Tag: ಬಿರ್‌ಭೂಮ್‌ ಪ್ರಕರಣ

  • ಮಮತಾ ಬ್ಯಾನರ್ಜಿ ʼಮಾಫಿಯಾʼ ಹಿಡಿತದಲ್ಲಿ ಬಂಗಾಳ: ಬಿಜೆಪಿ ವರದಿ

    ಮಮತಾ ಬ್ಯಾನರ್ಜಿ ʼಮಾಫಿಯಾʼ ಹಿಡಿತದಲ್ಲಿ ಬಂಗಾಳ: ಬಿಜೆಪಿ ವರದಿ

    ಕೋಲ್ಕತ್ತಾ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ತೃಣಮೂಲ ಕಾಂಗ್ರೆಸ್ ನೇತೃತ್ವದ ʻಮಾಫಿಯಾʼ ಹಿಡಿತದಲ್ಲಿ ಬಂಗಾಳವಿದೆ. ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕುಸಿದಿದೆ ಎಂದು ಬಿಜೆಪಿ ಸತ್ಯಶೋಧನಾ ತಂಡ ಆರೋಪಿಸಿದೆ.

    ಬಿರ್‌ಭೂಮ್‌ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಸತ್ಯಶೋಧನಾ ಸಮಿತಿ ತನ್ನ ತನಿಖಾ ವರದಿಯನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೆ ಸಲ್ಲಿಸಿದೆ. ಸುಲಿಗೆ, ಗೂಂಡಾ ತೆರಿಗೆ ಸೇರಿದಂತೆ ಇತರೆ ಕೃತ್ಯಗಳು ಹತ್ಯೆಗಳಿಗೆ ಕಾರಣವಾಗಿವೆ ಎಂದು ವರದಿ ತಿಳಿಸಿದೆ. ಇದನ್ನೂ ಓದಿ: ಕಾಶ್ಮೀರ ಹತ್ಯಾಕಾಂಡ – 31 ವರ್ಷದ ಬಳಿಕ ಪಾತಕಿ ಬಿಟ್ಟಾ ಕರಾಟೆ ವಿರುದ್ಧ ಅರ್ಜಿ ಸಲ್ಲಿಕೆ

    ಸ್ಥಳೀಯ ನಿವಾಸಿಗಳು ತಮ್ಮ ಜೀವ ಮತ್ತು ಆಸ್ತಿ ಬೆದರಿಕೆಯ ಭಯದಿಂದ ಮನೆಗಳನ್ನು ತೊರೆದಿದ್ದಾರೆ. ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಮತ್ತು ರಾಷ್ಟ್ರೀಯ ಮಹಿಳಾ ಆಯೋಗದಂತಹ ಸಂಸ್ಥೆಗಳು ಗ್ರಾಮಕ್ಕೆ ಭೇಟಿ ನೀಡಿ ಗ್ರಾಮಸ್ಥರನ್ನು ಮರಳಿ ಕರೆತರಲು ಆತ್ಮವಿಶ್ವಾಸವನ್ನು ಮೂಡಿಸುವ ಕ್ರಮಗಳನ್ನು ಕೈಗೊಳ್ಳಬೇಕು ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

    ತೃಣಮೂಲ ಕಾಂಗ್ರೆಸ್‌ನ ಸ್ಥಳೀಯ ನಾಯಕ ಭಾದು ಶೇಖ್, ಬಾಂಬ್ ದಾಳಿಯಲ್ಲಿ ಹತನಾದ ನಂತರ ಪ್ರತಿಕಾರವಾಗಿ ರಾಮ್‌ಪುರಹಾತ್ ಪಟ್ಟಣದ ಬಳಿಯ ಭಿರ್‌ಭೂಮ್‌ನಲ್ಲಿ ಮಾರ್ಚ್ 22 ರಂದು ಆರು ಮಹಿಳೆಯರು ಮತ್ತು ಇಬ್ಬರು ಮಕ್ಕಳನ್ನು ಸಜೀವ ದಹನ ಮಾಡಲಾಯಿತು. ಒಂದು ದಿನದ ನಂತರ ಸುಟ್ಟ ಮೃತದೇಹಗಳು ಪತ್ತೆಯಾಗಿದೆ. ಮೃತರು ಒಂದೇ ಕುಟುಂಬಕ್ಕೆ ಸೇರಿದವರಾಗಿದ್ದಾರೆ ಎಂದು ವರದಿ ಹೇಳಿದೆ. ಇದನ್ನೂ ಓದಿ: ಕೇಜ್ರಿವಾಲ್ ಹತ್ಯೆಗೆ ಬಿಜೆಪಿ ಯತ್ನ – ಎಎಪಿ ಆರೋಪ

    ಬಿಜೆಪಿ ತಂಡ ಈಗಾಗಲೇ ಕೋಲ್ಕತ್ತಾ ತಲುಪಿದ ನಂತರ ಗ್ರಾಮಕ್ಕೆ ಭೇಟಿ ನೀಡಲು ಮಮತಾ ಬ್ಯಾನರ್ಜಿ ನಿರ್ಧರಿಸಿದ್ದರು ಎಂದು ಬಿಜೆಪಿ ತಂಡ ಹೇಳಿದೆ. ಮುಖ್ಯಮಂತ್ರಿ ಭೇಟಿಯಿಂದಾಗಿ ತೃಣಮೂಲ ಕಾಂಗ್ರೆಸ್‌ನ ಗೂಂಡಾಗಳು ಬಿಜೆಪಿ ಸತ್ಯಶೋಧನಾ ತಂಡದ ಮೇಲೆ ಹಲ್ಲೆ ನಡೆಸಲು ಮುಂದಾಗಿದ್ದರು ಎಂದು ಗಂಭೀರ ಆರೋಪ ಮಾಡಿದೆ.

    ಒಬ್ಬ ಅಧಿಕಾರಿ ಅಥವಾ ಕಾನ್‌ಸ್ಟೇಬಲ್ ಕೂಡ ಕಾಣಿಸಲಿಲ್ಲ. ಸತ್ಯಶೋಧನಾ ತಂಡ ದಾಳಿಗೆ ಒಳಗಾದಾಗ ಯಾರೂ ರಕ್ಷಣೆಗೆ ಬಂದಿಲ್ಲ. ಈ ವೇಳೆ ಹಿರಿಯ ಪೊಲೀಸ್‌ ಅಧಿಕಾರಿಗಳನ್ನು ಸಂಪರ್ಕಿಸುವ ಪ್ರಯತ್ನಗಳೂ ವಿಫಲವಾಗಿದ್ದವು ಎಂದು ವರದಿ ತಿಳಿಸಿದೆ.

    ಬಿಜೆಪಿ ತಂಡದ ವರದಿಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಖಂಡಿಸಿದ್ದಾರೆ. ಇಂತಹ ವರದಿಗಳು ತನಿಖೆಗೆ ಅಡ್ಡಿಪಡಿಸುತ್ತವೆ. ಅಲ್ಲದೇ ತನಿಖೆಯ ದಿಕ್ಕು ತಪ್ಪಿಸುತ್ತವೆ ಎಂದು ಆರೋಪಿಸಿದ್ದಾರೆ.

    ಇವುಗಳು ರಾಜಕೀಯ ಪ್ರೇರಿತ ವರದಿಗಳು. ಬಿಜೆಪಿ ಮತ್ತು ಕೇಂದ್ರ ಸರ್ಕಾರದ ಈ ಧೋರಣೆಯನ್ನು ನಾನು ಖಂಡಿಸುತ್ತೇನೆ. ತನಿಖೆ ನಡೆಯುತ್ತಿರುವಾಗ ಯಾವುದೇ ಪಕ್ಷ ಹಸ್ತಕ್ಷೇಪ ಮಾಡಬಾರದು. ಇದು ಸಂಪೂರ್ಣ ಅಧಿಕಾರದ ದುರುಪಯೋಗವಾಗಿದೆ. ಇದು ಸೇಡು ಮತ್ತು ಪಕ್ಷಪಾತವಾಗಿದೆ ಎಂದು ಟೀಕಿಸಿದ್ದಾರೆ. ಇದನ್ನೂ ಓದಿ: ಬಿಜೆಪಿಯೇತರ ಪ್ರತಿಪಕ್ಷಗಳ ಆಧಾರ ಸ್ತಂಭ ಮಮತಾ ಬ್ಯಾನರ್ಜಿ: ಕಾಂಗ್ರೆಸ್‌ ಸಂಸದ ಬಣ್ಣನೆ

  • ಮುಸ್ಲಿಮರನ್ನು ಕಾಲಾಳುಗಳಾಗಿ ಬಳಸಿಕೊಳ್ಳಲಾಗುತ್ತಿದೆ: ಅಸಾದುದ್ದೀನ್‌ ಓವೈಸಿ ಬೇಸರ

    ಮುಸ್ಲಿಮರನ್ನು ಕಾಲಾಳುಗಳಾಗಿ ಬಳಸಿಕೊಳ್ಳಲಾಗುತ್ತಿದೆ: ಅಸಾದುದ್ದೀನ್‌ ಓವೈಸಿ ಬೇಸರ

    ನವದೆಹಲಿ: ಮುಸ್ಲಿಮರನ್ನು ಕಾಲಾಳುಗಳನ್ನಾಗಿ ಬಳಸಿಕೊಳ್ಳಲಾಗುತ್ತಿದೆ ಎಂದು ಸಂಸದ ಹಾಗೂ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್‌ ಓವೈಸಿ ಬೇಸರ ವ್ಯಕ್ತಪಡಿಸಿದ್ದಾರೆ.

    ಪಶ್ಚಿಮ ಬಂಗಾಳದ ಬಿರ್‌ಭೂಮ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಬಿರ್‌ಭೂಮ್‌ನಲ್ಲಿ ಏನೇ ನಡೆದರೂ ಸರ್ಕಾರ ಮುಸ್ಲಿಮರನ್ನು ತಮ್ಮ ಕಾಲಾಳುಗಳಾಗಿ ಬಳಸಿಕೊಳ್ಳುತ್ತಿದೆ ಎಂಬುದನ್ನು ತೋರಿಸುತ್ತದೆ. ಒಂದೇ ರಾಜಕೀಯ ಪಕ್ಷದ ಎರಡು ಗುಂಪುಗಳು ಹಿಂಸಾಚಾರವನ್ನು ಸೃಷ್ಟಿಸುತ್ತಿವೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಟಿಎಂಸಿ ನಾಯಕನನ್ನು ಅರೆಸ್ಟ್ ಮಾಡುವಂತೆ ಮಮತಾ ಬ್ಯಾನರ್ಜಿ ಆದೇಶ

    ಬಿರ್‌ಭೂಮ್‌ ಜಿಲ್ಲೆಯ ರಾಮ್‌ಪುರಹಾಟ್‌ನಲ್ಲಿ ಮಕ್ಕಳು ಸೇರಿದಂತೆ ಹಲವಾರು ಜನರು ಕೊಲ್ಲಲ್ಪಟ್ಟಿರುವುದು ಖಂಡನೀಯ. ಬಂಗಾಳದಲ್ಲಿ ಹಿಂಸಾಚಾರವನ್ನು ನಿಯಂತ್ರಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ದೂರಿದ್ದಾರೆ.

    ಪಶ್ಚಿಮ ಬಂಗಾಳದ ಬಿರ್‌ಭೂಮ್ ಜಿಲ್ಲೆಯ ರಾಮ್‌ಪುರಹಾಟ್‌ ಎಂಬಲ್ಲಿ ಮಂಗಳವಾರ ನಸುಕಿನಲ್ಲಿ ಮನೆಗಳಿಗೆ ಬೆಂಕಿಹತ್ತಿ ಇಬ್ಬರು ಮಕ್ಕಳು ಸೇರಿದಂತೆ ಎಂಟು ಜನರು ಜೀವಂತವಾಗಿ ಸುಟ್ಟುಹೋಗಿದ್ದಾರೆ. ಘಟನೆ ಸಂಬಂಧ 11 ಜನರನ್ನು ಬಂಧಿಸಲಾಗಿದೆ. ಇದನ್ನೂ ಓದಿ: ಬಿರ್ಭೂಮ್ ಹತ್ಯಾ ಪ್ರಕರಣ – ನವದಂಪತಿ ಸಾವು

    ಘಟನೆ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ವ್ಯಾಪಕ ಪ್ರತಿರೋಧ ವ್ಯಕ್ತವಾಗುತ್ತಿದ್ದಂತೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಸ್ಥಳಕ್ಕೆ ಭೇಟಿ ನೀಡಿ ಮೃತರ ಕುಟುಂಬದವರಿಗೆ ಪರಿಹಾರ ಘೋಷಿಸಿದ್ದಾರೆ. ಅಲ್ಲದೇ ಘಟನೆಗೆ ಕಾರಣ ಎನ್ನಲಾದ ಟಿಎಂಸಿ ನಾಯಕನನ್ನು ಬಂಧಿಸುವಂತೆ ಸೂಚನೆ ನೀಡಿದ್ದಾರೆ.

  • ಬಿರ್‌ಭುಮ್‌ ಹಿಂಸಾಚಾರ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ: ಮೋದಿ

    ಬಿರ್‌ಭುಮ್‌ ಹಿಂಸಾಚಾರ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ: ಮೋದಿ

    ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿರ್‌ಭುಮ್‌ ಜಿಲ್ಲೆಯಲ್ಲಿ ನಡೆದ 8 ಜನರನ್ನು ಹತ್ಯೆ ಮಾಡಿದವರ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದರು.

    ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬಿರ್‌ಭುಮ್‌ನಲ್ಲಿ ನಡೆದ ಹಿಂಸಾಚಾರದ ಬಗ್ಗೆ ಸಂತಾಪವನ್ನು ಸೂಚಿಸುತ್ತಿದ್ದೇನೆ. ಘಟನೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುತ್ತದೆ. ಅವರಿಗೆ ಶಿಕ್ಷೆಯಾಗಲಿದೆ ಎಂದರು.

    ಈ ರೀತಿಯ ಅಪರಾಧ ಮಾಡುವವರನ್ನು ಮತ್ತು ಅಪರಾಧಿಗಳನ್ನು ಪ್ರೋತ್ಸಾಹಿಸುವವರನ್ನು ಕ್ಷಮಿಸಬಾರದು. ತಪ್ಪಿತಸ್ಥರನ್ನು ನ್ಯಾಯಾಂಗಕ್ಕೆ ತರಲು ಕೇಂದ್ರವು ರಾಜ್ಯಕ್ಕೆ ಎಲ್ಲಾ ರೀತಿಯ ಭರವಸೆಯನ್ನು ನೀಡುತ್ತದೆ ಎಂದರು. ಇದನ್ನೂ ಓದಿ: ಅಲ್ಲಾಹು ಅಕ್ಬರ್ ಘೋಷಣೆ ಕೂಗಿದ್ದ ಮುಸ್ಕಾನ್ ಸೆಮಿಸ್ಟರ್ ಪರೀಕ್ಷೆಗೆ ಗೈರು

    ಘಟನೆಯೇನು?: ಪಶ್ಚಿಮ ಬಂಗಾಳದ ಬಿರ್‌ಭುಮ್‌ ಜಿಲ್ಲೆಯ ರಾಮ್‍ಪುರಹಾಟ್ ಎಂಬಲ್ಲಿ ಮಂಗಳವಾರ ನಸುಕಿನಲ್ಲಿ ಮನೆಗಳಿಗೆ ಬೆಂಕಿಹತ್ತಿ ಇಬ್ಬರು ಮಕ್ಕಳು ಸೇರಿದಂತೆ ಎಂಟು ಜನರು ಸಜಿವ ದಹನರಾಗಿದ್ದಾರೆ. ಘಟನೆ ಸಂಬಂಧ 11 ಜನರನ್ನು ಬಂಧಿಸಲಾಗಿದೆ.

    ಈ ಘಟನೆಗೆ ಮುನ್ನ, ಸ್ಥಳೀಯ ಪಂಚಾಯಿತಿ ಮುಖಂಡನ ಹತ್ಯೆಯಾಗಿತ್ತು ಎಂದು ಡಿಜಿಪಿ ಮನೋಜ್ ಮಾಳವೀಯ ಅವರು ಹೇಳಿದ್ದಾರೆ. ಪಂಚಾಯಿತಿ ಮುಖಂಡ ಟಿಎಂಸಿ ಪಕ್ಷದವರು. ಟಿಎಂಸಿಯ ಎರಡು ಗುಂಪುಗಳ ನಡುವಣ ದ್ವೇಷವೇ ಘಟನೆಗೆ ಕಾರಣ ಎನ್ನಲಾಗುತ್ತಿದೆ. ಆದರೆ, ಇದನ್ನು ಪೊಲೀಸರು ದೃಢಪಡಿಸಿಲ್ಲ. ಇದನ್ನೂ ಓದಿ: ಬೈಕ್‍ಗೆ ಬಸ್ ಡಿಕ್ಕಿ- ಒಂದೇ ಕುಟುಂಬದ ನಾಲ್ವರು ಸಾವು

  • ಇದು ಉತ್ತರ ಪ್ರದೇಶ ಅಲ್ಲ, ಬಂಗಾಳ: ಬಿಜೆಪಿಗೆ ಮಮತಾ ತಿರುಗೇಟು

    ಇದು ಉತ್ತರ ಪ್ರದೇಶ ಅಲ್ಲ, ಬಂಗಾಳ: ಬಿಜೆಪಿಗೆ ಮಮತಾ ತಿರುಗೇಟು

    ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿರ್‌ಭೂಮ್‌ ಜಿಲ್ಲೆಯ ರಾಮ್‌ಪುರಹಾಟ್‌ನಲ್ಲಿ ಮನೆಗಳಿಗೆ ಬೆಂಕಿ ಹೊತ್ತಿ ಎಂಟು ಮಂದಿ ಸಜೀವ ದಹನ ಪ್ರಕರಣವನ್ನು ಹಿಂಸಾಚಾರ ಎಂದು ಬಿಜೆಪಿ ಕಾರ್ಯಕರ್ತರು, ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಆರೋಪಕ್ಕೆ ವಿರೋಧ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ.

    ಇದು ಉತ್ತರ ಪ್ರದೇಶ ಅಲ್ಲ, ಬಂಗಾಳ. ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ನಡೆದಿದ್ದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಟಿಎಂಸಿ ನಿಯೋಗವನ್ನು ಕಳಿಹಿಸಿದ್ದೆವು. ಭೇಟಿಗೆ ನಮ್ಮ ನಿಯೋಗಕ್ಕೆ ಅವಕಾಶವನ್ನೇ ನೀಡಲಿಲ್ಲ. ಆದರೆ ನಮ್ಮ ರಾಜ್ಯಕ್ಕೆ ಬರುವ ಯಾರನ್ನೂ ನಾವು ತಡೆಯುವುದಿಲ್ಲ ಎಂದು ಟಾಂಗ್‌ ಕೊಟ್ಟಿದ್ದಾರೆ. ಇದನ್ನೂ ಓದಿ: ದಿದಿ ನಾಡಿನಲ್ಲೇ ಹಿಂಸಾಚಾರ – ಹೆದರಿ ಮನೆ ತೊರೆಯುತ್ತಿರುವ ಜನರು

    ಗುಜರಾತ್‌, ರಾಜಸ್ಥಾನ ರಾಜ್ಯಗಳಲ್ಲೂ ಇಂತಹ ಘಟನೆಗಳು ನಡೆದಿವೆ. ಹಾಗಂತ ನಾನು ರಾಮ್‌ಪುರಹಾಟ್‌ನಲ್ಲಿ ನಡೆದ ಘಟನೆಯನ್ನು ಸಮರ್ಥಿಸುತ್ತಿಲ್ಲ. ನ್ಯಾಯಯುತವಾಗಿ ಕ್ರಮಕೈಗೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.

    ಪಶ್ಚಿಮ ಬಂಗಾಳದಲ್ಲಿರುವುದು ನಮ್ಮ ಸರ್ಕಾರ. ರಾಜ್ಯದ ಜನರ ಬಗ್ಗೆ ನಮಗೆ ಕಾಳಜಿ ಇದೆ. ಯಾರೊಬ್ಬರೂ ನೋವು ಅನುಭವಿಸುವುದನ್ನು ನಾವು ಎಂದಿಗೂ ಬಯಸುವುದಿಲ್ಲ. ರಾಮ್‌ಪುರಹಾಟ್‌ ಘಟನೆ ದುರದೃಷ್ಟಕರ. ಕೂಡಲೇ ಒಸಿ, ಡಿಪಿಒ ಅವರನ್ನು ವಜಾ ಮಾಡಿದ್ದೇನೆ. ನಾನು ನಾಳೆ ರಾಮ್‌ಪುರಹಾಟ್‌ಗೆ ಹೋಗುತ್ತೇನೆ ಎಂದು ಹೇಳಿದ್ದಾರೆ.

    ಪಶ್ಚಿಮ ಬಂಗಾಳದ ಬಿರ್‌ಭೂಮ್ ಜಿಲ್ಲೆಯ ರಾಮ್‌ಪುರಹಾಟ್‌ ಎಂಬಲ್ಲಿ ಮಂಗಳವಾರ ನಸುಕಿನಲ್ಲಿ ಮನೆಗಳಿಗೆ ಬೆಂಕಿಹತ್ತಿ ಇಬ್ಬರು ಮಕ್ಕಳು ಸೇರಿದಂತೆ ಎಂಟು ಜನರು ಜೀವಂತವಾಗಿ ಸುಟ್ಟುಹೋಗಿದ್ದಾರೆ. ಘಟನೆ ಸಂಬಂಧ 11 ಜನರನ್ನು ಬಂಧಿಸಲಾಗಿದೆ. ಇದನ್ನೂ ಓದಿ: ಟಿಎಂಸಿ ಮುಖಂಡನ ಹತ್ಯೆ – ಹಲವು ಮನೆಗಳಿಗೆ ಬೆಂಕಿ, 10 ಮಂದಿ ಸಜೀವ ದಹನ

    ಈ ಘಟನೆಗೆ ಕೆಲವೇ ಗಂಟೆಗಳ ಮುನ್ನ, ಸ್ಥಳೀಯ ಪಂಚಾಯಿತಿ ಮುಖಂಡನ ಹತ್ಯೆಯಾಗಿತ್ತು ಎಂದು ಡಿಜಿಪಿ ಮನೋಜ್ ಮಾಳವೀಯ ಅವರು ಹೇಳಿದ್ದಾರೆ. ಪಂಚಾಯಿತಿ ಮುಖಂಡ ಟಿಎಂಸಿ ಪಕ್ಷದವರು. ಟಿಎಂಸಿಯ ಎರಡು ಗುಂಪುಗಳ ನಡುವಣ ದ್ವೇಷವೇ ಘಟನೆಗೆ ಕಾರಣ ಎನ್ನಲಾಗುತ್ತಿದೆ. ಆದರೆ, ಇದನ್ನು ಪೊಲೀಸರು ದೃಢಪಡಿಸಿಲ್ಲ.