Tag: ಬಿಬಿಎಂಪಿ ಚುನಾವಣೆ

  • ನವೆಂಬರ್-ಡಿಸೆಂಬರ್ ವೇಳೆಗೆ ಬಿಬಿಎಂಪಿ ಚುನಾವಣೆ ಅನುಮಾನ?

    ನವೆಂಬರ್-ಡಿಸೆಂಬರ್ ವೇಳೆಗೆ ಬಿಬಿಎಂಪಿ ಚುನಾವಣೆ ಅನುಮಾನ?

    -ಅಫಿಡವಿಟ್ ಸಲ್ಲಿಸಲು ರಾಜ್ಯಕ್ಕೆ ಸುಪ್ರೀಂ ನಿರ್ದೇಶನ

    ನವದೆಹಲಿ: ನವೆಂಬರ್-ಡಿಸೆಂಬರ್ ವೇಳೆಗೆ ಬಿಬಿಎಂಪಿ (BBMP) ಚುನಾವಣೆ ನಡೆಯಬಹುದು ಎಂಬ ಕಾರ್ಪೋರೇಟರ್‌ಗಳ ನಿರೀಕ್ಷೆ ಹುಸಿಯಾಗುವ ಸಾಧ್ಯತೆ ಇದೆ. ಜನವರಿ ಬಳಿಕವೇ ಚುನಾವಣೆ ನಡೆಯುವ ಸಾಧ್ಯತೆ ದಟ್ಟವಾಗಿ ಕಾಣುತ್ತಿದೆ.

    ಬಿಬಿಎಂಪಿ ಚುನಾವಣೆ ವಿಳಂಬಕ್ಕೆ ಸಂಬಂಧಿಸಿದಂತೆ ಸೋಮವಾರ ಸುಪ್ರೀಂಕೋರ್ಟ್‌ನಲ್ಲಿ ವಿಚಾರಣೆ ನಡೆಯಿತು. ಅರ್ಜಿ ವಿಚಾರಣೆ ನಡೆಸಿದ ನ್ಯಾ.ಸೂರ್ಯಕಾಂತ್ ನೇತೃತ್ವದ ದ್ವಿ ಸದಸ್ಯ ಪೀಠ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಗೆ ಸಂಬಂಧಿಸಿದಂತೆ ಕಾಲಾನುಕ್ರಮದಲ್ಲಿ ಔಪಚಾರಿಕ ಅಫಿಡವಿಟ್ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ.ಇದನ್ನೂ ಓದಿ:Operation MAHADEV | ಪಹಲ್ಗಾಮ್‌ ದಾಳಿಯ ಮೂವರು ಶಂಕಿತ ಉಗ್ರರನ್ನು ಹತ್ಯೆಗೈದ ಸೇನೆ

    ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು ವಾದ ಮಂಡಿಸಿ, ಚುನಾವಣೆ ಸಾಕಷ್ಟು ವಿಳಂಬವಾಗಿದೆ, ಬಿಬಿಎಂಗೆ ಚುನಾವಣೆ ನಡೆದು ಹತ್ತು ವರ್ಷಗಳಾಗಿವೆ. ಚುನಾವಣೆ ನಡೆಸಲು ನಿರ್ದೇಶನ ನೀಡಬೇಕು ಎಂದು ಒತ್ತಾಯಿಸಿದರು. ಇದಕ್ಕೆ ಪ್ರತಿವಾದ ಮಂಡಿಸಿದ ರಾಜ್ಯ ಸರ್ಕಾರದ ಪರ ಹಿರಿಯ ವಕೀಲ ಎ.ಎಂ ಸಿಂಘ್ವಿ ಮತ್ತು ಅಡ್ವಕೇಟ್ ಜನರಲ್ ಕೆ.ಶಶಿಕಿರಣ್ ಶೆಟ್ಟಿ, ಗ್ರೇಟರ್ ಬೆಂಗಳೂರು ಕಾಯಿದೆಯನ್ನು ರಾಜ್ಯಪಾಲರು ಎರಡು-ಮೂರು ತಿಂಗಳು ತಡೆ ಹಿಡಿದಿದ್ದರು. ಇದರಿಂದ ಚುನಾವಣೆ ವಿಳಂಬವಾಗಿದೆ ಎಂದು ಹೇಳಿದರು.

    ಮುಂದುವರಿದು ವಾದ ಮಂಡಿಸಿದ ಸರ್ಕಾರದ ಪರ ವಕೀಲ ಸಿಂಘ್ವಿ ಅವರು, ನವೆಂಬರ್ ವೇಳೆಗೆ ಕ್ಷೇತ್ರ ವಿಂಗಡನೆ, ಮೀಸಲಾತಿ ಸೇರಿ ಎಲ್ಲ ಪ್ರಕ್ರಿಯೆ ಮುಗಿಯಲಿದೆ. ಆನಂತರ ಚುನಾವಣಾ ಆಯೋಗ ಚುನಾವಣೆ ನಡೆಸಬಹುದು ಎಂದರು. ಇಲ್ಲಿ ಮಧ್ಯಪ್ರವೇಶ ಮಾಡಿದ ಚುನಾವಣಾ ಆಯೋಗದ ಪರ ಹಿರಿಯ ವಕೀಲ ಫಣೀಂದ್ರ ಅವರು, ನವೆಂಬರ್‌ಗೆ ಪ್ರಕ್ರಿಯೆ ಮುಗಿದರೆ ಮತದಾರರ ಪಟ್ಟಿ ಸೇರಿ ಇತರೆ ಪ್ರಕ್ರಿಯೆ ಮುಗಿಸಲು ನಮಗೆ ಎರಡು ತಿಂಗಳ ಸಮಯ ಬೇಕಾಗಬಹುದು ಎಂದು ತಿಳಿಸಿದರು.

    ವಾದ-ಪ್ರತಿವಾದ ಆಲಿಸಿದ ಬಳಿಕ, ರಾಜ್ಯ ಸರ್ಕಾರವು ಚುನಾವಣಾ ಪ್ರಕ್ರಿಯೆಗೆ ಸಂಬಂಧಿಸಿದಂತೆ ಕಾಲಾನುಕ್ರಮ ಒಳಗೊಂಡ ಔಪಚಾರಿಕ ಅಫಿಡವಿಟ್ ಸಲ್ಲಿಸಬೇಕು ಎಂದು ಸೂಚಿಸಿದೆ ಮತ್ತು ವಿಚಾರಣೆಯನ್ನು ಸೋಮವಾರಕ್ಕೆ (ಆ.4) ಮುಂದೂಡಿತು.

