ಗದಗ: ಬೀದಿನಾಯಿ ದಾಳಿ (Stray dog attack) ಮಾಡಿದ ಪರಿಣಾಮ ಬಾಲಕ ಗಂಭೀರ ಗಾಯಗೊಂಡಿರುವ ಘಟನೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ (Lakshmeshwara) ಪಟ್ಟಣ ಮ್ಯಾಗೇರಿ ಓಣಿಯಲ್ಲಿ ನಡೆದಿದೆ.
ಮನೋಜ್ ಬನ್ನಿ (4) ಬಾಲಕನ ಮೇಲೆ ಬೀದಿನಾಯಿ ದಾಳಿ ಮಾಡಿದೆ. ಬಾಲಕನ ತಲೆ, ಬೆನ್ನು ಭಾಗಕ್ಕೆ ಗಂಭೀರ ಗಾಯಗಳಾಗಿದ್ದು, ಬಾಲಕನನ್ನು ಲಕ್ಷ್ಮೇಶ್ವರ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದು, ಪ್ರಾಥಮಿಕ ಚಿಕಿತ್ಸೆ ನೀಡಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಗದಗ ಜಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಇದನ್ನೂ ಓದಿ: ಹನಿಮೂನ್ ಮರ್ಡರ್ ಕೇಸ್ | 790 ಪುಟಗಳ ಚಾರ್ಜ್‌ಶೀಟ್ ಸಲ್ಲಿಕೆ – ಕೊಲೆಯಾದ ರಘುವಂಶಿ ಪತ್ನಿಯೇ ಪ್ರಮುಖ ಆರೋಪಿ
ಹೆಚ್ಚುತ್ತಿರುವ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಬೆಚ್ಚಿ ಬಿದ್ದಿದ್ದಾರೆ. ಮಕ್ಕಳನ್ನು ಮನೆಯಿಂದ ಹೊರಬಿಡದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಮನೆ ಮುಂದೆ ಆಟ ಆಡುತ್ತಿರುವ ಚಿಕ್ಕ ಮಕ್ಕಳ ಮೇಲೆ ಬೀದಿನಾಯಿಗಳು ದಾಳಿ ಮಾಡುತ್ತಿದ್ದರೂ ಸುಮ್ಮನೆ ಕುಳಿತಿರುವ ಲಕ್ಷ್ಮೇಶ್ವರ ಪುರಸಭೆ ಅಧಿಕಾರಿಗಳ ವಿರುದ್ಧ ಜನರು ಆಕ್ರೋಶ ಹೊರಹಾಕಿದ್ದಾರೆ. ಅಲ್ಲದೇ ಹೆಚ್ಚುತ್ತಿರುವ ಬೀನಾಯಿಗಳ ಹಾವಳಿಗೆ ಕಡಿವಾಣ ಹಾಕುವಂತೆ ಒತ್ತಾಯಿಸಿದ್ದಾರೆ.


