Tag: ಬಿಹಾರಿ

  • ಟಿವಿ ಹಾಕ್ಸಿ, ಊಟ ಬೇರೆ ಕೊಡಿ – ಕ್ವಾರಂಟೈನ್‍ನಲ್ಲಿರೋ ಬಿಹಾರಿಗಳಿಂದ ಬೇಡಿಕೆ

    ಟಿವಿ ಹಾಕ್ಸಿ, ಊಟ ಬೇರೆ ಕೊಡಿ – ಕ್ವಾರಂಟೈನ್‍ನಲ್ಲಿರೋ ಬಿಹಾರಿಗಳಿಂದ ಬೇಡಿಕೆ

    ಬೆಂಗಳೂರು: ಕ್ವಾರಂಟೈನ್ ನಲ್ಲಿರುವ ಹೊಂಗಸಂದ್ರದ ಬಿಹಾರಿಗಳು ಸಿಕ್ಕಾಪಟ್ಟೆ ಬೇಡಿಕೆ ಇಡುತ್ತಿದ್ದು, ಇವರ ಬೇಡಿಕೆ ಕೇಳಿ ಬಿಬಿಎಂಪಿ ಸಿಬ್ಬಂದಿ ರೋಸಿ ಹೋಗಿದ್ದಾರೆ.

    ಹೊಂಗಸಂದ್ರ- ಎಲೆಕ್ಟ್ರಾನಿಕ್ ಸಿಟಿ ಮಧ್ಯ ಭಾಗದಲ್ಲಿ ಬರುವ ಮಣಿಪಾಲ್ ಕೌಂಟಿ ಹೋಟೆಲ್ ನಲ್ಲಿ ಬಿಹಾರಿ ಮೂಲದ ವ್ಯಕ್ತಿಗಳನ್ನು ಕ್ವಾರಂಟೈನ್ ಮಾಡಲಾಗಿದೆ. ಈಗ ಟಿವಿ ಹಾಕಿಸಿ ಊಟ ಬೇರೆ ಕೊಡಿ ಎಂದು ಬಿಹಾರಿಗಳು ದಿನಕ್ಕೊಂದು ಬೇಡಿಕೆ ಇಟ್ಟಿದ್ದಾರೆ ಎನ್ನುವ ವಿಚಾರ ಮೂಲಗಳಿಂದ ತಿಳಿದು ಬಂದಿದೆ.

    ಈ ಬೇಡಿಕೆಗೆ ರೋಸಿ ಹೋದ ಬಿಬಿಎಂಪಿ ಅಧಿಕಾರಿಗಳು ಸೋಮವಾರ ಕೌನ್ಸಿಲಿಂಗ್ ಮಾಡಿಸಿದ್ದರು. ಈಗ ಹೆಚ್ಚುವರಿ ಪೊಲೀಸ್ ಭದ್ರತೆಯ ಬಗ್ಗೆಯೂ ಚಿಂತನೆ ನಡೆಸಿದ್ದಾರೆ.

    ಬಿಹಾರಿ ಕಾರ್ಮಿಕನಿಂದ 29 ಮಂದಿಗೆ ಸೋಂಕು ಹರಡಿದ್ದು, ಸೋಂಕಿತರ ಜೊತೆ ಸಂಪರ್ಕ ಹೊಂದಿರುವ 212 ಮಂದಿಯನ್ನು ಕ್ವಾರಂಟೈನ್ ಮಾಡಿ, ಮೂರು ಹೊತ್ತು ಊಟ, ಕುಡಿಯಲು ನೀರಿನ ಬಾಟಲ್ ಸೇರಿದಂತೆ ಬಿಬಿಎಂಪಿ ಎಲ್ಲ ವ್ಯವಸ್ಥೆ ಮಾಡಿದೆ.

    ಹೊಂಗಸಂದ್ರದಲ್ಲಿ ಕಳೆದ ಎರಡು ದಿನಗಳಿಂದ ಯಾವುದೇ ಹೊಸ ಪ್ರಕರಣಗಳು ದಾಖಲಾಗಿಲ್ಲ. ಕ್ವಾರಂಟೈನ್ ಮಾಡಲಾದ 212 ಮಂದಿಯಲ್ಲಿ ಪ್ರಾಥಮಿಕ 175 ಹಾಗೂ 63 ಜನರನ್ನು ದ್ವಿತೀಯ ಸಂಪರ್ಕಿತರು ಎಂದು ಗುರುತಿಸಿಲಾಗಿದ್ದು, ಯಾರಿಗೂ ಸೋಂಕಿನ ಲಕ್ಷಣ ಕಾಣಿಸಿಕೊಂಡಿಲ್ಲ.

  • ಗುಜರಾತ್‍ನಲ್ಲಿ ಮುಂದುವರಿದ ಹಿಂಸಾಚಾರ- ಬಿಹಾರಿ ಯುವಕನ ಕೊಲೆ

    ಗುಜರಾತ್‍ನಲ್ಲಿ ಮುಂದುವರಿದ ಹಿಂಸಾಚಾರ- ಬಿಹಾರಿ ಯುವಕನ ಕೊಲೆ

    ಗಾಂಧಿನಗರ: ಅಪ್ರಾಪ್ತ ಬಾಲಕಿ ಅತ್ಯಾಚಾರ ಪ್ರಕರಣದ ಸಂಬಂಧಿಸಿದಂತೆ ಗುಜರಾತ್‍ನಲ್ಲಿ ಮತ್ತೆ ಹಿಂಸಾಚಾರ ಮುಂದುವರಿದಿದ್ದು, ಈ ಬಾರಿ ಬಿಹಾರಿ ಯುವಕನನ್ನು ದುಷ್ಕರ್ಮಿಗಳ ಗುಂಪೊಂದು ರಾಡ್‍ನಿಂದ ಹಲ್ಲೆ ಮಾಡಿ ಕೊಲೆ ಮಾಡಿದೆ.

    ಅಮರ್‍ಜಿತ್ ಕುಮಾರ್ ಕೊಲೆಯಾದ ದುರ್ದೈವಿ. ಗುಜರಾತ್‍ನ ಗಾಯಾ ಕೋಡಿಯಾ ಎಂಬ ಹಳ್ಳಿಯಲ್ಲಿ ಘಟನೆ ನಡೆದಿದೆ. ಅಮರ್‍ಜಿತ್ ಕುಮಾರ್ ಪಾಂಡೇಶ್ವರಿ ನಗರದ ಮಿಲ್ ಒಂದರಲ್ಲಿ ಕೆಲಸ ಮಾಡುತ್ತಿದ್ದರು. ಎಂದಿನಂತೆ ಶುಕ್ರವಾರ ರಾತ್ರಿ ಕೆಲಸ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದರು. ಈ ವೇಳೆ ಆತನನ್ನು ತಡೆದ ದುಷ್ಕರ್ಮಿಗಳು ರಾಡ್‍ನಿಂದ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ.

    ಅಮರ್‍ಜಿತ್ ತನ್ನ 17ನೇ ವಯಸ್ಸಿನಲ್ಲಿ ಕೆಲಸ ಅರಸಿ ಗುಜರಾತ್‍ಗೆ ಬಂದಿದ್ದ. ಇಲ್ಲಿಯೇ ಒಂದು ಮನೆ ನಿರ್ಮಾಣ ಮಾಡಿಕೊಳ್ಳುವ ಉದ್ದೇಶದಿಂದ ದುಡಿಯುತ್ತಿದ್ದ. ದುಷ್ಕರ್ಮಿಗಳ ಹೇಯ ಕೃತ್ಯದಿಂದ ಆತನ ಪತ್ನಿ ಹಾಗೂ ಮಕ್ಕಳು ಬೀದಿ ಪಾಲಾಗಿದ್ದಾರೆ.

    ಕೇಂದ್ರ ಹಾಗೂ ಗುಜರಾತ್ ಬಿಜೆಪಿ ಸರ್ಕಾರ, ಬಿಹಾರ್ ಆಡಳಿತಾಧಿಕಾರಿಗಳ ಬೇಜವಾಬ್ದಾರಿಯಿಂದ ಇಂತಹ ಕೃತ್ಯಗಳು ಪದೇ ಪದೇ ನಡೆಯುತ್ತಿವೆ. ಈ ಕುರಿತು ಸೂಕ್ತ ಕ್ರಮಕ್ಕೆ ಮುಂದಾಗಬೇಕು ಅಂತಾ ಅಮರ್‍ಜಿತ್ ತಂದೆ ರಾಜ್‍ದೇವ್ ಸಿಂಗ್ ಒತ್ತಾಯಿಸಿದ್ದಾರೆ.

    ಈ ಹಿಂದೆ ಆಗಿದ್ದೇನು?:
    ಸಬರ್ಕಾಂತಾ ಜಿಲ್ಲೆಯಲ್ಲಿ ಬಿಹಾರಿ ಯುವಕನೊಬ್ಬ 14 ತಿಂಗಳ ಗುಜರಾತಿ ಕಂದಮ್ಮನ ಮೇಲೆ ಕಳೆದ ಸೆಪ್ಟೆಂಬರ್ 28 ರಂದು ಅತ್ಯಾಚಾರ ಎಸಗಿದ್ದ. ಈ ಸುದ್ದಿ ಹಳ್ಳಿ-ಹಳ್ಳಿಗಳಿಗೆ ತಲುಪಿ, ಗುಜರಾತಿಗರು ಹಾಗೂ ಬಿಹಾರಿಗಳು ಪರಸ್ಪರ ಹಿಂಸಾಕೃತ್ಯಕ್ಕೆ ಮುಂದಾದರು. ಇದರಿಂದ ಭಯಗೊಂಡ 15 ಸಾವಿರ ವಲಸಿಗರು ಗುಜರಾತ್ ತೊರೆದಿದ್ದರು.

    ಗಲಭೆ ಹಾಗೂ ಮಾರಣಾಂತಿಕ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ 70 ಜನರರನ್ನು ಬಂಧಿಸಿದ್ದು, ಈವರೆಗೆ ಒಟ್ಟು 600 ಜನರನ್ನು ಪೊಲೀಸರು ಬಂಧಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv