Tag: ಬಿ.ಸಿ.ಪಾಟೀಲ

  • ಕೋವಿಡ್‌ ಕಾರಣಕ್ಕೆ ಮುಂದೂಡಿದ್ದ ಕನ್ನಡ ಸಾಹಿತ್ಯ ಸಮ್ಮೇಳನ ಹಾವೇರಿಯಲ್ಲೇ ನಡೆಯುತ್ತೆ: ಬಿ.ಸಿ.ಪಾಟೀಲ್

    ಕೋವಿಡ್‌ ಕಾರಣಕ್ಕೆ ಮುಂದೂಡಿದ್ದ ಕನ್ನಡ ಸಾಹಿತ್ಯ ಸಮ್ಮೇಳನ ಹಾವೇರಿಯಲ್ಲೇ ನಡೆಯುತ್ತೆ: ಬಿ.ಸಿ.ಪಾಟೀಲ್

    ಹಾವೇರಿ: ಕೋವಿಡ್‌ ಕಾರಣಕ್ಕೆ ಮುಂದೂಡಲಾಗಿದ್ದ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಹಾವೇರಿಯಲ್ಲೇ ನಡೆಸಲಾಗುವುದು. ಈ ಬಗ್ಗೆ ಸಿಎಂ ಜೊತೆ ಚರ್ಚಿಸಿ ನಿರ್ಧಾರ ಪ್ರಕಟಿಸಲಾಗುವುದು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದರು.

    KANNADA FLAG

    ಹಾವೇರಿಯಲ್ಲಿ ಸೋಮವಾರ ಮಾತನಾಡಿದ ಅವರು, ಕನ್ನಡ ಸಾಹಿತ್ಯ ಸಮ್ಮೇಳನ ನಡೆಸುವ ಬಗ್ಗೆ ಸಿಎಂ ಜೊತೆ ಚರ್ಚೆ ಮಾಡಲಾಗುವುದು. ಹಾವೇರಿಯಲ್ಲೇ ಕನ್ನಡ ಸಾಹಿತ್ಯ ಸಮ್ಮೇಳನ ಮಾಡಲಾಗುವುದು. ಬೆಂಗಳೂರಿಗೆ ಹೋದ ನಂತರ ಈ ಬಗ್ಗೆ ಸಿಎಂ ಜೊತೆ ಚರ್ಚೆ ಮಾಡಿ ನಿರ್ಧಾರ ಪ್ರಕಟಿಸಲಾಗುವುದು ಎಂದು ತಿಳಿಸಿದರು. ಇದನ್ನೂ ಓದಿ: ಗಡಿ ಜಿಲ್ಲೆ ಯಾದಗಿರಿಯಲ್ಲಿ ಕನ್ನಡ ರಾಜ್ಯೋತ್ಸವ ಸಂಭ್ರಮ

    ಈಗಾಗಲೆ ಸಿಎಂ ಬೆಳಗಾವಿಯಲ್ಲಿ ಅಧಿವೇಶನ ಮಾಡುವ ಬಗ್ಗೆ ಹೇಳಿದ್ದಾರೆ‌. ಈ ವೇಳೆ ಸಮ್ಮೇಳನದ ವಿಚಾರ ಪ್ರಸ್ತಾಪಿಸಲಾಗುವುದು ಎಂದರು.

    PATIL

    ಎರಡು ವರ್ಷಗಳ ಕಾಲ ಅಧಿವೇಶನ ನಡೆದಿಲ್ಲ. ನವೆಂಬರ್ ಅಥವಾ ಡಿಸೆಂಬರ್‌ನಲ್ಲಿ ಬೆಳಗಾವಿಯಲ್ಲಿ ಅಧಿವೇಶನ ನಡೆಸಲಾಗುವುದು. ಸಭಾಪತಿ ಬಸವರಾಜ್ ಹೊರಟ್ಟಿ ಅವರು ಸಹ ಪತ್ರವನ್ನು ಬರೆದಿದ್ದಾರೆ. ಈ ಬಗ್ಗೆ ಸಿಎಂಗೆ ಮನವಿ ಮಾಡಲಾಗುವುದು ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: ಅಸ್ಪೃಶ್ಯತೆ ಆಚರಣೆ ಘಟನೆ ಬೆಳಕಿಗೆ ಬಂದರೆ ನಿರ್ದಾಕ್ಷಿಣ್ಯ ಕ್ರಮ: ಕೋಟಾ ಶ್ರೀನಿವಾಸ ಪೂಜಾರಿ

    ಸಿಂದಗಿ ಮತ್ತು ಹಾನಗಲ್‌ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಫಲಿತಾಂಶದ ಬಗ್ಗೆ ಪ್ರತಿಕ್ರಿಯಿಸಿ, “ಕಾದು ನೋಡಿ” ಎಂದು ನಗುನಗುತ್ತೇ ಉತ್ತರಿಸಿದರು.

  • ಹುಬ್ಬಳ್ಳಿಯ ಕಿಮ್ಸ್ ಗೆ ಪಾಪು ನಾಮಕರಣ ಮಾಡಲು ಯತ್ನ- ಬಿ.ಸಿ.ಪಾಟೀಲ್ ಭರವಸೆ

    ಹುಬ್ಬಳ್ಳಿಯ ಕಿಮ್ಸ್ ಗೆ ಪಾಪು ನಾಮಕರಣ ಮಾಡಲು ಯತ್ನ- ಬಿ.ಸಿ.ಪಾಟೀಲ್ ಭರವಸೆ

    ಹಾವೇರಿ: ನಾಡೋಜ ಪಾಟೀಲ ಪುಟ್ಟಪ್ಪನವರ ಹೆಸರನ್ನು ಉಳಿಸುವ ಸಲುವಾಗಿ ಅವರ ಹೆಸರನ್ನು ಹುಬ್ಬಳ್ಳಿ ಕಿಮ್ಸ್ ಗೆ ನಾಮಕರಣ ಮಾಡಲು ಸಿಎಂ ಜೊತೆ ಹಾಗೂ ಸಚಿವ ಸಂಪುಟ ಸಭೆಯದಲ್ಲಿ ಚರ್ಚೆ ಮಾಡುವೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಭರವಸೆ ನೀಡಿದರು.

    ಪಾಟೀಲ ಪುಟ್ಟಪ್ಪ ವಿಧಿವಶರಾದರ ಹಿನ್ನೆಲೆಯಲ್ಲಿ ಅಂತ್ಯಕ್ರಿಯೆಯಲ್ಲಿ ಸರ್ಕಾರದ ಪರವಾಗಿ ಭಾಗಿಯಾಗಿ ಮಾತನಾಡಿದ ಅವರು, ಪಾಟೀಲ ಪುಟ್ಟಪ್ಪ ಕನ್ನಡದ ಗಟ್ಟಿಧ್ವನಿಯಾಗಿದ್ದರು. ಇಂದು ಆ ಗಟ್ಟಿ ಧ್ವನಿ ಸ್ಥಬ್ದವಾಗಿದೆ. ನಾನು ಸಚಿವನಾಗಬೇಕು ಎನ್ನುವ ಆಸೆ ಅವರಿಗೆ ತುಂಬಾ ಇತ್ತು. ಸಚಿವನಾದ ನಂತರ ಅವರನ್ನು ಮಾತನಾಡಿಸಲು ಹೋದಾಗ ಮಾತನಾಡುವ ಸ್ಥಿತಿಯಲ್ಲಿ ಅವರು ಇರಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

    ಪಾಪು ಅವರು ಹುಟ್ಟು ಹೋರಾಟಗಾರರಾಗಿದ್ದರು. ಹೀಗಾಗಿ ಅವರ ಹೆಸರು ಅಮರವಾಗಿರಲು ಕಿಮ್ಸ್ ಆಸ್ಪತ್ರೆಗೆ ಅವರ ಹೆಸರು ನಾಮಕರಣ ಮಾಡುವ ಬಗ್ಗೆ ಸಿಎಂ ಜೊತೆ ಹಾಗೂ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಮಾಡುವೆ ಎಂದರು.