ರಾಮನಗರ: ತಲೆಬುರುಡೆ ಹಾಗೂ ಅಸ್ಥಿಪಂಜರಗಳನ್ನಿಟ್ಟುಕೊಂಡು ಗ್ರಾಮಸ್ಥರಿಗೆ ಹೆದರಿಸುತ್ತಿದ್ದ ವ್ಯಕ್ತಿಯನ್ನು ಬಿಡದಿ ಪೊಲೀಸರು (Bidadi Police) ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಜೋಗೂರು ದೊಡ್ಡಿ ಗ್ರಾಮದ ಬಲರಾಮ್ ಎಂದು ಗುರುತಿಸಲಾಗಿದೆ. ಆರೋಪಿ ವಾಮಾಚಾರದ ಮೂಲಕ ಗ್ರಾಮದಲ್ಲಿ ಆತಂಕ ಸೃಷ್ಟಿಸಿದ್ದ. ಪ್ರಶ್ನಿಸಿದರೆ ಗ್ರಾಮಸ್ಥರ ಮೇಲೆ ವಾಮಾಚಾರ ಮಾಡುವುದಾಗಿ ಬೆದರಿಸುತ್ತಿದ್ದ ಎಂದು ತಿಳಿದುಬಂದಿದೆ. ಇದನ್ನೂ ಓದಿ: ಕಸ ಹಾಕುವ ವಿಚಾರಕ್ಕೆ ಗಲಾಟೆ- ವೃದ್ಧೆ ಮೇಲೆ ಮಾರಣಾಂತಿಕ ಹಲ್ಲೆ
ಆರೋಪಿ ತನ್ನ ತೋಟದ ಮನೆ ಹಾಗೂ ಗ್ರಾಮದ ಸ್ಮಶಾನದಲ್ಲಿ ಅಮವಾಸ್ಯೆಯಂದು ವಿಚಿತ್ರ ಪೂಜೆಗಳನ್ನು ಮಾಡಿ ಗ್ರಾಮಸ್ಥರನ್ನು ಭಯಪಡಿಸುತ್ತಿದ್ದ. ಇದೇ ರೀತಿ ಭಾನುವಾರ ಪೂಜೆ ಮಾಡಿ ವಾಪಸ್ ಆಗುತ್ತಿದ್ದ ವೇಳೆ ಗ್ರಾಮಸ್ಥರು ಆತನನ್ನು ಹಾಗೂ ಆತನ ಸಹೋದರ ರವಿ ಎಂಬಾತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.
ನಿನ್ನೆ ನಿಧನರಾಗಿರುವ (Death) ಮಾಜಿ ಐಎಎಸ್ ಅಧಿಕಾರಿ ಹಾಗೂ ನಟ ಕೆ. ಶಿವರಾಂ (K. Shivaram) ಅವರ ಅಂತ್ಯಕ್ರಿಯೆಯನ್ನು ಅವರ ಹುಟ್ಟೂರು ಬಿಡದಿಯ ಉರುಗಹಳ್ಳಿಯಲ್ಲಿ (Urugahalli) ಮಾಡುವುದಾಗಿ ಅವರ ಕುಟುಂಬಸ್ಥರು ತಿಳಿಸಿದ್ದಾರೆ. ಶಿವರಾಂ ಅವರ ಅಂತ್ಯಕ್ರಿಯೆಯನ್ನು ಛಲವಾದಿ ಮಹಾಸಭಾದ ಜಾಗದಲ್ಲಿ ಮಾಡಬೇಕು ಎಂದು ಅವರ ಅಭಿಮಾನಿಗಳು ಒತ್ತಾಯಿಸಿದ್ದರು. ಸರಕಾರ ಅದಕ್ಕೆ ಸಮ್ಮತಿ ನೀಡದೇ ಇರುವ ಕಾರಣದಿಂದಾಗಿ ಹುಟ್ಟೂರಿಗೆ ಪಾರ್ಥೀವ ಶರೀರವನ್ನು ತಗೆದುಕೊಂಡು ಹೋಗಲಾಗುತ್ತಿದೆ.
ಬೆಳಗ್ಗೆಯಿಂದ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದ ಆವರಣದಲ್ಲಿ ಶಿವರಾಂ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಅಂದುಕೊಂಡಂತೆ ಆಗಿದ್ದರೆ, ಇಷ್ಟೊತ್ತಿಗೆ ಶಿವರಾಂ ಅವರ ಅಂತ್ಯ ಸಂಸ್ಕಾರವೂ (Cremation) ನಡೆಯಬೇಕಿತ್ತು. ಜಾಗದ ಗೊಂದಲದಿಂದಾಗಿ ಶಿವರಾಂ ಕುಟುಂಬ ಕಾಯುತ್ತಿತ್ತು.
ಕೆ. ಶಿವರಾಂ ಕುಟುಂಬ ಹಾಗೂ ಅಭಿಮಾನಿಗಳ ಬೇಡಿಕೆಗೆ ಸರ್ಕಾರ ಮಣಿಯದೇ ಇರುವ ಕಾರಣದಿಂದಾಗಿ ಬಿಡದಿಯ ತೋಟದಲ್ಲಿ ಅಂತ್ಯ ಸಂಸ್ಕಾರಕ್ಕೆ ಸಿದ್ಧತೆ ನಡೆದಿದೆ. ಶಿವರಾಂ ಅವರ ತಾಯಿಯ ಸಮಾಧಿ ಪಕ್ಕದಲ್ಲೇ ಅಂತ್ಯ ಸಂಸ್ಕಾರ ಮಾಡಲು ತೀರ್ಮಾನ ಮಾಡಲಾಗಿದೆ. ರಾಜ್ಯದ ಎಲ್ಲಾ ಛಲವಾದಿ ಸಂಘಗಳಲ್ಲಿ ನಟ ಶಿವರಾಂ ಅವರ ಪ್ರತಿಮೆ ನಿರ್ಮಿಸಲು ತೀರ್ಮಾನ ತೆಗೆದುಕೊಂಡಿದ್ದಾರೆ ಎನ್ನುವ ಮಾಹಿತಿ ಇದೆ.
ರಾಮನಗರ: ಹಣ ದುರುಪಯೋಗ ಆರೋಪ ಎದುರಿಸುತ್ತಿರುವ ಬಿಡದಿ ಪೊಲೀಸ್ ಇನ್ಸ್ ಪೆಕ್ಟರ್ ಶಂಕರ್ ನಾಯಕ್ (Bidadi Poli Inspector Shankar Nayak) ಮೇಲೆ ಮತ್ತೊಂದು ಗಂಭೀರ ಆರೋಪ ಕೇಳಿಬಂದಿದೆ. ಹಿಂದೆ ಕರ್ತವ್ಯ ನಿರ್ವಹಿಸುತ್ತಿದ್ದ ಠಾಣೆಯಲ್ಲಿ ಹಣ ದುರುಪಯೋಗ ಮಾಡಿಕೊಂಡು ಅನೇಕ ಭ್ರಷ್ಟಾಚಾರ ಮಾಡಿರುವ ಆರೋಪದಡಿ ಬಿಡದಿ ಇನ್ಸ್ ಪೆಕ್ಟರ್ ಶಂಕರ್ ನಾಯಕ್ ಮೇಲೆ ಎಫ್‍ಐಆರ್ ದಾಖಲಾಗಿದೆ.
ಇತ್ತ ಶಂಕರ್ ನಾಯಕ್ ವಿರುದ್ಧ ಮಾಗಡಿಯ ಮಾಜಿ ಶಾಸಕ ಎ.ಮಂಜುನಾಥ್ ಮತ್ತೊಂದು ಗಂಭೀರ ಆರೋಪ ಮಾಡಿದ್ದಾರೆ. ರಾಮನಗರದಲ್ಲಿ (Ramagara) ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪೊಲೀಸ್ ಇನ್ಸ್ ಪೆಕ್ಟರ್ ಆಗಿರುವ ಶಂಕರ್ ನಾಯಕ್ ಹಿಂದೆ ರೈಸ್ ಪುಲ್ಲಿಂಗ್ ಹಾಗೂ ಇಸ್ಪೀಟ್ ದಂಧೆ ಮಾಡುತ್ತಿದ್ದ. ಕುದೂರು ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗ ಅನೇಕ ಭ್ರಷ್ಟಾಚಾರ (Corruption) ಮಾಡಿದ್ದಾನೆ. ಅಮಾಯಕರನ್ನ ಹೆದರಿಸಿ ಹಣ ವಸೂಲಿ ಮಾಡಿದ್ದಾನೆ. 80 ಲಕ್ಷ ಹಣ ಕೊಟ್ಟು ಬಿಡದಿಗೆ ವರ್ಗಾವಣೆ ಮಾಡಿಸಿಕೊಂಡಿದ್ದೇನೆ ಎಂದು ಸಿಬ್ಬಂದಿಗೆ ಹೆದರಿಸ್ತಿದ್ದಾನೆ. ನಾಗರಭಾವಿ, ರಾಜರಾಜೇಶ್ವರಿ ನಗರದಲ್ಲಿ ಜಮೀನು ಮಾಡಿದ್ದಾನೆ. 15 ಕೋಟಿ ವೆಚ್ಚದಲ್ಲಿ ಬೃಹತ್ ಬಂಗಲೆ ಕಟ್ಟಿಸುತ್ತಿದ್ದಾನೆ. ಇದೀಗ ಬಿಡದಿಗೆ ಬಂದು ಇನ್ನೂ ಎರಡು ತಿಂಗಳುಗಳು ಸಹ ಕಳೆದಿಲ್ಲ ಮತ್ತೆ ತನ್ನ ಭ್ರಷ್ಟಾಚಾರ ಮುಂದುವರಿಸಿದ್ದಾನೆ ಎಂದು ಎ.ಮಂಜುನಾಥ್ ದೂರಿದ್ದಾರೆ.
ಇನ್ಸ್ ಪೆಕ್ಟರ್ ಶಂಕರ್ ನಾಯಕ್ ಮೇಲೆ ಎಫ್‍ಐಆರ್ ದಾಖಲಾಗಿದ್ರೂ ಆತ ಸ್ಟೇಷನ್ ಬಂದು ಕೆಲಸ ಮಾಡ್ತಿದ್ದಾನೆ. ಒಬ್ಬ ಅಧಿಕಾರಿ ವಿರುದ್ಧ ಎಫ್‍ಐಆರ್ ಆದ್ರೂ ಸಸ್ಪೆಂಡ್ ಮಾಡಿ ತನಿಖೆ ಮಾಡುವ ಕೆಲಸಕ್ಕೆ ಪೊಲೀಸ್ ಇಲಾಖೆ ಮುಂದಾಗಿಲ್ಲ. ಈತನಿಗೆ ರಾಜಕೀಯ ನಾಯಕರ ರಕ್ಷಣೆ ಇದೆ. ಈ ಕೂಡಲೇ ಆತನನ್ನ ಸಸ್ಪೆಂಡ್ ಮಾಡಬೇಕು. ಹಿರಿಯ ಅಧಿಕಾರಿಗಳು ಕ್ರಮ ಕೈಗೊಳ್ಳದಿದ್ದರೆ ಬಿಡದಿ ಠಾಣೆ ಎದುರು ಕೂತು ಹೋರಾಟ ಮಾಡ್ತೀನಿ. ಜೊತೆಗೆ ಲೋಕಾಯುಕ್ತಕ್ಕೆ ದೂರು ಕೊಡ್ತೀನಿ ಎಂದು ಮಾಜಿ ಶಾಸಕರು ಕಿಡಿಕಾರಿದ್ದಾರೆ.
– ಬಿಡದಿ ಯೋಜನಾ ಪ್ರಾಧಿಕಾರ ರದ್ಧು – ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವಾಗಿ ಪರಿವರ್ತನೆ
ರಾಮನಗರ: ನಮ್ಮ ಮೆಟ್ರೋವನ್ನು (Namma Metro) ಬಿಡದಿವರೆಗೂ (Bidadi) ವಿಸ್ತರಣೆ ಮಾಡಲು ಸರ್ವೇ ಮಾಡಿಸುತ್ತಿದ್ದು, ಈ ವಿಚಾರವಾಗಿ ಸಮಗ್ರ ಯೋಜನಾ ವರದಿ (DPR) ಸಿದ್ಧಪಡಿಸಲು ಸೂಚಿಸಿದ್ದೇನೆ. ಜೊತೆಗೆ ಬಿಡದಿ ಯೋಜನಾ ಪ್ರಾಧಿಕಾರ ರದ್ದು ಮಾಡಿ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವಾಗಿ ಪರಿವರ್ತಿಸಲು ಆದೇಶ ಮಾಡಲಾಗಿದೆ ಎಂದು ಬಿಡದಿಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ತಿಳಿಸಿದ್ದಾರೆ.
ಬಿಡದಿಯ ಟೊಯೋಟಾ-ಕಿರ್ಲೋಸ್ಕರ್ (Toyota Kirloskar) ಸಂಸ್ಥೆಯ ಆವರಣದಲ್ಲಿ ನೂತನವಾಗಿ ನಿರ್ಮಿಸಿರುವ ತರಬೇತಿ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದ ಅವರು ಬಿಡದಿಯ ಕೈಗಾರಿಕಾ ಪ್ರದೇಶದಲ್ಲಿ ಸುಮಾರು 1 ಲಕ್ಷಕ್ಕೂ ಅಧಿಕ ಜನರು ಕೆಲಸ ಮಾಡುತ್ತಿದ್ದಾರೆ. ಇವರ ಪ್ರಯಾಣಕ್ಕೆ ಅನುಕೂಲ ಮಾಡಿಕೊಡಲು ಮೆಟ್ರೋ ಯೋಜನೆ ಇಲ್ಲಿಯ ತನಕ ವಿಸ್ತರಿಸುವಂತೆ ಶಾಸಕರು, ಸಂಸದರು ಮನವಿ ಸಲ್ಲಿಸಿದ್ದರು. ಹೀಗಾಗಿ ಬಿಎಂಆರ್‌ಸಿಎಲ್‌ಗೆ (BMRCL) ಯೋಜನಾ ವರದಿ ಸಿದ್ದಪಡಿಸಲು ತಿಳಿಸಿದ್ದೇನೆ ಎಂದರು. ಇದನ್ನೂ ಓದಿ: ಜನರನ್ನು ಸಾಯಲು ನಾವು ಅನುಮತಿಸುವುದಿಲ್ಲ- ಮಾಲಿನ್ಯ ಕುರಿತು ರಾಜ್ಯ ಸರ್ಕಾರಗಳಿಗೆ ಸುಪ್ರೀಂ ತರಾಟೆ
ಬಿಡದಿ ಯೋಜನಾ ಪ್ರಾಧಿಕಾರವನ್ನು ತೆಗೆದು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವಾಗಿ (Greater Bengaluru Development Authority) ಮಾಡುತ್ತೇವೆ. ಬಿಡದಿಯಲ್ಲಿ ಸುಮಾರು 10,000 ಎಕರೆ ಸ್ವಾಧೀನ ಪಡಿಸಿಕೊಂಡಿರುವ ಭೂಮಿಯನ್ನು, ಯಾವುದೇ ಉದ್ದೇಶಕ್ಕೆ ಬಳಕೆ ಮಾಡಿಲ್ಲ. ಬೆಂಗಳೂರಿನಲ್ಲಿ ಸಿಗುವ ಸೌಲಭ್ಯ ಈ ಭಾಗದಲ್ಲೂ ಸಿಗಬೇಕು ಎನ್ನುವ ಉದ್ದೇಶ ನಮ್ಮದು. ಬೆಂಗಳೂರು ನಗರಾಭಿವೃದ್ಧಿ ಸಚಿವನಾಗಿ ಈ ಎರಡು ಯೋಜನೆಗಳನ್ನು ಈ ಶುಭದಿನದಂದು ಘೋಷಿಸುತ್ತೇನೆ. ಈ ಯೋಜನೆಗಳ ಮೂಲಕ ಈ ಭಾಗ ಅಭಿವೃದ್ಧಿ ಆಗಬೇಕು, ಈ ಭಾಗದ ಜನರ ಆಸ್ತಿ ಮೌಲ್ಯ ಹೆಚ್ಚಾಗಬೇಕು. ಈ ಭಾಗದ ಆಸ್ಪತ್ರೆ, ವಿದ್ಯಾಸಂಸ್ಥೆಗಳು, ಕಾರ್ಮಿಕರು, ಅವರ ಮಕ್ಕಳು ಹೀಗೆ ಎಲ್ಲರಿಗೂ ಹೊಸ ಶಕ್ತಿ ತುಂಬಲು ಈ ಕ್ರಮ ತೆಗೆದುಕೊಳ್ಳುತ್ತಿದ್ದೇವೆ ಎಂದು ಹೇಳಿದರು.
ಟೊಯೋಟಾ ಸಂಸ್ಥೆ ರಾಮನಗರ (Ramangara) ಜಿಲ್ಲೆಯ ಸಾಕಷ್ಟು ಜನರಿಗೆ ಕೆಲಸ ಕೊಟ್ಟಿದೆ. ಆದರೆ ಯೂನಿಯನ್ ಚಟುವಟಿಕೆ ಮೂಲಕ ಕೆಲವರು ಗೊಂದಲ ಮೂಡಿಸಿದ್ದರು. ಯಾವುದೇ ಚಟುವಟಿಕೆ ಅಭಿವೃದ್ಧಿಗೆ ಮಾರಕ ಆಗಬಾರದು. ಒಂದು ಸಂಸ್ಥೆ ಆರಂಭಿಸಿ, ಬಂಡವಾಳ ಹೂಡಿಕೆ ಮಾಡಬೇಕಾದರೆ ಅನೇಕ ಸರ್ಕಾರದ ಕಾನೂನು ಮುಂದಿಟ್ಟುಕೊಂಡು ಯೂನಿಯನ್‌ಗಳು ಅಡ್ಡಿ ಬರುತ್ತವೆ. ಇದರಿಂದ ಅಭಿವೃದ್ಧಿಗೆ ಮಾರಕವಾಗುತ್ತದೆ. ನೆರೆಯ ಕೇರಳದಲ್ಲಿ (Kerala) ಯೂನಿಯನ್‌ಗಳು ಹೆಚ್ಚಾದ ಪರಿಣಾಮ ಅಲ್ಲಿ ಹೆಚ್ಚಿನ ಬುದ್ಧಿವಂತರು ಇದ್ದರೂ ಯಾರೂ ಬಂಡವಾಳ ಹೂಡಿಕೆ ಮಾಡಲು ಮುಂದಾಗುವುದಿಲ್ಲ. ನಮ್ಮ ರಾಜ್ಯದಲ್ಲಿ ಬಂಡವಾಳ ವಿಸ್ತರಣೆ ಮಾಡಿ ಹಚ್ಚಿನ ಜನರಿಗೆ ಕೆಲಸ ನೀಡಲು ಟೊಯೋಟಾ ಸಂಸ್ಥೆ ಮುಂದಾಗಿದೆ. ಟೊಯೋಟಾ ಸಂಸ್ಥೆಯವರು ಮುಂದಿನ ದಿನಗಳಲ್ಲಿ ಶಾಲೆಗಳ ಜೊತೆಗೆ ಎಂಜಿನಿಯರಿಂಗ್ ಕಾಲೇಜುಗಳ ಅಭಿವೃದ್ಧಿಯತ್ತ ಗಮನಹರಿಸಬೇಕು ಎಂದು ಡಿಕೆಶಿ ಮನವಿ ಮಾಡಿದರು.
ರಾಮನಗರ: ಟೋಲ್ (Toll) ವಿಚಾರಕ್ಕೆ ಸಿಬ್ಬಂದಿ ಹಾಗೂ ಯುವಕರ ಮಧ್ಯೆ ಗಲಾಟೆ ನಡೆದು ಕೊಲೆಯಲ್ಲಿ (Murder) ಅಂತ್ಯವಾದ ಘಟನೆ ಹೆಜ್ಜಾಲ ಸಮೀಪ ನಡೆದಿದೆ.
ಪವನ್ (30) ಕೊಲೆಯಾದ ಯುವಕ. ಈತ ಬಿಡದಿ (Bidadi) ಬಳಿಯ ಶೇಷಗಿರಿ ಟೋಲ್‌ನಲ್ಲಿ ಕೆಲಸ ಮಾಡುತ್ತಿದ್ದ. ಭಾನುವಾರ ರಾತ್ರಿ ಟೋಲ್ ಕಟ್ಟುವ ವಿಚಾರಕ್ಕೆ ಬೆಂಗಳೂರು (Bengaluru) ಮೂಲದ ಯುವಕರು ಗಲಾಟೆ ಮಾಡಿ ಹೋಗಿದ್ದರು. ಕೆಲಸ ಮುಗಿಸಿ ಮನೆಗೆ ಹೋಗುವ ಸಂದರ್ಭದಲ್ಲಿ ಹಾಕಿ ಸ್ಟಿಕ್‌ನಿಂದ ಆತನ ತಲೆಗೆ ಹೊಡೆದು ಹತ್ಯೆ ಮಾಡಿದ್ದಾರೆ. ಇದನ್ನೂ ಓದಿ: ಇದು ನಮ್ಮ ಸರ್ಕಾರ, ಹಿಂದೂಗಳು ಏನೂ ಮಾಡಲು ಸಾಧ್ಯವಿಲ್ಲ- ಬರ್ತ್ ಡೇ ಆಚರಿಸಿದ್ದಕ್ಕೆ ಚಾಕು ಇರಿತ
ಮೃತ ಪವನ್ ಬೆಂಗಳೂರು ದಕ್ಷಿಣ ತಾಲೂಕಿನ ತಾವರೆಕೆರೆಯ (Tavarekere) ಸಿಕ್ಕೆಪಾಳ್ಯ ನಿವಾಸಿಯಾಗಿದ್ದ. ಹತ್ಯೆಗೂ ಮುನ್ನ ಭಾನುವಾರ ರಾತ್ರಿ 10 ಗಂಟೆ ಸುಮಾರಿಗೆ ಟೋಲ್ ಹಣ ಕಟ್ಟಲ್ಲ ಎಂದು ಬೆಂಗಳೂರು ಮೂಲದ ಯುವಕರು ಪವನ್ ಜೊತೆ ಗಲಾಟೆ ನಡೆಸಿದ್ದರು. ಗಲಾಟೆ ನಡೆಸಿರುವ ದೃಶ್ಯ ಸಿಸಿಟಿವಿಯಲ್ಲಿ (CCTV) ಸೆರೆಯಾಗಿದೆ. ಕೆಲಸ ಮುಗಿಸಿ ಮನೆಗೆ ಹೊರಟ ಪವನ್‌ನನ್ನು ಟೋಲ್‌ನಿಂದ ಫಾಲೋ ಮಾಡಿಕೊಂಡು ಹೋಗಿದ್ದಾರೆ. ಬಳಿಕ ಹೆಜ್ಜಾಲ ಸಮೀಪ ಹಾಕಿ ಸ್ಟಿಕ್‌ನಿಂದ ತಲೆಗೆ ಹೊಡೆದು ಕೊಲೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಇದನ್ನೂ ಓದಿ: ಯುವತಿಯ ಶವ ಕೆರೆಯಲ್ಲಿ ಪತ್ತೆ- ಆತ್ಮಹತ್ಯೆ ಶಂಕೆ
ಘಟನೆ ನಡೆದ ಸ್ಥಳಕ್ಕೆ ಬಿಡದಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಬೆಂಗಳೂರಿನ ರಾಜರಾಜೇಶ್ವರಿ ಆಸ್ಪತ್ರೆಗೆ ರವಾನಿಸಲಾಗಿದೆ. ಅಲ್ಲದೇ ಹತ್ಯೆ ಮಾಡಿ ಪರಾರಿಯಾದ ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ. ಇದನ್ನೂ ಓದಿ: ಎಣ್ಣೆ ಹೊಡಿಯೋ ವಿಚಾರಕ್ಕೆ ಗಲಾಟೆ- ಬಾರ್ ಕ್ಯಾಶಿಯರ್ ಹತ್ಯೆ
ರಾಮನಗರ: ಶಿರಾದಲ್ಲಿ ಜೆಡಿಎಸ್ ಮುಳುಗಿತು ಅನ್ನುತ್ತಿದ್ದರು. ಆದರೆ ಅವರಿಗೆ ಜನರು ಉತ್ತರ ಕೊಟ್ಟಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹರ್ಷ ವ್ಯಕ್ತಪಡಿಸಿದರು.
ರಾಜ್ಯದ ಬಿಜಾಪುರ, ರಾಯಚೂರು, ಶಿರಾದಲ್ಲಿ ಜೆಡಿಎಸ್ ಮೇಲುಗೈ ಸಾಧಿಸಿದೆ. ಈ ಹಿನ್ನೆಲೆ ಮಾಧ್ಯಮದೊಂದಿಗೆ ಮಾತನಾಡಿದ ಅವರು, ರಾಜ್ಯದ ಬಿಜಾಪುರ, ರಾಯಚೂರು, ಶಿರಾದಲ್ಲಿಯೂ ನಮ್ಮವರು ಗೆದ್ದಿದ್ದಾರೆ. ಶಿರಾದಲ್ಲಿ ಜೆಡಿಎಸ್ ಮುಳುಗಿತು ಅನ್ನುತ್ತಿದ್ದರು. ಜನ ಇವತ್ತು ಅಲ್ಲಿಯೂ ಉತ್ತರ ನೀಡಿದ್ದಾರೆ. ಉಪಚುನಾವಣೆಗಳು ಬೇರೆ, ಸಾರ್ವತ್ರಿಕ ಚುನಾವಣೆಗಳು ಬೇರೆ. 2023ರಲ್ಲಿ ಜೆಡಿಎಸ್ ಏನು ಎಂದು ಜನರೇ ಉತ್ತರ ಕೊಡುತ್ತಾರೆ. ಕಾಂಗ್ರೆಸ್ ಅವರು ಮೇಲುಗೈ ಸಾಧಿಸಲು ಸಾಧ್ಯವಿಲ್ಲ ಎಂದು ಸವಾಲು ಹಾಕಿದರು. ಇದನ್ನೂ ಓದಿ: ಪಾದಯಾತ್ರೆಗೆ ಭಾಗವಹಿಸಿ ಏನು ಮಾಡಲಿ ಹೇಳಿ: ಡಿಕೆಶಿಗೆ ಟಾಂಗ್ ಕೊಟ್ಟ HDK
ಚಿಕ್ಕಮಗಳೂರಿನಲ್ಲಿ ನಮ್ಮನ್ನು ಬಿಟ್ಟು ಬೇರೆಯವರು ಅಧಿಕಾರ ಮಾಡಲು ಆಗಲ್ಲ. ಅಲ್ಲಿನ ನಗರಸಭೆ ನಮ್ಮ ಬೆಂಬಲ ಇದ್ದವರಿಗೆ ಅಧಿಕಾರ. ರಾಜ್ಯದ ಹಲವಾರು ಕ್ಷೇತ್ರದಲ್ಲಿ ನಮ್ಮ ಬೆಂಬಲ ಬೇಕೆಬೇಕು. ನಾವು ಆರ್ಥಿಕವಾಗಿ ಶಕ್ತಿ ತುಂಬಿಲ್ಲ. ಕಾರ್ಯಕರ್ತರೇ ಹೋರಾಟ ಮಾಡಿದ್ದಾರೆ. ಕರಾವಳಿಯಲ್ಲಿಯೂ ನಮಗೆ ಒಂದು ಸ್ಥಾನ ಸಿಕ್ಕಿದೆ. ಅಲ್ಲಿ ನಮ್ಮ ಬೇಸ್ ಇರಲಿಲ್ಲ ಎಂದು ವಿವರಿಸಿದರು.
2023 ನಮ್ಮ ಪಕ್ಷದ ಸಂಘಟನಾ ವರ್ಷವಾಗಿದೆ. ರಾಜಕೀಯ ವಿಶ್ಲೇಷಕರ ನಿರೀಕ್ಷೆ ಬದಲಾಗಲಿದೆ. ಸಂಕ್ರಾಂತಿಯಿಂದ ನಾವು ಒಂದು ದಿನವೂ ಬಿಡುವು ತೆಗೆದುಕೊಳ್ಳಲ್ಲ. 123 ಗುರಿ ತಲುಪಲು ಸಂಘಟನೆ ಮಾಡ್ತೇವೆ. ಯಾರು ಎಷ್ಟೇ ಲಘುವಾಗಿ ಮಾತನಾಡಲಿ, ನಮ್ಮದೇ ಆದ ರೀತಿಯಲ್ಲಿ ಸಂಘಟನೆ ಪ್ರಾರಂಭಿಸುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಬಿಡದಿ ಪುರಸಭೆ ಚುನಾವಣೆ ಫಲಿತಾಂಶದಲ್ಲಿ ಜೆಡಿಎಸ್ ಗೆ ಭರ್ಜರಿ ಗೆಲುವು ಸಿಕ್ಕಿದೆ. ಆದರೆ ಈ ಫಲಿತಾಂಶ ನನಗೆ ದೊಡ್ಡಮಟ್ಟದ ಅಚ್ಚರಿ ಫಲಿತಾಂಶ ಅಲ್ಲ. ನನಗೆ 18-20 ಸ್ಥಾನಗಳಲ್ಲಿ ಗೆಲುವು ಆಗಲಿದೆ ಅಂದುಕೊಂಡಿದ್ದೆ. ಕೆಲವು ಓವರ್ ಕಾನ್ಫಿಡೆನ್ಸ್ ನಲ್ಲೂ ಹೋಗಿದೆ. ಬಿಡದಿಯ ಮತದಾರರು ದುಡಿಮೆಗೆ ಆರ್ಶೀವಾದ ಮಾಡಿದ್ದಾರೆ. ಬಿಡದಿ ನನಗೆ ರಾಜಕೀಯ ಜನ್ಮ ಕೊಟ್ಟ ಸ್ಥಳ ಎಂದು ಬಿಡದಿಯ ಮತದಾರರಿಗೆ ಅಭಿನಂದನೆ ತಿಳಿಸಿದರು. ಇದನ್ನೂ ಓದಿ: ಸರ್ಕಾರಿ ನಿಯಂತ್ರಣದಿಂದ ದೇಗುಲಗಳಿಗೆ ಸ್ವಾತಂತ್ರ್ಯ: ಸಿಎಂ ನಿಲುವು ಸ್ವಾಗತಿಸಿದ ಮಂತ್ರಾಲಯ ಶ್ರೀ
ನಾನು ಎರಡೂ ದಿನ ಶಾಸಕರ ಜೊತೆ ಪ್ರಚಾರ ಮಾಡಿದ್ದೆ. ಮುಂದಿನ 2023ರ ಚುನಾವಣೆಗೆ ಈ ಫಲಿತಾಂಶ ನನಗೆ ಮಾನಸಿಕವಾಗಿ ಶಕ್ತಿ ತುಂಬಿದೆ. ಕಾಂಗ್ರೆಸ್ ಅವರು ದೊಡ್ಡಮಟ್ಟದಲ್ಲಿ ಬಿಡದಿ ಹಿಡಿಯಲು ಹೊರಟ್ಟಿದ್ದರು. ಆದರೆ ಬಿಡದಿಯ ಮತದಾರರು ಆರ್ಶೀವಾದ ಮಾಡಿದ್ದಾರೆ ಎಂದು ಸಂತೋಷ ವ್ಯಕ್ತಪಡಿಸಿದರು.
– ನಾನು ಕುಮಾರಣ್ಣನಿಗೆ ಚಾಕಲೇಟ್ ಕೊಟ್ಟರೆ ಜನ ನನಗೆ ಬತಾಸ್ ಕೊಡ್ತಾರೆ
ಬಿಡದಿ: 50 ಕೋಟಿ ಕೊಟ್ಟರೆ ನಾನು ಇವತ್ತೇ ಜೈಲಿಗೆ ಹೋಗ್ತೀನಿ ಎಂದು ಮಾಜಿ ಶಾಸಕ ಹೆಚ್.ಸಿ.ಬಾಲಕೃಷ್ಣ ಆರೋಪಕ್ಕೆ ಮಾಗಡಿ ಹಾಲಿ ಜೆಡಿಎಸ್ ಶಾಸಕ ಎ.ಮಂಜು ತಿರುಗೇಟು ನೀಡಿದ್ದಾರೆ.
ಬಾಲಕೃಷ್ಣ ಅವರ ಆರೋಪಕ್ಕೆ ಮಾಧ್ಯಮಗಳೊಂದಿಗೆ ಮಾತನಾಡಿದ ಮಂಜು ಅವರು, ನಾನು ಮಾತನಾಡಿದರೆ ಅವರ ಪೂರ್ವಜರಷ್ಟು ಮಾತನಾಡ್ತೇನೆ. ಇವರ ರೀತಿ ಹಲ್ಕಟ್ ರಾಜಕೀಯ ನಾನು ಮಾಡಲ್ಲ. 10 ಕೋಟಿ ಹಣ ಪಡೆದು ಮಾಜಿ ಸಿಎಂ ಕುಮಾರಸ್ವಾಮಿ ಮತ್ತು ಮಾಜಿ ಪ್ರಧಾನಿ ದೇವೇಗೌಡರ ಬೆನ್ನಿಗೆ ಚೂರಿ ಹಾಕಿ ಹೋಗಿದ್ದಾರೆ. ಇವತ್ತು ನನ್ನ ಬಗ್ಗೆ ಇಲ್ಲಸಲ್ಲದನ್ನು ಮಾತನಾಡ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ಮಕ್ಕಳಿಗೆ ಐಸ್ ಕ್ರೀಂ ನೀಡದ್ದಕ್ಕೆ ಅಂಗಡಿ ಮೇಲೆ ದಾಳಿ ಮಾಡಿದ ತಂದೆ
ಡಿ.ಕೆ.ಶಿವಕುಮಾರ್ ಅವರಿಗೆ, ಡಿ.ಕೆ.ಸುರೇಶ್ ಅವರಿಗೆ ನನ್ನಿಂದ ಸಹಾಯ ಆಗಿದೆ. ಆದರೆ ಅವರಿಂದ ನನಗೇನು ಸಹಾಯ ಆಗಿಲ್ಲ. ತೆಗೆದುಕೊಂಡಿದ್ದ ಹಣಕ್ಕೆ ಬಡ್ಡಿ ಸಮೇತ ವಾಪಸ್ ನೀಡಿದ್ದೇನೆ. ಅವರು ನನ್ನ ಪರವಾಗಿ ಇದ್ದಿದ್ದನ್ನ ಸಾಬೀತು ಮಾಡಲಿ. ನಾನು ರಾಜಕೀಯದಿಂದ ನಿವೃತ್ತಿಯಾಗುತ್ತೇನೆ. ಇವರು ಕುಮಾರಸ್ವಾಮಿ ಅವರಿಗೆ ಚಾಕಲೇಟ್ ಕೊಟ್ಟು ಐಸ್‍ಕ್ರೀಂ ನೆಕ್ಕಿ ಹೋದರು. ನಾನು ಕುಮಾರಣ್ಣನಿಗೆ ಚಾಕಲೇಟ್ ಕೊಟ್ಟರೆ ಜನ ನನಗೆ ಬತಾಸ್ ಕೊಡ್ತಾರೆ. ಅದು ನನಗೆ ಗೊತ್ತಿದೆ. ಹಾಗಾಗಿ ನಾನು ಕುಮಾರಣ್ಣನ ಜೊತೆಗೆ ಇರುತ್ತೇನೆ ಎಂದರು.
ಬೆಂಗಳೂರು: ಬಿಜೆಪಿ ಹೈಕಮಾಂಡ್ ನಾಗ್ಪುರದಲ್ಲಿದೆ. ಕಾಂಗ್ರೆಸ್ ಹೈಕಮಾಂಡ್ ದೆಹಲಿಯಲ್ಲಿ ಇದೆ. ಜೆಡಿಎಸ್ ಹೈಕಮಾಂಡ್ ಬಿಡದಿಯಲ್ಲಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು.
ಬಿಡದಿಯ ತೋಟದಲ್ಲಿ ನಡೆಯುತ್ತಿರುವ ಜನತಾ ಪರ್ವ 1.O ಮಿಷನ್ 123 ಕಾರ್ಯಾಗಾರದ ಆರನೇ ದಿನ ಎಸ್ ಸಿ, ಎಸ್ ಟಿ ಹಾಗೂ ಹಿಂದುಳಿದ ವರ್ಗದ ಪ್ರತಿನಿಧಿಗಳನ್ನು ಉದ್ದೇಶಿಸಿ ಮಾತನಾಡಿದರು ಅವರು, ನಿಮ್ಮ ಕೂಗಳತೆಯಲ್ಲಿ ನಿಮ್ಮ ಪಕ್ಷದ ವರಿಷ್ಠ ನಾಯಕರು ಇದ್ದಾರೆ. ಕಾರ್ಯಕರ್ತರು ಹೈಕಮಾಂಡ್ ನೋಡಲು ವಿಮಾನ ಹತ್ತಿ ದೆಹಲಿಗೆ ಹೋಗಬೇಕಿಲ್ಲ. ಸಾವಿರಾರು ರೂಪಾಯಿ ಖರ್ಚು ಮಾಡಬೇಕಿಲ್ಲ ಎಂದು ಹೇಳಿದರು.
ರಾಜಕೀಯದ ಬಗ್ಗೆ ಜಿಗುಪ್ಸೆ ಬಂದಿತ್ತು!: ಕಾಂಗ್ರೆಸ್ ಜತೆ ಮೈತ್ರಿ ಸರ್ಕಾರ ಬಿದ್ದ ಮೇಲೆ ನಾನು ಈ ರಾಜಕೀಯದ ಬಗ್ಗೆ ಜಿಗುಪ್ಸೆಗೊಂಡಿದ್ದೆ. ಪರಸ್ಪರ ಕಾಲೆಳೆಯುವ ಪ್ರವೃತ್ತಿ ಕಂಡು ನನಗೆ ರಾಜಕೀಯ ಸಾಕೆನಿಸಿತ್ತು. ಬಿಡದಿಯ ತೋಟ ಸೇರಿಕೊಂಡೆ. ನಂಗೆ ನೆಮ್ಮದಿ ಬೇಕಿತ್ತು. ಸಮ್ಮಿಶ್ರ ಸರ್ಕಾರ ಹೋಗುತ್ತೆ ಅಂತ ನಂಗೆ ಗೊತ್ತಿತ್ತು. ಜನತೆಯ ಕೆಲಸ ಮಾಡಲು ಹೆಜ್ಜೆ ಹೆಜ್ಜೆಗೂ ಅಡ್ಡಿಗಳು, ಒತ್ತಡಗಳು. ಯಾವುದೇ ಸಂದರ್ಭದಲ್ಲೂ ಸರ್ಕಾರ ಹೋಗುತ್ತದೆ ಅಂತ ಗೊತ್ತಿದ್ದೂ ನಾನು ಅಮೆರಿಕಕ್ಕೆ ಹೋದೆ. ಅಂತಹ ಹಂಗಿನ ಸರ್ಕಾರ ನನಗೆ ಬೇಕಿರಲಿಲ್ಲ. ಮುಂದಿನ ಸಲ ಇದೇ ರೀತಿಯ ಅತಂತ್ರ ಸ್ಥಿತಿ ಬಂದರೆ ಮುಂದೆಂದೂ ನಾನು ಮತ ಕೇಳಲು ಬರುವುದಿಲ್ಲ ಎಂದು ತಿಳಿಸಿದರು.
ಸರ್ಕಾರ ಹೋದ ಮೇಲೆ ನಾನು ಬಿಡದಿ ತೋಟಕ್ಕೆ ಬಂದ ಮೇಲೆ ದಿನವೂ ಕಾರ್ಯಕರ್ತರು ಬರುತ್ತಿದ್ದರು. ಪಕ್ಷದ ಮೇಲಿನ ಅವರ ಪ್ರೀತಿ, ಬದ್ಧತೆ ನನ್ನ ರಾಜಕೀಯ ನಿವೃತ್ತಿಯ ನಿರ್ಧಾರವನ್ನು ಬದಲಿಸಿತು. ಬಿಡದಿಯಲ್ಲಿ ನೀವು ಕೂತಿರುವ ಈ ಜಾಗ ಹಾಗೂ ಈ ತೋಟ ನನ್ನ ಪಾಲಿನ ಪುಣ್ಯಭೂಮಿ. ನನ್ನ ಕಷ್ಟದ ದುಡಿಮೆಯಿಂದ 1983ರಲ್ಲಿ ಈ ಭೂಮಿಯನ್ನು ಖರೀದಿ ಮಾಡಿದೆ. ಕೃಷಿ ಮಾಡುವ ಉದ್ದೇಶ ನನಗಿತ್ತು. ಆದರೆ ಈ ಭೂಮಿ ನನ್ನನ್ನು ರಾಜಕೀಯಕ್ಕೆ ಎಳೆದು ತಂದಿತು. ಒಂದು ದಿನ ನನ್ನನ್ನು ದೊಡ್ಡ ಸಂಖ್ಯೆಯ ಕಾರ್ಯಕರ್ತರು ತೋಟಕ್ಕೆ ಬಂದರು. ಅವರು ಒತ್ತಾಯ ಮಾಡಿ ಹೀಗೆ ಹೇಳಿದರು. ನೀವು ಬಿಡದಿಯಲ್ಲಿ ಭೂಮಿ ಹೊಂದಿದ್ದೀರಿ. ಆದರೆ, ರಾಮನಗರದಲ್ಲಿ ಜೆಡಿಎಸ್ 3ನೇ ಸ್ಥಾನದಲ್ಲಿದೆ. ಪಕ್ಷಕ್ಕಾಗಿ ತಾವು ಕೆಲಸ ಮಾಡಬೇಕು. ನಮಗೆ ಮಾರ್ಗದರ್ಶನ ಮಾಡಬೇಕು ಎಂದಾಗ ನಾನು ಅವರ ಒತ್ತಾಯಕ್ಕೆ ಮಣಿದು ರಾಜಕೀಯಕ್ಕೆ ಬರಬೇಕಾಯಿತು. ಆಗ ತಂದೆಯವರು ಚನ್ನಪಟ್ಟಣದಲ್ಲಿ ಸ್ಪರ್ಧೆ ಮಾಡಬೇಕು ಎಂದು ವರದೇಗೌಡರು ಭಾರೀ ಒತ್ತಡ ಹೇರಿದರು. ಆದರೆ ನಾನು ರಾಮನಗರದಲ್ಲಿ ಕಣಕ್ಕೆ ಇಳಿಯುವಂತೆ ಮನವಿ ಮಾಡಿದೆ. ಆಗ ದೇವೇಗೌಡರು ರಾಮನಗರದಿಂದ ಸ್ಪರ್ಧಿಸಿ ಗೆದ್ದು ಸಿಎಂ ಆದರು. ಒಂದು ವೇಳೆ ಆ ಘಟನೆ ನಡೆದಿದ್ದರೆ ನಾನಿಂದು ಇಲ್ಲಿ ನಿಂತು ಮಾತನಾಡುವ ಅವಕಾಶವೇ ಇರುತ್ತಿರಲಿಲ್ಲ ಅಂತ ಇತಿಹಾಸ ಮೆಲುಕು ಹಾಕಿದರು. ಇದನ್ನೂ ಓದಿ: 1 ಲಕ್ಷ ರೂಪಾಯಿ ಎಗರಿಸಿದ ಕೋತಿ- ಹಣ ಕಳೆದುಕೊಂಡವನಿಗೆ ಸಂಕಟ
