ಗದಗ: ಬೀದಿನಾಯಿ ದಾಳಿ (Stray dog attack) ಮಾಡಿದ ಪರಿಣಾಮ ಬಾಲಕ ಗಂಭೀರ ಗಾಯಗೊಂಡಿರುವ ಘಟನೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ (Lakshmeshwara) ಪಟ್ಟಣ ಮ್ಯಾಗೇರಿ ಓಣಿಯಲ್ಲಿ ನಡೆದಿದೆ.
ಹೆಚ್ಚುತ್ತಿರುವ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಬೆಚ್ಚಿ ಬಿದ್ದಿದ್ದಾರೆ. ಮಕ್ಕಳನ್ನು ಮನೆಯಿಂದ ಹೊರಬಿಡದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಮನೆ ಮುಂದೆ ಆಟ ಆಡುತ್ತಿರುವ ಚಿಕ್ಕ ಮಕ್ಕಳ ಮೇಲೆ ಬೀದಿನಾಯಿಗಳು ದಾಳಿ ಮಾಡುತ್ತಿದ್ದರೂ ಸುಮ್ಮನೆ ಕುಳಿತಿರುವ ಲಕ್ಷ್ಮೇಶ್ವರ ಪುರಸಭೆ ಅಧಿಕಾರಿಗಳ ವಿರುದ್ಧ ಜನರು ಆಕ್ರೋಶ ಹೊರಹಾಕಿದ್ದಾರೆ. ಅಲ್ಲದೇ ಹೆಚ್ಚುತ್ತಿರುವ ಬೀನಾಯಿಗಳ ಹಾವಳಿಗೆ ಕಡಿವಾಣ ಹಾಕುವಂತೆ ಒತ್ತಾಯಿಸಿದ್ದಾರೆ.
ಜೈಪುರ: ಜೋಧ್‌ಪುರ, ಉದಯಪುರ ಹಾಗೂ ಜೈಪುರ ನಗರಗಳ ಬೀದಿನಾಯಿ (Street Dogs) ಮತ್ತು ಅನಾಥ ಪ್ರಾಣಿಗಳನ್ನು ತೆರೆವುಗೊಳಿಸುವುದಕ್ಕಾಗಿ ವಿಶೇಷ ಅಭಿಯಾನ ಕೈಗೊಳ್ಳುವಂತೆ ರಾಜಸ್ಥಾನ ಹೈಕೋರ್ಟ್ (Rajasthan Highcourt) ಆದೇಶಿಸಿದೆ.
ಅಭಿಯಾನದ ವೇಳೆ ತೆರವಿಗೆ ಅಡ್ಡಿಪಡಿಸುವವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವುದು ಸೇರಿದಂತೆ ಇನ್ನಿತರ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಅವಕಾಶವಿರುತ್ತದೆ ಎಂದು ನ್ಯಾಯಮೂರ್ತಿಗಳಾದ ಕುಲದೀಪ್ ಮಾಥುರ್ ಮತ್ತು ರವಿ ಚಿರಾನಿಯಾ ಅವರಿದ್ದ ದ್ವಿ-ಸದಸ್ಯ ಪೀಠ ಹೇಳಿದೆ. ಆದರೆ ಅಭಿಯಾನದ ವೇಳೆ ಪ್ರಾಣಿಗಳಿಗೆ ಹಾನಿಯಾಗದಂತೆ ಅಧಿಕಾರಿಗಳು ನೋಡಿಕೊಳ್ಳಬೇಕು ಎಂದು ಕೂಡ ಸ್ಪಷ್ಟಪಡಿಸಿದೆ.ಇದನ್ನೂ ಓದಿ: `ಭಾಷಾ’ಗಿಂತ `ಓಂ’ ಸಿನಿಮಾ ಹತ್ತು ಪಟ್ಟು ಬೆಟರ್- ಉಪ್ಪಿ ಹೊಗಳಿದ ರಜನಿಕಾಂತ್
ಈ ಕುರಿತು ನಾಗರಿಕರು ದೂರು ಸಲ್ಲಿಸಲು ಅನುಕೂಲವಾಗುವಂತೆ ದೂರವಾಣಿ ಸಂಖ್ಯೆ ಹಾಗೂ ಇ-ಮೇಲ್ ಐಡಿ ಒದಗಿಸಬೇಕು. ಅದಲ್ಲದೇ ಬೀದಿ ನಾಯಿಗಳು ಹಾಗೂ ಅನಾಥ ಪ್ರಾಣಿಗಳಿಗೆ ಪುರಸಭೆಗಳು, ಖಾಸಗಿ ವ್ಯಕ್ತಿಗಳು ಅಥವಾ ಇನ್ಯಾವುದೇ ಸಂಸ್ಥೆಗಳು ತಾವು ನಿರ್ವಹಿಸುವ ಆಶ್ರಯ ಕೇಂದ್ರಗಳಲ್ಲಿ ತಮಗಿಷ್ಟವಿದ್ದಲ್ಲಿ ಆಹಾರ ನೀಡಬಹುದು ಎಂದು ಹೇಳಿದೆ.
ಸಾಮಾನ್ಯ ಜನರು ಭಾವನೆ, ಧಾರ್ಮಿಕ ನಂಬಿಕೆ ಅಥವಾ ಪ್ರಾಣಿಗಳ ಮೇಲಿನ ಪ್ರೀತಿಯಿಂದಾಗಿ ಆಹಾರ ನೀಡಲು ಅಥವಾ ಅವುಗಳನ್ನು ನೋಡಿಕೊಳ್ಳಲು ಬಯಸಿದರೆ ಅಂತಹ ಚಟುವಟಿಕೆಗಳನ್ನು ಪ್ರಾಣಿ ಆಶ್ರಯ ಕೇಂದ್ರದಲ್ಲಿ ಮಾಡಬಹುದು ಎಂದು ತಿಳಿಸಿದೆ.