    ಈ ಹಿಂದೆ 6 ವಾರಗಳಲ್ಲಿ ಚುನಾವಣೆ ನಡೆಸುವಂತೆ ಕರ್ನಾಟಕ ಹೈಕೋರ್ಟ್ ರಾಜ್ಯ ಚುನಾವಣೆ ಆಯೋಗಕ್ಕೆ ಸೂಚಿಸಿತ್ತು. ಕರ್ನಾಟಕ ಮುನಿಸಿಪಲ್ ಕಾರ್ಪೋರೇಷನ್ (ತಿದ್ದುಪಡಿ)ಕಾಯ್ದೆಯಡಿ ರಚಿಸಲಾಗುವ 243 ವಾರ್ಡ್ ಬದಲಿಗೆ ಮೊದಲಿದ್ದ 198 ವಾರ್ಡ್‌ಗಳಿಗೆ ಚುನಾವಣೆ ನಡೆಸುವಂತೆ ಹೈಕೋರ್ಟ್ ಸೂಚಿಸಿತ್ತು. ಈ ಆದೇಶವನ್ನು ಸುಪ್ರೀಂಕೋರ್ಟ್ನಲ್ಲಿ ರಾಜ್ಯ ಸರ್ಕಾರ ಪ್ರಶ್ನಿಸಿತ್ತು, ವಿಚಾರಣೆ ಬಳಿಕ 2020ರ ಡಿ.18ರಂದು ಅಮಾನತಲ್ಲಿ ಇಟ್ಟಿತ್ತು.ಇದನ್ನೂ ಓದಿ: ಧರ್ಮಸ್ಥಳ ಶವಗಳ ಹೂತಿಟ್ಟ ಕೇಸ್ – ನೇತ್ರಾವತಿ ತಟದಲ್ಲಿ ಎಸ್‌ಐಟಿಯಿಂದ ಸ್ಥಳ ಮಹಜರು

  • ಬಿಬಿಎಂಪಿ ಚುನಾವಣೆ ನಡೆಸಲು ನಾವು ಸಿದ್ಧ: ಆರ್. ಅಶೋಕ್

    ಬಿಬಿಎಂಪಿ ಚುನಾವಣೆ ನಡೆಸಲು ನಾವು ಸಿದ್ಧ: ಆರ್. ಅಶೋಕ್

    ಬೆಂಗಳೂರು: ಬಿಬಿಎಂಪಿ ಚುನಾವಣೆ ನಡೆಸಲು ನಾವು ಸಿದ್ಧರಾಗಿದ್ದೇವೆ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ.

    BBMP

    ಈ ಕುರಿತಂತೆ ವಿಧಾನಸೌಧದಲ್ಲಿ ಪಬ್ಲಿಕ್‌ ಟಿವಿ ಜೊತೆಗೆ ಮಾತನಾಡಿದ ಅವರು, ಬಿಬಿಎಂಪಿ ಚುನಾವಣೆ ಸಂಬಂಧ ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ಬಿಬಿಎಂಪಿ ಚುನಾವಣೆ ಮೀಸಲಾತಿ ಒಂದು ವಾರದಲ್ಲಿ ಮಾಡಬೇಕು. ನಾವು ಸಿದ್ಧರಿದ್ದೇವೆ. ಸುಪ್ರೀಂ ಆದೇಶದಂತೆ ನಡೆದುಕೊಳ್ಳುತ್ತೇವೆ. ನಮ್ಮ ಸರ್ಕಾರ ಹಾಗೂ ಪಕ್ಷ ಚುನಾವಣೆಗೆ ಸಿದ್ಧವಾಗಿದೆ. ಚುನಾವಣೆ ನಡೆಸಲು ಯಾವುದೇ ಭೀತಿ ಇಲ್ಲ. ಈಗಾಗಲೇ ಬೂತ್ ಹಾಗೂ ವಾರ್ಡ್ ಮಟ್ಟದಲ್ಲಿ ಸಭೆಗಳನ್ನು ಮಾಡಿದ್ದೇವೆ. ಕಾರ್ಯಕರ್ತರು, ಮುಖಂಡರು ಎಲ್ಲ ಸಿದ್ಧತೆ ಮಾಡಿಕೊಂಡಿದ್ದಾರೆ. ಚುನಾವಣೆ ಸಂಬಂಧ ನಾವೆಲ್ಲಾ ಸೇರಿ ಹಲವು ಸಭೆ ಮಾಡಿದ್ದೇವೆ. ಚುನಾವಣೆ ದಿನಾಂಕ ಎಲೆಕ್ಷನ್ ಕಮಿಷನ್ ನಿಗದಿ ಮಾಡಲಿದೆ. ಉಳಿದ ಕೆಲಸಗಳು ಸರ್ಕಾರದ ಜವಾಬ್ದಾರಿ. ಸುಪ್ರೀಂ ಕೋರ್ಟ್ ಆದೇಶ ಬಗ್ಗೆ ಸಿಎಂ ಜೊತೆ ಚರ್ಚಿಸುತ್ತೇನೆ. ವಾರ್ಡ್ ವಿಂಗಡಣೆ ಸಂಬಂಧಿಸಿದಂತೆ ಅಬ್ಜೆಕ್ಷನ್ ಮಾಡುವವರು ಮಾಡಬಹುದು ಎಂದು ಹೇಳಿದರು. ಇದನ್ನೂ ಓದಿ: ನಿರ್ದೇಶಕ ಹೇಳಿದ ಮಾತು ಕೇಳದೇ ಆಸ್ಪತ್ರೆ ಸೇರಿದ ಕಿರಿಕ್ ನಟಿ ಸಂಯುಕ್ತ ಹೆಗ್ಡೆ

    ಪ್ರವೀಣ್ ನೆಟ್ಟಾರು ಕೊಲೆಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಮುಖ್ಯಮಂತ್ರಿಗಳ ಅಭಿಪ್ರಾಯಕ್ಕೆ ನನ್ನ ಸಹಮತ ಇದೆ. ಪ್ರವೀಣ್ ನಂತಹ ಯುವಮುಖಂಡನ ಹತ್ಯೆ ಅತ್ಯಂತ ಖಂಡನೀಯ. ಕಿಡಿಗೇಡಿಗಳಿಗೆ ಯಾವುದೇ ಮುಲಾಜು ನೀಡದೇ ಅಗತ್ಯ ಕ್ರಮ ಕೈಗೊಳ್ಳುತ್ತೇವೆ. ಮುಖ್ಯಮಂತ್ರಿಗಳು ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ. ಟೆರರಿಸ್ಟ್‌ಗಳು, ಯುವಕರನ್ನು ಹತ್ಯೆ ಮಾಡುವವರು, ಸಮಾಜದ ಕಂಟಕರಿಗೆ ಯುಪಿ ಮಾಡಲ್‍ಗಿಂತ ಕಠಿಣ ಮಾಡಲ್ ತಂದು ಕ್ರಮ ಕೈಗೊಳ್ಳುವುದು ಅನಿವಾರ್ಯ. ಯಾವ ರೀತಿಯಲ್ಲಿಯೂ ಕರುಣೆ ತೋರದೆ ಇಂತವರನ್ನು ಶಿಕ್ಷಿಸಲೇಬೇಕು ಎಂದರು. ಇದನ್ನೂ ಓದಿ: ತರಗತಿಯನ್ನೇ ಮಸಾಜ್ ಪಾರ್ಲರ್ ಮಾಡಿಕೊಂಡ ಶಿಕ್ಷಕಿ – ವಿದ್ಯಾರ್ಥಿಗೆ ಮಸಾಜ್ ಮಾಡುವಂತೆ ಒತ್ತಾಯ

