Tag: ಬಿ ದಯಾನಂದ್

  • ಹಿರಿಯ ಐಪಿಎಸ್‌ ಅಧಿಕಾರಿ ಬಿ.ದಯಾನಂದ್‌, ಪೊಲೀಸ್‌ ಆಯುಕ್ತ ಸೀಮಂತ್‌ ಕುಮಾರ್‌ಗೆ ರಾಷ್ಟ್ರಪತಿ ಪದಕ

    ಹಿರಿಯ ಐಪಿಎಸ್‌ ಅಧಿಕಾರಿ ಬಿ.ದಯಾನಂದ್‌, ಪೊಲೀಸ್‌ ಆಯುಕ್ತ ಸೀಮಂತ್‌ ಕುಮಾರ್‌ಗೆ ರಾಷ್ಟ್ರಪತಿ ಪದಕ

    – ಬೆಂಗಳೂರಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣದಲ್ಲಿ ಅಮಾನತುಗೊಂಡಿದ್ದ ದಯಾನಂದ್‌

    ಬೆಂಗಳೂರು: ಹಿರಿಯ ಐಪಿಎಸ್‌ ಅಧಿಕಾರಿ ಬಿ.ದಯಾನಂದ್‌ ರಾಷ್ಟ್ರಪತಿ ಪದಕಕ್ಕೆ ಭಾಜನರಾಗಿದ್ದಾರೆ.

    2022ನೇ ಸಾಲಿನ ಗಣರಾಜ್ಯೋತ್ಸವ ಮತ್ತು ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ಘೋಷಿಸಲಾದ ರಾಷ್ಟ್ರಪತಿಗಳ ಪೊಲೀಸ್‌ ವಿಶಿಷ್ಟ ಸೇವಾ ಪದಕಕ್ಕೆ ದಯಾನಂದ್‌ ಭಾಜನರಾಗಿದ್ದಾರೆ.

    ಹಾಲಿ ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಕೂಡ ರಾಷ್ಟ್ರಪತಿ ಪದಕಕ್ಕೆ ಭಾಜನರಾಗಿದ್ದಾರೆ. ಇವರು 2023ನೇ ಸಾಲಿನ‌ ಪೊಲೀಸ್ ವಿಶಿಷ್ಟ ಸೇವಾ ಪದಕಕ್ಕೆ ಭಾಜನರಾಗಿದ್ದಾರೆ.

    ಇತ್ತೀಚೆಗೆ ಬೆಂಗಳೂರಲ್ಲಿ ಆರ್‌ಸಿಬಿ ವಿಜಯೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತ ಪ್ರಕರಣದಲ್ಲಿ ಕರ್ತವ್ಯಲೋಪ ಆರೋದಲ್ಲಿ ದಯಾನಂದ್‌ ಅಮಾನತುಗೊಂಡಿದ್ದರು. ಅವರು ಅಮಾನತಾದ ಸ್ಥಾನಕ್ಕೆ ನಗರ ಪೊಲೀಸ್‌ ಆಯುಕ್ತರಾಗಿ ಸೀಮಂತ್‌ ಕುಮಾರ್‌ ಸಿಂಗ್‌ ನಿಯೋಜನೆಗೊಂಡಿದ್ದರು.

  • ದಯಾನಂದ್‌ ಅಮಾನತು – ಸರ್ಕಾರದ ನಡೆ ಖಂಡಿಸಿ ಅಂಬೇಡ್ಕರ್‌ ಫೋಟೋ ಹಿಡಿದು ಹೆಡ್ ಕಾನ್‌ಸ್ಟೇಬಲ್‌ ಪ್ರತಿಭಟನೆ

    ದಯಾನಂದ್‌ ಅಮಾನತು – ಸರ್ಕಾರದ ನಡೆ ಖಂಡಿಸಿ ಅಂಬೇಡ್ಕರ್‌ ಫೋಟೋ ಹಿಡಿದು ಹೆಡ್ ಕಾನ್‌ಸ್ಟೇಬಲ್‌ ಪ್ರತಿಭಟನೆ

    ಬೆಂಗಳೂರು: ಪೊಲೀಸ್‌ ಕಮಿಷನರ್‌ ಬಿ.ದಯಾನಂದ್‌ (B.Dayanand) ಅವರನ್ನು ಅಮಾನತುಗೊಳಿಸಿದ್ದ ಸರ್ಕಾರ ಆದೇಶದ ವಿರುದ್ಧ ಮಡಿವಾಳ ಠಾಣೆಯ ಹೆಡ್‌ ಕಾನ್ಸ್‌ಟೇಬಲ್‌ ಒಬ್ಬರು ರಾಜಭವನಕ್ಕೆ ತೆರಳಿ ಪ್ರತಿಭಟನೆ ನಡೆಸಿದ್ದಾರೆ.