ರಸ್ತೆಗಳಿಂದ ಬೀದಿ ಪ್ರಾಣಿಗಳನ್ನು ತೆರವುಗೊಳಿಸುವಂತೆ ಮತ್ತು ವಾಹನಗಳ ಮುಕ್ತ ಸಂಚಾರಕ್ಕಾಗಿ ನಿಯಮಿತವಾಗಿ ಗಸ್ತು ತಿರುಗುವಂತೆ ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿ ಅಧಿಕಾರಿಗಳಿಗೆ ಪೀಠ ನಿರ್ದೇಶಿಸಿದೆ. ರಾಜ್ಯದಲ್ಲಿ ನಾಯಿ ಕಡಿತ, ಹೆದ್ದಾರಿಯಲ್ಲಿ ಅನಾಥ ದನಗಳ ಹಾವಳಿಯಿಂದ ಹೆಚ್ಚು ಸಾವು-ನೋವು ಸಂಭವಿಸುತ್ತಿದ್ದ ಹಿನ್ನೆಲೆ ಹೈಕೋರ್ಟ್ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿತ್ತು. ಈ ಕುರಿತು ಪ್ರತಿಕ್ರಿಯಿಸಲು ರಾಜ್ಯ ಸರ್ಕಾರ ಮತ್ತು ಪುರಸಭೆ ಸಮಯಾವಕಾಶದ ಅಗತ್ಯವಿದೆ ಎಂದು ಸೋಮವಾರ (ಆ.11) ಕೋರಿದ್ದವು. ಸದ್ಯ ಹೈಕೋರ್ಟ್ ಸೆ.8ಕ್ಕೆ ವಿಚಾರಣೆಯನ್ನು ಮುಂದೂಡಿದೆ.ಇದನ್ನೂ ಓದಿ: ಯಾವ ಕಾರಣಕ್ಕೆ ರಾಜಣ್ಣ ಅವ್ರನ್ನ ವಜಾ ಮಾಡಿದ್ದಾರೆ ಗೊತ್ತಿಲ್ಲ: ಪರಮೇಶ್ವರ್
– ರೇಬಿಸ್‌ಗೆ ಬಲಿಯಾದವರನ್ನ ಮರಳಿ ಕರೆತರುತ್ತಾರಾ? – ಪ್ರಾಣಿ ಸಂಘಟನೆಗಳಿಗೆ ಎಚ್ಚರಿಕೆ
ನವದೆಹಲಿ: ಇನ್ನು 8 ವಾರಗಳಲ್ಲಿ ಇಡೀ ದೆಹಲಿಯನ್ನು ಬೀದಿನಾಯಿಗಳಿಂದ ಮುಕ್ತಗೊಳಿಸುವಂತೆ ದೆಹಲಿ ಸರ್ಕಾರ, ದೆಹಲಿ ಮಹಾನಗರ ಪಾಲಿಕೆ (MCD) ಹಾಗೂ ನವದೆಹಲಿ ಮಹಾನಗರ ಪಾಲಿಕೆಗಳಿಗೆ (NDMC) ಸುಪ್ರೀಂ ಕೋರ್ಟ್ (Supreme Court) ಆದೇಶಿಸಿದೆ.
8 ವಾರಗಳ ಒಳಗೆ ಎಲ್ಲಾ ಬೀದಿ ನಾಯಿಗಳನ್ನು ವಸತಿ ಪ್ರದೇಶಗಳಿಂದ ಆಶ್ರಯ ಕೇಂದ್ರಗಳಿಗೆ ಸ್ಥಳಾಂತರಿಸಬೇಕು. ಇದಕ್ಕಾಗಿ ಒಂದು ಕಾರ್ಯಪಡೆ ರಚಿಸುವ ಅಗತ್ಯವಿದ್ದರೇ ಕೂಡಲೇ ಆ ಕೆಲಸ ಮಾಡಿ. ಈ ಪ್ರಕ್ರಿಯೆಯನ್ನು ತಡೆಯುವ ಯಾವುದೇ ಸಂಘಟನೆಯ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದೂ ಸಹ ವಾರ್ನಿಂಗ್ ಕೊಟ್ಟಿದೆ. ಇದನ್ನೂ ಓದಿ: ನಾಗ್ಪುರ | ಅಪಘಾತದಲ್ಲಿ ಮೃತಪಟ್ಟ ಪತ್ನಿಯ ಮೃತದೇಹವನ್ನ ಬೈಕ್‌ನಲ್ಲೇ ಸಾಗಿಸಿದ ಪತಿ
ರಾಷ್ಟ್ರ ರಾಜಧಾನಿ ಪ್ರದೇಶದ ಎಲ್ಲ ಸ್ಥಳಗಳಿಂದ ಬೀದಿ ನಾಯಿಗಳನ್ನ ತೆರವು ಮಾಡಬೇಕು. ಈ ಕಾರ್ಯಕ್ಕೆ ಅಡ್ಡಿಪಡಿಸುವ ಪ್ರಾಣಿ ದಯಾ ಹೋರಾಟಗಾರರ ವಿರುದ್ಧ ನ್ಯಾಯಾಂಗ ನಿಂದನೆ ಕ್ರಮ ಕೈಗೊಳ್ಳಲಾಗುವುದು. ದೆಹಲಿ ಸರ್ಕಾರ, ಎಂಸಿಡಿ, ಎನ್‌ಡಿಎಂಸಿಗಳು 8 ವಾರಗಳಲ್ಲಿ ಶ್ವಾನ ಆಶ್ರಯ ಕೇಂದ್ರಗಳನ್ನು ರಚಿಸಬೇಕು. ಈ ಕೇಂದ್ರಗಳನ್ನು ಸಿಸಿಟಿವಿ ಮೂಲಕ ಮೇಲ್ವಿಚಾರಣೆ ಮಾಡಬೇಕು ಎಂದು ಕೋರ್ಟ್ ಹೇಳಿದೆ. ಇದನ್ನೂ ಓದಿ: ಕಾಶ್ಮೀರದಲ್ಲಿ 11ನೇ ದಿನಕ್ಕೆ ಕಾಲಿಟ್ಟ ಸೇನಾ ಕಾರ್ಯಾಚರಣೆ – ಉಗ್ರರ ಗುಹೆಗಳು ಉಡೀಸ್
ಅಲ್ಲದೇ ಸೆರೆಹಿಡಿಯಲಾದ ಬೀದಿ ನಾಯಿಗಳ ದೈನಂದಿನ ದಾಖಲೆಗಳನ್ನು ನಿರ್ವಹಿಸಬೇಕು. ಒಂದೇ ಒಂದು ಬೀದಿ ನಾಯಿಯನ್ನೂ ಬಿಡಬಾರದು. ನಾಯಿ ಕಡಿತ ಪ್ರಕರಣಗಳನ್ನು ವರದಿ ಮಾಡಲು ವಾರದೊಳಗೆ ಸಹಾಯವಾಣಿಗೆ ವ್ಯವಸ್ಥೆ ಮಾಡಬೇಕು. ರೇಬಿಸ್ ಲಸಿಕೆ ದೊರೆಯುವ ಸ್ಥಳಗಳ ಕುರಿತು ವರದಿ ಪ್ರಕಟಿಸಬೇಕು ಎಂದು ನ್ಯಾಯಾಲಯ ತಾಕೀತು ಸಹ ಮಾಡಿದೆ.
ರೇಬಿಸ್‌ಗೆ ಬಲಿಯಾದವರನ್ನ ಮರಳಿ ಕರೆತರುತ್ತಾರಾ?
ಇದೇ ವೇಳೆ ಬೀದಿ ನಾಯಿಗಳ ತೆರವಿಗೆ ಪ್ರಾಣಿಪ್ರಿಯ ಹೋರಾಟಗಾರರು ಅಡ್ಡಿಪಡಿಸುತ್ತಿರುವುದನ್ನು ಗಮನಿಸಿದ ಕೋರ್ಟ್, ಇಷ್ಟೆಲ್ಲಾ ಪ್ರಾಣಿ ದಯಾ ಹೋರಾಟಗಾರರಿಗೆ ರೇಬಿಸ್ ರೋಗಕ್ಕೆ ಬಲಿಯಾದವರನ್ನು ಮರಳಿ ಕರೆತರಲು ಸಾಧ್ಯವಿದೆಯೇ? ಸಾರ್ವಜನಿಕ ಹಿತಾಸಕ್ತಿಗಾಗಿ ಈ ಆದೇಶ ನೀಡಲಾಗುತ್ತಿದೆ. ನಾಯಿಗಳನ್ನು ದೂರದ ಸ್ಥಳಗಳಿಗೆ ಸ್ಥಳಾಂತರಿಸಬೇಕು ಎಂದು ಹೇಳಿದೆ. ಇದರಲ್ಲಿ ಯಾವುದೇ ರೀತಿಯ ಭಾವನೆಗಳಿಗೆ ಆಸ್ಪದವಿಲ್ಲ ಎಂದು ಕೋರ್ಟ್ ಹೇಳಿದೆ.
ಬೆಂಗಳೂರು: ಬೀದಿ ನಾಯಿಗಳಿಗೆ (Stray Dogs) ವಿಶೇಷವಾಗಿ ತಯಾರಿಸಿದ ಭಕ್ಷ್ಯ ನೀಡುತ್ತಿಲ್ಲ. ಇದು ಮಾನವ ದರ್ಜೆಯ ಆಹಾರವಲ್ಲ, ಇದು ನಾಯಿ ದರ್ಜೆಯ ಆಹಾರ ಎಂದು ಬಿಬಿಎಂಪಿ (BBMP) ಸ್ಪಷ್ಟನೆ ನೀಡಿದೆ.
ಬೀದಿನಾಯಿಗಳಿಗೆ ಚಿಕನ್ ರೈಸ್ (Chicken Rice) ಭಾಗ್ಯದ ಕುರಿತು ಅನಿಮಲ್ ಹಸ್ಬೆಂಡ್ರಿ ಇನ್ಸ್ಟಾಗ್ರಾಂ ಖಾತೆಯಲ್ಲಿ ಬಿಬಿಎಂಪಿ ಪ್ರಕಟಣೆ ಹೊರಡಿಸಿದೆ. ಈ ಊಟಕ್ಕೆ ಹೆಸರಿಲ್ಲ. ಮಾನವ ಗುಣಮಟ್ಟದ ಆಹಾರವನ್ನು ಬೀದಿ ನಾಯಿಗಳಿಗೆ ನೀಡುವುದಿಲ್ಲ. ನಾಯಿ ದರ್ಜೆಯ ಆಹಾರ ನೀಡಲಾಗುವುದು. ಟೆಂಡರ್‌ನಲ್ಲಿ ಊಟದ ಪದಾರ್ಥಗಳನ್ನು ನಮೂದಿಸಿದ್ದು ಬಿಟ್ಟರೇ ವಿತರಿಸುವ ಆಹಾರಕ್ಕೆ ಹೆಸರಿಟ್ಟಿಲ್ಲ ಎಂದು ಬಿಬಿಎಂಪಿ ತಿಳಿಸಿದೆ. ಇದನ್ನೂ ಓದಿ: 5 ವರ್ಷ ಅಧಿಕಾರ ಗಟ್ಟಿ – ತವರಿನಲ್ಲಿ ಶಕ್ತಿ ಪ್ರದರ್ಶನ ಮಾಡಲಿದ್ದಾರೆ ಸಿಎಂ
ಪ್ರಕಟಣೆಯಲ್ಲಿ ಏನಿದೆ?
ಕೋಳಿ ಮಾಂಸದ ತ್ಯಾಜ್ಯವನ್ನು ಬಳಸಿ ಆಹಾರ ಸಿದ್ಧಪಡಿಸಿ ಬೀದಿ ನಾಯಿಗಳಿಗೆ ನೀಡಲಾಗುವುದು. ಅದಕ್ಕಾಗಿ ಕೋಳಿಯನ್ನು ಕೊಂದು ಹಾಕುವುದಿಲ್ಲ. ಟೆಂಡರ್‌ನಲ್ಲಿ ಬೀದಿ ನಾಯಿಗಳಿಗೆ ತಯಾರಿಸುವ ಆಹಾರದ ಪದಾರ್ಥವನ್ನು ಮಾತ್ರ ನಮೂದಿಸಲಾಗಿತ್ತು. ಚಿಕನ್ ರೈಸ್, ಚಿಕನ್ ಬಿರಿಯಾನಿ ಎಂದು ನಮೂದಿಸಿಲ್ಲ. ಸಸ್ಯಾಹಾರವನ್ನು ಬೀದಿ ನಾಯಿಗಳು ತಿನ್ನುವುದಿಲ್ಲ. ಹಾಗಾಗಿ, ಮಾಂಸಾಹಾರ ನೀಡಲಾಗುತ್ತಿದೆ. ಇದನ್ನೂ ಓದಿ: ರಾಯಚೂರಿನಲ್ಲೊಂದು ‘ರುದ್ರಪ್ರಯಾಗ’ದ ಥ್ರಿಲ್ಲರ್ ಸ್ಟೋರಿ – ಒಂದೂವರೆ ತಿಂಗಳ ಬಳಿಕ ಚಿರತೆ ಸೆರೆ, ನಿಟ್ಟುಸಿರು ಬಿಟ್ಟ ಜನ
ನಗರದ ಕೆಲವು ಕಡೆ ಬೀದಿ ನಾಯಿಗಳ ಹಿಡಿದು ಸಂತಾನಹರಣ ಶಸ್ತ್ರ ಚಿಕಿತ್ಸೆ, ಆ್ಯಂಟಿರೇಬಿಸ್ ಲಸಿಕೆಹಾಕುವುದು ಕಷ್ಟವಾಗಿದೆ. ಆಹಾರ ವಿತರಣೆಯಿಂದ ಆ ನಾಯಿಗಳನ್ನು ಹಿಡಿದು ಎಬಿಸಿ ಹಾಗೂ ಎಆರ್‌ವಿಗೆ ಸಹಕಾರಿಯಾಗಲಿದೆ. ಬೀದಿ ನಾಯಿಗಳಿಗೆ ಆಹಾರ ದೊರೆಯುವುದರಿಂದ ನಾಯಿಗಳ ಆಕ್ರಮಣಶೀಲತೆ ಕಡಿಮೆಯಾಗಲಿದೆ. ಸಾರ್ವಜನಿಕರಿಗೆ ಹತ್ತಿರವಾಗಲಿವೆ. ಬೀದಿ ನಾಯಿ ನಿಯಂತ್ರಣ ಕಾರ್ಯಕ್ರಮಕ್ಕೆ ಸಹಕಾರಿಯಾಗಲಿದೆ. ಇದನ್ನೂ ಓದಿ: Davanagere | ವಾಕಿಂಗ್ ಹೋಗುತ್ತಿರುವಾಗಲೇ ಕುಸಿದು ಬಿದ್ದು ಉದ್ಯಮಿ ಸಾವು
ಅಗತ್ಯವಿರುವ ಕಡೆ ಮಾತ್ರ ಆಹಾರ ವಿತರಣೆ ಮಾಡಲಾಗುವುದು. ಪ್ರತಿ ಒಂದು ನಾಯಿಗೆ ದಿನದ ಆಹಾರಕ್ಕೆ 11 ರೂ. ವೆಚ್ಚ ಮಾಡಲಾಗುತ್ತಿದೆ. ಆಹಾರ ಸಾಗಾಣಿಕೆ ವೆಚ್ಚ, ಸ್ವಚ್ಛತೆ, ಜಿಎಸ್‌ಟಿ ಸೇರಿದಂತೆ ಒಟ್ಟು ವೆಚ್ಚ 22.42 ರೂ. ಆಗಲಿದೆ. ಭಾರತ ಪ್ರಾಣಿ ಕಲ್ಯಾಣ ಮಂಡಳಿಯ ಕೈಪಿಡಿ, ಸಂಶೋಧನೆಯ ಶಿಫಾರಸು ಆಧಾರಿಸಿ ಆಹಾರ ವಿತರಣೆ ಯೋಜನೆ ರೂಪಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ. ಇದನ್ನೂ ಓದಿ: ಪಾರ್ಟಿ, ಪಬ್‌ಗೆ ಹೋಗಿ ಸಮಯವಲ್ಲದ ಸಮಯಕ್ಕೆ ಮನೆಗೆ ಬರ್ತಿದ್ಳು: ಕಿರುತೆರೆ ನಟಿ ಶ್ರುತಿ ಪತಿಯ ಆರೋಪ
ರಾಯಚೂರು: ಜಿಲ್ಲೆಯಲ್ಲಿ ಬೀದಿ ನಾಯಿಗಳ (Stary Dogs) ಹಾವಳಿ ಹೆಚ್ಚಾಗಿದ್ದು, ಜಿಲ್ಲೆಯ ಎರಡು ಕಡೆ ಬೀದಿ ನಾಯಿಗಳು ಬಾಲಕ ಹಾಗೂ ಬಾಲಕಿ ಮೇಲೆ ದಾಳಿ ಮಾಡಿವೆ. ಲಿಂಗಸುಗೂರು (Lingasuguru) ತಾಲೂಕಿನ ಕಸಬಾ ಲಿಂಗಸುಗೂರು ಗ್ರಾಮದಲ್ಲಿ ಬೀದಿ ನಾಯಿ ದಾಳಿಗೆ 6 ವರ್ಷದ ಬಾಲಕ ಸಿದ್ದಪ್ಪ ಬಲಿಯಾಗಿದ್ದಾನೆ.
ಶನಿವಾರ ಸಂಜೆ ಬಹಿರ್ದೆಸೆಗೆ ಹೋದಾಗ ಬೀದಿನಾಯಿಗಳ ಹಿಂಡು ದಾಳಿ ಮಾಡಿದೆ. ನಾಯಿಗಳ ದಾಳಿಯಿಂದ ಮೈತುಂಬ ಗಂಭೀರ ಗಾಯಗಳಾಗಿವೆ. ಪೋಷಕರು ಕೂಡಲೇ ಬಾಲಕನಿಗೆ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದರು. ಬಳಿಕ ಹೆಚ್ಚಿನ ಚಿಕಿತ್ಸೆಗೆ ಬಾಗಲಕೋಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ಬಾಲಕ ಸಾವನ್ನಪ್ಪಿದ್ದಾನೆ. ಇದನ್ನೂ ಓದಿ: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು-ಗುವಾಹಟಿ ಕಾಮಾಕ್ಯ ಎಕ್ಸ್‌ಪ್ರೆಸ್
ಇನ್ನೂ ರಾಯಚೂರು ತಾಲೂಕಿನ ಮರ್ಚೆಟಾಳ ಗ್ರಾಮದಲ್ಲಿ ಬಾಲಕಿ ಮೇಲೆ ಬೀದಿ ನಾಯಿ ದಾಳಿ ಮಾಡಿ ಬಾಲಕಿಗೆ ಗಂಭೀರ ಗಾಯಗೊಳಿಸಿವೆ. 9 ವರ್ಷದ ಬಾಲಕಿ ಚೈತ್ರ ಮೇಲೆ ನಾಯಿ ದಾಳಿ ನಡೆಸಿದೆ. ಮನೆ ಮುಂದೆ ಆಟವಾಡುತ್ತಿದ್ದ ವೇಳೆ ಏಕಾಏಕಿ ದಾಳಿ ನಡೆಸಿದ ಶ್ವಾನ ತಲೆ, ಕಿವಿ, ಕಾಲಿಗೆ ಕಚ್ಚಿ ಗಂಭೀರ ಗಾಯಗೊಳಿಸಿದೆ. ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ಬಾಲಕಿಯನ್ನ ದಾಖಲಿಸಿದ್ದು, ಚಿಕಿತ್ಸೆ ಮುಂದುವರೆದಿದೆ. ಇದನ್ನೂ ಓದಿ: ಸಹಕಾರ ಸಂಘದ ಚುನಾವಣೆಯಲ್ಲಿ ಕಾಂಗ್ರೆಸ್ ಪರ ಮತ ಹಾಕಿದ್ದಕ್ಕೆ ಹಲ್ಲೆ ಆರೋಪ – ಆರೋಪಿಗಳು ಎಸ್ಕೇಪ್
ಬೆಂಗಳೂರು: ರಸ್ತೆಯಲ್ಲಿ ಆಟವಾಡುತ್ತಿದ್ದ ಬಾಲಕನ ಮೇಲೆ ಗುಂಪು ಗುಂಪಾಗಿ ಬೀದಿ ನಾಯಿಗಳು (Stray Dogs Attack) ದಾಳಿ ಮಾಡಿದ ಘಟನೆ ಬೆಂಗಳೂರಿನ (Bengaluru) ಕೆಆರ್ ಪುರಂನ (KR Puram) ಸೊನ್ನೆನಹಳ್ಳಿಯಲ್ಲಿ ನಡೆದಿದೆ.
ನಾಯಿಗಳು ತನ್ನ ಮೇಲೆ ಎರಗುತ್ತಿದ್ದಂತೆ ಕೂಡಲೇ ಬಾಲಕ ಕಿರುಚಿಕೊಂಡಿದ್ದು, ಕಿರುಚಾಟ ಕೇಳಿ ಸ್ಥಳೀಯರು ಆಗಮಿಸಿದ್ದಾರೆ. ಸ್ಥಳೀಯರು ಬಂದು ನಾಯಿಗಳನ್ನು ಓಡಿಸಿದ ಹಿನ್ನೆಲೆ ಭಾರೀ ಅನಾಹುತ ತಪ್ಪಿದೆ. ಬಾಲಕನ ಮೇಲೆ ಶ್ವಾನಗಳು ದಾಳಿ ನಡೆಸಿದ ದೃಶ್ಯ ಸ್ಥಳೀಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇದನ್ನೂ ಓದಿ: 12 ವರ್ಷಗಳ ಬಳಿಕ ಉತ್ತರ ಪ್ರದೇಶದಲ್ಲಿ ಮಹಾ ಕುಂಭಮೇಳ – ಸಿದ್ಧತೆ ಹೇಗಿದೆ? ವಿಶೇಷತೆಗಳೇನು?
ಲಕ್ನೋ: ಬೀದಿ ನಾಯಿಗಳು (Stary Dogs) ಹಿಂಡು ಹಿಂಡಾಗಿ 11 ವರ್ಷದ ಬಾಲಕನ ಮೇಲೆ ದಾಳಿ (Attack) ನಡೆಸಿ ಕೊಂದು ಹಾಕಿರುವ ಘಟನೆ ಉತ್ತರಪ್ರದೇಶದ (Uttar Pradesh) ಮಹಾರಾಜ್‌ಗಂಜ್‌ನ (Maharajganj) ಶಾಸ್ತ್ರಿನಗರದ ಇಂಟರ್‌ಮೀಡಿಯೇಟ್ ಕಾಲೇಜು ಮೈದಾನದಲ್ಲಿ ನಡೆದಿದೆ.
ಆದರ್ಶ್ (11) ಮೃತ ಬಾಲಕ. ಈತ ಸೋಮವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ಮನೆಯಿಂದ ಮಾರುಕಟ್ಟೆಗೆ ತೆರಳಿದ್ದ. ಎಷ್ಟು ಹೊತ್ತಾದರೂ ಮನೆಗೆ ಹಿಂತಿರುಗದ ವೇಳೆ ಕುಟುಂಬಸ್ಥರು ಹುಡುಕಲು ಪ್ರಾರಂಭಿಸಿದ್ದಾರೆ. ಈ ವೇಳೆ ತಡರಾತ್ರಿಯಲ್ಲಿ ಕಚ್ಚಿದ ಗುರುತುಗಳೊಂದಿಗೆ ಆತನ ಮೃತದೇಹ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಮನೆ ಮುಂದೆ ನಾಯಿ ಕರೆದುಕೊಂಡು ಬಂದು ಗಲೀಜು ಮಾಡಿಸ್ತೀಯಾ ಎಂದಿದ್ದಕ್ಕೆ ವ್ಯಕ್ತಿಯ ಕೊಲೆ
ಆತನ ಮುಖ ಮತ್ತು ಬಲಗೈ ಕಚ್ಚಿದ ಗುರುತುಗಳನ್ನು ಹೊಂದಿದ್ದು, ಬಾಲಕ ನಾಯಿಗಳ ವಿರುದ್ಧ ಸೆಣಸಾಡಿರುವಂತೆ ಕಂಡುಬಂದಿದೆ. ನಾಯಿಗಳ ಹಿಂಡು ದಾಳಿ ಮಾಡಿ ಬಾಲಕನನ್ನು ಕೊಂದು ಹಾಕಿದೆ. ಮೃತದೇಹವನ್ನು ಸ್ವಾಧೀನಪಡಿಸಿಕೊಂಡ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಇನ್ಸ್ಪೆಕ್ಟರ್ ಕೊತ್ವಾಲಿ ರವಿ ರೈ ತಿಳಿಸಿದರು. ಇದನ್ನೂ ಓದಿ: ಮೊಬೈಲ್ ನೋಡಿದ್ದು ಸಾಕು ಎಂದಿದ್ದಕ್ಕೆ 7 ನೇ ಅಂತಸ್ತಿನಿಂದ ಜಿಗಿದು 15ರ ಬಾಲಕಿ ಆತ್ಮಹತ್ಯೆ
ಮುಂಬೈ: ಬೀದಿನಾಯಿ (Stray Dogs) ಗಳನ್ನು ಅಸ್ಸಾಂಗೆ ಕಳುಹಿಸಿ, ಅಲ್ಲಿ ಅವರು ಅದನ್ನು ತಿನ್ನುತ್ತಾರೆ ಎಂದು ಹೇಳಿಕೆ ನೀಡಿ ಮಹಾರಾಷ್ಟ್ರ ಶಾಸಕ ಓಂಪ್ರಕಾಶ್ ಬಾಬುರಾವ್ ಕಡು (Omprakash Babarao Kadu) ಯಾನೇ ಬಚ್ಚು ಕಡು ವಿವಾದಕ್ಕೀಡಾಗಿದ್ದಾರೆ.
ಬೀದಿನಾಯಿಗಳ ನಿಯಂತ್ರಣವಾಗಬೇಕಾದರೆ ಅವುಗಳನ್ನು ಅಸ್ಸಾಂಗೆ ಕಳುಹಿಸಬೇಕು. ಯಾಕೆಂದರೆ ಅಲ್ಲಿನ ಜನರು ಬೀದಿನಾಯಿಗಳನ್ನು ತಿನ್ನುತ್ತಾರೆ ಎಂದು ಹೇಳಿದ್ದು, ಇದೀಗ ಭಾರೀ ಚರ್ಚೆಗೆ ಗ್ರಾಸವಾಗಿದೆ. ಅಲ್ಲದೆ ಶಾಸಕರ ವಿರುದ್ಧ ಸೋಶಿಯಲ್ ಮೀಡಿಯಾದಲ್ಲಿ ಜನ ರೊಚ್ಚಿಗೆದ್ದಿದ್ದಾರೆ. ಇದನ್ನೂ ಓದಿ: ಬೀದಿ ಹೆಣ್ಣುನಾಯಿಯ ಮೇಲೆ ಅತ್ಯಾಚಾರ – ವಿಕೃತಕಾಮಿ ವಿರುದ್ಧ ಕೇಸ್
ವಿಚಾರ ಬಂದಿದ್ದೇಗೆ..?: ವಿಧಾನಸಭೆಯಲ್ಲಿ ರಾಜ್ಯದಲ್ಲಿ ಬೀದಿ ನಾಯಿಗಳಿಂದ ಎದುರಾಗುವ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಯುತ್ತಿತ್ತು. ಈ ವೇಳೆ ಮಾತನಾಡಿದ ಶಾಸಕರು, ಬೀದಿ ನಾಯಿಗಳ ನಿಯಂತ್ರಣವಾಗಬೇಕಾದರೆ ಅವುಗಳನ್ನು ತಿನ್ನಲು ಅಸ್ಸಾಂ (Assam) ಗೆ ಕಳುಹಿಸಬೇಕು. ನಾನು ಇತ್ತೀಚೆಗಷ್ಟೇ ಅಸ್ಸಾಂಗೆ ಭೇಟಿ ನೀಡಿದ್ದೆ. ಈ ವೇಳೆ ಅಲ್ಲಿ ಬೀದಿ ನಾಯಿಗಳನ್ನು 8 ಸಾವಿರದಿಂದ 9 ಸಾವಿರ ರೂ.ಗೆ ಮಾರಾಟ ಮಾಡುತ್ತಿರುವುದು ತಿಳಿದುಬಂತು ಎಂದರು.
ಸದ್ಯ ಶಾಸಕರ ಈ ಹೇಳಿಕೆಗೆ ಭಾರೀ ವಿರೋಧ ವ್ಯಕ್ತವಾಗುತ್ತಿದೆ. ಈ ಹಿಂದೆ ಜಾರ್ಖಂಡ್ ಬಿಜೆಪಿ ಶಾಸಕ ಬಿರಂಚಿ ನಾರಾಯಣ್ ಅವರು, ಜನರ ಮೇಲೆ ಬೀದಿ ನಾಯಿಗಳು ದಾಳಿ ಮಾಡುವ ಸಮಸ್ಯೆಗೆ ರಾಜ್ಯ ಸರ್ಕಾರ ಪರಿಹಾರ ಕಂಡುಕೊಳ್ಳಲು ಸಾಧ್ಯವಾಗದಿದ್ದರೆ, ನಾಗಾಲ್ಯಾಂಡ್ ಜನರಿಗೆ ಕರೆ ಮಾಡಿ ಸಮಸ್ಯೆ ದೂರವಾಗುತ್ತದೆ ಎಂದು ಹೇಳಿ ಪೇಚಿಗೆ ಸಿಲುಕಿದ್ದರು.
ಚಂಡೀಗಢ: ರಸ್ತೆ ಬದಿಯಲ್ಲಿ ನಾಯಿಗೆ ತಿಂಡಿ ನೀಡುತ್ತಿದ್ದ ಯುವತಿಯ (Woman) ಮೇಲೆ ಕಾರೊಂದು (Car) ಹರಿದ ಘಟನೆ ಚಂಡೀಗಢದಲ್ಲಿ (Chandigarh) ನಡೆದಿದೆ.
ತೇಜಸ್ವಿತಾ (25) ಗಂಭೀರ ಗಾಯಗೊಂಡ ಯುವತಿ. ತೇಜಸ್ವಿನಿ ರಸ್ತೆ ಬದಿಯಲ್ಲಿ ಬೀದಿ ನಾಯಿಗೆ (Dog) ಆಹಾರ ನೀಡುತ್ತಿದ್ದಳು. ಈ ವೇಳೆ ಅತಿವೇಗವಾಗಿ ಬಂದ ಕಾರೊಂದು ತೇಜಸ್ವಿತಾ ಮೇಲೆ ಹರಿದಿದೆ. ಈ ವೇಳೆ ರಕ್ತದ ಮಡುವಿನಲ್ಲಿ ಮಲಗಿದ್ದ ತೇಜಸ್ವಿತಾಳನ್ನು ನೋಡಿದ ತಾಯಿ ಪೊಲೀಸರಿಗೆ ಹಾಗೂ ಮನೆಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ.
ಈ ಹಿನ್ನೆಲೆಯಲ್ಲಿ ಕೂಡಲೇ ಆಕೆಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು ಅಲ್ಲಿ ಹೆಚ್ಚಿನ ಚಿಕಿತ್ಸೆಯ ಪಡೆಯುತ್ತಿದ್ದಾಳೆ. ಘಟನೆ ವೇಳೆ ತೇಜಸ್ವಿತಾ ಆಕೆಯ ತಲೆಗೆ ಗಂಭೀರ ಗಾಯವಾಗಿದ್ದು, ವೈದ್ಯರು ಆಕೆಯ ತಲೆ 2 ಬದಿಯಲ್ಲೂ ಹೊಲಿಗೆ ಹಾಕಿದ್ದಾರೆ.
ಇನ್ನೂ ಈ ಭಯಾನಕ ವೀಡಿಯೋ ಸಿಸಿ ಟಿವಿಯಲ್ಲಿ (CC TV) ಸೆರೆಯಾಗಿದ್ದು, ಘಟನೆಗೆ ಸಂಬಂಧಿಸಿ ತೇಜಸ್ವಿನಿಯ ತಂದೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಘಟನೆಗೆ ಸಂಬಂಧಿಸಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ವಾಹನ ಹಾಗೂ ಚಾಲಕನಿಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ. ಇದನ್ನೂ ಓದಿ:ವೆಬ್ ಸೈಟ್‍ನಲ್ಲಿ ಯುವತಿಯರ ಫೋಟೋ ಅಪ್ಲೋಡ್ ಮಾಡಿ ವಂಚನೆ- ಐವರ ಬಂಧನ
Live Tv
[brid partner=56869869 player=32851 video=960834 autoplay=true]
ಬೆಂಗಳೂರು: ಸಿಲಿಕಾನ್ ಸಿಟಿಯ ಯಾವುದೇ ಏರಿಯಾಗೆ ಹೋಗಿ, ಯಾವುದೇ ರೋಡ್‍ಗೆ ಹೋಗಿ ಅಲ್ಲಿ ನಿಮಗೆ ಸ್ವಾಗತ ಮಾಡೋದು ಮಾತ್ರ ಬೀದಿನಾಯಿಗಳು (Stray Dogs). ಸಿಲಿಕಾನ್ ಸಿಟಿಯಲ್ಲಿ ದಿನದಿಂದ ದಿನಕ್ಕೆ ನಾಯಿಗಳ ಸಂಖ್ಯೆ ಏರಿಕೆಯಾಗುತ್ತಿದೆ. ಅದೇ ರೀತಿ ನಾಯಿಗಳಿಂದ ಕಚ್ಚಿಸಿಕೊಂಡವರ ಸಂಖ್ಯೆಯೂ ಅಷ್ಟೇ ಏರಿಕೆಯಾಗ್ತನೇ ಇದೆ. ಜೊತೆಗೆ ಬಿಬಿಎಂಪಿ (BBMP) ನಾಯಿಗಳ ನಿಯಂತ್ರಣಕ್ಕೆ ಕ್ರಮ ಕೈಗೊಂಡಿದ್ದು, ಇದಕ್ಕಾಗಿ ಕೋಟ್ಯಂತರ ರೂ. ಖರ್ಚು ಮಾಡುತ್ತಿದೆ.
ನಾಯಿಗಳ ದಾಳಿಯಿಂದ ಅದೆಷ್ಟೋ ಜನ ಆಸ್ಪತ್ರೆಗೆ ಸೇರಿದ್ದಾರೆ. ಅದರಲ್ಲೂ ಬೀದಿನಾಯಿಗಳ ಗುಂಪು ಮಕ್ಕಳ ಮೇಲೆ ದಾಳಿ ಮಾಡಿ ಪ್ರಾಣವನ್ನೇ ತೆಗೆಯೋ ಮಟ್ಟಿಗೆ ಹೋಗಿದ್ದ ನಿದರ್ಶನಗಳು ಬೆಂಗಳೂರಿನಲ್ಲಿ ನಡೆದಿದೆ. ಬೀದಿನಾಯಿಗಳನ್ನು ನಿಯಂತ್ರಣ ಮಾಡಬೇಕು, ಅದರ ಸಂತಾನವನ್ನು ಕಡಿಮೆ ಮಾಡಬೇಕು, ಪ್ರತಿಬೀದಿ ನಾಯಿಗೂ ರೇಬಿಸ್ ಇಂಜೆಕ್ಷನ್ ನೀಡಬೇಕು ಅಂತಾ ಬಿಬಿಎಂಪಿ ಕೋಟ್ಯಂತರ ರೂ. ಖರ್ಚು ಮಾಡ್ತಿದೆ. ಬೆಂಗಳೂರಿನಲ್ಲಿ ಬೀದಿ ನಾಯಿಗಳ ಹಾವಳಿ ಮಿತಿ ಮೀರಿದೆ. ಬೆಂಗಳೂರಿನಲ್ಲಿ ಒಟ್ಟು 3 ಲಕ್ಷ ನಾಯಿಗಳಿದ್ದು ಅದರಲ್ಲಿ ಅರ್ಧ ಬೀದಿನಾಯಿಗಳಾದರೆ, ಉಳಿದವು ಸಾಕು ನಾಯಿಗಳು. ಬಿಬಿಎಂಪಿಯ ಅಂಕಿ ಅಂಶಗಳ ಪ್ರಕಾರ ಕಳೆದ ಒಂದು ವರ್ಷದಲ್ಲಿ 17 ಸಾವಿರಕ್ಕೂ ಹೆಚ್ಚು ಜನರಿಗೆ ನಾಯಿ ಕಚ್ಚಿದೆ. ಬಿಬಿಎಂಪಿ ನಿರಂತರ ಪ್ರಯತ್ನದಿಂದ ನಾಯಿಗಳ ನಿಯಂತ್ರಣ ಆಗ್ತಿದೆ. ಕಳೆದ ಮೂರು ವರ್ಷದಿಂದ 40 ಸಾವಿರಕ್ಕೂ ಹೆಚ್ಚು ಜನರಿಗೆ ಕಚ್ಚಿತ್ತು. ಅದರ ಸಂಖ್ಯೆ ಕಡಿಮೆಯಾಗಿದೆ. ಜೊತೆಗೆ ನಾಯಿ ಸಂತಾನ ನಿಯಂತ್ರಣದ ಚುಚ್ಚುಮದ್ದುನ್ನು ಪ್ರತಿ ತಿಂಗಳು ಕನಿಷ್ಠ 10,000 ನಾಯಿಗಳಿಗೆ ನೀಡಲಾಗ್ತಿದೆ. ಹಾಗೆಯೇ ರೇಬಿಸ್ ಲಸಿಕೆಯನ್ನು ಸಹ ನೀಡಲಾಗ್ತಿದೆ ಅಂತಾ ಬಿಬಿಎಂಪಿ ಪಶುಪಾಲನೆ ಅಧಿಕಾರಿ ಡಾ. ರವಿ ಕುಮಾರ್ ತಿಳಿಸಿದ್ದಾರೆ. ಇದನ್ನೂ ಓದಿ: ಹೊಸ ವರ್ಷಾಚರಣೆಗೆ ಹೆಚ್ಚಿನ ಸಮಯ ಫಿಕ್ಸ್? – ಮಧ್ಯರಾತ್ರಿ 2 ಗಂಟೆವರೆಗೂ ಅವಕಾಶ ಸಾಧ್ಯತೆ
ದಿನಕ್ಕೆ ಸರಾಸರಿ 70ಕ್ಕೂ ಹೆಚ್ಚು ಜನಕ್ಕೆ ಬೀದಿ ನಾಯಿಗಳು ಕಚ್ಚುತ್ತಿವೆ. ಸಿಲಿಕಾನ್ ಸಿಟಿಯಲ್ಲಿರೋ ನಾಯಿಗಳ ಸಂಖ್ಯೆ ಎಷ್ಟು, ನಾಯಿಗಳ ಕಡಿತದ ಸಂಖ್ಯೆ ಎಷ್ಟು ಎಂಬ ಅಂಕಿ ಅಂಶಗಳನ್ನು ನೋಡೋದಾದರೆ, 2019-2020 – 42,818 ಪ್ರಕರಣ ದಾಖಲಾಗಿತ್ತು. 2020-2021 – 18,629 ಪ್ರಕರಣ, 2021-2022 – 17,610 ಪ್ರಕರಣ ದಾಖಲಾಗುವ ಮೂಲಕ ಒಟ್ಟು – 70,057 ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಕರ್ನಾಟಕದಲ್ಲಿ ಝಿಕಾ ವೈರಸ್ ಭೀತಿ – ಚಿಕಿತ್ಸಾ ಕ್ರಮ ಪಟ್ಟಿ ಬಿಡುಗಡೆ ಮಾಡಿದ ಆರೋಗ್ಯ ಇಲಾಖೆ
ವಲಯವಾರು ಬೀದಿ ನಾಯಿಗಳ ಸಂಖ್ಯೆ:
ಪೂರ್ವ ವಲಯ – 44,302
ಪಶ್ಚಿಮ ವಲಯ – 28,482
ದಕ್ಷಿಣ ವಲಯ – 39,562
ಆರ್.ಆರ್.ನಗರ – 23,170
ದಾಸರಹಳ್ಳಿ – 23,170
ಯಲಹಂಕ – 36,219
ಬೊಮ್ಮನಹಳ್ಳಿ – 38,940
ಮಹದೇವಪುರ – 46,233
ನಗರದಲ್ಲಿ ಬೀದಿ ನಾಯಿಗಳ ಹಾವಳಿ ತಡೆಯೋಕೆ ಬಿಬಿಎಂಪಿ ಕೂಡ ಮುಂದಾಗಿದ್ದು, ನಾಯಿಗಳ ಹಾವಳಿ ತಡೆಯೋಕೆ ವರ್ಷಕ್ಕೆ 3 ರಿಂದ 5 ಕೋಟಿ ರೂ. ಖರ್ಚು ಮಾಡುತ್ತಿದೆ. ಹಾಗೆಯೇ ಸಂತಾನಹರಣ ಶಸ್ತ್ರಚಿಕಿತ್ಸೆ ಹಾಗೂ ನಾಯಿಗಳಿಗೆ ರೇಬಿಸ್ ಲಸಿಕೆ ಹಾಕೋಕೆ ಕೋಟಿ, ಕೋಟಿ ಖರ್ಚು ಆಗ್ತಿದೆ. ಆದರೆ, ನಾಯಿಗಳ ನಿಯಂತ್ರಣ ಮಾತ್ರ ಸಾಧ್ಯವಾಗ್ತಿಲ್ಲ. ಇದಕ್ಕೆ ಕಾರಣವನ್ನು ನೀಡಲು ಬಿಬಿಎಂಪಿ ವಿಫಲವಾಗಿದೆ.
Live Tv
[brid partner=56869869 player=32851 video=960834 autoplay=true]