Tag: ಬಿಬಿಎಂಪಿ ಮೇಯರ್

  • ಪ್ಲಾಸ್ಟಿಕ್ ಬಳಸಿದ್ದಕ್ಕೆ 500 ರೂ. ದಂಡ ಕಟ್ಟಿದ ಮೇಯರ್ ಗಂಗಾಂಬಿಕೆ

    ಪ್ಲಾಸ್ಟಿಕ್ ಬಳಸಿದ್ದಕ್ಕೆ 500 ರೂ. ದಂಡ ಕಟ್ಟಿದ ಮೇಯರ್ ಗಂಗಾಂಬಿಕೆ

    ಬೆಂಗಳೂರು: ತನಗೆ ವಿಧಿಸಿಲಾಗಿದ್ದ 500 ರೂ. ದಂಡವನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಮೇಯರ್ ಗಂಗಾಂಬಿಕೆ ಅವರು ಕಟ್ಟಿದ್ದಾರೆ.

    ಮೇಯರ್ ಅವರು ದಂಡ ಕಟ್ಟುವ ಮೂಲಕ ಪ್ರತಿಯೊಬ್ಬರೂ ಈ ಪ್ಲಾಸ್ಟಿಕ್ ಬಳಸುವುದನ್ನು ನಿಷೇಧ ಮಾಡಲಾಗಿದೆ ಎಂಬುದನ್ನು ತೋರಿಸಿಕೊಟ್ಟಿದ್ದಾರೆ. ಅಲ್ಲದೆ ಎಲ್ಲರೂ ಈ ನಿಯಮಕ್ಕೆ ಕೈ ಜೋಡಿಸುತ್ತಾರೆ ಎಂದು ನಂಬಿದ್ದಾರೆ.

    ದಂಡ ವಿಧಿಸಿದ್ದು ಯಾಕೆ..?
    ಜುಲೈ 19ರಂದು ಬಿ.ಎಸ್ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದರು. ಈ ಹಿನ್ನೆಲೆಯಲ್ಲಿ ಅವರಿಗೆ ಅಭಿನಂದನೆ ಸಲ್ಲಿಸಲು ಮೇಯರ್, ಬಿಎಸ್‍ವೈ ಅವರನ್ನು ಭೇಟಿ ಮಾಡಿದ್ದರು. ಭೇಟಿಯ ವೇಳೆ ಪ್ಲಾಸ್ಟಿಕ್ ನಲ್ಲಿ ಸುತ್ತಿದ್ದ ಡ್ರೈ ಫ್ರೂಟ್ಸ್ ಪ್ಯಾಕನ್ನು ನೀಡಿದ್ದಾರೆ.

    ಗಿಫ್ಟ್ ನೀಡಿದ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಆಗುತ್ತಿದ್ದಂತೆ ಜನ ಮೇಯರ್ ಅವರಿಗೆ, ಪ್ಲಾಸ್ಟಿಕ್ ಬಳಕೆ ಕಡಿಮೆ ಮಾಡಿ ಎಂದು ಬಿಬಿಎಂಪಿ ಹೇಳುತ್ತಿದೆ. ಆದರೆ ನೀವೇ ಪ್ಲಾಸ್ಟಿಕ್ ಬಳಸಿದ ಗಿಫ್ಟ್ ನೀಡುತ್ತಿರುವುದು ಎಷ್ಟು ಸರಿ ಎಂದು ಪ್ರಶ್ನಿಸತೊಡಗಿದರು.