    ಹೆಡ್‌ ಕಾನ್ಸ್‌ಟೇಬಲ್‌ (Head Constable) ನರಸಿಂಹರಾಜು ಅವರು ಸರ್ಕಾರದ ನಡೆ ಖಂಡಿಸಿ ರಾಜ್ಯಪಾಲರಿಗೆ ದೂರು ನೀಡಲು ತೆರಳಿದ್ದರು. ಈ ವೇಳೆ ಅಂಬೇಡ್ಕರ್‌ ಫೋಟೋ ಹಿಡಿದು, ಕಪ್ಪುಪಟ್ಟಿ ಧರಿಸಿ ರಾಜಭವನದ ಎದುರು ಅವರು ಪ್ರತಿಭಟನೆ ನಡೆಸಿದ್ದಾರೆ. ದೂರಿನಲ್ಲಿ ಪೊಲೀಸ್‌ ಅಧಿಕಾರಿಗಳ ಅಮಾನತು ಆದೇಶ ರದ್ದು ಪಡಿಸಬೇಕು. ಈ ಮೂಲಕ ಪೊಲೀಸ್‌ ಇಲಾಖೆಗೆ ನೈತಿಕ ಸ್ಥೈರ್ಯ ತುಂಬಬೇಕು ಎಂದು ಬರೆದಿದ್ದಾರೆ. ಅವರನ್ನು ವಿಧಾನಸೌಧ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: ಕಾಲ್ತುಳಿತ ಪ್ರಕರಣ – ಬೆಂಗಳೂರು ಪೊಲೀಸ್‌ ಕಮಿಷನರ್‌ ಸೇರಿ 5 ಪೊಲೀಸ್‌ ಅಧಿಕಾರಿಗಳು ಸಸ್ಪೆಂಡ್‌

    ಬುಧವಾರ ಆರ್‌ಸಿಬಿ (RCB) ವಿಜಯೋತ್ಸವದ ವೇಳೆ ಸಂಭವಿಸಿದ ಭೀಕರ ಕಾಲ್ತುಳಿತಕ್ಕೆ 11 ಅಭಿಮಾನಿಗಳು ಸಾವನ್ನಪ್ಪಿದ್ದರು. ಸಂಭ್ರಮಾಚರಣೆ ಹಿನ್ನೆಲೆಯಲ್ಲಿ ವಿಧಾನಸೌಧ ಹಾಗೂ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಾಗರೋಪಾದಿಯಲ್ಲಿ ಜನ ನೆರೆದಿದ್ದರು. ಜನರಲ್ಲಿ ನೂಕುನುಗ್ಗಲಿಂದ ಕಾಲ್ತುಳಿತ ಉಂಟಾಗಿ ಈ ದುರಂತ ಸಂಭವಿಸಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಪೊಲೀಸ್‌ ಕಮಿಷನರ್‌ ಸೇರಿದಂತೆ ಐವರು ಪೊಲೀಸ್‌ ಅಧಿಕಾರಿಗಳನ್ನು ಅಮಾನತುಗೊಳಿಸಿ ಸರ್ಕಾರ ಗುರುವಾರ ಆದೇಶ ಹೊರಡಿಸಿತ್ತು.

