Tag: ಬಿ.ಆರ್‌ ಗವಾಯಿ

  • ನ.23ಕ್ಕೆ ಬಿ.ಆರ್ ಗವಾಯಿ ನಿವೃತ್ತಿ – ಮುಂದಿನ ಸಿಜೆಐ ನೇಮಕ ಪ್ರಕ್ರಿಯೆಗೆ ಚಾಲನೆ

    ನ.23ಕ್ಕೆ ಬಿ.ಆರ್ ಗವಾಯಿ ನಿವೃತ್ತಿ – ಮುಂದಿನ ಸಿಜೆಐ ನೇಮಕ ಪ್ರಕ್ರಿಯೆಗೆ ಚಾಲನೆ

    ನವದೆಹಲಿ: ಸುಪ್ರೀಂಕೋರ್ಟ್ (Supreme Court) ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ (BR Gavai) ಅವರು ನ.23ರಂದು ನಿವೃತ್ತಿಯಾಗಲಿದ್ದು, ಈ ಹಿನ್ನೆಲೆ ಮುಂದಿನ ಮುಖ್ಯ ನ್ಯಾಯಮೂರ್ತಿ ಆಯ್ಕೆ ಪ್ರಕ್ರಿಯೆಗೆ ಇದೀಗ ಚಾಲನೆ ಸಿಕ್ಕಿದೆ.

    ಸಿಜೆಐ ಬಿಆರ್ ಗವಾಯಿ ಅವರಿಗೆ ಪತ್ರ ಬರೆದಿರೋ ಕೇಂದ್ರ ಸರ್ಕಾರ, ತಮ್ಮ ಉತ್ತರಾಧಿಕಾರಿಯ ನೇಮಕಕ್ಕೆ ಶಿಫಾರಸು ಕೋರಿದೆ. ಈ ಪ್ರಕ್ರಿಯೆಯು ಮುಂದಿನ ಸಿಜೆಐ ನೇಮಕಾತಿ ಕಾರ್ಯವಿಧಾನಕ್ಕೆ ಚಾಲನೆ ಕೊಟ್ಟಿದೆ. ಇದು ಸಾಂಪ್ರದಾಯಿಕವಾಗಿ ಹಾಲಿ ಸಿಜೆಐ ಹುದ್ದೆಯಿಂದ ನಿವೃತ್ತಿಯಾಗುವ ಸುಮಾರು ಒಂದು ತಿಂಗಳ ಮೊದಲು ತೆಗೆದುಕೊಳ್ಳಲಾಗುವ ಹೆಜ್ಜೆಯಾಗಿದೆ.ಇದನ್ನೂ ಓದಿ:ಉತ್ತರಾಧಿಕಾರ ಪ್ರಶ್ನೆ ಎತ್ತಿದ ಯತೀಂದ್ರಗೆ ಫಜೀತಿ – ಹೈಕಮಾಂಡ್‌ಗೆ ಕೆಪಿಸಿಸಿ ವರದಿ ರವಾನೆ

    ಹಿರಿತನದ ಪ್ರಕಾರ, ನ್ಯಾಯಮೂರ್ತಿ ಸೂರ್ಯಕಾಂತ್ ಭಾರತದ 53ನೇ ಮುಖ್ಯ ನ್ಯಾಯಮೂರ್ತಿಯಾಗಲು ಮುಂದಿನ ಸ್ಥಾನದಲ್ಲಿದ್ದಾರೆ. ನ್ಯಾಯಮೂರ್ತಿ ಗವಾಯಿ ಅವರ ನಿವೃತ್ತಿಯ ನಂತರ ಅವರು ಅಧಿಕಾರ ವಹಿಸಿಕೊಳ್ಳುವ ನಿರೀಕ್ಷೆಯಿದೆ. ಪ್ರಸ್ತುತ ಭೂತಾನ್‌ಗೆ ನಾಲ್ಕು ದಿನಗಳ ಅಧಿಕೃತ ಭೇಟಿಯಲ್ಲಿರುವ ಸಿಜೆಐ ಗವಾಯಿ, ನವದೆಹಲಿಗೆ ಹಿಂದಿರುಗಿದ ನಂತರ ಕೇಂದ್ರ ಸರ್ಕಾರಕ್ಕೆ ತಮ್ಮ ಶಿಫಾರಸನ್ನು ಕಳುಹಿಸುವ ನಿರೀಕ್ಷೆಯಿದೆ.