    ಈ ಹಿನ್ನೆಲೆಯಲ್ಲಿ ಶನಿವಾರ ಸಂಪಂಗಿರಮನಗರ್ ವಾರ್ಡ್ ನಂಬರ್ 110ರ ಆರೋಗ್ಯಾಧಿಕಾರಿಯವರನ್ನು ಕರೆಸಿಕೊಂಡ ಮೇಯರ್, ಅವರಿಗೆ ತನ್ನ ದಂಡದ ಮೊತ್ತವನ್ನು ನೀಡಿದ್ದಾರೆ. ಅಲ್ಲದೆ 2016ರಲ್ಲೇ ರಾಜ್ಯದಲ್ಲಿ ಪ್ಲಾಸ್ಟಿಕ್ ನಿಷೇಧ ಮಾಡಲಾಗಿದೆ. ಆದರೆ ಇದು ಈವರೆಗೂ ಸರಿಯಾದ ರೀತಿಯಲ್ಲಿ ನಿಷೇಧವಾಗಿಲ್ಲ. ಹೀಗಾಗಿ ಈ ಬಾರಿ ಕಟ್ಟುನಿಟ್ಟಾಗಿ ಪ್ಲಾಸ್ಟಿಕ್ ನಿಷೇಧ ಮಾಡಲಾಗುತ್ತಿದ್ದು, ನಾನೂ ದಂಡ ಕಟ್ಟುವ ಮೂಲಕ ಎಲ್ಲರಿಗೂ ಈ ನಿಯಮ ಅನ್ವಯವಾಗುತ್ತದೆ ಎಂಬುದನ್ನು ತೋರಿಸಿದ್ದೇನೆ. ನಾನೂ ಕೂಡ ಪ್ಲಾಸ್ಟಿಕ್ ಬಳಕೆ ಮಾಡಿರುವುದರಿಂದ ದಂಡ ಕಟ್ಟುತ್ತಿದ್ದೇನೆ. ಈ ಮೂಲಕ ಪ್ಲಾಸ್ಟಿಕ್ ನಿಷೇಧಕ್ಕೆ ಕೈ ಜೋಡಿಸುತ್ತಾರೆ ಎಂಬುದನ್ನು ನಂಬಿದ್ದೇನೆ ಎಂದು ತಿಳಿಸಿದರು.

  • ಕಾಂಗ್ರೆಸ್ ಹೈಕಮಾಂಡ್‍ಗೆ ಬಿಬಿಎಂಪಿ ಮೇಯರ್ ಬ್ಲಾಕ್‍ಮೇಲ್

    ಕಾಂಗ್ರೆಸ್ ಹೈಕಮಾಂಡ್‍ಗೆ ಬಿಬಿಎಂಪಿ ಮೇಯರ್ ಬ್ಲಾಕ್‍ಮೇಲ್

    – ರಾಮಲಿಂಗಾರೆಡ್ಡಿ ಪರ ಬ್ಯಾಟ್ ಬೀಸಿದ ಗಂಗಾಂಬಿಕೆ

    ಬೆಂಗಳೂರು: ಮಾಜಿ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಸಚಿವ ಸ್ಥಾನ ನೀಡಲೇಬೇಕು. ಇಲ್ಲದಿದ್ದರೇ ಬಿಬಿಎಂಪಿ ಕಾಂಗ್ರೆಸ್ ಸದಸ್ಯರು ಸಾಮೂಹಿಕ ರಾಜೀನಾಮೆ ನೀಡುತ್ತೇವೆ ಎಂದು ಮೇಯರ್ ಗಂಗಾಬಿಕೆ ಹೇಳಿದ್ದಾರೆ.

    ನಗರದಲ್ಲಿ ಮಾತನಾಡಿದ ಮೇಯರ್, ನಾನು ರಾಮಲಿಂಗಾರೆಡ್ಡಿ ಅವರ ಶಿಷ್ಯೆ. ಸಚಿವ ಸ್ಥಾನ ಹಾಗೂ ಜವಾಬ್ದಾರಿ ನೀಡುವಲ್ಲಿ ಹೈಕಮಾಂಡ್ ಅವರನ್ನು ಕಡೆಗಣಿಸಿದ್ದು ಬೇಸರ ತಂದಿದೆ. ಬಿಬಿಎಂಪಿಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಕಾರಣವಾಗಿದ್ದು ರಾಮಲಿಂಗಾರೆಡ್ಡಿ. ಬೆಂಗಳೂರಿನ ಕಾರ್ಯಕರ್ತರು ರಾಮಲಿಂಗಾರೆಡ್ಡಿ ಅವರ ಬೆಂಬಲಿಗರು. ಇದನ್ನು ಪಕ್ಷದ ನಾಯಕರು ಗಮನಿಸಬೇಕಿದೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಖಾತೆ ಹಂಚಿಕೆ ಸಭೆಯಲ್ಲಿ ಸಿದ್ದರಾಮಯ್ಯ, ಪರಮೇಶ್ವರ್ ಕಿತ್ತಾಟ!

    ಬಿಬಿಎಂಪಿಯ ಕಾಂಗ್ರೆಸ್ ಸದಸ್ಯರು ಹಾಗೂ ನಾನು ರಾಮಲಿಂಗಾ ರೆಡ್ಡಿ ಅವರ ಬೆಂಬಲಿಗರು. ಒಂದು ವೇಳೆ ಅವರಿಗೆ ಸಚಿವ ಸ್ಥಾನ ನೀಡದೇ ಇದ್ದರೆ ನಮ್ಮ ಸ್ಥಾನಕ್ಕೆ ಸಾಮೂಹಿಕವಾಗಿ ರಾಜೀನಾಮೆ ನೀಡುತ್ತೇವೆ ಎಂದ ಅವರು, ಈಗಾಗಲೇ ವೇಣುಗೋಪಾಲ್ ಜೊತೆ ಚರ್ಚೆ ನಡೆಸಲಾಗಿದೆ. ಸಚಿವ ಸ್ಥಾನ ನೀಡುವ ಭರವಸೆ ನೀಡಿದ್ದಾರೆ ಎಂದರು. ಇದನ್ನು ಓದಿ: ಫೈನಲ್ ಆಯ್ತು ಖಾತೆ ಹಂಚಿಕೆ – ಕೊನೆಗೂ ಗೆದ್ದ ಸಿದ್ದರಾಮಯ್ಯ: ಯಾರಿಗೆ ಯಾವ ಖಾತೆ?

    ಒಂದು ಕಡೆ ರಾಮಲಿಂಗಾರೆಡ್ಡಿ ಪರ ಮೇಯರ್ ಗಂಗಾಂಬಿಕೆ ಬ್ಯಾಟ್ ಬೀಸಿದರೆ, ಮತ್ತೊಂದು ಕಡೆ ಈಗಾಗಲೇ ನೇಮಿಸಿರುವ ಸಚಿವರಿಗೆ ಖಾತೆ ಹಂಚಿಕೆಯಲ್ಲಿ ಪಕ್ಷದಲ್ಲಿಯೇ ಜಟಾಪಟಿ ನಡೆದಿದೆ. ಉಪಮುಖ್ಯಮಂತ್ರಿ ಜಿ.ಪರಮೇಶ್ವರ್ ಬಳಿ ಇರುವ ಎರಡು ಖಾತೆಗಳ ವಿಚಾರಕ್ಕೆ ಸಿದ್ದರಾಮಯ್ಯ ಗರಂ ಆಗಿದ್ದಾರಂತೆ. ಇತ್ತ ಸಚಿವ ಸ್ಥಾನ ಕಳೆದುಕೊಂಡ ರಮೇಶ್ ಜಾರಕಿಹೊಳಿ, ಸಚಿವ ಸ್ಥಾನ ಆಕಾಂಕ್ಷಿಗಳಾದ ಬಿ.ಸಿ.ಪಾಟೀಲ್, ನಾಗೇಂದ್ರ ಸೇರಿದಂತೆ ಕೆಲವು ನಾಯಕರು ಅಸಮಾಧಾನ ಹೊರ ಹಾಕುತ್ತಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv