Tag: ಬಿಸಿ ಗಾಳಿ

  • ತೀವ್ರವಾದ ಬಿಸಿ ಗಾಳಿ- ಜಾರ್ಖಂಡ್‌ನಲ್ಲಿ 8 ತರಗತಿವರೆಗೆ ಇಂದಿನಿಂದ ರಜೆ ಘೋಷಣೆ

    ತೀವ್ರವಾದ ಬಿಸಿ ಗಾಳಿ- ಜಾರ್ಖಂಡ್‌ನಲ್ಲಿ 8 ತರಗತಿವರೆಗೆ ಇಂದಿನಿಂದ ರಜೆ ಘೋಷಣೆ

    ರಾಂಚಿ: ಜಾರ್ಖಂಡ್‌ನಲ್ಲಿ (Jharkhand) ತೀವ್ರವಾದ ಬಿಸಿ ಗಾಳಿ ಬೀಸುತ್ತಿರುವ ಹಿನ್ನೆಲೆಯಲ್ಲಿ ಇಂದಿನಿಂದ ರಾಜ್ಯಾದ್ಯಂತ ಸರ್ಕಾರಿ ಮತ್ತು ಖಾಸಗಿ ಶಾಲೆಗಳ 8 ತರಗತಿವರೆಗೆ ರಜೆ ಘೋಷಣೆ ಮಾಡಲಾಗಿದೆ. ಮುಂದಿನ ಸೂಚನೆ ಬರುವವರೆಗೂ ಇದು ಜಾರಿಯಲ್ಲಿರುವುದಾಗಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಕಾರ್ಯದರ್ಶಿ ಉಮಾ ಶಂಕರ್ ಸಿಂಗ್ ಹೊರಡಿಸಿದ ಆದೇಶದಲ್ಲಿ ತಿಳಿಸಲಾಗಿದೆ.

    ಸರ್ಕಾರಿ, ಖಾಸಗಿ, ಅನುದಾನಿತ ಮತ್ತು ಅನುದಾನರಹಿತ ಸೇರಿದಂತೆ ಎಲ್ಲಾ ವರ್ಗದ ಶಾಲೆಗಳಿಗೆ ಇದು ಅನ್ವಯಿಸುತ್ತದೆ. ಆದರೆ ಸರ್ಕಾರಿ, ಸರ್ಕಾರೇತರ ಅನುದಾನಿತ ಮತ್ತು ಅನುದಾನರಹಿತ ಶಾಲೆಗಳ ಶಿಕ್ಷಕರು ಮತ್ತು ಬೋಧಕೇತರ ಸಿಬ್ಬಂದಿಗೆ ಅನ್ವಯಿಸುವುದಿಲ್ಲ ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ. ಇದನ್ನೂ ಓದಿ: ತೀವ್ರವಾಗಿರುವ ಬಿಸಿಲಿನಿಂದ ನಿಮ್ಮನ್ನು ನೀವು ಹೀಗೆ ರಕ್ಷಿಸಿಕೊಳ್ಳಿ

    ಸಮಯ ಬದಲಾವಣೆ: ಪ್ರತಿದಿನ ಶಾಲೆಗೆ ಹಾಜರಾಗಬೇಕಾದ ಶಿಕ್ಷಕರು ಮತ್ತು ಬೋಧಕೇತರ ಸಿಬ್ಬಂದಿಗೆ ಬೇಸಿಗೆ ರಜೆಯ ಬಗ್ಗೆ ಪ್ರತ್ಯೇಕ ಆದೇಶವನ್ನು ನೀಡಲಾಗುವುದು ಎಂದು ಅದು ತಿಳಿಸಿದೆ. 9 ರಿಂದ 12 ರವರೆಗಿನ ತರಗತಿಗಳು ಮುಂದುವರಿಯುತ್ತದೆ. ಅವರು ಪ್ರಾರ್ಥನೆ, ಕ್ರೀಡೆಗಳು ಮತ್ತು ಇತರ ಚಟುವಟಿಕೆಗಳನ್ನು ಹೊರತುಪಡಿಸಿ ಬೆಳಗ್ಗೆ 7 ರಿಂದ 11.30 ರವರೆಗೆ ತರಗತಿಗಳು ನಡೆಯುತ್ತವೆ.

    ಹವಾಮಾನ ಇಲಾಖೆಯು ಜಾರ್ಖಂಡ್‌ನ 13 ಜಿಲ್ಲೆಗಳಿಗೆ ಏಪ್ರಿಲ್ 30 ಮತ್ತು ಮೇ 1 ರಂದು ಬಿಸಿಗಾಳಿ ಎಚ್ಚರಿಕೆಯನ್ನು ನೀಡಿದೆ. ಭಾರತದ ಹವಾಮಾನ ಇಲಾಖೆ (IMD) ಪೂರ್ವ ಭಾರತದಲ್ಲಿ ತಾಪಮಾನದಲ್ಲಿ ಮತ್ತಷ್ಟು ಏರಿಕೆಯಾಗುವ ಮುನ್ಸೂಚನೆ ನೀಡಿದೆ. ಅಲ್ಲದೇ ಮುಂದಿನ ದಿನಗಳಲ್ಲಿ ಪೂರ್ವ ಭಾರತದಾದ್ಯಂತ ತಾಪಮಾನ 44 ಡಿಗ್ರಿ ಸೆಲ್ಸಿಯಸ್ ತಲುಪಬಹುದು ಎಂದು ಎಚ್ಚರಿಕೆ ನೀಡಿದೆ.

  • ಭಾರತದ ಅತಿ ಹೆಚ್ಚು ಬಿಸಿಲು ಹೊಂದಿರುವ 15 ನಗರಗಳ ಪಟ್ಟಿ ಬಿಡುಗಡೆ

    ಭಾರತದ ಅತಿ ಹೆಚ್ಚು ಬಿಸಿಲು ಹೊಂದಿರುವ 15 ನಗರಗಳ ಪಟ್ಟಿ ಬಿಡುಗಡೆ

    ನವದೆಹಲಿ: ಬೇಸಿಗೆ ತಾಪಮಾನ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಬಿಸಿಲಿನ ಹೊಡೆತದಿಂದಾಗಿ ಜನರು ಮನೆಯಿಂದ ಹೊರ ಬರಲು ನೂರು ಬಾರಿ ಯೋಚಿಸುವಂತಾಗಿದೆ. ಶುಕ್ರವಾರ ಅತಿ ಹೆಚ್ಚು ಉಷ್ಣಾಂಶ ಹೊಂದಿರುವ 15 ನಗರಗಳ ಪಟ್ಟಿಯೊಂದು ಬಿಡುಗಡೆಗೊಂಡಿದೆ. ಶುಕ್ರವಾರ ಸಂಜೆ 7.30ರ ತಾಪಮಾನವನ್ನು ಗಣನೆಗೆ ತೆಗೆದುಕೊಂಡು ಈ ಪಟ್ಟಿಯನ್ನು ಬಿಡುಗಡೆಗೊಳಿಸಲಾಗಿದೆ. ಹವಾಮಾನಕ್ಕೆ ಸಂಬಂಧಿಸಿದ ಮಾಹಿತಿಯನ್ನು ನೀಡುವ ‘El Dordo’ ವೆಬ್‍ಸೈಟ್ ಈ ಪಟ್ಟಿಯನ್ನು ಪ್ರಕಟಿಸಿದೆ.

    ಇಎಲ್ ಡೊರಡೋ ವೆಬ್‍ಸೈಟ್ ಜಗತ್ತಿನ ಅತಿ ಹೆಚ್ಚು ಉಷ್ಣಾಂಶ ಹೊಂದಿರುವ 15 ನಗರಗಳು ಭಾರತದಲ್ಲಿದೆ ಎಂದು ಹೇಳಿದೆ. ಈ 15 ನಗರಗಳು ಮಧ್ಯ ಭಾರತ ಮತ್ತು ಆಸುಪಾಸಿನಲ್ಲಿವೆ. ಮೊದಲ ಸ್ಥಾನವನ್ನು ಮಧ್ಯ ಪ್ರದೇಶದ ಖರಗೋನ್ ನಗರ ಪಡೆದಿದೆ. ಇಲ್ಲಿ 46.6 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ.

    15 ನಗರಗಳು ಎಲ್ಲಿವೆ?
    15 ನಗರಗಳ ಪೈಕಿ 9 ಮಹಾರಾಷ್ಟ್ರ, 3 ಮಧ್ಯ ಪ್ರದೇಶ, 2 ಉತ್ತರ ಪ್ರದೇಶ ಮತ್ತು ಒಂದು ನಗರ ತೆಲಂಗಾಣದಲ್ಲಿದೆ. ಮಧ್ಯ ಪ್ರದೇಶದ ಖರಗೋನ್ (46.6), ಮಹಾರಾಷ್ಟ್ರದ ಅಕೋಲಾ (46.6), ಬ್ರಹ್ಮಪುರಿ (45.8), ಪರ್ಭಾನಿ (45.7) ಮತ್ತು ವಾರ್ಧಾ (45.7) ಕ್ರಮವಾಗಿ ಮೊದಲ ಐದು ಸ್ಥಾನಗಳಲ್ಲಿವೆ.

