ಶಿವಮೊಗ್ಗ: ಮಹಿಳಾ ಅಧಿಕಾರಿ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಆರೋಪ ಭದ್ರಾವತಿ ಕಾಂಗ್ರೆಸ್ ಶಾಸಕ ಬಿ.ಕೆ.ಸಂಗಮೇಶ್ ಪುತ್ರನ ಮೇಲೆ ಕೇಳಿಬಂದಿದೆ.
ಅಶ್ಲೀಲ ಪದ ಬಳಸಿ ರೌಡಿಸಂ ಮಾತುಗಳಲ್ಲಿ ಮಹಿಳಾ ಅಧಿಕಾರಿಗೆ ಬೈದಿದ್ದಾರೆ ಎನ್ನಲಾದ ವಿಡಿಯೋ ವೈರಲ್ ಆಗಿದೆ. ಗಣಿ ಮತ್ತು ಭೂ ವಿಜ್ಞಾನ ಮಹಿಳಾ ಅಧಿಕಾರಿಗೆ ಅಶ್ಲೀಲ ಪದಗಳಲ್ಲಿ ಶಾಸಕರ ಪುತ್ರ ನಿಂದಿಸಿದ್ದಾರೆಂದು ಆರೋಪಿಸಲಾಗಿದೆ.
ಅಕ್ರಮ ಮರಳು ಗಣಿಗಾರಿಕೆ ಜಾಗದ ಮೇಲೆ ತಡರಾತ್ರಿ ರೇಡ್ ನಡೆಸಿದ ವೇಳೆ ಘಟನೆ ನಡೆದಿದೆ. ಈ ಮಹಿಳಾ ಅಧಿಕಾರಿಯು ಭದ್ರಾವತಿ ಭಾಗದಲ್ಲಿ ನಡೆಯುತ್ತಿರುವ ಅಕ್ರಮ ಮರಳು ಗಣಿಗಾರಿಕೆ ಮೇಲೆ ದಾಳಿ ಮಾಡಿದ್ದರು.
ಮಹಿಳಾ ಅಧಿಕಾರಿಯ ಮೇಲೆ ಎಂಎಲ್‌ಎ ಮಗನ ದರ್ಪದ ಕುರಿತು ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿದೆ.
ಈ ಕುರಿತು ಶಾಸಕ ಸಂಗಮೇಶ್ ಪ್ರತಿಕ್ರಿಯೆ ನೀಡಿದ್ದು, ಅಲ್ಲಿ ಮಾತನಾಡಿರುವುದು ನನ್ನ ಮಗ ಅಲ್ಲ. ಯಾರೋ ಬಿಜೆಪಿ, ಜೆಡಿಎಸ್‌ನವರು ಕುತಂತ್ರ ಮಾಡುತ್ತಿದ್ದಾರೆ ಎಂದು ತಿಳಿಸಿದ್ದಾರೆ.
ಚಿಕ್ಕಮಗಳೂರು: ಗೃಹ ಮಂತ್ರಿ ಅರಗ ಜ್ಞಾನೇಂದ್ರ ಅವರು ಅಲ್ಪನಿಗೆ ಐಶ್ವರ್ಯ ಸಿಕ್ಕ ರೀತಿಯಲ್ಲಿ ಆಡುತ್ತಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಬಿ.ಕೆ ಸಂಗಮೇಶ್ ಟೀಕಿಸಿದ್ದಾರೆ.
ಗ್ಯಾಂಗ್ ರೇಪ್‍ನಲ್ಲಿ ಅರಗ ಜ್ಞಾನೇಂದ್ರ ಅವರ ಹೇಳಿಕೆ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜ್ಞಾನೇಂದ್ರ ಅವರು ಅಲ್ಪನಿಗೆ ಐಶ್ವರ್ಯ ಸಿಕ್ಕ ರೀತಿಯಲ್ಲಿ ಆಡುತ್ತಿದ್ದಾರೆ. ಪ್ರವಾಸೋದ್ಯಮ ಇಲಾಖೆ ಅವರಿಗೆ ಫಿಟ್ ಆಗಿತ್ತು. ಶಾಂತಿ ಕಾಪಾಡೋದನ್ನು ಬಿಟ್ಟು, ಅಶಾಂತಿ ಮೂಡಿಸುತ್ತಿರುವುದು ದುರಾದೃಷ್ಟಕರವಾದ ಸಂಗತಿಯಾಗಿದೆ. ಅಶಾಂತಿ ಮೂಡಿಸುವ ಗೃಹ ಸಚಿವರು ನಮ್ಮ ಜಿಲ್ಲೆಗೆ ಸಿಕ್ಕಿರುವುದು ದುರಾದೃಷ್ಟ ಎಂದರು. ಇದನ್ನೂ ಓದಿ: ಮೈಸೂರು ಘಟನೆಗೆ ಸಮಾಜ ತಲೆ ತಗ್ಗಿಸಬೇಕೇ ಹೊರತು ಸರ್ಕಾರವಲ್ಲ: ಬಿಸಿ ನಾಗೇಶ್
ಪ್ರಚೋದನೆ ಮೂಡಿಸಲು ರೀತಿ ಹೇಳಿಕೆ ನೀಡಿದ್ದಾರೆ. ಅಧಿಕಾರವನ್ನು ದುರುಪಯೋಗ ಮಾಡಿಕೊಂಡು ನಮ್ಮ ಪಕ್ಷದ ಮೇಲೆ ದೂರನ್ನು ಹೇಳುತ್ತಿದ್ದಾರೆ. ಅವರಿಗೆ ಯಾವುದೇ ರೀತಿಯ ಮಾಹಿತಿಗಳಿಲ್ಲ. ಅದಕ್ಕೆ ಈ ರೀತಿಯ ಹೇಳಿಕೆಗಳನ್ನು ನೀಡಿ ಅಶಾಂತಿಯನ್ನು ಮೂಡಿಸುತ್ತಿದ್ದಾರೆ ಎಂದು ಆರೋಪಿಸಿದರು. ಇದನ್ನೂ ಓದಿ:ಗ್ಯಾಂಗ್ ರೇಪ್ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ: ಸೋಮಶೇಖರ್
ಜನರಿಗೆ ಕಾಂಗ್ರೆಸ್ ಬಗ್ಗೆ ತಪ್ಪು ಮಾಹಿತಿ ನೀಡುವ ಮೂಲಕ ತೇಜೋವಧೆ ಮಾಡಲು ಹೋಗುತ್ತಿದ್ದಾರೆ. ಆದರೆ ಜನರು ನಮ್ಮ ಪರ ಇದ್ದಾರೆ. ಮುಂದಿನ ಚುನಾವಣೆಯಲ್ಲಿ ನಾವು ಸರ್ಕಾರಕ್ಕೆ ಬರುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಶಿವಮೊಗ್ಗ: ಭದ್ರಾವತಿಯಲ್ಲಿ ಕಬ್ಬಡಿ ಪಂದ್ಯದಲ್ಲಿ ನಡೆದಿದ್ದ ಘರ್ಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಬಿ.ಕೆ.ಸಂಗಮೇಶ್ ಪುತ್ರ ಬಸವೇಶ್ ಬಂಧನವಾಗಿದೆ. ಬಸವೇಶ್ ಸೇರಿದಂತೆ ಇದುವರೆಗೂ 15 ಜನರನ್ನ ಪೊಲೀಸರು ಬಂಧಿಸಿದ್ದಾರೆ.