    ಪೊಲೀಸ್‌ ಕಮಿಷನರ್‌ ಬಿ.ದಯಾನಂದ್‌, ಅಡಿಷನಲ್‌ ಕಮಿಷನರ್‌ ವಿಕಾಸ್‌ ಕುಮಾರ್‌, ಸೆಂಟ್ರಲ್‌ ಡಿಸಿಪಿ ಶೇಖರ್‌ ತೆಕ್ಕಣ್ಣನವರ್‌, ಎಸಿಪಿ ಬಾಲಕೃಷ್ಣ, ಇನ್‌ಸ್ಪೆಕ್ಟರ್‌ ಗಿರೀಶ್‌ ಅವರನ್ನು ಅಮಾನತು ಮಾಡಲಾಗಿತ್ತು. ಇದನ್ನೂ ಓದಿ: ಬೆಂಗಳೂರು ನೂತನ ಪೊಲೀಸ್‌ ಕಮಿಷನರ್‌ ಆಗಿ ಸೀಮಂತ್‌ ಕುಮಾರ್‌ ಸಿಂಗ್‌ ನೇಮಕ

  • IPL Final | ಸಂಭ್ರಮಾಚರಣೆ ವೇಳೆ ಸಾರ್ವಜನಿಕರಿಗೆ ತೊಂದರೆ ಕೊಟ್ರೆ ಕ್ರಮ – ಬಿ.ದಯಾನಂದ್

    IPL Final | ಸಂಭ್ರಮಾಚರಣೆ ವೇಳೆ ಸಾರ್ವಜನಿಕರಿಗೆ ತೊಂದರೆ ಕೊಟ್ರೆ ಕ್ರಮ – ಬಿ.ದಯಾನಂದ್

    ಬೆಂಗಳೂರು: ಇಂದು ಆರ್‌ಸಿಬಿ (RCB) ಹಾಗೂ ಪಂಜಾಬ್ (Punjab) ನಡುವೆ ಫೈನಲ್ ಪಂದ್ಯ ನಡೆಯಲಿರುವ ಹಿನ್ನೆಲೆ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ (B Dayanand) ಖಡಕ್ ಸೂಚನೆ ನೀಡಿದ್ದಾರೆ.

    18 ವರ್ಷಗಳ ಕನಸನ್ನು ಹೊತ್ತುಕೊಂಡು ಫೈನಲ್‌ಗೆ ಲಗ್ಗೆಯಿಟ್ಟಿರುವ ಆರ್‌ಸಿಬಿ ಇಂದು ಪಂಜಾಬ್ ವಿರುದ್ಧ ಕೊನೆಯ ಪಂದ್ಯದಲ್ಲಿ ಸೆಣಸಾಡಲಿದೆ. ಹೀಗಾಗಿ ಬಹುಕಾಲದ ಆಸೆ ಈಡೇರಿಕೆಗಾಗಿ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.ಇದನ್ನೂ ಓದಿ: IPL 2025 Final – ಪಂದ್ಯಕ್ಕೂ ಮುನ್ನವೇ ಮೋದಿ ಸ್ಟೇಡಿಯಂ ಹೊರಗೆ ಸಿಲಿಂಡರ್ ಬ್ಲಾಸ್ಟ್

    ಪಂದ್ಯದ ಬಳಿಕ ಯಾವುದೇ ತೊಂದರೆಯಾಗದಂತೆ ಪೊಲೀಸ್ ಇಲಾಖೆ ಕೆಲವು ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದೆ. ಈಗಾಗಲೇ ನಗರದ ಹಲವು ಸಾರ್ವಜನಿಕ ಸ್ಥಳಗಳಲ್ಲಿ ಪ್ರದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಹೆಚ್ಚಿನ ಪೊಲೀಸರ ನಿಯೋಜನೆ ಮಾಡಲಾಗಿದೆ. ಇನ್ನೂ ಸಾರ್ವಜನಿಕ ಸ್ಥಳಗಳಲ್ಲಿ ಎಲ್‌ಇಡಿ ಸ್ಕ್ರೀನ್ ಅಳವಡಿಸಿದ್ರೆ ಅನುಮತಿ ಪಡೆಯಬೇಕು ಎಂದು ತಿಳಿಸಿದ್ದಾರೆ.

    ಇನ್ನೂ ಪೊಲೀಸರಿಗೆ ಮಾಹಿತಿ ಇಲ್ಲದೇ ಎಲ್‌ಇಡಿ ಸ್ಕ್ರೀನ್ ಅಳವಡಿಸಿದ್ರೆ ಹಾಗೂ ಪಂದ್ಯದ ಬಳಿಕ ಸಂಭ್ರಮಾಚರಣೆ ಮಾಡಿ, ಇತರರಿಗೆ ತೊಂದರೆಕೊಟ್ಟರೆ ಅಂತವರ ಮೇಲೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಖಡಕ್ ಸೂಚನೆ ನೀಡಿದ್ದಾರೆ.

    ಇಂದು ಸಂಜೆ 7:30ಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿರುವ ಫೈನಲ್ ಪಂದ್ಯದಲ್ಲಿ ಆರ್‌ಸಿಬಿ ಹಾಗೂ ಪಂಜಾಬ್ ತಂಡಗಳು ಮುಖಾಮುಖಿಯಾಗಲಿವೆ.ಇದನ್ನೂ ಓದಿ: Chamarajanagar | ಶಿಕ್ಷಕರ ಒಳಜಗಳ ಆರೋಪ – ಮರಿಯಾಲ ಸರ್ಕಾರಿ ಶಾಲೆಯಲ್ಲಿ ಝೀರೋ ಅಡ್ಮಿಷನ್

  • ಬೆಂಗಳೂರಿನಲ್ಲಿ ಗಣೇಶನನ್ನು ಕೂರಿಸ್ತೀರಾ – ಪೊಲೀಸರ ಮಾರ್ಗಸೂಚಿಯಲ್ಲಿ ಏನಿದೆ?

    ಬೆಂಗಳೂರಿನಲ್ಲಿ ಗಣೇಶನನ್ನು ಕೂರಿಸ್ತೀರಾ – ಪೊಲೀಸರ ಮಾರ್ಗಸೂಚಿಯಲ್ಲಿ ಏನಿದೆ?

    ಬೆಂಗಳೂರು: ಗೌರಿ ಗಣೇಶ ಹಬ್ಬದ (Gowri Ganesha Festival)  ಹಿನ್ನೆಲೆ ನಗರದ ಪೊಲೀಸ್ ಆಯುಕ್ತ ಬಿ.ದಯಾನಂದ್ ಅವರು ಹಬ್ಬ ಆಚರಿಸುವವರಿಗೆ ಹಾಗೂ ಸಾರ್ವಜನಿಕರಿಗೆ ನಿಯಮಗಳನ್ನು ಪಾಲಿಸುವಂತೆ ಸೂಚನೆ ನೀಡಿದ್ದಾರೆ.

    ಈ ಬಗ್ಗೆ ಮಾರ್ಗಸೂಚಿ ಬಿಡುಗಡೆ ಮಾಡಿರುವ ಪೊಲೀಸ್ ಇಲಾಖೆ, ಪ್ರತಿಷ್ಠಾಪನೆಗೂ ಮುನ್ನ ಸಂಬಂಧಪಟ್ಟವರ ಅನುಮತಿ ಪಡೆಯಬೇಕು. ಸಾರ್ವಜನಿಕರಿಗೆ ವಾಹನ ಸವಾರರಿಗೆ ತೊಂದರೆಯಾಗಬಾರದು. 63 ಜನ ನೋಡಲ್ ಅಧಿಕಾರಿಗಳು ನಗರದಾದ್ಯಂತ ಕಾರ್ಯನಿರ್ವಹಿಸಲಿದ್ದಾರೆ. ಬಲವಂತವಾಗಿ ಚಂದ ಎತ್ತುವವರ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು. ಸಾರ್ವಜನಿಕರ ಗಮನಕ್ಕೆ ಬಂದರೆ ನಮ್ಮ ಗಮನಕ್ಕೆ ತರಬೇಕು ಎಂದು ತಿಳಿಸಿದೆ. ಇದನ್ನೂ ಓದಿ: ಸುಪ್ರೀಂ ಛೀಮಾರಿ ಹಾಕಿದ ಬೆನ್ನಲ್ಲೇ ಕ್ಷಮೆಯಾಚಿಸಿದ ರೇವಂತ್ ರೆಡ್ಡಿ

