Tag: ಬಿಲಾವಲ್ ಭುಟ್ಟೋ

  • ಸಿಂಧೂ ಜಲ ಒಪ್ಪಂದ ಸ್ಥಗಿತ ಮುಂದುವರಿಸಿದ್ರೆ ಯುದ್ಧದಿಂದ ಹಿಂದೆ ಸರಿಯಲ್ಲ, ಇದು ಮೋದಿ ಸರ್ಕಾರಕ್ಕೆ ಸಂದೇಶ: ಬಿಲಾವಲ್‌ ಭುಟ್ಟೋ

    ಸಿಂಧೂ ಜಲ ಒಪ್ಪಂದ ಸ್ಥಗಿತ ಮುಂದುವರಿಸಿದ್ರೆ ಯುದ್ಧದಿಂದ ಹಿಂದೆ ಸರಿಯಲ್ಲ, ಇದು ಮೋದಿ ಸರ್ಕಾರಕ್ಕೆ ಸಂದೇಶ: ಬಿಲಾವಲ್‌ ಭುಟ್ಟೋ

    ಇಸ್ಲಾಮಾಬಾದ್:‌ ಸಿಂಧೂ ಜಲ ಒಪ್ಪಂದ ಸ್ಥಗಿತಗೊಳಿಸೋದನ್ನ ಮುಂದುವರಿಸಿದ್ರೆ ನಾವು ಯುದ್ಧದಿಂದ ಹಿಂದೆ ಸರಿಯಲ್ಲ ಅಂತ ಪಾಕಿಸ್ತಾನದ ಮಾಜಿ ವಿದೇಶಾಂಗ ಸಚಿವ ಮತ್ತು ಪಾಕಿಸ್ತಾನ್ ಪೀಪಲ್ಸ್ ಪಾರ್ಟಿ (PPP) ಅಧ್ಯಕ್ಷ ಬಿಲಾವಲ್ ಭುಟ್ಟೋ ಜರ್ದಾರಿ (Bilawal Bhutto Zardari) ಭಾರತಕ್ಕೆ ಬೆದರಿಕೆಯೊಡ್ಡಿದ್ದಾರೆ.

    ಸಿಂಧ್ ಸರ್ಕಾರದ ಸಂಸ್ಕೃತಿ ಇಲಾಖೆ ಆಯೋಜಿಸಿದ್ದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಸಿಂಧೂ ಜಲ ಒಪ್ಪಂದ ಸ್ಥಗಿತಗೊಳಿಸಿರುವುದು ಸಿಂಧೂ ಕಣಿವೆ ನಾಗರಿಕತೆ ಮತ್ತು ಸಂಸ್ಕೃತಿಯ ಮೇಲೆ ಭಾರತ ಮಾಡುತ್ತಿರುವ ದಾಳಿಯಾಗಿದೆ. ಪಾಕಿಸ್ತಾನ ಯಾವಾಗಲೂ ಶಾಂತಿಯನ್ನ ಪ್ರತಿಪಾದಿಸುತ್ತೆ. ಆದ್ರೆ ಭಾರತ ಯುದ್ಧಕ್ಕೆ ಒತ್ತಾಯಿಸಿದರೆ, ನಾವು ಹಿಂದೆ ಸರಿಯಲ್ಲ ಎಂದು ನಾಲಿಗೆ ಹರಿಬಿಟ್ಟಿದ್ದಾರೆ. ಇದನ್ನೂ ಓದಿ: 1990ರ ಕಾಶ್ಮೀರಿ ಪಂಡಿತ್ ನರ್ಸ್ ಹತ್ಯೆ ಕೇಸ್; ಶ್ರೀನಗರದ 8 ಸ್ಥಳಗಳ ಮೇಲೆ ಎಸ್‌ಐಎ ದಾಳಿ

    bilawal bhutto

    ಮೋದಿ ಸರ್ಕಾರಕ್ಕೆ ನಾವು ಒಂದು ಸಂದೇಶ ಕಳಿಸುತ್ತೇವೆ. ನಾವು ಯಾವುದಕ್ಕೂ ಹಿಂದೆ ಸರಿಯುವುದಿಲ್ಲ, ತಲೆಬಾಗುವುದಿಲ್ಲ ಮತ್ತು ನೀವು ಸಿಂಧೂ ನದಿಯನ್ನು ಅತಿಕ್ರಮಿಸಲು ಧೈರ್ಯ ಮಾಡಿದರೆ, ಪಾಕಿಸ್ತಾನದ ಪ್ರತಿಯೊಂದು ಪ್ರಾಂತ್ಯದ ಜನರು ನಿಮ್ಮೊಂದಿಗೆ ಹೋರಾಡಲು ಸಿದ್ಧರಿರುತ್ತಾರೆ ಭುಟ್ಟೋ ಹೇಳಿದ್ದಾರೆ. ಇದನ್ನೂ ಓದಿ: ಎಥೆನಾಲ್‌ ಪೆಟ್ರೋಲ್‌ನಿಂದ ಮೈಲೇಜ್‌ ಕುಸಿತವಾಗಲ್ಲ, ವಿಮೆ ರದ್ದಾಗಲ್ಲ: ಕೇಂದ್ರ ಸರ್ಕಾರ ಸ್ಪಷ್ಟನೆ

    ಸಿಂಧೂ ಜಲ ಒಪ್ಪಂದ ಸ್ಥಗಿತಗೊಳಿಸಿದ್ದೇಕೆ?
    ಏಪ್ರಿಲ್ 22 ರಂದು ನಡೆದ ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ, ಭಾರತ 1960ರ ಸಿಂಧೂ ಜಲ ಒಪ್ಪಂದವನ್ನ ಸ್ಥಗಿತಗೊಳಿಸುವುದು ಸೇರಿದಂತೆ ಪಾಕಿಸ್ತಾನದ ಜೊತೆಗಿನ ಎಲ್ಲ ರಾಜತಾಂತ್ರಿಕ ಸಂಬಂಧಕ್ಕೆ ಬ್ರೇಕ್‌ ಹಾಕಿತು. ಇದನ್ನೂ ಓದಿ: ಸತ್ಯ ಹೇಳಿದ್ದಕ್ಕೆ ಎಸ್ಟಿ ನಾಯಕನ ಕತ್ತು ಹಿಡಿದು ಹೊರದಬ್ಬಿದೆ ಕಾಂಗ್ರೆಸ್: ಪ್ರಹ್ಲಾದ್ ಜೋಶಿ