    1962 ಫೆಬ್ರವರಿ 10ರಂದು ಹರಿಯಾಣದ ಹಿಸಾರ್‌ನಲ್ಲಿ ಜನಿಸಿದ ನ್ಯಾಯಮೂರ್ತಿ ಸೂರ್ಯಕಾಂತ್, 1984ರಲ್ಲಿ ಹಿಸಾರ್ ಜಿಲ್ಲಾ ನ್ಯಾಯಾಲಯದಲ್ಲಿ ತಮ್ಮ ವಕೀಲಿ ವೃತ್ತಿಯನ್ನು ಪ್ರಾರಂಭಿಸಿದರು. ಸಾಂವಿಧಾನಿಕ, ಸೇವಾ ಮತ್ತು ನಾಗರಿಕ ಕಾನೂನಿನಲ್ಲಿ ಪರಿಣತಿ ಹೊಂದಿರುವ ಅವರು ಹಲವಾರು ವಿಶ್ವವಿದ್ಯಾಲಯಗಳು, ಮಂಡಳಿಗಳು ಮತ್ತು ನಿಗಮಗಳನ್ನು ಪ್ರತಿನಿಧಿಸಿದ್ದರು. 2000ರಲ್ಲಿ ಹರಿಯಾಣದ ಅತ್ಯಂತ ಕಿರಿಯ ಅಡ್ವೊಕೇಟ್ ಜನರಲ್ ಆಗಿಯೂ ಸೇವೆ ಸಲ್ಲಿಸಿದರು.

    2004 ಜನವರಿ 9ರಂದು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ನ ಖಾಯಂ ನ್ಯಾಯಾಧೀಶರಾಗಿ ಬಡ್ತಿ ಪಡೆದರು. ಅಕ್ಟೋಬರ್ 5, 2018ರಿಂದ ಹಿಮಾಚಲ ಪ್ರದೇಶ ಹೈಕೋರ್ಟ್‌ನ ಮುಖ್ಯ ನ್ಯಾಯಾಧೀಶರಾಗಿ ಸೇವೆ ಸಲ್ಲಿಸಿದರು, ನಂತರ ಮೇ 24, 2019ರಂದು ಸುಪ್ರೀಂ ಕೋರ್ಟ್‌ ಬಡ್ತಿ ಪಡೆದರು. ನ್ಯಾಯಮೂರ್ತಿ ಸೂರ್ಯಕಾಂತ್ ಅವರು 2027ರ ಫೆಬ್ರವರಿ 9ರಂದು ನಿವೃತ್ತರಾಗಲಿದ್ದಾರೆ. ಈ ಮೂಲಕ ಅವರಿಗೆ ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಆಗಿ ಸುಮಾರು 15 ತಿಂಗಳ ಅಧಿಕಾರಾ ವಹಿಸಿಕೊಳ್ಳಲಿದ್ದಾರೆ.ಇದನ್ನೂ ಓದಿ: Karnool Bus Fire | ಮೃತರ ಕುಟುಂಬಸ್ಥರಿಗೆ ಕೇಂದ್ರದಿಂದ ತಲಾ 2 ಲಕ್ಷ ಪರಿಹಾರ ಘೋಷಣೆ

  • ಸುಪ್ರೀಂ ಸಿಜೆಐ ಮೇಲೆ ಶೂ ಎಸೆದ ವಕೀಲ – ಪ್ರತಿಯೊಬ್ಬ ಭಾರತೀಯನನ್ನೂ ಕೆರಳಿಸಿದೆ; ಮೋದಿ ತೀವ್ರ ಖಂಡನೆ

    ಸುಪ್ರೀಂ ಸಿಜೆಐ ಮೇಲೆ ಶೂ ಎಸೆದ ವಕೀಲ – ಪ್ರತಿಯೊಬ್ಬ ಭಾರತೀಯನನ್ನೂ ಕೆರಳಿಸಿದೆ; ಮೋದಿ ತೀವ್ರ ಖಂಡನೆ

    – CJI ಗವಾಯಿ ಜೊತೆ ಮಾತನಾಡಿದ ಪ್ರಧಾನಿ

    ನವದೆಹಲಿ: ದೇಶದಲ್ಲೇ ಮೊದಲ ಬಾರಿಗೆ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್ ಗವಾಯಿ (BR Gavai) ಮೇಲೆ ವಕೀಲರೊಬ್ಬರು ಶೂ ಎಸೆದ ಆಘಾತಕಾರಿ ಘಟನೆ ನಡೆದಿದೆ. ಸುಪ್ರೀಂ ಕೋರ್ಟ್ ಆವರಣದಲ್ಲಿರುವ ಕೋರ್ಟ್ ಹಾಲ್-1ರಲ್ಲಿ ವಿಚಾರಣೆಯ ವೇಳೆ 71 ವರ್ಷದ ವಕೀಲ ಕಿಶೋರ್ ರಾಕೇಶ್ ಎಂಬುವವರು ಶೂ ಎಸೆದಿದ್ದಾರೆ. ಘಟನೆಗೆ ದೇಶವ್ಯಾಪಿ ಖಂಡನೆ ವ್ಯಕ್ತವಾಗಿದೆ. ಈ ಬೆನ್ನಲ್ಲೇ ಸಿಜೆಐ ಗವಾಯಿ ಅವರೊಂದಿಗೆ ಪ್ರಧಾನಿ ಮೋದಿ (PM Modi) ಮಾತನಾಡಿದ್ದಾರೆ. ಘಟನೆ ಬಗ್ಗೆ ತಿಳಿದುಕೊಂಡಿದ್ದಾರೆ. ಬಳಿಕ ಎಕ್ಸ್‌ ಪೋಸ್ಟ್‌ನಲ್ಲಿ ಸಂದೇಶವೊಂದನ್ನ ಹಂಚಿಕೊಂಡಿದ್ದು, ಘಟನೆಯನ್ನು ತೀವ್ರವಾಗಿ ಖಂಡಿಸಿದ್ದಾರೆ.

    ಮೋದಿ ಎಕ್ಸ್‌ ಪೋಸ್ಟ್‌ನಲ್ಲಿ ಏನಿದೆ?
    ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್ ಗವಾಯಿ ಜಿ ಅವರೊಂದಿಗೆ ಮಾತನಾಡಿದೆ. ಇಂದು ಮುಂಜಾನೆ ಸುಪ್ರೀಂ ಕೋರ್ಟ್ ಆವರಣದಲ್ಲಿ ಅವರ ಮೇಲೆ ನಡೆದ ದಾಳಿ ಪ್ರತಿಯೊಬ್ಬ ಭಾರತೀಯನನ್ನೂ ಕೆರಳಿಸಿದೆ. ನಮ್ಮ ಸಮಾಜದಲ್ಲಿ ಇಂತಹ ಖಂಡನೀಯ ಕೃತ್ಯಗಳಿಗೆ ಸ್ಥಳವಿಲ್ಲ. ಇದು ಸಂಪೂರ್ಣವಾಗಿ ಖಂಡನೀಯ. ಅಲ್ಲದೇ ಇಂತಹ ಪರಿಸ್ಥಿತಿಯನ್ನು ಎದುರಿಸುವಾಗ ನ್ಯಾಯಮೂರ್ತಿ ಗವಾಯಿ ಅವರು ಪ್ರದರ್ಶಿಸಿದ ಶಾಂತಿಯುತ ನಡೆಯನ್ನ ನಾನು ಮೆಚ್ಚುತ್ತೇನೆ. ಇದು ನ್ಯಾಯದ ಮೌಲ್ಯಗಳಿಗೆ ಮತ್ತು ನಮ್ಮ ಸಂವಿಧಾನದ ಚೈತನ್ಯ ಬಲಪಡಿಸುವ ನಿಟ್ಟಿನಲ್ಲಿ ಅವರ ಬದ್ಧತೆಯನ್ನು ಎತ್ತಿ ತೋರಿಸುದೆ ಎಂದು ಬರೆದುಕೊಂಡಿದ್ದಾರೆ.

    ಕೋರ್ಟ್‌ ಹಾಲ್‌ನಲ್ಲಿ ಏನಾಯ್ತು?
    ಗವಾಯಿ ಅವರು ವಕೀಲರಿಂದ ಪ್ರಕರಣಗಳ ಉಲ್ಲೇಖವನ್ನು ಕೇಳುತ್ತಿದ್ದ ಸಂದರ್ಭದಲ್ಲಿ ಆರೋಪಿ ವಕೀಲ ಪೀಠದ ಬಳಿಗೆ ತೆರಳಿ, ತನ್ನ ಶೂವನ್ನು ನ್ಯಾಯಮೂರ್ತಿಯವರ ಮೇಲೆ ಎಸೆಯಲು ಯತ್ನಿಸಿದ್ದಾರೆ. ಭದ್ರತಾ ಸಿಬ್ಬಂದಿ ತಕ್ಷಣ ಮಧ್ಯಪ್ರವೇಶಿಸಿ, ವಕೀಲನನ್ನು ಹೊರಗೆ ಕರೆದೊಯ್ದಿದ್ದಾರೆ. ಈ ವೇಳೆ, `ಸನಾತನ ಧರ್ಮದ ಅವಮಾನವನ್ನು ಸಹಿಸುವುದಿಲ್ಲ’ ಅಂತ ವಕೀಲ ಕೂಗಿದ್ದಾನೆ. ಈ ಆಘಾತಕಾರಿ ಬೆಳವಣಿಗೆಯ ಹೊರತಾಗಿಯೂ ಸಿಜೆಐ ಗವಾಯಿ ತಾಳ್ಮೆ ವಹಿಸಿದ್ದರು. ಘಟನೆಯಿಂದ `ವಿಚಲಿತರಾಗಬೇಡಿ. ನಾವು ವಿಚಲಿತರಾಗಿಲ್ಲ. ಇಂತಹ ವಿಷಯಗಳು ನನ್ನ ಮೇಲೆ ಪರಿಣಾಮ ಬೀರುವುದಿಲ್ಲ’ ಅಂತ ಕೋರ್ಟ್‌ನಲ್ಲಿದ್ದ ವಕೀಲರಿಗೆ ವಾದ ಮುಂದುವರಿಸಲು ಸೂಚಿಸಿದ್ದಾರೆ.

    ದೆಹಲಿ ಪೊಲೀಸರ ಪ್ರಕಾರ ಆರೋಪಿ ವಕೀಲ ಕಿಶೋರ್ ರಾಕೇಶ್‌ನನ್ನು ಭದ್ರತಾ ಸಿಬ್ಬಂದಿ ಸುಪ್ರೀಂ ಕೋರ್ಟ್‌ನ ಭದ್ರತಾ ಘಟಕಕ್ಕೆ ಹಸ್ತಾಂತರಿಸಿದ್ದಾರೆ. ವಕೀಲ ಕಿಶೋರ್ ಮಯೂರ್ ವಿಹಾರ್ ಪ್ರದೇಶದ ನಿವಾಸಿ ಮತ್ತು ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್ ನೋಂದಾಯಿತ ಸದಸ್ಯರಾಗಿದ್ದಾರೆ. ಘಟನೆ ಬೆನ್ನಲ್ಲೇ ದೇಶಾದ್ಯಂತ ಯಾವುದೇ ವಕೀಲಿಕೆ ಮಾಡದಂತೆ ತಕ್ಷಣದಿಂದಲೇ ಜಾರಿಗೆ ಬರುವಂತೆ ಬಾರ್ ಕೌನ್ಸಿಲ್ ಆಫ್ ಇಂಡಿಯಾ ರಾಕೇಶ್ ಕಿಶೋರ್ ಅವರನ್ನು ಸಸ್ಪೆಂಡ್ ಮಾಡಿದೆ.

    ಈ ಮಧ್ಯೆ, ಸಿಜೆ ಮೇಲೆ ಶೂ ಎಸೆದ ಪ್ರಕರಣವನ್ನ ಸಿಎಂ ಸಿದ್ದರಾಮಯ್ಯ ತೀವ್ರವಾಗಿ ಖಂಡಿಸಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದ ನ್ಯಾಯಮೂರ್ತಿ ಬಿ.ಎಸ್ ಗವಾಯಿ ಮೇಲೆ ಶೂ ಎಸೆದ ಕಿಡಿಗೇಡಿ ವಕೀಲನನ್ನ ತಕ್ಷಣವೇ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಅಂತ ಎಕ್ಸ್‌ನಲ್ಲಿ ಒತ್ತಾಯಿಡಿದ್ದಾರೆ. ಸಚಿವರಾದ ಪ್ರಿಯಾಂಕ್ ಖರ್ಗೆ, ಸಂತೋಷ್ ಲಾಡ್ ಕಿಡಿಕಾರಿದ್ದಾರೆ.

  • ನಿವೃತ್ತಿ ನಂತರ ಯಾವ್ದೇ ಸರ್ಕಾರಿ ಹುದ್ದೆ ಸ್ವೀಕರಿಸಲ್ಲ: ಸಿಜೆಐ ಬಿಆರ್ ಗವಾಯಿ ಶಪಥ

    ನಿವೃತ್ತಿ ನಂತರ ಯಾವ್ದೇ ಸರ್ಕಾರಿ ಹುದ್ದೆ ಸ್ವೀಕರಿಸಲ್ಲ: ಸಿಜೆಐ ಬಿಆರ್ ಗವಾಯಿ ಶಪಥ

    ನವದೆಹಲಿ: ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್ ಗವಾಯಿ (BR Gavai) ಅವರು ತಮ್ಮ ನಿವೃತ್ತಿಯ ನಂತರ ಯಾವುದೇ ಸರ್ಕಾರಿ ಹುದ್ದೆ ಸ್ವೀಕರಿಸುವುದಿಲ್ಲ ಎಂದು ಘೋಷಿಸಿದರು. ಬದಲಿಗೆ ಅವರು ಸಮಾಲೋಚನೆ ಮತ್ತು ಮಧ್ಯಸ್ಥಿಕೆ ಕ್ಷೇತ್ರದಲ್ಲಿ ಕೆಲಸ ಮಾಡುವುದಾಗಿ ಹೇಳಿದ್ದಾರೆ.

    ಮಹಾರಾಷ್ಟ್ರದ ಅಮರಾವತಿ ಜಿಲ್ಲೆಯಲ್ಲಿ ದಿವಂಗತ ಟಿ.ಆರ್ ಗಿಲ್ಡಾ ಸ್ಮಾರಕ ಇ-ಗ್ರಂಥಾಲಯದ ಉದ್ಘಾಟನಾ ಸಮಾರಂಭದಲ್ಲಿ ಸಿಜೆಐ ಗವಾಯಿ ಈ ಹೇಳಿಕೆ ನೀಡಿದ್ದಾರೆ. ಅಮರಾವತಿಯ ತಮ್ಮ ಹುಟ್ಟೂರು ದಾರಾಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿ, ನವೆಂಬರ್ 24ರ ನಂತರ ನಾನು ಯಾವುದೇ ಸರ್ಕಾರಿ ಹುದ್ದೆಯನ್ನು ಸ್ವೀಕರಿಸುವುದಿಲ್ಲ. ಆದರೆ ನಾನು ಸಮಾಲೋಚನೆ ಮತ್ತು ಮಧ್ಯಸ್ಥಿಕೆ ಕೆಲಸದಲ್ಲಿ ತೊಡಗಿಸಿಕೊಳ್ಳುತ್ತೇನೆ ಎಂದಿದ್ದಾರೆ. ಪ್ರಸಕ್ತ ವರ್ಷ ನ.23 ರಂದು ಅವರು ನಿವೃತ್ತರಾಗಲಿದ್ದಾರೆ. ಇದನ್ನೂ ಓದಿ: ಪಾಕ್‌ ಉಗ್ರವಾದಕ್ಕೆ ಆಪರೇಷನ್ ಸಿಂಧೂರ ನೇರ ಸಂದೇಶ ರವಾನಿಸಿದೆ: ಸೇನಾ ಮುಖ್ಯಸ್ಥ ಉಪೇಂದ್ರ ದ್ವಿವೇದಿ

    ನಿವೃತ್ತಿಯ ನಂತರ ತಮ್ಮ ಹೆಚ್ಚಿನ ಸಮಯವನ್ನು ದಾರಾಪುರ, ಅಮರಾವತಿ ಮತ್ತು ನಾಗ್ಪುರದಲ್ಲಿ ಕಳೆಯಲು ಯೋಜಿಸುತ್ತಿರುವುದಾಗಿಯೂ ಅವರು ಹೇಳಿದ್ದಾರೆ. ನ್ಯಾಯಾಂಗ ಸ್ವಾತಂತ್ರ‍್ಯದ ಬಗ್ಗೆ ಮಾತನಾಡಿ, ನಿವೃತ್ತಿಯ ನಂತರ ಸರ್ಕಾರಿ ಹುದ್ದೆಯನ್ನು ಸ್ವೀಕರಿಸುವುದು ಅಥವಾ ಚುನಾವಣೆಗಳಲ್ಲಿ ಸ್ಪರ್ಧಿಸುವುದು ನೈತಿಕ ಕಳವಳಗಳನ್ನು ಹುಟ್ಟುಹಾಕುತ್ತದೆ. ಇದು ನ್ಯಾಯಾಂಗದ ಮೇಲಿನ ಸಾರ್ವಜನಿಕರ ವಿಶ್ವಾಸ ಕುಗ್ಗಿಸುತ್ತದೆ ಎಂದು ಸಿಜೆಐ ಗವಾಯಿ ಈ ಹಿಂದೆ ಹೇಳಿದ್ದರು. ನ್ಯಾಯಾಂಗದ ವಿಶ್ವಾಸಾರ್ಹತೆ ಮತ್ತು ಸ್ವಾತಂತ್ರ‍್ಯವನ್ನು ಕಾಪಾಡಿಕೊಳ್ಳಲು ನಿವೃತ್ತಿಯ ನಂತರ ಯಾವುದೇ ಸರ್ಕಾರಿ ಹುದ್ದೆಗಳನ್ನು ಸ್ವೀಕರಿಸುವುದಿಲ್ಲ ಎಂದು ಅವರು ತಮ್ಮ ಅನೇಕ ಸಹೋದ್ಯೋಗಿಗಳ ಜೊತೆ ಸಾರ್ವಜನಿಕವಾಗಿ ಪ್ರತಿಜ್ಞೆ ಮಾಡಿದ್ದಾರೆ. ಇದನ್ನೂ ಓದಿ: ರಾಹುಲ್ ಗಾಂಧಿ ಒಬಿಸಿಗಳ ಪಾಲಿನ 2ನೇ ಅಂಬೇಡ್ಕರ್ – `ಕೈʼ ಮುಖಂಡ ಉದಿತ್ ರಾಜ್ ಬಣ್ಣನೆ

    ದರ್ಯಾಪುರದಲ್ಲಿ ಹೊಸ ನ್ಯಾಯಾಲಯದ ಕಟ್ಟಡದ ಉದ್ಘಾಟನೆಯ ಸಂದರ್ಭದಲ್ಲಿ, ಸಿಜೆಐ ಗವಾಯಿ ನ್ಯಾಯಾಂಗ ರಚನೆಯ ವಿಕೇಂದ್ರೀಕರಣವನ್ನು ಪ್ರತಿಪಾದಿಸಿದರು. ಇದು ಜನರಿಗೆ ನ್ಯಾಯವನ್ನು ಸುಲಭವಾಗಿ ಪ್ರವೇಶಿಸುವಂತೆ ಮಾಡುತ್ತದೆ ಎಂದು ಹೇಳಿದರು. ನ್ಯಾಯಾಂಗ ಮೂಲಸೌಕರ್ಯ ಸಮಿತಿಯ ಮುಖ್ಯಸ್ಥರಾಗಿ, ಅಧಿಕಾರಶಾಹಿ ಅಡೆತಡೆಗಳು ಈ ಕಾರ್ಯಕ್ಕೆ ಅಡ್ಡಿಯಾಗುತ್ತಿದ್ದರೂ, ತಾಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಹೊಸ ನ್ಯಾಯಾಲಯಗಳನ್ನು ಸ್ಥಾಪಿಸಲು ಒಂದು ಮಾದರಿಯನ್ನು ಸಿದ್ಧಪಡಿಸಿದ್ದೇನೆ ಎಂದು ಅವರು ಉಲ್ಲೇಖಿಸಿದರು. ಇದನ್ನೂ ಓದಿ: ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇನಲ್ಲಿ 20 ವಾಹನಗಳ ನಡ್ವೆ ಭೀಕರ ಅಪಘಾತ – ಐಷಾರಾಮಿ ಕಾರುಗಳೇ ಚಿಂದಿ ಚಿಂದಿ

  • ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ಬಿ.ಆರ್ ಗವಾಯಿ ಪ್ರಮಾಣವಚನ ಸ್ವೀಕಾರ

    ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ಬಿ.ಆರ್ ಗವಾಯಿ ಪ್ರಮಾಣವಚನ ಸ್ವೀಕಾರ

    ನವದೆಹಲಿ: ನ್ಯಾ.ಭೂಷಣ್ ರಾಮಕೃಷ್ಣ ಗವಾಯಿ (BR Gavai) ಅವರು ಇಂದು ಸುಪ್ರೀಂ ಕೋರ್ಟ್‌ನ 52ನೇ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.

    ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿ.ಆರ್ ಗವಾಯಿ ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು (Draupadi Murmu) ಪ್ರಮಾಣ ವಚನ ಬೋಧಿಸಿದರು. ಮಂಗಳವಾರ ನ್ಯಾ.ಸಂಜೀವ ಖನ್ನಾ (Sanjeeva Khanna) ಅವರ ನಿವೃತ್ತಿ ಬಳಿಕ ಇಂದು ನ್ಯಾ.ಬಿ.ಆರ್ ಗವಾಯಿ ಅವರು ಮುಖ್ಯ ನ್ಯಾಯಮೂರ್ತಿ ಹುದ್ದೆಯನ್ನು ಅಲಂಕರಿಸಿದ್ದಾರೆ.ಇದನ್ನೂ ಓದಿ: ಭಾರತದ ದಾಳಿಗೆ ವಿಲವಿಲ – ಪಾಕ್‌ನಲ್ಲಿ ಮದರಸಾಗಳ ಮೇಲೆ ನಾಗರಿಕರಿಂದಲೇ ಕಲ್ಲು ತೂರಾಟ

    52ನೇ ಮುಖ್ಯ ನ್ಯಾಯಮೂರ್ತಿಯಾಗಿರುವ ಬಿ.ಆರ್ ಗವಾಯಿ ಅವರು 6 ತಿಂಗಳಿಗೂ ಹೆಚ್ಚಿನ ಅವಧಿ ಅಧಿಕಾರದಲ್ಲಿರಲಿದ್ದು, ಇದೇ ನ.23ರಂದು ನಿವೃತ್ತಿ ಹೊಂದಲಿದ್ದಾರೆ. ಜೊತೆಗೆ ದೇಶದ ಅತ್ಯುನ್ನತ ನ್ಯಾಯಾಂಗ ಹುದ್ದೆಗೆ ಏರಿದ ಮೊದಲ ಬೌದ್ಧ ಮತ್ತು ಪರಿಶಿಷ್ಟ ಜಾತಿಯಿಂದ ಆಯ್ಕೆಯಾದ ಎರಡನೇ ನ್ಯಾಯಾಧೀಶರಾದರು ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

    ಸುಪ್ರೀಂ ಕೋರ್ಟ್ನ ನ್ಯಾಯಾಧೀಶರಾಗಿ, ಮುಖ್ಯ ನ್ಯಾಯಮೂರ್ತಿ ಗವಾಯಿ ಅವರು ಹಲವು ಮಹತ್ವದ ತೀರ್ಪುಗಳನ್ನು ನೀಡಿದ್ದಾರೆ. ಆ ಪೈಕಿ 2016ರ ನೋಟು ರದ್ದತಿ, ಚುನಾವಣಾ ಬಾಂಡ್ ಯೋಜನೆಯ ತೀರ್ಪು ಸೇರಿದಂತೆ ಒಟ್ಟು 300 ತೀರ್ಪುಗಳನ್ನು ನೀಡಿದ್ದಾರೆ.ಇದನ್ನೂ ಓದಿ: ಭಾರತೀಯ ಸೈನಿಕರ ಶೌರ್ಯ, ತ್ಯಾಗ ಹಾಡಿಹೊಗಳಿದ ರಷ್ಯಾ ಮಹಿಳೆ

  • 52ನೇ ಸಿಜೆಐ ಆಗಿ ನ್ಯಾ.ಬಿಆರ್ ಗವಾಯಿ ನೇಮಕ

    52ನೇ ಸಿಜೆಐ ಆಗಿ ನ್ಯಾ.ಬಿಆರ್ ಗವಾಯಿ ನೇಮಕ

    ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು (President Droupadi Murmu) ಅವರು ನ್ಯಾಯಮೂರ್ತಿ ಬಿ.ಆರ್. ಗವಾಯಿ (Justice B.R. Gavai) ಅವರನ್ನು  ಭಾರತದ 52ನೇ ಮುಖ್ಯ ನ್ಯಾಯಮೂರ್ತಿಯಾಗಿ  (Chief Justice of India) ನೇಮಕ ಮಾಡಲು ಅನುಮೋದಿಸಿದ್ದಾರೆ.

    ನ್ಯಾಯಮೂರ್ತಿ ಭೂಷಣ್ ರಾಮಕೃಷ್ಣ ಗವಾಯಿ ಅವರು ಮೇ 14 ರಂದು ಭಾರತದ 52 ನೇ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇದನ್ನೂ ಓದಿ: ಗುರಿ, ಸಮಯವನ್ನು ನಿರ್ಧರಿಸಿ ಉಗ್ರರನ್ನು ಹೊಡೆದು ಹಾಕಿ- ಸೇನೆಗೆ ಪೂರ್ಣ ಅಧಿಕಾರ ಕೊಟ್ಟ ಮೋದಿ


    ಕಾನೂನು ಮತ್ತು ನ್ಯಾಯ ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿ ಭಾರತದ ಸಂವಿಧಾನವು ನೀಡಿರುವ ಅಧಿಕಾರದ ಅಡಿಯಲ್ಲಿ ಈ ನೇಮಕಾತಿ ಮಾಡಲಾಗಿದೆ ಎಂದು ಹೇಳಿದ್ದಾರೆ.

    ಪರಿಶಿಷ್ಟ ಜಾತಿಗೆ ಸೇರಿದ ನ್ಯಾಯಮೂರ್ತಿ ಗವಾಯಿ ಅವರಿಗೆ ಸಿಜೆಐ ಆಗಿ 6 ತಿಂಗಳಿಗೂ ಹೆಚ್ಚಿನ ಅವಧಿ ಸಿಗಲಿದ್ದು ಈ ವರ್ಷದ ನವೆಂಬರ್‌ 23ರಂದು ನಿವೃತ್ತರಾಗಲಿದ್ದಾರೆ. ಇದನ್ನೂ ಓದಿ: 4 ದಿನದ ಮೊದಲೇ ಪಹಲ್ಗಾಮ್‌ನಿಂದ 7 ಕಿ.ಮೀ ದೂರದ ಜಾಗಕ್ಕೆ ಬಂದಿದ್ದ ಉಗ್ರರು

    1960ರ ನವೆಂಬರ್‌ 24ರಂದು ಅಮರಾವತಿಯಲ್ಲಿ ಜನಿಸಿದ ಗವಾಯಿ ಅವರು ಬಾಂಬೆ ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಮೂರ್ತಿಯಾಗಿ 2003ರ ನವೆಂಬರ್‌ 14ರಂದು ಅಧಿಕಾರ ವಹಿಸಿಕೊಂಡರು. 2005ರ ನವೆಂಬರ್‌ 12ರಂದು ಅವರ ಸೇವೆಯು ಕಾಯಂ ಆಯಿತು.