ಕನ್ನಡ ಚಿತ್ರರಂಗಕ್ಕೆ ಕನಿಷ್ಠ 25 ವರ್ಷಗಳ ಸೇವೆ ಸಲ್ಲಿಸಿರುವ ಸಾಧಕಿಯರಿಗೆ ಪ್ರಶಸ್ತಿ
ಬೆಂಗಳೂರು: ಹಿರಿಯ ನಟಿ, ಪಂಚಭಾಷಾ ತಾರೆ ದಿವಂಗತ ಬಿ.ಸರೋಜಾದೇವಿ (B.Sarojadevi) ಅವರ ಹೆಸರಿನಲ್ಲಿ `ಅಭಿನಯ ಸರಸ್ವತಿ’ (Abhinaya Saraswati) ಪ್ರಶಸ್ತಿ ನೀಡುವುದಾಗಿ ರಾಜ್ಯ ಸರ್ಕಾರ (State Govt) ಘೋಷಿಸಿದೆ.
ಕನ್ನಡ ಚಲನಚಿತ್ರ ನಟಿ, ಪಂಚಭಾಷಾ ತಾರೆ, ಪದ್ಮಶ್ರೀ ಹಾಗೂ ಪದ್ಮಭೂಷಣ ವಿಜೇತೆ ದಿವಂಗತ ಬಿ.ಸರೋಜಾದೇವಿ ಅವರು ಪಂಚಭಾಷಾ ತಾರೆಯಾಗಿದ್ದು, ಭಾರತೀಯ ಹಾಗೂ ಕನ್ನಡ ಚಿತ್ರರಂಗಕ್ಕೆ ನೀಡಿರುವ ಕೊಡುಗೆ ಅಪಾರವಾಗಿದೆ. ಅದನ್ನು ಪರಿಗಣಿಸಿ ಅವರು ಪಡೆದಿದ್ದ “ಅಭಿನಯ ಸರಸ್ಕೃತಿ” ಬಿರುದಿನ ಹೆಸರಿನಲ್ಲಿ ಕನ್ನಡ ಚಿತ್ರರಂಗಕ್ಕೆ ಕನಿಷ್ಠ 25 ವರ್ಷಗಳ ಅವಿಸ್ಮರಣೀಯ ಸೇವೆ ಸಲ್ಲಿಸಿರುವ ಮಹಿಳೆಯರಿಗೆ ಜೀವಮಾನ ಸಾಧನೆ ಪ್ರಶಸ್ತಿಯನ್ನು ನೀಡಲಾಗುವುದು. ಪ್ರಸ್ತುತ ಜಾರಿಯಲ್ಲಿರುವ ಕನ್ನಡ ಚಲನಚಿತ್ರ ನೀತಿ-2011ರಲ್ಲಿನ ವಾರ್ಷಿಕ ರಾಜ್ಯ ಚಲನಚಿತ್ರ ಪ್ರಶಸ್ತಿಗಳ ಪಟ್ಟಿ ಅನುಬಂಧ-1ರಡಿ ಜಾರಿಗೆ ತರಲಾಗಿದೆ.ಇದನ್ನೂ ಓದಿ: ಸಾಹಸಸಿಂಹ ವಿಷ್ಣುವರ್ಧನ್, ಬಿ.ಸರೋಜಾದೇವಿಗೆ ಮರಣೋತ್ತರ ‘ಕರ್ನಾಟಕ ರತ್ನ’ ಪ್ರಶಸ್ತಿ ಘೋಷಣೆ
ಈ ಪ್ರಶಸ್ತಿಯಡಿಯಲ್ಲಿ 1 ಲಕ್ಷ ರೂ. ನಗದು ಹಾಗೂ 100 ಗ್ರಾಂ ಬೆಳ್ಳಿ ಪದಕ ನೀಡಲಾಗುವುದು ಎಂದು ರಾಜ್ಯ ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ.
ಅಭಿನಯ ಸರಸ್ವತಿ ಬಿ.ಸರೋಜಾದೇವಿ (B. Saroja Devi) ಇಹಲೋಕ ತ್ಯಜಿಸಿ ದಿನಗಳು ಉರುಳಿದೆ. ಕಳೆದ ಜುಲೈ 14 ರಂದು ಸೋಮವಾರ ಬೆಳಗ್ಗೆ ಈ ಮೇರು ನಟಿ ವಯೋಸಹಜ ಕಾಯಿಲೆಯಿಂದಾಗಿ ನಿಧನ ಹೊಂದಿದ್ದರು. ಇದೀಗ ಅಗಲಿದ ಹಿರಿಯ 11ನೇ ದಿನದ ಕಾರ್ಯಗಳನ್ನು ನೆರವೇರಿಸಲು ಕುಟುಂಬಸ್ಥರು ನಿರ್ಧರಿಸಿದ್ದು ಬೆಂಗಳೂರಿನ ಮಲ್ಲೇಶ್ವರಂ ನಿವಾಸದಲ್ಲಿ ಇದೇ ಜುಲೈ 25 ರಂದು ನಡೆಯಲಿದೆ.
ಪಂಚಭಾಷಾ ತಾರೆ ಬಿ ಸರೋಜಾದೇವಿಯವರು 87ನೇ ವರ್ಷಕ್ಕೆ ಕಣ್ಮುಚ್ಚಿದ್ದಾರೆ. ಭಾರತೀಯ ಚಿತ್ರರಂಗದಲ್ಲಿ ತಮ್ಮದೇ ಛಾಪು ಮೂಡಿಸಿದ್ದ ಅಸಾಧಾರಣ ನಟಿ ಇವರು. ಇವರ ಪಾರ್ಥೀವಕ್ಕೆ ಸರ್ಕಾರಿ ಗೌರವದೊಂದಿಗೆ ಸ್ವಗ್ರಾಮ ಚನ್ನಪಟ್ಟಣದ ದಶವಾರದಲ್ಲಿ ಅಂತ್ಯಕ್ರಿಯೆ ನಡೆಸಲಾಗಿತ್ತು. ಇದನ್ನೂಓದಿ: ಆಸ್ಪತ್ರೆಯಿಂದಡಿಸ್ಚಾರ್ಜ್ಆದವಿಜಯ್ ದೇವರಕೊಂಡ
ಚಿತ್ರರಂಗದ ನೂರಾರು ಕಲಾವಿದರು, ರಾಜಕೀಯ ಗಣ್ಯರು ಹಾಗೂ ಅಭಿಮಾನಿಗಳು ಅಂತಿಮ ದರ್ಶನ ಪಡೆದಿದ್ದರು. ಇದೀಗ ಅಗಲಿದ ಹಿರಿಯ ನಟಿಯ 11 ದಿನದ ಕಾರ್ಯಕ್ಕೆ ಮಲ್ಲೇಶ್ವರಂ ನಿವಾಸದಲ್ಲಿ ಸಿದ್ಧತೆಗಳು ನಡೆದಿದ್ದು ಭಾರತೀಯ ಚಿತ್ರರಂಗ ಕಂಡ ಮೊದಲ ಲೇಡಿ ಸೂಪರ್ ಸ್ಟಾರ್‌ನ್ನು ಸ್ಮರಿಸಲಾಗುತ್ತದೆ. ಈ ಸಂದರ್ಭದಲ್ಲಿ ಬಹುಭಾಷಾ ಚಿತ್ರರಂಗದ ಕಲಾವಿದರು, ತಂತ್ರಜ್ಞರು, ರಾಜಕಾರಣಿಗಳು ಪಾಲ್ಗೊಳ್ಳುವ ಸಾಧ್ಯತೆ ಇದೆ. ಇದನ್ನೂಓದಿ: ಪ್ರೊಡಕ್ಷನ್ಗೆನನ್ನಮಗನೇಸ್ಫೂರ್ತಿ–ಯಶ್ ತಾಯಿ ಮಾತು
ಸರೋಜಮ್ಮ ನಮ್ಮ ಜೊತೆ ಇರಬೇಕಿತ್ತು ಹಿರಿಯ ಜೀವವನ್ನು ಕಳ್ಕೊಂಡಿದ್ದೇವೆ, ಕನ್ನಡ ಚಿತ್ರರಂಗ ಹಿರಿಯರಿಲ್ಲದ ಮನೆಯಾಗುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯೆ, ಹಿರಿಯ ನಟಿ ಉಮಾಶ್ರೀ (Umashree) ಭಾವುಕರಾಗಿದ್ದಾರೆ.
