Tag: ಬಿಬಿಎಂಪಿ ಕಚೇರಿ

  • ಕಾಂಗ್ರೆಸ್ಸಿನಿಂದ ಶಾಸಕ ಭೈರತಿ ಬಸವರಾಜ್ ಬಂಟ ನಾರಾಯಣ ಸ್ವಾಮಿ ಅಮಾನತು

    ಕಾಂಗ್ರೆಸ್ಸಿನಿಂದ ಶಾಸಕ ಭೈರತಿ ಬಸವರಾಜ್ ಬಂಟ ನಾರಾಯಣ ಸ್ವಾಮಿ ಅಮಾನತು

    ಬೆಂಗಳೂರು: ಕೆಆರ್ ಪುರಂ ಬಿಬಿಎಂಪಿ ಕಚೇರಿಗೆ ಬೆಂಕಿ ಹಚ್ಚುವ ಬೆದರಿಕೆ ಹಾಕಿದ್ದ ಘಟನೆಗೆ ಸಂಬಂಧಿಸಿದಂತೆ ಶಾಸಕ ಭೈರತಿ ಬಸವರಾಜ್ ಬಂಟ ಬೆಂಗಳೂರು ಜಲಮಂಡಳಿ ಸದಸ್ಯನಾಗಿರುವ ನಾರಾಯಣಸ್ವಾಮಿಯನ್ನು ಪಕ್ಷದಿಂದ ಅಮಾನತುಗೊಳಿಸಲಾಗಿದೆ.

    ಈ ಕುರಿತು ಕೆಪಿಸಿಸಿ ಅಧ್ಯಕ್ಷ ಜಿ ಪರಮೇಶ್ವರ್, ನಾರಾಯಣ ಸ್ವಾಮಿಯನ್ನು ಪಕ್ಷದಿಂದ ಅಮಾನತುಗೊಳಿಸಿದ್ದೇವೆ ಎಂದು ಟ್ವೀಟ್ ಮಾಡಿ ತಿಳಿಸಿದ್ದಾರೆ.

    ಘಟನೆ ಕುರಿತು ಮಾಧ್ಯಮಕ್ಕೆ ಸ್ಪಷ್ಟನೆ ನೀಡಿರುವ ನಾರಾಯಣಸ್ವಾಮಿ, ತಮ್ಮ ಕೃತ್ಯವನ್ನು ಸಮರ್ಥನೆ ಮಾಡಿಕೊಂಡಿದ್ದ. ಅಲ್ಲದೇ ಘಟನೆ ಕುರಿತ ವಿಡಿಯೋವನ್ನು ಮಾಧ್ಯಮಗಳು ಪ್ರಸಾರ ಮಾಡಿದರೆ ತನಗೆ ಯಾವುದೇ ನಷ್ಟವಿಲ್ಲ ಎಂದು ತಿಳಿಸಿದ್ದ.

    ರಾಜ್ಯ ವಿಧಾನಸಭಾ ಚುನಾವಣೆ ಕೇವಲ ಕೆಲ ತಿಂಗಳು ಇರುವ ಕಾರಣ ವೇಳೆ ನಾರಾಯಣಸ್ವಾಮಿ ಅವರ ಘಟನೆ ಪಕ್ಷ ಘನತೆಗೆ ದಕ್ಕೆ ತರುವ ಸಾಧ್ಯತೆ ಇರುವುದರಿಂದ ಪಕ್ಷದ ನಾಯಕರು ಈ ಕ್ರಮ ಕೈಗೊಂಡಿದ್ದಾರೆ.