    Live Tv
    [brid partner=56869869 player=32851 video=960834 autoplay=true]

  • ಶೀಘ್ರವೇ ಬಿಬಿಎಂಪಿ ಚುನಾವಣೆ: ಸುಪ್ರೀಂನಿಂದ ಮಹತ್ವದ ತೀರ್ಪು

    ಶೀಘ್ರವೇ ಬಿಬಿಎಂಪಿ ಚುನಾವಣೆ: ಸುಪ್ರೀಂನಿಂದ ಮಹತ್ವದ ತೀರ್ಪು

    ನವದೆಹಲಿ/ ಬೆಂಗಳೂರು: ಮಧ್ಯಪ್ರದೇಶ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನೀಡಿದ ತೀರ್ಪಿನಿಂದ ಶೀಘ್ರವೇ ಬಿಬಿಎಂಪಿ ಚುನಾವಣೆ ನಡೆಯುವ ಸಾಧ್ಯತೆಯಿದೆ.

    ಮಧ್ಯಪ್ರದೇಶದಲ್ಲಿ  ನಾನಾ ಕಾರಣಗಳಿಂದಾಗಿ ಕಳೆದ 2 ವರ್ಷಗಳಿಂದ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆದಿರಲಿಲ್ಲ. ಈ ಬಗ್ಗೆ ಸಲ್ಲಿಕೆಯಾಗಿದ್ದ ಪಿಐಎಲ್‌ ವಿಚಾರಣೆ ನಡೆಸಿದ ಕೋರ್ಟ್‌ ಮಧ್ಯಪ್ರದೇಶದ 23 ಸಾವಿರ ಸ್ಥಳೀಯ ಸಂಸ್ಥೆಗಳಿಗೆ ಶೀಘ್ರವೇ ಚುನಾವಣೆ ನಡೆಸಬೇಕು ಎಂದು ಮಹತ್ವದ ತೀರ್ಪು ನೀಡಿದೆ.

    ಈ ತೀರ್ಪು ಬೇರೆ ರಾಜ್ಯಗಳಲ್ಲಿ ಮತ್ತು ಕೇಂದ್ರಾಡಳಿತ ಪ್ರದೇಶದಲ್ಲಿ ಬಾಕಿ ಉಳಿದಿರುವ ಎಲ್ಲ ಸ್ಥಳೀಯ ಸಂಸ್ಥೆಗಳ ಚುನಾವಣೆಗೂ ಅನ್ವಯ ಎಂದು ತನ್ನ ಆದೇಶದಲ್ಲಿ ತಿಳಿಸಿದ ಹಿನ್ನೆಲೆಯಲ್ಲಿ ಶೀಘ್ರವೇ ಬಿಬಿಎಂಪಿಯ 198 ವಾರ್ಡ್‌ಗಳಿಗೆ ಚುನಾವಣೆ ನಡೆಯುವ ಸಾಧ್ಯತೆಯಿದೆ. ಇದನ್ನೂ ಓದಿ: ಟೀಚರ್ಸ್ ಎಕ್ಸಾಂಗೆ ಟಫ್ ರೂಲ್ಸ್ ಜಾರಿ – ಯಾವುದಕ್ಕೆ ನಿಷೇಧ?

    ಈಗಾಗಲೇ ಬಿಬಿಎಪಿ ಚುನಾವಣೆ ಸಂಬಂಧ ಸಲ್ಲಿಕೆಯಾಗಿದ್ದ ಪ್ರತ್ಯೇಕ ಅರ್ಜಿ ಸುಪ್ರೀಂ ಕೋರ್ಟ್‌ನಲ್ಲಿ ವಿಲೇವಾರಿ ಆಗಬೇಕಿದೆ. ಬಿಬಿಎಂಪಿ 198 ವಾರ್ಡ್‌ಗಳನ್ನು ಪುನರ್‌ ವಿಂಗಡಿಸಿ 243 ವಾರ್ಡ್‌ಗಳಾಗಿ ಮಾಡಲು ಸರ್ಕಾರ ಮುಂದಾಗಿತ್ತು. ಆ ನೆಪದಲ್ಲಿ ಚುನಾವಣೆ ಕಾಲಮಿತಿಯಲ್ಲಿ ನಡೆಸಲು ಸಾಧ್ಯವಾಗಿರಲಿಲ್ಲ. ಇದನ್ನು ಪ್ರಶ್ನಿಸಿ ಮಾಜಿ ಪಾಲಿಕೆ ಸದಸ್ಯರು ಸುಪ್ರೀಂ ಮೆಟ್ಟಿಲು ಏರಿದ್ದರು.

    ಇಂದಿನ ತೀರ್ಪಿನ ಬಗ್ಗೆ ಪ್ರತಿಕ್ರಿಯಿಸಿದ ಕಂದಾಯ ಸಚಿವ ಅಶೋಕ್‌, ಸ್ಥಳೀಯ ಚುನಾವಣೆ ಸಂಬಂಧ ಸುಪ್ರೀಂ ಕೋರ್ಟ್ ಆದೇಶ ಕರ್ನಾಟಕ ಮಟ್ಟಿಗೆ ಮಹತ್ವದ ಬೆಳವಣಿಗೆ. ಕೇಸ್‌ನಲ್ಲಿ ಮೂರು ಪೀಠದ ನ್ಯಾಯಾಧೀಶರು ಮಹತ್ವದ ತೀರ್ಪು ನೀಡಿದ್ದಾರೆ. ಬಿಬಿಎಂಪಿ ಚುನಾವಣೆ ಸಂಬಂಧ ಪ್ರತ್ಯೇಕ ಕೇಸ್ ಇದ್ದು ಪಟ್ಟಿ ಆಗಲು ಮೂರು ತಿಂಗಳು ಇತ್ತು. ಮಧ್ಯಪ್ರದೇಶಕ್ಕೆ ನೀಡಿದ ಆದೇಶವಾದರೂ ಎಲ್ಲಾ ರಾಜ್ಯಕ್ಕೂ ಅನ್ವಯ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ ಎಂದು ತಿಳಿಸಿದರು. ಇದನ್ನೂ ಓದಿ: MBP ನನ್ನ ಸ್ನೇಹಿತರು, ಬೇಕೆಂದಾಗ ಭೇಟಿ ಮಾಡ್ತೀನಿ: ಡಿಕೆಶಿಗೆ ಅಶ್ವಥ್ ನಾರಾಯಣ ತಿರುಗೇಟು

