Tag: ಬಿಪರ್ಜೋಯ್ ಚಂಡಮಾರುತ

  • ಅತೀ ತೀವ್ರ ತೂಫಾನ್ ಆಗಿ ಬದಲಾದ ಬಿಪರ್ಜೋಯ್- ಮುಂಬೈನಲ್ಲಿ ವೈಮಾನಿಕ ಸೇವೆಗಳಲ್ಲಿ ವ್ಯತ್ಯಯ

    ಅತೀ ತೀವ್ರ ತೂಫಾನ್ ಆಗಿ ಬದಲಾದ ಬಿಪರ್ಜೋಯ್- ಮುಂಬೈನಲ್ಲಿ ವೈಮಾನಿಕ ಸೇವೆಗಳಲ್ಲಿ ವ್ಯತ್ಯಯ

    – ತುರ್ತು ಸಭೆ ನಡೆಸಿದ ಪ್ರಧಾನಿ ಮೋದಿ, ಕಟ್ಟೆಚ್ಚರ

    ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಏರ್ಪಟ್ಟಿರುವ ಬಿಪರ್ಜೋಯ್ (Biparjoy Cyclone) ತೂಫಾನ್ ಅತಿ ತೀವ್ರ ಚಂಡಮಾರುತವಾಗಿ ಬದಲಾಗಿದೆ. ಕರಾವಳಿ ತೀರದತ್ತ ಇದು ಚಲಿಸ್ತಿರುವ ಹಿನ್ನೆಲೆಯಲ್ಲಿ ಬಲವಾದ ಗಾಳಿ ಬೀಸತೊಡಗಿದೆ. ಸಮುದ್ರ ಪ್ರಕ್ಷುಬ್ಧಗೊಂಡಿದ್ದು ರಕ್ಕಸಗಾತ್ರದ ಅಲೆಗಳು ಭೀತಿಯನ್ನುಂಟು ಮಾಡ್ತಿವೆ.

    ಬಿರುಗಾಳಿಸಹಿತ ಮಳೆ ವೈಮಾನಿಕ ಸೇವೆಗಳಿಗೆ ಅಡ್ಡಿಯನ್ನುಂಟು ಮಾಡ್ತಿವೆ. ಮುಂಬೈ ಏರ್ ಪೋರ್ಟ್ (Mumbai Airport) ನಲ್ಲಿ ವಿಮಾನಗಳ ಆಗಮನ-ನಿರ್ಗಮನದಲ್ಲಿ ವ್ಯತ್ಯಯವಾಗಿದೆ. ಕೆಲ ವಿಮಾನ (Flights) ಗಳು ರದ್ದಾದ್ರೆ, ಇನ್ನೂ ಕೆಲ ವಿಮಾನಗಳ ಹಾರಾಟ ವಿಳಂಬವಾಗಿದೆ. ಪ್ರಯಾಣಿಕರು ಪರದಾಡುತ್ತಿದ್ದಾರೆ.

    ಇದೇ 15ರಂದು ಗುಜರಾತ್‍ನ ಕಛ್ ಮತ್ತು ಪಾಕಿಸ್ತಾನ (Pakistan) ದ ಕರಾಚಿ ನಡುವೆ ಬಿಪರ್ಜೋಯ್ ಚಂಡಮಾರುತ ತೀರವನ್ನು ದಾಟಲಿದೆ. ಸದ್ಯ ಪೋರಬಂದರ್‍ನಿಂದ 310ಕಿಲೋಮೀಟರ್ ದೂರದಲ್ಲಿ, ದ್ವಾರಕದಿಂದ 430 ಕಿಲೋಮೀಟರ್ ಸೈಕ್ಲೋನ್ ಕೇಂದ್ರೀಕೃತವಾಗಿದ್ದು, ಗಂಟೆಗೆ 8 ಕಿಲೋಮೀಟರ್ ವೇಗದಲ್ಲಿ ಈಶಾನ್ಯ ದಿಕ್ಕಿನತ್ತ ಚಲಿಸ್ತಿದೆ. ಚಂಡಮಾರುತ ತೀರದಾಟುವ ಸಂದರ್ಭದಲ್ಲಿ ಗಂಟೆಗೆ 135 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಂಭವ ಇದೆ.

