– ಬಿಹಾರಕ್ಕೆ ಮೋದಿಯ ಆಶೀರ್ವಾದ ಇದೆ ಎಂದ ಗೃಹಸಚಿವ
ಪಾಟ್ನಾ: ಇಲ್ಲಿ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ, ಅಲ್ಲಿ ಪ್ರಧಾನಮಂತ್ರಿ ಹುದ್ದೆಯೂ ಖಾಲಿ ಇಲ್ಲ. ಇಲ್ಲಿ ನಿತೀಶ್ ಕುಮಾರ್ ಇದ್ದಾರೆ, ಅಲ್ಲಿ ಮೋದಿ ಇದ್ದಾರೆ. ರಾಜ್ಯದಲ್ಲಿ ಸದ್ಯ ಯಾವುದೇ ಹುದ್ದೆ ಖಾಲಿ ಇಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಈ ಮೂಲಕ ಬಿಹಾರದಲ್ಲಿ ಎನ್‌ಡಿಎ ಮುಖ್ಯಮಂತ್ರಿ ಅಭ್ಯರ್ಥಿ ಗೊಂದಲಕ್ಕೆ ತೆರೆ ಎಳೆದಿದ್ದಾರೆ.
Live from News18 conclave in Patna, Bihar. https://t.co/VRNboGqV0q
— Amit Shah (@AmitShah) October 29, 2025
ಬಿಹಾರ ವಿಧಾನಸಭೆ ಚುನಾವಣೆ ಹಿನ್ನೆಲೆ ಸಾರ್ವಜನಿಕ ರ‍್ಯಾಲಿ ಉದ್ದೇಶಿಸಿ ಮಾತನಾಡಿದ ಅವರು, ಪ್ರಧಾನಿಯಾಗಿ ನರೇಂದ್ರ ಮೋದಿ, ಸಿಎಂ ಆಗಿ ನಿತೀಶ್ ಮುಂದುವರಿಯಲಿದ್ದಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಮೋದಿ ಮತಕ್ಕಾಗಿ ಡ್ಯಾನ್ಸ್ & ಡ್ರಾಮಾ, ಬೇಕಿದ್ರೆ ಭರತನಾಟ್ಯನೂ ಮಾಡ್ತಾರೆ – ರಾಹುಲ್ ಗಾಂಧಿ ಲೇವಡಿ
ಮಾಜಿ ಮುಖ್ಯಮಂತ್ರಿ ಕರ್ಪೂರಿ ಠಾಕೂರ್ ಅವರಿಗೆ ಭಾರತ ರತ್ನ ನೀಡುವ ಮೂಲಕ ಬಿಹಾರದ ವರ್ಚಸ್ಸನ್ನು ಹೆಚ್ಚಿಸಿದ್ದಕ್ಕಾಗಿ ಮತ್ತು ರಾಜ್ಯದ ಪರಂಪರೆಯನ್ನು ಗೌರವಿಸಿದ್ದಕ್ಕಾಗಿ ಪ್ರಧಾನಿ ಮೋದಿಯವರನ್ನು ಶ್ಲಾಘಿಸಿದ ಅಮಿತ್ ಶಾ, ಈ ನಿರ್ಧಾರ ಭಾರತದ ಪ್ರಜಾಪ್ರಭುತ್ವ ಮತ್ತು ಸಾಮಾಜಿಕ ಅಭಿವೃದ್ಧಿಗೆ ಬಿಹಾರದ ಕೊಡುಗೆಗೆ ಕೇಂದ್ರದ ಗೌರವವನ್ನು ಪ್ರತಿಬಿಂಬಿಸುತ್ತದೆ ಎಂದು ಹೇಳಿದರು.
ಪಹಲ್ಗಾಮ್ ದಾಳಿಯ ನಂತರ, ಪ್ರಧಾನಿ ಮೋದಿ ಆಪರೇಷನ್ ಸಿಂಧೂರ್ ಅನ್ನು ಪ್ರಾರಂಭಿಸಿದರು, ಕೇಂದ್ರ ಸರ್ಕಾರವು ಪಿಎಫ್‌ಐ ನಿಷೇಧಿಸಿ ಅದರ ಸದಸ್ಯರನ್ನ ವಶಕ್ಕೆ ತೆಗೆದುಕೊಂಡಿತು. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎಗೆ ನಿರ್ಣಾಯಕ ಗೆಲುವು ನೀಡಬೇಕು ಎಂದು ಮನವಿ ಮಾಡಿದರು. ಇದನ್ನೂ ಓದಿ: ಅಯೋಧ್ಯೆ ರಾಮಮಂದಿರಕ್ಕೆ 3 ಸಾವಿರ ಕೋಟಿ ದೇಣಿಗೆ; 1500 ಕೋಟಿ ರೂ. ಖರ್ಚು

ರಾಮ ಮಂದಿರ ನಿರ್ಮಾಣದ ಬಗ್ಗೆ ಮಾತನಾಡಿದ ಶಾ, ವರ್ಷಗಳ ಕಾಲ ಶ್ರೀರಾಮನು ಒಂದು ಗುಡಾರದಲ್ಲಿ ವಾಸಿಸುತ್ತಿದ್ದನು. ಕಾಂಗ್ರೆಸ್, ಟಿಎಂಸಿ ಮತ್ತು ಸಮಾಜವಾದಿ ಪಕ್ಷಗಳು ದೇವಾಲಯವನ್ನ ನಿರ್ಮಿಸಲು ಎಂದಿಗೂ ಅವಕಾಶ ನೀಡಲಿಲ್ಲ. ಆದರೆ ಪ್ರಧಾನಿ ಮೋದಿ ಅಧಿಕಾರಕ್ಕೆ ಬಂದಾಗ ಆ ಭರವಸೆಯನ್ನ ಈಡೇರಿಸಿದರು. ಈಗ, ನಾವು ಮಿಥಿಲಾದಲ್ಲಿ ಸೀತಾ ದೇವಿಗೆ ದೇವಾಲಯವನ್ನ ನಿರ್ಮಿಸುತ್ತೇವೆ ಅಂತ ತಿಳಿಸಿದ್ರು.
ಶಾಂತಿಪುರದಲ್ಲಿ ಮತ್ತೊಂದು ರ‍್ಯಾಲಿ ಉದ್ದೇಶಿಸಿ ಮಾತನಾಡಿ ಅಮಿತ್ ಶಾ, ಬಿಹಾರವು ನಿತೀಶ್ ಕುಮಾರ್ ಮತ್ತು ಚಿರಾಗ್ ಪಾಸ್ವಾನ್ ಅವರ ನಾಯಕತ್ವವನ್ನು ಹೊಂದಿದೆ. ಮೋದಿಯವರ ಆಶೀರ್ವಾದ ಇದೆ. ಇದು ರಾಜ್ಯದಲ್ಲಿ ಎನ್‌ಡಿಎ ಸ್ಥಾನವನ್ನ ಬಲಪಡಿಸಲು ಸಹಾಯ ಮಾಡುತ್ತದೆ ಅಂತ ಶ್ಲಾಘಿಸಿದ್ರು. ಇದನ್ನೂ ಓದಿ: ಏರ್ ಇಂಡಿಯಾ 4,000 ಕೋಟಿ ನಷ್ಟ ಅನುಭವಿಸಲು ಪಾಕಿಸ್ತಾನ ಕಾರಣ – ಸಿಇಒ ಸ್ಪೋಟಕ ಮಾಹಿತಿ











