Tag: ಬಿಬಿಸಿ

  • ಬಿಬಿಸಿ ಮೇಲೆ 10 ಸಾವಿರ ಕೋಟಿ ರೂ. ಮಾನನಷ್ಟ ಕೇಸ್ – ಹೈಕೋರ್ಟ್‍ನಿಂದ ಸಮನ್ಸ್ ಜಾರಿ

    ಬಿಬಿಸಿ ಮೇಲೆ 10 ಸಾವಿರ ಕೋಟಿ ರೂ. ಮಾನನಷ್ಟ ಕೇಸ್ – ಹೈಕೋರ್ಟ್‍ನಿಂದ ಸಮನ್ಸ್ ಜಾರಿ

    ನವದೆಹಲಿ: `ಇಂಡಿಯಾ ದ ಮೋದಿ ಕ್ವೆಶ್ಚನ್’ (India: The Modi Question) ಸಾಕ್ಷ್ಯಚಿತ್ರದ ವಿರುದ್ಧ ದಾಖಲಾದ 10 ಸಾವಿರ ಕೋಟಿ ರೂ. ಮಾನನಷ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್ (Delhi High Court) ಸೋಮವಾರ ಬ್ರಿಟಿಷ್ ಬ್ರಾಡ್‍ಕಾಸ್ಟಿಂಗ್ ಕಂಪನಿಗೆ (BBC) ಸಮನ್ಸ್ ಜಾರಿ ಮಾಡಿದೆ.

    ಸಾಕ್ಷ್ಯಚಿತ್ರವು ಭಾರತ, ಅದರ ನ್ಯಾಯಾಂಗ ಮತ್ತು ಸ್ವತಃ ಪ್ರಧಾನಿಯ ಪ್ರತಿಷ್ಠೆಗೆ ಅಗೌರವ ತಂದಿದೆ ಎಂದು ಗುಜರಾತ್‌ (Gujarat) ಮೂಲದ ಜಸ್ಟಿಸ್ ಆನ್ ಟ್ರಯಲ್ (Justice on Trial) ಸಂಸ್ಥೆ ಆರೋಪಿಸಿದೆ. ಅಲ್ಲದೆ ಅದು ಸಲ್ಲಿಸಿರುವ ಮಾನನಷ್ಟ ಮೊಕದ್ದಮೆಯ ಅರ್ಜಿಯನ್ನು ವಿಚಾರಣೆ ನಡೆಸಿದ ಕೋರ್ಟ್ ಸೆಪ್ಟೆಂಬರ್‍ನಲ್ಲಿ ಅರ್ಜಿಯನ್ನು ವಿಚಾರಣೆಗೆ ಎತ್ತಿಕೊಳ್ಳಲಿದೆ. ಇದನ್ನೂ ಓದಿ: ಷೇರು ವಿವಾದ; ಅದಾನಿ ಗ್ರೂಪ್‌ಗೆ ಸುಪ್ರೀಂ ಕೋರ್ಟ್ ಸಮಿತಿ ಕ್ಲೀನ್ ಚಿಟ್

    ಸಾಕ್ಷ್ಯಚಿತ್ರವು ಮಾನಹಾನಿಕರ ವಿಷಯಗಳನ್ನು ಒಳಗೊಂಡಿದೆ. ದೇಶ, ನ್ಯಾಯಾಂಗದ ಪ್ರತಿಷ್ಠೆಯ ಮೇಲೆ ಮತ್ತು ಭಾರತದ ಪ್ರಧಾನ ಮಂತ್ರಿಯ ವಿರುದ್ಧ ಪ್ರಚೋದನೆ ನೀಡುವಂತಹ ಅಂಶಗಳನ್ನು ಒಳಗೊಂಡಿವೆ ಎಂದು ಅರ್ಜಿದಾರರ ಪರ ವಕೀಲರು ವಾದಿಸಿದ್ದಾರೆ.

    ಈ ಹಿಂದೆ ಬಿಜೆಪಿ (BJP) ನಾಯಕ ಬಿನಯ್ ಕುಮಾರ್ ಸಿಂಗ್ ಅವರು ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆಯ ಕುರಿತು ದೆಹಲಿಯ ಜಿಲ್ಲಾ ನ್ಯಾಯಾಲಯವು ಬಿಬಿಸಿಗೆ ಸಮನ್ಸ್ ಜಾರಿ ಮಾಡಿತ್ತು. ಭಾರತ ಸರ್ಕಾರವು ಸಾಕ್ಷ್ಯಚಿತ್ರವನ್ನು ನಿಷೇಧಿಸಿದೆ. ಆದರೆ ಸಾಕ್ಷ್ಯ ಚಿತ್ರವನ್ನು ವೀಕ್ಷಿಸಲು ವಿಕಿಪೀಡಿಯಾ ಲಿಂಕ್‍ಗಳನ್ನು ಒದಗಿಸುತ್ತಿದೆ. ಇಂಟರ್ನೆಟ್ ಆರ್ಕೈವ್‍ನಲ್ಲಿ ಇನ್ನೂ ಲಭ್ಯವಿದೆ ಎಂದು ಸಿಂಗ್ ನ್ಯಾಯಾಲಯಕ್ಕೆ ತಿಳಿಸಿದ್ದರು.

    ಆರ್‍ಎಸ್‍ಎಸ್ (RSS) ಮತ್ತು ವಿಎಚ್‍ಪಿ (VHP) ವಿರುದ್ಧ ಸಾಕ್ಷ್ಯಚಿತ್ರ ಅಥವಾ ಇತರ ಯಾವುದೇ ವಿಷಯವನ್ನು ಪ್ರಕಟಿಸದಂತೆ ತಡೆಯಲು ಬಿಬಿಸಿ, ವಿಕಿಮೀಡಿಯಾ ಮತ್ತು ಇಂಟರ್ನೆಟ್ ಆರ್ಕೈವ್ ವಿರುದ್ಧ ತಡೆಯಾಜ್ಞೆ ನೀಡುವಂತೆ ಸಿಂಗ್ ಕೋರಿದ್ದರು. ಆ ಅರ್ಜಿಯ ವಿಚಾರಣೆ ಮೇ 26ರಂದು ನಡೆಸಲಿದೆ. ಇದನ್ನೂ ಓದಿ: ನೂತನ ಸರ್ಕಾರದಲ್ಲಿ ಸುಪ್ರೀಂಕೋರ್ಟ್ ವಕೀಲ ಸಂಕೇತ್ ಏಣಗಿಗೆ ಒಲಿಯಲಿದ್ಯಾ ಅಡ್ವೊಕೇಟ್ ಜನರಲ್ ಹುದ್ದೆ?

  • ಬಿಬಿಸಿ ಮುಖ್ಯಸ್ಥ ಹುದ್ದೆಗೆ ರಿಚರ್ಡ್‌ ಶಾರ್ಪ್‌ ರಾಜೀನಾಮೆ

    ಬಿಬಿಸಿ ಮುಖ್ಯಸ್ಥ ಹುದ್ದೆಗೆ ರಿಚರ್ಡ್‌ ಶಾರ್ಪ್‌ ರಾಜೀನಾಮೆ

    ಲಂಡನ್‌: ದಿಢೀರ್‌ ಬೆಳವಣಿಗೆಯೊಂದರಲ್ಲಿ ಬಿಬಿಸಿ (BBC) ಮುಖ್ಯಸ್ಥ ಹುದ್ದೆಗೆ ರಿಚರ್ಡ್‌ ಶಾರ್ಪ್‌ (Richard Sharp) ರಾಜೀನಾಮೆ ನೀಡಿದ್ದಾರೆ.

    ಇಂಗ್ಲೆಂಡ್‌ ಮಾಜಿ ಪ್ರಧಾನಿ ಬೋರಿಸ್‌ ಜಾನ್ಸನ್‌ (Boris Johnson) ಅವರಿಗೆ 8 ಲಕ್ಷ ಪೌಂಡ್‌ (ಅಂದಾಜು 8.15 ಕೋಟಿ ರೂ.) ಸಾಲದ ಗ್ಯಾರಂಟಿ ನೀಡಲು ರಿಚರ್ಡ್‌ ಶಾರ್ಪ್‌ ನೆರವಾಗಿದ್ದರು ಎಂಬ ಆರೋಪ ಕೇಳಿಬಂದಿತ್ತು

     

    ಕೆಲ ತಿಂಗಳ ಹಿಂದೆ ಸಂಡೆ ಟೈಮ್ಸ್‌ ರಿಚರ್ಡ್‌ ಶಾರ್ಪ್‌ ಬಗ್ಗೆ ವರದಿಯನ್ನು ಪ್ರಕಟಿಸಿತ್ತು. ಈ ವರದಿಯ ಬೆನ್ನಲ್ಲೇ ಬೋರಿಸ್‌ ಜಾನ್ಸನ್‌ ಮತ್ತು ರಿಚರ್ಡ್‌ ಶಾರ್ಪ್‌ ವಿರುದ್ಧ ಟೀಕೆ ವ್ಯಕ್ತವಾಗಿತ್ತು. ಇದನ್ನೂ ಓದಿ: ಸಾರ್ವಜನಿಕ ಸ್ಥಳದಲ್ಲಿ ನಮಾಜ್‌ – 1,700 ಮುಸ್ಲಿಂ ಮುಖಂಡರ ವಿರುದ್ಧ ಕೇಸ್‌

    ಈ ಅದ್ಭುತ ಸಂಸ್ಥೆಯ ಅಧ್ಯಕ್ಷರಾಗಿರುವುದು ಒಂದು ಗೌರವ ಎಂದು ರಿಚರ್ಡ್‌ ಶಾರ್ಪ್‌ ಹೇಳಿದ್ದಾರೆ. ಹೊಸ ಮುಖ್ಯಸ್ಥರ ಆಯ್ಕೆಯಾಗುವವರೆಗೂ ರಿಚರ್ಡ್‌ ಶಾರ್ಪ್‌ ಮುಖ್ಯಸ್ಥರಾಗಿಯೇ ಮುಂದುವರಿಯಲಿದ್ದಾರೆ.

  • ಬಿಬಿಸಿ ತೆರಿಗೆ ಪಾವತಿಯಲ್ಲಿ ಅಕ್ರಮ,  ಸಾಕ್ಷ್ಯ ಲಭ್ಯ: CBDT

    ಬಿಬಿಸಿ ತೆರಿಗೆ ಪಾವತಿಯಲ್ಲಿ ಅಕ್ರಮ,  ಸಾಕ್ಷ್ಯ ಲಭ್ಯ: CBDT

    ನವದೆಹಲಿ: ಅಂತಾರಾಷ್ಟ್ರೀಯ ಮಾಧ್ಯಮ ಸಂಸ್ಥೆಯೊಂದರ ದಾಖಲೆ ಪರಿಶೀಲನೆ ವೇಳೆ ಸಂಸ್ಥೆಯು ತೆರಿಗೆ ಪಾವತಿಸದಿರುವುದು ಹಾಗೂ ಬಹಿರಂಗಪಡಿಸದ ಆದಾಯ ಹೊಂದಿರುವ ಬಗ್ಗೆ ಸಾಕ್ಷ್ಯಗಳು ಸಿಕ್ಕಿದೆ ಎಂದು ನೇರ ತೆರಿಗೆಗಳ ಕೇಂದ್ರೀಯ ಮಂಡಳಿ (CBDT) ಶುಕ್ರವಾರ ಹೇಳಿದೆ.

    ಬಿಬಿಸಿ (BBC) ಹೆಸರನ್ನು ಉಲ್ಲೇಖಿಸದೆ ಹೇಳಿಕೆ ಬಿಡುಗಡೆ ಮಾಡಿದ ಸಿಬಿಡಿಟಿ, ಇಲಾಖೆ ಹಲವಾರು ಸಾಕ್ಷ್ಯಗಳನ್ನು ಕಲೆಹಾಕಿದೆ. ಡಿಜಿಟಲ್ ದಾಖಲೆಗಳು ಹಾಗೂ ಉದ್ಯೋಗಿಗಳ ಹೇಳಿಕೆಗಳನ್ನು ಪಡೆದುಕೊಳ್ಳುವ ಕಾರ್ಯ ನಡೆಯುತ್ತಿದೆ. ವಿದೇಶಿ ಸಂಸ್ಥೆಗಳಿಂದ ಭಾರತದ ಶಾಖೆಗೆ ಬಂದಿರುವ ಆದಾಯಕ್ಕೆ ಯಾವುದೇ ತೆರಿಗೆ ಪಾವತಿಯಾಗಿಲ್ಲ ಎಂದು ಉಲ್ಲೇಖಿಸಿದೆ. ಇದನ್ನೂ ಓದಿ: ಭಾರತ ಈಗ ಕುಸಿಯುತ್ತಿದೆ: ಮೋದಿಯನ್ನು ಟೀಕಿಸಿದ ಜಾರ್ಜ್ ಸೊರಸ್ ಯಾರು?

    ಬಿಬಿಸಿ ಸಿಬ್ಬಂದಿ ತನಿಖೆಗೆ ಸಹಕರಿಸುತ್ತಿಲ್ಲ. ಹಲವು ತಂತ್ರಗಳನ್ನು ಬಳಸಿ ತನಿಖೆ ವಿಳಂಬವಾಗುವಂತೆ ಮಾಡುತ್ತಿದ್ದಾರೆ. ಮಾಧ್ಯಮದ ಪ್ರಸಾರಕ್ಕೆ ಯಾವುದೇ ತೊಂದರೆಯಾಗದಂತೆ ಸಿಬ್ಬಂದಿ ವಿಚಾರಣೆ ಮಾಡುತ್ತಿರುವುದಾಗಿ ತಿಳಿಸಿದೆ.

    2002ರಲ್ಲಿ ನಡೆದ ಗುಜರಾತ್ ಹಿಂಸಾಚಾರದ ಕುರಿತು ಸಾಕ್ಷ್ಯಚಿತ್ರ ಬಿಡುಗಡೆ ಮಾಡಿದ ಬೆನ್ನಲ್ಲೇ  ಬಿಬಿಸಿ ಮೇಲೆ ಐಟಿ ಸಮೀಕ್ಷೆ (IT Survey) ನಡೆಸಿತ್ತು. ಅಧಿಕಾರಿಗಳು ಮೂರು ದಿನಗಳ ಕಾಲ ನಿರಂತರ ಸಮೀಕ್ಷೆ ಕಾರ್ಯ ನಡೆಸಿದ್ದರು.

    ಬಿಬಿಸಿ ಮೇಲಿನ ಐಟಿ ದಾಳಿ ಪ್ರಧಾನಿ ನರೇಂದ್ರ ಮೋದಿಯವರಿಗೆ (Narendra Modi) ಮುಜುಗರ ತರುವಂತಹ ಸಾಕ್ಷ್ಯಾಚಿತ್ರ ಬಿಡುಗಡೆಗೊಳಿಸಿದಕ್ಕೆ ಪ್ರತೀಕಾರವಾಗಿ ಈ ದಾಳಿ ನಡೆದಿದೆ ಎಂದು ವಿಪಕ್ಷಗಳು ದೂರಿದ್ದವು.

    LIVE TV
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಪಕ್ಷಾತೀತ, ಭಯರಹಿತ ಪತ್ರಿಕೋದ್ಯಮ ಮುಂದುವರಿಸುತ್ತೇವೆ – ಆರ್ಥಿಕ ಸಮೀಕ್ಷೆ ಬಳಿಕ BBC ಹೇಳಿಕೆ

    ಪಕ್ಷಾತೀತ, ಭಯರಹಿತ ಪತ್ರಿಕೋದ್ಯಮ ಮುಂದುವರಿಸುತ್ತೇವೆ – ಆರ್ಥಿಕ ಸಮೀಕ್ಷೆ ಬಳಿಕ BBC ಹೇಳಿಕೆ

    ನವದೆಹಲಿ: ಅಂತಾರಾಷ್ಟ್ರೀಯ ಸುದ್ದಿ ವಾಹಿನಿ ಬಿಬಿಸಿ (BBC) ಕಚೇರಿಯ ಆರ್ಥಿಕ ಸಮೀಕ್ಷೆ ಅಂತ್ಯವಾಗಿದೆ. ಮೂರು ದಿನಗಳ ಪರಿಶೀಲನೆ ಬಳಿಕ ಆದಾಯ ತೆರಿಗೆ ಅಧಿಕಾರಿಗಳು ಸಮೀಕ್ಷೆ ಅಂತ್ಯಗೊಳಿಸಿದ್ದು, ನಾವು ಪಕ್ಷಾತೀತ ಮತ್ತು ಭಯರಹಿತ ಪತ್ರಿಕೋದ್ಯಮ (Journalism) ಮುಂದುವರಿಸಲಿದ್ದೇವೆ ಎಂದು ಆಡಳಿತ ವರ್ಗ ಹೇಳಿದೆ.

    ಕಳೆದ ಮೂರು ದಿನಗಳಲ್ಲಿ ಸುಮಾರು 59 ಗಂಟೆಗಳ ಕಾಲ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸಿದ್ದು, ಸಮೀಕ್ಷೆಯಲ್ಲಿ ಅಧಿಕಾರಿಗಳು ವಿವಿಧ ದಾಖಲೆಗಳು ಮತ್ತು ದತ್ತಾಂಶಗಳನ್ನು ಸಂಗ್ರಹಿಸಿದ್ದಾರೆ. ನಮ್ಮ ಪ್ರಸಾರ ಸಾಮಾನ್ಯ ಸ್ಥಿತಿಗೆ ಬಂದಿದ್ದು ಸಮೀಕ್ಷೆ ವೇಳೆ ಹಗಲು ರಾತ್ರಿ ಅಧಿಕಾರಿಗಳಿಗೆ ಸಹಕರಿಸಿದ ಸಿಬ್ಬಂದಿಯನ್ನು ನಾವು ಶ್ಲಾಘಿಸುತ್ತೇವೆ ಎಂದು ಬಿಬಿಸಿ ಹೇಳಿದೆ. ಇದನ್ನೂ ಓದಿ: 18 ಮಂದಿಯನ್ನು ಸಾಗಿಸುತ್ತಿದ್ದ ಜೀಪ್‌ನಿಂದ ಟ್ರಕ್‌ಗೆ ಡಿಕ್ಕಿ; 7 ಮಂದಿ ದುರ್ಮರಣ – ಜೀಪ್‌ ಚಾಲಕ ಎಸ್ಕೇಪ್

    ಮಂಗಳವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳ ತಂಡ ದೆಹಲಿ (Delhi) ಮತ್ತು ಮುಂಬೈನಲ್ಲಿರುವ (Mumbai) ಬಿಬಿಸಿ ಕಚೇರಿಗಳನ್ನು ಪ್ರವೇಶಿಸಿತ್ತು. ಇದು ಅಂತಾರಾಷ್ಟ್ರೀಯ ತೆರಿಗೆ ಸಮಸ್ಯೆಗಳಿಗೆ ಸಂಬಂಧಿಸಿದ ಪ್ರಕರಣ ಎಂದು ಐಟಿ ಮೂಲಗಳು ತಿಳಿಸಿದ್ದವು. ಸಮೀಕ್ಷೆ ವೇಳೆ ಅಧಿಕಾರಿಗಳು ಆಯ್ದ ಸಿಬ್ಬಂದಿಯಿಂದ ಹಣಕಾಸಿನ ದತ್ತಾಂಶವನ್ನು ಸಂಗ್ರಹಿಸಿದ್ದರು.

    ಸಮೀಕ್ಷಾ ತಂಡಗಳು ಪುರಾವೆಗಳನ್ನು ಸಂಗ್ರಹಿಸುತ್ತಿದ್ದಂತೆ ಬಿಬಿಸಿ ತನ್ನ ಉದ್ಯೋಗಿಗಳಿಗೆ ತಮ್ಮ ಎಲೆಕ್ಟ್ರಾನಿಕ್ ಸಾಧನಗಳಿಂದ ಯಾವುದೇ ಡೇಟಾವನ್ನು ಅಳಿಸದಂತೆ ಕೇಳಿಕೊಂಡಿತು. ಇದನ್ನೂ ಓದಿ: Article 370 ರದ್ದು- ವಿಚಾರಣೆ ನಡೆಸುವ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳುತ್ತೇವೆ: ಸಿಜೆಐ ಡಿವೈ ಚಂದ್ರಚೂಡ್

    ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸಾಕ್ಷ್ಯಚಿತ್ರ ಸಿದ್ಧಪಡಿಸಿದ, ಪ್ರಸಾರ ಮಾಡಿದ ಬಳಿಕ ನಡೆದ ಸಮೀಕ್ಷೆ ದೊಡ್ಡ ವಿವಾದಕ್ಕೆ ಕಾರಣವಾಗಿತ್ತು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಎರಡನೇ ದಿನವೂ ಬಿಬಿಸಿ ಕಚೇರಿಯಲ್ಲಿ ಮುಂದುವರಿದ ಐಟಿ ಸಮೀಕ್ಷೆ

    ಎರಡನೇ ದಿನವೂ ಬಿಬಿಸಿ ಕಚೇರಿಯಲ್ಲಿ ಮುಂದುವರಿದ ಐಟಿ ಸಮೀಕ್ಷೆ

    ನವದೆಹಲಿ: ಟೀಕೆ ವ್ಯಕ್ತವಾದರೂ ದೆಹಲಿ, ಮುಂಬೈನಲ್ಲಿರುವ ಬಿಬಿಸಿ (BBC) ಕಚೇರಿಗಳಲ್ಲಿ ಆದಾಯ ತೆರಿಗೆ ಇಲಾಖೆ (Income Tax Department) ಸತತ ಎರಡನೇ ದಿನವೂ ಸಮೀಕ್ಷೆ (Survey) ನಡೆಸಿದೆ.

    ಮಂಗಳವಾರ ತಡರಾತ್ರಿಯವರೆಗೂ ಶೋಧ ಕಾರ್ಯ ನಡೆಸಿದ್ದ ಐಟಿ ಅಧಿಕಾರಿಗಳು ಮತ್ತೆ ಇಂದು ಬೆಳಗ್ಗೆಯೇ ದಾಖಲೆಗಳ ಪರಿಶೀಲನೆಗೆ ಇಳಿದಿದ್ದರು. ದೆಹಲಿ, ಮುಂಬೈನ ಬಿಬಿಸಿ ಕಚೇರಿಯಲ್ಲಿ ಐಟಿ ಅಧಿಕಾರಿಗಳು ಇದ್ದಾರೆ. ನಡೆಸುತ್ತಿರುವ ಪರಿಶೀಲನೆಗೆ ನಾವು ಎಲ್ಲಾ ರೀತಿಯ ಸಹಕಾರ ನೀಡುತ್ತಿದ್ದೇವೆ. ಶೀಘ್ರವೇ ಎಲ್ಲವೂ ಸಹಜ ಸ್ಥಿತಿಗೆ ಬರಲಿದೆ ಎಂದು ಬಿಬಿಸಿ ಹೇಳಿದೆ.

    ಇದು ದಾಳಿಯಲ್ಲ ಸಮೀಕ್ಷೆ ಎಂದು ಐಟಿ ಇಲಾಖೆ ಮತ್ತೊಮ್ಮೆ ಸ್ಪಷ್ಟಪಡಿಸಿದೆ. ಇದು ಬಿಬಿಸಿಯ ವ್ಯಾಪಾರ ವಹಿವಾಟುಗಳಿಗೆ ಸಂಬಂಧಿಸಿದ್ದಾಗಿದೆ. ಸಂಸ್ಥೆಯ ಪ್ರಮೋಟರ್ಸ್, ನಿರ್ದೇಶಕರ ಮನೆ ಮೇಲೆ ದಾಳಿ ನಡೆಸಿಲ್ಲ. ಅಂತಾರಾಷ್ಟ್ರೀಯ ತೆರಿಗೆ, ಸಂಬಂಧಿ ಕಂಪನಿಗಳಿಗೆ ಹಣ ವರ್ಗಾವಣೆಗೆ ಸಂಬಧಿಸಿದಂತೆ ಈ ಸಮೀಕ್ಷೆ ಮಾಡುತ್ತಿದ್ದೇವೆ. ಈ ಹಿಂದೆ ಕಳಿಸಿದ ನೋಟಿಸ್‍ಗಳಿಗೆ ಬಿಬಿಸಿ ಸ್ಪಂದಿಸದ ಹಿನ್ನೆಲೆಯಲ್ಲಿ ಸರ್ವೇ ನಡೆಸಿದ್ದೇವೆ ಎಂದು ಐಟಿ ಇಲಾಖೆ ಸ್ಪಷ್ಟನೆ ನೀಡಿದೆ. ಇದನ್ನೂ ಓದಿ: ಎಚ್‌ಡಿಕೆ ಹೇಳಿಕೆ ಬೆನ್ನಲ್ಲೇ ಶೃಂಗೇರಿಗೆ ಭೇಟಿ ನೀಡಲಿದ್ದಾರೆ ನಡ್ಡಾ

    ಐಟಿ ಇಲಾಖೆಯ ಈ ನಡೆಗೆ ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ, ಪ್ರೆಸ್ ಕ್ಲಬ್ ಆಫ್ ಇಂಡಿಯಾ, ಸಿಪಿಜೆ, ರಿಪೋರ್ಟಸ್ ವಿತೌಟ್ ಬಾರ್ಡರ್ಸ್, ಆಮ್ನೇಸ್ಟಿ ಇಂಟರ್‍ನ್ಯಾಷನಲ್‌ ಸಂಸ್ಥೆಗಳು ಖಂಡಿಸಿವೆ.

    ಅಮೆರಿಕ ಪ್ರತಿಕ್ರಿಯಿಸಿ ಪತ್ರಿಕಾ ಸ್ವಾತಂತ್ರ್ಯದ ಪರ ಬ್ಯಾಟ್ ಮಾಡಿದೆ. ಆದರೆ ಬಿಬಿಸಿ ಮೇಲಿನ ಈ ದಾಳಿ ಪ್ರಜಾಪ್ರಭುತ್ವ ಸ್ಪೂರ್ತಿಗೆ ವಿರುದ್ಧವಾಗಿದೆಯೇ ಎಂಬ ಪ್ರಶ್ನೆಗೆ ವಿದೇಶಾಂಗ ಇಲಾಖೆ ಪ್ರತಿನಿಧಿ ನೆಡ್ ಪ್ರೈಸ್ ಅಳೆದುತೂಗಿ ಉತ್ತರ ನೀಡಿದ್ದಾರೆ. ಈ ಶೋಧದ ಹಿಂದಿನ ಸತ್ಯ ಏನೆಂಬುದು ನಮಗೆ ಗೊತ್ತಿದೆ. ಆದರೆ ಇದರ ಬಗ್ಗೆ ತೀರ್ಪು ನೀಡುವ ಸ್ಥಿತಿಯಲ್ಲಿ ನಾವಿಲ್ಲ ಎಂದು ಹೇಳಿದ್ದಾರೆ. ನೆಡ್ ಪ್ರೈಸ್ ಮಾತು ಚರ್ಚೆಗೆ ಗ್ರಾಸವಾಗಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ದೆಹಲಿ, ಮುಂಬೈನಲ್ಲಿರುವ BBC ಕಚೇರಿಗಳಲ್ಲಿ ಐಟಿ ಪರಿಶೀಲನೆ – ಸಿಬ್ಬಂದಿ ಮೊಬೈಲ್‌, ಲ್ಯಾಪ್‌ಟಾಪ್‌ ವಶ

    ದೆಹಲಿ, ಮುಂಬೈನಲ್ಲಿರುವ BBC ಕಚೇರಿಗಳಲ್ಲಿ ಐಟಿ ಪರಿಶೀಲನೆ – ಸಿಬ್ಬಂದಿ ಮೊಬೈಲ್‌, ಲ್ಯಾಪ್‌ಟಾಪ್‌ ವಶ

    ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (Narendra Modi) ಕುರಿತು ಸಾಕ್ಷ್ಯಚಿತ್ರ ಹೊರತಂದು ವಿವಾದಕ್ಕೆ ಸಿಲುಕಿರುವ ಬಿಬಿಸಿ ಕಚೇರಿ ಮೇಲೆ ಆದಾಯ ತೆರಿಗೆ (Income Tax) ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ದೆಹಲಿ (New Delhi) ಹಾಗೂ ಮುಂಬೈನಲ್ಲಿರುವ (Mumbai) ಬಿಬಿಸಿ ಕಚೇರಿಗಳಲ್ಲಿ ಸರ್ವೇ ನಡೆಸಲಾಗಿದೆ.

    BBC (ಬ್ರಿಟಿಷ್ ಬ್ರಾಡ್‌ಕಾಸ್ಟಿಂಗ್ ಕಾರ್ಪೊರೇಷನ್) ಒಳಗೊಂಡಿರುವ ಅಂತಾರಾಷ್ಟ್ರೀಯ ತೆರಿಗೆ ಮತ್ತು ಅಕ್ರಮಗಳ ಆರೋಪದ ಮೇಲೆ ಐಟಿ ಅಧಿಕಾರಿಗಳು ಪರಿಶೀಲನೆ ನಡೆಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ಮತಾಂಧತೆಯನ್ನ ಭಯೋತ್ಪಾದನೆಗೆ ಕಚ್ಛಾವಸ್ತುವಿನಂತೆ ಬಳಕೆ ಮಾಡಿಕೊಳ್ತಿತ್ತು- PFI ನಿಷೇಧ ಸಮರ್ಥಿಸಿಕೊಂಡ ಶಾ

    ಬಿಬಿಸಿ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅನೇಕ ಪತ್ರಕರ್ತರ ಮೊಬೈಲ್ ಹಾಗೂ ಲ್ಯಾಪ್‌ಟಾಪ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಇದು ಕೇವಲ ಸರ್ವೇ ಅಷ್ಟೆ. ನಮ್ಮ ಅಧಿಕಾರಿಗಳು, ಬಿಬಿಸಿ ಕಚೇರಿಯ ಅಕೌಂಟ್‌ ಬುಕ್‌ ಪರಿಶೀಲನೆ ಮಾಡಿದ್ದಾರೆ ಎಂದು ಅಧಿಕಾರಿಯೊಬ್ಬರು ಸ್ಪಷ್ಟಪಡಿಸಿದ್ದಾರೆ.

    2002ರ ಗುಜರಾತ್‌ ಗಲಭೆ ಕುರಿತು ‘ಇಂಡಿಯಾ: ದಿ ಮೋದಿ ಕ್ವೆಶ್ಚನ್‌’ ಎಂಬ ಸಾಕ್ಷ್ಯಚಿತ್ರ ನಿರ್ಮಿಸಿ ಬಿಬಿಸಿ ವಿವಾದಕ್ಕೆ ಸಿಲುಕಿತ್ತು. ಸೋಷಿಯಲ್‌ ಮೀಡಿಯಾದಲ್ಲಿ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ಕಡಿವಾಣ ಹಾಕಲು ಕೇಂದ್ರ ಸರ್ಕಾರ ಕ್ರಮವಹಿಸಿತ್ತು. ಈ ಸಂಬಂಧ ಯೂಟ್ಯೂಬ್‌, ಟ್ವಿಟ್ಟರ್‌ಗೆ ನಿರ್ದೇಶನ ನೀಡಿತ್ತು. ಅಷ್ಟೇ ಅಲ್ಲದೇ, ಬಿಬಿಸಿ ನಿಷೇಧಿಸಬೇಕು ಎಂದು ಹಿಂದೂಪರ ಸಂಘಟನೆಯ ಸದಸ್ಯರೊಬ್ಬರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ವಜಾಗೊಳಿಸಿತ್ತು. ಇದನ್ನೂ ಓದಿ: ರಾಗಾ ವಿಮಾನವನ್ನು ವಾರಣಾಸಿಯಲ್ಲಿ ಬೇಕೆಂದೇ ಇಳಿಸಲು ನಿರಾಕರಿಸಲಾಗಿದೆ: ಕಾಂಗ್ರೆಸ್ ಆರೋಪ

