Tag: ಬಿಪ್ಲಬ್ ಕುಮಾರ್ ದೇವ್

  • ಮಾಜಿ ಸಿಎಂ ಬಿಪ್ಲಬ್ ದೇಬ್‌ರನ್ನು ಸ್ವಾಮಿ ವಿವೇಕಾನಂದ, ಗಾಂಧೀಜಿಗೆ ಹೋಲಿಸಿದ ಸಚಿವ ರತನ್ ಲಾಲ್ ನಾಥ್

    ಮಾಜಿ ಸಿಎಂ ಬಿಪ್ಲಬ್ ದೇಬ್‌ರನ್ನು ಸ್ವಾಮಿ ವಿವೇಕಾನಂದ, ಗಾಂಧೀಜಿಗೆ ಹೋಲಿಸಿದ ಸಚಿವ ರತನ್ ಲಾಲ್ ನಾಥ್

    ಅಗರ್ತಲಾ: ತ್ರಿಪುರಾದ ಮಾಜಿ ಮುಖ್ಯಮಂತ್ರಿ ಬಿಪ್ಲಬ್ ಕುಮಾರ್ ದೇವ್, ಸ್ವಾಮಿ ವಿವೇಕಾನಂದ, ಮಹಾತ್ಮ ಗಾಂಧಿ, ರವೀಂದ್ರನಾಥ ಠಾಗೋರ್‌ರಂತಹ ಮಹನ್ ನಾಯಕ ಎಂದು ತ್ರಿಪುರಾದ ಶಿಕ್ಷಣ ಸಚಿವ ರತನ್ ಲಾಲ್ ನಾಥ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

    ತ್ರಿಪುರಾದ ಧೈಲೆ ಜಿಲ್ಲೆಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಬಿಪ್ಲಬ್ ಕುಮಾರ್ ದೇವ್ ತ್ರಿಪುರಾದ ಮಹನ್ ನಾಯಕರಾಗಿದ್ದರು. ಇಲ್ಲಿನ ಪ್ರಜೆಗಳು ಇಂತಹ ನಾಯಕರನ್ನು ಪಡೆಯಲು ತುಂಬಾ ಅದೃಷ್ಟ ಮಾಡಿದ್ದರು ಎಂದು ಹಾಡಿ ಹೊಗಳಿದ್ದಾರೆ. ಇದನ್ನೂ ಓದಿ: ತ್ರಿಪುರಾ ಮುಖ್ಯಮಂತ್ರಿ ಬಿಪ್ಲಬ್ ಕುಮಾರ್ ದೇವ್ ರಾಜೀನಾಮೆ

    ತ್ರಿಪುರಾದ ಜನ ಸರ್ಕಾರದ ಮೇಲೆ ಇಟ್ಟಿದ್ದಂತ ನಿರೀಕ್ಷೆಗಳಲ್ಲಿ ಕೆಲವನ್ನು ಬಿಪ್ಲಬ್ ದೇವ್ ಈಡೇರಿಸಿದ್ದಾರೆ. ಇಂತಹ ಮಹನ್ ನಾಯಕ ನಮ್ಮ ರಾಜ್ಯದಲ್ಲಿ ಹುಟ್ಟಿರುವುದು ನಮ್ಮ ಪುಣ್ಯ. ಸುಭಾಶ್ ಚಂದ್ರ ಬೋಸ್, ರವೀಂದ್ರನಾಥ್ ಠಾಕೂರ್, ಮಹಾತ್ಮ ಗಾಂಧಿ, ವಿವೇಕಾನಂದರಂತೆ ಬಿಪ್ಲಬ್ ದೇವ್ ನಮ್ಮ ರಾಜ್ಯದ ಮಹನ್ ನಾಯಕ ಎಂದು ನುಡಿದಿದ್ದಾರೆ. ಇದನ್ನೂ ಓದಿ: ಕಪಾಳಕ್ಕೆ ಹೊಡೆದು ಮಾನಸಿಕ ಅಸ್ವಸ್ಥ ವೃದ್ಧನ ಹತ್ಯೆ – ಬಿಜೆಪಿ ಮುಖಂಡನಿಂದ ಕೃತ್ಯ

    ಬಿಪ್ಲಬ್ ಕುಮಾರ್ ದೇವ್ ಕೆಲದಿನಗಳ ಹಿಂದೆ ತ್ರಿಪುರಾ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು. ಆ ಬಳಿಕ ಇದೀಗ ಸಿಎಂ ಆಗಿ ಡಾ. ಮಾಣಿಕ್ ಸಹಾ ಅಧಿಕಾರ ವಹಿಸಿಕೊಂಡಿದ್ದಾರೆ.

  • ತ್ರಿಪುರಾ ಮುಖ್ಯಮಂತ್ರಿ ಬಿಪ್ಲಬ್ ಕುಮಾರ್ ದೇವ್ ರಾಜೀನಾಮೆ

    ತ್ರಿಪುರಾ ಮುಖ್ಯಮಂತ್ರಿ ಬಿಪ್ಲಬ್ ಕುಮಾರ್ ದೇವ್ ರಾಜೀನಾಮೆ

    ಅಗರ್ತಲಾ: ತ್ರಿಪುರಾ ಮುಖ್ಯಮಂತ್ರಿ ಬಿಪ್ಲಬ್ ಕುಮಾರ್ ದೇವ್ ಅವರು ಶನಿವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜ್ಯಪಾಲ ಸತ್ಯದೇವ್ ನಾರಾಯಣ ಆರ್ಯ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ.

    ಮುಂದಿನ ವರ್ಷದ ಆರಂಭದಲ್ಲಿ ರಾಜ್ಯದಲ್ಲಿ ಚುನಾವಣೆ ನಡೆಯಲಿದ್ದು, ನಾವು ತ್ರಿಪುರದಲ್ಲಿ ಬಿಜೆಪಿಯನ್ನು ಹೆಚ್ಚು ಕಾಲ ಅಧಿಕಾರದಲ್ಲಿ ಉಳಿಸಿಕೊಳ್ಳಬೇಕು. ಬಿಬೆಪಿ ಪಕ್ಷ ಎಲ್ಲಕ್ಕಿಂತ ಮಿಗಿಲಾಗಿದೆ. ನಾನು ಪ್ರಧಾನಿ ಮೋದಿ ಅವರ ನಾಯಕತ್ವ ಮತ್ತು ನಿರ್ದೇಶನದಲ್ಲಿ ಪಕ್ಷಕ್ಕಾಗಿ ಕೆಲಸ ಮಾಡಿದ್ದೇನೆ. ಪಕ್ಷದ ರಾಜ್ಯ ಘಟಕದ ಮುಖ್ಯಸ್ಥನಾಗಿ ಮತ್ತು ಸಿಎಂ ಆಗಿ ತ್ರಿಪುರಾ ಜನರಿಗೆ ನ್ಯಾಯ ಒದಗಿಸಲು ಪ್ರಯತ್ನಿಸಿದ್ದೇನೆ. ನಾನು ಶಾಂತಿ ಮತ್ತು ಅಭಿವೃದ್ಧಿಗೆ ಒತ್ತು ನೀಡಿದ್ದೇನೆ. ಅಲ್ಲದೇ ಕೋವಿಡ್ ಬಿಕ್ಕಟ್ಟಿನಿಂದ ರಾಜ್ಯವನ್ನು ಹೊರತರಲು ಪ್ರಯತ್ನಿಸಿದ್ದೇನೆ ಎಂದು ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ.

    ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಲ್ಲದಕ್ಕೂ ಸಮಯದ ಚೌಕಟ್ಟು ಇರುತ್ತದೆ. ನಾವು ಆ ಸಮಯದ ಚೌಕಟ್ಟಿನಲ್ಲಿ ಕೆಲಸ ಮಾಡುತ್ತೇವೆ. ನನ್ನನ್ನು ಯಾವುದೇ ಸ್ಥಾನಕ್ಕೆ ನಿಯೋಜಿಸಿದರೂ ಕೆಲಸ ಮಾಡುತ್ತೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಪ್ರಿಯಾಂಕಾ ಗಾಂಧಿಯನ್ನು ರಾಜ್ಯದಿಂದ ರಾಜ್ಯ ಸಭೆಗೆ ಸ್ಪರ್ಧಿಸಲು ಒಪ್ಪಿಸಿ – ರಾಹುಲ್‍ಗೆ ಮನವಿ

    ಕೇಂದ್ರದ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾದ ಒಂದು ದಿನದ ಬಳಿಕ ಬಿಪ್ಲವ್ ಕುಮಾರ್ ದೇವ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಮುಖ್ಯಮಂತ್ರಿ ಬದಲಾವಣೆ ವಿಚಾರ ಬಿಜೆಪಿ ವರಿಷ್ಠರ ನಿರ್ಧಾರವಾಗಿದೆ ಎನ್ನಲಾಗಿದೆ. ಇದನ್ನೂ ಓದಿ: ನಡುರಸ್ತೆಯಲ್ಲೇ ವಕೀಲೆ, ಆಕೆಯ ಪತಿ ಮೇಲೆ ಮಾರಣಾಂತಿಕ ಹಲ್ಲೆ

    ಬಿಜೆಪಿಯ ಶಾಸಕರ ಸಭೆಯಲ್ಲಿ ರಾಜ್ಯದ ನೂತನ ಮುಖ್ಯಮಂತ್ರಿಯನ್ನು ಆಯ್ಕೆ ಮಾಡಲಾಗುತ್ತದೆ. ಬಿಜೆಪಿಯ ಶಾಸಕಾಂಗ ಪಕ್ಷದ ಸಭೆಗೆ ಕೇಂದ್ರ ಸಚಿವ ಭೂಪೇಂದರ್ ಯಾದವ್ ಮತ್ತು ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿನೋದ್ ತವಡೆ ಅವರನ್ನು ಶಾಸಕಾಂಗ ಪಕ್ಷದ ಸಭೆಯ ವೀಕ್ಷಕರಾಗಿ ನೇಮಕ ಮಾಡಲಾಗಿದೆ.