ಬಿ.ಸರೋಜಾದೇವಿಯವರ ಅಂತಿಮ ದರ್ಶನದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಮ್ಮ ಭಾರತ ದೇಶದಲ್ಲಿ ಅತ್ಯಂತ ಪ್ರಬುದ್ಧವಾದಂತಹ, ದಕ್ಷಿಣದ ಧ್ರುವ ತಾರೆಯೆಂದೇ ಪ್ರಸಿದ್ಧಿಯಾಗಿದ್ದ ಮೇರು ನಟಿ ಇಂದು ನಮ್ಮ ಜೊತೆಗಿಲ್ಲ ಎನ್ನುವುದು ತುಂಬಾ ದುಃಖದ ಸಂಗತಿ. ಅವರು ವೈಯಕ್ತಿಕ ಜೀವನ, ವೃತ್ತಿ ಜೀವನ, ಅವರು ನಡೆದು ಬಂದ ರೀತಿ ಮುಂದಿನ ಎಲ್ಲ ಪೀಳಿಗೆಗೂ ಮಾದರಿ. ಹೇಗೆ ಶಿಸ್ತುಬದ್ದವಾಗಿ ಇರಬೇಕು ಎನ್ನುವುದು ಸರೋಜಮ್ಮನನ್ನು ನೋಡಿ ಕಲಿಬೇಕು ಎಂದರು.ಇದನ್ನೂ ಓದಿ: ಕೋಲಾರ | KSRTC ನೌಕರ ಹೃದಯಾಘಾತದಿಂದ ಸಾವು
ಬಣ್ಣದ ಜಗತ್ತಿಗೆ ಕಾಲಿಟ್ಟು ಸುಮಾರು 70 ವರ್ಷಗಳಾಗಿದೆ. 2019ರ ತೆರೆಕಂಡ ನಟ ಸಾರ್ವಭೌಮ ಸಿನಿಮಾದಲ್ಲಿಯೂ ನಟಿಸಿದ್ದಾರೆ. ಅವರ ರೀತಿಯ ಸಾಧನೆ ಯಾರಿಗೂ ಮಾಡೋಕೆ ಆಗಲ್ಲ. ಹಿರಿಯ ಜೀವ, ನಮ್ಮ ಜೊತೆ ಇರಬೇಕಿತ್ತು. ಆದರೆ ಕಳ್ಕೊಂಡಿದ್ದೇವೆ. ಕನ್ನಡ ಚಿತ್ರರಂಗ ಹಿರಿಯರಿಲ್ಲದ ಮನೆಯಾಗುತ್ತಿದೆ. ಭಾರತ ದೇಶದ ಪ್ರತಿಯೊಂದು ಭಾಷೆಯವರು ಗೌರವದಿಂದ ಕಾಣುತ್ತಿದ್ದ ಖ್ಯಾತ ಕಲಾವಿದೆ ಸರೋಜಾದೇವಿಯವರು.
ನಮ್ಮ ಕನ್ನಡ ಚಿತ್ರರಂಗದಲ್ಲಿ ಪದ್ಮಭೂಷಣ, ಪದ್ಮವಿಭೂಷಣ, ಬೇರೆ ಬೇರೆ ರಾಜ್ಯಗಳ ಪ್ರಶಸ್ತಿ, ಡಾಕ್ಟರೇಟ್ ಹಾಗೂ ಇತರೇ ಸಾಧನೆಗಳನ್ನು ಮಾಡಿದವರಲ್ಲಿ ನನಗೆ ಗೊತ್ತಿರುವವರು ಇವರೇ ಮೊದಲಿಗರು ಅನಿಸುತ್ತದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ, ಕುಟುಂಬಸ್ಥರಿಗೆ, ಎಲ್ಲರಿಗೂ ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪಾರ್ಥಿಸುತ್ತೇನೆ ಎಂದು ಹೇಳಿದರು.ಇದನ್ನೂ ಓದಿ: ಮುಂಬೈ ವಿಮಾನ ನಿಲ್ದಾಣದಲ್ಲಿ 62.6 ಕೋಟಿ ಮೌಲ್ಯದ ಕೊಕೇನ್ ವಶಕ್ಕೆ – ಭಾರತೀಯ ಮಹಿಳೆ ಅರೆಸ್ಟ್
`ಕಣ್ಣಿಗೆ ಕಾಣುವ ದೇವರು ಎಂದರೆ ಅಮ್ಮನು ತಾನೇ’ ಈ ಹಾಡನ್ನು ಬಾಲನಟನಾಗಿದ್ದ ಪುನೀತ್ ರಾಜಕುಮಾರ್ ಹಾಡಿದ್ದರು. ಆಗಲೇ ಪುನೀತ್ ತನ್ನ ಮಗನಾಗಿದ್ದರೆ ಚೆನ್ನಾಗಿತ್ತು ಎಂದುಕೊಂಡಿದ್ದರಂತೆ ಬಿ.ಸರೋಜಾದೇವಿಯವರು.
ಸರೋಜಾದೇವಿಯವರು ಅಮ್ಮನಾಗಿ, ಪುನೀತ್ ಮಗನಾಗಿ ನಟಿಸಿದ `ಯಾರಿವನು’ ಸಿನಿಮಾದ `ಕಣ್ಣಿಗೆ ಕಾಣುವ ದೇವರು ಎಂದರೆ ಅಮ್ಮನು ತಾನೇ’ ಹಾಡು ಜನಮನದಲ್ಲಿ ಇಂದಿಗೂ ಹಸಿರಾಗಿದೆ. ಸಿನಿಮಾದಲ್ಲಿ ಬಾಲನಟನಾಗಿದ್ದ ಪುನೀತ್ ಸ್ವತಃ ಈ ಹಾಡನ್ನು ಹಾಡಿದ್ದರು. ಆಗಲೇ ಸರೋಜಾದೇವಿಯವರು ಪುನೀತ್ ತನ್ನ ಮಗನಾಗಿದ್ದರೆ ಚೆನ್ನಾಗಿತ್ತು ಅಂದುಕೊಂಡಿದ್ದರಂತೆ.ಇದನ್ನೂ ಓದಿ: 65 ಕೋಟಿ ವಹಿವಾಟು – ವೀಸಾ ಹಿಂದಿಕ್ಕಿ ವಿಶ್ವದಲ್ಲೇ ಈಗ UPI ನಂಬರ್ 1
ಯಾವಾಗಲೂ ಪುನೀತ್ ರಾಜ್‌ಕುಮಾರ್ ಕಂಡರೆ ಮಗನಂತಹ ಭಾವ. ಅಲ್ಲದೇ ಪುನೀತ್ ನಟನೆಯ `ನಟ ಸಾರ್ವಭೌಮ’ ಚಿತ್ರದಲ್ಲಿ ಸರೋಜಾದೇವಿಯವರು ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಅದು ಅವರ ಕೊನೆಯ ಸಿನಿಮಾ ಆಗಿತ್ತು.
1938ರ ಜ.7ರಂದು ಜನಿಸಿದ್ದ ಸರೋಜಾದೇವಿ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ಸೋಮವಾರ (ಜು.14) ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಮಣಿಪಾಲ ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಮಾರ್ಗಮಧ್ಯೆ ನಿಧನರಾದರು.
ಸುಮಾರು 6 ದಶಕಗಳ ಕಾಲ ಚಿತ್ರರಂಗದ ಸೇವೆ ಮಾಡಿರುವ ಇವರು 5 ಭಾಷೆಗಳಲ್ಲಿ 200ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ತಮ್ಮ 17ನೇ ವಯಸ್ಸಿನಲ್ಲಿಯೇ ಕನ್ನಡ ಚಿತ್ರರಂಗದ ಭೀಷ್ಮ ಹೊನ್ನಪ್ಪ ಭಾಗವತರ್ ಅವರ `ಮಹಾಕವಿ ಕಾಳಿದಾಸ’ ಚಿತ್ರದಲ್ಲಿ ಅಭಿನಯಿಸುವ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟಿದ್ದರು.ಇದನ್ನೂ ಓದಿ: ಬಳ್ಳಾರಿ | ಶಾಲೆಗೆ ತೆರಳುತ್ತಿದ್ದ ಬಾಲಕಿ ಹಠಾತ್ ಕುಸಿದು ಬಿದ್ದು ಸಾವು
ಕನ್ನಡ ಚಿತ್ರರಂಗದ ಹಿರಿಯ ನಟಿ ಬಿ.ಸರೋಜಾದೇವಿ ಅವರ ನಿಧನಕ್ಕೆ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy), ವಿಪಕ್ಷ ನಾಯಕ ಆರ್.ಅಶೋಕ್ (R.Ashok) ಸಂತಾಪ ಸೂಚಿಸಿದರು.
ಈ ಬಗ್ಗೆ ಶೋಕ ಸಂದೇಶ ಬಿಡುಗಡೆ ಮಾಡಿರುವ ಅವರು, ಕನ್ನಡ ಚಿತ್ರರಂಗದ ಹಿರಿಯ ನಟಿ, ಅಭಿನಯ ಸರಸ್ವತಿ ಎಂದೇ ಖ್ಯಾತರಾಗಿದ್ದ ಬಿ.ಸರೋಜಾದೇವಿ (B.Saroja Devi) ಅವರು ನಿಧನರಾದ ಸುದ್ದಿ ತಿಳಿದು ಅತೀವ ದುಃಖವಾಗಿದೆ. ಆರು ದಶಕಗಳಿಗೂ ಹೆಚ್ಚು ಕಾಲ ಚಿತ್ರರಂಗದಲ್ಲಿ ಸೇವೆ ಸಲ್ಲಿಸಿದ ಅವರು 200ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದರು ಎಂದು ಹೇಳಿದರು.ಇದನ್ನೂ ಓದಿ: ಕೋವಿಡ್ ವೇಳೆ 2 ಲಕ್ಷ ಕೊಟ್ಟು ಯಾರಿಗಾದ್ರೂ ಸಹಾಯ ಮಾಡು ಅಂತ ಹೇಳಿದ್ರು – ಸಾಧು ಕೋಕಿಲಾ
ಸರೋಜಾದೇವಿ ಅವರ ಸಾವಿನಿಂದ ಇಡೀ ಕಲಾಜಗತ್ತು ಬಡವಾಗಿದೆ. ಸರೋಜಾದೇವಿಯವರ ಆತ್ಮಕ್ಕೆ ಶಾಂತಿ ದೊರೆಯಲಿ ಹಾಗೂ ಅವರ ಕುಟುಂಬವರ್ಗ ಹಾಗೂ ಅಭಿಮಾನಿ ಬಳಗಕ್ಕೆ ದು:ಖವನ್ನು ಭರಿಸುವ ಶಕ್ತಿ ತುಂಬಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುವುದಾಗಿ ತಿಳಿಸಿದರು.
ಮಾಧ್ಯಮದವರೊಂದಿಗೆ ಮಾತನಾಡಿದ ಆರ್.ಅಶೋಕ್, ಕನ್ನಡದ ಖ್ಯಾತ ಚಿತ್ರ ನಟಿಯಾಗಿ ಹಲವು ಭಾಷೆಗಳಲ್ಲಿ ನಟನೆ ಮಾಡಿದ್ದರು. ಡಾ ರಾಜಕುಮಾರ್, ಎಂಜಿಆರ್, ಎನ್‌ಟಿಆರ್ ಜೊತೆ ನಟಿಯಾಗಿ ನಟಿಸಿ, ಬಹಳ ಹೆಸರು ಮಾಡಿದ್ದರು. ಹಲವು ರಾಷ್ಟ್ರೀಯ ಪ್ರಶಸ್ತಿಗಳು ಲಭಿಸಿವೆ. ಅವರಿಗೆ ಜೀವಮಾನದ ಪ್ರಶಸ್ತಿ ನೀಡುವ ವೇಳೆ ನಾನಿದ್ದೆ. ಹತ್ತಾರು ಬಾರಿ ಭೇಟಿಯಾಗಿದ್ದೇನೆ. ನನಗೆ ದೂರದ ಸಂಬಂಧಿಗಳಾದ ಅವರು ಮಗನಂತೆ ಮಾತನಾಡಿಸುತ್ತಿದ್ದರು. ಕನ್ನಡ ಚಿತ್ರರಂಗದಲ್ಲಿ ಮರೆಯಾಲಾಗದ ಪಾತ್ರ ಮಾಡಿದ್ದರು. ಪರಭಾಷಾ ಕಲಾವಿದರಿಗೆ ಹೆಚ್ಚು ಅವಕಾಶ ಇದ್ದಾಗಲೇ ಬೇರೆ ಭಾಷೆಗಳಲ್ಲೂ ಹಿರಿಮೆ ಸಾಧಿಸಿದ್ದರು ಎಂದು ಹೇಳಿದರು.
-ಸೂಪರ್ ಸ್ಟಾರ್‌ಗಳು ಇವರ ಡೇಟ್‌ಗಾಗಿ ಕಾಯುತ್ತಿದ್ದರು – ಆ ದೇವರು ಒಳ್ಳೆಯ ಅಂತ್ಯ ಕೊಟ್ಟಿದ್ದಾನೆ ಎಂದ ನಟ
ಕೋವಿಡ್ ಸಮಯದಲ್ಲಿ 2 ಲಕ್ಷ ರೂ. ಕೊಟ್ಟು ಯಾರಿಗಾದರೂ ಸಹಾಯ ಮಾಡು, ಕಲಾವಿದರಿಗೆ ಒಳ್ಳೆಯದಾಗಬೇಕು ಅಂದಿದ್ದರು, ಆದ್ರೆ ಈವರೆಗೂ ಆ ಹಣದ ಬಗ್ಗೆ ಕೇಳಿರಲಿಲ್ಲ ಎಂದು ಸಂಗೀತ ನಿರ್ದೇಶಕ, ನಟ ಸಾಧು ಕೋಕಿಲಾ (Sadhu Kokila) ಹೇಳಿದರು.
ನಟಿ ಬಿ.ಸರೋಜಾದೇವಿಯವರ (B.Saroja Devi) ಸಿನಿ ಪಯಣ ಹಾಗೂ ಸಹಾಯ ಮನೋಭಾವದ ಕುರಿತು `ಪಬ್ಲಿಕ್ ಟಿವಿ’ ಜೊತೆ ಮಾತನಾಡಿ, ಕೋವಿಡ್ ಸಮಯದಲ್ಲಿ ಸಾಕಷ್ಟು ಕೆಲಸ ಮಾಡಿದ್ದರು. ನನಗೆ ಕರೆ ಮಾಡಿ 2 ಲಕ್ಷ ರೂ. ಕೊಟ್ಟು ಯಾರಿಗಾದರೂ ಸಹಾಯ ಮಾಡು, ಕಲಾವಿದರಿಗೆ ಒಳ್ಳೆಯದಾಗಬೇಕು ಎಂದು ಹೇಳಿದ್ದರು. ಬಳಿಕ ನಾನು ಅದನ್ನು ಉಪೇಂದ್ರ ಅವರ ಟ್ರಸ್ಟ್ಗೆ ಕಳುಹಿಸಿದೆ. ಆದರೆ ಈವರೆಗೂ ಸರೋಜಾದೇವಿಯವರು ನನಗೆ ಆ ಹಣವನ್ನು ಯಾರಿಗೆ ಕೊಟ್ಟೆ ಎಂದು ಕೇಳಲಿಲ್ಲ ಎಂದರು.ಇದನ್ನೂ ಓದಿ: ಸರೋಜಾದೇವಿಯವ್ರು ತಲೆಮಾರುಗಳಲ್ಲಿ ಅಳಿಸಲಾಗದ ಗುರುತು ಬಿಟ್ಟು ಹೋಗಿದ್ದಾರೆ: ಮೋದಿ ಸಂತಾಪ
ಸರೋಜಾದೇವಿ ಅಂತಹವರು ಸಿಗೋದು ತುಂಬಾ ವಿರಳ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಗಳಿಸಿದವರು, ನಾಲ್ಕು ಭಾಷೆಗಳಲ್ಲಿ ಬೇರೆ ಬೇರೆ ನಾಯಕ ನಟರೊಂದಿಗೆ ನಟಿಸಿದವರು, ದೊಡ್ಡ ಮಟ್ಟದ ಪ್ರಶಸ್ತಿಗಳನ್ನು ಪಡೆದವರು. ಆದರೂ ಕೂಡ ಸಾಮಾನ್ಯರಂತೆ ಇರುವವರು ತುಂಬಾ ಕಡಿಮೆ. ನಮಗೆ ಸ್ವಲ್ಪ ಏನಾದರೂ ಸಿಕ್ಕರೆ ಅಹಂ ಬರುತ್ತದೆ. ಆದರೆ ಸರೋಜಾದೇವಿಯವರು ಯಾವತ್ತೂ ಹಾಗಿರಲಿಲ್ಲ. ಇನ್ನೂ ಸೂಪರ್ ಸ್ಟಾರ್‌ಗಳು ಇವರ ಜೊತೆ ನಟಿಸಬೇಕೆಂದು ಕಾಯುತ್ತಿದ್ದರು. ಸರೋಜಾದೇವಿಯವರು ನಟಿಸ್ತಾರೆ ಎಂದರೆ ಎಂಜಿಆರ್, ಶಿವಾಜಿ ಗಣೇಶನ್, ಎನ್‌ಟಿಆರ್ ಎಲ್ಲರೂ ಮೊದಲು ಮೇಡಂ ಬಳಿ ಡೇಟ್ಸ್ ತಗೊಳ್ಳಿ, ಬಳಿಕ ನಾವು ಆ್ಯಕ್ಟ್ ಮಾಡ್ತೀವಿ ಎಂದು ಹೇಳುತ್ತಿದ್ದರು. ಅಂತಹ ಗತ್ತನ್ನು ಇಟ್ಟುಕೊಂಡು ಜೀವನ ನಡೆಸಿದವರು ಎಂದು ತಿಳಿಸಿದರು.
ಇನ್ನೂ ಶಿಸ್ತಿನ ವಿಷಯದಲ್ಲಿ ಕಡೆಯವರೆಗೂ ನಟಿ ಎಂಬ ಗ್ಲ್ಯಾಮರ್‌ನ್ನು ಬಿಟ್ಟು ಕೊಡಲೇ ಇಲ್ಲ. ಮೃದು ಹೃದಯದವರು, ಸಾಕಷ್ಟು ಜನರಿಗೆ ಸಹಾಯ ಮಾಡಿದರು. ಯಾರಿಗೂ ತೊಂದರೆ ಕೊಡದೇ ದೇವರ ಪಾದ ಸೇರಿದ್ದಾರೆ, ದೇವರು ಕೂಡ ಅವರಿಗೆ ಒಳ್ಳೆಯ ಅಂತ್ಯವನ್ನು ಕೊಟ್ಟಿದ್ದಾನೆ ಎಂದುಕೊಳ್ಳುತ್ತೇನೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಸಂತಾಪ ಸೂಚಿಸಿದರು.ಇದನ್ನೂ ಓದಿ: ಡಿವೋರ್ಸ್ ಕೇಸ್| ಸಂಗಾತಿ ರೆಕಾರ್ಡ್ ಮಾಡಿದ ಕರೆಯನ್ನು ಸಾಕ್ಷಿಯಾಗಿ ಪರಿಗಣಿಸಬಹುದು – ಸುಪ್ರೀಂ
ಈ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ಖ್ಯಾತ ನಟಿ, ಅಭಿನಯ ಸರಸ್ವತಿ ಬಿ.ಸರೋಜಾದೇವಿ ಅವರ ನಿಧನದ ಸುದ್ದಿ ಕೇಳಿ ತುಂಬಾ ನೋವಾಗಿದೆ. ಭಾರತೀಯ ಸಿನಿಮಾ ಹಾಗೂ ಸಂಸ್ಕೃತಿಯ ಆದರ್ಶ ಮೂರ್ತಿ ಅವರು, ತಮ್ಮ ವೈವಿಧ್ಯಮಯ ನಟನೆಯಿಂದಲೇ ತಲೆಮಾರುಗಳಲ್ಲಿ ಅಳಿಸಲಾಗದ ಗುರುತನ್ನು ಬಿಟ್ಟು ಹೋಗಿದ್ದಾರೆ.
Saddened by the passing of the noted film personality, B. Saroja Devi Ji. She will be remembered as an exemplary icon of Indian cinema and culture. Her diverse performances left an indelible mark across generations. Her works, spanning different languages and covering diverse…
ಬೇರೆ ಬೇರೆ ಭಾಷೆಗಳಲ್ಲಿ ತಮ್ಮ ನಟನಾ ಶೈಲಿಯ ಮೂಲಕ ಬಹುಮುಖ ಪ್ರತಿಭೆಯನ್ನು ಎತ್ತಿ ತೋರಿಸಿದ್ದಾರೆ. ದೇವರು ಅವರ ಕುಟುಂಬ ವರ್ಗಕ್ಕೆ ಹಾಗೂ ಅಭಿಮಾನಿಗಳಿಗೆ ಅಗಲುವಿಕೆಯ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಸಂತಾಪ ಸೂಚಿಸಿದ್ದಾರೆ.ಇದನ್ನೂ ಓದಿ: ಸಿಗಂದೂರು ಸೇತುವೆ ಲೋಕಾರ್ಪಣೆಗೊಳಿಸಿದ ಕೇಂದ್ರ ಸಚಿವ ನಿತಿನ್ ಗಡ್ಕರಿ
ಕಂಬನಿ ಮಿಡಿದ ತಲೈವಾ
ತಮಿಳಿನ ಖ್ಯಾತ ನಟ ತಲೈವಾ ರಜನಿಕಾಂತ್ ಸಹ ಸಂತಾಪ ಸೂಚಿಸಿ ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ʻಲಕ್ಷಾಂತರ ಅಭಿಮಾನಿಗಳ ಹೃದಯ ಗೆದ್ದ ಮಹಾನ್ ನಟಿ ಸರೋಜಾ ದೇವಿ ಈಗ ನಮ್ಮೊಂದಿಗಿಲ್ಲ. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಒಂದು ಸುವರ್ಣ ಸಿನಿಮಾ ಯುಗ ಅಂತ್ಯಗೊಂಡಿದೆʼ ಅಂತ ಭಾವುಕ ಸಂದೇಶವೊಂದನ್ನ ಫೋಟೋ ಜೊತೆಗೆ ಹಂಚಿಕೊಂಡಿದ್ದಾರೆ.
ಸರೋಜಾದೇವಿ ಅಮ್ಮ ಎಲ್ಲಾ ಕಾಲಕ್ಕೂ ಶ್ರೇಷ್ಠ
ಬಹುಭಾಷಾ ನಟಿ ಖುಷ್ಬು ಸುಂದರ್ ಕೂಡ ಸರೋಜಾ ದೇವಿ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ʻಸರೋಜಾದೇವಿ ಅಮ್ಮ ಎಲ್ಲಾ ಕಾಲದಲ್ಲೂ ಶ್ರೇಷ್ಠರು. ದಕ್ಷಿಣದಲ್ಲಿ ಅವರಷ್ಟು ಹೆಸರು, ಖ್ಯಾತಿ ಪಡೆದ ಮಹಿಳಾ ನಟಿ ಇನ್ನೊಬ್ಬರಿಲ್ಲ. ಅವರು ನನ್ನ ಪ್ರೀತಿಯ ಮತ್ತು ಆರಾಧ್ಯ ದೈವವೂ ಕೂಡ ಹೌದು. ಅವರನ್ನು ಭೇಟಿಯಾಗದೇ ನನ್ನ ಬೆಂಗಳೂರಿಗೆ ಪ್ರವಾಸ ಅಪೂರ್ಣವಾಗಿತ್ತು. ಚೆನ್ನೈಗೆ ಬಂದಾಗೆಲ್ಲ ಅವರು ನನಗೆ ಕರೆ ಮಾಡಿ ಮಾತನಾಡುತ್ತಿದ್ದರು. ಈಗ ಅವರನ್ನ ತುಂಬಾ ಮಿಸ್ ಮಾಡಿಕೊಳ್ತೀನಿ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಭಾವುಕ ಸಂದೇಶ ಹಂಚಿಕೊಂಡಿದ್ದಾರೆ.
ಅಭಿನಯ ಸರಸ್ವತಿ ಎಂದೇ ಖ್ಯಾತರಾಗಿದ್ದ ಹಿರಿಯ ನಟಿ ಬಿ.ಸರೋಜಾದೇವಿ (B.Saroja Devi) ಅವರು ಇಂದು (ಜು.14) ವಿಧಿವಶರಾಗಿದ್ದಾರೆ. ಮಂಗಳವಾರ (ಜು.15) ಅವರ ಹುಟ್ಟೂರು ಚನ್ನಪಟ್ಟಣದ ದಶಾವರದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.
ಸರೋಜಾದೇವಿಯವರ ಮಗ ಗೌತಮ್ ಮಾತನಾಡಿ, ನಾಳೆ ಬೆಳಿಗ್ಗೆ 11:30ರವರೆಗೂ ಬೆಂಗಳೂರಿನ ಸ್ವಗೃಹದ ಬಳಿ ಅಂತಿಮದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಬಳಿಕ ಪಾರ್ಥಿವ ಶರೀರವನ್ನು ಚನ್ನಪಟ್ಟಣಕ್ಕೆ ಕರೆದೊಯ್ಯಲಾಗುವುದು. ಅಲ್ಲಿ ದಶಾವರದ ಕಣ್ವ ಡ್ಯಾಂ ಬಳಿ ಒಕ್ಕಲಿಗ ಸಂಪ್ರದಾಯದಂತೆ ಅಂತಿಮ ವಿಧಿವಿಧಾನ ನೆರವೇರಲಿದೆ. ಅವರ ತಾಯಿ ರುದ್ರಮ್ಮ ಅವರ ಸಮಾಧಿಯ ಪಕ್ಕದಲ್ಲಿಯೇ ಸರೋಜಾದೇವಿಯವರ ಅಂತ್ಯಕ್ರಿಯೆ ನಡೆಯಲಿದ್ದು, ಇದು ಸರೋಜಾದೇವಿಯವರ ಕೊನೆಯಾಸೆಯಾಗಿತ್ತು ಎಂದು ಮಾಹಿತಿ ನೀಡಿದ್ದಾರೆ.
ನಾಳೆ ಅಂತ್ಯಕ್ರಿಯೆ ಹಿನ್ನೆಲೆ ಸ್ಥಳಕ್ಕೆ ರಾಮನಗರ ಎಸ್ಪಿ ಶ್ರೀನಿವಾಸ್ ಗೌಡ ಭೇಟಿ ನೀಡಿ, ಸ್ಥಳ ಪರಿಶೀಲನೆ ನಡೆಸಿದ್ದಾರೆ. ಸಾಕಷ್ಟು ರಾಜಕೀಯ ಗಣ್ಯರು, ಸಿನಿಮಾ ಕಲಾವಿದರು ಆಗಮಿಸುವ ಹಿನ್ನೆಲೆ ಅಂತಿಮ ದರ್ಶನದ ವ್ಯವಸ್ಥೆ ಹಾಗೂ ಪಾರ್ಕಿಂಗ್ ವ್ಯವಸ್ಥೆಯನ್ನು ಪರಿಶೀಲನೆ ನಡೆಸಿದ್ದಾರೆ. ಅಲ್ಲದೇ ಸೂಕ್ತ ಪೊಲೀಸ್ ಬಂದೋಬಸ್ತ್ ನೀಡುವಂತೆ ಡಿಎವೈಎಸ್ಪಿ ಗಿರಿಗೆ ಸೂಚನೆ ನೀಡಿದ್ದಾರೆ.
ಇನ್ನೂ ಸರೋಜಾದೇವಿ ಅಗಲಿಕೆಗೆ ಗ್ರಾಮಸ್ಥರು ಶ್ರದ್ಧಾಂಜಲಿ ಸಲ್ಲಿಸಿದ್ದು, ಅವರ ನಿವಾಸದ ಮುಂದೆ ಫೋಟೊ ಇಟ್ಟು ಪುಷ್ಪಾರ್ಚನೆ ಸಲ್ಲಿಸಿದ್ದಾರೆ. ಸರೋಜಾದೇವಿಯವರು ಗ್ರಾಮಕ್ಕೆ ಮೂರು ಶಾಲಾ ಕೊಠಡಿ ಕಟ್ಟಿಸಿಕೊಟ್ಟಿದ್ದು, ಗ್ರಾಮಕ್ಕೆ ವಿದ್ಯುತ್ ಸಂಪರ್ಕ ಕಲ್ಪಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಅಲ್ಲದೇ ಗ್ರಾಮದಲ್ಲಿ ಹೈಸ್ಕೂಲ್ ನಿರ್ಮಾಣಕ್ಕೆ ಅನುಮತಿ ಕೊಡಿಸಿದ್ದನ್ನ ನೆನೆದು ಗ್ರಾಮಸ್ಥರು ಭಾವುಕರಾದರು.ಇದನ್ನೂ ಓದಿ: ಬಿ.ಸರೋಜಾದೇವಿ ಕಿತ್ತೂರು ರಾಣಿ ಚೆನ್ನಮ್ಮನ ಪಾತ್ರಕ್ಕೆ ನೈಜತೆ ತಂದಿದ್ದರು: ಬೊಮ್ಮಾಯಿ
1938ರ ಜ.7ರಂದು ಜನಿಸಿದ್ದ ಸರೋಜಾದೇವಿ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ಇಂದು ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಮಣಿಪಾಲ ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಮಾರ್ಗಮಧ್ಯೆ ನಿಧನರಾದರು.
ಸುಮಾರು 6 ದಶಕಗಳ ಕಾಲ ಚಿತ್ರರಂಗದ ಸೇವೆ ಮಾಡಿರುವ ಇವರು 5 ಭಾಷೆಗಳಲ್ಲಿ 200ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ಚಿತ್ರರಂಗದ ಸಾಧನೆಗೆ ಇವರಿಗೆ ಕೇಂದ್ರ ಸರ್ಕಾರ ಪದ್ಮಭೂಷಣ ನೀಡಿ ಪುರಸ್ಕರಿಸಿತ್ತು. ತಮ್ಮ 17ನೇ ವಯಸ್ಸಿನಲ್ಲಿಯೇ ಕನ್ನಡ ಚಿತ್ರರಂಗದ ಭೀಷ್ಮ ಹೊನ್ನಪ್ಪ ಭಾಗವತರ್ ಅವರ `ಮಹಾಕವಿ ಕಾಳಿದಾಸ’ ಚಿತ್ರದಲ್ಲಿ ಅಭಿನಯಿಸುವ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟಿದ್ದರು.
ಸರೋಜಾದೇವಿ ಅವರು ಕನ್ನಡದಲ್ಲಿ ಡಾ. ರಾಜ್‌ಕುಮಾರ್ ಅವರೊಂದಿಗೆ ಅಮರಶಿಲ್ಪಿ ಜಕಣಾಚಾರಿ, ಕಥಾಸಾಗರ, ಬಬ್ರುವಾಹನ, ಭಾಗ್ಯವಂತರು, ಆಷಾಡಭೂತಿ, ಶ್ರೀರಾಮಪೂಜಾ, ಕಚ ದೇವಯಾನಿ, ರತ್ನಗಿರಿ ರಹಸ್ಯ, ಕೋಕಿಲವಾಣಿ, ಸ್ಕೂಲ್‌ಮಾಸ್ಟರ್, ಪಂಚರತ್ನ, ಲಕ್ಷ್ಮೀಸರಸ್ವತಿ, ಚಿಂತಾಮಣಿ, ಭೂಕೈಲಾಸ, ಅಣ್ಣತಂಗಿ, ಜಗಜ್ಯೋತಿ ಬಸವೇಶ್ವರ, ದೇವಸುಂದರಿ, ವಿಜಯನಗರದ ವೀರಪುತ್ರ, ಮಲ್ಲಮ್ಮನ ಪವಾಡ, ಶ್ರೀಕೃಷ್ಣರುಕ್ಮಿಣಿ ಸತ್ಯಭಾಮ, ಪೂರ್ಣಿಮಾ, ಗೃಹಿಣಿ, ಪಾಪಪುಣ್ಯ, ಸಹಧರ್ಮಿಣಿ, ಶ್ರೀನಿವಾಸಕಲ್ಯಾಣ, ಚಾಮುಂಡೇಶ್ವರಿ ಮಹಿಮೆ, ಚಿರಂಜೀವಿ, ಶನಿಪ್ರಭಾವ ಮುಂತಾದ ಚಿತ್ರಗಳಲ್ಲಿ ನಟಿಸಿದ್ದಾರೆ.
ಸರೋಜಾದೇವಿ ಅವರು ತಮಿಳಿನಲ್ಲಿ ಜೆಮಿನಿ ಗಣೇಶನ್, ಶಿವಾಜಿ ಗಣೇಶನ್, ಮತ್ತು ಎಂ.ಜಿ. ರಾಮಚಂದ್ರನ್ ಅವರೊಂದಿಗೆ ಅನೇಕ ಹಿಟ್ ಚಿತ್ರಗಳಲ್ಲಿ ಅಭಿನಯಿಸಿದ್ದರು. ಅವರು ಹಿಂದಿಯಲ್ಲಿ ದಿಲೀಪ್ ಕುಮಾರ್, ರಾಜೇಂದ್ರ ಕುಮಾರ್, ಶಮ್ಮಿ ಕಪೂರ್, ಮತ್ತು ಸುನೀಲ್ ದತ್ ಅವರೊಂದಿಗೆ ನಟಿಸಿದ್ದಾರೆ.ಇದನ್ನೂ ಓದಿ: ಬಿ.ಸರೋಜಾದೇವಿಯವರ ಸಾವಿನಿಂದ ಕಲಾಜಗತ್ತು ಬಡವಾಗಿದೆ – ಸಿಎಂ ಸಂತಾಪ
– ಸರೋಜಾದೇವಿ ನಿಧನ ಕರ್ನಾಟಕ ಕಲಾಕ್ಷೇತ್ರಕ್ಕೆ ದುಃಖದ ದಿನ ಎಂದ ಸಂಸದ
ಬೆಂಗಳೂರು: ಬಿ.ಸರೋಜಾದೇವಿ (B Saroja Devi) ಕಿತ್ತೂರು ರಾಣಿ ಚೆನ್ನಮ್ಮನ ಪಾತ್ರಕ್ಕೆ ನೈಜತೆ ತಂದಿದ್ದರು. ಅವರ ನಿಧನ ಕರ್ನಾಟಕದ ಕಲಾಕ್ಷೇತ್ರಕ್ಕೆ ಅತ್ಯಂತ ದುಃಖದ ದಿನ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ (Basavaraj Bommai) ಸಂತಾಪ ಸೂಚಿಸಿದ್ದಾರೆ.
ಬಿ.ಸರೋಜಾದೇವಿಯವರ ನಿಧನದ ಹಿನ್ನೆಲೆಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಅಭಿನಯ ಸರಸ್ವತಿ, ಚತುರ್ಭಾಷಾ ತಾರೆ ಪೌರಾಣಿಕ ಹಾಗೂ ಸಾಮಾಜಿಕ ಚಲನಚಿತ್ರಗಳಲ್ಲಿ ವಿಭಿನ್ನ ಪಾತ್ರವನ್ನು ಲೀಲಾಜಾಲವಾಗಿ ನಟಿಸುತ್ತಿದ್ದ ಸರೋಜಾದೇವಿ ಇನ್ನಿಲ್ಲ. ಒಂದು ಕಾಲದಲ್ಲಿ ಕನ್ನಡದ ಸೂಪರ್ ಸ್ಟಾರ್ ಆಗಿದ್ದ ಅವರು, ರಾಜಕುಮಾರ್ ಜೊತೆ, ತೆಲುಗಿನಲ್ಲಿ ಎನ್‌ಟಿಆರ್ ಜೊತೆ, ಹಿಂದಿಯಲ್ಲಿ ದಿಲೀಪ್ ಕುಮಾರ್ ಜೊತೆ ನಟಿಸಿ ಇಡೀ ದೇಶದಲ್ಲಿ ಪ್ರಖ್ಯಾತ ನಟಿ ಆಗಿದ್ದರು. ಕನ್ನಡದಲ್ಲಿ ಹೇಳಬೇಕಾದರೆ ಕಿತ್ತೂರು ರಾಣಿ ಚೆನ್ನಮ್ಮ ಪಾತ್ರಕ್ಕೆ ನೈಜತೆ ತಂದಿದ್ದರು. ಚೆನ್ನಮ್ಮ ಅಂದರೆ ಹೀಗಿದ್ದರು ಅಂತ ಕಲ್ಪನೆ ಮೂಡಿಸಿದ್ದರು. ಅವರ ಅಭಿನಯ, ಕಲ್ಪನೆ ಇಂದಿಗೂ ಮನಸ್ಸಿನಲ್ಲಿ ಇದೆ. ಚೆನ್ನಮ್ಮ ಬ್ರಿಟೀಷರ ವಿರುದ್ಧ ಹೇಗೆ ಹೋರಾಟ ಮಾಡಿದ್ದರು ಅಂತ ಅವರ ನಟನೆ ಮೂಲಕ ತೋರಿಸಿದ್ದರು ಎಂದರು. ಇದನ್ನೂ ಓದಿ: ಸತ್ಯನಾರಾಯಣ ದೇವರ ಪ್ರಸಾದದಿಂದ ನಾನು ಜನಿಸಿದ್ದೆ ಎಂದಿದ್ದ ಸರೋಜಾದೇವಿ
ಮಲ್ಲಮ್ಮನ ಪವಾಡ ಇದೊಂದು ಮನೆಮನೆಯಲ್ಲಿ ಮನಮುಟ್ಟುವ ಚಿತ್ರವಾಗಿತ್ತು. ಲಕ್ಷ್ಮಿ ಸರಸ್ವತಿ, ಬಬ್ರುವಾಹನ, ಶ್ರೀನಿವಾಸ ಕಲ್ಯಾಣ ಸೇರಿದಂತೆ ನೂರಾರು ಚಿತ್ರಗಳಲ್ಲಿ ನಟನೆ ಮಾಡಿದ್ದರು. ಅಭಿನಯದ ಜೊತೆ ಗಂಭೀರತೆಯಲ್ಲಿ ಅಗ್ರಮಾನ್ಯರಾಗಿದ್ದರು. ಐದು ದಶಕದಿಂದ ಚಿತ್ರರಂಗದಲ್ಲಿ ನಟಿಸಿದ್ದು, ನಮ್ಮನ್ನೆಲ್ಲಾ ಅಗಲಿದ್ದಾರೆ. ಆದರೂ ಅವರ ಅಭಿನಯದ ಮೂಲಕ ನಮ್ಮ ಮನದಲ್ಲಿದ್ದಾರೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ದೇವರಲ್ಲಿ ಪ್ರಾರ್ಥಿಸುವುದಾಗಿ ತಿಳಿಸಿದರು. ಇದನ್ನೂ ಓದಿ: ಸರೋಜಾದೇವಿ ಭಾರತೀಯ ಚಿತ್ರರಂಗದ ಇತಿಹಾಸದಲ್ಲಿ ಅತ್ಯಂತ ಯಶಸ್ವಿ ನಟಿಯರಲ್ಲಿ ಒಬ್ಬರು – ಬಿವೈವಿ
ವಿಜಯಪುರ: ಬಿ.ಸರೋಜಾದೇವಿ ಅವರ ಸಾವಿನಿಂದ ಇಂದು ಕಲಾಜಗತ್ತು ಬಡವಾಗಿದೆ. ಅವರ ಆತ್ಮಕ್ಕೆ ಶಾಂತಿಸಿಗಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಸಂತಾಪ ಸೂಚಿಸಿದರು.
ಜಿಲ್ಲೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕನ್ನಡ ನಾಡು ಕಂಡಂತಹ ಪ್ರತಿಭಾವಂತೆ. ಅವರು ಕನ್ನಡ, ತೆಲುಗು, ತಮಿಳು ಹಾಗೂ ಹಿಂದಿ ಭಾಷೆಗಳಲ್ಲಿ ನಟಿಸಿದ್ದಾರೆ. ಅವರು ಒಬ್ಬ ಅಪ್ರತಿಮ ಕಲಾವಿದೆ. ಬಿ.ಸರೋಜಾದೇವಿ ಅವರ ಸಾವಿನಿಂದ ಇಂದು ಕಲಾಜಗತ್ತು ಬಡವಾಗಿದೆ. ಅವರ ಆತ್ಮಕ್ಕೆ ಶಾಂತಿಸಿಗಲಿ ಹಾಗೂ ಕುಟುಂಬ ವರ್ಗದವರಿಗೆ ಅವರ ಸಾವನ್ನು ಸಹಿಸಿಕೊಳ್ಳುವ ಶಕ್ತಿ ನೀಡಲಿ ಎಂದರು.ಇದನ್ನೂ ಓದಿ: ಪುದುಚೆರಿಯಲ್ಲಿ ಖ್ಯಾತ ಮಾಡೆಲ್ ಸ್ಯಾನ್ ರೆಚಲ್ ಆತ್ಮಹತ್ಯೆ
ಇದೇ ವೇಳೆ ಶಕ್ತಿ ಯೋಜನೆಯ ಬಗ್ಗೆ ಮಾತನಾಡಿ, 5 ಗ್ಯಾರಂಟಿ ಯೋಜನೆಗಳನ್ನು 2023ರ ವಿಧಾನಸಭಾ ಚುನಾವಣೆಯಲ್ಲಿ ಘೋಷಣೆ ಮಾಡಿದ್ದೆವು. ನಾವು ಕ್ಯಾಬಿನೆಟ್ ಸಭೆ ಮಾಡಿ ಕೂಡಲೇ ಅವುಗಳನ್ನು ಜಾರಿಗೆ ತರುತ್ತೇವೆ ಎಂದು ತೀರ್ಮಾನೆ ಮಾಡಿದ್ದೆವು. ಅದರಂತೆ 2023ರ ಮೇ 20ರಂದು ಅಧಿಕಾರಕ್ಕೆ ಬಂದೆವು. ಬಳಿಕ ಜೂ.11ಕ್ಕೆ ಶಕ್ತಿ ಯೋಜನೆಯನ್ನು ಜಾರಿಗೆ ತಂದೆವು. ಅಂದಿನಿಂದ ಈವರೆಗೂ ರಾಜ್ಯದ ಎಲ್ಲಾ ಹೆಣ್ಣು ಮಕ್ಕಳು ಸರ್ಕಾರಿ ಬಸ್‌ನಲ್ಲಿ ಉಚಿತವಾಗಿ ಪ್ರಯಾಣಿಸುತ್ತಿದ್ದಾರೆ. ಇಂದು 500 ಕೋಟಿ ಮಹಿಳೆಯರು ಸಂಚರಿಸಿದ್ದಾರೆ. ಇದಕ್ಕೆ ಸಾಂಕೇತಿಕವಾಗಿ ಟಿಕೆಟ್ ಹಂಚಿಕೆ ಮಾಡಿದ್ದೇವೆ ಎಂದು ಹೇಳಿದರು.
ಕನ್ನಡದ ಹಿರಿಯ ನಟಿ ಬಿ.ಸರೋಜಾದೇವಿ ಅವರ ನಿಧನವಾರ್ತೆ ನೋವುಂಟುಮಾಡಿದೆ. ಕನ್ನಡ ಚಿತ್ರರಂಗವು ಸೇರಿದಂತೆ ತಮಿಳು, ತೆಲುಗು ಮತ್ತು ಹಿಂದಿಯ ಸುಮಾರು 200 ಚಿತ್ರಗಳಲ್ಲಿ ನಟಿಸಿ, ಅಭಿನಯ ಸರಸ್ವತಿ ಎಂದೇ ಖ್ಯಾತರಾಗಿದ್ದರು.
ಸರೋಜಾದೇವಿ ಎಂದಾಕ್ಷಣ ಕಿತ್ತೂರು ಚೆನ್ನಮ್ಮ, ಬಬ್ರುವಾಹನ, ಅಣ್ಣತಂಗಿ ಮುಂತಾದ ಚಿತ್ರಗಳಲ್ಲಿನ ಅವರ ಮನೋಜ್ಞ ಅಭಿನಯ… pic.twitter.com/ZOVdrXGqlp
ಸಿಗಂದೂರು ಸೇತುವೆ ವಿಚಾರವಾಗಿ ನಿತಿನ್ ಗಡ್ಕರಿಗೆ ಪತ್ರ ಬರೆದ ಬಗ್ಗೆ ಮಾತನಾಡಿ, ಇಂದು ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಯಾರು ಭಾಗಿಯಾಗಿಲ್ಲ, ನನಗೆ ಆಹ್ವಾನಿಸಿಲ್ಲ, ಹಾಗಾಗಿ ಗಡ್ಕರಿಯವರಿಗೆ ಕರೆ ಮಾಡಿದೆ. ಆಗ ಅವರು ಕಾರ್ಯಕ್ರಮ ಮುಂದಕ್ಕೆ ಹಾಕುವುದಾಗಿ ತಿಳಿಸಿದರು. ಬಳಿಕ ಪತ್ರ ಬರೆದೆ. ಬಿಜೆಪಿ ನಾಯಕರು ಒತ್ತಾಯಿಸಿರಬಹುದು, ನನಗೆ ಏನು ಹೇಳದೇ ಮಾಡಿದ್ದಾರೆ. ಸದ್ಯ ನಾನು ಇಂಡಿ ತಾಲೂಕಿನಲ್ಲಿ ನಡೆಯುತ್ತಿರುವ ಕಾರ್ಯಕ್ರಮಕ್ಕೆ ಹೊರಟಿದ್ದೇನೆ. ಸದ್ಯ ಸಿಗಂದೂರು ಕಾರ್ಯಕ್ರಮಕ್ಕೆ ನಾವ್ಯಾರು ಹೋಗುವುದಿಲ್ಲ ಎಂದು ತಿಳಿಸಿದರು.ಇದನ್ನೂ ಓದಿ: ಸರೋಜಾದೇವಿ ಭಾರತೀಯ ಚಿತ್ರರಂಗದ ಇತಿಹಾಸದಲ್ಲಿ ಅತ್ಯಂತ ಯಶಸ್ವಿ ನಟಿಯರಲ್ಲಿ ಒಬ್ಬರು – ಬಿವೈವಿ