    ಮಾರ್ಗಸೂಚಿಯಲ್ಲಿ ಏನಿದೆ?
    ಗಣೇಶ ಪ್ರತಿಷ್ಠಾಪನೆಗೆ ಶಾಮಿಯಾನ ಹಾಕಲು ಬಿಬಿಎಂಪಿ (BBMP) ಅನುಮತಿ ಪಡೆಯುವುದು ಕಡ್ಡಾಯ. ವಿವಾದಿತ ಸ್ಥಳದಲ್ಲಿ ಗಣೇಶ ಪ್ರತಿಷ್ಠಾಪನೆ ಮಾಡುವಂತಿಲ್ಲ. ಫ್ಲೆಕ್ಸ್ ಮತ್ತು ಬ್ಯಾನರ್ ಸಂಬಂಧಿಸಿದಂತೆ ಹೈಕೋರ್ಟ್ ಮತ್ತು ಬಿಬಿಎಂಪಿ ನಿಯಮ ಪಾಲಿಸಬೇಕು. ಪಿಒಪಿ ಗಣೇಶ ಸಂಬಂಧಿಸಿದಂತೆ ನಿಯಮಗಳನ್ನು ಪಾಲಿಸಬೇಕು. ಇದಕ್ಕೆ ಸಂಬಂಧಿಸಿದಂತೆ ಮಾಲಿನ್ಯ ನಿಯಂತ್ರಣ ಮಂಡಳಿಯವರು ಕ್ರಮ ತೆಗೆದುಕೊಳ್ಳುತ್ತಾರೆ. ಇಬ್ಬರು ಆಯೋಜಕರು ಗಣೇಶ ಕೂರಿಸುವ ಸ್ಥಳದಲ್ಲಿ ಇರಬೇಕು.

    ಅಗ್ನಿಶಾಮಕ ದಳದವರ ಸಹಾಯ ಪಡೆಯಬೇಕು ಮತ್ತು ಬೆಳಕಿನ ವ್ಯವಸ್ಥೆ ಇರಬೇಕು. ಯಾವುದೇ ರೀತಿಯ ನೂಕು ನುಗ್ಗಲಿಗೆ ಅವಕಾಶ ಮಾಡಿಕೊಡಬಾರದು. ಮನರಂಜನೆ ಕಾರ್ಯಕ್ರಮಕ್ಕೆ ಮೊದಲೇ ಅನುಮತಿ ಪಡೆಯಬೇಕು. ಮನರಂಜನಾ ಕಾರ್ಯಕ್ರಮಕ್ಕೆ ರಾತ್ರಿ 10ರ ವರೆಗೆ ಮಾತ್ರ ಅವಕಾಶ. ಧ್ವನಿವರ್ಧಕಗಳಿಗೆ ಬೆಳಿಗ್ಗೆ 6 ಗಂಟೆಯಿಂದ ರಾತ್ರಿ 10 ಗಂಟೆವರೆಗೆ ಅವಕಾಶ. ಯಾವುದೇ ಡಿಜೆ ಸೌಂಡ್ ಸಿಸ್ಟಮ್‌ಗೆ ಯಾವ ಸಮಯದಲ್ಲೂ ಅವಕಾಶ ಇಲ್ಲ ಎಂದು ಇಲಾಖೆ ಸ್ಪಷ್ಟಪಡಿಸಿದೆ. ಇದನ್ನೂ ಓದಿ: ಕಿತ್ತೂರು ಪಟ್ಟಣ ಪಂಚಾಯಿತಿ ಬಿಜೆಪಿ ಸದಸ್ಯನ ಕಿಡ್ನ್ಯಾಪ್ – ಕಾಂಗ್ರೆಸ್ ಶಾಸಕನ ಆಪ್ತರ ವಿರುದ್ಧ ದೂರು

    ಸಂಚಾರ ಒತ್ತಡವಿರುವ ರಸ್ತೆಗಳಲ್ಲಿ ಗಣೇಶ ಪ್ರತಿಷ್ಠಾಪಿಸುವಂತಿಲ್ಲ. ನಿಗದಿ ಪಡಿಸಿದ ಮಾರ್ಗದಲ್ಲೇ ಗಣೇಶ ವಿಸರ್ಜನಾ ಮೆರವಣಿಗೆ ತೆರಳಬೇಕು. ಪೂರ್ವನಿಯೋಜಿತ ವಿಸರ್ಜನಾ ಸ್ಥಳದಲ್ಲೇ ಗಣೇಶ ವಿಸರ್ಜಿಸಬೇಕು. 21 ರಂದು ನಡೆದ ಸಭೆಯಲ್ಲಿ ಈ ಎಲ್ಲಾ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಇಲಾಖೆಯ ಗೈಡ್‌ಲೈನ್ ನಲ್ಲಿ ತಿಳಿಸಲಾಗಿದೆ. ಇದನ್ನೂ ಓದಿ: ದ್ವೇಷದ ಪೋಸ್ಟ್‌ – ವಿಜಯೇಂದ್ರ ವಿರುದ್ಧದ ಎಫ್‌ಐಆರ್‌ಗೆ ಹೈಕೋರ್ಟ್‌ ತಡೆ

  • ಮೂರು ತಿಂಗಳಲ್ಲಿ 242 ಭ್ರೂಣ ಹತ್ಯೆ: ಪೊಲೀಸ್ ಆಯುಕ್ತ

    ಮೂರು ತಿಂಗಳಲ್ಲಿ 242 ಭ್ರೂಣ ಹತ್ಯೆ: ಪೊಲೀಸ್ ಆಯುಕ್ತ

    – ಹೆಣ್ಣು ಅಂತ ಗೊತ್ತಾದ್ರೆ ಭ್ರೂಣ ಹತ್ಯೆ ಮಾಡ್ತಿದ್ರು

    ಬೆಂಗಳೂರು: ಮಂಡ್ಯದ (Mandya) ಆಲೆಮನೆಯಲ್ಲಿ (Alemane) ಭ್ರೂಣ ಹತ್ಯೆ (Foeticide) ಪ್ರಕರಣಕ್ಕೆ ಸಂಬಂಧಿಸಿದಂತೆ ಭ್ರೂಣ ಪತ್ತೆ ಮಾಡಿ ಹತ್ಯೆ ಮಾಡುತ್ತಿರುವುದು ಪತ್ತೆಯಾಗಿದೆ. ಮೂರು ತಿಂಗಳಲ್ಲಿ 242 ಭ್ರೂಣ ಹತ್ಯೆ ಮಾಡಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ (B.Dayanand) ಹೇಳಿಕೆ ನೀಡಿದ್ದಾರೆ.

    ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಹೆಣ್ಣು ಭ್ರೂಣ ಹತ್ಯೆ ಮಾಡುತ್ತಿದ್ದ ಜಾಲವನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಅ.15ರಂದು ವಾಹನ ತಪಾಸಣೆ ಮಾಡುತ್ತಿದ್ದರು. ಈ ವೇಳೆ ಆರೋಪಿಗಳು ಕಾರು ನಿಲ್ಲಸದೇ ಹೋಗಿದ್ದಾರೆ. ಅವರನ್ನು ಹಿಂಬಾಲಿಸಿ ವಿಚಾರಣೆ ನಡೆಸಿದ ವೇಳೆ ಘಟನೆ ಬೆಳಕಿಗೆ ಬಂದಿದೆ. ಹೆಣ್ಣು ಮಗು ಎಂದು ಗೊತ್ತಾದರೇ ಹತ್ಯೆ ಮಾಡುತ್ತಿರುವುದು ಗೊತ್ತಾಗಿದೆ. ಇಲ್ಲಿಯವರೆಗೂ 9 ಜನರನ್ನು ಬಂದಿಸಿದ್ದು, ಇಬ್ಬರು ಡಾಕ್ಟರ್‌ಗಳು, ಮೂವರು ಲ್ಯಾಬ್ ಟೆಕ್ನಿಷಿಯನ್ ಮತ್ತು ಮಧ್ಯವರ್ತಿಗಳು ಸಿಕ್ಕಿದ್ದಾರೆ. ಇವರೆಲ್ಲರೂ ಕೂಡಾ ಮೈಸೂರು (Mysuru) ಮತ್ತು ಮಂಡ್ಯ ಮೂಲದವರಾಗಿದ್ದಾರೆ ಎಂದು ಸ್ಪಷ್ಟನೆ ನೀಡಿದರು. ಇದನ್ನೂ ಓದಿ: 1 ವರ್ಷದ ಬಳಿಕ ರೇಣುಕಾಚಾರ್ಯ ಅಣ್ಣನ ಮಗ ಸಾವು ಪ್ರಕರಣ ಮುಕ್ತಾಯ; ಅಪಘಾತದಿಂದಲೇ ಸಾವು ಎಂದು ವರದಿ

    ಮಂಡ್ಯದ ಆಲೆಮನೆಯಲ್ಲಿ ಭ್ರೂಣ ಹತ್ಯೆ ಮಾಡಿರುವುದು ಪತ್ತೆಯಾಗಿದ್ದು, ಮೂರು ತಿಂಗಳಲ್ಲಿ 242 ಭ್ರೂಣ ಹತ್ಯೆ ಮಾಡಿದ್ದಾರೆ. ಪ್ರತಿ ಭ್ರೂಣ ಹತ್ಯೆಗೆ 25ರಿಂದ 30,000 ರೂ. ಚಾರ್ಜ್ ಮಾಡುತ್ತಿದ್ದರು. ಪತ್ತೆಗೆ 25ರಿಂದ 30,000 ರೂ. ಹಾಗೂ ಹತ್ಯೆಗೆ ಮತ್ತೆ 30,000 ರೂ. ಸೇರಿದಂತೆ ಒಟ್ಟು 60,000 ರೂ. ಪ್ಯಾಕೇಜ್ ರೀತಿಯಲ್ಲಿ ದಂಧೆ ನಡೆಸುತ್ತಿದ್ದರು. ತನಿಖೆ ಮುಂದುವರಿಸಿದ್ದೇವೆ. ಇನ್ನೂ ಇಬ್ಬರು ಮಧ್ಯವರ್ತಿಗಳು ಸಿಗಬೇಕಿದೆ. ಅವರು ಸಿಕ್ಕಮೇಲೆ ಇತರೆ ಮಾಹಿತಿಗಳು ಸಿಗಬೇಕಿದೆ ಎಂದರು. ಇದನ್ನೂ ಓದಿ: ಬೆಂಗ್ಳೂರಲ್ಲಿ ಹಸುಗೂಸುಗಳ ಮಾರಾಟ ದಂಧೆ – ಬೃಹತ್ ಜಾಲ ಭೇದಿಸಿದ ಸಿಸಿಬಿ, 8 ಮಂದಿ ಅರೆಸ್ಟ್

    ಮೂರು ತಿಂಗಳಲ್ಲಿ 242 ಭ್ರೂಣ ಹತ್ಯೆ ಮಾಡಿದ್ದು, ಆರೋಪಿಗಳೇ ಒಪ್ಪಿಕೊಂಡಂತೆ ಎರಡು ವರ್ಷಗಳಿಂದ ಭ್ರೂಣ ಹತ್ಯೆ ಮಾಡುತ್ತಿದ್ದಾರೆ. ಒಂದು ವರ್ಷಕ್ಕೆ ಕನಿಷ್ಠ 1,000 ಭ್ರೂಣ ಹತ್ಯೆ ಮಾಡುತ್ತಾರೆ. ಎರಡು ವರ್ಷಕ್ಕೆ 2,000 ಭ್ರೂಣ ಹತ್ಯೆ ಮಾಡಿರುವ ಶಂಕೆ ಇದೆ. ಪೊಲೀಸರ ತನಿಖೆಯಲ್ಲಿ ಮೂರು ವರ್ಷದಿಂದ ಕೃತ್ಯವೆಸಗಿರುವುದು ಗೊತ್ತಾಗಿದೆ. ಅಲ್ಲಿಗೆ 3,000 ದಷ್ಟು ಭ್ರೂಣ ಹತ್ಯೆ ಮಾಡಿರುವ ಸಾಧ್ಯತೆ ಇದೆ ಎಂದು ತಿಳಿಸಿದರು. ಇದನ್ನೂ ಓದಿ: ಅಪ್ರಾಪ್ತ ಮಗಳ ಮೇಲೆಯೇ ರೇಪ್ ಮಾಡಲು ಪ್ರೇಮಿಗೆ ಅವಕಾಶ ಕೊಟ್ಟ ಮಹಿಳೆಗೆ 40 ವರ್ಷ ಜೈಲು ಶಿಕ್ಷೆ