ಫೆಬ್ರವರಿ 28ರಂದು ಕಬ್ಬಡಿ ಪಂದ್ಯದ ವೇಳೆ ಬಿಜೆಪಿ ಕಾರ್ಯಕರ್ತರು ಜೈಶ್ರೀರಾಮ ಘೋಷಣೆ ಕೂಗಿದ್ದರು. ಈ ಹಿನ್ನೆಲೆ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ ನಡೆದಿತ್ತು. ಘಟನೆಯಲ್ಲಿ ಬಿಜೆಪಿಯ ಪ್ರಧಾನ ಕಾರ್ಯದರ್ಶಿ ಧರ್ಮಪ್ರಸಾದ್ ಸೇರಿದಂತೆ ನಾಲ್ವರು ಗಾಯಗೊಂಡಿದ್ದರು. ಹಲ್ಲೆ ಸಂಬಂಧ ಭದ್ರಾವತಿಯ ಹಳೆನಗರ ಪೊಲೀಸ್ ಠಾಣೆಯಲ್ಲಿ ಎರಡೂ ಕಡೆಯಿಂದ ದೂರುಗಳು ದಾಖಲಾಗಿದ್ದವು.
ದೂರು ದಾಖಲಾದ ನಂತರ ಶಾಸಕ ಸಂಗಮೇಶ್ ಪುತ್ರ ತಲೆ ಮರೆಸಿಕೊಂಡು ಯಾರ ಸಂಪರ್ಕಕ್ಕೂ ಸಿಕ್ಕಿರಲಿಲ್ಲ. ಇಂದು ಬೆಳಗಿನ ಜಾವ ಚಳ್ಳಕೆರೆ ಬಳಿ ಶಾಸಕ ಪುತ್ರ ಬಸವೇಶ್ ನನ್ನು ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರು: ಇಂದಿನಿಂದ ವಿಧಾನ ಮಂಡಲ ಅಧಿವೇಶನ ಆರಂಭವಾಗಿದ್ದು, ಸದನದಲ್ಲಿ ಭಾರೀ ಹೈಡ್ರಾಮಾ ನಡೆದಿದೆ. ಕಾಂಗ್ರೆಸ್ ಶಾಸಕ ಸಂಗಮೇಶ್ ಅವರು ಶರ್ಟ್ ಬಿಚ್ಚಿ ತಮ್ಮ ಆಕ್ರೋಶ ಹೊರಹಾಕಿರುವ ಪ್ರಸಂಗ ನಡೆದಿದೆ.
ಈ ಬಗ್ಗೆ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಶಾಸಕರು, ಬೇಕು ಅಂತಾನೇ ಶರ್ಟ್ ಬಿಚ್ಚಿದ್ದು, ನನಗೆ ವಿಷಾದ ಇಲ್ಲ. ನ್ಯಾಯ ಸಿಗಬೇಕು ಎಂದೇ ಶರ್ಟ್ ಬಿಚ್ಚಿದ್ದು. ನನ್ನ ಮೇಲೆ ಸುಳ್ಳು ಕೇಸ್ ಹಾಕಿಸಿದ್ದಾರೆ. ಸ್ಪೀಕರ್ ಬಿಜೆಪಿ ಪರ, ನಾನು ಧರಣಿ ಮುಂದುವರಿಸುತ್ತೇನೆ. ಅಪ್ಪ ಮಕ್ಕಳು, ಈಶ್ವರಪ್ಪ ಭದ್ರಾವತಿಯನ್ನ ಬಿಜೆಪಿ ತೆಕ್ಕೆಗೆ ತೆಗೆದುಕೊಳ್ಳಬೇಕೆಂದು ನಿಂತಿದ್ದಾರೆ ಎಂದರು.
ವಿಧಾನಸಭಾ ಕಲಾಪದಲ್ಲಿ ಒಂದು ದೇಶ ಒಂದು ಚುನಾವಣೆ ಕುರಿತು ವಿಶೇಷ ಚರ್ಚೆ ಬಗ್ಗೆ ಸ್ಪೀಕರ್ ಕಾಗೇರಿ ಪ್ರಸ್ತಾಪಿಸಿದರು. ಈ ವೇಳೆ ಎದ್ದು ನಿಂತು ಆಕ್ಷೇಪ ವ್ಯಕ್ತಪಡಿಸಿದ ವಿಪಕ್ಷ ನಾಯಕ ಸಿದ್ದರಾಮಯ್ಯ ಯಾವ ನಿಯಮಾವಳಿಗಳಲ್ಲಿ ಈ ಚರ್ಚೆ ಮಾಡುತ್ತೀದ್ದೀರಿ ಎಂದು ಪ್ರಶ್ನಿಸಿದರು.
ವಿಧಾನಸಭೆ ಕಲಾಪಕ್ಕೆ ರಮೇಶ್ ಜಾರಕಿಹೊಳಿ, ಬಾಲಚಂದ್ರ ಜಾರಕಿಹೊಳಿ, ಸತೀಶ್ ಜಾರಕಿಹೊಳಿ, ತನ್ವೀರ್ ಸೇಠ್, ಅಖಂಡ ಶ್ರೀನಿವಾಸ್, ಕಲಾಪಕ್ಕೆ ಜೆಡಿಎಸ್ ನಾಯಕ ಹೆಚ್‍ಡಿಕೆ ಗೈರಾಗಿದ್ದಾರೆ ಎಂದರು. ಈ ವೇಳೆ ಸಿದ್ದರಾಮಯ್ಯರವರಿಗೆ ಸಾಥ್ ನೀಡಿದ ರಮೇಶ್ ಕುಮಾರ್ ಮತ್ತು ಹೆಚ್.ಕೆಪಾಟೀಲ್ ಒನ್ ನೇಷನ್ ಒನ್ ಎಲೆಕ್ಷನ್ ಚರ್ಚೆಗೆ ಅವಕಾಶ ಕೊಟ್ಟರೆ ಕ್ರಿಯಾಲೋಪ ಆಗುತ್ತದೆ ಎಂದು ಆಕ್ಷೇಪ ವ್ಯಕ್ತಪಡಿಸಿದರು. ಈ ಮಧ್ಯೆ ಎದ್ದು ನಿಂತು ಸಿಎಂ ಬಿಎಸ್ ಯಡಿಯೂರಪ್ಪ ಸ್ಪೀಕರ್ ಅವರು ಸಂವಿಧಾನದ ಚೌಕಟ್ಟಿನಲ್ಲೇ ಚರ್ಚೆಗೆ ಅವಕಾಶ ಕೊಟ್ಟಿದ್ದಾರೆ ಸಹಕರಿ ಎಂದು ಮನವಿ ಮಾಡಿದರು.
ಈ ಎಲ್ಲಾ ಗೊಂದಲಗಳ ನಡುವೆ ಸ್ಪೀಕರ್ ಒಂದು ದೇಶ ಒಂದು ಚುನಾವಣೆ ಚರ್ಚೆಯ ಪ್ರಸ್ತಾವನೆ ಓದಲು ಮುಂದುವರಿಸಿದರು. ಈ ವೇಳೆ ಇದು ಆರ್‍ಎಸ್‍ಎಸ್ ಅಜೆಂಡಾ, ಪ್ರಧಾನಿ ಡಿಕ್ಟೇಟರ್ ಎಂದು ಸಿದ್ದರಾಮಯ್ಯ ಜರಿದರು. ಅಲ್ಲದೆ ವಿಧಾನಸಭೆಯಲ್ಲಿ ಸದನದ ಬಾವಿಗಿಳಿದು ಕಾಂಗ್ರೆಸ್ ಸದಸ್ಯರು ಧಿಕ್ಕಾರ ಕೂಗಿದರು. ಇದರಿಂದ ಕೋಪಗೊಂಡ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ 19 ಜನ ಮಾತನಾಡುವವರ ಪಟ್ಟಿಯನ್ನು ಕೊಟ್ಟಿದ್ದೀರಿ. ಮೊದಲಿನಿಂದಲೂ ಇದನ್ನು ಒಪ್ಪಿಕೊಂಡು ಈಗ ಬೆಳಗ್ಗೆ ಏಕಾಏಕಿ ಬೇಡ ಅಂದರೆ ಏನು ಅರ್ಥ. ಇದು ಯಾರಿಗೂ ಕ್ಷೋಭೆ ತರುವುದಿಲ್ಲ ಎಂದು ಕಿಡಿಕಾರಿದರು.