    ಕಛ್ ಮತ್ತು ಸೌರಾಷ್ಟ್ರದಲ್ಲಿ ಆರೆಂಜ್ ಅಲರ್ಟ್ (Orange Alert) ಪ್ರಕಟಿಸಲಾಗಿದೆ. ದ್ವಾರಕೆಯಲ್ಲಿ 1300 ಮಂದಿಯನ್ನು ಸುರಕ್ಷಿತ ಪ್ರದೇಶಕ್ಕೆ ಶಿಫ್ಟ್ ಮಾಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ ತುರ್ತು ಸಭೆ ನಡೆಸಿ, ಹತ್ತು ಹಲವು ಸೂಚನೆಗಳನ್ನು ಅಧಿಕಾರಿಗಳಿಗೆ ನೀಡಿದ್ದಾರೆ. ಪಾಕಿಸ್ತಾನ ಕರಾವಳಿಯಲ್ಲೂ ಕಟ್ಟೆಚ್ಚರ ವಹಿಸಲಾಗಿದ್ದು, ತೀರ ಪ್ರದೇಶದ ಜನರನ್ನು ಬೇರೆಡೆಗೆ ಶಿಫ್ಟ್ ಮಾಡುವ ಕೆಲಸ ನಡೆಯುತ್ತಿದೆ. ಇದನ್ನೂ ಓದಿ: 4 ದಿನ ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ – ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

    ಇತ್ತ ರಾಜ್ಯದ ಕರಾವಳಿಯಲ್ಲೂ ಕಡಲು ಪ್ರಕ್ಷುಬ್ಧಗೊಂಡಿದೆ. ಕಾರವಾರದಲ್ಲಿ ನಾಲ್ಕೈದು ಅಡಿ ಎತ್ತರಕ್ಕೆ ಅಲೆಗಳು ಏಳುತ್ತಿವೆ. ಸಮುದ್ರ ತೀರದಲ್ಲಿ ಮೀನುಗಾರಿಕೆ ಸೇರಿ ಎಲ್ಲಾ ರೀತಿಯ ಚಟುವಟಿಕೆಗಳನ್ನು ಜಿಲ್ಲಾಡಳಿತ ನಿರ್ಬಂಧಿಸಿದೆ. ಆದರೂ ಮುರುಡೇಶ್ವರ (Murudeshwara) ದಲ್ಲಿ ಕೆಲ ಪ್ರವಾಸಿಗರು ಸಮುದ್ರಕ್ಕೆ ಇಳಿಯುವ ದುಸ್ಸಾಹಸ ಮಾಡಿದ್ದಾರೆ. ಹುಬ್ಬಳ್ಳಿಯ ಸಂತೋಷ್ ಎಂಬಾತ ಸಮುದ್ರದ ಪಾಲಾಗಿದ್ದಾನೆ. ಇಬ್ಬರನ್ನು ಲೈಫ್‍ಗಾರ್ಡ್‍ಗಳು ರಕ್ಷಣೆ ಮಾಡಿದ್ದಾರೆ.

    ಉಡುಪಿಯ ಮಲ್ಪೆ ಬೀಚ್‍ (Malpe Beach Udupi) ಗೆ ನೆಟ್ ಅಳವಡಿಸಲಾಗಿದೆ. ಪ್ರವಾಸಿಗರು ನೀರಿಗಿಳಿಯೋದನ್ನು ತಡೆಯಲು ಪೊಲೀಸರು, ಲೈಫ್‍ಗಾರ್ಡ್‍ಗಳು ಹರಸಾಹಸ ಮಾಡ್ತಿದ್ದಾರೆ. ಮಂಗಳೂರಿನ ಸೋಮೇಶ್ವರ, ಬಟ್ಟಪ್ಪಾಡಿ, ಉಳ್ಳಾಲ, ಸುರತ್ಕಲ್ ಬಳಿ ರಕ್ಕಸ ಅಲೆಗಳು ತೀರಕ್ಕೆ ಅಪ್ಪಳಿಸುತ್ತಿವೆ. ಕಡಲಂಚಿನ ಹಲವು ಮನೆ, ಮರ ನೀರುಪಾಲಾಗ್ತಿದೆ. ಮೀನುಗಾರರ ರಕ್ಷಣೆಗೆ ರಕ್ಷಣಾ ತಂಡ ನಿಯೋಜನೆ ಮಾಡಲಾಗಿದ್ದು, ಸಹಾಯವಾಣಿ ತೆರೆಯಲಾಗಿದೆ. ಇನ್ನು ಕಡಲ ಕೊರೆತ ಹೆಚ್ಚಿದ್ದು, ಮುಂಗಾರು ಸಂದರ್ಭದಲ್ಲಿ ಸಮಸ್ಯೆ ಆಗದಂತೆ ನೋಡಿಕೊಳ್ಳುವುದಾಗಿ ಸಚಿವ ಮಂಕಾಳ ವೈದ್ಯ ಭರವಸೆ ನೀಡಿದ್ದಾರೆ.

  • ಬಿಪರ್ಜೋಯ್ ಚಂಡಮಾರುತ ಎಫೆಕ್ಟ್- ಅಲೆಯ ಅಬ್ಬರಕ್ಕೆ ಯುವತಿಯರು ತಬ್ಬಿಬ್ಬು

    ಬಿಪರ್ಜೋಯ್ ಚಂಡಮಾರುತ ಎಫೆಕ್ಟ್- ಅಲೆಯ ಅಬ್ಬರಕ್ಕೆ ಯುವತಿಯರು ತಬ್ಬಿಬ್ಬು

    ಮಂಗಳೂರು: ರಾಜ್ಯದ ಕರಾವಳಿಯಲ್ಲಿ ಬಿಪರ್ಜೋಯ್ ಚಂಡಮಾರುತ (Biporjoy Cyclone) ದ ಪರಿಣಾಮ ಕಡಲ ತೀರದಲ್ಲಿ ಅಲೆಗಳ ಅಬ್ಬರ ಹೆಚ್ಚಿದೆ.

    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಳಗ್ಗೆಯಿಂದಲೇ ಮಳೆ (Rain In Dakshina Kannada) ಯಾಗಿದ್ದು, ಪ್ರಕ್ಷುಬ್ಧಗೊಂಡಿದೆ. ರಕ್ಕಸ ಗಾತ್ರದ ಅಲೆಗಳು ದಡಕ್ಕೆ ಅಪ್ಪಳಿಸುತ್ತಿವೆ. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಸಮುದ್ರ ತೀರಕ್ಕೆ ಜನರು ಹೋಗದಂತೆ ಎಚ್ಚರಿಕೆ ನೀಡಿದೆ. ಮುಂದಿನ 48 ಗಂಟೆಗಳ ಕಾಲ ಗಂಟೆಗೆ 40-50ಕೀಮೀ ವೇಗದಲ್ಲಿ ಗಾಳಿ ಬೀಸುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಪರಿಸ್ಥಿತಿಯನ್ನು ಎದುರಿಸಲು ಸಹಾಯವಾಣಿಯನ್ನು ಕೂಡ ಜಿಲ್ಲಾಡಳಿತ ತೆರೆದಿದೆ.

    ಕಡಲ ತೀರಕ್ಕೆ ಹೋಗದಂತೆ ಜನರಿಗೆ ಜಿಲ್ಲಾಡಳಿತ ಎಚ್ಚರಿಕೆ ನೀಡಿದರೂ ಕಡಲ ತೀರದಲ್ಲಿ ಪ್ರವಾಸಿಗರ ಹುಚ್ಚಾಟ ಮುಂದುವರಿದಿದೆ. ಕಡಲ ಅಬ್ಬರದ ಜೊತೆ ಫೋಟೋಗೆ ಫೋಸ್ ಕೊಡುತ್ತಿದ್ದ ಯುವತಿಯರ ಮೇಲೇಯೇ ರಕ್ಕಸ ಗಾತ್ರದ ಅಲೆ ಅಪ್ಪಳಿಸಿದೆ. ಅಲೆಯ ಅಬ್ಬರಕ್ಕೆ ಯುವತಿಯರು ಒಂದು ಕ್ಷಣ ತಬ್ಬಿಬ್ಬಾಗಿದ್ದಾರೆ. ಕೊನೆಗೆ ಯುವತಿಯರನ್ನು ದಡದಿಂದ ಜಾಗ ಖಾಲಿ ಮಾಡುವಂತೆ ಪೊಲೀಸರು ಸೂಚಿಸಿದ್ದಾರೆ.

    ಒಟ್ಟಿನಲ್ಲಿ ರಾಜ್ಯ ಕರಾವಳಿಗೆ ಮುಂಗಾರು ಮಳೆ ಎಂಟ್ರಿ ಕೊಟ್ಟಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಮಳೆ ಆರಂಭಗೊಂಡಿದೆ. ಮಂಗಳೂರು ನಗರ ಸೇರಿದಂತೆ ಜಿಲ್ಲಾದ್ಯಂತ ಮಳೆಯಾಗಿದೆ. ಈ ಮೂಲಕ ನೀರಿನ ಅಭಾವ ಎದುರಿಸುತ್ತಿದ್ದ ಜಿಲ್ಲೆಯ ಜನತೆಗೆ ಖುಷಿ ತಂದಿದೆ. ಇದನ್ನೂ ಓದಿ: ಕರಾವಳಿಯಿಂದ 640 ಕಿ.ಮೀ ದೂರದಲ್ಲಿರೋ ಬಿಪರ್ಜೋಯ್ ಚಂಡಮಾರುತ – ಕರ್ನಾಟಕ ಸೇರಿ 3 ರಾಜ್ಯಗಳಿಗೆ ಅಲರ್ಟ್

  • ಕರಾವಳಿಯಿಂದ 640 ಕಿ.ಮೀ ದೂರದಲ್ಲಿರೋ ಬಿಪರ್ಜೋಯ್ ಚಂಡಮಾರುತ – ಕರ್ನಾಟಕ ಸೇರಿ 3 ರಾಜ್ಯಗಳಿಗೆ ಅಲರ್ಟ್

    ಕರಾವಳಿಯಿಂದ 640 ಕಿ.ಮೀ ದೂರದಲ್ಲಿರೋ ಬಿಪರ್ಜೋಯ್ ಚಂಡಮಾರುತ – ಕರ್ನಾಟಕ ಸೇರಿ 3 ರಾಜ್ಯಗಳಿಗೆ ಅಲರ್ಟ್

    ನವದೆಹಲಿ: ಅರಬ್ಬೀ ಸಮುದ್ರದ (Arabian Sea) ಕರಾವಳಿ (Coastal) ಭಾಗದಲ್ಲಿ ಭಾರೀ ಆತಂಕ ಮೂಡಿಸಿರುವ ಬಿಪರ್ಜೋಯ್ ಚಂಡಮಾರುತ (Cyclone Biparjoy) ಮುಂದಿನ 24 ಗಂಟೆಗಳಲ್ಲಿ ಇನ್ನಷ್ಟು ತೀವ್ರಗೊಳ್ಳಲಿದ್ದು ಉತ್ತರ ಈಶಾನ್ಯದೆಡೆಗೆ ಚಲಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಶನಿವಾರ ತಿಳಿಸಿದೆ.

    ಪ್ರಸ್ತುತ ಚಂಡಮಾರುತ ಗೋವಾದಿಂದ (Goa) ಪಶ್ಚಿಮಕ್ಕೆ 690 ಕಿ.ಮೀ, ಮುಂಬೈನ ಪಶ್ಚಿಮ-ನೈಋತ್ಯಕ್ಕೆ 640 ಕಿ.ಮೀ ಹಾಗೂ ಪೋರಬಂದರ್‌ನಿಂದ ನೈಋತ್ಯಕ್ಕೆ 640 ಕಿ.ಮೀ ದೂರದಲ್ಲಿ ಇದ್ದು, ಗಂಟೆಗೆ 145 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದೆ. ಚಂಡಮಾರುತ ಕರ್ನಾಟಕ, ಗೋವಾ ಹಾಗೂ ಮಹಾರಾಷ್ಟ್ರದ ಕರಾವಳಿ ಪ್ರದೇಶಗಳಲ್ಲಿ ಭಾರೀ ಮಳೆ ಹಾಗೂ ಬಲವಾದ ಗಾಳಿಯನ್ನು ಉಂಟುಮಾಡುತ್ತದೆ ಎಂದು ಐಎಂಡಿ ಎಚ್ಚರಿಕೆ ನೀಡಿದೆ.

    ಶನಿವಾರ ಹಾಗೂ ಭಾನುವಾರ ಬಿಪರ್ಜೋಯ್ ಚಂಡಮಾರುತದ ಅಬ್ಬರ ಜೋರಾಗಲಿದೆ. ಗುಜರಾತ್, ಮಹಾರಾಷ್ಟ್ರದ ಕರಾವಳಿಯಲ್ಲಿ ಉಬ್ಬರದ ಭೀತಿಯಿದೆ. ರಾಜ್ಯ ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಮಹಾರಾಷ್ಟ್ರ ಹಾಗೂ ಗುಜರಾತ್ ಕರಾವಳಿ ಭಾಗಗಳಲ್ಲಿ ಹೆಚ್ಚಿನ ಪ್ರಭಾವ ಸಾಧ್ಯತೆಯಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಇದನ್ನೂ ಓದಿ: ಶಕ್ತಿ ಯೋಜನೆಗೆ ಭಾನುವಾರ ಚಾಲನೆ- ಬಸ್ ಕಂಡಕ್ಟರ್ ಆಗಲಿದ್ದಾರೆ ಸಿದ್ದರಾಮಯ್ಯ

    ಚಂಡಮಾರುತದಿಂದಾಗಿ ಜೂನ್ 10, 11 ಹಾಗೂ 12ರಂದು ಗಾಳಿಯ ವೇಗ ಗಂಟೆಗೆ 45-55 ಕಿ.ಮೀಗೆ ಏರುವ ಸಾಧ್ಯತೆಯಿದೆ. ಇದರಿಂದ ದಕ್ಷಿಣ ಸೇರಿದಂತೆ ಕರಾವಳಿ ಪ್ರದೇಶಗಳಲ್ಲಿ ಲಘು ಮಳೆ ಹಾಗೂ ಗುಡುಗು ಸಹಿತ ಮಳೆ ಸುರಿಯಬಹುದು. ಇದನ್ನೂ ಓದಿ:  ಉಡುಪಿಯಲ್ಲಿ ಗುಡುಗು ಸಹಿತ ಧಾರಾಕಾರ ಮಳೆ