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ನ್ಯಾಯಾಲಯವು ಸೆನ್ಸಾರ್‌ಶಿಪ್‌ ವಿಧಿಸಲು ಸಾಧ್ಯವಿಲ್ಲ – ಭಾರತದಲ್ಲಿ BBC ನಿರ್ಬಂಧಿವಂತೆ ಕೋರಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ನ್ಯಾಯಾಲಯವು ಸೆನ್ಸಾರ್‌ಶಿಪ್‌ ವಿಧಿಸಲು ಸಾಧ್ಯವಿಲ್ಲ – ಭಾರತದಲ್ಲಿ BBC ನಿರ್ಬಂಧಿವಂತೆ ಕೋರಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ನವದೆಹಲಿ: India: The Modi Question ಸಾಕ್ಷ್ಯಚಿತ್ರ ಪ್ರಸಾರ ಮಾಡಿದ ಅಂತಾರಾಷ್ಟ್ರೀಯ ಸುದ್ದಿವಾಹಿನಿ ಬಿಬಿಸಿಯನ್ನು (BBC) ಭಾರತದಲ್ಲಿ ನಿರ್ಬಂಧಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ (Supreme Court) ವಜಾ ಮಾಡಿದೆ. ನಮಗೆ ಸೆನ್ಸಾರ್‌ಶಿಪ್‌ ವಿಧಿಸಲು ನೀವು ಹೇಳುತ್ತಿದ್ದಾರಾ? ನ್ಯಾಯಾಲಯವು ಸೆನ್ಸಾರ್‌ಶಿಪ್‌ ವಿಧಿಸಲು ಸಾಧ್ಯವಿಲ್ಲ ಎಂದ ಕೋರ್ಟ್ ಹೇಳಿದೆ.

    ಹಿಂದೂ ಸೇನೆಯ ಅಧ್ಯಕ್ಷ ವಿಷ್ಣು ಗುಪ್ತಾ ಮತ್ತು ರೈತ ಮುಖಂಡ ಬೀರೇಂದ್ರ ಕುಮಾರ್ ಸಿಂಗ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾ. ಸಂಜೀವ್ ಖನ್ನಾ ನೇತೃತ್ವದ ದ್ವಿ ಸದಸ್ಯ ಪೀಠ ವಿಚಾರಣೆ ನಡೆಸಿ ಅರ್ಜಿದಾರರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿತು. ಇಂತಹ ಪಿಐಎಲ್‌ಗಳಿಂದ ಕೋರ್ಟ್ ಸಮಯ ಹಾಳು ಮಾಡಬೇಡಿ, ನ್ಯಾಯಾಲಯವು ಸೆನ್ಸಾರ್‌ಶಿಪ್‌ ವಿಧಿಸಲು ಸಾಧ್ಯವಿಲ್ಲ ಎಂದು ಹೇಳಿತು‌. ಇದನ್ನೂ ಓದಿ: ಕರ್ನಾಟಕಕ್ಕೆ 100 ರೂ. ನೀಡಿದರೆ, ದೇಶಕ್ಕೆ ಕರ್ನಾಟಕ ಸಾವಿರ ರೂ. ನೀಡಲಿದೆ: ತೇಜಸ್ವಿ ಸೂರ್ಯ

    2002 ರ ಗುಜರಾತ್ ಗಲಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸಾಕ್ಷ್ಯಚಿತ್ರ ಪ್ರಸಾರ ಮಾಡುವ ಮೂಲಕ ಅವರ ವ್ಯಕ್ತಿತ್ವಕ್ಕೆ ಕಳಂಕ ತರುವ ಪ್ರಯತ್ನ ಮಾಡಲಾಗುತ್ತಿದ್ದು, ಇದು ಹಿಂದೂ ಧರ್ಮದ ವಿರೋಧಿ ಪ್ರಚಾರವನ್ನು ಪ್ರತಿಬಿಂಬಿಸುತ್ತದೆ. ಭಾರತದ ಸ್ವಾತಂತ್ರ್ಯದ ಸಮಯದಿಂದಲೂ ಬಿಬಿಸಿ ಭಾರತೀಯ ವಿರೋಧಿ ನಿಲುವನ್ನು ಹೊಂದಿದೆ. ಈ ಹಿನ್ನೆಲೆಯಲ್ಲಿ ಅಂದಿನ ಪ್ರಧಾನಿ ಇಂದಿರಾ ಗಾಂಧಿ (Indira Gandhi) ನೇತೃತ್ವದ ಕೇಂದ್ರ ಸರ್ಕಾರ ಎರಡು ವರ್ಷಗಳ ಕಾಲ ಭಾರತದಲ್ಲಿ ಬಿಬಿಸಿಯನ್ನು ನಿಷೇಧಿಸಿತು.

    ಬಿಬಿಸಿ ನೆಟ್‌ವರ್ಕ್ ನಿಷೇಧಿಸುವಂತೆ ಜನವರಿ 27ರಂದು ಕೇಂದ್ರ ಗೃಹ ಸಚಿವಾಲಯಕ್ಕೆ ಮನವಿ ಸಲ್ಲಿಸಿದ್ದರೂ ಇಲ್ಲಿಯವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಸಂವಿಧಾನದ ಪರಿಚ್ಛೇದ 19(1)(ಎ) ಅಡಿಯಲ್ಲಿ ವಾಕ್ ಸ್ವಾತಂತ್ರ್ಯದ ಹಕ್ಕು ಸಂಪೂರ್ಣ ಹಕ್ಕಲ್ಲ. ಆದರೆ 19(2) ಪರಿಚ್ಛೇದದಿಂದ ಅರ್ಹವಾಗಿದೆ ಎಂದು ಅರ್ಜಿದಾರರ ಪರ ವಕೀಲರು ವಾದ ಮಂಡಿಸಿದರು. ಈ ವಾದವನ್ನು ಕೋರ್ಟ್ ಪುರಸ್ಕರಿಸಲಿಲ್ಲ. ಇದನ್ನೂ ಓದಿ: ದೇಶದಲ್ಲೇ ಮೊದಲ ಬಾರಿಗೆ ಜಮ್ಮು-ಕಾಶ್ಮೀರದಲ್ಲಿ ಲಿಥಿಯಮ್ ನಿಕ್ಷೇಪ ಪತ್ತೆ

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಚೀನಾ ಓಲೈಸಲು ಮೋದಿ ವಿರುದ್ಧ ಬಿಬಿಸಿ ಸಾಕ್ಷ್ಯಚಿತ್ರ: ಮಹೇಶ್‌ ಜೇಠ್ಮಾಲನಿ

    ಚೀನಾ ಓಲೈಸಲು ಮೋದಿ ವಿರುದ್ಧ ಬಿಬಿಸಿ ಸಾಕ್ಷ್ಯಚಿತ್ರ: ಮಹೇಶ್‌ ಜೇಠ್ಮಾಲನಿ

    ನವದೆಹಲಿ: ಚೀನಾವನ್ನು ಓಲೈಸಲು ಪ್ರಧಾನಿ ನರೇಂದ್ರ ಮೋದಿ (PM Narendra Modi) ವಿರುದ್ಧ ಬಿಬಿಸಿ (BBC) ದುರುದ್ದೇಶಪೂರಿತ ಸಾಕ್ಷ್ಯಚಿತ್ರ ತಯಾರಿಸಿದೆ ಎಂದು ಬಿಜೆಪಿ ಹಿರಿಯ ಸಂಸದ, ವಕೀಲ ಮಹೇಶ್‌ ಜೇಠ್ಮಾಲನಿ (Mahesh Jethmalani) ಗಂಭೀರ ಆರೋಪ ಮಾಡಿದ್ದಾರೆ.

    ಈ ಸಂಬಂಧ ಟ್ವಿಟ್ಟರ್‌ನಲ್ಲಿ ಚೀನಾದ (China) ಟೆಲಿಕಾಂ ಕಂಪನಿ ಹವಾವೇಯಿಂದ (Huawei) ಬಿಬಿಸಿ ಹಣವನ್ನು ಪಡೆದುಕೊಳ್ಳುತ್ತಿರುವ ಲಿಂಕ್‌ ಸೇರಿಸಿ ಟ್ವೀಟ್‌ ಮಾಡಿದ್ದಾರೆ. ಇದನ್ನೂ ಓದಿ: ಮೋದಿ ವಿರುದ್ಧದ ಬಿಬಿಸಿ ಸಾಕ್ಷ್ಯಚಿತ್ರಕ್ಕೆ ರಷ್ಯಾ ಆಕ್ರೋಶ

    ಬಿಬಿಸಿ ಯಾಕೆ ಭಾರತ ವಿರೋಧಿಯಾಗಿದೆ? ಯಾಕೆಂದರೆ ಚೀನಾದ ಸರ್ಕಾರಕ್ಕೆ ಸಂಬಂಧಿಸಿದ ಹುವಾವೇ ಕಂಪನಿಯಿಂದ ಹಣ ಪಡೆದುಕೊಳ್ಳುತ್ತಿದೆ. ಬಿಬಿಸಿ ಈಗ ಚೀನಾ ಓಲೈಕೆಯಲ್ಲಿ ತೊಡಗಿದೆ. ಇದರೊಂದಿಗೆ ಬಿಬಿಸಿಗೆ ಅಪ್ತರಾದ ಕಾಮ್ರೆಡ್‌ ಜೈರಾಂ (ಕಾಂಗ್ರೆಸ್‌ ನಾಯಕ ಜೈರಾಂ ರಮೇಶ್‌) ಅವರ ಕಾರ್ಯಸೂಚಿಯನ್ನು ಪ್ರಚಾರ ಮಾಡುತ್ತಿದೆ. ಇದು ಸರಳವಾದ ನಗದುಪ್ರಚಾರದ ಒಪ್ಪಂದವಾಗಿದ್ದು, ಬಿಬಿಸಿ ಮಾರಾಟಕ್ಕಿದೆ ಎಂದು ಗಂಭೀರವಾದ ಆರೋಪ ಮಾಡಿದ್ದಾರೆ.

    ತಮ್ಮ ಈ ಆರೋಪಕ್ಕೆ ಸಾಕ್ಷ್ಯ ನೀಡಲು 2022ರ ಆಗಸ್ಟ್‌ನಲ್ಲಿ ಬ್ರಿಟನ್ ನಿಯತಕಾಲಿಕೆ ‘ದಿ ಸೆಕ್ಟೇಟರ್’ ಪ್ರಕಟಿಸಿದ ಅಂಕಣದ ಲಿಂಕ್ ಅನ್ನು ಹಂಚಿಕೊಂಡಿದ್ದಾರೆ. ಈ ಅಂಕಣದಲ್ಲಿ ಅಮೆರಿಕ ನಿರ್ಬಂಧಿಸಿದ ಹುವಾವೇ ಕಂಪನಿಯಿಂದ ಬಿಬಿಸಿ ಈಗಲೂ ಹಣ ಪಡೆಯುತ್ತಿದೆ ಎಂದು ಬರೆಯಲಾಗಿದೆ.

    ಮತ್ತೊಂದು ಟ್ವೀಟ್‌ನಲ್ಲಿ ಜೇಠ್ಮಾಲನಿ, 2021ರವರೆಗೆ ಜಮ್ಮು ಕಾಶ್ಮೀರ ಭಾರತದ ಭಾಗವಾಗಿಲ್ಲ ಎಂದು ತೋರಿಸುವ ನಕ್ಷೆಯನ್ನು ಪ್ರಕಟಿಸಿತ್ತು. ನಂತರ ಭಾರತ ಸರ್ಕಾರದ ಕ್ಷಮೆಯಾಚಿಸಿ ನಕ್ಷೆ ಸರಿ ಮಾಡಿತ್ತು. ಬಿಬಿಸಿ ಭಾರತದ ವಿರುದ್ಧ ತಪ್ಪು ಮಾಹಿತಿ ಹರಡುವ ಸುದೀರ್ಘ ಇತಿಹಾಸ ಹೊಂದಿದೆ. ಮೋದಿ ವಿರುದ್ಧದ ಸಾಕ್ಷ್ಯಚಿತ್ರವು ಈ ದುರುದ್ದೇಶಪೂರಿತ ಪ್ರವೃತ್ತಿಯ ಮುಂದುವರಿದ ಭಾಗವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಮೋದಿ ವಿರುದ್ಧದ ಬಿಬಿಸಿ ಸಾಕ್ಷ್ಯಚಿತ್ರಕ್ಕೆ ರಷ್ಯಾ ಆಕ್ರೋಶ

    ಮೋದಿ ವಿರುದ್ಧದ ಬಿಬಿಸಿ ಸಾಕ್ಷ್ಯಚಿತ್ರಕ್ಕೆ ರಷ್ಯಾ ಆಕ್ರೋಶ

    ಮಾಸ್ಕೋ: ಪ್ರಧಾನಿ ನರೇಂದ್ರ ಮೋದಿ (Narendra Modi) ವಿರುದ್ಧ ಬಿಬಿಸಿ (BBC) ನಿರ್ಮಿಸಿರುವ ಸಾಕ್ಷ್ಯಚಿತ್ರಕ್ಕೆ (Documentary) ರಷ್ಯಾ ಆಕ್ರೋಶ ವ್ಯಕ್ತಪಡಿಸಿದೆ.

    ರಷ್ಯಾದ(Russia) ವಿದೇಶಾಂಗ ಸಚಿವಾಲಯದ  ವಕ್ತಾರೆ ಮಾರಿಯಾ ಜಖರೋವಾ ಪ್ರತಿಕ್ರಿಯಿಸಿ, ಬಿಬಿಸಿ ರಷ್ಯಾದ ವಿರುದ್ಧ ಮಾತ್ರವಲ್ಲದೇ ಸ್ವತಂತ್ರ ನೀತಿಯನ್ನು ಅನುಸರಿಸುತ್ತಿರುವ ಇತರ ದೇಶಗಳ ವಿರುದ್ಧ ಮಾಹಿತಿ ಯುದ್ಧವನ್ನು ನಡೆಸುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಕೇಂದ್ರ ಬಜೆಟ್ ಮೇಲೆ ಜಗತ್ತು ಕಣ್ಣಿಟ್ಟಿದೆ: ಮೋದಿ

    ಬಿಬಿಸಿ ವಿವಿಧ ರಂಗಗಳಲ್ಲಿ ಮಾಹಿತಿ ಯುದ್ಧವನ್ನು ನಡೆಸುತ್ತಿದೆ ಎಂಬುದಕ್ಕೆ ಇದು ಮತ್ತೊಂದು ನಿದರ್ಶನ. ಬಿಬಿಸಿ ಈಗ ಸ್ವತಂತ್ರವಾಗಿ ಉಳಿದಿಲ್ಲ. ಪತ್ರಿಕೋದ್ಯಮ ವೃತ್ತಿಯನ್ನು ನಿರ್ಲಕ್ಷಿಸಿ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದರು.

    ಪ್ರಧಾನಿ ಮೋದಿಯವರು ಗುಜರಾತ್‌ ಮುಖ್ಯಮಂತ್ರಿಯಾಗಿದ್ದಾಗ ನಡೆದ ಗಲಭೆ ವಿಷಯಗಳ ಬಗ್ಗೆ ತನಿಖೆ ನಡೆಸಿ ಎರಡು ಭಾಗಗಳಲ್ಲಿ ಬಿಬಿಸಿ ಸಾಕ್ಷ್ಯಚಿತ್ರವನ್ನು ತಯಾರಿಸಿದೆ. ಭಾರತದ ವಿದೇಶಾಂಗ ಇಲಾಖೆ ಇದು “ವಸಾಹತುಶಾಹಿ ಮನಸ್ಥಿತಿಯನ್ನು ಪ್ರತಿಬಿಂಬಿಸುತ್ತದೆ” ಎಂದು ಟೀಕಿಸಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಬೆಂಗಳೂರಿನಲ್ಲಿ ಬಿಬಿಸಿ ಸಾಕ್ಷ್ಯಚಿತ್ರ ಪ್ರಸಾರ

    ಬೆಂಗಳೂರಿನಲ್ಲಿ ಬಿಬಿಸಿ ಸಾಕ್ಷ್ಯಚಿತ್ರ ಪ್ರಸಾರ

    ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi) ಅವರ ಕುರಿತು ಬಿಬಿಸಿ ಸಿದ್ಧಪಡಿಸಿದ್ದ ಸಾಕ್ಷ್ಯಚಿತ್ರ (BBC documentary) ಬೆಂಗಳೂರಿನಲ್ಲಿ ಪ್ರಸಾರವಾಗಿದೆ.

    ಶನಿವಾರ ರಾತ್ರಿ ಇನ್‌ಫ್ಯಾಂಟ್ರಿ ರಸ್ತೆಯಲ್ಲಿರುವ (Infantry Road Bengaluru) ಆಲ್‌ ಇಂಡಿಯಾ ಸ್ಟುಡೆಂಟ್ಸ್‌ ಅಸೋಸಿಯೇಷನ್‌ (AISA) ಕಚೇರಿಯಲ್ಲಿ ನಿಷೇಧಿತ ಬಿಬಿಸಿ ಸಾಕ್ಷ್ಯಚಿತ್ರ ಪ್ರಸಾರ ಮಾಡಲಾಗಿದೆ. ಇದನ್ನೂ ಓದಿ: ರಾಜ್ಯದಲ್ಲಿ ಸ್ವಂತ ಬಲದಲ್ಲಿ ಗೆಲ್ಲಲು ಬಿಜೆಪಿಯಿಂದ ರೆಡಿಯಾಯ್ತು ಸೀಟ್ ಶೇರಿಂಗ್ ಫಾರ್ಮುಲಾ

    ಈ ಸಂಬಂಧ ಎಐಎಸ್‌ಎ ಸದಸ್ಯೆ ಅರತ್ರಿಕಾ ಡೇ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, ಸುಮಾರು 40 ವಿದ್ಯಾರ್ಥಿಗಳು ಸಾಕ್ಷ್ಯಚಿತ್ರ ವೀಕ್ಷಿಸಲು ಎಐಎಸ್‌ಎ ಕಚೇರಿಗೆ ಬಂದಿದ್ದರು. ಕ್ರೈಸ್ಟ್ ಕಾಲೇಜು, ಐಐಎಸ್‌ಸಿ, ಅಜೀಂ ಪ್ರೇಮ್‌ಜಿ ವಿಶ್ವವಿದ್ಯಾಲಯ, ಸೇಂಟ್ ಜೋಸೆಫ್ ಮತ್ತು ಇತರ ಕೆಲವು ಕಾಲೇಜುಗಳ ವಿದ್ಯಾರ್ಥಿಗಳು, ಆಲ್-ಇಂಡಿಯಾ ಸೆಂಟ್ರಲ್ ಕೌನ್ಸಿಲ್ ಆಫ್ ಟ್ರೇಡ್ ಯೂನಿಯನ್‌ನ ಸದಸ್ಯರು ಸಾಕ್ಷ್ಯಚಿತ್ರ ವೀಕ್ಷಿಸಿದರು. ಸಾಕ್ಷ್ಯಚಿತ್ರ ವೀಕ್ಷಣೆ ಬಳಿಕ ಕೋಮುವಾದದ ಏರಿಕೆಯ ಕುರಿತ ಚರ್ಚೆಯಲ್ಲಿ ಅವರು ಭಾಗವಹಿಸಿದರು ಎಂದು ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k