Tag: ಬಿಸಿಲು

  • ರಣ ಬಿಸಿಲು – ಕಿತ್ತೂರು, ಕಲ್ಯಾಣ ಕರ್ನಾಟಕದ 8 ಜಿಲ್ಲೆಗಳಲ್ಲಿ ಸರ್ಕಾರಿ ಕಚೇರಿ ಸಮಯ ಬದಲಾವಣೆ

    ರಣ ಬಿಸಿಲು – ಕಿತ್ತೂರು, ಕಲ್ಯಾಣ ಕರ್ನಾಟಕದ 8 ಜಿಲ್ಲೆಗಳಲ್ಲಿ ಸರ್ಕಾರಿ ಕಚೇರಿ ಸಮಯ ಬದಲಾವಣೆ

    – ಬೆಳಗ್ಗೆ 8ರಿಂದ ಮಧ್ಯಾಹ್ನ 1:30ರ ತನಕ ಕೆಲಸ

    ಬೆಂಗಳೂರು: ಬಿಸಿಲಿನ ತಾಪಮಾನದ ಕಾರಣಕ್ಕಾಗಿ ಕಿತ್ತೂರು (Kittur) ಕರ್ನಾಟಕದ ಎರಡು ಜಿಲ್ಲೆಗಳು, ಕಲ್ಯಾಣ ಕರ್ನಾಟಕದ (Kalyana Karnataka) 6 ಜಿಲ್ಲೆಗಳಲ್ಲಿ ಸರ್ಕಾರಿ ಕಚೇರಿ (Govt Office) ಕೆಲಸದ ಸಮಯ ಬದಲಾವಣೆ ಮಾಡಲಾಗಿದೆ.

    ಕಲಬುರಗಿ ವಿಭಾಗದ 6 ಜಿಲ್ಲೆಗಳು, ಬೆಳಗಾವಿ ವಿಭಾಗದ ಎರಡು ಜಿಲ್ಲೆಗಳಲ್ಲಿ ಸರ್ಕಾರಿ ಕೆಲಸದ ಸಮಯ ಬದಲಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಬೆಳಗ್ಗೆ 8ರಿಂದ ಮಧ್ಯಾಹ್ನ 1:30ರ ತನಕ ಸರ್ಕಾರಿ ಕಚೇರಿಗಳ ಕೆಲಸದ ಸಮಯ ನಿಗದಿ ಮಾಡಿದ್ದು, ಏಪ್ರಿಲ್, ಮೇ ತಿಂಗಳ ಅಂತ್ಯದ ತನಕವೂ ಸರ್ಕಾರಿ ಕಚೇರಿ ಸಮಯ ಬದಲಾವಣೆ ಜಾರಿಯಲ್ಲಿ ಇರಲಿದೆ. ಇದನ್ನೂ ಓದಿ: ನಾಳೆ ಹೈಕಮಾಂಡ್ ಮುಂದೆ ವರದಿ ಕೊಡಲಿರುವ ಸಿಎಂ ಸಿದ್ದರಾಮಯ್ಯ: ರಾಜಣ್ಣ ಹನಿಟ್ರ್ಯಾಪ್ ಕೇಸ್‌ಗೆ ಎಳ್ಳುನೀರು?

    ಕಲಬುರಗಿ, ಬೀದರ್, ಬಳ್ಳಾರಿ, ವಿಜಯನಗರ, ಕೊಪ್ಪಳ, ರಾಯಚೂರು, ವಿಜಯಪುರ, ಬಾಗಲಕೋಟೆ ಜಿಲ್ಲೆಗಳಲ್ಲಿ ಸರ್ಕಾರಿ ಕಚೇರಿ ಸಮಯ ಬದಲಾವಣೆ ಆಗಲಿದೆ. ರಾಜ್ಯ ಸರ್ಕಾರಿ ನೌಕರರ ಸಂಘದ ಮನವಿ ಮೇರೆಗೆ ಸರ್ಕಾರದ ಆದೇಶ ಹೊರಬಿದ್ದಿದೆ. ಇದನ್ನೂ ಓದಿ: ಚಿಕ್ಕಬಳ್ಳಾಪುರ| ಶ್ರೀನಿವಾಸ ಸಾಗರ ಜಲಾಶಯದಲ್ಲಿ ಮುಳುಗಿ ಮೂವರು ದುರ್ಮರಣ

    8 ಜಿಲ್ಲೆಗಳಲ್ಲಿ ಸರ್ಕಾರಿ ನೌಕರರು ಬದಲಾದ ಸಮಯದಲ್ಲಿ ತಮ್ಮ ಕರ್ತವ್ಯವನ್ನು ಎಂದಿನಂತೆ ಯಾವುದೇ ಲೋಪ/ಅಡೆತಡೆಯಿಲ್ಲದೆ ಕರ್ತವ್ಯ ನಿರ್ವಹಿಸತಕ್ಕದ್ದು. ಸಾರ್ವಜನಿಕರಿಗೆ ಯಾವುದೇ ರೀತಿ ಅನಾನುಕೂಲ ಆಗದಂತೆ ಮತ್ತು ಜಿಲ್ಲಾಧಿಕಾರಿಗಳು/ ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ತುರ್ತು ಸಂದರ್ಭದಲ್ಲಿ ಯಾವುದೇ ಕಾರ್ಯವನ್ನು ನಿರ್ವಹಿಸಲು ನಿರ್ದೇಶಿಸಿದಲ್ಲಿ ಕರ್ತವ್ಯ ನಿರ್ವಹಿಸತಕ್ಕದ್ದು ಎಂಬ ಷರತ್ತನ್ನು ಸಹ ಹಾಕಲಾಗಿದೆ. ಇದನ್ನೂ ಓದಿ: ಗದಗ| ಬೀದಿ ನಾಯಿಗಳ ದಾಳಿ – ಮಹಿಳೆಗೆ ಗಂಭೀರ ಗಾಯ

  • ನಾಗ್ಪುರದಲ್ಲಿ ದಾಖಲೆಯ 56 ಡಿಗ್ರಿ ಉಷ್ಣಾಂಶ- ಉತ್ತರಭಾರತದಲ್ಲಿ ಶಾಖಾಘಾತಕ್ಕೆ 210 ಸಾವು

    ನಾಗ್ಪುರದಲ್ಲಿ ದಾಖಲೆಯ 56 ಡಿಗ್ರಿ ಉಷ್ಣಾಂಶ- ಉತ್ತರಭಾರತದಲ್ಲಿ ಶಾಖಾಘಾತಕ್ಕೆ 210 ಸಾವು

    ನವದೆಹಲಿ: ದೇಶದಲ್ಲಿ ರಣ ಬಿಸಿಲು ದಾಖಲೆ ಮೇಲೆ ದಾಖಲೆ ಬರೆಯುತ್ತಿದೆ. ಮೊನ್ನೆಯಷ್ಟೇ ದೆಹಲಿಯಲ್ಲಿ 42.9 ಡಿಗ್ರಿ ತಾಪಮಾನ ದಾಖಲಾಗಿತ್ತು. ಆದರಿಂದು ಮಹಾರಾಷ್ಟ್ರದ ನಾಗ್ಪುರದಲ್ಲಿ (Nagpura, Maharastra) ಬರೋಬ್ಬರಿ 56 ಡಿಗ್ರಿ ಉಷ್ಣಾಂಶ ನಮೂದಾಗಿದೆ.

    ನಾಗ್ಪುರದ ಉತ್ತರ ಅಂಬಾಜರಿ ರಸ್ತೆಯ ಐಎಂಡಿ ಕೇಂದ್ರದಲ್ಲಿ 56 ಡಿಗ್ರಿ ತಾಪಮಾನ ದಾಖಲಾಗಿದೆ. ಸೊನೆಗಾಂವ್‍ನಲ್ಲಿ 54 ಡಿಗ್ರಿ ತಾಪಮಾನ ಕಂಡುಬಂದಿದೆ. ಜನರಂತೂ ಉಸ್ಸಪ್ಪ ಎಂದಿದ್ದಾರೆ. ಅಂದ ಹಾಗೇ, ಉತ್ತರ ಭಾರತದಲ್ಲಿ ರಣಬಿಸಿಲಿಗೆ ಕಳೆದ 24 ಗಂಟೆಯಲ್ಲಿ 50ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಬಿಹಾರದಲ್ಲಿ 10 ಮತಗಟ್ಟೆ ಸಿಬ್ಬಂದಿ ಸೇರಿ 14 ಜನ ಮೃತಪಟ್ಟಿದ್ದಾರೆ. ಈವರೆಗೂ 210ಕ್ಕೂ ಹೆಚ್ಚು ಮಂದಿ ಬಲಿ ಆಗಿದ್ದಾರೆ.

    ಬರೀ ಉತ್ತರಪ್ರದೇಶವೊಂದರಲ್ಲಿಯೇ (Uttarpradesh) ಬಿಸಿಗಾಳಿಯ ಶಾಖಾಘಾತಕ್ಕೆ 160ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಇದ್ರಲ್ಲಿ ವಾರಣಾಸಿ ನಿವಾಸಿಗಳ ಸಂಖ್ಯೆ 34. ಬಿಹಾರದಲ್ಲಿ 65, ಒಡಿಶಾದಲ್ಲಿ 41, ಜಾರ್ಖಂಡ್‍ನ ರಾಂಚಿಯಲ್ಲಿ 11 ಮಂದಿ ಮೃತಪಟ್ಟಿದ್ದಾರೆ. ಈವರೆಗೂ ಸಾವಿರಾರು ಮಂದಿ ಆಸ್ಪತ್ರೆ ಪಾಲಾಗಿದ್ದಾರೆ. ದೆಹಲಿ, ರಾಜಸ್ಥಾನ, ಹರಿಯಾಣ, ಪಂಜಾಬ್, ಬಿಹಾರ, ಉತ್ತರಪ್ರದೇಶದಲ್ಲಿ ಉಷ್ಣಾಂಶ 45 ಡಿಗ್ರಿ ಮೇಲ್ಪಟ್ಟೆ ಇದೆ. ಇದನ್ನೂ ಓದಿ: ‘ವಿಕೃತ ಕಾಮಿ, ಕೊನೆಯ ಉಸಿರಿರೋವರೆಗೂ ಶಿಕ್ಷೆ ನೀಡೋ ಕೇಸ್’- ಕೋರ್ಟ್‍ನಲ್ಲಿ ವಾದ, ಪ್ರತಿವಾದ ಹೇಗಿತ್ತು?

  • ಬಿಸಿಲಿನ ತಾಪಕ್ಕೆ ನಲುಗಿದ ಉತ್ತರದ ರಾಜ್ಯಗಳು- ರಾಜಸ್ಥಾನದಲ್ಲಿ 7 ಮಂದಿ ಸಾವು

    ಬಿಸಿಲಿನ ತಾಪಕ್ಕೆ ನಲುಗಿದ ಉತ್ತರದ ರಾಜ್ಯಗಳು- ರಾಜಸ್ಥಾನದಲ್ಲಿ 7 ಮಂದಿ ಸಾವು

    ನವದೆಹಲಿ: ಉತ್ತರದ ರಾಜ್ಯಗಳು ಬಿಸಿಲಿನ ತಾಪಕ್ಕೆ ಅಕ್ಷರಶಃ ತತ್ತರಿಸಿಹೋಗಿವೆ. ಮರುಭೂಮಿಗಳ ರಾಜ್ಯವೆಂದೇ ಕರೆಯಲಾಗುವ ರಾಜಸ್ಥಾನದ ಫಲೋಡಿಯಲ್ಲಿ 50.8 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ.

    ಹರಿಯಾಣದ (Haryana) ಸಿರ್ಸಾದಲ್ಲಿ 50.3 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ರಾಜಸ್ಥಾನದಲ್ಲಿ ನಿರಂತರ ಹೀಟ್ ವೇವ್‍ನಿಂದಾಗಿ 7 ದಿನಗಳಲ್ಲಿ 7 ಜೀವಗಳು ಬಲಿಯಾಗಿವೆ. ಬೇಸಿಗೆಯ ಆರಂಭದಲ್ಲಿ `ನವತಾಪ’ ಎಂಬ 9 ದಿನಗಳು ಪ್ರಾರಂಭವಾಗುತ್ತವೆ. ಈ ದಿನಗಳಲ್ಲಿ ಅಧಿಕ ತಾಪಮಾನದಿಂದಾಗಿ 55 ಮಂದಿ ಸಾವನ್ನಪ್ಪಿರುವ ವರದಿಯಾಗಿದ್ದು, ಇಡೀ ಬೇಸಿಗೆ ಅವಧಿಯಲ್ಲಿ 122 ಮಂದಿ ಸಾವನ್ನಪ್ಪಿರುವುದಾಗಿ ಹೇಳಲಾಗ್ತಿದೆ.

    ರಾಜಸ್ಥಾನದ 20 ಜಿಲ್ಲೆಗಳಲ್ಲಿ ಶಾಖದ ರೆಡ್ ಅಲರ್ಟ್ (Red Alert) ಘೋಷಿಸಲಾಗಿದೆ. ಪಂಜಾಬ್, ಹರಿಯಾಣ ಮತ್ತು ದೆಹಲಿಗೆ ಸಂಪರ್ಕವಿರುವ ಪ್ರದೇಶಗಳು ಶಾಖದ ಅಲೆಯ ಹೆಚ್ಚಿನ ಸಮಸ್ಯೆಗಳನ್ನು ಎದುರಿಸುತ್ತಿವೆ. ದೆಹಲಿಯಲ್ಲಿ ದಾಖಲೆಯ 52.3 ಡಿಗ್ರಿ ಉಷ್ಣಾಂಶ ದಾಖಲಾಗಿದ್ದು, ನಗರದ ವಿದ್ಯುತ್ ಬೇಡಿಕೆಯು ಬುಧವಾರದಂದು ಸಾರ್ವಕಾಲಿಕ ಗರಿಷ್ಠ ಮಟ್ಟವಾದ 8,302 ಮೆಗಾವ್ಯಾಟ್‍ಗೆ ತಲುಪಿದೆ.

    ಒಂದೇ ದಿನ ಅಗ್ನಿಶಾಮಕ ದಳಕ್ಕೆ 220 ಫೋನ್ ಕರೆಗಳು ಬಂದಿವೆ ಎನ್ನಲಾಗಿದೆ. ಮತ್ತೊಂದ್ಕಡೆ, ದೆಹಲಿಯಲ್ಲಿ ಕುಡಿಯುವ ನೀರಿಗೂ ತತ್ವಾರ ಎದುರಾಗಿದ್ದು, ವಾಟರ್ ಟ್ಯಾಂಕರ್ ಗಳಿಗೆ ಜನ ಮುಗಿಬೀಳ್ತಿದ್ದಾರೆ. ಇದನ್ನೂ ಓದಿ: ಕೇರಳ, ಈಶಾನ್ಯ ರಾಜ್ಯಗಳಿಗೆ 2 ದಿನ ಮೊದಲೇ ಮುಂಗಾರು ಪ್ರವೇಶ

  • ಯಾದಗಿರಿಯಲ್ಲಿ ವಿಪರೀತ ಬಿಸಿಲಿನಿಂದ ಮೀನುಗಳ ಮಾರಣಹೋಮ

    ಯಾದಗಿರಿಯಲ್ಲಿ ವಿಪರೀತ ಬಿಸಿಲಿನಿಂದ ಮೀನುಗಳ ಮಾರಣಹೋಮ

    ಯಾದಗಿರಿ: ರಾಜ್ಯದೆಲ್ಲೆಡೆ ಮಳೆರಾಯನ ಅಬ್ಬರ ಜೋರಾಗಿದ್ರೆ, ಯಾದಗಿರಿ (Yadagiri) ಜಿಲ್ಲೆಯಲ್ಲಿ ಬಿಸಿಲಿನ ತಾಪಮಾನ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಐತಿಹಾಸಿಕ ಕೆರೆಯಲ್ಲಿನ ಮೀನುಗಳ (Fish) ಮಾರಣ ಹೋಮವಾಗಿದೆ.

    ಯಾದಗಿರಿಯ ಹೃದಯ ಭಾಗದಲ್ಲಿರುವ ಲುಂಬಿನಿವನ ಕೆರೆಯಲ್ಲಿ ಘಟನೆ ನಡೆದಿದೆ. ಬಿಸಿಲಿನ ತಾಪಮಾನದಿಂದ ಆಕ್ಸಿಜನ್ ಕೊರತೆಯುಂಟಾಗಿ ಸಾವಿರಾರು ಮೀನುಗಳು ಕೆರೆಯಲ್ಲಿ ಸಾವನ್ನಪ್ಪಿವೆ. ಮಳೆ ಕೊರತೆಯಿಂದ ಕೆರೆಯಲ್ಲಿ ನೀರಿನ ಪ್ರಮಾಣ ಕಡಿಮೆ ಇದ್ದು, ಇರೋ ನೀರೆಲ್ಲಾ ನೀಲಿ ಬಣ್ಣಕ್ಕೆ ತಿರುಗಿದೆ. ಹೀಗಾಗಿ ಬಿಸಿಲಿನ ತಾಪಮಾನ ಹೆಚ್ಚಾಗಿ, ಆಕ್ಸಿಜನ್ ಕೊರತೆಯುಂಟಾಗಿ ಮೀನುಗಳು ಸಾವನ್ನಪ್ಪಿವೆ.

    ಸಾವಿರಾರು ಮೀನುಗಳ ಸಾವಿನಿಂದಾಗಿ ಲಕ್ಷಾಂತರ ರೂಪಾಯಿ ಖರ್ಚು ಮಾಡಿದ್ದ ಮೀನುಗಾರರ ಬದುಕು ಸಂಕಷ್ಟಕ್ಕೀಡಾಗಿದೆ. ಇನ್ನೊಂದೆಡೆ ಕೆರೆಯ ದಡದ ಸುತ್ತ ಸಾವಿರಾರು ಮೀನುಗಳ ಸತ್ತು ಬಿದ್ದಿದ್ರಿಂದ ಇಡೀ ಸುತ್ತಲೂ ಗಬ್ಬೆದ್ದು ನಾರುತ್ತಿದೆ. ಇದನ್ನೂ ಓದಿ: ಮದುವೆಗೆ ಹೆಣ್ಣು ಸಿಗದೆ ಮನನೊಂದು ನೇಣಿಗೆ ಕೊರಳೊಡ್ಡಿದ ಯುವಕ

  • ತೀವ್ರ ಬಿಸಿಲಿನಿಂದ ರಸ್ತೆಯಲ್ಲೇ ಕುಸಿದು ಬಿದ್ದ ಸಂಸದ ಡಾ.ಉಮೇಶ್ ಜಾಧವ್

    ತೀವ್ರ ಬಿಸಿಲಿನಿಂದ ರಸ್ತೆಯಲ್ಲೇ ಕುಸಿದು ಬಿದ್ದ ಸಂಸದ ಡಾ.ಉಮೇಶ್ ಜಾಧವ್

    ಕಲಬುರಗಿ: ರಾಜ್ಯದಲ್ಲಿ ದಿನದಿಂದ ದಿನಕ್ಕೆ ತಾಪಮಾನ ಏರಿಕೆಯಾಗುತ್ತಿದ್ದು, ಇಂದು ಬಿಸಿಲಿನ ತಾಪಕ್ಕೆ ಸಂಸದ ಡಾ.ಉಮೇಶ್ ಜಾಧವ್ (Dr. Umesh Jadhav) ಬಿದ್ದಿದ್ದಾರೆ.

    ಕಲಬುರಗಿಯಲ್ಲಿ ವಿರಶೈವ ಲಿಂಗಾಯತ ಸಮುದಾಯದಿಂದ ಪ್ರತಿಭಟನೆ ನಡೆಯುತ್ತಿತ್ತು. ಇಲ್ಲಿಗೆ ಜಾಧವ್‌ ಭೇಟಿ ನೀಡಿದ್ದರು. ಈ ವೇಳೆ ಬಿಸಿಲಿನ ತಾಪಕ್ಕೆ ತಲೆಸುತ್ತು ಬಂದು ರಸ್ತೆಯಲ್ಲಿಯೇ ಕುಸಿದು ಬಿದ್ದರು. ಬಳಿಕ ಅವರನ್ನು ಅಂಬುಲೆನ್ಸ್‌ನಲ್ಲಿ ಆಸ್ಪತ್ರೆಗೆ ಕರೆದೊಯ್ಯಲಾಯಿತು.

    ಇದಕ್ಕೂ ಮುನ್ನ ಕಲಬುರಗಿಯ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ್ದ ಜಾಧವ್‌, ಕಲಬುರಗಿಯಲ್ಲಿ ಲಾ ಆಂಡ್ ಸಂಪೂರ್ಣವಾಗಿ ಸತ್ತು ಹೋಗಿದೆ. ರಾಮ ಮಂದಿರ ಉದ್ಘಾಟನೆ ಮರುದಿನ ಅಂಬೇಡ್ಕರ್ ಪ್ರತಿಮೆಗೆ ಅವಮಾನ ಆಗಿತ್ತು. ಅಂಬೇಡ್ಕರ್ ಪ್ರತಿಮೆಗೆ ಅವಮಾನ ಮಾಡಿದ ಆರೋಪಿಗಳಿಗೆ ನಿನ್ನೆ ಜಾಮೀನು ಮಂಜೂರು ಆಗಿದೆ. ಜಾಮೀನಿನ ಮೇಲೆ ಹೊರ ಬಂದ ಆರೋಪಿಯ ಮನೆ ಮೇಲೆ ಕಲ್ಲು ತೂರಾಟ ನಡೆಸಿ ಹಲ್ಲೆ ಮಾಡಿದ್ದಾರೆ ಎಂದಿದ್ದರು.

    ಜನವರಿ 23 ರಂದು ಕಲಬುರಗಿ ಬಂದ್ ಮಾಡಿ ಭಯದ ವಾತಾವರಣ ಸೃಷ್ಟಿ ಮಾಡಿದ್ರು. ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹಾಳಾಗಿ ಹೋಗಿದೆ. ಆದರೆ ಅಂದು ಗಲಾಟೆ ಮಾಡಿದ ಆರೋಪಿಗಳ ಮೇಲೆ ಕ್ರಮ ಕೈಗೊಂಡಿಲ್ಲ. ಪ್ರಿಯಾಂಕ್ ಖರ್ಗೆ ಡಿಕ್ಟೇರ್ ಶಿಪ್ ಮಾಡ್ತಿದ್ದಾರೆ. ಡಿಎನ್ ಎ ಟೆಸ್ಟ್ ಮಾಡಿಸ್ತಾರಂತೆ , ಮೊದಲು ನಿಮ್ಮದು ಡಿಎನ್ ಎ ಟೆಸ್ಟ್ ಮಾಡಿಸಬೇಕು. ನಾವು ಒಬ್ಬ ಸಾಮಾನ್ಯ ದಲಿತ ಕಾರ್ಯಕರ್ತನಿಗೆ ಟಿಕೆಟ್ ಕೊಡಬೇಕಾಗಿತ್ತು ಅಂತಾ ನಾವು ಹೇಳಿದ್ದೀವಿ. ಒಂದು ಸುಳ್ಳನ್ನ ನೂರು ಸಲ ಹೇಳಿ ಪ್ರಿಯಾಂಕ್ ಖರ್ಗೆ ಸತ್ಯ ಮಾಡೋದಕ್ಕೆ ಮುಂದಾಗಿದ್ದಾರೆ ಎಂದು ಕಿಡಿಕಾರಿದ್ದರು.

  • ರಾಯಚೂರಿನಲ್ಲಿ 15 ವರ್ಷಗಳಲ್ಲೇ ಗರಿಷ್ಠ ತಾಪಮಾನ ದಾಖಲು

    ರಾಯಚೂರಿನಲ್ಲಿ 15 ವರ್ಷಗಳಲ್ಲೇ ಗರಿಷ್ಠ ತಾಪಮಾನ ದಾಖಲು

    – ಅನಗತ್ಯವಾಗಿ ಮನೆಯಿಂದ ಹೊರಬರದಂತೆ ಮನವಿ

    ರಾಯಚೂರು: ಬಿಸಿಲನಾಡು ರಾಯಚೂರಿನಲ್ಲಿ (Raichur) ಕಳೆದ 15 ವರ್ಷಗಳಲ್ಲೇ ಈ ಬಾರಿ ದಾಖಲೆಯ ಅತೀ ಹೆಚ್ಚು ತಾಪಮಾನ ದಾಖಲಾಗಿದೆ.

    ರಾಯಚೂರು ತಾಲೂಕಿನಲ್ಲಿ 45 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲಾಗಿದ್ದು, ಮುಂದಿನ ಮೂರು ದಿನಗಳಲ್ಲಿ 43 ರಿಂದ 45 ಡಿಗ್ರಿ ಸೆಲ್ಸಿಯಸ್ ತಾಪಮಾನ ಮುಂದುವರಿಯುವ ಮುನ್ಸೂಚನೆಯಿದೆ. ತಾಪಮಾನದಲ್ಲಿ ಕಲಬುರಗಿಯನ್ನೂ ರಾಯಚೂರು ಹಿಂದಿಕ್ಕಿದ್ದು, ರಾಜ್ಯದಲ್ಲೇ ಅತೀ ಹೆಚ್ಚು ತಾಪಮಾನ ದಾಖಲಾಗುತ್ತಿದೆ.

    ಇನ್ನುಉತ್ತರ ಕರ್ನಾಟಕದ ಭಾಗದ ಬಹುತೇಕ ಎಲ್ಲ ಜಿಲ್ಲೆ ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ಮುಂದಿನ 5 ದಿನ ಬಿಸಿ ಗಾಳಿ (Heat Wave) ಬೀಸಲಿದೆ ಎಂಬ ಮುನಸೂಚನೆಯನ್ನು ಕೂಡ ಇಲಾಖೆ ಕೊಟ್ಟಿದೆ. ಒಟ್ಟಿನಲ್ಲಿ ಬಿಸಿಗಾಳಿ ಹೆಚ್ಚಳದಿಂದ ತಾಪಮಾನದಲ್ಲಿ‌ ಹೆಚ್ಚಳವಾಗಿದೆ. ಹೀಗಾಗಿ ಬೆಳಗ್ಗೆ 11:30 ರಿಂದ ಮಧ್ಯಾಹ್ನ 3 ರ ವರೆಗೆ ಅನಗತ್ಯವಾಗಿ ಮನೆಯಿಂದ ಹೊರಬರದಂತೆ ಹವಾಮಾನ ಇಲಾಖೆ ಹಾಗೂ ರಾಯಚೂರು ಕೃಷಿ ವಿವಿ ಅಧಿಕಾರಿಗಳು ಮುನ್ನೆಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ರಾಜ್ಯದ ಬಹುತೇಕ ಕಡೆ ಮುಂದಿನ 4 ದಿನ ಉಷ್ಣ ಅಲೆಯ ಎಚ್ಚರಿಕೆ

  • ಯಾದಗಿರಿಯಲ್ಲಿ ವಿಪರೀತ ಬಿಸಿಲಿಗೆ ವೃದ್ಧೆ ಸಾವು

    ಯಾದಗಿರಿಯಲ್ಲಿ ವಿಪರೀತ ಬಿಸಿಲಿಗೆ ವೃದ್ಧೆ ಸಾವು

    ಯಾದಗಿರಿ: ವಿಪರೀತ ಬಿಸಿಲಿಗೆ (Extreme Heat) ವೃದ್ಧೆ (Old Woman) ಸಾವನ್ನಪ್ಪಿದ ಘಟನೆ ಯಾದಗಿರಿ (Yadagiri) ಜಿಲ್ಲೆಯ ವಡಗೇರಾ (Wadagera) ತಾಲೂಕಿನ ಕುರಕುಂದಿ ಗ್ರಾಮದ ಹೊರವಲಯದಲ್ಲಿ ನಡೆದಿದೆ.

    ಹಣಮಂತಿ (60) ಮೃತ ಕಾರ್ಮಿಕ ವೃದ್ಧೆ. ಇವರು ಉದ್ಯೋಗ ಖಾತ್ರಿ ಕೂಲಿ ಕೆಲಸಕ್ಕೆ ಹೋಗುತ್ತಿದ್ದರು. ಅದೇ ರೀತಿ ಸೋಮವಾರವೂ ಕೂಲಿ ಕೆಲಸಕ್ಕೆ ಹೋಗಿದ್ದು, ಬಿಸಿಲಿನಲ್ಲೇ ಕೆಲಸ ಮಾಡುತ್ತಿದ್ದರು. ಈ ವೇಳೆ ಅಧಿಕ ಬಿಸಿಲಿನಿಂದಾಗಿ ಸ್ಥಳದಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಬಾಗಲಕೋಟೆಯಲ್ಲಿ ಬಾಲಾಕೋಟ್ ಏರ್‌ಸ್ಟ್ರೈಕ್‌ ರಹಸ್ಯ ರಿವೀಲ್‌ ಮಾಡಿದ ಮೋದಿ

    ಮೃತ ವೃದ್ಧೆಯ ಮೃತದೇಹ ಯಾದಗಿರಿ ಯಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ವಡಗೇರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ಕಾವೇರಿ ನದಿಯಲ್ಲಿ ಮುಳುಗಿ ಐವರು ವಿದ್ಯಾರ್ಥಿಗಳ ದುರ್ಮರಣ

  • ತೀವ್ರವಾಗಿರುವ ಬಿಸಿಲಿನಿಂದ ನಿಮ್ಮನ್ನು ನೀವು ಹೀಗೆ ರಕ್ಷಿಸಿಕೊಳ್ಳಿ

    ತೀವ್ರವಾಗಿರುವ ಬಿಸಿಲಿನಿಂದ ನಿಮ್ಮನ್ನು ನೀವು ಹೀಗೆ ರಕ್ಷಿಸಿಕೊಳ್ಳಿ

    ಬೆಂಗಳೂರು ಸೇರಿದಂತೆ ರಾಜ್ಯದ ಕೆಲವೆಡೆಗಳಲ್ಲಿ ಬಿಸಿಲಿನ ತಾಪ ಹೆಚ್ಚಾಗಿದ್ದು, ಮಧ್ಯಾಹ್ನ ವೇಳೆ ಮನೆಯಿಂದ ಹೊರಬರಲು ಆತಂಕವಾಗುತ್ತದೆ. ಬಿಸಿಲ ತಾಪದಿಂದ ಜನರ ಆರೋಗ್ಯ ಹದಗೆಡುತ್ತಿದೆ. ಮೇ ಮತ್ತು ಜೂನ್ ತಿಂಗಳಿನಲ್ಲಿ ಬೇಸಿಗೆಯ ಬಿಸಿ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಗಳಿವೆ. ಹೀಟ್ ಸ್ಟ್ರೋಕ್‌ಗೆ ತಕ್ಷಣವೇ ಚಿಕಿತ್ಸೆ ನೀಡದಿದ್ದರೆ ವ್ಯಕ್ತಿಯ ಸಾವಿಗೆ ಕಾರಣವಾಗಬಹುದು. ಹೀಗಾಗಿ ಮನೆಯಿಂದ ಹೊರಡುವ ಮುನ್ನ ಈ ಕೆಳಗಿನ ಮುನ್ನೆಚ್ಚರಿಕೆಗಳನ್ನು ವಹಿಸಿ.

    * ಉಡುಪು ಆರಾಮದಾಯಕವಾಗಿರಲಿ: ಬೇಸಿಗೆಯಲ್ಲಿ ಹೊರಗೆ ಹೋಗುವಾಗ ಆರಾಮದಾಯಕವಾದ ಹತ್ತಿ ಬಟ್ಟೆಗಳನ್ನು ಧರಿಸಿ. ಬಿಗಿಯಾದ ಬಟ್ಟೆಗಳನ್ನು ಧರಿಸುವುದರಿಂದ ಅತಿಯಾದ ಬೆವರುವಿಕೆ ಉಂಟಾಗುತ್ತದೆ. ಹೀಗಾಗಿ ಸಡಿಲವಾದ ಮತ್ತು ಹತ್ತಿ ಬಟ್ಟೆಗಳನ್ನು ಧರಿಸುವುದು ಉತ್ತಮ. ಹತ್ತಿ ಬಟ್ಟೆಗಳು ಹೆಚ್ಚು ಶಾಖವನ್ನು ಉಂಟುಮಾಡುವುದಿಲ್ಲ.

    * ದೇಹವನ್ನು ಮುಚ್ಚಿಕೊಂಡು ಹೋಗಿ: ಮಧ್ಯಾಹ್ನದ ವೇಳೆ ಮನೆಯಿಂದ ಹೊರಗೆ ಹೋಗಬೇಕಾದರೆ ನಿಮ್ಮ ದೇಹವನ್ನು ಪೂರ್ಣವಾಗಿ ಮುಚ್ಚಿಕೊಳ್ಳಿ. ಮನೆಯಿಂದ ಹೊರಡುವಾಗ ಸ್ಕಾರ್ಫ್, ಛತ್ರಿ, ಪೂರ್ಣ ತೋಳಿನ ಅಂಗಿ, ಕ್ಯಾಪ್ ಇತ್ಯಾದಿಗಳನ್ನು ಧರಿಸಿಕೊಳ್ಳಿ. ಹೊರಗೆ ಹೋಗುವಾಗ ಬಾಟ್ಲಿಯಲ್ಲಿ ನೀರು ತೆಗೆದುಕೊಂಡು ಹೋಗಿ. ಇನ್ನು ಎಸಿಯಲ್ಲಿ ಕುಳಿತು ಕೆಲಸ ಮಾಡುವವರಾದರೆ ತಕ್ಷಣವೇ ಬಿಸಿಲಿಗೆ ಹೋಗುವುದನ್ನು ತಪ್ಪಿಸಿ. ಇದು ಶಾಖದ ಹೊಡೆತಕ್ಕೂ ಕಾರಣವಾಗಬಹುದು. ಇದನ್ನೂ ಓದಿ: ಕರ್ನಾಟಕದಲ್ಲಿ ಮುಂದಿನ 3 ದಿನ ಒಣಹವೆ – ಏ.18 ರಿಂದ ವಿವಿಧೆಡೆ ಮಳೆ

    * ದೇಹವನ್ನು ಹೈಡ್ರೇಟ್ ಆಗಿಟ್ಟುಕೊಳ್ಳಿ: ವಿಪರೀತ ಬಿಸಿಲು ಇರುವುದರಿಂದ ನಿಮ್ಮ ದೇಹವನ್ನು ನೀವು ಹೈಡ್ರೇಟ್‌ ಆಗಿಟ್ಟುಕೊಳ್ಳಿ. ಇದಕ್ಕಾಗಿ ಆಗಾಗ ನೀರು ಕುಡಿಯಿರಿ. ದಿನಕ್ಕೆ ಒಂದು ಬಾರಿಯಾದರೂ ಜ್ಯೂಸ್‌ ಕುಡಿಯಿರಿ. ದೇಹದಲ್ಲಿ ನೀರಿನ ಕೊರತೆಯಾದರೆ ನಿರ್ಜಲೀಕರಣ ಉಂಟಾಗುತ್ತದೆ. ಈ ಸಮಸ್ಯೆ ಉಂಟಾದರೆ ತಲೆತಿರುಗುವಿಕೆ ಮತ್ತು ಆಯಾಸದಂತಹ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ.

    * ಸನ್‌ಸ್ಕ್ರೀನ್‌ ಬಳಸಿ: ಬೇಸಿಗೆಯಲ್ಲಿ ಸೂರ್ಯನ ಬೆಳಕಿಗೆ ಒಡ್ಡಿಕೊಳ್ಳುವುದರಿಂದ ಚರ್ಮದ ಸನ್ಬರ್ನ್ ಮತ್ತು ಟ್ಯಾನ್ ಸಮಸ್ಯೆ ಹೆಚ್ಚಾಗುತ್ತದೆ. ಆದ್ದರಿಂದ ಮನೆಯಿಂದ ಹೊರಡುವಾಗ ಉತ್ತಮ ಗುಣಮಟ್ಟದ ಸನ್‌ಸ್ಕ್ರೀನ್ ಲೋಷನ್ ಹಚ್ಚಿಕೊಳ್ಳಿ. ಇದನ್ನು ಹಚ್ಚಿಕೊಂಡು 15 ನಿಮಿಷಗಳ ನಂತರ ಮಾತ್ರ ಮನೆಯಿಂದ ಹೊರಹೋಗಿ. ಇದು ಸೂರ್ಯನ ಕಿರಣಗಳಿಂದ ಚರ್ಮಕ್ಕೆ ಹಾನಿಯಾಗದಂತೆ ತಡೆಯುತ್ತದೆ.

    * ಹೊರಗಡೆ ಹೋಗೋದನ್ನು ತಪ್ಪಿಸಿ: ಸುಖಾಸುಮ್ಮನೆ ಬಿಸಿಲಿಗೆ ಹೊರಗಡೆ ಹೋಗುವುದನ್ನು ತಪ್ಪಿಸಿ. ಯಾಕೆಂದರೆ ಬಿಸಿಲಿನ ತಾಪದಲ್ಲಿ ಹೊರಗೆ ಹೋಗುವುದರಿಂದ ಆರೋಗ್ಯ ಸಮಸ್ಯೆಗಳು ಉಂಟಾಗುತ್ತವೆ. ಹೀಗಾಗಿ ನಿಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಾಧ್ಯವಾದಷ್ಟು ಮನೆಯಲ್ಲಿಯೇ ಇರಲು ಪ್ರಯತ್ನಿಸಿ. ಇದನ್ನೂ ಓದಿ: ಮಗು ಆರೋಗ್ಯವಾಗಿ, ಫಿಟ್ ಆಗಿರಲು ಗರ್ಭಿಣಿಯರು ಈ ಆಹಾರಗಳನ್ನು ಸೇವಿಸಿ

    * ಮಸಾಲೆಯುಕ್ತ ಆಹಾರ ಕಡಿಮೆ ಮಾಡಿ: ಈ ಋತುವಿನಲ್ಲಿ ಹೆಚ್ಚು ಮಸಾಲೆಯುಕ್ತ ಆಹಾರವನ್ನು ಸೇವಿಸುವುದರಿಂದ ನಿಮ್ಮ ಹೊಟ್ಟೆಯಲ್ಲಿ ಕೆಲವೊಂದು ಸಮಸ್ಯೆಯನ್ನು ಎದುರಿಸಬಹುದು. ಹೀಗಾಗಿ ಆದಷ್ಟು ಮನೆಯಲ್ಲಿ ತಯಾರಿಸಿದ ಆಹಾರವನ್ನು ಸೇವಿಸಿ. ಅಲ್ಲದೇ ನಿಮ್ಮ ಆಹಾರದಲ್ಲಿ ತರಕಾರಿಗಳು ಮತ್ತು ಹಣ್ಣುಗಳನ್ನು ಹೆಚ್ಚಾಗಿರಲಿ.

  • ಪಬ್ಲಿಕ್ ಟಿವಿ ಇಂಪ್ಯಾಕ್ಟ್ – ರಾಯಚೂರು ಜಿಲ್ಲಾಡಳಿತದಿಂದ ಸಾರ್ವಜನಿಕರಿಗೆ ನೆರಳಿನ ವ್ಯವಸ್ಥೆ

    ಪಬ್ಲಿಕ್ ಟಿವಿ ಇಂಪ್ಯಾಕ್ಟ್ – ರಾಯಚೂರು ಜಿಲ್ಲಾಡಳಿತದಿಂದ ಸಾರ್ವಜನಿಕರಿಗೆ ನೆರಳಿನ ವ್ಯವಸ್ಥೆ

    ರಾಯಚೂರು: ಬಿಸಿಲನಾಡು ರಾಯಚೂರು (Raichur) ಜನ ಎಂತಹ ಬಿಸಿಲನ್ನೂ ತಡೆದುಕೊಳ್ಳುತ್ತಾರೆ ಅನ್ನೋ ಮಾತಿತ್ತು. ಆದರೆ ಈ ವರ್ಷದ ರಣ ಬಿಸಿಲು ಬಿಸಿಲನಾಡ ಜನರನ್ನೇ ತತ್ತರಿಸುವಂತೆ ಮಾಡಿದೆ. ಹೀಗಾಗಿ ರಾಯಚೂರು ಜನರನ್ನು ಬಿಸಿಲಿನಿಂದ ರಕ್ಷಿಸಬೇಕು ಅಂತ ನಿಮ್ಮ ‘ಪಬ್ಲಿಕ್ ಟಿವಿ’ ವರದಿಯನ್ನು ಪ್ರಸಾರ ಮಾಡಿತ್ತು. ಪಬ್ಲಿಕ್ ಟಿವಿ ವರದಿಗೆ ಸ್ಪಂದಿಸಿರುವ ರಾಯಚೂರು ಜಿಲ್ಲಾಡಳಿತ ಬೈಕ್ ಮೇಲೆ ಓಡಾಡುವ ಜನರಿಗೆ ನೆರಳಿನ (Shelter) ಆಸರೆ ನೀಡುವ ಮೂಲಕ ಉತ್ತಮ ಕ್ರಮಕ್ಕೆ ಮುಂದಾಗಿದೆ.

    ಜಿಲ್ಲೆಯಲ್ಲಿ ದಾಖಲಾಗುತ್ತಿರುವ ಅತ್ಯಧಿಕ ತಾಪಮಾನ ಎಂಥವರಿಗೂ ನರಕ ತೋರಿಸುತ್ತಿದೆ. ಕಳೆದ ಆರೇಳು ವರ್ಷಗಳಲ್ಲೆ ಅತ್ಯಧಿಕ ಗರಿಷ್ಠ ತಾಪಮಾನ 43 ಡಿಗ್ರಿ ಸೆಲ್ಸಿಯಸ್ ಈಗ ದಾಖಲಾಗಿದೆ. ಕಳೆದ ಒಂದು ವಾರದಿಂದ ಸರಾಸರಿ 41 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ಮುಂದುವರೆದಿದೆ. ಮುಂದಿನ ದಿನಗಳಲ್ಲಿ ಇನ್ನೂ ಒಂದರಿಂದ ಎರಡು ಡಿಗ್ರಿ ಸೆಲ್ಸಿಯಸ್‌ನಷ್ಟು ತಾಪಮಾನ ಹೆಚ್ಚಳವಾಗಲಿದೆ ಅನ್ನೋ ಮುನ್ಸೂಚನೆಯಿದೆ. ಇದನ್ನೂ ಓದಿ: ಪೋಷಕರೇ ಎಚ್ಚರ ಶುರುವಾಗ್ತಿದೆ ಕಾಲರಾ- ಮಕ್ಕಳ ಆರೋಗ್ಯದ ಕಡೆ ಇರಲಿ ಗಮನ

    ಹೀಗಾಗಿ ನಿಮ್ಮ ಪಬ್ಲಿಕ್ ಟಿವಿ ರಾಯಚೂರು ಜನರನ್ನು ಬಿಸಿಲಿನಿಂದ ರಕ್ಷಿಸಲು ಸಾರ್ವಜನಿಕ ಸ್ಥಳಗಳು, ಟ್ರಾಫಿಕ್ ಸಿಗ್ನಲ್‌ಗಳಲ್ಲಿ ನೆರಳು, ಕುಡಿಯುವ ನೀರಿನ ವ್ಯವಸ್ಥೆಯ ಅವಶ್ಯಕತೆ ಕುರಿತು ವರದಿ ಪ್ರಸಾರ ಮಾಡಿತ್ತು. ವರದಿಗೆ ಸ್ಪಂದಿಸಿರುವ ರಾಯಚೂರು ಜಿಲ್ಲಾಡಳಿತ ಟ್ರಾಫಿಕ್ ಸಿಗ್ನಲ್ ಇರುವ ವೃತ್ತಗಳಲ್ಲಿ ನೆರಳಿನ ವ್ಯವಸ್ಥೆಯನ್ನು ಕಲ್ಪಿಸಿದೆ. ಇದನ್ನೂ ಓದಿ: ಮಾಜಿ ಸಚಿವ ಕೆ.ಎಸ್‌ ಈಶ್ವರಪ್ಪ ವಿರುದ್ದ ಪ್ರಕರಣ ದಾಖಲು!

    ನಗರದ ಬಸವೇಶ್ವರ ವೃತ್ತದಲ್ಲಿ ನಾಲ್ಕು ಕಡೆ, ಗಂಜ್ ವೃತ್ತದಲ್ಲಿ ಎರಡು ಕಡೆಗಳಲ್ಲಿ ನೆರಳಿನ ಶೆಡ್ ನಿರ್ಮಿಸಲು ಜಿಲ್ಲಾಡಳಿತ ಮುಂದಾಗಿದೆ. ಅಲ್ಲದೆ ನರೆಗಾ ಕಾಮಗಾರಿ ನಡೆಯುವ ಸ್ಥಳಗಳಲ್ಲಿ, ಕಟ್ಟಡ ಕಾಮಗಾರಿಗಳು ನಡೆಯುವ ಸ್ಥಳದಲ್ಲೂ ನೆರಳು, ನೀರಿನ ವ್ಯವಸ್ಥೆ ಮಾಡುವಂತೆ ಜಿಲ್ಲಾಧಿಕಾರಿ ಚಂದ್ರಶೇಖರ ನಾಯಕ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಇದನ್ನೂ ಓದಿ: ಖಾಸಗಿ ಬಸ್ ಪಲ್ಟಿ- ಮೂವರ ದುರ್ಮರಣ, 38 ಮಂದಿಗೆ ಗಾಯ

    ಒಟ್ಟಲ್ಲಿ ರಾಯಚೂರು ಜನರಿಗೆ ದಿನ ಬೆಳಗಾದರೆ ಬಿಸಿಲಿನ ಭಯ ಕಾಡುತ್ತಿದೆ. ಬೆಳಗ್ಗೆ 11 ಗಂಟೆಯಿಂದ ಸಂಜೆ 4:30 ವರೆಗೂ ಬಿಸಿಲು ತನ್ನ ರುದ್ರ ನರ್ತನ ತೋರುತ್ತಿದೆ. ಹೀಗಾಗಿ ವೈದ್ಯರು ಹಾಗೂ ಜಿಲ್ಲಾಡಳಿತ ಅದಷ್ಟು ಬಿಸಿಲಿನಿಂದ ದೂರ ಇರಲು ಜಿಲ್ಲೆಯ ಜನರಿಗೆ ಎಚ್ಚರಿಕೆ ನೀಡುತ್ತಿದ್ದಾರೆ. ಇದನ್ನೂ ಓದಿ: ಮುಂಜಾನೆ ಬೆಂಗಳೂರಿನ ಟೈಯರ್ ಗೋಡೌನ್‍ನಲ್ಲಿ ಅಗ್ನಿ ಅವಘಡ

  • ಬಿಸಿಲಿನ ಬೇಗೆಗೆ ಬೆಂಗಳೂರು ತತ್ತರ – 8 ವಲಯಗಳಲ್ಲಿ ದಾಖಲೆಯ ತಾಪಮಾನ

    ಬಿಸಿಲಿನ ಬೇಗೆಗೆ ಬೆಂಗಳೂರು ತತ್ತರ – 8 ವಲಯಗಳಲ್ಲಿ ದಾಖಲೆಯ ತಾಪಮಾನ

    ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (Bengaluru) ದಾಖಲೆಯ ತಾಪಮಾನ ಏರಿಕೆಯಾಗಿದೆ. ಮೂರು ವರ್ಷಗಳ ದಾಖಲೆ ಸರಿಗಟ್ಟಿದೆ. ಬರೋಬ್ಬರಿ 36 ರಿಂದ 37 ಡಿಗ್ರಿ ಸೆಲ್ಸಿಯಸ್‌ವರೆಗೆ ತಾಪಮಾನ ಏರಿಕೆಯಾಗಿದೆ. ಬಿಸಿಲಿನ ಬೇಗೆಗೆ ಬೆಂಗಳೂರು ಜನ ತತ್ತರಿಸಿ ಹೋಗಿದ್ದಾರೆ. ಒಟ್ಟು ಬೆಂಗಳೂರಿನಲ್ಲಿ 36 ರಿಂದ 37 ಡಿಗ್ರಿ ಸೆಲ್ಸಿಯಸ್ ತಾಪಮಾನ ಆದರೆ ಬೆಂಗಳೂರಿನ ಎಂಟು ವಲಯಗಳಲ್ಲಿ ತಾಪಮಾನ ದಾಖಲೆ ಬರೆದಿದೆ.

    ಎಲ್ಲಿ ಎಷ್ಟು ತಾಪಮಾನ?
    ಆರ್‌ಆರ್ ನಗರ – 38.60 ಡಿಗ್ರಿ ಸೆಲ್ಸಿಯಸ್
    ಬೆಂಗಳೂರು ಪೂರ್ವ- 37 ಡಿಗ್ರಿ ಸೆಲ್ಸಿಯಸ್
    ಯಲಹಂಕ – 34.90 ಡಿಗ್ರಿ ಸೆಲ್ಸಿಯಸ್
    ಬೆಂಗಳೂರು ದಕ್ಷಿಣ – 35.90 ಡಿಗ್ರಿ ಸೆಲ್ಸಿಯಸ್
    ದಾಸರಹಳ್ಳಿ – 36.60 ಡಿಗ್ರಿ ಸೆಲ್ಸಿಯಸ್
    ಬೊಮ್ಮನಹಳ್ಳಿ – 36.70%
    ಮಹಾದೇವಪುರ – 34.80 ಡಿಗ್ರಿ ಸೆಲ್ಸಿಯಸ್
    ಪಶ್ಚಿಮ ವಲಯ – 35.40 ಡಿಗ್ರಿ ಸೆಲ್ಸಿಯಸ್

    weather

    ಬೆಂಗಳೂರಿನಲ್ಲಿ ಎಲ್ಲೆಲ್ಲಿ ಅಂತರ್ಜಲ ಕುಸಿದಿದೆ. ಮರ ಗಿಡಗಳು ಕಡಿಮೆ ಇದೆಯೋ ಅಲ್ಲಿ ತಾಪಮಾನ (Temperature) ಏರಿಕೆ ಆಗಿದೆ. ಎಲ್ಲೆಲ್ಲಿ ಮರ ಗಿಡಗಳು ಇವೆ ಆ ಭಾಗದಲ್ಲಿ ತಾಪಮಾನ ಕಡಿಮೆ ಇದೆ. ಗಾಳಿಯ ವೇಗ ಕೂಡ ಕಡಿಮೆ ಇದೆ. ಜನರು ಕೂಡ ಪರಿಸರ ಸಂರಕ್ಷಿಸುವ ಕೆಲಸ ಮಾಡಬೇಕು. ಬಿಸಿಲಿನಿಂದ ಎಚ್ಚರ ವಹಿಸಬೇಕು. ಇದನ್ನೂ ಓದಿ: ತೀವ್ರ ಬರ – ಯಾದಗಿರಿ ಜಿಲ್ಲೆಯ 65 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ

    ಒಟ್ಟಾರೆ ಬೆಂಗಳೂರಿನ ತಾಪಮಾನ ಅಲ್ಲದೇ ವಲಯಗಳಲ್ಲೂ ತಾಪಮಾನ ಏರಿಕೆ ಆಗಿದೆ. ಹೀಗಾಗಿ ಜನರು ಕೂಡ ಎಚ್ಚರಿಕೆ ವಹಿಸಬೇಕಿದೆ. ಸಮೃದ್ಧಿ ಮಳೆ ಆದರೆ ತಾಪಮಾನ ತಗ್ಗಲಿದೆ. ವರುಣ ದೇವ ಯಾವಾಗ ಕರುಣಿಸಲಿದ್ದಾನೋ ಕಾದು ನೋಡಬೇಕಿದೆ. ಇದನ್ನೂ ಓದಿ: ಬಂದ ದಾರಿಗಿಲ್ಲ ಸುಂಕ – ದೆಹಲಿಯಲ್ಲಿ ಈಶ್ವರಪ್ಪ ಭೇಟಿಯಾಗದ ಅಮಿತ್ ಶಾ