ದೇವರ ಪ್ರೇರಣೆಯಿಂದ ಖರೀದಿ: ದೇವರ ಪ್ರೇರಣೆಯಿಂದ ನಾನು ಈ ಭೂಮಿ ಖರೀದಿ ಮಾಡಿದೆ ಎಂದು ಮತ್ತೆ ಹೇಳ ಬಯಸುತ್ತೇನೆ. ಅದೇ ನಂಬಿಕೆ, ಪ್ರೇರಣೆಯಿಂದ ಇಲ್ಲೇ ಈ ಕಾರ್ಯಗಾರ ನಡೆಯುತ್ತಿದೆ. ಪಕ್ಷದ ಕಚೇರಿಯಲ್ಲಿ ಅಥವಾ ರೆಸಾರ್ಟ್ ನಲ್ಲಿ ಮಾಡಬಹುದಿತ್ತು. ನಾನು ಹಾಗೆ ಮಾಡದೆ ಈ ಮಣ್ಣಿನ ಮಡಿಲಲ್ಲಿ ಈ ಕಾರ್ಯಕ್ರಮ ಮಾಡಲು ತೀರ್ಮಾನ ಮಾಡಿದೆ. ಈ ಕಾರ್ಯಾಗಾರ ಸ್ಥಳದ ಈ ಎರಡೂವರೆ ಎಕರೆ ಜಾಗದಲ್ಲಿ ನನ್ನ ತಂದೆ ತಾಯಿ ಹೆಸರಿನಲ್ಲಿ ಶಾಶ್ವತವಾದ ಒಂದು ಅನಾಥಾಶ್ರಮ, ಒಂದು ದೇಗುಲ ಹಾಗೂ ಒಂದು ಛತ್ರ ಕಟ್ಟುವ ಉದ್ದೇಶ ನನ್ನದು. ಅದನ್ನು ಮಾಡಲು ಈ ಕಾರ್ಯಕ್ರಮದ ಜಾಗ ಮೀಸಲು ಇಟ್ಟಿದ್ದೇನೆ. ಇದು ಎಲ್ಲರಿಗೂ ಮುಕ್ತವಾಗಿರುತ್ತದೆ ಎಂದು ತಿಳಿಸಿದರು.
ಇಂತಹ ಜಾಗದಿಂದಲೇ ಪಕ್ಷ ಮತ್ತೆ ಪುಟಿದೇಳುತ್ತಿದೆ. ಈಗ ಎಲ್ಲವೂ ಶುಭಾರಂಭ ಆಗಿದೆ. ಇನ್ನು ಮುಂದುವರೆಸಿಕೊಂಡು ಹೋಗಬೇಕಿದೆ. ಅದನ್ನು ಎಲ್ಲರೂ ಚಾಚೂ ತಪ್ಪದೇ ಮಾಡಬೇಕಿದೆ. ಮುಂದೆ ನಾನು ಮುಖ್ಯಮಂತ್ರಿ ಆಗುವ ಉದ್ದೇಶಕ್ಕೆ ಮಾಡುತ್ತಿರುವ ಕಾರ್ಯಾಗಾರ ಇದಲ್ಲ. ರಾಜ್ಯದ ಭವಿಷ್ಯಕ್ಕಾಗಿ ಇದು. ಎಲ್ಲರೂ ಯೋಧರಂತೆ ಕೆಲಸ ಮಾಡಬೇಕು. ರಾಷ್ಟ್ರೀಯ ಪಕ್ಷಗಳು ದಲಿತ-ಹಿಂದುಳಿದ ಜನರಿಗೆ ಮಾಡಿದ್ದೇನು? ಒಮ್ಮೆ ಆತ್ಮಾವಲೋಕನ ಮಾಡಿಕೊಳ್ಳಬೇಕು. ಬಿಜೆಪಿ ಸರ್ಕಾರ ಹಾಗೂ ಸಿದ್ದರಾಮಯ್ಯ ಸರ್ಕಾರ ಈ ಜನರಿಗೆ ಕೊಟ್ಟಿದ್ದೇನೂ ಇಲ್ಲ. ಐದು ವರ್ಷ ಸಿಎಂ ಆಗಿದ್ದ ಅವರು ಎಷ್ಟೆಲ್ಲ ಮಾಡಬೇಕಿತ್ತು, ಆದರೆ ಮಾಡಲಿಲ್ಲ. ಸಿದ್ದರಾಮಯ್ಯ ಅವರು 85,000 ಕೋಟಿ ರೂಪಾಯಿ ಹಣವನ್ನು ದಲಿತ ಸಮುದಾಯದ ಉದ್ಧಾರಕ್ಕೆ ಕೊಟ್ಟಿದ್ದೇವೆ ಎಂದು ಹೇಳಿದ್ದರು. ಆದರೆ ಆಗಿದೆಯಾ? ಯಾರಿಗೆ ಹೋಯಿತು ಆ ದುಡ್ಡು? ಗಂಗಾ ಕಲ್ಯಾಣ ಯೋಜನೆಯಲ್ಲೂ 2016ರಿಂದ ಯಾರಿಗೂ ಉಪಯೋಗವಾಗಿಲ್ಲ. ನಿಜವಾದ ಒಬ್ಬ ಫಲಾನುಭವಿಯನ್ನೂ ಗುರುತಿಸಿಲ್ಲ ಅಂತ ಕಿಡಿಕಾರಿದರು.
ಇನ್ನು ನರೇಂದ್ರ ಮೋದಿ ಅವರು ಸ್ವತಂತ್ರವಾಗಿ ಕೆಲಸ ಮಾಡಲು ಆಗುತ್ತಿಲ್ಲ. ಎಲ್ಲವನ್ನೂ ಆರೆಸ್ಸೆಸ್ ನಿರ್ಧಾರ ಮಾಡುತ್ತದೆ. ಸೂಪರ್ ಹೈಕಮಾಂಡ್ ಆಗಿ ಆರೆಸ್ಸೆಸ್ ಕೆಲಸ ಮಾಡುತ್ತಿದೆ ಅಂತ ಆರ್.ಎಸ್.ಎಸ್. ವಿರುದ್ದವೂ ಆಕ್ರೋಶ ಹೊರ ಹಾಕಿದರು.
ಬಿಡದಿ: ಪಕ್ಷದಲ್ಲಿ ಬೆಳೆದು ಬಿಟ್ಟು ಹೊರಹೋಗಿ ತೆಗಳಿದರೆ ಸುಮ್ಮನಿರಲಾಗದು. ಪಕ್ಷದ ಚೌಕಟ್ಟಿನಲ್ಲಿ ಚರ್ಚೆ ಮಾಡಲು ನಾನು ತಯಾರಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು.
ಬಿಡದಿಯ ತೋಟದಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಅವರು, ಕೆಲ ಶಾಸಕರ ಬಹಿರಂಗ ಹೇಳಿಕೆಗಳಿಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿ, ಪಕ್ಷ ತೊರೆಯುವ ಬಗ್ಗೆ ಕೆಲವರು ಅನಗತ್ಯವಾಗಿ ಗೊಂದಲದ ಹೇಳಿಕೆಗಳನ್ನು ಕೊಡುತ್ತಿದ್ದಾರೆ ಎಂದರು.
ಅವರೇ ಸ್ವತಃ ಗೊಂದಲ ಸೃಷ್ಟಿಸಿಕೊಂಡು ಬಹಿರಂಗ ಹೇಳಿಕೆ ಕೊಡುವುದು ಯಾಕೆ? ನಾಲ್ಕು ಗೋಡೆಗಳ ಮಧ್ಯೆ ಕುಳಿತು ಚರ್ಚಿಸಬಹುದಾದ ವಿಚಾರಗಳನ್ನು ಹೊರಗೆ ಹೇಳುವುದು ಸರಿಯಲ್ಲ. ಏನೇ ಸಮಸ್ಯೆ, ಗೊಂದಲ ಇದ್ದರೂ ಬರಲಿ. ಚರ್ಚೆ ಮಾಡಲು ನಾನು ಸಿದ್ಧ ಇದ್ದೇನೆ. ಯಾರೂ ಪಕ್ಷದ ಸಂಘಟನೆಗೆ ಹೊಡೆತ ಬೀಳುವಂತೆ ನಡೆದುಕೊಳ್ಳಬಾರದು ಎಂದು ಅವರು ಹೇಳಿದರು.
ಯಾರೇ ಶಾಸಕರು ಬಂದರು ಮುಕ್ತವಾಗಿ ನಾನು ಯಾವಾಗಲೂ ಮಾತನಾಡುತ್ತೇನೆ. ಅವರ ಸಮಸ್ಯೆಗಳನ್ನು ಬಗೆಹರಿಸಲು ಸಿದ್ಧನಿದ್ದೇನೆ. ನನ್ನ ಮನೆ ಬಾಗಿಲು ಸದಾ ತೆರೆದಿರುತ್ತದೆ. ಆದರೆ, ಮೂರ್ನಾಲ್ಕು ಜನ ಪಕ್ಷ ತೊರೆಯುವ ಮಾತನ್ನಾಡಿದ್ದಾರೆ. ಅವರ ಕ್ಷೇತ್ರಗಳಲ್ಲಿ ಪರ್ಯಾಯ ಅಭ್ಯರ್ಥಿಗಳನ್ನು ಹುಡುಕಿದ್ದೇವೆ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.
ಜೆಡಿಎಸ್ ಪುಟಿದೇಳುತ್ತಿದೆ :
ಜೆಡಿಎಸ್ ಕಾರ್ಯಕರ್ತರ ಪಕ್ಷ. ಅದು ದುರ್ಬಲ ಆಗಿಲ್ಲ. ಆಗುವುದೂ ಇಲ್ಲ. ಪಕ್ಷದ ಕಾರ್ಯಗಾರಗಳು ಯಶಸ್ವಿಯಾಗಿ ನಡೆದಿವೆ. ಪಕ್ಷ ತಳಮಟ್ಟದಿಂದ ಪುಟಿದೇಳುತ್ತಿದೆ ಎಂದ ಅವರು, ಕಾಂಗ್ರೆಸ್ ನಿಂದಲೂ ಸಣ್ಣಪುಟ್ಟ ಜಾತಿಗಳ ಕಾರ್ಯಾಗಾರ ಆಯೋಜನೆ ನಡೆದಿದೆ. ಕೆಲವರು ನಮ್ಮ ಪಕ್ಷ ನಿಷ್ಕ್ರಿಯ ಆಗಿಬಿಟ್ಟಿದೆ ಎಂದುಕೊಂಡಿದ್ದಾರೆ. ಈಗ ಜೆಡಿಎಸ್ ಬಗ್ಗೆ ಕಾಂಗ್ರೆಸ್ ನಾಯಕರಿಗೆ ನಡುಕ ಉಂಟಾಗಿರುವಂತಿದೆ.ಅದೇ ಕಾರಣಕ್ಕೆ ನಮ್ಮಂತೆಯೇ ಕಾರ್ಯಾಗಾರ ಆಯೋಜಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಪಕ್ಷಕ್ಕೆ ತಿರುಗೇಟು ಕೊಟ್ಟರು.
ಯಾರನ್ನೂ ಪಕ್ಷ ಬಿಟ್ಟು ಹೋಗಿ ಅಂತ ನಾನು ಹೇಳಿಲ್ಲ. ಆದರೆ, ಪಕ್ಷ ತ್ಯಜಿಸಿ ಹೋದ ಮೇಲೆ ನಾನೇನು ಮಾಡಲು ಆಗುವುದಿಲ್ಲ. ಈ ಹಿಂದೆ ಕೆಲವರು ಪಕ್ಷದ ಶಕ್ತಿ ಬಳಸಿಕೊಂಡು ಕಾರ್ಯಕರ್ತರನ್ನು ನಡು ನೀರಿನಲ್ಲಿ ಬಿಟ್ಟು ಹೋದರು.ಇವರಿಂದಲೇ ಪಕ್ಷದ ಸಂಘಟನೆ ಹಿಂದೆ ಉಳಿಯಿತು ಎಂದು ಅವರು ಬೇಸರಗೊಂಡರು.
ನಿನ್ನೆಯೂ ಒಬ್ಬ ಶಾಸಕರು ಹೇಳುತ್ತಿದ್ರು. ನಾನಾಗಿಯೇ ಪಕ್ಷ ಬಿಟ್ಟು ಹೋಗಲ್ಲ, ನಾಯಕರೇ ಗೊಂದಲ ಸೃಷ್ಟಿ ಮಾಡ್ತಿರೋದು ಅಂದಿದ್ದಾರೆ. ನಾವ್ಯಾಕೆ ಗೊಂದಲ ಸೃಷ್ಟಿ ಮಾಡೋಣ. ಒಳಗೊಳಗೇ ಸಂಚು ರೂಪಿಸಿಕೊಂಡು ನನ್ನ ಮೇಲೆ ಗೂಬೆ ಕೂರಿಸುತ್ತಾರೆ. ಅಧಿಕಾರದ ರುಚಿ ಕಂಡು ನಡುನೀರಲ್ಲಿ ಕಾರ್ಯಕರ್ತರನ್ನು ಬಿಟ್ಟು ಹೋಗ್ತಾರೆ. ನಾಯಕರಿಂದ ಪಕ್ಷ ಅಲ್ಲ, ಕಾರ್ಯಕರ್ತರಿಂದ ಪಕ್ಷ. ಕೆಲವರು ಪಕ್ಷಕ್ಕೆ ಕುತ್ತಿಗೆ ಕುಯ್ದು ಬೆನ್ನಿಗೆ ಚೂರಿ ಹಾಕುತ್ತಿದ್ದಾರೆ ಎಂದರು.
ಕಾರ್ಯಾಗಾರ ಯಶಸ್ವಿ :
ನಾಲ್ಕು ದಿನಗಳ ಕಾರ್ಯಾಗಾರ ಯಶಸ್ವಿಯಾಗಿದೆ. ಕಾಂಗ್ರೆಸ್ ನಾಯಕರು ನಮ್ಮ ಪಕ್ಷದ ಬಗ್ಗೆ ಅಪಪ್ರಚಾರ ನಡೆಸಿದ್ದಾರೆ. ಅದಕ್ಕೆ ಉತ್ತರ ನೀಡಿದ್ದೇನೆ. ಈ ಬಗ್ಗೆ ಮುಸ್ಲಿಂ ಕಾರ್ಯಾಗಾರದಲ್ಲಿ ಮಾತನಾಡುತ್ತೇನೆ. ಎಲ್ಲಾ ಸಮಾಜದವರಿಗೂ ಜೆಡಿಎಸ್ ಗೌರವ ನೀಡುತ್ತಿದೆ. ಈ ಸಮಾಜಕ್ಕೆ ನಾವು ಹಲವಾರು ಕೊಡುಗೆ ನೀಡಿದ್ದೇವೆ. ಮುಂದಿನ ಅಭ್ಯರ್ಥಿಗಳಿಗೆ ಕೆಲಸ ಮಾಡಲು ಸೂಚನೆ ನೀಡಲಾಗಿದೆ ಎಂದರು.
ಅಲ್ಪಸಂಖ್ಯಾತರು ಯಾವ ರೀತಿ ಕೆಲಸ ಮಾಡಬೇಕು ಎಂಬುದನ್ನು ತಿಳಿಸಲಾಗುತ್ತದೆ. ವಿಜಯದಶಮಿ ಹಬ್ಬದ ನಂತರ ಜೆಪಿ ಭವನದಲ್ಲಿ ಜಿಲ್ಲಾವಾರು ಸಭೆ ಮಾಡುತ್ತೇವೆ. ಹದಿನಾರರ ನಂತರ ಎರಡನೇ ಹಂತದ ಕಾರ್ಯಾಗಾರ ಆರಂಭ ಮಾಡುತ್ತೇವೆ. ಎಲ್ಲಾ ಸಮುದಾಯಗಳಿಗೂ ಅವಕಾಶ ಕಲ್ಪಿಸಬೇಕು. ಅವರು ಜನರ ಹತ್ತಿರಕ್ಕೆ ಹೋಗಬೇಕು. ಅಂತವರಿಗೆ ಅವಕಾಶ ನೀಡುತ್ತೇವೆ ಎಂದು ಹೆಚ್ ಡಿಕೆ ತಿಳಿಸಿದರು.
ಬೆಂಗಳೂರು: ಸದಾ ರಾಜಕೀಯದಲ್ಲಿ ಬ್ಯುಸಿಯಾಗಿದ್ದ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಇಂದು ರಾಜಕೀಯ ವಿಭಾಗದ ಟೀಚರ್ ಆಗಿ ವಿದ್ಯಾರ್ಥಿಗಳಿಗೆ ಪಾಠ ಮಾಡೋ ರೀತಿ ಶಾಸಕರು, ಪಕ್ಷದ ನಾಯಕರಿಗೆ ಪಾಠ ಮಾಡಿದರು.
ಬಿಡದಿಯಲ್ಲಿ ನಡೆಯುತ್ತಿರುವ ಎರಡು ದಿನಗಳ ಕಾರ್ಯಾಗಾರದಲ್ಲಿ ಇಂದು ಪಕ್ಷ ಸಂಘಟನೆ ಕುರಿತು ಶಾಸಕರು ಮತ್ತು ನಾಯಕರಿಗೆ ಮನವಿ ಮಾಡಿಕೊಡಲು ಟೀಚರ್ ಆಗಿದ್ದರು. ಪವರ್ ಪಾಯಿಂಟ್ ಪ್ರೆಸಂಟೇಷನ್ ಮೂಲಕ ಪಕ್ಷದ 2023 ಚುನಾವಣೆಯ ರೋಡ್ ಮ್ಯಾಪ್ ತೆರೆದಿಟ್ಟರು.
ದೇಶದಲ್ಲಿ ಪ್ರಾದೇಶಿಕ ರಾಜಕಾರಣಕ್ಕೆ ಹೆಚ್ಚು ಬಲವಿದೆ. ಅದರ ಮೂಲ ಬೇರುಗಳು ನಮ್ಮ ರಾಜ್ಯದಲ್ಲೇ ಇವೆ. ಜೆಡಿಎಸ್ ಈ ನಿಟ್ಟಿನಲ್ಲಿ ನಿರ್ಣಾಯಕ ಪಾತ್ರ ಪೋಷಿಸಲಿದೆ ಎಂದು ಹೆಚ್‍ಡಿಕೆ ಎಲ್ಲಾ ಮುಖಂಡರಿಗೆ ಉದಾಹರಣೆಗಳ ಮುಖೇನ ವಿವರಿಸಿದರು. ಪ್ರಾದೇಶಿಕ ಪಕ್ಷ ಅಧಿಕಾರಕ್ಕೆ ಬಂದರೆ ಹೈಕಮಾಂಡ್ ಸಂಸ್ಕೃತಿ ಇರೋದಿಲ್ಲ. ಕನ್ನಡಿಗರ ಕೈಯ್ಯಲ್ಲಿಯೇ ಅಧಿಕಾರ ಇರುತ್ತದೆ. ಪ್ರತಿಯೊಂದಕ್ಕೂ ದೆಹಲಿ ಕಡೆ ನೋಡಬೇಕಾಗಿಲ್ಲ. ಪ್ರಾದೇಶಿಕ ಪಕ್ಷ ಅಧಿಕಾರಕ್ಕೆ ಬಂದರೆ ಐತಿಹಾಸಿಕ ನಿರ್ಧಾರಗಳನ್ನು ಹೈಕಮಾಂಡ್ ಹಂಗಿಲ್ಲದೆ ತೆಗೆದುಕೊಳ್ಳಬಹುದು ಅಂತ ತಿಳಿಸಿದರು. ಇದನ್ನೂ ಓದಿ: 2023ರ ವಿಧಾನಸಭಾ ಚುನಾವಣೆ, ಸಂಕ್ರಾಂತಿಗೆ ಜೆಡಿಎಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟ: ಹೆಚ್‍ಡಿಕೆ
ಜನರ ಸಮಸ್ಯೆಗಳ ಪರಿಹಾರಕ್ಕೆ ಆದ್ಯತೆ ನೀಡೋಣ. ಕಾಲಮಿತಿಯಲ್ಲಿ ಅವುಗಳ ಪರಿಹಾರಕ್ಕೆ ಭರವಸೆ ಕೊಡೋಣ. ನೀರಾವರಿ ಯೋಜನೆಗಳು ಮತ್ತು ರೈತ ಪರ ಯೋಜನೆಗಳು ನಮ್ಮ ಪಕ್ಷದ ಮೊದಲ ಆದ್ಯತೆ. ಈ ನಿಟ್ಟಿನಲ್ಲಿ ಅಭ್ಯರ್ಥಿಗಳು ಜನರ ಬಳಿಗೆ ಹೋಗಬೇಕು. ಪಕ್ಷದ ಕಾರ್ಯಕ್ರಮಗಳನ್ನು ಮನವರಿಕೆ ಮಾಡಿಕೊಡಬೇಕು ಎಂದು ತಾಕೀತು ಮಾಡಿದರು. ರಾಜ್ಯದ ಐದು ನೀರಾವರಿ ಯೋಜನೆಗಳಿಗೆ ಜೀವ ತುಂಬುವುದು ನಮ್ಮ ಮಹತ್ವದ ನಿಲುವು. ಮೇಕೆದಾಟು, ಯುಕೆಪಿ, ಮಹದಾಯಿ, ಎತ್ತಿನಹೊಳೆ ಯೋಜನೆಗಳ ಕ್ಷಿಪ್ರ ಕಾರ್ಯಗತದ ಭರವಸೆಯೊಂದಿಗೆ ಮುಂದಕ್ಕೆ ಹೋಗೋಣ ಅಂತ ತಿಳಿಸಿದರು. ಇದನ್ನೂ ಓದಿ: ದತ್ತಪೀಠಕ್ಕೆ ಮೌಲ್ವಿ ನೇಮಕ ರದ್ದು
ಎತ್ತಿನಹೊಳೆ ಹೆಸರು ಹೇಳಿಕೊಂಡು ಮೊದಲು 8000 ಕೋಟಿ ರೂ. DPR ಮಾಡಲಾಯಿತು. ಆಮೇಲೆ 13000 ಕೋಟಿಗೆ ಮರು DPR ಮಾಡಲಾಯಿತು. ಈಗ ಪುನಾ 24000 ಕೋಟಿ ರೂ.ಗಳಿಗೆ ಆPಖ ಮಾಡಲು ಹೊರಟಿದ್ದಾರೆ ಎಂದು ಆಕ್ರೋಶ ಹೊರ ಹಾಕಿದರು. ಇದೇ ವೇಳೆ ಜೆಡಿಎಸ್ ವಿಷನ್- ಮಿಷನ್ 2023 ಪ್ರಸ್ತುತ ಪಡಿಸಿದ ಕುಮಾರಸ್ವಾಮಿ,2023 ಕ್ಕೆ ಸ್ವಂತ ಬಲದಲ್ಲಿ 123 ಸೀಟು ಪಡೆಯುವುದು ಪಕ್ಷದ ದೊಡ್ಡ ಗುರಿ. ಈ ನಿಟ್ಟಿನಲ್ಲಿ ಪಂಚರತ್ನ ಯೋಜನೆ ಜಾರಿ ಮಾಡೋದು ನಮ್ಮ ಗುರಿ. (ಆರೋಗ್ಯ, ಶಿಕ್ಷಣ, ಕೃಷಿ, ವಸತಿ, ಉದ್ಯೋಗ ಕ್ಷೇತ್ರದಲ್ಲಿ ವಿಶೇಷ ಯೋಜನೆ). ಈ ಮೂಲಕ ರಾಜ್ಯದ ಆಮೂಲಾಗ್ರ ಅಭಿವೃದ್ಧಿಗೆ ಕಾಣಿಕೆ ನೀಡುವುದು ಪಕ್ಷದ ಉದ್ದೇಶವಾಗಿದೆ. ತಳ ಮಟ್ಟದಿಂದ ಅಭಿವೃದ್ಧಿ ಸಾಧನೆ ಮಾಡುವುದು ನಮ್ಮ ಪರಿಕಲ್ಪನೆ ಆಗಿದ್ದು, ಅದಕ್ಕೆ ಬೇಕಾದ ಪೂರಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಅಂತ ತಿಳಿಸಿದರು.
ಜೆಡಿಎಸ್ ಸದಸ್ಯರ ನಿಧಿ ಸ್ಥಾಪನೆ ಮಾಡುವ ಮೂಲಕ ಪ್ರಾಮಾಣಿಕ ಕಾರ್ಯಕರ್ತರ ರಕ್ಷಣೆಗೆ ನಿಲ್ಲುವುದು ನಮ್ಮ ನಿಲುವು. ಪಕ್ಷದ ಸದಸ್ಯತ್ವ ನೋಂದಣಿಯಿಂದ ಬಂದ ಹಣದಿಂದ ಕಾರ್ಯಕರ್ತರ ಮಕ್ಕಳಿಗೆ ವಿದ್ಯಾರ್ಥಿ ವೇತನ, ಆರೋಗ್ಯ ಸಮಸ್ಯೆಗೆ ಹಣ ನೀಡುವುದು. ಕಾರ್ಯಕರ್ತರು ಮೃತರಾದಾಗ ಈ ನಿಧಿಯಿಂದ ಪರಿಹಾರ ನೀಡಲಾಗುತ್ತೆ ಅಂತ ತಿಳಿಸಿದರು.