Tag: ಬಿಲ್ಲ ರಂಗ ಬಾಷಾ

  • ಸುದೀಪ್ ಹುಟ್ಟುಹಬ್ಬಕ್ಕೆ ಬಿಲ್ಲ ರಂಗ ಬಾಷಾ ಫಸ್ಟ್ ಲುಕ್ ಪೋಸ್ಟರ್

    ಸುದೀಪ್ ಹುಟ್ಟುಹಬ್ಬಕ್ಕೆ ಬಿಲ್ಲ ರಂಗ ಬಾಷಾ ಫಸ್ಟ್ ಲುಕ್ ಪೋಸ್ಟರ್

    ಕಿಚ್ಚ ಸುದೀಪ್ (Kichcha Sudeep) ಅವರಿಗೆ ಇಂದು (ಸೆ.2) 52ನೇ ಹುಟ್ಟುಹಬ್ಬದ ಸಂಭ್ರಮ. ಈ ದಿನ ಊರಿನಲ್ಲಿ ಇರದ ಕಾರಣ ಸುದೀಪ್ ರಾತ್ರಿಯೇ ಅಭಿಮಾನಿಗಳ ಸಮ್ಮುಖದಲ್ಲಿ ಬರ್ತ್ಡೇ ಆಚರಿಸಿಕೊಂಡಿದ್ದಾರೆ.

    ಹುಟ್ಟುಹಬ್ಬದ ಅಂಗವಾಗಿ ಮಾರ್ಕ್ ಸಿನಿಮಾ ಟೈಟಲ್ ಟೀಸರ್ ರಿಲೀಸ್ ಆಗಿದೆ. ಜೊತೆಗೆ ಕ್ರಿಸ್‌ಮಸ್ ಹಬ್ಬಕ್ಕೆ ಸಿನಿಮಾ ಥಿಯೇಟರ್‌ಗೆ ಬರೋದಾಗಿ ಅಭಿಮಾನಿಗಳಿಗೆ ಕಿಚ್ಚನಿಂದ ಗುಡ್‌ನ್ಯೂಸ್ ಸಿಕ್ಕಿದೆ. ಇದೀಗ ಬಿಲ್ಲ ರಂಗ ಬಾಷಾ ಸಿನಿಮಾದ ಬಿಗ್ ಅಪ್‌ಡೇಟ್‌ವೊಂದು ಸುದೀಪ್ ಭಕ್ತಗಣಕ್ಕೆ ಸಿಕ್ಕಿದೆ. ಇದನ್ನೂ ಓದಿ: ಅಭಿಮಾನಿಗಳಿಗೆ ಬರ್ತ್‌ಡೇ ಗಿಫ್ಟ್‌ – ಕಿಚ್ಚನ ಹೊಸ ಚಿತ್ರಕ್ಕೆ ಟೈಟಲ್‌ ಫಿಕ್ಸ್‌

     

    View this post on Instagram

     

    A post shared by Anup Bhandari (@anupsbhandari)

    ವಿಕ್ರಾಂತ್ ರೋಣ ಚಿತ್ರದ ಸಕ್ಸಸ್‌ನ ನಂತರ ಅನೂಪ್ ಭಂಡಾರಿ ಹಾಗೂ ಸುದೀಪ್ ಕಾಂಬಿನೇಷನ್‌ನಲ್ಲಿ ಮೂಡಿ ಬರ್ತಿರುವ ಬಿಲ್ಲ ರಂಗ ಬಾಷಾ (Billa Ranga Baasha). ಈ ಸಿನಿಮಾದ ಖಡಕ್ ಪೋಸ್ಟರ್ ಬರ್ತ್ಡೇ ಸ್ಪೆಷಲ್ ರಿಲೀಸ್ ಮಾಡಿದೆ ಚಿತ್ರತಂಡ. ಕಿಚ್ಚನ ಬೆಂಕಿ ಲುಕ್‌ಗೆ ಫ್ಯಾನ್ಸ್ ಫಿದಾ ಆಗಿದ್ದಾರೆ. ಬಹುಕೋಟಿ ವೆಚ್ಚದಲ್ಲಿ ತಯಾರಾಗ್ತಿರುವ ಬಿಲ್ಲ ರಂಗ ಬಾಷಾ ಹಾಗೂ ಮಾರ್ಕ್ ಚಿತ್ರದ ಚಿತ್ರೀಕರಣ ನಡೆಯುತ್ತಿವೆ.

    ತಮ್ಮ ಅಭಿಮಾನಿಗಳ ಆಸೆಯನ್ನ ನಿರಾಸೆ ಮಾಡದೇ ಸುದೀಪ್ ಅಭಿಮಾನಿಗಳೊಟ್ಟಿಗೆ ಬರ್ತ್ಡೇ ಅದ್ಧೂರಿಯಾಗಿ ಸೆಲಬ್ರೇಟ್ ಮಾಡಿಕೊಂಡಿದ್ದಾರೆ. ಜೊತೆಗೆ ಅಭಿಮಾನಿಗಳು ಖುಷಿಯಿಂದ ಕುಣಿದಾಡುವಂತಹ ಸರ್ಪ್ರೈಸ್‌ ಮೇಲೆ ಸರ್ಪ್ರೈಸ್ ಕೊಟ್ಟಿದ್ದಾರೆ. ಸದ್ಯ ಕಿಚ್ಚನ ಅಭಿಮಾನಗಳ ಚಿತ್ತ ಡಿಸೆಂಬರ್‌ನತ್ತ ನೆಟ್ಟಿದೆ. ಮಾರ್ಕ್ ಬೆಳ್ಳಿಪರದೆ ಮೇಲೆ ನೋಡಿ ಸಂಭ್ರಮಿಸೋಕೆ ಈಗಿನಿಂದಲೇ ತಯಾರಿ ಮಾಡಿಕೊಳ್ಳುತ್ತಿದ್ದಾರೆ ಸುದೀಪ್ ಫ್ಯಾನ್ಸ್. ಇದನ್ನೂ ಓದಿ: 52ನೇ ವಸಂತಕ್ಕೆ ಕಾಲಿಟ್ಟ ಕಿಚ್ಚ – ರಾತ್ರಿಯೇ ಕೇಕ್ ಕತ್ತರಿಸಿ ಫ್ಯಾನ್ಸ್ ಜೊತೆ ಸಂಭ್ರಮ…!

  • ಏ.16ರಿಂದ ‘ಬಿಲ್ಲ ರಂಗ ಭಾಷಾ’ ಚಿತ್ರದ ಶೂಟಿಂಗ್ ಆರಂಭ- ಅಪ್‌ಡೇಟ್ ಕೊಟ್ರು ಕಿಚ್ಚ

    ಏ.16ರಿಂದ ‘ಬಿಲ್ಲ ರಂಗ ಭಾಷಾ’ ಚಿತ್ರದ ಶೂಟಿಂಗ್ ಆರಂಭ- ಅಪ್‌ಡೇಟ್ ಕೊಟ್ರು ಕಿಚ್ಚ

    ‘ಮಾಕ್ಸ್’ (Max) ಸಿನಿಮಾದ ಸಕ್ಸಸ್ ಬಳಿಕ ಸುದೀಪ್ ‘ಬಿಲ್ಲ ರಂಗ ಭಾಷಾ’ (Billa Ranga Baashaa) ಚಿತ್ರಕ್ಕಾಗಿ ತಯಾರಿ ಮಾಡಿಕೊಳ್ತಿದ್ದಾರೆ. ಹೀಗಿರುವಾಗ ಈ ಸಿನಿಮಾದ ಶೂಟಿಂಗ್ ಆರಂಭ ಆಗೋದು ಯಾವಾಗ ಎಂಬುದರ ಬಗ್ಗೆ ಖುದ್ದು ಸುದೀಪ್ (Sudeep) ಸೋಷಿಯಲ್ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ:ಕೊಲೆ ಕೇಸ್ ಸಾಕ್ಷ್ಯಿಧಾರನ ಜೊತೆ ಪ್ರಭಾವ ಬೀರುತ್ತಿದ್ದಾರಾ ದರ್ಶನ್?

    ‘ಬಿಲ್ಲ ರಂಗ ಭಾಷಾ’ ಸಿನಿಮಾ ಕುರಿತ ಅಪ್‌ಡೇಟ್‌ಗಾಗಿ ಕಾಯುತ್ತಿದ್ದ ಫ್ಯಾನ್ಸ್‌ಗೆ ಸುದೀಪ್ (Sudeep) ಸಿಹಿಸುದ್ದಿ ಕೊಟ್ಟಿದ್ದಾರೆ. ಏ.16ರಂದು ಏನು ನಡೆಯಲಿದೆ ಗೊತ್ತೆ? ‘ಬಿಲ್ಲ ರಂಗ ಭಾಷಾ’ ಚಿತ್ರದ ಶೂಟಿಂಗ್ ಆರಂಭವಾಗಲಿದೆ. ಸಿನಿಮಾದ ಸೆಟ್, ತಾರಾಗಣ ಮತ್ತು ಇತರೆ ವಿಚಾರಗಳನ್ನು ನಂತರ ತಿಳಿಸಲಾಗುವುದು ಎಂದು ಸುದೀಪ್ ಪೋಸ್ಟ್ ಮಾಡಿದ್ದಾರೆ. ನಟನ ಅಪ್‌ಡೇಟ್ ಕೇಳಿ ಫ್ಯಾನ್ಸ್ ಥ್ರಿಲ್ ಆಗಿದ್ದಾರೆ. ಇದನ್ನೂ ಓದಿ:ಏ.16ಕ್ಕೆ ಕಾದಿದೆ ಕಿಚ್ಚನಿಂದ ಬಿಗ್‌ ಸರ್ಪ್ರೈಸ್-‌ ಸುದೀಪ್‌ ಕಟ್ಟು ಮಸ್ತಾದ ಬಾಡಿ ನೋಡಿ ಫ್ಯಾನ್ಸ್‌ ಫಿದಾ

    ಇತ್ತೀಚೆಗೆ ಸುದೀಪ್ ಕಟ್ಟು ಮಸ್ತಾದ ವರ್ಕೌಟ್ ಫೋಟೋವನ್ನು ಹಂಚಿಕೊಂಡು ಏ.16ಕ್ಕೆ ಅಪ್‌ಡೇಟ್ ಸಿಗಲಿದೆ ಎಂದು ನಟ ಸೋಷಿಯಲ್ ಮೀಡಿಯಾದಲ್ಲಿ ಸುಳಿವು ನೀಡಿದ್ದರು. ಇದೀಗ ಒಂದು ವಾರದ ಮುಂಚಿತವಾಗಿಯೇ ನಟ ಮಾಹಿತಿ ಹಂಚಿಕೊಂಡಿದ್ದಾರೆ. ಏ.16ರಿಂದ ಶೂಟಿಂಗ್‌ ಶುರು ಎಂದಿದ್ದಾರೆ. ಆದರೀಗ ಏ.16ರಂದು ಶೂಟಿಂಗ್‌ನಲ್ಲಿ ಭಾಗಿಯಾಗಲಿರೋ ಸುದೀಪ್ ಲುಕ್ ಹೇಗಿರಲಿದೆ ಎಂಬುದರ ಬಗ್ಗೆ ಫ್ಯಾನ್ಸ್‌ಗೆ ಕುತೂಹಲವಿದೆ.

    ಅಂದಹಾಗೆ, ‘ಬಿಲ್ಲ ರಂಗ ಭಾಷಾ’ ಚಿತ್ರಕ್ಕಾಗಿ ಡೈರೆಕ್ಟರ್ ಅನೂಪ್ ಭಂಡಾರಿ ಜೊತೆ ಸುದೀಪ್ ಕೈಜೋಡಿಸಿದ್ದಾರೆ. ‘ವಿಕ್ರಾಂತ್ ರೋಣ’ ಚಿತ್ರದ ಬಳಿಕ ಮತ್ತೆ ಈ ಕಾಂಬಿನೇಷನ್ ಒಂದಾಗಿದೆ.

  • ಏ.16ಕ್ಕೆ ಕಾದಿದೆ ಕಿಚ್ಚನಿಂದ ಬಿಗ್‌ ಸರ್ಪ್ರೈಸ್-‌ ಸುದೀಪ್‌ ಕಟ್ಟು ಮಸ್ತಾದ ಬಾಡಿ ನೋಡಿ ಫ್ಯಾನ್ಸ್‌ ಫಿದಾ

    ಏ.16ಕ್ಕೆ ಕಾದಿದೆ ಕಿಚ್ಚನಿಂದ ಬಿಗ್‌ ಸರ್ಪ್ರೈಸ್-‌ ಸುದೀಪ್‌ ಕಟ್ಟು ಮಸ್ತಾದ ಬಾಡಿ ನೋಡಿ ಫ್ಯಾನ್ಸ್‌ ಫಿದಾ

    ಸ್ಯಾಂಡಲ್‌ವುಡ್‌ ನಟ ಸುದೀಪ್‌ (Sudeep) ಮ್ಯಾಕ್ಸ್‌ ಚಿತ್ರದ ಬಳಿಕ ಹೊಸ ಸಿನಿಮಾದ ತಯಾರಿಯಲ್ಲಿ ಬ್ಯುಸಿಯಾಗಿದ್ದರು. ಇದರ ನಡುವೆ ಕಟ್ಟು ಮಸ್ತಾದ ವರ್ಕೌಟ್‌ ಫೋಟೋವೊಂದನ್ನು ಹಂಚಿಕೊಂಡಿದ್ದಾರೆ. ಇದರೊಂದಿಗೆ ಮುಂದಿನ ಚಿತ್ರದ ಬಗ್ಗೆ ಫ್ಯಾನ್ಸ್‌ಗೆ ಬಿಗ್‌ ನ್ಯೂಸ್‌ ಕೊಟ್ಟಿದ್ದಾರೆ. ಇದನ್ನೂ ಓದಿ:ರೇಣುಕಾಸ್ವಾಮಿ ಕೇಸ್: ದರ್ಶನ್ ಜಾಮೀನು ಪ್ರಶ್ನಿಸಿದ್ದ ಅರ್ಜಿ ವಿಚಾರಣೆ ಏ.22ಕ್ಕೆ ಮುಂದೂಡಿಕೆ

    ಹೊಸ ಸಿನಿಮಾಗಾಗಿ ಸುದೀಪ್ ಜಿಮ್‌ನಲ್ಲಿ ಬೆವರು ಹರಿಸಿದ್ದಾರೆ. ಕಟ್ಟು ನಿಟ್ಟಾಗಿ ಡಯಟ್ ಫಾಲೋ ಮಾಡಿ ಸಖತ್ ಆಗಿ ಬಾಡಿ ಬೀಲ್ಡ್ ಮಾಡಿದ್ದಾರೆ. ಅವರ ಈ ವರ್ಕೌಟ್ ಫೋಟೋ ನೋಡಿ ಫ್ಯಾನ್ಸ್ ಬೆರಗಾಗಿದ್ದಾರೆ. ಸೋಶಿಯಲ್‌ ಮೀಡಿಯಾದಲ್ಲಿ ನಟನ ಈ ಪೋಸ್ಟ್‌ ಸಖತ್‌ ವೈರಲ್‌ ಆಗ್ತಿದೆ.ಇದನ್ನೂ ಓದಿ:ಗೋಲ್ಡ್ ರಾಣಿಗೆ ಮತ್ತೆ ಶಾಕ್ ಕೊಟ್ಟ ಪತಿ – ವಿಚ್ಛೇದನಕ್ಕೆ ಅರ್ಜಿ

     

    View this post on Instagram

     

    A post shared by KicchaSudeepa (@kichchasudeepa)

    ಅದಷ್ಟೇ ಅಲ್ಲ, ವರ್ಕೌಟ್ ಫೋಟೋ ಶೇರ್ ಮಾಡಿ ಏ.16 ಎಂದು ಸುದೀಪ್ ಪೋಸ್ಟ್‌ನಲ್ಲಿ ಉಲ್ಲೇಖಿಸಿದ್ದಾರೆ. ಹಾಗಾಗಿ ಇದು ಮುಂದಿನ ಚಿತ್ರದ ಬಗ್ಗೆ ಅಪ್‌ಡೇಟ್ ಎಂದೇ ಫ್ಯಾನ್ಸ್ ಊಹಿಸಿದ್ದಾರೆ.

    ‘ಮಾಕ್ಸ್’ (Max) ಚಿತ್ರದ ಬಳಿಕ ಅನೂಪ್ ಭಂಡಾರಿ ನಿರ್ದೇಶನದ ‘ಬಿಲ್ಲ ರಂಗ ಬಾಷಾ’ ಸಿನಿಮಾಗಾಗಿ ನಟ ತಯಾರಿ ಮಾಡಿಕೊಳ್ತಿದ್ದಾರೆ. ಅದಕ್ಕಾಗಿ ಸುದೀಪ್ ದೇಹ ದಂಡಿಸಿದ್ದಾರೆ. ಇದೇ ಏ.16ರಂದು ಈ ಚಿತ್ರ ಸೆಟ್ಟೇರಲಿದೆ ಎಂದು ಹೇಳಲಾಗ್ತಿದೆ. ಈ ಬಗ್ಗೆ ಚಿತ್ರತಂಡದ ಕಡೆಯಿಂದ ಅಧಿಕೃತ ಮಾಹಿತಿ ಸಿಗುವವರೆಗೂ ಕಾಯಬೇಕಿದೆ.

  • ಕಿಚ್ಚೋತ್ಸವ: ‘ಬಿಲ್ಲ ರಂಗ ಬಾಷಾ’ ಟೈಟಲ್, ಕಾನ್ಸೆಪ್ಟ್ ವಿಡಿಯೋ ಗಿಫ್ಟ್

    ಕಿಚ್ಚೋತ್ಸವ: ‘ಬಿಲ್ಲ ರಂಗ ಬಾಷಾ’ ಟೈಟಲ್, ಕಾನ್ಸೆಪ್ಟ್ ವಿಡಿಯೋ ಗಿಫ್ಟ್

    ಭಿನಯ ಚಕ್ರವರ್ತಿ ಕಿಚ್ಚ ಸುದೀಪ್ (Sudeep) ಇಂದು ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಬಾದ್ ಷಾ ಬರ್ತಡೇ ಅಂಗವಾಗಿ ಬಹುನಿರೀಕ್ಷಿತ ಸಿನಿಮಾ ಬಿಲ್ಲ ರಂಗ ಬಾಷಾ (Billa Ranga Basha) ಟೈಟಲ್ ಲೋಗೋ ಹಾಗೂ ಕಾನ್ಸೆಪ್ಟ್ ವಿಡಿಯೋ ಝಲಕ್ ನ್ನು ಅಭಿಮಾನಿಗಳಿಗೆ ಉಡುಗೊರೆಯಾಗಿ ನೀಡಲಾಗಿದೆ. ನಿರೀಕ್ಷೆಗೆ ತಕ್ಕಂತೆ ಮೂಡಿಬಂದಿರುವ ಫಸ್ಟ್ ಝಲಕ್ ನಲ್ಲಿ ನಾನಾ ವಿಷಯಗಳನ್ನು ಅನೂಪ್ ಭಂಡಾರಿ ಕಟ್ಟಿಕೊಟ್ಟಿದ್ದಾರೆ. ಲಿಬರ್ಟಿ ಪ್ರತಿಮೆ, ಐಫೆಲ್ ಟವರ್ ಮತ್ತು ತಾಜ್ ಮಹಲ್ ನ್ನು ಬಿಲ್ಲ ರಂಗ ಭಾಷಾ ಗ್ಲಿಂಪ್ಸ್ ನಲ್ಲಿ ತೋರಿಸಿರುವ ಅವರು ಭವಿಷ್ಯದ ಕಥೆ ಹೇಳೋದಿಕ್ಕೆ ಹೊರಟ್ಟಿದ್ದಾರೆ. Once Upon A Time in  2209 AD ಎಂದು ಶುರುವಾಗುವ ಝಲಕ್ ಬಹಳ ಕುತೂಹಲ ಹೆಚ್ಚಿಸಿದ್ದು, ಬಿಲ್ಲ ರಂಗ ಬಾಷಾ ಫಸ್ಟ್ ಬ್ಲಂಡ್ ಏನಿರಬಹುದು ? ಅನೂಪ್ (Anoop Bhandari)  ಹೇಳೋದಿಕ್ಕೆ ಹೊರಟಿರುವ ಭವಿಷ್ಯದ ಕಥಾಹಂದರ ಏನು? ಎಂಬ ಪ್ರಶ್ನೆಯನ್ನು ಹುಟ್ಟುಹಾಕಿದೆ.