    ಏನಿದು ಘಟನೆ?: ನಾರಾಯಣಸ್ವಾಮಿ ಎನ್‍ಆರ್‍ಐ ಬಡಾವಣೆಯ ಜಮೀನು ವಿಚಾರದಲ್ಲಿ ಅಕ್ರಮವಾಗಿ ಖಾತೆ ಮಾಡಿಕೊಡುವಂತೆ ಬಿಬಿಎಂಪಿ ಸಹಾಯಕ ಕಂದಾಯ ಅಧಿಕಾರಿ ಚೆಂಗಲ್ ರಾಯಪ್ಪಗೆ ಒತ್ತಡ ಹಾಕಿದ್ದ. ಜಮೀನು ವ್ಯಾಜ್ಯ ಕೋರ್ಟ್‍ನಲ್ಲಿದೆ, ಅಕ್ರಮವಾಗಿ ಖಾತೆ ಮಾಡಿಕೊಡಲ್ಲ ಎಂದು ಚೆಂಗಲ್ ರಾಯಪ್ಪ ಹೇಳಿದ್ದರು. ಹೀಗಾಗಿ ಕಳೆದ ಫೆಬ್ರವರಿ 16ರಂದು ಬೆಳಗ್ಗೆ 11 ಗಂಟೆ ವೇಳೆಯಲ್ಲಿ ಹೊರಮಾವು ನಲ್ಲಿರುವ ಬಿಬಿಎಂಪಿ ಕಚೇರಿಗೆ ನುಗ್ಗಿದ ನಾರಾಯಣಸ್ವಾಮಿ, ಎಆರ್‍ಒ ಚೆಂಗಲ್ ರಾಯಪ್ಪ ಮುಂದೆಯೇ ಕಚೇರಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲು ಮುಂದಾಗಿದ್ದಾನೆ. ಖಾತೆ ಮಾಡಿಕೊಡದಿದ್ದರೆ ಕಚೇರಿಯಲ್ಲಿರುವ ದಾಖಲೆಗಳನ್ನು ಸುಟ್ಟು ಹಾಕುವುದಾಗಿ ಬೆದರಿಕೆ ಹಾಕಿದ್ದ. ಇದನ್ನೂ ಓದಿ: ನಾನು ತಪ್ಪು ಮಾಡಿಲ್ಲ, ಕ್ಷಮೆ ಕೇಳಲ್ಲ – ಸುದ್ದಿ ಪ್ರಸಾರ ಮಾಡಿ: ತನ್ನ ಕೃತ್ಯವನ್ನು ಸಮರ್ಥಿಸಿಕೊಂಡ ನಾರಾಯಣ ಸ್ವಾಮಿ

    ಚೆಂಗಲ್ ರಾಯಪ್ಪ ಖಡಕ್ ಅಧಿಕಾರಿ ಅಂತ ಗುರುತಿಸಿಕೊಂಡಿದ್ದ ವ್ಯಕ್ತಿಯಾಗಿದ್ದು, ಪೆಟ್ರೋಲ್ ಹಾಕೋದಾಗಿ ಬೆದರಿಸಿದ್ರೂ ಅವರು ಹೆದರಲಿಲ್ಲ. ಎರಡು ದಿನಗಳ ಹಿಂದೆ ಚೆಂಗಲ್ ರಾಯಪ್ಪ ಅವರನ್ನ ವರ್ಗಾವಣೆ ಮಾಡಲಾಗಿದೆ. ಸಿಎಂ ಮತ್ತು ಭೈರತಿ ಬಸವರಾಜ್ ಪ್ರಭಾವ ಬಳಸಿ ಚೆಂಗಲ್ ರಾಯಪ್ಪರನ್ನ ನಾರಾಯಣಸ್ವಾಮಿ ವರ್ಗಾವಣೆ ಮಾಡಿಸಿದ್ದಾನೆ ಎನ್ನಲಾಗಿದೆ.  ಇದನ್ನೂ ಓದಿ: ಶಾಸಕ ಭೈರತಿ ಬಸವರಾಜ್ ಬಂಟನ ಗೂಂಡಾಗಿರಿ- ಸರ್ಕಾರಿ ಕಚೇರಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ತೀನೆಂದು ಬೆದರಿಕೆ

  • ನಾನು ತಪ್ಪು ಮಾಡಿಲ್ಲ, ಕ್ಷಮೆ ಕೇಳಲ್ಲ – ಸುದ್ದಿ ಪ್ರಸಾರ ಮಾಡಿ: ತನ್ನ ಕೃತ್ಯವನ್ನು ಸಮರ್ಥಿಸಿಕೊಂಡ ನಾರಾಯಣ ಸ್ವಾಮಿ

    ನಾನು ತಪ್ಪು ಮಾಡಿಲ್ಲ, ಕ್ಷಮೆ ಕೇಳಲ್ಲ – ಸುದ್ದಿ ಪ್ರಸಾರ ಮಾಡಿ: ತನ್ನ ಕೃತ್ಯವನ್ನು ಸಮರ್ಥಿಸಿಕೊಂಡ ನಾರಾಯಣ ಸ್ವಾಮಿ

    ಬೆಂಗಳೂರು: ಕೆಆರ್ ಪುರಂ ಬಿಬಿಎಂಪಿ ಕಚೇರಿಗೆ ಬೆಂಕಿ ಹಚ್ಚಲು ಯತ್ನಿಸಿದ್ದ ಘಟನೆಯನ್ನು ಬೆಂಗಳೂರು ಜಲಮಂಡಳಿ ಸದಸ್ಯನಾಗಿರುವ ನಾರಾಯಣಸ್ವಾಮಿ ಸಮರ್ಥಿಸಿಕೊಂಡಿದ್ದಾನೆ.

    ಈ ಕುರಿತು ಮಾಧ್ಯಮಕ್ಕೆ ಸ್ಪಷ್ಟನೆ ನೀಡಿರುವ ನಾರಾಯಣಸ್ವಾಮಿ, ಖಾತೆ ಮಾಡಿಕೊಡದೇ ವಿನಾಃ ಕಾರಣ ತಡಮಾಡುತ್ತಿದ್ದ ಕಾರಣಕ್ಕೆ ಅಧಿಕಾರಿಯ ಮುಂದೇ ನನ್ನ ಬೇಸರವನ್ನು ವ್ಯಕ್ತಪಡಿಸಿದೆ. ಇದು ಕೇವಲ ನನ್ನ ಒಬ್ಬನ ಸಮಸ್ಯೆಯಲ್ಲ 750 ಜನರ ಸಮಸ್ಯೆ ಎಂದು ಹೇಳಿದ್ದಾನೆ.

    ಪಶ್ಚಾತ್ತಾಪ ಇಲ್ಲ: ಈ ಕುರಿತು ಯಾವುದೇ ಕ್ಷಮೆ ಕೇಳುವ ಪ್ರಶ್ನೆ ಇಲ್ಲ. ನಾನು ಯಾವುದೇ ಕ್ಷಮೆ ಕೇಳುವಂತಹ, ಉದ್ದೇಶ ಪೂರ್ವಕ ತಪ್ಪು ಮಾಡಿಲ್ಲ. ಈ ಕುರಿತು ನಾನು ಯಾರನ್ನು ಕ್ಷಮೆ ಕೇಳುವುದಿಲ್ಲ. ಅಧಿಕಾರಿಗಳು ಜನಸಾಮಾನ್ಯರಿಗೆ ನೀಡುವ ಚಿತ್ರಹಿಂಸೆಯನ್ನು ಎದುರಿದ್ದೇನೆ ಅಷ್ಟೇ. ಕ್ಷೇತ್ರದ ಜನರಿಗೆ ಘಟನೆ ಕುರಿತು ಸಂಪೂರ್ಣ ಮಾಹಿತಿ ಇದೆ. ಈ ಕುರಿತು ಮಾತನಾಡಲು ಇದು ಸಮಯವಲ್ಲ. ಸೂಕ್ತ ವೇದಿಕೆಯಲ್ಲಿ ನಾನು ಉತ್ತರ ನೀಡುತ್ತೇನೆ. ಇಂತಹ ದೃಶ್ಯಗಳನ್ನು ಮಾಧ್ಯಮದಲ್ಲಿ ಪ್ರಸಾರ ಮಾಡಿದರೆ ನನಗೆ ಏನು ನಷ್ಟವಿಲ್ಲ, ಪ್ರಸಾರ ಮಾಡಿ ಎಂದಿದ್ದಾನೆ.

    ಪೆಟ್ರೋಲ್ ಎರಚಿಲ್ಲ: ನನ್ನ ಆರೋಗ್ಯಕ್ಕೆ ಸಂಬಂಧಿಸಿದಂತೆ ವೈದ್ಯರು ಸೂಚಿಸಿದ ಕೆಲವು ಪೌಡರ್ ನೀರಿನಲ್ಲಿ ಕಲಸಿ ಕುಡಿಯುತ್ತೇನೆ. ಆ ವೇಳೆ ನನ್ನ ಕೈನಲ್ಲಿದ್ದ ಆ ಬಾಟಲ್ ನೀರನ್ನು ಬೇಸರದಿಂದ ಎರಚಿದ್ದೇನೆ. ಶಾಸಕರಿಗೂ ಈ ಪ್ರಕರಣಕ್ಕೂ ಯಾವುದೇ ಸಂಬಂಧವಿಲ್ಲ. ಆದರೆ ಜನರ ಸಮಸ್ಯೆ ಬಗೆಹರಿಸಲು ಅಧಿಕಾರಿಗಳಿಗೆ ಸೂಚನೆ ನೀಡಲು ಮಾತ್ರ ಅವರಿಗೆ ಹೇಳಿದ್ದೆ ಎಂದಿದ್ದಾನೆ.

    ನಾನು ಕೇವಲ ಕಾಂಗ್ರೆಸ್ ಪಕ್ಷದ ಸಾಮಾನ್ಯ ಕಾರ್ಯಕರ್ತ ಅಷ್ಟೇ. ಇದರಲ್ಲಿ ಸಿಎಂ, ಶಾಸಕರ ಪ್ರಭಾವ ಬಳಸಿಲ್ಲ. ಅಧಿಕಾರಿ ಕ್ರಮದಿಂದ ಬೇಸತ್ತು ಈ ರೀತಿ ನಡೆದಿದೆ. ಆದರೆ ಸಮಾಜದಲ್ಲಿ ಯಾವುದೇ ತಪ್ಪು ಕಾರ್ಯ ಮಾಡಿಲ್ಲ. ಘಟನೆ ನಡೆದು ಒಂದು ವಾರ ಆಗಿದೆ. ಈ ಕುರಿತು ಯಾವುದೇ ಪಶ್ಚಾತ್ತಾಪ ಪಡುವುದು ಇಲ್ಲ. ಅನಿವಾರ್ಯವಾಗಿ ಸಾರ್ವಜನಿಕ ಜೀವನ ಪ್ರವೇಶ ಮಾಡಿದ್ದೇನೆ ಎಂದು ಪ್ರತಿಕ್ರಿಯಿಸಿದ್ದಾನೆ.

    ಅಧಿಕಾರಿ ವರ್ಗಾವಣೆ: ಕಳೆದ 20 ದಿನಗಳ ಹಿಂದೆಯೇ ಘಟನೆ ಕಾರಣರಾದ ಅಧಿಕಾರಿಯನ್ನು ವರ್ಗಾವಣೆ ಮಾಡಲಾಗಿದೆ. ಅಧಿಕಾರಿಯ ವರ್ಗಾವಣೆಗೆ ನಾನು ಯಾರ ಮೇಲು ಒತ್ತಡ ಹಾಕಿಲ್ಲ. ಅದಕ್ಕೂ ನನಗೂ ಸಂಬಂಧವಿಲ್ಲ. ಕೆಆರ್ ಪುರಂ ಬ್ಲಾಕ್ ಅಧ್ಯಕ್ಷನಾಗಿ ಸೇವೆ ಸಲ್ಲಿಸಿದ್ದೆ. ಪ್ರಸ್ತುತ ಕಾಂಗ್ರೆಸ್ ಪಕ್ಷದ ಸಿದ್ಧಾಂತ ಇಷ್ಟ ಪಟ್ಟು ಸಾಮಾನ್ಯ ಕಾರ್ಯಕರ್ತನಾಗಿ ಸೇವೆ ಸಲ್ಲಿಸುತ್ತಿದ್ದೇನೆ ಎಂದು ತಿಳಿಸಿದ್ದಾನೆ.

    ಏನಿದು ಘಟನೆ?: ನಾರಾಯಣಸ್ವಾಮಿ ಎನ್‍ಆರ್‍ಐ ಬಡಾವಣೆಯ ಜಮೀನು ವಿಚಾರದಲ್ಲಿ ಅಕ್ರಮವಾಗಿ ಖಾತೆ ಮಾಡಿಕೊಡುವಂತೆ ಬಿಬಿಎಂಪಿ ಸಹಾಯಕ ಕಂದಾಯ ಅಧಿಕಾರಿ ಚೆಂಗಲ್ ರಾಯಪ್ಪಗೆ ಒತ್ತಡ ಹಾಕಿದ್ದ. ಜಮೀನು ವ್ಯಾಜ್ಯ ಕೋರ್ಟ್‍ನಲ್ಲಿದೆ, ಅಕ್ರಮವಾಗಿ ಖಾತೆ ಮಾಡಿಕೊಡಲ್ಲ ಎಂದು ಚೆಂಗಲ್ ರಾಯಪ್ಪ ಹೇಳಿದ್ದರು. ಹೀಗಾಗಿ ಕಳೆದ ಫೆಬ್ರವರಿ 16ರಂದು ಬೆಳಗ್ಗೆ 11 ಗಂಟೆ ವೇಳೆಯಲ್ಲಿ ಹೊರಮಾವು ನಲ್ಲಿರುವ ಬಿಬಿಎಂಪಿ ಕಚೇರಿಗೆ ನುಗ್ಗಿದ ನಾರಾಯಣಸ್ವಾಮಿ, ಎಆರ್‍ಒ ಚೆಂಗಲ್ ರಾಯಪ್ಪ ಮುಂದೆಯೇ ಕಚೇರಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲು ಮುಂದಾಗಿದ್ದಾನೆ. ಖಾತೆ ಮಾಡಿಕೊಡದಿದ್ದರೆ ಕಚೇರಿಯಲ್ಲಿರುವ ದಾಖಲೆಗಳನ್ನು ಸುಟ್ಟು ಹಾಕುವುದಾಗಿ ಬೆದರಿಕೆ ಹಾಕಿದ್ದಾನೆ.

    ಚೆಂಗಲ್ ರಾಯಪ್ಪ ಖಡಕ್ ಅಧಿಕಾರಿ ಅಂತ ಗುರುತಿಸಿಕೊಂಡಿದ್ದ ವ್ಯಕ್ತಿಯಾಗಿದ್ದು, ಪೆಟ್ರೋಲ್ ಹಾಕೋದಾಗಿ ಬೆದರಿಸಿದ್ರೂ ಅವರು ಹೆದರಲಿಲ್ಲ. ಎರಡು ದಿನಗಳ ಹಿಂದೆ ಚೆಂಗಲ್ ರಾಯಪ್ಪ ಅವರನ್ನ ವರ್ಗಾವಣೆ ಮಾಡಲಾಗಿದೆ. ಸಿಎಂ ಮತ್ತು ಭೈರತಿ ಬಸವರಾಜ್ ಪ್ರಭಾವ ಬಳಸಿ ಚೆಂಗಲ್ ರಾಯಪ್ಪರನ್ನ ನಾರಾಯಣಸ್ವಾಮಿ ವರ್ಗಾವಣೆ ಮಾಡಿಸಿದ್ದಾನೆ ಎನ್ನಲಾಗಿದೆ.

    https://www.youtube.com/watch?v=1hoUCWe-r14

  • ಶಾಸಕ ಭೈರತಿ ಬಸವರಾಜ್ ಬಂಟನ ಗೂಂಡಾಗಿರಿ- ಸರ್ಕಾರಿ ಕಚೇರಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ತೀನೆಂದು ಬೆದರಿಕೆ

    ಶಾಸಕ ಭೈರತಿ ಬಸವರಾಜ್ ಬಂಟನ ಗೂಂಡಾಗಿರಿ- ಸರ್ಕಾರಿ ಕಚೇರಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ತೀನೆಂದು ಬೆದರಿಕೆ

    ಬೆಂಗಳೂರು: ಶಾಸಕ ಹ್ಯಾರಿಸ್ ಪುತ್ರನ ಗೂಂಡಾಗಿರಿ ಆಯ್ತು ಇದೀಗ ಭೈರತಿ ಬಸವರಾಜ್ ಬಲಗೈ ಬಂಟ ದರ್ಪ ಪ್ರದರ್ಶಿಸಿರೋ ಘಟನೆ ಬೆಳಕಿಗೆ ಬಂದಿದೆ.

    ಖಾತೆ ಮಾಡಿಕೊಡದಿದ್ದರೆ ಬಿಬಿಎಂಪಿ ಕಚೇರಿಗೆ ಬೆಂಕಿ ಹಚ್ಚಿಬಿಡ್ತೀನಿ ಅಂತ ಭೈರತಿ ಬಸವರಾಜ್ ಬಂಟ ಬೆದರಿಕೆ ಹಾಕಿದ್ದಾನೆ. ಕೆ.ಆರ್.ಪುರಂ ಬಿಬಿಎಂಪಿ ಕಚೇರಿಯಲ್ಲಿ ಈ ಘಟನೆ ನಡೆದಿದೆ.

    ಅಕ್ರಮ ಜಮೀನಿಗೆ ಖಾತೆ ಮಾಡಿಕೊಡುವಂತೆ ಅಧಿಕಾರಿಗೆ ಒತ್ತಡ ಹಾಕಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾರಾಯಣಸ್ವಾಮಿ ಬಿಬಿಎಂಪಿ ಕಚೇರಿ ಒಳಗೆ ಪೆಟ್ರೋಲ್ ಸುರಿದಿದ್ದು, ಬೆಂಕಿ ಹಚ್ಚೋದಾಗಿ ಬೆದರಿಕೆ ಹಾಕಿದ್ದಾನೆ. ಸಿಎಂ ಮತ್ತು ಭೈರತಿ ಬಸವರಾಜ್ ಕೃಪಾಕಟಾಕ್ಷದಿಂದ ಬೆಂಗಳೂರು ಜಲಮಂಡಳಿ ಸದಸ್ಯನಾಗಿರುವ ನಾರಾಯಣಸ್ವಾಮಿ, ಬಿಬಿಎಂಪಿ ಕಚೇರಿಗೆ ಅಧಿಕಾರಿ ಮುಂದೆಯೇ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲು ಮುಂದಾಗಿದ್ದಾನೆ.

