Tag: ಬಿ.ಎಸ್

  • ಬಿಡುಗಡೆಗೂ ಮುನ್ನ‘ವಿರಾಟಪುರ ವಿರಾಗಿ’ ಚಿತ್ರದ 75 ಸಾವಿರ ಟಿಕೆಟ್ ಸೋಲ್ಡ್ ಔಟ್

    ಬಿಡುಗಡೆಗೂ ಮುನ್ನ‘ವಿರಾಟಪುರ ವಿರಾಗಿ’ ಚಿತ್ರದ 75 ಸಾವಿರ ಟಿಕೆಟ್ ಸೋಲ್ಡ್ ಔಟ್

    ಹಾನಗಲ್ಲ ಕುಮಾರಸ್ವಾಮಿಗಳ ಜೀವನವನ್ನು ಆಧರಿಸಿದ ‘ವಿರಾಟಪುರ ವಿರಾಗಿ’ ಸಿನಿಮಾ ಜನವರಿ 13 ರಂದು ದೇಶದಾದ್ಯಂತ ಬಿಡುಗಡೆ ಆಗುತ್ತಿದೆ. ಸಿನಿಮಾ ರಿಲೀಸ್ ಗೂ ಮುನ್ನ ಚಿತ್ರದ 75 ಸಾವಿರಕ್ಕೂ ಹೆಚ್ಚು ಟಿಕೆಟ್ ಗಳು ಮಾರಾಟವಾಗಿವೆ. ಬಿಡುಗಡೆಯ ಹೊತ್ತಿಗೆ ಈ ಸಂಖ್ಯೆ ಒಂದು ಲಕ್ಷ ದಾಟಬಹುದು ಎಂದು ನಿರ್ದೇಶಕ ಬಿ.ಎಸ್.ಲಿಂಗದೇವರು ಹರ್ಷ ವ್ಯಕ್ತ ಪಡಿಸಿದ್ದಾರೆ. ಈ ರೀತಿಯ ಸಿನಿಮಾಗಳಿಗೆ ಇಂತಹ ಬೆಂಬಲ ಸಿಕ್ಕಿದ್ದು ನಿಜಕ್ಕೂ ಅಚ್ಚರಿ ತಂದಿದೆ ಎನ್ನುವುದು ಅವರ ಮಾತು.

    ಮೊನ್ನೆಯಷ್ಟೇ ಈ ಸಿನಿಮಾದ ಟ್ರೈಲರ್ ಗದಗನಲ್ಲಿ ಅದ್ಧೂರಿಯಾಗಿ ಬಿಡುಗಡೆ ಆಯಿತು. ಈ ಟ್ರೈಲರ್ ಬಿಡುಗಡೆ ಸಮಾರಂಭಕ್ಕೆ ಐದು ಸಾವಿರಕ್ಕೂ ಹೆಚ್ಚು ಜನರು, ನಾಡಿನ ಅನೇಕ ಮಠಾಧೀಶರು ಹಾಗೂ ಜನಪ್ರತಿನಿಧಿಗಳು ಸಾಕ್ಷಿಯಾಗಿದ್ದರು. ಅವರ ಸಮ್ಮುಖದಲ್ಲಿ ರಿಲೀಸ್ ಆಗಿರುವ ಟ್ರೈಲರ್ ಗೂ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ಇಂಥದ್ದೊಂದು ಸಿನಿಮಾ ಈ ಹೊತ್ತಿಗೆ ತುರ್ತಾಗಿ ಬೇಕಿತ್ತು ಎನ್ನುವ ಮಾತುಗಳನ್ನು ಅನೇಕರು ಆಡಿದ್ದಾರೆ. ಇದನ್ನೂ ಓದಿ: ರಶ್ಮಿಕಾ ಮಂದಣ್ಣ ಎಂಟ್ರಿಯಿಂದ ವಿಜಯ್- ಸಂಗೀತಾ ದಾಂಪತ್ಯದಲ್ಲಿ ಕಲಹ?

    ವಿರಾಟಪುರ ವಿರಾಗಿ ಸಿನಿಮಾದ ಟ್ರೈಲರ್ ಅನ್ನು ಬಿಡುಗಡೆ ಮಾಡಿ ಮಾತನಾಡಿದ್ದ ಜನಪ್ರಿಯ ಯುವ ನಾಯಕ ಬಿ.ವೈ ವಿಜಯೇಂದ್ರ ‘ಇಂಥದ್ದೊಂದು ಸಿನಿಮಾ ಆಗಿದೆ ಎನ್ನುವುದೇ ನಮಗೊಂದು ಹೆಮ್ಮೆ. ಈ ಸಿನಿಮಾವನ್ನು ನಾವೆಲ್ಲರೂ ಗೆಲ್ಲಿಸಬೇಕು. ಟ್ರೈಲರ್ ನೋಡಿದ ಮೇಲೆ ಸಿನಿಮಾ ನೋಡಬೇಕು ಎನ್ನುವ ಕುತೂಹಲ ಇನ್ನೂ ಹೆಚ್ಚಾಗಿದೆ. ಅಪರೂಪದ ಸಿನಿಮಾ ಮಾಡಿರುವ ಬಿ.ಎಸ್.ಲಿಂಗದೇವರು ಮತ್ತು ಮೌನತಪಸ್ವಿ ಜಡೆಯ ಶಾಂತಲಿಂಗೇಶ್ವರ ಮಹಾಸ್ವಾಮಿಗಳಿಗೆ ನಾವೆಲ್ಲರೂ ಋಣಿಯಾಗಿರಬೇಕು’ ಎಂದಿದ್ದರು.

    ಈ ಸಿನಿಮಾವನ್ನು ಜನರಿಗೆ ತಲುಪಿಸುವುದಕ್ಕಾಗಿ ವಿನೂತನವಾಗಿ ರಥೆಯಾತ್ರೆ ಆರಂಭಿಸಿತ್ತು ಚಿತ್ರತಂಡ.  20-12-22 ರಂದು 6 ರಥಗಳು  ರಾಜ್ಯದ ವಿವಿಧ ಭಾಗಗಳಿಂದ ಹೊರಟು 7000 ಕಿಮೀ ಪ್ರಯಾಣ ಮಾಡಿ, 400ಕ್ಕೂ ಹೆಚ್ಚು ಸಭೆ ನಡೆಸಿ ಸುಮಾರು ಒಂದು ಕೋಟಿ ಜನರಿಗೆ ಹಾನಗಲ್ ಶ್ರೀಗಳು ಮತ್ತು ವಿರಾಟಪುರ ವಿರಾಗಿ ಸಿನಿಮಾ ಬಗ್ಗೆ ಜಾಗೃತಿ ಮೂಡಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k