಳನ್ನ ಸೇರ್ಪಡೆ ಮಾಡಿಕೊಂಡಿರುವ ಸರ್ಕಾರದ ಕ್ರಮಕ್ಕೆ ಸ್ಥಳೀಯ ರೈತರ ವಿರೋಧ ವ್ಯಕ್ತವಾಗಿದೆ. ಅಭಿವೃದ್ಧಿ ಹೆಸರಿನಲ್ಲಿ ಸರ್ಕಾರ ರೈತರನ್ನ ಒಕ್ಕಲೆಬ್ಬಿಸುವ ಕೆಲಸ ಮಾಡುತ್ತಿದೆ ಎಂದು ರೈತರು ಆಕ್ರೋಶ ಹೊರಹಾಕಿದ್ದು, ಗ್ರೇಟರ್ ಬೆಂಗಳೂರು ವಿರುದ್ಧ ಹೋರಾಟಕ್ಕೆ ಸಜ್ಜಾಗಿದ್ದಾರೆ. ಇಂದು ಬಿಡದಿ ಸಮೀಪದ ಹೊಸೂರಿನ ಮದ್ದೂರಮ್ಮನ ದೇವಾಲಯದ ಬಳಿ ಸುಮಾರು 500ಕ್ಕೂ ಹೆಚ್ಚು ರೈತರು ಸಭೆ ನಡೆಸಿ ಸರ್ಕಾರದ ನಿಲುವನ್ನ ಖಂಡಿಸಿದ್ದಾರೆ. ಇದನ್ನೂ ಓದಿ: ಕೇಣಿಯಲ್ಲಿ ಖಾಸಗಿ ಬಂದರು ನಿರ್ಮಾಣಕ್ಕೆ ಮೀನುಗಾರರ ವಿರೋಧ – ಮಾ.15ರ ವರೆಗೆ ನಿಷೇಧಾಜ್ಞೆ ಮುಂದುವರಿಕೆ
ರಾಜ್ಯ ಸರ್ಕಾರ ಗ್ರೇಟರ್ ಬೆಂಗಳೂರು ಪ್ರಾಧಿಕಾರದಿಂದ ಬಿಡದಿ ಬಳಿ 24 ಗ್ರಾಮಗಳ 9,600 ಎಕರೆ ಪ್ರದೇಶದಲ್ಲಿ ರೈತರು ಮತ್ತು ಸರ್ಕಾರದ ಪಾಲುದಾರಿಕೆಯಲ್ಲಿ ಟೌನ್‌ಶಿಪ್ ನಿರ್ಮಾಣಕ್ಕೆ ಸಂಪುಟ ಅನುಮೋದನೆ ಪಡೆದಿದೆ. ಈ ಯೋಜನೆಗಾಗಿ ಖಾಸಗಿ ಭೂಮಿಯನ್ನು ಸ್ವಾಧೀನಕ್ಕೆ ಪಡೆದುಕೊಳ್ಳಲು ಮುಂದಾಗಿದ್ದು, ಇದರಿಂದ 3,072 ಭೂ ಮಾಲೀಕರು ಜಮೀನು ಕಳೆದುಕೊಳ್ಳಲಿದ್ದಾರೆ. ರೈತರ ಪಾಲುದಾರಿಕೆಯಲ್ಲಿಯೇ ಯೋಜನೆ ಜಾರಿ ಮಾಡುವುದಾಗಿ ಹೇಳುವ ಸರ್ಕಾರ ಈವರೆಗೂ ಯಾವೊಬ್ಬ ರೈತನ ಅಭಿಪ್ರಾಯ ಕೇಳಿಲ್ಲ. ಯೋಜನೆ ಜಾರಿಯಾದರೇ ಈ ಭಾಗದ ಸಾವಿರಾರು ಎಕರೆ ಕೃಷಿ ಭೂಮಿ, ಸುಮಾರು 10 ಲಕ್ಷ ಮರ ಗಿಡಗಳನ್ನು ಕಳೆದುಕೊಳ್ಳುವ ಆತಂಕ ರೈತರಲ್ಲಿ ಎದುರಾಗಿದ್ದು, ಕೃಷಿ ಭೂಮಿಯನ್ನ ರೈತರಿಗೆ ಉಳಿಸುವಂತೆ ಸರ್ಕಾರಕ್ಕೆ ಒತ್ತಾಯ ಮಾಡಿದ್ದಾರೆ. ಇದನ್ನೂ ಓದಿ: 400 ಪ್ರಯಾಣಿಕರಿದ್ದ ಪಾಕ್ ರೈಲು ಹೈಜಾಕ್ – 120 ಮಂದಿ ಒತ್ತೆಯಾಳಾಗಿರಿಸಿಕೊಂಡ ಉಗ್ರರು, 6 ಸೈನಿಕರ ಹತ್ಯೆ
ಇನ್ನೂ ಸರ್ಕಾರ ಗುರುತಿಸಿರುವ ಜಾಗ ಕೃಷಿಗೆ ಯೋಗ್ಯವಾದ ಫಲವತ್ತಾದ ಭೂಮಿ. ಇದರ ಮೂಲಕವೇ ಲಕ್ಷಾಂತರ ಮಂದಿ ರೈತರು ಬದುಕು ಕಟ್ಟಿಕೊಂಡಿದ್ದಾರೆ. ಈ ಭಾಗದಿಂದಲೇ ಪ್ರತಿ ದಿನ ಸುಮಾರು 6 ಲಕ್ಷ ಲೀಟರ್ ಹಾಲು ಉತ್ಪಾದನೆ ಆಗುತ್ತದೆ. ತೋಟಗಾರಿಕೆ, ರೇಷ್ಮೆ ಮೂಲಕ ರೈತ ಕೂಡ ಪ್ರತಿ ತಿಂಗಳು 50,000 ರೂ.ವರೆಗೂ ಸಂಪಾದನೆ ಮಾಡುತ್ತಿದ್ದಾನೆ. ಈಗ ಏಕಾಏಕಿ ಯೋಜನೆ ಜಾರಿ ಆದರೆ ರೈತರಿಗೆ ಭವಿಷ್ಯದ ಆತಂಕ ಎದುರಾಗಿದೆ. ಹಾಗಾಗಿ ಇಂದು ಸಭೆ ನಡೆಸಿದ ರೈತರು ಬೃಹತ್ ಹೋರಾಟಕ್ಕೆ ಸಿದ್ಧತೆ ನಡೆಸಿದ್ದಾರೆ. ಈ ತಿಂಗಳ ಅಂತ್ಯದಲ್ಲಿ ಬಿಡದಿಯಿಂದ ರಾಮನಗರದ ಡಿಸಿ ಕಚೇರಿವರೆಗೂ ಪಾದಯಾತ್ರೆ ನಡೆಸಲು ಮುಂದಾಗಿದ್ದಾರೆ. ಇದನ್ನೂ ಓದಿ: ಬಾಗಲಕೋಟೆ ವಿಶ್ವವಿದ್ಯಾಲಯ ಕಾಲೇಜುಗಳನ್ನ ವಿಭಾಗ ಮಾಡ್ಬೇಡಿ- ವಿಧಾನ ಪರಿಷತ್‌ನಲ್ಲಿ ಬಿಜೆಪಿ ಆಗ್ರಹ
ರಾಮನಗರ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ (HD Kumaraswamy) ವಿರುದ್ಧ ಭೂ ಒತ್ತುವರಿ (Land Encroachment) ಆರೋಪ ಹಿನ್ನೆಲೆ ಎರಡನೇ ದಿನವೂ ಸರ್ವೇ (Survey) ಕಾರ್ಯ ಮುಂದುವರಿದಿದೆ.
ಇಂದು ಬಿಡದಿಯ ಕೇತಗಾನಹಳ್ಳಿಯಲ್ಲಿ ಕುಮಾರಸ್ವಾಮಿ ತೋಟವನ್ನು ಕಂದಾಯ ಇಲಾಖೆ ಅಧಿಕಾರಿಗಳು ಸರ್ವೆ ಮಾಡಿದ್ದಾರೆ. ರೆವೆನ್ಯೂ ಇನ್ಸ್ಪೆಕ್ಟರ್ ಪ್ರಕಾಶ್ ನೇತೃತ್ವದಲ್ಲಿ ಸರ್ವೇ ಕಾರ್ಯ ನಡೆಯುತ್ತಿದ್ದು, ಕುಮಾರಸ್ವಾಮಿ ತೋಟ ಹಾಗೂ ಸುತ್ತಮುತ್ತಲಿನ ಜಮೀನುಗಳನ್ನೂ ಸರ್ವೇ ಮಾಡಲಾಗಿದೆ. ಆಧುನಿಕ ಸರ್ವೇ ಉಪಕರಣಗಳ ಮೂಲಕ ಸರ್ವೇ ಕಾರ್ಯ ನಡೆಸಿ ಜಮೀನಿನ ಮೂಲ ಮಾಲೀಕರನ್ನೂ ಸ್ಥಳಕ್ಕೆ ಕರೆಸಿ ಪರಿಶೀಲನೆ ನಡೆಸಲಾಗಿದೆ. ಇದನ್ನೂ ಓದಿ: ಚಾಮರಾಜನಗರ: ಚಿರತೆ ದಾಳಿಗೆ ನಾಲ್ಕು ಕರುಗಳು ಬಲಿ
ಕಂದಾಯ ಇಲಾಖೆ ಅಧಿಕಾರಿಗಳ ಸರ್ವೆ ಕಾರ್ಯಕ್ಕೆ ಜಮೀನಿನ ಮೂಲ ಮಾಲೀಕರು ಆಕ್ರೋಶ ಹೊರಹಾಕಿದ್ದಾರೆ. ಸರಿಯಾದ ರೀತಿಯಲ್ಲಿ ಸರ್ವೇ ಮಾಡುತ್ತಿಲ್ಲ. ಬೇಕಾಬಿಟ್ಟಿ ಸರ್ವೆ ಮಾಡುತ್ತಿದ್ದಾರೆ. ನೋಟಿಸ್ ಕೊಟ್ಟು ಮೂಲ ಮಾಲೀಕರನ್ನು ಸ್ಥಳಕ್ಕೆ ಕರೆಸಿದ್ದಾರೆ. ಆದರೆ ಕುಮಾರಸ್ವಾಮಿ ಅವರ ತೋಟದ ಒಳಗೆ ಸರ್ವೇ ಮಾಡುವಾಗ ನಮ್ಮನ್ನು ಒಳಗೆ ಬಿಟ್ಟಿಲ್ಲ ಎಂದು ಸರ್ವೇ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಶಿಂಧೆ ನೇತೃತ್ವದ ಶಿವಸೇನೆಯ 20 ಶಾಸಕರ Y-ಭದ್ರತೆ ವಾಪಸ್ ಪಡೆದ ಫಡ್ನವಿಸ್
ರಾಮನಗರ: ಕಸದಿಂದ ವಿದ್ಯುತ್ ಉತ್ಪಾದಿಸುವ ಘಟಕದಲ್ಲಿ ಬಾಯ್ಲರ್ ಸ್ಫೋಟಗೊಂಡು (Boiler Blast) ಗಾಯಗೊಂಡಿದ್ದ 5 ಕಾರ್ಮಿಕರ ಪೈಕಿ ಓರ್ವ ಕಾರ್ಮಿಕ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾನೆ.
ಉಮೇಶ್ ಕುಮಾರ್ ಸಿಂಗ್ (32) ಮೃತ ಕಾರ್ಮಿಕ. ಕಳೆದ ಶನಿವಾರ ಬಿಡದಿಯ (Bidadi) ಭೈರಮಂಗಲ ಕ್ರಾಸ್ ಬಳಿ ಇರುವ ವಿದ್ಯುತ್ ಉತ್ಪಾದನಾ ಘಟಕದಲ್ಲಿ ಬಾಯ್ಲರ್ ಪೈಪ್ ಸ್ಫೋಟಗೊಂಡು ಐದು ಮಂದಿ ಕಾರ್ಮಿಕರಿಗೆ ಗಂಭೀರ ಗಾಯಗಳಾಗಿದ್ದವು. ಗಾಯಾಳುಗಳಿಗೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತಿದ್ದು, ಈ ಪೈಕಿ ಇಬ್ಬರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಇಂದು ಮುಂಜಾನೆ ಚಿಕಿತ್ಸೆ ಫಲಿಸದೇ ಓರ್ವ ಕಾರ್ಮಿಕ ಸಾವನ್ನಪ್ಪಿದ್ದಾನೆ. ಇದನ್ನೂ ಓದಿ: ಸಾಧು ಸಂತರೊಂದಿಗೆ ಸೇರಿಕೊಂಡು ಕ್ರಾಂತಿವೀರ ಬ್ರಿಗೇಡ್ ಶುರು – ಫೆ.4 ರಂದು ಉದ್ಘಾಟನೆ: ಈಶ್ವರಪ್ಪ
ಒಣ ತ್ಯಾಜ್ಯ ಬರ್ನ್ ಆದ ನಂತರ ಬೂದಿ ಹೊರ ಹೋಗುವ ಬಾಯ್ಲರ್ ಪೈಪ್ ಕಟ್ಟಿಕೊಂಡಿದ್ದ ಪರಿಣಾಮ ಕಾರ್ಮಿಕರು ಯಾವುದೇ ಮುಂಜಾಗ್ರತಾ ಕ್ರಮ ವಹಿಸದೆ ಓಪನ್ ಮಾಡಿದ ಕಾರಣ ಅವಘಡ ಸಂಭವಿಸಿದೆ. ಅಲ್ಲದೇ ಇಂದು ಸಂಜೆ ಘಟನಾ ಸ್ಥಳಕ್ಕೆ ಇಂಧನ ಸಚಿವ ಕೆ.ಜೆ.ಜಾರ್ಜ್ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ಇದನ್ನೂ ಓದಿ: ದೆಹಲಿಯಲ್ಲಿ ಫೆ.5ಕ್ಕೆ ಚುನಾವಣೆ, ಫೆ.8 ರಂದು ಮತ ಎಣಿಕೆ
ರಾಮನಗರ: ಮಾಜಿ ಸಿಎಂ ಎಸ್‌ಎಂ ಕೃಷ್ಣ (SM Krishna) ವಿಧಿವಶರಾದ ಹಿನ್ನೆಲೆ ಬುಧವಾರ ರಾಮನಗರದಲ್ಲಿ (Ramanagara) ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ರಾಮನಗರ ಜಿಲ್ಲಾಧಿಕಾರಿ ಯಶವಂತ್ ಗುರುಕರ್ ಮಾಹಿತಿ ನೀಡಿದ್ದಾರೆ.
ಬುಧವಾರ ಬಿಡದಿ, ರಾಮನಗರ ಹಾಗೂ ಚನ್ನಪಟ್ಟಣದಲ್ಲಿ ಸಾರ್ವಜನಿಕ ದರ್ಶನಕ್ಕೆ ಅವಕಾಶ ನೀಡಿದ್ದು, ಜಿಲ್ಲಾಡಳಿತ ಅಂತಿಮ ದರ್ಶನಕ್ಕೆ ಸಕಲ ಸಿದ್ಧತೆಗಳನ್ನು ಕೈಗೊಂಡಿದೆ. ಬಿಡದಿಯ ಬಿಜೆಎಸ್ ಸರ್ಕಲ್, ರಾಮನಗರ ಐಜೂರು ವೃತ್ತ ಹಾಗೂ ಚನ್ನಪಟ್ಟಣದ ಗಾಂಧಿ ಭವನದ ಬಳಿ ಸಾರ್ವಜನಿಕ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಇದನ್ನೂ ಓದಿ: ಭಾಗ-1 | ಶಾಸಕನಿಂದ ಮುಖ್ಯಮಂತ್ರಿವರೆಗೆ…. ಎಸ್‌ಎಂಕೆ ರಾಜಕೀಯ ಜೀವನದ ಏಳುಬೀಳು!
ಬೆಳಗ್ಗೆ 9:30ಕ್ಕೆ ಬಿಡದಿಯಲ್ಲಿ ಸಾರ್ವಜನಿಕ ದರ್ಶನಕ್ಕೆ ಅವಕಾಶ ನೀಡಲಾಗಿದೆ. ಬಳಿಕ ರಾಮನಗರದ ಐಜೂರು ವೃತ್ತ ಹಾಗೂ ಚನ್ನಪಟ್ಟಣದಲ್ಲಿ ಸಾರ್ವಜನಿಕ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಪ್ರತಿ ಪಾಯಿಂಟ್‌ನಲ್ಲೂ 15ರಿಂದ 20 ನಿಮಿಷಗಳು ಮಾತ್ರ ಸಾರ್ವಜನಿಕ ದರ್ಶನಕ್ಕೆ ಅವಕಾಶ ನೀಡಲಾಗಿದೆ. ಬಳಿಕ ಮೈಸೂರು-ಬೆಂಗಳೂರು ಹಳೆ ಹೆದ್ದಾರಿಯಲ್ಲಿ ಎಸ್.ಎಂ.ಕೃಷ್ಣ ಪಾರ್ಥೀವ ಶರೀರ ಸೋಮನಹಳ್ಳಿ ತಲುಪಲಿದೆ. ಇದನ್ನೂ ಓದಿ: ಎಸ್‌ಎಂಕೆ ಅಂತಿಮ ದರ್ಶನ ಪಡೆದ ಕ್ರಿಕೆಟ್ ದಿಗ್ಗಜ ಅನಿಲ್ ಕುಂಬ್ಳೆ
ರಾಮನಗರ: ಚನ್ನಪಟ್ಟಣ ಉಪಚುನಾವಣೆ (Channapatna By Election) ಹಿನ್ನೆಲೆ ಚುನಾವಣಾಧಿಕಾರಿಗಳು (Election Officers) ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಗೋಡೌನ್‌ನಲ್ಲಿ ಶೇಖರಿಸಿಟ್ಟಿದ್ದ ಬಂಡಲ್‌ಗಟ್ಟಲೇ ಸೀರೆ, ಪಂಚೆಗಳನ್ನು ಜಪ್ತಿ ಮಾಡಿದ್ದಾರೆ.
ಬಿಡದಿಯ (Bidadi) ಹೊಸದೊಡ್ಡಿ ಗ್ರಾಮದ ಬಳಿ ಇರುವ ಗೋಡೌನ್‌ನಲ್ಲಿ ಅಕ್ರಮವಾಗಿ ಸೀರೆ ಮತ್ತು ಪಂಚೆಗಳನ್ನು ಸಂಗ್ರಹಿಸಿ ಇಡಲಾಗಿತ್ತು. ಚನ್ನಪಟ್ಟಣ ಮತದಾರರಿಗೆ ಹಂಚಲು ಶೇಖರಿಸಿಟ್ಟಿರುವ ಶಂಕೆ ವ್ಯಕ್ತವಾಗಿದೆ. ಯಾವುದೇ ದಾಖಲೆ ಇಲ್ಲದೇ ಶೇಖರಿಸಿಟ್ಟಿದ್ದ ಲಕ್ಷಾಂತರ ಮೌಲ್ಯದ ಸೀರೆ ಮತ್ತು ಪಂಚೆಯನ್ನು ಚುನಾವಣಾಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಇದನ್ನೂ ಓದಿ: ದೀಪಾವಳಿ ಹಬ್ಬಕ್ಕೆ ಸಾಗಿಸುತ್ತಿದ್ದ ‘ಈರುಳ್ಳಿ ಬಾಂಬ್’ ಸ್ಫೋಟಗೊಂಡು ಓರ್ವ ಸಾವು
ಊಟದ ವ್ಯವಸ್ಥೆ, ಚೇರ್, ಪೆಂಡಾಲ್ ಪರಿಶೀಲನೆ ನಡೆಸಿದರು. ಅಲ್ಲದೇ 50ಕ್ಕೂ ಹೆಚ್ಚು ಮಂದಿ ಸೇರಿದ್ರೆ ಚುನಾವಣಾ ನೀತಿಸಂಹಿತೆ ಉಲ್ಲಂಘನೆ ಆಗುತ್ತೆ. ಕುಟುಂಬಸ್ಥರಿಗೆ ಮಾತ್ರ ಊಟದ ವ್ಯವಸ್ಥೆ ಮಾಡಬಹುದು. ಆದರೆ ರಾಜಕೀಯ ನಾಯಕರು, ಮುಖಂಡರು ಬರುವ ಹಾಗಿಲ್ಲ. ಒಂದು ವೇಳೆ ರಾಜಕೀಯ ಮುಖಂಡರು ಬಂದ್ರೆ ಎಲ್ಲವನ್ನೂ ಸೀಜ್ ಮಾಡಿ ಕೇಸ್ ಮಾಡುವುದಾಗಿ ಎಚ್ಚರಿಕೆ ನೀಡಿದರು.
ಸದ್ಯ ಒಳಗೆ ಯಾವುದೇ ರಾಜಕೀಯ ಮುಖಂಡರು, ನಾಯಕರು ಇಲ್ಲ. ಒಂದು ಎಂಸಿಸಿ ಟೀಂ ಇಲ್ಲೇ ಇದ್ದು ಎಲ್ಲವನ್ನೂ ಪರಿಶೀಲನೆ ನಡೆಸಲಿದೆ. ನೀತಿ ಸಂಹಿತೆ ಉಲ್ಲಂಘನೆ ಆದ್ರೆ ಕಾನೂನು ರೀತಿಯ ಕ್ರಮವಹಿಸುತ್ತೇವೆ ಎಂದು ಸಹಾಯಕ ಚುನಾವಣಾ ಅಧಿಕಾರಿ ರಮೇಶ್ ಹೇಳಿದ್ದಾರೆ. ಜೊತೆಗೆ 50ಕ್ಕಿಂತ ಹೆಚ್ಚುವರಿ ಚೇರ್ ಶಾಮಿಯಾನವನ್ನು ಅಧಿಕಾರಿಗಳು ತೆರವು ಮಾಡಿಸಿದ್ದಾರೆ.
ಸದ್ಯ ಚುನಾವಣಾ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಬಿಜೆಪಿ-ಜೆಡಿಎಸ್ ನಾಯಕರು ಸಭೆ ರದ್ದು ಮಾಡಿದ್ದಾರೆ.