     

    ಎಲ್ಲಾ ರಾಜ್ಯದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆ ಮಾಡಬೇಕು ಅಂತ ಹೇಳಿದೆ. ಕಳೆದ ಬಾರಿ ನಡೆದ ಚುನಾವಣೆ ಪ್ರಕಾರವೇ ನಡೆಸಲು ಸೂಚಿಸಿದೆ. ಬಿಬಿಎಂಪಿಯ 198 ವಾರ್ಡ್‌ಗಳಿಗೆ ಮೀಸಲಾತಿ ಪ್ರಕಾರ ಚುನಾವಣೆ ನಡೆಯಲಿದೆ. ಈ ಬಗ್ಗೆ ಸಿಎಂ ಜೊತೆ ಮಾತಾಡುತ್ತೇವೆ. ಕರ್ನಾಟಕ ಸರ್ಕಾರ ಚುನಾವಣೆ ಮಾಡಲು ತಯಾರಿದೆ ಎಂದು ಹೇಳಿದರು.

    ಚುನಾವಣೆ ಯಾವಾಗ ಬಂದರೂ ಬಿಜೆಪಿ ಕೂಡ ತಯಾರಿದೆ. ಬಿಜೆಪಿ ಬೂತ್ ಮಟ್ಟದ ಕಾರ್ಯಕ್ರಮ, ಸಮಾವೇಶ ಮುಗಿದಿದೆ. ಅಭ್ಯರ್ಥಿಗಳ ಆಯ್ಕೆ ಮಾತ್ರ ಬಾಕಿ ಇದೆ ಎಂದು ತಿಳಿಸಿದರು.

  • ಬಿಬಿಎಂಪಿ ಚುನಾವಣೆಗೆ ಜೆಡಿಎಸ್ ಸಜ್ಜು – ಜನತಾ ಸಂಗಮದಲ್ಲಿ ಮುಖಂಡರೊಂದಿಗೆ ಹೆಚ್‍ಡಿಕೆ ಸಮಾಲೋಚನೆ

    ಬಿಬಿಎಂಪಿ ಚುನಾವಣೆಗೆ ಜೆಡಿಎಸ್ ಸಜ್ಜು – ಜನತಾ ಸಂಗಮದಲ್ಲಿ ಮುಖಂಡರೊಂದಿಗೆ ಹೆಚ್‍ಡಿಕೆ ಸಮಾಲೋಚನೆ

    ಬೆಂಗಳೂರು: ಮುಂದಿನ ಪಾಲಿಕೆ ಚುನಾವಣೆ ಹಾಗೂ 2023ರ ವಿಧಾನಸಭೆ ಚುನಾವಣೆಗೆ ರಾಜಧಾನಿಯ ಮುಖಂಡರು, ಕಾರ್ಯಕರ್ತರನ್ನು ಸಜ್ಜುಗೊಳಿಸುವ ನಿಟ್ಟಿನಲ್ಲಿ ನಗರದಲ್ಲಿ ಜೆಡಿಎಸ್ ಸಂಘಟನಾ ಕಾರ್ಯಾಗಾರ ಜನತಾ ಸಂಗಮ ನಡೆಸಲಾಗುತ್ತಿದೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು.

    ಕಾರ್ಯಗಾರದಲ್ಲಿ ಭಾಗಿಯಾಗುವುದಕ್ಕೆ ಮುನ್ನ ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರು ನಗರಕ್ಕೆ ಜೆಡಿಎಸ್ ಪಕ್ಷವು ಅನೇಕ ಅಭಿವೃದ್ಧಿ ಯೋಜನೆಗಳನ್ನು ನೀಡಿದೆ. ಅಲ್ಲದೇ ಮುಂದಿನ ದಿನಗಳಲ್ಲಿ ಪಕ್ಷದ ಜವಾಬ್ದಾರಿ ಏನಿದೆ ಎಂಬ ಬಗ್ಗೆಯೂ ಇಂದಿನ ಕಾರ್ಯಗಾರದಲ್ಲಿ ಚರ್ಚೆ ನಡೆಸಲಾಗುವುದು. ಜೊತೆಗೆ, ಪಕ್ಷದ ಸಂಘಟನೆಯಲ್ಲಿ ಎಲ್ಲೆಲ್ಲಿ ಲೋಪ ಆಗಿದೆ ಎನ್ನುವುದನ್ನು ಚರ್ಚೆ ಮಾಡಿ ಸರಿಪಡಿಸಲಾಗುವುದು ಎಂದರು. ಇದನ್ನೂ ಓದಿ: ವಾಯುಸೇನೆ ವಿಮಾನದಲ್ಲಿ ಲ್ಯಾಂಡಿಂಗ್ – ಎಕ್ಸ್‌ಪ್ರೆಸ್‌ವೇ ಉದ್ಘಾಟಿಸಿದ ಮೋದಿ

    ದೇವೇಗೌಡರು ಮುಖ್ಯಮಂತ್ರಿ, ಪ್ರಧಾನಿ ಆಗಿದ್ದಾಗ ಹಾಗೂ ನಾನು ಮುಖ್ಯಮಂತ್ರಿ ಆಗಿದ್ದಾಗ ಬೆಂಗಳೂರು ನಗರ ಅಭಿವೃದ್ಧಿಗೆ ಅನೇಕ ಕಾರ್ಯಕ್ರಮಗಳನ್ನು ಕೈಗೊಳ್ಳಲಾಗಿದೆ. ಕುಡಿಯುವ ನೀರು, ಐಟಿ ಬಿಟಿ, ಮೆಟ್ರೋ, ಮೂಲಸೌಕರ್ಯ ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ಉತ್ತಮವಾಗಿ ಕೆಲಸ ಮಾಡಿದ್ದೇವೆ. ನಗರಕ್ಕೆ ಸಾಕಷ್ಟು ಕೆಲಸ ಮಾಡಿದ್ದಾಗ್ಯೂ ಆ ಬಗ್ಗೆ ಜನರಿಗೆ ಪೂರ್ಣ ಮಾಹಿತಿ ಇಲ್ಲ. ಪಕ್ಷದ ಸಾಧನೆಗಳನ್ನು ಜನತೆಗೆ ತಲುಪಿಸುವ ಕೆಲಸ ಮಾಡುವ ವಿಚಾರವಾಗಿ ಕಾರ್ಯಗಾರದಲ್ಲಿ ಚರ್ಚೆ ಮಾಡಲಾಗುತ್ತದೆ ಎಂದು ತಿಳಿಸಿದರು. ಇದನ್ನೂ ಓದಿ: ಹೆಸರಿಗೆ ಮಾತ್ರ ಸರ್ಕಾರಿ ಆಸ್ಪತ್ರೆ- ಚಿಕಿತ್ಸೆ ಕೊಡಲು ವೈದ್ಯರೇ ಇಲ್ಲ

    HDD

    ಬಿಬಿಎಂಪಿ ಚುನಾವಣೆಗೆ ತಯಾರಿ:
    ನಮ್ಮ ಪಕ್ಷವನ್ನು ಪಾಲಿಕೆ ಚುನಾವಣೆಗೆ ಸಜ್ಜು ಮಾಡುತ್ತಿದ್ದೇವೆ. ಫೆಬ್ರವರಿಯಲ್ಲಿ ಬಿಬಿಎಂಪಿ ಚುನಾವಣೆ ಎನ್ನುವ ಸುದ್ದಿ ಇದೆ. ಹೀಗಾಗಿ ಪಕ್ಷದ ಸಂಘಟನೆಗೆ ಹೆಚ್ಚು ಗಮನ ಕೊಡಲಾಗುತ್ತದೆ. ವಾರ್ಡ್ ವಿಂಗಡಣೆ ಕೆಲಸ ನಡೆಯುತ್ತಿದೆ. ನಗರದ ಏಳೆಂಟು ವಿಧಾನಸಭೆ ಕ್ಷೇತ್ರಗಳಲ್ಲಿ ನಮ್ಮ ಪಕ್ಷ ಉತ್ತಮ ಶಕ್ತಿ ಹೊಂದಿದೆ. ಉಳಿದ ಕ್ಷೇತ್ರಗಳಲ್ಲಿ ಬಲ ಹೆಚ್ಚಿಸಿಕೊಳ್ಳುವ ಬಗ್ಗೆಯೂ ಚರ್ಚೆ ಮಾಡುತ್ತಿದ್ದೇವೆ. ಪಾಲಿಕೆ ಚುನಾವಣೆಯಲ್ಲಿ ಮಹಿಳೆಯರಿಗೆ ಹೆಚ್ಚಿನ ಆದ್ಯತೆ ನೀಡುತ್ತೇವೆ. ಆ ಮಾತನ್ನು ಈಗಾಗಲೇ ಹೇಳಿದ್ದೇವೆ ಎಂದು ನುಡಿದರು.

    H.D Kumarswamy

    ಬಿಟ್ ಕಾಯಿನ್ ಬರೀ ಗೊಂದಲ:
    ಬಿಟ್ ಕಾಯಿನ್ ವಿಚಾರದಲ್ಲಿ ಬರೀ ಗೊಂದಲ ಎಬ್ಬಿಸಲಾಗುತ್ತಿದೆ. ತನಿಖೆಯನ್ನು ಇಡಿಗೆ (ಜಾರಿ ನಿರ್ದೇಶನಾಲಯ) ಕೊಡಲಾಗಿದೆ ಅಂತಿದ್ದಾರೆ. ನಿಖರ ಮಾಹಿತಿ ಯಾರ ಬಳಿಯೂ ಇಲ್ಲ. ಮುಖ್ಯ ಆರೋಪಿಯನ್ನು ಏಳೆಂಟು ಬಾರಿ ಅರೆಸ್ಟ್ ಮಾಡಿ ತನಿಖೆಗೆ ಒಳಪಡಿಸಲಾಗಿದೆ. ಸರ್ಕಾರವು ಈ ಹಗರಣದ ಬಗ್ಗೆ ನುರಿತ ತಜ್ಞರ ಸಹಕಾರ ಪಡೆದು ತನಿಖೆ ನಡೆಸಬೇಕು ಎಂದು ಸರ್ಕಾರಕ್ಕೆ ಸಲಹೆ ನೀಡಿದರು. ಇದನ್ನೂ ಓದಿ: ದಾಂಪತ್ಯ ಜೀವನಕ್ಕೆ ಕಾಲಿಟ್ಟ ರಾಜ್‍ಕುಮಾರ್ ರಾವ್ – ಫೋಟೋ ವೈರಲ್

    ಆರೋಪಿ ಶ್ರೀಕಿ ಜೀವಕ್ಕೆ ಅಪಾಯ ಇದೆ. ಆತನಿಗೆ ಪೊಲೀಸ್ ರಕ್ಷಣೆ ಕೊಡಬೇಕು ಎಂಬ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಹೇಳಿಕೆಗೆ, “ಇಷ್ಟು ವರ್ಷ ಆತನ ಜೀವಕ್ಕೆ ಅಪಾಯ ಇರಲಿಲ್ಲ. ಈಗ ಅವನಿಗೆ ಜೀವ ಬೆದರಿಕೆ ಇದೆ ಎಂದರೆ ಹೇಗೆ? ಕಾಂಗ್ರೆಸ್ ಪಕ್ಷಕ್ಕೆ ಈ ಬಗ್ಗೆ ನಿಖರ ಮಾಹಿತಿ ಇರಬೇಕು. ರಕ್ಷಣೆ ಕೊಡೋದು ತಪ್ಪಲ್ಲ, ಕೊಡಲಿ. ಇದುವರೆಗೆ ಎಂಥೆಂತವರಿಗೋ ರಕ್ಷಣೆ ನೀಡಲಾಗಿದೆ. ಇವರಿಗೂ ಕೊಡಲಿ, ಬೇಡ ಅಂದವರು ಯಾರು?” ಎಂದರು.

    ಇದೇ ವೇಳೆ ಪೇಜಾವರ ಶ್ರೀಗಳ ಬಗ್ಗೆ ಹಾಗೂ ತಮ್ಮ ಗ್ರಾಮ ವಾಸ್ತವ್ಯದ ಬಗ್ಗೆ ಸಂಗೀತ ನಿರ್ದೇಶಕ ಹಂಸಲೇಖ ನೀಡಿರುವ ಹೇಳಿಕೆಯ ಬಗ್ಗೆ ಪ್ರತಿಕ್ರಿಯಿಸಿದ ಅವರು, “ಮುಖ್ಯಮಂತ್ರಿ ಆಗಿದ್ದಾಗ ನಾನು ಮಾಡಿದ ಗ್ರಾಮ ವಾಸ್ತವ್ಯಕ್ಕೆ ಮಹಾತ್ಮ ಗಾಂಧೀಜಿ ಅವರೇ ಸ್ಫೂರ್ತಿ ಮತ್ತು ಆದರ್ಶ. ಗ್ರಾಮ ವಾಸ್ತವ್ಯ ಅನ್ನೋದು ನಾಟಕೀಯವಾಗಿ ಮಾಡಿಲ್ಲ. ಆತ್ಮತೃಪ್ತಿಗಾಗಿ, ಜನರ ಪರ ಕೆಲಸ ಮಾಡುವುದಕ್ಕೆ ನಾನು ಆ ಕಾರ್ಯಕ್ರಮ ಮಾಡಿದ್ದೇನೆ”. ನನ್ನ ಗ್ರಾಮ ವಾಸ್ತವ್ಯದಿಂದ ಅನೇಕರಿಗೆ ಅನುಕೂಲವಾಗಿದೆ. ಯಾರನ್ನೋ ಮೆಚ್ಚಿಸಲಿಕ್ಕೆ ನಾನು ಗ್ರಾಮ ವಾಸ್ತವ್ಯ ಮಾಡಲಿಲ್ಲ. ಆ ವಿಚಾರಗಳ ಬಗ್ಗೆ ಚರ್ಚೆ ಮಾತನಾಡುವುದು ಅಗತ್ಯ ಇರಲಿಲ್ಲ. ಮುಖ್ಯವಾಗಿ ಧರ್ಮ ಹಾಗೂ ಧಾರ್ಮಿಕ ಗುರುಗಳ ಬಗ್ಗೆ ಹೀಗೆ ಮಾತನಾಡುವುದು ಸರಿಯಲ್ಲ ಎಂದು ಹೇಳಿದರು. ಇದನ್ನೂ ಓದಿ: ತಮ್ಮ ಕಲಾ ಕೌಶಲ್ಯದ ಮೂಲಕ ಅಪ್ಪುಗೆ ಗೌರವ ನಮನ ಸಲ್ಲಿಸಿದ ಕಲಾವಿದ

    ಸುದ್ದಿಗೋಷ್ಠಿಯಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯ ಸರವಣ, ಜೆಡಿಎಸ್ ನಗರ ಅಧ್ಯಕ್ಷ ಆರ್.ಪ್ರಕಾಶ್ ಉಪಸ್ಥಿತರಿದ್ದರು.

  • ಬಿಬಿಎಂಪಿ ವಾರ್ಡ್ ಮೀಸಲಾತಿ ಪ್ರಕಟ- 98 ವಾರ್ಡ್‍ಗಳಲ್ಲಿ ನಾರಿ ಶಕ್ತಿ

    ಬಿಬಿಎಂಪಿ ವಾರ್ಡ್ ಮೀಸಲಾತಿ ಪ್ರಕಟ- 98 ವಾರ್ಡ್‍ಗಳಲ್ಲಿ ನಾರಿ ಶಕ್ತಿ

    ಬೆಂಗಳೂರು: ರಾಜ್ಯ ಸರ್ಕಾರ ಬಿಬಿಎಂಪಿ ಎಲೆಕ್ಷನ್‍ಗೆ ಸದ್ದಿಲ್ಲದೇ ಸಿದ್ಧತೆ ನಡೆಸುತ್ತಿದೆ. ಬಿಬಿಎಂಪಿಯ 198 ವಾರ್ಡ್ ಗಳ ಮೀಸಲಾತಿ ಪಟ್ಟಿಯನ್ನು ನಗರಾಭಿವೃದ್ಧಿ ಇಲಾಖೆ ರಾಜ್ಯಪತ್ರದಲ್ಲಿ ಪ್ರಕಟಿಸಿದೆ.

    ಇಂದು ಬಿಬಿಎಂಪಿ ವಾರ್ಡ್‍ವಾರು ಮೀಸಲಾತಿ ಪಟ್ಟಿ ಬಿಡುಗಡೆ ಮಾಡಿದೆ. ಆದರೆ ಕಾಂಗ್ರೆಸ್ ಗೆಲ್ಲುವ ಸಾಧ್ಯತೆ ಇದ್ದ ಬಹುತೇಕ ವಾರ್ಡ್‍ಗಳ ಮೀಸಲಾತಿ ಬದಲಿಸಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಹಲವು ವಾರ್ಡ್‍ಗಳನ್ನು ಕೈಬಿಟ್ಟು, ಹೊಸ ವಾರ್ಡ್ ಸೃಷ್ಟಿ ಮಾಡಲಾಗಿದೆ.

    ಮಾಜಿ ಮೇಯರ್ ಗಂಗಾಂಬಿಕೆ ಪ್ರತಿನಿಧಿಸುತ್ತಿದ್ದ ವಾರ್ಡ್ ನಾಪತ್ತೆಯಾಗಿದೆ. ಬಿಬಿಎಂಪಿ ವಿಪಕ್ಷ ನಾಯಕ ವಾಜೀದ್ ಪ್ರತಿನಿಧಿಸುತ್ತಿದ್ದ ವಾರ್ಡ್‍ನ್ನು ಮಹಿಳೆಯರಿಗೆ ಮೀಸಲು ಇರಿಸಲಾಗಿದೆ. ಮಾಜಿ ಆಡಳಿತ ಪಕ್ಷ ನಾಯಕ ಶಿವರಾಜ್ ಪ್ರತಿನಿಧಿಸುತ್ತಿದ್ದ ವಾರ್ಡ್‍ನ್ನು ಸಾಮಾನ್ಯ ಮಹಿಳೆಗೆ ಮೀಸಲು ಇಡಲಾಗಿದೆ. ಚಿಕ್ಕಪೇಟೆಯ ಏಳು ವಾರ್ಡ್‍ಗಳನ್ನು ಐದಕ್ಕೆ ಇಳಿಸಲಾಗಿದೆ. ಮಾಜಿ ಶಾಸಕ ಆರ್ ದೇವರಾಜ್ ಪುತ್ರ ಪ್ರತಿನಿಧಿಸುತ್ತಿದ್ದ ವಾರ್ಡ್ ಸಹ ಮಾಯವಾಗಿದೆ. ಹೊಂಬೆಗೌಡ ನಗರ ವಾರ್ಡ್ ಸಹ ಇಲ್ಲವಾಗಿದೆ. ಮಹಿಳೆಯರಿಗೆ 98 ವಾರ್ಡ್ ಮೀಸಲು ಇರಿಸಲಾಗಿದೆ.

    ಕಾರ್ಪೋರೆಟರ್ ಗಳ ಅಧಿಕಾರವಧಿ ಅಂತ್ಯವಾಗಿರೋ ಹಿನ್ನೆಲೆಯಲ್ಲಿ ಪ್ರತಿಯೊಂದು ವಾರ್ಡ್‍ಗೂ ಶೀಘ್ರದಲ್ಲೇ ನೋಡೆಲ್ ಅಧಿಕಾರಿ ನೇಮಕ ಮಾಡಲು ಸರ್ಕಾರ ಮುಂದಾಗಿದೆ. ಬಿಬಿಎಂಪಿ ಮೀಸಲಾತಿ ಪಟ್ಟಿಗೆ 7 ದಿನಗಳ ಆಕ್ಷೇಪಣೆ ಸಲ್ಲಿಸಬಹುದಾಗಿದ್ದು, ಲಿಖಿತ ರೂಪದಲ್ಲಿ ಬೆಂಗಳೂರು ಜಿಲ್ಲಾಧಿಕಾರಿಗೆ ಸಲ್ಲಿಸಬಹುದಾಗಿದೆ.

  • ಬಿಬಿಎಂಪಿ ಮೇಯರ್ ಚುನಾವಣೆ – ತಡರಾತ್ರಿಯವರೆಗೂ ಬಿಜೆಪಿ ಸಭೆ

    ಬಿಬಿಎಂಪಿ ಮೇಯರ್ ಚುನಾವಣೆ – ತಡರಾತ್ರಿಯವರೆಗೂ ಬಿಜೆಪಿ ಸಭೆ

    ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮೇಯರ್, ಉಪಮೇಯರ್ ಚುನಾವಣೆ ಇಂದು ನಡೆಯಲಿದ್ದೂ, ಬಿಜೆಪಿಯಿಂದ ಯಾರು ಸ್ಪರ್ಧಿಸುತ್ತಾರೆ ಎನ್ನುವುದು ಇನ್ನೂ ಅಂತಿಮವಾಗಿಲ್ಲ.

    ಸೋಮವಾರ ತಡರಾತ್ರಿಯವರೆಗೆ ಬಿಜೆಪಿ ನಾಯಕರು ಸಭೆ ನಡೆಸಿದ್ದಾರೆ. ಈ ಸಭೆಯಲ್ಲಿ ಮೇಯರ್ ಸ್ಥಾನಕ್ಕೆ ಸರ್ವಜ್ಞನಗರದ ಪದ್ಮನಾಭರೆಡ್ಡಿ, ಶಾಂತಿನಗರ ಗೌತಮ್ ಹೆಸರು ಕೇಳಿ ಬಂದಿದ್ದರೆ ಉಪಮೇಯರ್ ಸ್ಥಾನಕ್ಕೆ ವಿಜಯನಗರದ ಮಹಾಲಕ್ಷ್ಮಿ, ಬೊಮ್ಮನಹಳ್ಳಿಯ ಗುರುಮೂರ್ತಿ ಹೆಸರು ಕೇಳಿಬಂದಿದೆ. ಒಟ್ಟು ನಾಲ್ಕು ಮಂದಿಯಲ್ಲಿ ಅಂತಿಮವಾಗಿ ಯಾರು ಆಯ್ಕೆ ಆಗಿದ್ದಾರೆ ಎನ್ನುವುದು ತಿಳಿದು ಬಂದಿಲ್ಲ.

    ಮೋದಿ, ಅಮಿತ್ ಶಾ ಅಧಿಕಾರದ ಸಮಯದಲ್ಲಿ ಹಲವು ಬಾರಿ ಕೊನೆ ಕ್ಷಣದಲ್ಲಿ ಹೊಸ ವ್ಯಕ್ತಿಗೆ ಮಣೆ ಹಾಕಿದ್ದು ಇದೆ. ಹೀಗಾಗಿ ಕೊನೆ ಕ್ಷಣದಲ್ಲಿ ಮೇಯರ್, ಉಪಮೇಯರ್ ಹುದ್ದೆ ಬೇರೆ ವ್ಯಕ್ತಿ ಆಯ್ಕೆಯಾದರೂ ಅಚ್ಚರಿ ಇಲ್ಲ ಎನ್ನುವ ಮಾತು ಕೇಳಿಬಂದಿದೆ.

    ಇಂದು ಬೆಳಗ್ಗೆ 8.30ರಿಂದ ನಾಮಪತ್ರ ಸಲ್ಲಿಕೆಯಾಗಲಿದ್ದು, ಈ ಬಾರಿಯೂ ಬಿಬಿಎಂಪಿಯಲ್ಲಿ ಮೈತ್ರಿಯನ್ನು ಮುಂದುವರಿಸಿಕೊಂಡು ಹೋಗಲು ಕಾಂಗ್ರೆಸ್ ಹಾಗೂ ಜೆಡಿಎಸ್ ನಿರ್ಧರಿಸಿದೆ. ಮೈತ್ರಿ ಅನ್ವಯ ಕಾಂಗ್ರೆಸ್‍ಗೆ ಮೇಯರ್ ಸ್ಥಾನ ಹಾಗೂ ಜೆಡಿಎಸ್‍ಗೆ ಉಪ ಮೇಯರ್ ಸ್ಥಾನ ಹಂಚಿಕೆ ಮಾಡಿಕೊಳ್ಳಲಾಗಿದೆ.

    ಮೈತ್ರಿ ಅನ್ವಯ ಕಾಂಗ್ರೆಸ್, ಜೆಡಿಎಸ್‍ನಿಂದ ಮೇಯರ್ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧಿಸಲು ದತ್ತಾತ್ರೇಯ ವಾರ್ಡ್ ಸದಸ್ಯರಾದ ಸತ್ಯನಾರಾಯಣರನ್ನು ಆಯ್ಕೆ ಮಾಡಲಾಗಿದ್ದು, ಕೆಪಿಸಿಸಿ ಅಧಿಕೃತವಾಗಿ ಪ್ರಕಟಿಸಿದೆ. ಮಂಗಳವಾರ ಸತ್ಯನಾರಾಯಣ ಅವರು ಮೈತ್ರಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿದ್ದಾರೆ.  ಇದನ್ನೂ ಓದಿ: ಸಿಎಂ ಮಾತಿಗೂ ಡೋಂಟ್ ಕೇರ್ – ಸರ್ಕಾರಕ್ಕೆ ಸವಾಲೆಸೆದ ನಿಷ್ಠಾವಂತ ಅಧಿಕಾರಿ

    ಇತ್ತ ಉಪಮೇಯರ್ ಸ್ಥಾನಕ್ಕೆ ಅಂತಿಮ ಕ್ಷಣದಲ್ಲಿ ಜೆಡಿಎಸ್ ತನ್ನ ಅಭ್ಯರ್ಥಿಯನ್ನು ಬದಲಿಸಿದ್ದು, ಶಕ್ತಿ ಗಣಪತಿ ವಾರ್ಡ್ 74ರ ಪಾಲಿಕೆ ಸದಸ್ಯೆ ಗಂಗಮ್ಮ ರಾಜಣ್ಣ ಅವರಿಗೆ ನಾಮಪತ್ರ ಸಲ್ಲಿಕೆ ಮಾಡಲು ಜೆಡಿಎಸ್ ವರಿಷ್ಠರು ಸೂಚನೆ ನೀಡಿದ್ದಾರೆ. ಇದಕ್ಕೂ ಮುನ್ನ ವಾರ್ಡ್ 32 ಕಾವಲಭೈರಸಂದ್ರ ಪಾಲಿಕೆ ಸದಸ್ಯೆ ನೇತ್ರಾ ನಾರಾಯಣ ಅಥವಾ ಇಮ್ರಾನ್ ಪಾಷಾ ಅವರಿಗೆ ಉಪಮೇಯರ್ ಸ್ಥಾನಕ್ಕೆ ಸ್ಪರ್ಧೆ ನಡೆಸಲು ಅವಕಾಶ ನೀಡಲಾಗುತ್ತದೆ ಎನ್ನಲಾಗಿತ್ತು.

  • ಕೈ- ತೆನೆ ಮೈತ್ರಿಕೂಟಕ್ಕೆ ಮತ್ತೆ ಬಿಬಿಎಂಪಿ ಅಧಿಕಾರ

    ಕೈ- ತೆನೆ ಮೈತ್ರಿಕೂಟಕ್ಕೆ ಮತ್ತೆ ಬಿಬಿಎಂಪಿ ಅಧಿಕಾರ

    ಬೆಂಗಳೂರು: ಬಿಬಿಎಂಪಿ ಮೇಯರ್, ಉಪಮೇಯರ್ ಪಟ್ಟವನ್ನು ಮತ್ತೆ ಕಾಂಗ್ರೆಸ್- ಜೆಡಿಎಸ್ ಮೈತ್ರಿಕೂಟ ತನ್ನಲ್ಲಿ ಉಳಿಸುವಲ್ಲಿ ಯಶಸ್ವಿಯಾಗಿದೆ. 130 ಮತಗಳನ್ನು ಪಡೆಯುವ ಮೂಲಕ ಮೇಯರ್ ಆಗಿ ಕಾಂಗ್ರೆಸ್ಸಿನ ಗಂಗಾಬಿಕೆ ಆಯ್ಕೆ ಆಗಿದ್ದರೆ, ಉಪಮೇಯರ್ ಆಗಿ ಜೆಡಿಎಸ್‍ನ ರಮೀಳಾ ಆಯ್ಕೆಯಾಗಿದ್ದಾರೆ.

    ಚುನಾವಣೆಗೂ ಮುನ್ನ ಭಾರೀ ಹೈಡ್ರಾಮವೇ ನಡೆದಿತ್ತು. ಕೈ ಮತ್ತು ಬಿಜೆಪಿ ನಾಯಕರ ನಡುವೆ ನೂಕಾಟ ನಡೆದಿತ್ತು. ಒಟ್ಟು 259 ಮತದಾರರ ಪೈಕಿ 253 ಮಂದಿ ಹಾಜರಾಗಿದ್ದರು. ಕಾಂಗ್ರೆಸ್ ಶಾಸಕ ರೋಷನ್ ಬೇಗ್, ಕಾಂಗ್ರೆಸ್ ಕಾರ್ಪೊರೇಟರ್ ಆಶಾ ಸುರೇಶ್, ಲಲಿತಾ, ರಾಜ್ಯ ಸಭೆ ಸದಸ್ಯೆ ನಿರ್ಮಲಾ ಸೀತಾರಾಮ್, ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸದಸ್ಯ ಅನಂತ್ ಕುಮಾರ್, ಜೆಡಿಎಸ್ ಸದಸ್ಯೆ ನಜೀಂ ಖಾನಂ ಗೈರು ಹಾಜರಿ ಹಾಕಿದ್ದರು.

    ಸಿ.ಆರ್.ಮನೋಹರ್, ಜಯರಾಂ ರಮೇಶ್, ರಘು ಆಚಾರ್, ಉಗ್ರಪ್ಪ ಮತದಾನಕ್ಕೆ ಬಿಜೆಪಿ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದ್ದರು. ಮತದಾನಕ್ಕೆ ಅವಕಾಶ ನೀಡದಂತೆ ಬಿಜೆಪಿ ನಾಯಕರ ಬಿಗಿಪಟ್ಟು ಹಿಡಿದರೂ ಈಗಾಗಲೇ ಮತದಾರರ ಪಟ್ಟಿ ಘೋಷಣೆ ಆಗಿರುವ ಕಾರಣ ಮತದಾನಕ್ಕೆ ಅವಕಾಶ ನೀಡುತ್ತೇವೆ ಎಂದು ಚುನಾವಣಾಧಿಕಾರಿ ಶಿವಯೋಗಿ ಕಳಸದ್ ಹೇಳಿದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಬಿಜೆಪಿ ಸದಸ್ಯರು ಸಭಾಂಗಣದಿಂದಲೇ ಹೊರ ನಡೆದರು.  ಇದನ್ನೂ ಓದಿ: ಬಿಬಿಎಂಪಿ ಸಭಾಂಗಣದ ಒಳಗೆಯೇ ಕಿತ್ತಾಡಿಕೊಂಡ ಕಾಂಗ್ರೆಸ್, ಬಿಜೆಪಿ ಸದಸ್ಯರು!

    ಬಿಜೆಪಿ ನಾಯಕ ಆರ್ ಅಶೋಕ್ ಪ್ರತಿಕ್ರಿಯಿಸಿ, ಜಂಗಲ್ ರಾಜ್ ನಂತೆ ಚುನಾವಣೆ ನಡೆಸುತ್ತಿದ್ದರೆ. ಗೂಂಡಾಗಿರಿ ಮಾಡಿ ಪಕ್ಷೇತರರನ್ನ ಹೈಜಾಕ್ ಮಾಡಲಾಗಿದೆ. ಚುನಾವಣಾಧಿಕಾರಿ ಕಾಂಗ್ರೆಸ್ ಬೆಂಬಲ ನೀಡಿದ್ದಾರೆ. ನಾಲ್ವರು ಪರಿಷತ್ ಸದಸ್ಯರಿಗೆ ಮತದಾನಕ್ಕೆ ಅವಕಾಶ ನೀಡದಂತೆ ದೂರು ನೀಡಿದ್ದರೂ ಅವಕಾಶ ನೀಡಿದ್ದಾರೆ. ಇದು ಅಕ್ರಮವಾದ ಕಾರಣ ಚುನಾವಣೆ ಬಹಿಷ್ಕರಿಸಿ ಹೊರಗಡೆ ಬಂದಿದ್ದೇವೆ ಎಂದು ತಿಳಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv