Tag: ಬಿ.ವೈ.ರಾಘವೇಂದ್ರ

  • ಪ್ರಸಾದ್‌ ಯೋಜನೆಯಡಿ ಕೊಲ್ಲೂರು ದೇವಸ್ಥಾನ ಸೇರಿಸಿ: ನಿರ್ಮಲಾ ಸೀತಾರಾಮನ್‌ಗೆ ಬಿ.ವೈ.ರಾಘವೇಂದ್ರ ಮನವಿ

    ಪ್ರಸಾದ್‌ ಯೋಜನೆಯಡಿ ಕೊಲ್ಲೂರು ದೇವಸ್ಥಾನ ಸೇರಿಸಿ: ನಿರ್ಮಲಾ ಸೀತಾರಾಮನ್‌ಗೆ ಬಿ.ವೈ.ರಾಘವೇಂದ್ರ ಮನವಿ

    – ಕೇಂದ್ರ ಹಣಕಾಸು ಸಚಿವೆ ಭೇಟಿಯಾದ ಶಿವಮೊಗ್ಗ ಸಂಸದ
    – ನಬಾರ್ಡ್‌ ಸಹಾಯಧನ ಬಾಕಿ ಉಳಿದ ಹಣ ಶೀಘ್ರ ಬಿಡುಗಡೆಗೆ ಮನವಿ

    ನವದೆಹಲಿ: ಪ್ರಸಾದ್‌ ಯೋಜನೆಯಡಿ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನವನ್ನು (Kollur Mookambika Temple) ಸೇರಿಸುವಂತೆ ಕೇಂದ್ರ ಸಚಿವ ನಿರ್ಮಲಾ ಸೀತಾರಾಮನ್‌ ಅವರಿಗೆ ಸಂಸದ ಬಿ.ವೈ.ರಾಘವೇಂದ್ರ (B.Y.Raghavendra) ಮನವಿ ಮಾಡಿದ್ದಾರೆ.

    ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಅವರನ್ನು ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಭೇಟಿಯಾಗಿದ್ದಾರೆ. ಈ ವೇಳೆ ಹಲವಾರು ಬೇಡಿಕೆಗಳನ್ನು ಸಚಿವರ ಮುಂದಿಟ್ಟಿದ್ದಾರೆ. ಇದನ್ನೂ ಓದಿ: ಜನೌಷಧಿ ಕೇಂದ್ರಗಳನ್ನು ಮುಚ್ಚಿಸಿಲ್ಲ, ಸರ್ಕಾರಿ ಆಸ್ಪತ್ರೆ ಆವರಣಗಳಲ್ಲಿ ಮಾತ್ರ ನಿರ್ಬಂಧಿಸಲು ನಿರ್ಧಾರ: ದಿನೇಶ್ ಗುಂಡೂರಾವ್

    ಕೊಲ್ಲೂರು ಮೂಕಾಂಬಿಕಾ ದೇವಾಲಯವು ಧಾರ್ಮಿಕ ಮತ್ತು ಪ್ರಕೃತಿ ಸೌಂದರ್ಯದಿಂದ ಕೂಡಿದ್ದು, ಪ್ರವಾಸೋದ್ಯಮಕ್ಕೆ ಉತ್ತಮ ಸ್ಥಳವಾಗಿದೆ. ಪ್ರವಾಸಿಗರ ಆಕರ್ಷಣೆಯಿಂದ ಹೆಚ್ಚಿನ ಹೂಡಿಕೆ ಸಾಧ್ಯವಾಗಲಿದೆ. ಶಿವಮೊಗ್ಗ, ಮಂಗಳೂರು ಹಾಗೂ ಉಡುಪಿ CGHS ಕ್ಷೇಮ ಕೇಂದ್ರಗಳಿಗೆ ಹುದ್ದೆಗಳ ಮಂಜೂರಾತಿ ಹಾಗೂ ಅನುದಾನ ಬಿಡುಗಡೆಗೆ ಆದಷ್ಟು ಬೇಗ ಅನುಮೋದನೆ ನೀಡಬೇಕೆಂದು ಕೇಳಿಕೊಂಡಿದ್ದಾರೆ.

    ನಬಾರ್ಡ್ ಸಹಾಯಧನ ಬಾಕಿ ಉಳಿದ ಹಣವನ್ನು ಶೀಘ್ರ ಬಿಡುಗಡೆ ಮಾಡಿ. ಈ ಯೋಜನೆಯಿಂದ ರಾಜ್ಯದ ಅಡಿಕೆ ಬೆಳೆಗಾರರಿಗೆ ಮೂಲಸೌಕರ್ಯ ಹಾಗೂ ಮೌಲ್ಯವರ್ಧನೆಯ ಲಾಭ ಸಿಗಲಿದೆ ಎಂದು ಸಚಿವರಿಗೆ ಮನವರಿಕೆ ಮಾಡಿದ್ದಾರೆ. ಇದನ್ನೂ ಓದಿ: ಉಕ್ಕು ವಲಯ ಅಭಿವೃದ್ಧಿ – ಒಡಿಶಾ ಮುಖ್ಯಮಂತ್ರಿ ಜೊತೆ ಹೆಚ್‌ಡಿಕೆ ಚರ್ಚೆ

  • ಎರಡು ತಿಂಗಳಲ್ಲಿ ಶಿವಮೊಗ್ಗ ಏರ್‌ಪೋರ್ಟ್‌ನಿಂದ ಕಾರ್ಗೋ ವಿಮಾನಗಳ ಹಾರಾಟ : ಬಿ.ವೈ ರಾಘವೇಂದ್ರ

    ಎರಡು ತಿಂಗಳಲ್ಲಿ ಶಿವಮೊಗ್ಗ ಏರ್‌ಪೋರ್ಟ್‌ನಿಂದ ಕಾರ್ಗೋ ವಿಮಾನಗಳ ಹಾರಾಟ : ಬಿ.ವೈ ರಾಘವೇಂದ್ರ

    ಶಿವಮೊಗ್ಗ: ಎರಡು ತಿಂಗಳಲ್ಲಿ ಶಿವಮೊಗ್ಗದ (Shivamogga) ಸೋಗಾನೆ ವಿಮಾನ ನಿಲ್ದಾಣದಿಂದ ಕಾರ್ಗೋ ವಿಮಾನಗಳು (Cargo flight) ಹಾರಾಟ ಆರಂಭಿಸಲಿವೆ ಎಂದು ಸಂಸದ ಬಿ.ವೈ ರಾಘವೇಂದ್ರ (B.Y.Raghavendra) ತಿಳಿಸಿದ್ದಾರೆ.

    ನಗರದಲ್ಲಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಈ ವೇಳೆ, ಕಾರ್ಗೋ ವಿಮಾನ ಹಾರಾಟಕ್ಕೆ ಅಗತ್ಯವಿರುವ ಸೌಲಭ್ಯ ಕಲ್ಪಿಸಲು 50 ಕೋಟಿ ರೂ. ಹಣ ಬಿಡುಗಡೆಯಾಗಿದೆ. ಇನ್ನೂ ಒಂದೆರಡು ತಿಂಗಳಲ್ಲಿ ವಿಮಾನಗಳು ಹಾರಾಟ ನಡೆಸಲಿವೆ ಎಂದಿದ್ದಾರೆ.

    ಒಂದೂವರೆ ಎರಡು ತಿಂಗಳಲ್ಲಿ ನೈಟ್‌ ಲ್ಯಾಂಡಿಂಗ್‌ ಸೌಲಭ್ಯ ಲಭ್ಯವಾಗಲಿದೆ. ವಿಸಿಬಲಿಟಿ ಸಮಸ್ಯೆ ಈಗ ಪರಿಹಾರವಾಗಿದೆ. ಅದರ ಬೆನ್ನಿಗೆ ಕಾರ್ಗೋ ವಿಮಾನಗಳ ಹಾರಾಟಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ. ಇದರಿಂದ ರೈತರು ಬೆಳೆದ ಬೆಳೆ ಮತ್ತು ಇತರೆ ವಸ್ತುಗಳ ರಫ್ತು ಮಾಡಲು ಅನುಕೂಲ ಆಗಲಿದೆ ಎಂದು ಅವರು ತಿಳಿಸಿದ್ದಾರೆ.

  • ಶರಾವತಿ ಜಲವಿದ್ಯುತ್‌ ಯೋಜನೆ – ಸಂಸತ್‌ನಲ್ಲಿ ಕನ್ನಡದಲ್ಲೇ ಪ್ರಸ್ತಾಪಿಸಿದ ಬಿ.ವೈ.ರಾಘವೇಂದ್ರ

    ಶರಾವತಿ ಜಲವಿದ್ಯುತ್‌ ಯೋಜನೆ – ಸಂಸತ್‌ನಲ್ಲಿ ಕನ್ನಡದಲ್ಲೇ ಪ್ರಸ್ತಾಪಿಸಿದ ಬಿ.ವೈ.ರಾಘವೇಂದ್ರ

    ನವದೆಹಲಿ: ಶರಾವತಿ ಜಲವಿದ್ಯುತ್‌ ಯೋಜನೆ ಸಂತ್ರಸ್ತರ ವಿಚಾರವನ್ನು ಸಂಸದ ಬಿ.ವೈ.ರಾಘವೇಂದ್ರ ಅವರು ಲೋಕಸಭೆಯಲ್ಲಿ ಕನ್ನಡದಲ್ಲೇ ಪ್ರಸ್ತಾಪಿಸಿ ಗಮನ ಸೆಳೆದರು.

    ಅನೇಕ ವರ್ಷಗಳ ಒಂದು ಸಮಸ್ಯೆ. ಸ್ವಾತಂತ್ರ್ಯ ಬಂದು 77 ವರ್ಷ ಆಯ್ತು. ಸಂವಿಧಾನ ಬಂದು 75 ವರ್ಷ ಆಯ್ತು. ನಾನು ಇವತ್ತು ಶರಾವತಿ ಜಲವಿದ್ಯುತ್‌ ಯೋಜನೆ ಸಂತ್ರಸ್ತರ ವಿಚಾರವನ್ನು ಪ್ರಸ್ತಾಪಿಸುತ್ತಿದ್ದೇನೆ. ಇದಕ್ಕೂ ಹತ್ತಿರತ್ತಿರ 75 ವರ್ಷಗಳು ತುಂಬುತ್ತಿವೆ ಎಂದು ಗಮನಕ್ಕೆ ತಂದರು.

    1958-64 ರ ನಡುವೆ ಶರಾವತಿ ಯೋಜನೆ ಆಗುತ್ತದೆ. 4 ರಿಂದ 5 ಸಾವಿರ ರೈತರ ಕುಟುಂಬಗಳ ಕೃಷಿ ಭೂಮಿ ಈ ಯೋಜನೆಯಿಂದ ಮುಳುಗಡೆಯಾಗುತ್ತದೆ. ಇದುವರೆಗೂ ಸಂತ್ರಸ್ತ ರೈತರಿಗೆ ಕೃಷಿ ಭೂಮಿ ಒದಗಿಸಿಕೊಡುವ ಕೆಲಸವನ್ನು ಹಿಂದಿನ ಸರ್ಕಾರಗಳು ಮಾಡಿಲ್ಲ ಎಂದು ತಿಳಿಸಿದ್ದಾರೆ.

    ರಾಜ್ಯ ಸರ್ಕಾರ 1958-69 ರ ಅವಧಿಯಲ್ಲಿ 9136 ಎಕರೆ ಅರಣ್ಯ ಪ್ರದೇಶವನ್ನು ಸಂತ್ರಸ್ತರಿಗೆ ಪುನರ್ವಸತಿ ಕೊಡುವುದಕ್ಕಾಗಿ ಪ್ರಸ್ತಾವನೆ ಕಳಿಸಿರುತ್ತಾರೆ. 50 ವರ್ಷಗಳ ಹಿಂದೆಯೇ ಈ ಕೆಲಸ ಆಗಿದೆ. ಆದರೆ, ಇದುವರೆಗೂ ಯಾವುದೇ ಪರಿಹಾರ ಸಿಕ್ಕಿಲ್ಲ. ಯಾವುದೇ ಸೌಲಭ್ಯ ಸಿಗದೇ ರೈತರು ಕಣ್ಣೀರಲ್ಲಿ ಕೈತೊಳೆಯುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

    ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸಲು ಇದೂವರೆಗೂ ಆಗಿಲ್ಲ. ಅರಣ್ಯವನ್ನು ಡಿ ರಿಸರ್ವ್ ಮಾಡಿ ಪುನರ್ವಸತಿ ಕಲ್ಪಿಸಬೇಕು ಎಂದು ಕೇಂದ್ರ ಪರಿಸರ ಸಚಿವಾಲಯಕ್ಕೆ ಸಂಸದರು ಒತ್ತಾಯ ಮಾಡಿದ್ದಾರೆ.

  • ಜೋಗ್ ಫಾಲ್ಸ್ ಅಂತಾರಾಷ್ಟ್ರೀಯ ಮಟ್ಟದ ಪ್ರವಾಸಿ ತಾಣವಾಗಬೇಕು: ಬಿ.ವೈ ರಾಘವೇಂದ್ರ

    ಜೋಗ್ ಫಾಲ್ಸ್ ಅಂತಾರಾಷ್ಟ್ರೀಯ ಮಟ್ಟದ ಪ್ರವಾಸಿ ತಾಣವಾಗಬೇಕು: ಬಿ.ವೈ ರಾಘವೇಂದ್ರ

    ಶಿವಮೊಗ್ಗ: ಜಿಲ್ಲೆಯ (Shivamogga) ಜೋಗ ಜಲಪಾತ (Jog Falls) ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರವಾಸೋದ್ಯಮ ತಾಣ ಆಗಬೇಕು ಎಂದು ಸಂಸದ ಬಿ.ವೈ ರಾಘವೇಂದ್ರ (B.Y Raghavendra) ಹೇಳಿದ್ದಾರೆ.

    ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಲೆನಾಡಿನ ಪ್ರಕೃತಿ ಕೊಟ್ಟ ಪ್ರವಾಸೋದ್ಯಮ ಸ್ಥಳ ಜೋಗ ಜಲಪಾತ. ಇಲ್ಲಿ ಪ್ರವಾಸಿಗರಿಗಾಗಿ ಹೋಟೆಲ್ ನಿರ್ಮಾಣಕ್ಕೆ ಅನುಮತಿ ಸಿಕ್ಕಿದೆ. ಆದರೆ ಸರ್ಕಾರ ಅನುದಾನ ಬಿಡುಗಡೆ ಮಾಡಿಲ್ಲ ಎಂದು ಆರೋಪಿಸಿದ್ದಾರೆ.

    ಅಭಿವೃದ್ದಿ ಬಗ್ಗೆ ಅನೇಕ ಸರ್ಕಾರಗಳು ಭಾಷಣ ಮಾಡಿಕೊಂಡು ಬರುತ್ತಿವೆ. ಜೋಗ ಅಭಿವೃದ್ದಿಗೆ ಯಡಿಯೂರಪ್ಪ ಸಾಕಷ್ಟು ಅನುದಾನ ಕೊಟ್ಟು, ಸಾಕಷ್ಟು ಅಭಿವೃದ್ಧಿಯಾಗುತ್ತಿದೆ. ಹೋಟೆಲ್ ನಿರ್ಮಾಣ ಮಾಡಲು ಅನುಮತಿ ಸಿಕ್ಕಿದೆ. ಹೊರಗಡೆಯಿಂದ ಬರುವ ಪ್ರವಾಸಿಗರಿಗೆ ಹೋಟೆಲ್ ಅವಶ್ಯಕತೆ ಇತ್ತು. ಆದಷ್ಟು ಬೇಗ ಕಾಮಗಾರಿ ಮುಗಿಯಬೇಕು. ಶಿವಮೊಗ್ಗ ಸಮಗ್ರ ಪ್ರವಾಸಿ ತಾಣವಾಗಬೇಕು ಎಂದಿದ್ದಾರೆ.

    ಪ್ರವಾಸಿಗರು ಬಂದಾಗ ಎಲ್ಲಾ ರೀತಿಯ ಸೌಲಭ್ಯಗಳು ಇಲ್ಲಿ ಸಿಗಬೇಕು. ನೋವಿನ ಸಂಗತಿ ಎಂದರೆ ಪ್ರವಾಸೋದ್ಯಮ ಇಲಾಖೆ ಸಕ್ರೆಬೈಲು ಅಭಿವೃದ್ಧಿಯ 60 ಕೋಟಿ ರೂ. ಹಣ ವಾಪಸ್ ಪಡೆದಿದೆ. ಜೋಗದ ಅಭಿವೃದ್ದಿಗೆ 180 ಕೋಟಿ ರೂ. ಹಣ ಹಿಂದಿನ ಸರ್ಕಾರ ಬಿಡುಗಡೆ ಮಾಡಿತ್ತು. ಈಗ ಕೇವಲ 80 ಕೋಟಿ ರೂ. ಮಾತ್ರ ಹಣ ಬಿಡುಗಡೆ ಮಾಡಿದ್ದಾರೆ. 100 ಕೋಟಿ ರೂ. ಬಿಡುಗಡೆ ಆಗಬೇಕಿದೆ. ಅಲ್ಲಮಪ್ರಭು ಜನ್ಮಸ್ಥಳ, ಚಂದ್ರಗುತ್ತಿ ಅಭಿವೃದ್ಧಿ ಹಣ ಹಿಂಪಡೆದಿದ್ದಾರೆ. ಪ್ರವಾಸೋದ್ಯಮ ಸಚಿವರಿಗೆ ಹಣ ಬಿಡುಗಡೆ ಮಾಡುವಂತೆ ಮನವಿ ಮಾಡುತ್ತೇನೆ ಎಂದಿದ್ದಾರೆ.

    ಕಳಸವಳ್ಳಿ – ಸಿಗಂದೂರು ಸೇತುವೆ ಆಗುತ್ತಿದೆ. ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಈಗ ನಷ್ಟ ಆಗಬಹುದು ಆದರೆ ಮುಂದೆ ಲಾಭ ಬರುತ್ತದೆ. ವಿಮಾನ ನಿಲ್ದಾಣದಿಂದ ಹೆಚ್ಚಿನ ವಿಮಾನ ಹಾರಾಟ ಮಾಡುತ್ತಿವೆ. ಪ್ರವಾಸೋದ್ಯಮ ಅಭಿವೃದ್ಧಿ ಪಡಿಸಿದರೆ 2-3 ವರ್ಷದಲ್ಲೇ ಸರ್ಕಾರಕ್ಕೆ ಹಣ ವಾಪಸ್ ಬರಲಿದೆ ಎಂದಿದ್ದಾರೆ.

  • ಮತ ಎಣಿಕೆ ಶುರುವಾಗ್ತಿದ್ದಂತೆ ಬಿ.ವೈ ರಾಘವೇಂದ್ರ ಟೆಂಪಲ್ ರನ್

    ಮತ ಎಣಿಕೆ ಶುರುವಾಗ್ತಿದ್ದಂತೆ ಬಿ.ವೈ ರಾಘವೇಂದ್ರ ಟೆಂಪಲ್ ರನ್

    ಶಿವಮೊಗ್ಗ: .ಲೋಕಸಭಾ ಚುನಾವಣಾ ಫಲಿತಾಂಶ ಇಂದು ಹೊರಬೀಳಲಿದ್ದು, ಈ ಹಿನ್ನೆಲೆಯಲ್ಲಿ ಇಂದು ಬೆಳ್ಳಂಬೆಳಗ್ಗೆ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಟೆಂಪಲ್ ರನ್ ಮಾಡಿದ್ದಾರೆ.

    ಶಿವಮೊಗ್ಗ ಲೋಕಸಭಾ ಕ್ಷೇತ್ರದ ಮತ ಎಣಿಕೆ ಆರಂಭ ಆಗುತ್ತಿದ್ದಂತೆಯೇ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಟೆಂಪಲ್ ರನ್ ಮಾಡಿದ್ದಾರೆ.

    ಶಿವಮೊಗ್ಗದ ರವೀಂದ್ರ ನಗರದಲ್ಲಿರುವ ಗಣೇಶ ದೇವಸ್ಥಾನ, ಕೋಟೆ ಆಂಜನೇಯ ದೇವಸ್ಥಾನ ಹಾಗೂ ತಿಲಕ ನಗರದ ರಾಘವೇಂದ್ರ ಸ್ವಾಮಿ ಮಠಕ್ಕೆ ಭೇಟಿ ಕೊಟ್ಟಿದ್ದಾರೆ. ಅಲ್ಲದೇ ಗೆಲುವುಗಾಗಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

    ಶಿವಮೊಗ್ಗದಲ್ಲಿ ಒಟ್ಟು ಅಂಚೆ ಮತಗಳು 5199 ಚಲಾವಣೆಯಾಗಿದೆ. ಮತಎಣಿಕೆ ನಡೆಯುತ್ತಿದ್ದು, ಸದ್ಯ ಬಿ.ವೈ ರಾಘವೇಂದ್ರ ಮುನ್ನಡೆ ಕಾಯ್ದುಕೊಂಡಿದ್ದಾರೆ.

  • ಏ.30 ಕ್ಕೆ ಶಿವಮೊಗ್ಗಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಭೇಟಿ

    ಏ.30 ಕ್ಕೆ ಶಿವಮೊಗ್ಗಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಭೇಟಿ

    ಶಿವಮೊಗ್ಗ: ಏಪ್ರಿಲ್‌ 30 ರಂದು ಶಿವಮೊಗ್ಗಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ (J.P.Nadda) ಭೇಟಿ‌ ನೀಡುತ್ತಿದ್ದು, ಪ್ರಚಾರ ನಡೆಸಲಿದ್ದಾರೆ ಎಂದು ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ (B.Y.Raghavendra) ತಿಳಿಸಿದರು.

    ಶಿವಮೊಗ್ಗದಲ್ಲಿ ‌ಮಾಧ್ಯಮದವರ ಜೊತೆ ಮಾತನಾಡಿದ ಅವರು, ರಾಜ್ಯದಲ್ಲಿ ಎರಡನೇ ಹಂತದ ಚುನಾವಣೆ ದಿನಾಂಕ ಹತ್ತಿರ ಬರುತ್ತಿದೆ. ಗ್ಯಾರಂಟಿ ಬಗ್ಗೆ ಸಾಕಷ್ಟು ಚರ್ಚೆ ನಡೆಯುತ್ತಿದೆ. ಕಾಂಗ್ರೆಸ್ ಪಕ್ಷದಿಂದ ತಾಯಂದಿರಿಗೆ ವರ್ಷಕ್ಕೆ ಒಂದು ಲಕ್ಷ ರೂ. ಕೊಡುವ ಬಗ್ಗೆ ಹೇಳಿದ್ದಾರೆ. ಇದು ಅಸಾಧ್ಯವಾದ ಮಾತಾಗಿದ್ದು, ಕಾಂಗ್ರೆಸ್ ‌ಜನತೆಗೆ ಸುಳ್ಳು ಭರವಸೆ ‌ನೀಡುತ್ತಿದೆ ಎಂದು‌ ಟಾಂಗ್‌ ಕೊಟ್ಟರು. ಇದನ್ನೂ ಓದಿ: ಕುಮಾರಸ್ವಾಮಿ ಒಬ್ಬ ನಾಡದ್ರೋಹಿ: ಡಿಕೆಶಿ ವಾಗ್ದಾಳಿ

    ದೇಶದ ಬಜೆಟ್ 45 ಲಕ್ಷ ರೂ. ಕೋಟಿ ಇದೆ. ದೇಶದಲ್ಲಿ 68 ಲಕ್ಷ ಕೋಟಿ ಮಹಿಳೆಯರಿದ್ದಾರೆ. ಪ್ರತಿ ಕುಟುಂಬಕ್ಕೆ ಓರ್ವ ಮಹಿಳೆಗೆ ಅಂದರೂ 38 ಲಕ್ಷ ಕೋಟಿ ರೂ. ಬೇಕಾಗುತ್ತದೆ. ಆದರೆ ಗ್ಯಾರಂಟಿ ಮೂಲಕ ಕಾಂಗ್ರೆಸ್ ‌ಮಹಿಳೆಯರನ್ನು ತಪ್ಪು ದಾರಿಗೆ ಎಳೆಯುತ್ತಿದೆ. ಇದು ದೇಶಕ್ಕೆ ಅಥವಾ ರಾಜ್ಯಕ್ಕೆ ಸೀಮಿತವಾದ ಪ್ರಣಾಳಿಕೆಯೇ ಗೊತ್ತಿಲ್ಲ ಎಂದು ತಿರುಗೇಟು ನೀಡಿದರು.

    ಜನ ಒಂದು ಬಾರಿ ಮೋಸ ಹೋಗಬಹುದು. ಪದೇ ಪದೇ ಮೋಸ ಹೋಗಲ್ಲ. ನಮ್ಮದು‌‌ ಮೋದಿ‌ ಗ್ಯಾರಂಟಿ. ಮೋದಿ ಗ್ಯಾರಂಟಿ ಮುಂದೆ ಬೇರೆ ಗ್ಯಾರಂಟಿ ನಡೆಯುವುದಿಲ್ಲ ಎಂದರು. ಇದನ್ನೂ ಓದಿ: ಲೋಕಸಭಾ ಚುನಾವಣೆ: ಹನೂರು ಭಾಗದ ಒಂದು ಮತಗಟ್ಟೆಗೆ ಏ.29 ರಂದು ಮರು ಮತದಾನ

  • ನಾನು ಸ್ಪರ್ಧಿಸೋದು ಖಚಿತ, ವಿಜಯೇಂದ್ರ ರಾಜೀನಾಮೆ ಕೊಡೋದು ನಿಶ್ಚಿತ: ಈಶ್ವರಪ್ಪ ಭವಿಷ್ಯ

    ನಾನು ಸ್ಪರ್ಧಿಸೋದು ಖಚಿತ, ವಿಜಯೇಂದ್ರ ರಾಜೀನಾಮೆ ಕೊಡೋದು ನಿಶ್ಚಿತ: ಈಶ್ವರಪ್ಪ ಭವಿಷ್ಯ

    – ನನ್ನ ಮಗನಿಗೆ ಎಂಎಲ್‌ಸಿ, ನನಗೆ ರಾಜ್ಯಪಾಲರ ಹುದ್ದೆ ಆಫರ್ ಕೊಟ್ಟಿದ್ದಾರೆ
    – ಮತ್ತೆ ರಾಜಾಹುಲಿ ಕುಟುಂಬದ ವಿರುದ್ಧ ಗುಡುಗಿದ ಈಶ್ವರಪ್ಪ

    ಶಿವಮೊಗ್ಗ: ಈ ಬಾರಿ ಲೋಕಸಭಾ ಚುನಾವಣೆಯಲ್ಲಿ (Lok Sabha Elections) ನಾನು ಸ್ಪರ್ಧಿಸುವುದು ಖಚಿತ. ಯಾವುದೇ ಕಾರಣಕ್ಕೂ ಹಿಂದೆ ಸರಿಯುವ ಮಾತಿಲ್ಲ. ನಾನು ಗೆದ್ದ ನಂತರ ವಿಜಯೇಂದ್ರ ತಮ್ಮ ರಾಜ್ಯಾಧ್ಯಕ್ಷರ ಹುದ್ದೆಗೆ ರಾಜೀನಾಮೆ ಕೊಡುವುದು ನಿಶ್ಚಿತ ಎಂದು ಮಾಜಿ ಸಚಿವ ಕೆ.ಎಸ್ ಈಶ್ವಪ್ಪ (KS Eshwarappa) ಭವಿಷ್ಯ ನುಡಿದಿದ್ದಾರೆ.

    ಶಿವಮೊಗ್ಗ (Shivamogga) ಲೋಕಸಭಾ ಕ್ಷೇತ್ರದ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆಗೆ ಮುಂದಾಗಿರುವ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಅವರಿಂದು ತಮ್ಮ ನಿವಾಸದಲ್ಲಿ ಬೆಂಬಲಿಗರ ಸಭೆ ನಡೆಸಿ, ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ್ದಾರೆ. ಬಿ.ವೈ ರಾಘವೇಂದ್ರನನ್ನ (BY Raghavendra) ಸೋಲಿಸಿ, ಬಿಜೆಪಿ ಕಟ್ಟಾ ಅನುಯಾಯಿಯಾದ ನನ್ನನ್ನು ಗೆಲ್ಲಿಸಬೇಕು ಎಂದು ಮನವಿ ಮಾಡಿದ್ದಾರೆ.

    ಈಶ್ವರಪ್ಪ ಸ್ಪರ್ಧೆ ಬಗ್ಗೆ ಇಡೀ ರಾಜ್ಯದಲ್ಲಿ ಚರ್ಚೆ ಆಗ್ತಿದೆ. ಲೋಕಸಭೆ ಚುನಾವಣೆಯಲ್ಲಿ ನಾನು ಗೆಲ್ಲುತ್ತೇನೆ. ಚುನಾವಣಾ ಫಲಿತಾಂಶ ಬಂದು ಬಿಜೆಪಿ ಕಾರ್ಯಕರ್ತರ ವಿಜಯವಾಗುತ್ತಿದ್ದಂತೆ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ತಮ್ಮ ಹುದ್ದೆಗೆ ರಾಜೀನಾಮೆ ಕೊಡ್ತಾರೆ ಎಂದು ಭವಿಷ್ಯ ನುಡಿದಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್‌ 2ನೇ ಪಟ್ಟಿ ಇಂದು ಬಿಡುಗಡೆ – ಸಂಭಾವ್ಯ ಅಭ್ಯರ್ಥಿಗಳು ಯಾರು?

    ಎಂಎಲ್‌ಸಿ, ರಾಜ್ಯಪಾಲರ ಹುದ್ದೆ ಆಫರ್‌ ಬಂದಿದೆ:
    ಮುಂದಿನ ಜೂನ್‌ನಲ್ಲೇ ಪರಿಷತ್ ಸ್ಥಾನ ಖಾಲಿ ಆಗುತ್ತದೆ, ನಿಮ್ಮ ಮಗನನ್ನ ಎಂಎಲ್‌ಸಿ ಮಾಡ್ತೀವಿ. ನಿಮಗೆ ರಾಜ್ಯಪಾಲರ ಹುದ್ದೆ ಕೊಡ್ತೀವಿ ಅಂತ ಬಿಜೆಪಿ ಹೈಕಮಾಂಡ್ ನನಗೆ ಆಫರ್ ಕೊಟ್ಟಿದೆ. ನನಗೆ ಯಾವುದೇ ಸ್ಥಾನಮಾನ ಮುಖ್ಯವಲ್ಲ. ನನಗೆ ಸ್ಥಾನಮಾನ ಬೇಡ, ಪಕ್ಷ ಉಳಿಯಬೇಕು, ಬಿಎಸ್‌ವೈ ಕುಟುಂಬದ ಸರ್ವಾಧಿಕಾರದಿಂದ ಮುಕ್ತವಾಬೇಕು ಎಂಬುದಷ್ಟೇ ಮುಖ್ಯ ಎಂದು ಗುಡುಗಿದ್ದಾರೆ.

    ಶಿವಮೊಗ್ಗ ಲೋಕಸಭಾ ಕ್ಷೇತ್ರದ 8 ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಿರೀಕ್ಷೆಗೆ ಮೀರಿ ಬೆಂಬಲ ಸಿಗುತ್ತಿದೆ. ಸ್ವಾಮೀಜಿಗಳು ಬೆಂಬಲ ಕೊಡ್ತಿದ್ದಾರೆ, ಸಿಗಂಧೂರು ಚೌಡೇಶ್ವರಿ ದೇವಸ್ಥಾನದಲ್ಲಿ ಆಶೀರ್ವಾದ ದೊರೆತಿದೆ. ಯಾವ ಕಾರಣಕ್ಕೂ ತೊಂದರೆ ಆಗಲ್ಲ, ನೂರಕ್ಕೆ ನೂರು ನೀವು ಗೆಲ್ಲುತ್ತೀರಾ ಎಂದು ಸ್ವಾಮೀಜಿಗಳು ಹೇಳಿದ್ದಾರೆಂದು ತಿಳಿಸಿದ್ದಾರೆ. ಇದನ್ನೂ ಓದಿ: Chamarajanagara Lok Sabha 2024: ಕಾಂಗ್ರೆಸ್ ಕೋಟೆಗೆ ಎಂಟ್ರಿ ಕೊಟ್ಟಿರೋ ಬಿಜೆಪಿ ಮತ್ತೆ ಸಿಂಹಾಸನ ಏರುತ್ತಾ?

    ಸರ್ವಾಧಿಕಾರಿ ಧೋರಣೆಯಿಂದ ಬಿಜೆಪಿ ಮುಕ್ತವಾಗಬೇಕು:
    ಒಂದು ಕುಟುಂಬದ ಕೈಯಲ್ಲಿ ಪಕ್ಷ ಸಿಕ್ಕಿದೆ, ಸರ್ವಾಧಿಕಾರಿ ಧೋರಣೆ ಇದೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಎಲ್ಲಾ ಕ್ಷೇತ್ರದಲ್ಲಿ ಗೆದ್ದು ಬಿಜೆಪಿ ಅಧಿಕಾರಕ್ಕೆ ಬರಲಿದೆ. ಬಿಜೆಪಿ ರಾಜ್ಯಾಧ್ಯಕ್ಷರು ಬದಲಾವಣೆ ಮಾಡುವ ಪ್ರಯತ್ನ ರಾಜ್ಯದಲ್ಲಿ ನಡೆಯುತ್ತಿದೆ. ನಾನು ಸಹ ಆ ದಿಕ್ಕಿನಲ್ಲಿ ಪ್ರಯತ್ನ ಮಾಡ್ತಿದ್ದೇನೆ. ಯಾರೇ ಬಂದು ಮನವೊಲಿಸಿದರೂ ಹಿಂದೆ ಸರಿಯಲ್ಲ. ರಾಜ್ಯದಲ್ಲಿ ಈ ಬಾರಿ ಬಿಜೆಪಿ 28 ಸ್ಥಾನ ಗೆಲ್ಲಬೇಕು. ನಾನು ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ನಾನು ಕುಟುಂಬದ ವಿರುದ್ಧ ಸ್ಪರ್ಧೆ ಮಾಡಿ ಗೆಲ್ಲುತ್ತೇನೆ, ಗೆದ್ದ ನಂತರ ಬಿಜೆಪಿ ಸೇರುತ್ತೇನೆ ಎಂದು ನುಡಿದಿದ್ದಾರೆ.

  • ಅಧಿಕಾರ ಶಾಶ್ವತ ಅಲ್ಲ.. ಗೂಂಡಾಗಿರಿ ಮಾಡುವುದು ಸರಿಯಲ್ಲ: ‘ಕೈ’ ವಿರುದ್ಧ ಬಿ.ವೈ.ರಾಘವೇಂದ್ರ ಗುಡುಗು

    ಅಧಿಕಾರ ಶಾಶ್ವತ ಅಲ್ಲ.. ಗೂಂಡಾಗಿರಿ ಮಾಡುವುದು ಸರಿಯಲ್ಲ: ‘ಕೈ’ ವಿರುದ್ಧ ಬಿ.ವೈ.ರಾಘವೇಂದ್ರ ಗುಡುಗು

    ಶಿವಮೊಗ್ಗ: ಅಧಿಕಾರ ಶಾಶ್ವತ ಅಲ್ಲ. ಈ ರೀತಿ ಗೂಂಡಾಗಿರಿ ಮಾಡುವುದು ಸರಿಯಲ್ಲ ಎಂದು ಕಾಂಗ್ರೆಸ್‌ ವಿರುದ್ಧ ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ (B.Y.Raghavendra) ಗುಡುಗಿದ್ದಾರೆ.

    ಬಿಜೆಪಿ (BJP) ಕಾರ್ಯಕರ್ತನ ಮೇಲೆ ಮಾರಣಾಂತಿಕ ಹಲ್ಲೆ ಕುರಿತು ಮಾತನಾಡಿದ ಅವರು, ಕಾಂಗ್ರೆಸ್‌ನವರು (Congress), ಶಾಸಕರ ಕಡೆಯವರು ಹಲ್ಲೆ ಮಾಡಿದ್ದಾರೆ. ಹಲ್ಲೆಗೆ ಮೊದಲು ಕಾರು ಜಖಂ ಮಾಡಿದ್ದರು. ಹಲ್ಲೆ ಮಾಡಿದ ವ್ಯಕ್ತಿಗಳನ್ನು ಬಂಧಿಸಿಲ್ಲ. ಪೊಲೀಸರು ಕಾಂಗ್ರೆಸ್ ಕಾರ್ಯಕರ್ತರ ರೀತಿ ನಡೆದುಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಜಾರ್ಜ್‌ ವಿರುದ್ಧ ಪೋಸ್ಟ್‌ – ತೆಲಂಗಾಣ ಮಾಜಿ ಪಾಲಿಕೆ ಸದಸ್ಯನ ಪುತ್ರ ಅರೆಸ್ಟ್‌

    ಭದ್ರಾವತಿಗೆ ಕಳಂಕ ತರುವಂತಹ ಕೆಲಸವನ್ನು ‌ಕಿಡಿಗೇಡಿಗಳು ಮಾಡುತ್ತಿದ್ದಾರೆ. ಮಟ್ಕಾ, ಜೂಜು ಇಸ್ಪೀಟು ದಂಧೆ ನಡೆಯುತ್ತಿದೆ. ಗೋಕುಲ್ ಕೃಷ್ಣನ್ ವಿರುದ್ಧ ಅಟ್ರಾಸಿಟಿ ಕೇಸ್ ಹಾಕಿಸಿದ್ದಾರೆ. ಅಧಿಕಾರ ಶಾಶ್ವತ ಅಲ್ಲ, ಈ ರೀತಿ ಗೂಂಡಾಗಿರಿ ಮಾಡೋದು ಸರಿಯಲ್ಲ ಎಂದು ‘ಕೈ’ ನಾಯಕರ ವಿರುದ್ಧ ಕಿಡಿಕಾರಿದ್ದಾರೆ.

    ರಾಜಕಾರಣ ಮಾಡಲು ಕಾರ್ಯಕರ್ತರಿದ್ದಾರೆ. ಪೊಲೀಸರು ಯಾವುದೇ ಒತ್ತಡಕ್ಕೆ ಮಣಿಯಬಾರದು. ಹಾಕಿಕೊಂಡಿರುವ ಯೂನಿಫಾರ್ಮ್‌ಗೆ ಮರ್ಯಾದೆ ಕೊಟ್ಟು ಕೆಲಸ ಮಾಡಬೇಕು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮಾಡುವ ಒಳ್ಳೆಯ ಕೆಲಸದ ಮೇಲೆ ಹಣೆಬರಹ ಬರೆಯುತ್ತದೆ. ಗೂಂಡಾಗಿರಿ ನಡೆಯುವುದಿಲ್ಲ ಎಂದು ಎಚ್ಚರಿಸಿದ್ದಾರೆ. ಇದನ್ನೂ ಓದಿ: ಅಯೋಧ್ಯೆ ರಾಮಮಂದಿರಕ್ಕೆ ಕರ್ನಾಟಕದಿಂದ ಘಂಟೆ, ಪೂಜಾ ಸಾಮಾಗ್ರಿ ಸಮರ್ಪಣೆ

    ಇಡೀ ಜಿಲ್ಲೆಯಲ್ಲಿ ‌ಭದ್ರಾವತಿಯಲ್ಲಿ ಜೂಜು, ಮಟ್ಕಾ, ಇಸ್ಪೀಟು ಜೋರಾಗಿ ನಡೆಯುತ್ತಿದೆ. ಕೆಲವು ಪೊಲೀಸರು ಒಳ್ಳೆಯ ಕೆಲಸ ಮಾಡುತ್ತಿದ್ದಾರೆ. ಕೆಲವು ಅಧಿಕಾರಿಗಳು ಇಂತಹ ಕೃತ್ಯಕ್ಕೆ ಷಡ್ಯಂತ್ರ ಮಾಡ್ತಿದ್ದಾರೆ. ಶಿವಮೊಗ್ಗದಲ್ಲಿ ಇಂತಹ ಕೆಟ್ಟ ರಾಜಕಾರಣ ಯಾವಾಗಲೂ ನಡೆದಿಲ್ಲ ಎಂದಿದ್ದಾರೆ.

    ಸಂಸತ್ತಿನಲ್ಲಿ ಆಗಿದ್ದು ಅತ್ಯಂತ ಗಂಭೀರ ವಿಚಾರ. 3-4 ವ್ಯಕ್ತಿಗಳು ಎರಡು‌ ಮೂರು ತಿಂಗಳಿನಿಂದ ಮಾಕ್ ಟ್ರಯಲ್ ಮಾಡಿದ್ದಾರೆ. ವಿದ್ಯಾವಂತರಿದ್ದಾರೆ, ಈ ರೀತಿ ಕೆಟ್ಟ ಕೆಲಸ ಮಾಡಲು ಏನು ಕಾರಣ? ಎಲ್ಲವೂ ತನಿಖೆ ಮುಖಾಂತರ ಹೊರಗೆ ಬರಲಿದೆ. ನಾನೇ ಆದರೂ ಕರ್ನಾಟಕದವರು ಅಂದ್ರೆ ದೆಹಲಿಯಲ್ಲಿ ಹೆಚ್ಚು ಪ್ರೀತಿ. ಹೀಗಾಗಿ ಸಹಜವಾಗಿ ಮೈಸೂರಿನವರು ಅಂತಾ ಪಾಸ್ ಕೊಟ್ಟಿದ್ದಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಸರ್ಕಾರಿ ಅಂಗನವಾಡಿಗಳ ಕರೆಂಟ್ ಬಿಲ್ ಕಟ್ಟಲು ದುಡ್ಡಿಲ್ಲ – ಫ್ಯೂಸ್ ಕಿತ್ತ ಬೆಸ್ಕಾಂ

    ರಾಹುಲ್ ಗಾಂಧಿಯವರು ಪ್ರಧಾನ ಮಂತ್ರಿ ಮೋದಿ ಅವರನ್ನು ಶನಿ ಅಂದ್ರು. ಹಿಂದುಳಿದ ವರ್ಗದ ನಾಯಕನಿಗೆ ಥರ್ಡ್ ಕ್ಲಾಸ್ ಪದ ಉಪಯೋಗಿಸಿದ್ದಾರೆ. ಸುಳ್ಳು ಆರೋಪ ಮಾಡಿ ದಾರಿ ತಪ್ಪಿಸುವ ಕೆಲಸ ಮಾಡಬಾರದು ಎಂದು ಹೇಳಿದ್ದಾರೆ.

  • ಕೊಲ್ಲೂರಿಗೆ ಬಿ.ವೈ ರಾಘವೇಂದ್ರ ಭೇಟಿ- ಬಿಎಂಎಸ್ ಬಗ್ಗೆ ಗಂಟಿಹೊಳೆ ಜೊತೆ ಚರ್ಚೆ

    ಕೊಲ್ಲೂರಿಗೆ ಬಿ.ವೈ ರಾಘವೇಂದ್ರ ಭೇಟಿ- ಬಿಎಂಎಸ್ ಬಗ್ಗೆ ಗಂಟಿಹೊಳೆ ಜೊತೆ ಚರ್ಚೆ

    ಉಡುಪಿ: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ, ಬಿ.ಎಸ್ ಯಡಿಯೂರಪ್ಪ ಪುತ್ರ ಬಿ.ವೈ ರಾಘವೇಂದ್ರ (BY Raghavendra) ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಆಗಮಿಸಿದ್ದಾರೆ.

    ಉಡುಪಿ ಜಿಲ್ಲೆ ಬೈಂದೂರು ತಾಲೂಕು ಕೊಲ್ಲೂರು ದೇವಸ್ಥಾನಕ್ಕೆ ಆಗಮಿಸಿದ ಅವರು ತಾಯಿ ಮೂಕಾಂಬಿಕೆಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಕೆ ಮಾಡಿದರು. ದೇಗುಲದ ಪ್ರಾಂಗಣದಲ್ಲಿರುವ ಎಲ್ಲಾ ಗುಡಿಗಳಿಗೆ ಭೇಟಿಕೊಟ್ಟು ದೇವರ ದರ್ಶನ ಮಾಡಿ ಅರ್ಚನೆ ಸಲ್ಲಿಸಿದರು. ಇದನ್ನೂ ಓದಿ: ಚುನಾವಣೆಯಲ್ಲಿ ಹೊರಗಿನವರು ನಮ್ಮವರೂ ಮೋಸ ಮಾಡ್ತಾರೆ, ಅನುಭವವಿದೆ: ಪರಮೇಶ್ವರ್

    ಬೈಂದೂರು ವಿಧಾನಸಭಾ ಕ್ಷೇತ್ರ ಶಿವಮೊಗ್ಗ (Shivamogga) ಕ್ಷೇತ್ರಕ್ಕೆ ಒಳಪಡುವ ಕಾರಣ ಕ್ಷೇತ್ರದ ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ ಸಂಸದರ ಜೊತೆಗಿದ್ದರು. ಬೈಂದೂರು ಮಾಜಿ ಶಾಸಕ ಬಿಜೆಪಿ ಮುಖಂಡ ಬಿ.ಎಂ ಸುಕುಮಾರ್ ಶೆಟ್ಟಿ ಬಿಜೆಪಿ ಪಕ್ಷ ತೊರೆದು ಕಾಂಗ್ರೆಸ್ ಸೇರಿರುವ ಬಗ್ಗೆ ಎರಡು ದಿನದ ಹಿಂದೆ ಘೋಷಣೆ ಮಾಡಿದ್ದರು. ದೇಗುಲ ಭೇಟಿ ಸಂದರ್ಭದಲ್ಲಿ ಸಾಧಕ-ಬಾಧಕಗಳ ಚರ್ಚೆ ಸಂಸದರು ಮತ್ತು ಶಾಸಕರ ನಡುವೆ ನಡೆಯಿತು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಆಗಸ್ಟ್ 11 ರಿಂದ ಶಿವಮೊಗ್ಗ ವಿಮಾನ ನಿಲ್ದಾಣದಿಂದ ಸಂಚಾರ ಆರಂಭ – ಬಿವೈ ರಾಘವೇಂದ್ರ

    ಆಗಸ್ಟ್ 11 ರಿಂದ ಶಿವಮೊಗ್ಗ ವಿಮಾನ ನಿಲ್ದಾಣದಿಂದ ಸಂಚಾರ ಆರಂಭ – ಬಿವೈ ರಾಘವೇಂದ್ರ

    ಶಿವಮೊಗ್ಗ: ಶಿವಮೊಗ್ಗದಲ್ಲಿ ನೂತನವಾಗಿ ನಿರ್ಮಾಣವಾಗಿರುವ ವಿಮಾನ ನಿಲ್ದಾಣದಿಂದ (Shivamogga Airport) ಆ.11 ರಿಂದ ವಿಮಾನ ಹಾರಾಟ ಆರಂಭವಾಗಲಿದೆ ಎಂದು ಸಂಸದ ಬಿ.ವೈ ರಾಘವೇಂದ್ರ (B.Y. Raghavendra) ತಿಳಿಸಿದ್ದಾರೆ.

    ಶಿವಮೊಗ್ಗದಲ್ಲಿ (Shivamogga) ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿವಮೊಗ್ಗ ಹಾಗೂ ಬೆಂಗಳೂರು ಮಧ್ಯೆ ವಿಮಾನಯಾನ ಸೇವೆ ಆರಂಭವಾಗಲಿದೆ. ಈ ಸಂಬಂಧ ಇಂಡಿಗೋ ಸಂಸ್ಥೆ ಈಗಾಗಲೇ ಒಪ್ಪಂದ ಮಾಡಿಕೊಂಡಿದೆ. ಈಗಾಗಲೇ ವಿಮಾನಯಾನಕ್ಕೆ ಬೇಕಾಗಿರುವ ಎಲ್ಲಾ ತಯಾರಿ ನಡೆಸಲಾಗುತ್ತಿದೆ. ಇದರೊಂದಿಗೆ 4 ಹೊಸ ಮಾರ್ಗದಲ್ಲಿ ವಿಮಾನ ಹಾರಾಟಕ್ಕೆ ಒಪ್ಪಿಗೆ ದೊರೆತಿದೆ ಎಂದಿದ್ದಾರೆ. ಇದನ್ನೂ ಓದಿ: ಅಕ್ರಮ ಆಸ್ತಿ – ಕೆ.ಆರ್. ಪುರಂ ತಹಶೀಲ್ದಾರ್ ಅಜಿತ್ ರೈ ಅರೆಸ್ಟ್

    ಉಡಾನ್ ಯೋಜನೆಯಡಿ ಶಿವಮೊಗ್ಗದಿಂದ 4 ಮಾರ್ಗದಲ್ಲಿ ವಿಮಾನ ಹಾರಾಟಕ್ಕೆ ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಹೈದರಾಬಾದ್-ಶಿವಮೊಗ್ಗ, ಗೋವಾ-ಶಿವಮೊಗ್ಗ, ತಿರುಪತಿ-ಶಿವಮೊಗ್ಗ, ದೆಹಲಿ-ಶಿವಮೊಗ್ಗ, ಚೆನ್ನೈ-ಶಿವಮೊಗ್ಗ ನಡುವೆ ವಿಮಾನ ಹಾರಾಟ ನಡೆಸಲಿವೆ ಎಂದು ಅವರು ತಿಳಿಸಿದ್ದಾರೆ.

    ಫೆ. 27 ರಂದು ಶಿವಮೊಗ್ಗದ ವಿಮಾನ ನಿಲ್ದಾಣವನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟನೆ ಮಾಡಿದ್ದರು. ಉದ್ಘಾಟನೆಯ ವೇಳೆ ಅಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ವಿಮಾನ ನಿಲ್ದಾಣ ಮಲೆನಾಡಿನ ಹೆಬ್ಬಾಗಿಲಾಗಲಿದೆ ಎಂದು ಅಭಿಪ್ರಾಯಪಟ್ಟಿದ್ದರು. ಇದಾದ ಬಳಿಕ ಪ್ರಾಯೋಗಿಕ ಹಾರಾಟ ನಡೆಸಿ ಪರಿಶೀಲನೆ ಕೂಡ ನಡೆದಿತ್ತು. ಈಗ ವಿಮಾನ ಹಾರಾಟಕ್ಕೆ ದಿನಾಂಕ ನಿಗದಿಯಾಗಿರುವುದು ಮಲೆನಾಡಿಗರಿಗೆ ಸಂತಸ ತಂದಿದೆ. ಇದನ್ನೂ ಓದಿ: PAN-Adhar Card ಇಂದೇ ಲಿಂಕ್ ಮಾಡಿಸಿಕೊಳ್ಳಿ- ಶುಕ್ರವಾರ ಕೊನೆಯ ದಿನ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]