  • ಪಾಕಿಸ್ತಾನದ ಭಯೋತ್ಪಾದಕ ಸಂಪರ್ಕಗಳು ರಹಸ್ಯವೇನಲ್ಲ: ಬಿಲಾವಲ್ ಭುಟ್ಟೋ

    ಪಾಕಿಸ್ತಾನದ ಭಯೋತ್ಪಾದಕ ಸಂಪರ್ಕಗಳು ರಹಸ್ಯವೇನಲ್ಲ: ಬಿಲಾವಲ್ ಭುಟ್ಟೋ

    ನವದೆಹಲಿ: ಭಯೋತ್ಪಾದಕ ಸಂಘಟನೆಗಳೊಂದಿಗಿನ ತಮ್ಮ ದೇಶದ ಸಂಬಂಧವನ್ನು ಪಾಕಿಸ್ತಾನದ ಮಾಜಿ ವಿದೇಶಾಂಗ ಸಚಿವ ಮತ್ತು ಪಾಕಿಸ್ತಾನ್ ಪೀಪಲ್ಸ್ ಪಾರ್ಟಿ(ಪಿಪಿಪಿ) ಅಧ್ಯಕ್ಷ ಬಿಲಾವಲ್ ಭುಟ್ಟೋ ಜರ್ದಾರಿ (Bilawal Bhutto Zardari) ಅವರು ಬಹಿರಂಗವಾಗಿ ಒಪ್ಪಿಕೊಂಡಿದ್ದಾರೆ.

    ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿ (Pahalgam Terror Attack) ಬೆನ್ನಲ್ಲೇ ಸ್ಕೈ ನ್ಯೂಸ್‌ಗೆ ನೀಡಿದ ಸಂದರ್ಶನವೊಂದರಲ್ಲಿ ಮಾತನಾಡಿದ ಬಿಲಾವಲ್ ಭುಟ್ಟೋ, ಪಾಕಿಸ್ತಾನದ (Pakistan) ಇತಿಹಾಸದ ಬಗ್ಗೆ ಹೇಳುವುದಾದರೆ ಪಾಕಿಸ್ತಾನಕ್ಕೆ ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಪರ್ಕವಿದೆ ಎಂಬುದು ರಹಸ್ಯವೇನಲ್ಲ ಅದು ಇತಿಹಾಸವಾಗಿದೆ. ಆದರೆ ಇಂದು ನಾವು ಅದರಲ್ಲಿ ಭಾಗಿಯಾಗಿಲ್ಲ. ಇದು ನಮ್ಮ ಇತಿಹಾಸದ ದುರದೃಷ್ಟಕರ ಭಾಗವಾಗಿದೆ ಎಂಬುದು ನಿಜ ಎಂದು ಹೇಳಿದ್ದಾರೆ. ಇದನ್ನೂ ಓದಿ: ಭಾರತದ ಮೊದಲ ಟ್ರಾನ್ಸ್‌ಶಿಪ್‌ಮೆಂಟ್ ಹಬ್‌ಗೆ ಪ್ರಧಾನಿ ಮೋದಿ ಚಾಲನೆ

    ಇತ್ತೀಚೆಗೆ ಪಾಕಿಸ್ತಾನದ ರಕ್ಷಣಾ ಸಚಿವ ಖ್ವಾಜಾ ಆಸಿಫ್ ಅವರು ದೇಶವು ಭಯೋತ್ಪಾದಕ ಗುಂಪುಗಳಿಗೆ ಬೆಂಬಲ ಮತ್ತು ಧನಸಹಾಯ ನೀಡಿದೆ ಎಂದು ಒಪ್ಪಿಕೊಂಡಿದ್ದರು. ಅಮೆರಿಕಕ್ಕಾಗಿ ನಾವು ಕೊಳಕು ಕೆಲಸ ಮಾಡಿದ್ದೇವೆ ಎಂದು ಹೇಳಿದ್ದರು. ಈ ಹೇಳಿಕೆಯನ್ನು ಬಿಲಾವಲ್ ಭುಟ್ಟೋ ಜರ್ದಾರಿ ಹೇಳಿಕೆ ಪುಷ್ಠಿಕರಿಸಿದೆ. ಇದನ್ನೂ ಓದಿ: ರಕ್ಷಣೆಗೆ ಅಮೆರಿಕ, ಚೀನಾಗೆ ಪಾಕ್ ಮೊರೆ – ಪ್ರತೀಕಾರ ಕಟ್ಟಿಟ್ಟಬುತ್ತಿ: ಭಾರತ ಗುಡುಗು

    ಭಯೋತ್ಪಾದನೆಗೆ ಬೆಂಬಲ ನೀಡಿದಕ್ಕೆ ಪಾಕಿಸ್ತಾನ ಸಾಕಷ್ಟು ಅನುಭವಿಸಿದೆ. ನಾವು ಉಗ್ರವಾದದ ಹಲವು ಅಲೆಗಳನ್ನು ಎದುರಿಸಿದ್ದೇವೆ. ನಾವು ಅನುಭವಿಸಿದ ಪರಿಣಾಮವಾಗಿ ನಾವು ಸಾಕಷ್ಟು ಪಾಠಗಳನ್ನು ಸಹ ಕಲಿತಿದ್ದೇವೆ. ಈ ಸಮಸ್ಯೆಯನ್ನು ಪರಿಹರಿಸಲು ನಾವು ಆಂತರಿಕ ಸುಧಾರಣೆಗಳ ಮೂಲಕ ಹೋಗಿದ್ದೇವೆ. ಇದು ಇತಿಹಾಸದ ದುರದೃಷ್ಟಕರ ಭಾಗವಾಗಿದೆ ಎಂಬುದು ನಿಜ ಎಂದು ಭುಟ್ಟೋ ಹೇಳಿದ್ದಾರೆ.

  • ಭಯೋತ್ಪಾದನೆಗೆ ಹಣಕಾಸು ನೆರವು ನಿಲ್ಲಿಸಬೇಕು – ಬಹಿರಂಗ ಸಭೆಯಲ್ಲೇ ಪಾಕ್‌ ಸಚಿವನಿಗೆ ಪಂಚ್‌ಕೊಟ್ಟ ಜೈಶಂಕರ್‌

    ಭಯೋತ್ಪಾದನೆಗೆ ಹಣಕಾಸು ನೆರವು ನಿಲ್ಲಿಸಬೇಕು – ಬಹಿರಂಗ ಸಭೆಯಲ್ಲೇ ಪಾಕ್‌ ಸಚಿವನಿಗೆ ಪಂಚ್‌ಕೊಟ್ಟ ಜೈಶಂಕರ್‌

    – ಭಯೋತ್ಪಾದನೆ ವಿರುದ್ಧ ಜಂಟಿಯಾಗಿ ಹೋರಾಡೋಣ ಎಂದ ಬಿಲಾವಲ್‌ ಭುಟ್ಟೊ-ಜರ್ದಾರಿ

    ಪಣಜಿ: ಭಾರತದ ನೇತೃತ್ವದಲ್ಲಿ ಶಾಂಘೈ ಸಹಕಾರ ಸಂಸ್ಥೆಯ (SCO) ವಿದೇಶಾಂಗ ಸಚಿವರ ಸಭೆ ಗೋವಾದಲ್ಲಿ ಆರಂಭವಾಗಿದೆ. ಪಾಕ್ ವಿದೇಶಾಂಗ ಮಂತ್ರಿ ಬಿಲಾವಲ್ ಭುಟ್ಟೋ ಕೂಡ ಇದ್ರಲ್ಲಿ ಪಾಲ್ಗೊಂಡಿದ್ದಾರೆ. ಭಾರತ ಮತ್ತು ಪಾಕಿಸ್ತಾನದ ನಡವೆ ದ್ವಿಪಕ್ಷೀಯ ಮಾತುಕತೆ ಇಲ್ಲ ಎಂದು ಮೊದಲೇ ನಿರ್ಧಾರವಾದ ಕಾರಣ, ಮರ್ಯದಾಪೂರ್ವಕವಾಗಿ ಭಾರತ ವಿದೇಶಾಂಗ ಮಂತ್ರಿ ಜೈಶಂಕರ್ (JaiShankar) ಮತ್ತು ಪಾಕ್ ವಿದೇಶಾಂಗ ಮಂತ್ರಿ ಬಿಲಾವಲ್ ಭುಟ್ಟೋ (Bilawal Bhutto) ಭೇಟಿ ನಡೆದಿದೆ. ಇಬ್ಬರು ಜೊತೆಯಲ್ಲಿ ನಿಂತು ಫೋಟೋಗೆ ಪೋಸ್ ಕೊಟ್ಟಿದ್ದಾರೆ.

    ಬಳಿಕ ನಡೆದ ಶಾಂಘೈ ಸಹಕಾರ ಸಂಘಟನೆಯ (SCO) ಸಮಾವೇಶದಲ್ಲಿ ಮಾತನಾಡಿದ ಭಾರತದ ವಿದೇಶಾಂಗ ಸಚಿವ ಎಸ್‌. ಜೈಶಂಕರ್‌ ಭಯೋತ್ಪಾದನಾ ಚಟುವಟಿಕೆಗಳಿಗೆ ಹಣಕಾಸು ನೆರವು ಒದಗಿಸುವುದನ್ನು ನಿಲ್ಲಿಸಬೇಕು ಎಂಬ ದೃಢ ನಿಲುವನ್ನು ಪ್ರಕಟಿಸಿದ್ದಾರೆ. ಪಾಕಿಸ್ತಾನ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೊ-ಜರ್ದಾರಿ ಅವರ ಉಪಸ್ಥಿತಿಯಲ್ಲಿಯೇ ಜೈಶಂಕರ್‌ ಖಡಕ್ಕಾಗಿ ಮಾತನಾಡಿದ್ದಾರೆ. ಇದನ್ನೂ ಓದಿ: 12 ವರ್ಷಗಳ ಬಳಿಕ ಭಾರತಕ್ಕೆ ಭೇಟಿ ನೀಡಿದ ಪಾಕ್ ವಿದೇಶಾಂಗ ಸಚಿವ

    ‘ನಮ್ಮ ಕಣ್ಮುಂದೆಯೇ ನಡೆಯುತ್ತಿರುವ ಭಯೋತ್ಪಾದಕ ಕೃತ್ಯಗಳ ಬಗ್ಗೆ ಗಮನ ಹರಿಸದಿದ್ದಲ್ಲಿ ಅದು ಸದಸ್ಯ ರಾಷ್ಟ್ರಗಳ ಭದ್ರತೆಗೆ ಅಪಾಯವಾಗಿ ಪರಿಣಮಿಸುತ್ತದೆ. ಅಂದೊಂದು ದಿನ ಇಡೀ ವಿಶ್ವವೇ ಕೋವಿಡ್‌ ವಿರುದ್ಧ ಹೋರಾಡುತ್ತಿತ್ತು. ಆಗಲೂ ಕೆಲವೆಡೆ ಭಯೋತ್ಪಾದನೆಯ ಚಟುವಟಿಕೆ ನಿಂತಿರಲಿಲ್ಲ. ಭಯೋತ್ಪಾದನೆಯನ್ನ ಯಾವುದೇ ಕಾರಣಕ್ಕೂ ಸಮರ್ಥನೆ ಮಾಡಿಕೊಳ್ಳಳಾಗುವುದಿಲ್ಲ. ಇಂತಹ ಬೆದರಿಕೆಗಳ ವಿರುದ್ಧ ಹೋರಾಟ ನಡೆಸುವುದೇ ಶಾಂಘೈ ಸಂಗಟನೆಯ ಮೂಲ ಉದ್ದೇಶ ಎಂದು ಜೈಶಂಕರ್‌ ಸ್ಪಷ್ಟ ಸಂದೇಶ ರವಾನಿಸಿದ್ದಾರೆ. ಇದನ್ನೂ ಓದಿ: ಇವಿಎಂ ಖರೀದಿಯಲ್ಲಿ ಅಕ್ರಮ ಆರೋಪ – ಚುನಾವಣಾ ಆಯೋಗದ ವಿರುದ್ಧದ ಪಿಐಎಲ್ ವಜಾಗೊಳಿಸಿದ ಸುಪ್ರೀಂ

    ಇದೇ ವೇಳೆ ಪಾಕ್‌ ವಿದೇಶಾಂಕ ಸಚಿವ ಬಿಲಾವಲ್ ಭುಟ್ಟೋ ಜರ್ದಾರಿ ಸಹ ಮಾತನಾಡಿ, ‘ಭಯೋತ್ಪಾದನೆ ಜಾಗತಿಕ ಭದ್ರತೆಗೆ ಅಪಾಯಕಾರಿಯಾಗಿದೆ. ಇದರ ವಿರುದ್ಧ ಹೋರಾಡುವುದು ನಮ್ಮ ಜಂಟಿ ಹೊಣೆಗಾರಿಕೆಯಾಗಿದೆ. ಎಸ್‌ಸಿಒ ಸದಸ್ಯ ರಾಷ್ಟ್ರಗಳು ಒಗ್ಗಟ್ಟಿನ ಹೋರಾಟ ನಡೆಸಬೇಕು ಎಂದು ಪ್ರತಿಪಾದಿಸಿದರು.

  • 12 ವರ್ಷಗಳ ಬಳಿಕ ಭಾರತಕ್ಕೆ ಭೇಟಿ ನೀಡಿದ ಪಾಕ್ ವಿದೇಶಾಂಗ ಸಚಿವ

    12 ವರ್ಷಗಳ ಬಳಿಕ ಭಾರತಕ್ಕೆ ಭೇಟಿ ನೀಡಿದ ಪಾಕ್ ವಿದೇಶಾಂಗ ಸಚಿವ

    ಪಣಜಿ: ಪಾಕಿಸ್ತಾನದ ವಿದೇಶಾಂಗ ಸಚಿವ (Pakistan Foreign Minister) ಬಿಲಾವಲ್ ಭುಟ್ಟೋ ಜರ್ದಾರಿ (Bilawal Bhutto) ಅವರು ಶಾಂಘೈ ಸಹಕಾರ ಸಂಘಟನೆಯ (SCO) ಸಮಾವೇಶದಲ್ಲಿ ಪಾಲ್ಗೊಳ್ಳಲು ಗುರುವಾರ ಗೋವಾಕ್ಕೆ ಆಗಮಿಸಿದ್ದಾರೆ.

    ಕಳೆದ 12 ವರ್ಷಗಳಿಂದ ಭಾರತಕ್ಕೆ (India) ಪಾಕಿಸ್ತಾನದಿಂದ (Pakistan) ಯಾವುದೇ ವಿದೇಶಾಂಗ ಸಚಿವರು ಭೇಟಿ ನೀಡಿರಲಿಲ್ಲ. ಇದೀಗ ಬುಲಾವಲ್ ಭುಟ್ಟೋ ಅವರು 12 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಿರುವ ಪಾಕಿಸ್ತಾನದ ಮೊದಲ ಹಿರಿಯ ನಾಯಕ ಎನಿಸಿಕೊಂಡಿದ್ದಾರೆ.

    ಜಮ್ಮು ಮತ್ತು ಕಾಶ್ಮೀರದಲ್ಲಿ ಪಾಕಿಸ್ತಾನದ ಗಡಿಯಾಚೆಗೆ ಭಯೋತ್ಪಾದಕರ ಕಾರ್ಯಾಚರಣೆ ಸೇರಿದಂತೆ ಹಲವಾರು ವಿಷಯಗಳಿಂದಾಗಿ ಉಭಯ ದೇಶಗಳ ನಡುವೆ ಸಂಘರ್ಷಗಳು ಮುಂದುವರಿದ ಒತ್ತಡದ ನಡುವೆಯೇ ಭುಟ್ಟೋ ಭಾರತಕ್ಕೆ ಭೇಟಿ ನೀಡಿರುವುದು ಅಚ್ಚರಿಗೆ ಕಾರಣವಾಗಿದೆ.

    ಗೋವಾದ ವಿಮಾನ ನಿಲ್ದಾಣಕ್ಕೆ ಬಿಲಾವಲ್ ಭುಟ್ಟೋ ಆಗಮಿಸಿದಾಗ ಅವರನ್ನು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಪಾಕಿಸ್ತಾನ-ಅಫ್ಘಾನಿಸ್ತಾನ-ಇರಾನ್ ವಿಭಾಗದ ಜಂಟಿ ಕಾರ್ಯದರ್ಶಿ ಜೆಪಿ ಸಿಂಗ್ ಸ್ವಾಗತಿಸಿದರು.

    ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಭುಟ್ಟೋ, ಶಾಂಘೈ ಸಹಕಾರ ಸಂಘದ ವಿದೇಶಾಂಗ ಸಚಿವರ ಸಭೆಯಲ್ಲಿ ಭಾಗಿಯಾಗಲು ಗೋವಾಗೆ ಬಂದಿರುವುದು ಹಾಗೂ ಈ ಸಭೆಯಲ್ಲಿ ಪಾಕಿಸ್ತಾನದ ನಿಯೋಗವನ್ನು ಮುನ್ನಡೆಸುತ್ತಿರುವುದು ನನಗೆ ಸಂತೋಷ ತಂದಿದೆ. ವಿದೇಶಾಂಗ ಸಚಿವರ ಸಭೆ ಯಶಸ್ವಿಯಾಗಲಿ ಎಂದು ನಾನು ಆಶಿಸುತ್ತೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಪಾಕಿಸ್ತಾನಕ್ಕೆ ಗುಪ್ತ ಮಾಹಿತಿ ರವಾನೆ – ರಕ್ಷಣಾ ಸಂಸ್ಥೆಯ ವಿಜ್ಞಾನಿ ಅರೆಸ್ಟ್

    ಭುಟ್ಟೋ ಜರ್ದಾರಿ 2 ದಿನಗಳ ಗೋವಾ ಭೇಟಿಯಲ್ಲಿದ್ದರೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರೊಂದಿಗೆ ಸಭೆಗೆ ಪಾಕಿಸ್ತಾನದ ಕಡೆಯಿಂದ ಯಾವುದೇ ಮನವಿ ಬಂದಿಲ್ಲ. ಈ ಕಾರಣ ದ್ವಿಪಕ್ಷೀಯ ಸಭೆಯ ಯೋಜನೆ ಇಲ್ಲ ಎನ್ನಲಾಗಿದೆ.

    ಈ ಹಿಂದೆ 2011 ರಲ್ಲಿ ಪಾಕಿಸ್ತಾನದ ಆಗಿನ ವಿದೇಶಾಂಗ ಸಚಿವೆ ಹೀನಾ ರಬ್ಬಾನಿ ಖಾರ್ ಅವರು ಭಾರತಕ್ಕೆ ಭೇಟಿ ನೀಡಿದ್ದರು. ಅಂದಿನ ವಿದೇಶಾಂಗ ಸಚಿವ ಎಸ್‌ಎಂ ಕೃಷ್ಣ ಅವರೊಂದಿಗೆ ಮಾತುಕತೆ ನಡೆಸಿದರು. ಇದನ್ನೂ ಓದಿ: ಮಣಿಪುರದಲ್ಲಿ ಹಿಂಸಾಚಾರ ಹಿನ್ನೆಲೆ – ಕರ್ನಾಟಕದಲ್ಲಿ ಅಮಿತ್ ಶಾ ಕಾರ್ಯಕ್ರಮಗಳು ರದ್ದು

  • ಮೋದಿ ಸರ್ಕಾರ ಉಗ್ರವಾದ, ಫ್ಯಾಸಿಸಂ ಉತ್ತೇಜಿಸುತ್ತಿದೆ – ಮತ್ತೆ ಪಾಕ್ ಕಿಡಿ

    ಮೋದಿ ಸರ್ಕಾರ ಉಗ್ರವಾದ, ಫ್ಯಾಸಿಸಂ ಉತ್ತೇಜಿಸುತ್ತಿದೆ – ಮತ್ತೆ ಪಾಕ್ ಕಿಡಿ

    ಇಸ್ಲಾಮಾಬಾದ್: ಪಾಕ್ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೋ (Bilawal Bhutto) ಹಾಗೂ ಪೀಪಲ್ಸ್ ಪಾರ್ಟಿಯ ನಾಯಕಿ ಶಾಜಿಯಾ ಮಾರಿ (Shazia Marri) ಅವರ ಹೇಳಿಕೆಯಿಂದ ಭಾರತದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿರುವ ಬೆನ್ನಲ್ಲೇ ಪಾಕಿಸ್ತಾನ ಹಣಕಾಸು ಸಚಿವ ಮೋದಿ (Narendra Modi) ಸರ್ಕಾರದ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ.

    ಪಾಕ್ ಹಣಕಾಸು ಸಚಿವ ಮೊಹಮ್ಮದ್ ಇಶಾಕ್ ದಾರ್ (Muhammad Ishaq Dar) ಪ್ರತಿಕ್ರಿಯಿಸಿರುವುದಾಗಿ ಹೇಳಿಕೆಯೊಂದನ್ನು ಶಾಜಿಯಾ ಮಾರಿ ತಮ್ಮ ಟ್ವೀಟ್ ಖಾತೆ ಮೂಲಕ ಹಂಚಿಕೊಂಡಿದ್ದಾರೆ. `ಪಾಕಿಸ್ತಾನವು (Pakistan) ಜವಾಬ್ದಾರಿಯುತ ಪರಮಾಣು ರಾಷ್ಟ್ರವಾಗಿದೆ. ಆದರೆ ಭಾರತೀಯ ಮಾಧ್ಯಮಗಳಲ್ಲಿನ ಕೆಲವು ಅಂಶಗಳು ಆತಂಕ ಸೃಷ್ಟಿಸುತ್ತಿವೆ. ಭಯೋತ್ಪಾದನೆ (Terrorism) ವಿರುದ್ಧದ ಹೋರಾಟದಲ್ಲಿ ಪಾಕಿಸ್ತಾನವು ಭಾರತಕ್ಕಿಂತ ಹೆಚ್ಚು ತ್ಯಾಗ ಮಾಡಿದೆ. ಮೋದಿ ಸರ್ಕಾರವು ಉಗ್ರವಾದ ಮತ್ತು ಫ್ಯಾಸಿಸಂ ಅನ್ನು ಉತ್ತೇಜಿಸುತ್ತಿದೆ’ ಎಂದು ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಭಾರತಕ್ಕೆ ಪರಮಾಣು ಬಾಂಬ್‌ ಯುದ್ಧದ ಬೆದರಿಕೆ ಹಾಕಿದ ಪಾಕ್‌ ಸಚಿವೆ

    ಪಾಕ್ ಸಚಿವ ಬಿಲಾವಲ್ ಭುಟ್ಟೋ `ಬಿನ್ ಲ್ಯಾಡೆನ್ ಸತ್ತುಹೋದ, ಆದ್ರೆ ಗುಜರಾತಿನ ಕಟುಕ ಇನ್ನೂ ಬದುಕಿದ್ದಾನೆ’ ಎಂದು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಬಳಿಕ, ಶಾಜಿಯಾ ಮಾರಿ, ಭಾರತಕ್ಕೆ ಪರಮಾಣು ಯುದ್ಧದ ಬೆದರಿಕೆ ಹಾಕಿದ್ದರು. ಪಾಕಿಸ್ತಾನದಲ್ಲಿ ಅಣುಬಾಂಬ್ ಇದೆ ಎಂಬುದನ್ನು ಭಾರತ ಮರೆಯಬಾರದು. ನಮ್ಮ ಪರಮಾಣು ಸ್ಥಿತಿಯು ಮೌನವಾಗಿರಲು ಅಲ್ಲ. ಅಗತ್ಯ ಬಿದ್ದರೆ ನಾವು ಹಿಂದೆ ಸರಿಯುವುದಿಲ್ಲ. ಮೋದಿ ಸರ್ಕಾರ ಹೋರಾಡಿದರೆ ಉತ್ತರ ಸಿಗುತ್ತದೆ, ಪಾಕಿಸ್ತಾನಕ್ಕೆ ಪರಮಾಣು ರಾಷ್ಟ್ರದ ಸ್ಥಾನಮಾನ ನೀಡಿ ಸುಮ್ಮನಿರಲು ಆಗಿಲ್ಲ. ಪಾಕಿಸ್ತಾನಕ್ಕೂ ಹೇಗೆ ಉತ್ತರಿಸಬೇಕು ಎಂಬುದು ಗೊತ್ತಿದೆ ಎಂದು ಹೇಳಿದ್ದರು. ಇದನ್ನೂ ಓದಿ: ಪೊಲೀಸ್ ಠಾಣೆಯಲ್ಲಿ ಗ್ರಂಥಾಲಯ : ಸಿಂಗಂ ಖ್ಯಾತಿಯ ಅಧಿಕಾರಿ ರಾಜೇಶ್ ಕೆಲಸಕ್ಕೆ ಮೆಚ್ಚುಗೆ

    Live Tv
    [brid partner=56869869 player=32851 video=960834 autoplay=true]

  • ಭಾರತಕ್ಕೆ ಪರಮಾಣು ಬಾಂಬ್‌ ಯುದ್ಧದ ಬೆದರಿಕೆ ಹಾಕಿದ ಪಾಕ್‌ ಸಚಿವೆ

    ಭಾರತಕ್ಕೆ ಪರಮಾಣು ಬಾಂಬ್‌ ಯುದ್ಧದ ಬೆದರಿಕೆ ಹಾಕಿದ ಪಾಕ್‌ ಸಚಿವೆ

    ಇಸ್ಲಾಮಾಬಾದ್: ಪ್ರಧಾನಿ ನರೇಂದ್ರ ಮೋದಿ (Narendra Modi) ಬಗ್ಗೆ ಪಾಕ್‌ ವಿದೇಶಾಂಗ ಸಚಿವ ಬಿಲಾವಲ್‌ ಭುಟ್ಟೋ (Bilawal Bhutto) ನೀಡಿದ ವಿವಾದಿತ ಹೇಳಿಕೆಗೆ ಭಾರತದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಪಾಕ್‌ನ ಮತ್ತೊಬ್ಬ ಸಚಿವರು, ಭಾರತಕ್ಕೆ ಪರಮಾಣು ಬಾಂಬ್‌ (Nuclear War) ದಾಳಿಯ ಬೆದರಿಕೆ ಹಾಕಿದ್ದಾರೆ.

    ಬೋಲ್‌ ನ್ಯೂಸ್‌ ಜೊತೆ ಸುದ್ದಿಗೋಷ್ಠಿಯೊಂದರಲ್ಲಿ ಮಾತನಾಡಿದ ಪಾಕಿಸ್ತಾನ ಪೀಪಲ್ಸ್ ಪಾರ್ಟಿಯ ನಾಯಕಿ ಶಾಜಿಯಾ ಮಾರಿ (Shazia Marri), ಭಾರತಕ್ಕೆ ಪರಮಾಣು ಯುದ್ಧದ ಬೆದರಿಕೆ ಹಾಕಿದ್ದಾರೆ. ಇದನ್ನೂ ಓದಿ: ಪಾಕಿಸ್ತಾನಕ್ಕಿಂತ ಭಾರತದಲ್ಲಿ ಮುಸ್ಲಿಮರು ಸುರಕ್ಷಿತರಾಗಿದ್ದಾರೆ – ಪಾಕ್‌ ಸಚಿವರಿಗೆ ಮುಸ್ಲಿಂ ಧರ್ಮಗುರು ತಿರುಗೇಟು

    ಪಾಕಿಸ್ತಾನದಲ್ಲಿ ಅಣುಬಾಂಬ್ ಇದೆ ಎಂಬುದನ್ನು ಭಾರತ ಮರೆಯಬಾರದು. ನಮ್ಮ ಪರಮಾಣು ಸ್ಥಿತಿಯು ಮೌನವಾಗಿರಲು ಅಲ್ಲ. ಅಗತ್ಯ ಬಿದ್ದರೆ ನಾವು ಹಿಂದೆ ಸರಿಯುವುದಿಲ್ಲ’’ ಎಂದು ಎಚ್ಚರಿಕೆ ನೀಡಿದ್ದಾರೆ.

    ಇದೇ ವೇಳೆ ಪ್ರಧಾನಿ ಮೋದಿ ವಿರುದ್ಧ ಪಾಕ್‌ ವಿದೇಶಾಂಗ ಸಚಿವ ಬಿಲಾವಲ್‌ ಭುಟ್ಟೋ ನೀಡಿದ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ಇದನ್ನೂ ಓದಿ: ಬಿನ್ ಲಾಡೆನ್ ಸತ್ತಿದ್ದರೂ ಗುಜರಾತ್‌ನ ಕಟುಕ ಜೀವಂತವಾಗಿದ್ದಾನೆ: ಮೋದಿ ವಿರುದ್ಧ ಪಾಕ್ ವಿದೇಶಾಂಗ ಸಚಿವ ವಿವಾದಿತ ಹೇಳಿಕೆ

    ಶಾಜಿಯಾ ಭಾರತಕ್ಕೆ ಬೆದರಿಕೆ ಹಾಕಿದ್ದು, ಮೋದಿ ಸರ್ಕಾರ ಹೋರಾಡಿದರೆ ಉತ್ತರ ಸಿಗುತ್ತದೆ ಎಂದು ಹೇಳಿದ್ದಾರೆ. ಪಾಕಿಸ್ತಾನಕ್ಕೆ ಪರಮಾಣು ರಾಷ್ಟ್ರದ ಸ್ಥಾನಮಾನ ನೀಡಿ ಸುಮ್ಮನಿರಲು ಆಗಿಲ್ಲ. ಪಾಕಿಸ್ತಾನಕ್ಕೂ ಹೇಗೆ ಉತ್ತರಿಸಬೇಕು ಎಂಬುದು ಗೊತ್ತಿದೆ ಎಂದು ಹೇಳಿದ್ದಾರೆ.

    ನೀವು ಪಾಕಿಸ್ತಾನದ ವಿರುದ್ಧ ಪದೇ ಪದೇ ಆರೋಪಗಳನ್ನು ಮಾಡುತ್ತಿದ್ದರೆ, ಪಾಕಿಸ್ತಾನವು ಮೌನವಾಗಿ ಕೇಳಲು ಸಾಧ್ಯವಿಲ್ಲ ಎಂದು ಎಚ್ಚರಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಪಾಕಿಸ್ತಾನಕ್ಕಿಂತ ಭಾರತದಲ್ಲಿ ಮುಸ್ಲಿಮರು ಸುರಕ್ಷಿತರಾಗಿದ್ದಾರೆ – ಪಾಕ್‌ ಸಚಿವರಿಗೆ ಮುಸ್ಲಿಂ ಧರ್ಮಗುರು ತಿರುಗೇಟು

    ಪಾಕಿಸ್ತಾನಕ್ಕಿಂತ ಭಾರತದಲ್ಲಿ ಮುಸ್ಲಿಮರು ಸುರಕ್ಷಿತರಾಗಿದ್ದಾರೆ – ಪಾಕ್‌ ಸಚಿವರಿಗೆ ಮುಸ್ಲಿಂ ಧರ್ಮಗುರು ತಿರುಗೇಟು

    ಜೈಪುರ: ಪಾಕಿಸ್ತಾನದಲ್ಲಿರುವ ಮುಸ್ಲಿಮರಿಗಿಂತ ಭಾರತದಲ್ಲಿರುವ ಮುಸ್ಲಿಮರು ತುಂಬಾ ಸುರಕ್ಷಿತರಾಗಿದ್ದಾರೆ ಎನ್ನುವ ಮೂಲಕ ಪಾಕಿಸ್ತಾನದ ವಿದೇಶಾಂಗ ಸಚಿವ ಬಿಲಾವಲ್‌ ಭುಟ್ಟೋ (Bilawal Bhutto) ಅವರಿಗೆ ಅಜ್ಮಿರ್‌ ದರ್ಗಾ ಧರ್ಮಗುರು ಹಜರತ್‌ ಸೈಯದ್‌ ನಾಸಿರುದ್ದೀನ್‌ ಚಿಸ್ತಿ (Hazrat Syed Naseeruddin Chishty) ತಿರುಗೇಟು ನೀಡಿದ್ದಾರೆ.

    ಬಿನ್‌ ಲಾಡೆನ್‌ ಸತ್ತಿದ್ದರೂ ಗುಜರಾತ್‌ನ ಕಟುಕ ಜೀವಂತವಾಗಿದ್ದಾನೆ ಎಂದು ಭಾರತದ ಪ್ರಧಾನಿ ನರೇಂದ್ರ ಮೋದಿ ವಿರುದ್ಧ (Narendra Modi) ಪಾಕ್‌ ವಿದೇಶಾಂಗ ಸಚಿವ ಹೇಳಿಕೆ ನೀಡಿದ್ದರು. ಅದಕ್ಕೆ ಭಾರತಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಇದರ ಬೆನ್ನಲ್ಲೇ ಭುಟ್ಟೋ ಹೇಳಿಕೆ ಖಂಡಿಸಿ ಮುಸ್ಲಿಂ ಧರ್ಮಗುರು ಮಾತನಾಡಿದ್ದಾರೆ. ಇದನ್ನೂ ಓದಿ: ಬಿನ್ ಲಾಡೆನ್ ಸತ್ತಿದ್ದರೂ ಗುಜರಾತ್‌ನ ಕಟುಕ ಜೀವಂತವಾಗಿದ್ದಾನೆ: ಮೋದಿ ವಿರುದ್ಧ ಪಾಕ್ ವಿದೇಶಾಂಗ ಸಚಿವ ವಿವಾದಿತ ಹೇಳಿಕೆ

    ನಮ್ಮ ಪ್ರಧಾನಿ ಮತ್ತು ನಮ್ಮ ತಾಯ್ನಾಡಿನ ವಿರುದ್ಧ ಪಾಕಿಸ್ತಾನದ ವಿದೇಶಾಂಗ ಸಚಿವರು ಬಳಸುತ್ತಿರುವ ಆಕ್ಷೇಪಾರ್ಹ ಪದವನ್ನು ನಾನು ಬಲವಾಗಿ ಖಂಡಿಸುತ್ತೇನೆ ಎಂದಿದ್ದಾರೆ.

    ಭಾರತೀಯ ಮುಸ್ಲಿಮರು ಪಾಕಿಸ್ತಾನಿ ಮುಸ್ಲಿಮರಿಗಿಂತ ಹೆಚ್ಚು ಸುರಕ್ಷಿತ ಹಾಗೂ ಉತ್ತಮ ಸ್ಥಿತಿಯಲ್ಲಿದ್ದಾರೆ ಎಂಬುದನ್ನು ಪಾಕಿಸ್ತಾನ ನೆನಪಿನಲ್ಲಿಟ್ಟುಕೊಳ್ಳಬೇಕು. ಭಯೋತ್ಪಾದಕ ಒಸಾಮಾ ಬಿನ್ ಲಾಡೆನ್ ಸಾಯಲಿಲ್ಲ. ಆದರೆ ಪಾಕಿಸ್ತಾನದಲ್ಲಿ ಅಮೆರಿಕದ ಪಡೆ ಹತ್ಯೆ ಮಾಡಿದೆ ಎಂಬುದನ್ನು ಬಿಲಾವಲ್ ಭುಟ್ಟೋ ಮರೆತಿದ್ದಾರೆ ಎಂದು ಚಾಟಿ ಬೀಸಿದ್ದಾರೆ. ಇದನ್ನೂ ಓದಿ: ತನ್ನ ಚುನಾವಣೆಯ ಗೆಲುವಿನ ರಹಸ್ಯ ರಿವೀಲ್ ಮಾಡಿದ ಮೋದಿ

    ಪಾಕಿಸ್ತಾನದ ವಿದೇಶಾಂಗ ಸಚಿವರು ಎಂದಿಗೂ ಶ್ರೇಷ್ಠ ದೇಶ ಭಾರತವನ್ನು ತಮ್ಮ ಅಸ್ಥಿರ ದೇಶದೊಂದಿಗೆ ಹೋಲಿಸಬಾರದು. ಭಾರತದ ಸಂವಿಧಾನವು ಎಲ್ಲರಿಗೂ ಧರ್ಮದ ಸ್ವಾತಂತ್ರ್ಯವನ್ನು ಖಾತರಿಪಡಿಸುತ್ತದೆ ಎಂದು ಹೇಳಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಬಿನ್ ಲಾಡೆನ್ ಸತ್ತಿದ್ದರೂ ಗುಜರಾತ್‌ನ ಕಟುಕ ಜೀವಂತವಾಗಿದ್ದಾನೆ: ಮೋದಿ ವಿರುದ್ಧ ಪಾಕ್ ವಿದೇಶಾಂಗ ಸಚಿವ ವಿವಾದಿತ ಹೇಳಿಕೆ

    ಬಿನ್ ಲಾಡೆನ್ ಸತ್ತಿದ್ದರೂ ಗುಜರಾತ್‌ನ ಕಟುಕ ಜೀವಂತವಾಗಿದ್ದಾನೆ: ಮೋದಿ ವಿರುದ್ಧ ಪಾಕ್ ವಿದೇಶಾಂಗ ಸಚಿವ ವಿವಾದಿತ ಹೇಳಿಕೆ

    ವಾಷಿಂಗ್ಟನ್/ನವದೆಹಲಿ: ಭಾರತಕ್ಕಿಂತಲೂ ಹೆಚ್ಚು ಜನರು ಭಯೋತ್ಪಾದನೆಗೆ (Terrorism) ಬಲಿಯಾಗಿದ್ದಾರೆ. ನಮಗೆ ಭಯೋತ್ಪಾದನೆಯನ್ನು ಬೆಂಬಲಿಸಲು ಯಾವುದೇ ಕಾರಣವಿಲ್ಲ. ಒಸಾಮಾ ಬಿನ್ ಲಾಡೆನ್ ಸತ್ತಿದ್ದರೂ ಗುಜರಾತ್‌ನ ಕಟುಕ ಇನ್ನೂ ಜೀವಂತವಾಗಿದ್ದಾನೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ವಿರುದ್ಧ ಪಾಕಿಸ್ತಾನದ ವಿದೇಶಾಂಗ ಸಚಿವ (Pakistan Foreign Minister) ಬಿಲಾವಲ್ ಭುಟ್ಟೋ (Bilawal Bhutto) ಅಂತಾರಾಷ್ಟ್ರೀಯ ವೇದಿಕೆಯಲ್ಲಿ ನಾಲಿಗೆ ಹರಿಬಿಟ್ಟಿದ್ದಾರೆ.

    ವಿಶ್ವಸಂಸ್ಥೆಯಲ್ಲಿ (United Nations) ಗುರುವಾರ ವಿದೇಶಾಂಗ ಸಚಿವ ಜೈಶಂಕರ್ ಪಾಕಿಸ್ತಾನವನ್ನು ತರಾಟೆಗೆ ತೆಗೆದುಕೊಂಡಿದ್ದರು. ಒಸಾಮಾ ಬಿನ್ ಲಾಡೆನ್‌ಗೆ ಆಶ್ರಯ ಕೊಟ್ಟವರಿಂದ ನಾವು ನೀತಿಪಾಠ ಹೇಳಿಸಿಕೊಳ್ಳಬೇಕಾದ ಅಗತ್ಯವಿಲ್ಲ ಎಂದು ಪಾಕಿಸ್ತಾನವನ್ನು ಚುಚ್ಚಿದ್ದರು. ಇದರಿಂದ ವಿಶ್ವಸಂಸ್ಥೆ ವೇದಿಕೆಯಲ್ಲಿ ತೀವ್ರ ಮುಜುಗರ ಅನುಭವಿಸಿದ್ದ ಪಾಕ್ ವಿದೇಶಾಂಗ ಮಂತ್ರಿ ಬಿಲಾವಲ್ ಭುಟ್ಟೋ, ನ್ಯೂಯಾಕ್‌ನಲ್ಲಿ ವಿಶ್ವಸಂಸ್ಥೆ ಭದ್ರತಾ ಮಂಡಳಿ ಸುದ್ದಿಗೋಷ್ಠಿಯಲ್ಲಿ ಪ್ರಧಾನಿ ಮೋದಿ ವಿರುದ್ಧ ಹರಿಹಾಯ್ದಿದ್ದಾರೆ.

    ಭಾರತದ ಪ್ರಧಾನಿ ಮೋದಿ ಆರ್‌ಎಸ್‌ಎಸ್‌ನವರು.ವಿದೇಶಾಂಗ ಮಂತ್ರಿಯೂ ಆರ್‌ಎಸ್‌ಎಸ್‌ನವರು. ಆರ್‌ಎಸ್‌ಎಸ್ ಎಂಬುದು ಹಿಟ್ಲರ್‌ನಿಂದ ಪ್ರಭಾವಿತವಾಗಿ ಸೃಷ್ಟಿಯಾಗಿರುವ ಸಂಸ್ಥೆ. ಭಾರತ ಯಾವಾಗಲು ನಮ್ಮನ್ನು ಬೇಕಂತಲೇ ಟಾರ್ಗೆಟ್ ಮಾಡುತ್ತದೆ. ವಿಶ್ವ ಸಮುದಾಯದ ಕಣ್ಣಲ್ಲಿ ಎಲ್ಲಾ ಮುಸ್ಲಿಮರನ್ನು ಉಗ್ರರನ್ನಾಗಿ ಬಿಂಬಿಸುತ್ತಿದೆ. ಆದರೆ ಪಾಕಿಸ್ತಾನ ಕೂಡ ಉಗ್ರಬಾಧಿತ ದೇಶ ಎಂದು ಭುಟ್ಟೋ ಹೇಳಿಕೆ ನೀಡಿದ್ದಾರೆ.

    ಭಾರತಕ್ಕಿಂತ ಹೆಚ್ಚು ಜನರು ಭಯೋತ್ಪಾದನೆಗೆ ಬಲಿಯಾಗಿದ್ದಾರೆ. ಪಾಕಿಸ್ತಾನಕ್ಕೆ ಭಯೋತ್ಪಾದನೆಯನ್ನು ಬೆಂಬಲಿಸಲು ಯಾವುದೇ ಕಾರಣವಿಲ್ಲ. ಒಸಾಮಾ ಬಿನ್ ಲಾಡೆನ್ ಸತ್ತಿದ್ದರೂ, ಗುಜರಾತ್‌ನ ಕಟುಕ ಇನ್ನೂ ಜೀವಂತವಾಗಿದ್ದಾನೆ. ನರೇಂದ್ರ ಮೋದಿ ಭಾರತದ ಪ್ರಧಾನಿಯಾಗುವುದಕ್ಕೂ ಮೊದಲು ಅಮೆರಿಕ ಪ್ರವೇಶವನ್ನು ನಿಷೇಧಿಸಲಾಗಿತ್ತು ಎಂದು ಹೇಳಿದ್ದಾರೆ. ಇದನ್ನೂ ಓದಿ: ಶಾರೀಕ್‌ಗಿಂತಲೂ ಸಿಟಿ ರವಿ ರಾಜ್ಯದ ದೊಡ್ಡ ಮಾಸ್ಟರ್‌ಮೈಂಡ್ ಉಗ್ರ: ಕಿಸಾನ್ ಕಾಂಗ್ರೆಸ್ ಅಧ್ಯಕ್ಷ

    ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ ಹಿನ್ನೆಲೆ ದೆಹಲಿಯಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಚಾಣಕ್ಯಪುರಿ ಪೊಲೀಸ್ ಠಾಣೆ ಮುಂಭಾಗದಲ್ಲಿ ಸೇರಿದ ಕಾರ್ಯಕರ್ತರು ಪಾಕಿಸ್ತಾನದ ವಿರುದ್ಧ ಘೋಷಣೆ ಕೂಗಿದ್ದಾರೆ. ವಿದೇಶಾಂಗ ಸಚಿವ ಬಿಲ್ವಾಲಾ ಭಿಟ್ಟೋ ಕ್ಷಮೆಗೆ ಆಗ್ರಹಿಸಿದ್ದಾರೆ. ಪಾಕಿಸ್ತಾನ ರಾಯಭಾರ ಕಚೇರಿ ಮುಂದೆ ಪ್ರತಿಭಟನೆ ನಡೆಸಲು ಬಿಜೆಪಿ ಕಾರ್ಯಕರ್ತರು ಮೆರವಣಿಗೆ ಹೊರಟಿದ್ದು, ಭದ್ರತೆ ದೃಷ್ಟಿಯಿಂದ ಅವರನ್ನು ಚಾಣಕ್ಯಪುರಿ ಪೊಲೀಸ್ ಠಾಣೆ ಮುಂದೆಯೇ ತಡೆಯುವ ಪ್ರಯತ್ನ ಮಾಡಲಾಗಿದೆ. ಈ ವೇಳೆ ಪೊಲೀಸರು ಹಾಕಿದ ಬ್ಯಾರಿಕೇಡ್ ಹಾರಿ ರಾಯಭಾರಿ ಕಚೇರಿಯತ್ತ ತೆರಳುವ ಪ್ರಯತ್ನ ಪ್ರತಿಭಟನಾಕಾರರು ಮಾಡಿದ್ದಾರೆ. ಈ ವೇಳೆ ಪೊಲೀಸರು ಪ್ರತಿಭಟನಾಕಾರರನ್ನು ಬಂಧಿಸಿದ್ದಾರೆ. ಇದನ್ನೂ ಓದಿ: ಮದ್ಯ ಕುಡಿದು ಸತ್ತವರಿಗೆ ಪರಿಹಾರ ಕೊಡಲ್ಲ – ಸಿಎಂ ನಿತೀಶ್ ಕುಮಾರ್

    Live Tv
    [brid partner=56869869 player=32851 video=960834 autoplay=true]