    ಏನಿದು ಘಟನೆ?: ಕೆಆರ್ ಪುರಂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷನೂ ಆಗಿರುವ ನಾರಾಯಣಸ್ವಾಮಿ ಎನ್‍ಆರ್‍ಐ ಬಡಾವಣೆಯ ಜಮೀನು ವಿಚಾರದಲ್ಲಿ ಅಕ್ರಮವಾಗಿ ಖಾತೆ ಮಾಡಿಕೊಡುವಂತೆ ಬಿಬಿಎಂಪಿ ಸಹಾಯಕ ಕಂದಾಯ ಅಧಿಕಾರಿ ಚೆಂಗಲ್ ರಾಯಪ್ಪಗೆ ಒತ್ತಡ ಹಾಕಿದ್ದ. ಜಮೀನು ವ್ಯಾಜ್ಯ ಕೋರ್ಟ್‍ನಲ್ಲಿದೆ, ಅಕ್ರಮವಾಗಿ ಖಾತೆ ಮಾಡಿಕೊಡಲ್ಲ ಎಂದು ಚೆಂಗಲ್ ರಾಯಪ್ಪ ಹೇಳಿದ್ದರು. ಹೀಗಾಗಿ ಕಳೆದ ಫೆಬ್ರವರಿ 16ರಂದು ಬೆಳಗ್ಗೆ 11 ಗಂಟೆ ವೇಳೆಯಲ್ಲಿ ಹೊರಮಾವು ನಲ್ಲಿರುವ ಬಿಬಿಎಂಪಿ ಕಚೇರಿಗೆ ನುಗ್ಗಿದ ನಾರಾಯಣಸ್ವಾಮಿ, ಎಆರ್‍ಒ ಚೆಂಗಲ್ ರಾಯಪ್ಪ ಮುಂದೆಯೇ ಕಚೇರಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲು ಮುಂದಾಗಿದ್ದಾನೆ. ಖಾತೆ ಮಾಡಿಕೊಡದಿದ್ರೆ ಕಚೇರಿಯಲ್ಲಿರುವ ದಾಖಲೆಗಳನ್ನು ಸುಟ್ಟು ಹಾಕುವುದಾಗಿ ಬೆದರಿಕೆ ಹಾಕಿದ್ದಾನೆ.

    ಚೆಂಗಲ್ ರಾಯಪ್ಪ ಖಡಕ್ ಅಧಿಕಾರಿ ಅಂತ ಗುರುತಿಸಿಕೊಂಡಿದ್ದ ವ್ಯಕ್ತಿಯಾಗಿದ್ದು, ಪೆಟ್ರೋಲ್ ಹಾಕೋದಾಗಿ ಬೆದರಿಸಿದ್ರೂ ಅವರು ಹೆದರಿರಲಿಲ್ಲ. ಎರಡು ದಿನಗಳ ಹಿಂದೆ ಚೆಂಗಲ್ ರಾಯಪ್ಪರನ್ನ ಅವರನ್ನ ವರ್ಗಾವಣೆ ಮಾಡಲಾಗಿದೆ. ಸಿಎಂ ಮತ್ತು ಭೈರತಿ ಬಸವರಾಜ್ ಪ್ರಭಾವ ಬಳಸಿ ಚೆಂಗಲ್ ರಾಯಪ್ಪರನ್ನ ನಾರಾಯಣಸ್ವಾಮಿ ವರ್ಗಾವಣೆ ಮಾಡಿಸಿದ್ದಾನೆ ಎನ್ನಲಾಗಿದೆ.

    ಈ ಬಗ್ಗೆ ಜಂಟಿ ಆಯುಕ್ತೆ ಪೊರ್ಣಿಮಾ ವಾಸಂತಿ ಪಬ್ಲಿಕ್ ಟಿವಿಗೆ ಪ್ರತಿಕ್ರಿಯೆ ನೀಡಿದ್ದು, ಈ ಬಗ್ಗೆ ದೂರು ನೀಡಲು ಹೇಳಿದ್ದೆವು. ಅಂದೇ ಶಾಸಕರಾದ ಭೈರತಿ ಬಸವರಾಜ್, ನಾರಾಯಣಸ್ವಾಮಿಯನ್ನ ಕರೆದು ಬುದ್ಧಿವಾದ ಹೇಳಿದ್ದಾರೆ. ನಾವು ಸೆಟ್ಲ್‍ಮೆಂಟ್ ಮಾಡ್ಕೊಳ್ತೀವಿ ಎಂದು ಹೇಳಿದ್ದಾರೆ.