    ಸುದೀಪ್ ಅವರೇ ಹೇಳಿಕೊಂಡಿರುವಂತೆ ಅವರ ಸಿನಿಕರಿಯರ್ ನ ಬಹುದೊಡ್ಡ ಬಜೆಟ್ ಚಿತ್ರ ಇದಾಗಿದೆ. ಟಾಲಿವುಡ್ ಬ್ಲಾಕ್ ಬಸ್ಟರ್ ಹಿಟ್ ಸಿನಿಮಾ ಹನುಮಾನ್ ನಿರ್ಮಾಪಕರಾದ ನಿರಂಜನ್ ರೆಡ್ಡಿ ಹಾಗೂ‌ ಚೈತನ್ಯ ರೆಡ್ಡಿ ಬಿಲ್ಲ ರಂಗ ಬಾಷಾ ಚಿತ್ರಕ್ಕೆ ಹಣ ಹಾಕುತ್ತಿದ್ದಾರೆ. ತಮ್ಮದೇ ಪ್ರೈಮ್ ಶೋ ಎಂಟರ್ ಟೈನ್ಮೆಂಟ್ ಬ್ಯಾನರ್ ನಡಿ ಈ ಚಿತ್ರವನ್ನು ಅವರು ಅದ್ಧೂರಿಯಾಗಿ ನಿರ್ಮಾಣ ಮಾಡುತ್ತಿದ್ದಾರೆ. ಅಭಿಮಾನಿಗಳು “ಅಪ್‌ಡೇಟ್‌ ಬೇಕು ಬಾಸ್‌” ಎಂದು ಹೇಳುತ್ತಿದ್ದಾರೆ. “ಬಾಸ್‌ ಅಪ್‌ಡೇಟ್‌ ಬಾಸ್‌” “ಅಪ್‌ಡೇಟ್‌ ಬೇಕು ಬಾಸ್‌” ಎಂದೆಲ್ಲ ಧ್ವನಿ ಕೇಳುತ್ತಾರೆ. ತಕ್ಷಣ ವಿಡಿಯೋದಲ್ಲಿ ಅನೂಪ್‌ ಭಂಡಾರಿ ಅವರು ಪುಸ್ತಕ ಓದುವಂತೆ ಆ ಪುಸ್ತಕದಲ್ಲಿ ಬಿಲ್ಲ ರಂಗ ಬಾಷಾದ ಟೀಮ್‌ ಕುರಿತು ವಿವರವೂ ದೊರಕುತ್ತದೆ. “ಹನುಮಾನ್‌ ನಿರ್ಮಾಪಕರಿಂದ, ರಂಗಿತರಂಗ, ರಾಜರಥ ವಿಕ್ರಾಂತ್‌ ರೋಣ ನಿರ್ದೇಶಕರಿಂದ ಬಿಲ್ಲಾ ರಂಗ ಭಾಷಾ ಸಿನಿಮಾ” ಎಂಬ ಅಪ್‌ಡೇಟ್‌ ಅನ್ನು ಹಂಚಿಕೊಳ್ಳಲಾಗಿದೆ.

    ಬಿಲ್ಲ ರಂಗ ಬಾಷಾ ಸಿನಿಮಾ ಬಗ್ಗೆ ಮಾತನಾಡಿರುವ ನಿರ್ದೇಶಕ ಅನೂಪ್ ಭಂಡಾರಿ, ವಿಕ್ರಾಂತ್ ರೋಣ ಸಿನಿಮಾ ನಂತರ ಹನುಮಾನ್ ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸದ ಸಮಯದಲ್ಲಿ ನಿರ್ಮಾಪಕರಾದ ನಿರಂಜನ್ ರೆಡ್ಡಿ ನನ್ನನ್ನು ಭೇಟಿಯಾದರು. ನಾನು ಸುದೀಪ್ ಸರ್ ಗೆ ಸಿನಿಮಾ ಮಾಡುತ್ತಿರುವುದಾಗಿ ಹಾಗೂ ಬಿಲ್ಲ ರಂಗ ಭಾಷಾ ಕಥೆ ಹೇಳಿದಾಗ ಅವರು ಎಕ್ಸೈಟ್ ಆದರು. ಅದ್ಧೂರಿಯಾಗಿ ಚಿತ್ರ ನಿರ್ಮಾಣ ಮಾಡುವುದಾಗಿ ತಿಳಿಸಿದರು. ಸುದೀಪ್ ಸರ್ ಜೊತೆ ಕೆಲಸ ಮಾಡುವುದು ಅದ್ಭುತ ಅನುಭವವಾಗಿದೆ. ಜನ ವಿಕ್ರಾಂತ್ ರೋಣ ಚಿತ್ರ ಇಷ್ಟಪಟ್ಟಿದ್ದಾರೆ. ಸುದೀಪ್ ಸರ್ ಈ ಚಿತ್ರವನ್ನು ದೊಡ್ಡ ಚಿತ್ರ ಎಂದಿರುವುದು ನನಗೆ ಜವಾಬ್ದಾರಿಯನ್ನು ಜಾಸ್ತಿ ಮಾಡಿದೆ ಎಂದರು.

    ನಿರ್ಮಾಪಕರಾದ ನಿರಂಜನ್ ರೆಡ್ಡಿ ಮಾತನಾಡಿ, ಸುದೀಪ್ ಸರ್ ಜೊತೆ ಅನೂಪ್ ಕೈ ಜೋಡಿಸಿದ್ದಾರೆ ಎಂದಾಗ ನಾವು ಉತ್ಸುಕರಾದೆವು. ತೆಲುಗಿನಲ್ಲಿ ವಿಕ್ರಾಂತ್ ರೋಣ ಅದ್ಭುತ ಯಶಸ್ಸು ಕಂಡಿದೆ. ಬಿಲ್ಲ ರಂಗ ಬಾಷಾ ಕಥೆ ಕೇಳಿದಾಗ ನಾವೇ ಚಿತ್ರ ನಿರ್ಮಾಣ ಮಾಡಬೇಕು ಎಂದುಕೊಂಡೆವು. ಕಿಚ್ಚ ಸುದೀಪ್ ಸರ್ ಜೊತೆ ಕೈ ಜೋಡಿಸಿರುವುದು ಒಂದೊಳ್ಳೆ ಅವಕಾಶವಾಗಿದ್ದು, ಬಿಲ್ಲ ರಂಗ ಬಾಷಾ ಸಿನಿಮಾ ಮೂಲಕ ಪ್ರೇಕ್ಷಕರಿಗೆ ಅದ್ಭುತ ಪ್ರಪಂಚ ಪರಿಚಯಿಸುತ್ತೇವೆ ಎಂದರು. ಬಿಲ್ಲ ರಂಗ ಬಾಷಾ ಬಹುಭಾಷಾಯಲ್ಲಿ ನಿರ್ಮಾಣವಾಗುತ್ತಿದ್ದು, ಶೀಘ್ರದಲ್ಲೇ ಶೂಟಿಂಗ್ ಅಖಾಡಕ್ಕೆ ಇಳಿಯಲಿದೆ ಚಿತ್ರತಂಡ

  • Exclusive- ಸುದೀಪ್ ಮುಂದಿನ ಸಿನಿಮಾ ‘ಬಿಲ್ಲ ರಂಗ ಬಾಷಾ’: ಜೂನ್ 1 ರಿಂದ ಶೂಟಿಂಗ್

    Exclusive- ಸುದೀಪ್ ಮುಂದಿನ ಸಿನಿಮಾ ‘ಬಿಲ್ಲ ರಂಗ ಬಾಷಾ’: ಜೂನ್ 1 ರಿಂದ ಶೂಟಿಂಗ್

    ಕೆಲ ವಾರಗಳ ಹಿಂದೆಯಷ್ಟೇ ತಾವು ಮೂರು ಸಿನಿಮಾಗಳನ್ನು ಒಪ್ಪಿಕೊಂಡಿರುವ ಕುರಿತು ಕಿಚ್ಚ ಸುದೀಪ್ (Sudeep) ಬಹಿರಂಗ ಪಡಿಸಿದ್ದರು. ಮೂರು ಸಿನಿಮಾಗಳಲ್ಲಿ ಮೊದಲು ಯಾವುದು ಶುರುವಾಗಲಿದೆ ಎನ್ನುವ ಕುತೂಹಲ ಎಲ್ಲರದ್ದಾಗಿತ್ತು. ಇದೀಗ ಮತ್ತೆ ಸುದೀಪ್ ಟ್ವೀಟ್ ಮಾಡಿದ್ದು ಮೇ 22ರಂದು ಮೊದಲ ಸಿನಿಮಾದ ಪ್ರೊಮೋ (Promo) ಶೂಟ್ ಹಾಗೂ ಜೂನ್ 1 ರಂದು ಆ ಸಿನಿಮಾವನ್ನು ಲಾಂಚ್ ಮಾಡುವುದಾಗಿ ಬರೆದುಕೊಂಡಿದ್ದಾರೆ.

    ಮೂರರಲ್ಲಿ ಮೊದಲ ಶುರುವಾಗುವ ಸಿನಿಮಾ ಯಾವುದು ಎನ್ನುವ ಪ್ರಶ್ನೆ ಅವರ ಅಭಿಮಾನಿಗಳದ್ದು. ಪಬ್ಲಿಕ್ ಟಿವಿ ಡಿಜಿಟಲ್ ಗೆ ಸಿಕ್ಕಿರುವ ಮಾಹಿತಿ ಪ್ರಕಾರ ಮೊದಲು ಸಿನಿಮಾವಾಗಿ ‘ಬಿಲ್ಲ ರಂಗ ಬಾಷಾ’ (Billa Ranga Basha) ಮೂಡಿ ಬರಲಿದೆ. ಈ ಸಿನಿಮಾದ ಪ್ರೊಮೋ ಮೇ 22ರಿಂದ ಶುರುವಾಗಲಿದೆ. ಈ ಸಿನಿಮಾಗೆ ಅನೂಪ್ ಭಂಡಾರಿ ನಿರ್ದೇಶನ ಮಾಡಲಿದ್ದು, ವಿಕ್ರಾಂತ್ ರೋಣದ ನಂತರ ಈ ಜೋಡಿ ಮತ್ತೆ ಒಂದಾಗುತ್ತಿದೆ.

    ನಂತರದ ಸಿನಿಮಾಗೆ ರಾಷ್ಟ್ರ ಪ್ರಶಸ್ತಿ ತಮಿಳು ನಿರ್ದೇಶಕ ಚರಣ್ (Charan)  ಕನ್ನಡಕ್ಕೆ ಬರುತ್ತಿರುವುದಾಗಿ ಸುದ್ದಿ ಆಗಿದೆ. ವಿಕ್ರಾಂತ್ ರೋಣ ಚಿತ್ರದ ನಂತರ ಕಿಚ್ಚನಿಗಾಗಿ ಸಿನಿಮಾ ಮಾಡುತ್ತಿರುವುದಾಗಿ ಅನೂಪ್ ಭಂಡಾರಿ (Anoop Bhandari) ಈ ಹಿಂದೆಯೇ ಹೇಳಿಕೊಂಡಿದ್ದರು. ಅವರಿಗಾಗಿಯೇ ಕಥೆ ಬರೆಯುತ್ತಿರುವುದಾಗಿಯೂ ತಿಳಿಸಿದ್ದರು. ಅಲ್ಲದೇ, ನಂದಕಿಶೋರ್ (Nandakishore) ಕೂಡ ಕಿಚ್ಚನಿಗಾಗಿ ಸಿನಿಮಾವೊಂದನ್ನು ಮಾಡಲಿದ್ದಾರೆ. ಆ ಕಥೆಯೂ ಲಾಕ್ ಆಗಿದೆ. ಇದನ್ನೂ ಓದಿ:ನೆಗೆಟಿವ್ ರೋಲ್ ಮಾಡಿದ್ದಕ್ಕೆ ಮದುವೆ ಸಂಬಂಧ ಕ್ಯಾನ್ಸಲ್- ನಟಿ ಅನಿಕಾ ಸಿಂಧ್ಯ

    ಚರಣ್ ತಮಿಳಿನಲ್ಲಿ ಹಿಟ್ ಚಿತ್ರಗಳನ್ನು ಕೊಟ್ಟವರು. ತಮ್ಮ ಚಿತ್ರಕ್ಕಾಗಿ ರಾಷ್ಟ್ರ ಪ್ರಶಸ್ತಿಯನ್ನೂ ಅವರು ಪಡೆದಿದ್ದಾರೆ. ಸುದೀಪ್ ಗಾಗಿ ಪ್ಯಾನ್ ಇಂಡಿಯಾ ಸಿನಿಮಾವನ್ನು ಅವರು ಮಾಡಲಿದ್ದಾರಂತೆ. ಅಧಿಕೃತವಾಗಿ ಈ ವಿಷಯವನ್ನು ಚರಣ್ ಆಗಲಿ ಅಥವಾ ಸುದೀಪ್ ಆಗಲಿ ಹೇಳದೇ ಇದ್ದರೂ ಗಾಂಧಿನಗರದಲ್ಲಂತೂ ಈ ಸುದ್ದಿ ಭರ್ಜರಿಯಾಗಿ ಸೇಲ್ ಆಗುತ್ತಿದೆ.

    ಸದ್ಯ ಸುದೀಪ್ ಚುನಾವಣಾ ಪ್ರಚಾರದಲ್ಲಿ ಬ್ಯುಸಿಯಾಗಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಅವರು ಹೇಳಿದ ಅಭ್ಯರ್ಥಿಗಳ ಪರ ಅವರು ಪ್ರಚಾರ ಮಾಡಲಿದ್ದಾರೆ. ಶಿಗ್ಗಾಂವಿಯಿಂದ ಶುರುವಾದ ಪ್ರಚಾರ ರಾಜ್ಯಾದ್ಯಂತ ಮುಂದುವರೆದಿದೆ. ಚುನಾವಣೆ ನಂತರವೇ ಅವರು ತಮ್ಮ ಸಿನಿಮಾಗಳ ಕೆಲಸದಲ್ಲಿ ತೊಡಗಿಕೊಳ್ಳಲಿದ್ದಾರೆ.