    ಮಹಾರಾಷ್ಟ್ರದ ಚಂದ್ರಾಪುರದ ವೈಲ್ಡ್ ಲೈಫ್ ಎನ್‍ಜಿಓ (Habitat Conservation Society) ಪ್ರಕಾರ, ನಗರದ 15 ಕಿ.ಮೀ. ಅಸುಪಾಸಿನಲ್ಲಿ ಸುಮಾರು ಬಿಸಿಲಿನ ಝಳಕ್ಕೆ 9 ಪಕ್ಷಿಗಳು ಮೃತಪಟ್ಟಿವೆ. ಕಲ್ಲಿದ್ದಲು ಗಣಿಗಾರಿಕೆ, ಶಾಖೋತ್ಪನ್ನ ಘಟಕ ಹಾಗೂ ಇತರೆ ಕೈಗಾರಿಕೆಗಳು ಇಲ್ಲಿ ಕೇಂದ್ರಿಕೃತವಾಗಿದ್ದರಿಂದ ತಾಪಮಾನದ ಹೆಚ್ಚಳವಾಗಲು ಕಾರಣವಾಗಿದೆ. ಇದೆಲ್ಲದರ ನೇರ ಪರಿಣಾಮ ಪಕ್ಷಿಗಳ ಮೇಲೆ ಉಂಟಾಗುತ್ತಿದೆ ಎಂದು ತಿಳಿಸಿದೆ.

    ಅಕೋಲಾ, ಅಮರಾವತಿ, ಚಂದ್ರಾಪುರ, ನಾಗ್ಪುರ, ಯವತ್ಮಾಲ ಮತ್ತು ವಾರ್ಧಾ ಜಿಲ್ಲೆಗಳಲ್ಲಿ ಮುಂದಿನ 5 ದಿನ ಬಿಸಿಗಾಳಿ ಬೀಸಲಿದೆ. ಈ ಜಿಲ್ಲೆಗಳಲ್ಲಿ ಅಂದಾಜು 45-47 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗುವ ಸಾಧ್ಯತೆಗಳಿವೆ ಎಂದು ಭಾರತದ ಹವಾಮಾನ ಇಲಾಖೆ (India Meteorological Department) ತಿಳಿಸಿದೆ.

  • ಉತ್ತರ ಭಾರತದ ಎಂಟು ರಾಜ್ಯಗಳಲ್ಲಿ ಬಿಸಿ ಬಿರುಗಾಳಿ ಸಹಿತ ಮಳೆ – 41 ಸಾವು

    ಉತ್ತರ ಭಾರತದ ಎಂಟು ರಾಜ್ಯಗಳಲ್ಲಿ ಬಿಸಿ ಬಿರುಗಾಳಿ ಸಹಿತ ಮಳೆ – 41 ಸಾವು

    ನವದೆಹಲಿ: ಮಂಗಳವಾರ ಉತ್ತರ ಭಾರತದ ಎಂಟು ರಾಜ್ಯಗಳಲ್ಲಿ ಹವಾಮಾನ ಬದಲಾಗಿದ್ದು, ಬಿರುಗಾಳಿಗೆ 41 ಜನರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಗುಜರಾತ್, ಮಹಾರಾಷ್ಟ್ರ, ಮಧ್ಯಪ್ರದೇಶ, ರಾಜಸ್ಥಾನ, ಜಾರ್ಖಂಡ್, ಹಿಮಾಚಲ ಪ್ರದೇಶ, ಹರಿಯಾಣ ಮತ್ತು ನವದೆಹಲಿಯಲ್ಲಿ ಬಿರುಗಾಳಿ ಜೊತೆ ಮಳೆರಾಯ ಅಬ್ಬರಿಸಿದ್ದಾನೆ. ಬುಧವಾರ ಮತ್ತು ಗುರುವಾರ ಸಹ ಇದೇ ರೀತಿ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

    ಮಾಧ್ಯಮಗಳ ಜೊತೆ ಮಾತನಾಡಿರುವ ಭಾರತೀಯ ಹವಾಮಾನ ವಿಭಾಗದ ನಿರ್ದೇಶಕ ಕೆ.ಜೆ.ರಮೇಶ್, ಕಳೆದ ಮೂರ್ನಾಲ್ಕು ದಿನಗಳಿಂದ ಪಾಕಿಸ್ತಾನದಿಂದ ಭಾರತದ ಪಶ್ಚಿಮ ಭಾಗ ಮಾರ್ಗವಾಗಿ ಬಿಸಿ ಗಾಳಿ ಬೀಸುತ್ತಿದೆ. ಇದು ಭಾರತದ ಮಧ್ಯಭಾಗದಿಂದ ಪಶ್ಚಿಮ ಬಂಗಾಳದ ಉತ್ತರ ಭಾಗದವರೆಗೂ ಬಿಸಿ ಗಾಳಿ ಬೀಸುವ ಸಾಧ್ಯತೆಗಳಿವೆ. ಗುಡುಗು, ಸಿಡಿಲು ಸಹಿತ ಬುಧವಾರ ಮತ್ತು ಗುರುವಾರ ಮಳೆ ಆಗಲಿದೆ. ಬಿಸಿಗಾಳಿ ಜೊತೆಯಲ್ಲಿಯೇ ಮಳೆ ಆಗಲಿದೆ ಎಂದು ತಿಳಿಸಿದ್ದಾರೆ.

    ಪ್ರಧಾನಿ ನರೇಂದ್ರ ಮೋದಿ ಕೂಡಲೇ ರಕ್ಷಣಾ ಕಾರ್ಯಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿ ಅಡಿಯಲ್ಲಿ ಮೃತರ ಕುಟುಂಬಸ್ಥರಿಗೆ 2 ಲಕ್ಷ ರೂ. ಮತ್ತು ಗಾಯಾಳುಗಳಿಗೆ 50 ಸಾವಿರ ರೂ. ಪರಿಹಾರವನ್ನು ನೀಡಬೇಕೆಂದು ಆದೇಶಿಸಿದ್ದಾರೆ.

    ರಾಜಸ್ಥಾನ 11, ಮಧ್ಯ ಪ್ರದೇಶ 16, ರಾಜಸ್ಥಾನ 7, ಪಂಜಾಬ್ 2, ಹರಿಯಾಣ 01 ಮತ್ತು ಜಾರ್ಖಂಡ್, ಮಹಾರಾಷ್ಟ್ರ, ಉತ್ತರ ಪ್ರದೇಶ, ಹಿಮಾಚಲದಲ್ಲಿ ಒಬ್ಬರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

  • ಇನ್ನೆರಡು ದಿನ ಹೆಚ್ಚಾಗಲಿದೆ ಬಿಸಿಗಾಳಿ ಪ್ರಭಾವ!

    ಇನ್ನೆರಡು ದಿನ ಹೆಚ್ಚಾಗಲಿದೆ ಬಿಸಿಗಾಳಿ ಪ್ರಭಾವ!

    ಬೆಂಗಳೂರು: ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದಲ್ಲಿ ಇನ್ನೆರಡು ದಿನಗಳಲ್ಲಿ ಬಿಸಿಗಾಳಿ ಪ್ರಭಾವ ಹೆಚ್ಚಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

    ತಮಿಳುನಾಡು, ಕೇರಳ, ಆಂಧ್ರದ ರಾಯಲ್ ಸೀಮಾ ಪ್ರದೇಶಗಳಲ್ಲಿ ಉಷ್ಣಾಂಶ ಹೆಚ್ಚಿದ್ದು ಈ ಭಾಗದಲ್ಲಿ 40 ಡಿಗ್ರಿಗೆ ಏರಿದೆ. ಈ ರಾಜ್ಯಗಳಿಗೆ ಹೊಂದಿ ಕೊಂಡಂತಿರುವ ಕರ್ನಾಟಕದ ಗಡಿ ಜಿಲ್ಲೆಗಳಾದ ಕಲಬುರಗಿ, ಕೋಲಾರ, ಚಾಮರಾಜನಗರ ಭಾಗಗಳಲ್ಲಿ ವಾಡಿಕೆಗಿಂತ 2 ರಿಂದ 3 ಡಿಗ್ರಿ ಉಷ್ಣಾಂಶ ಹೆಚ್ಚಾಗಲಿದೆ ಎಂದು ಎಚ್ಚರಿಸಿದೆ.

    ಬಿಸಿಗಾಳಿ ತಾಪದಿಂದ ಜನರು ತತ್ತರಿಸಿ ಹೋಗಿದ್ದಾರೆ. ಬೇಸಿಗೆ ಆರಂಭದಲ್ಲೇ ಬಿಸಿಲಿನ ಪ್ರಭಾವ ಹೆಚ್ಚಾಗಿದ್ದು, ಉತ್ತರ ಭಾರತದಲ್ಲಿ ಚಳಿಗಾಲ ಹೆಚ್ಚುವರಿ ಅವಧಿಗೆ ವಿಸ್ತರಣೆಗೆ ಕಾರಣವಾಗಿದೆ. ಜಮ್ಮು ಕಾಶ್ಮೀರದ ಹಿಮ ಪರ್ವತ ಶ್ರೇಣಿಗಳಲ್ಲಿ ಹಿಮ ಸುರಿಯುತ್ತಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv