Tag: ಬೀಮ್ಸ್ ಆಸ್ಪತ್ರೆ

  • ಮದ್ವೆಯಾಗಿ 12 ವರ್ಷದ ಬಳಿಕ ಗರ್ಭವತಿ – ಮಗುವಿಗೆ ಜನ್ಮ ನೀಡಿದ ಬಳಿಕ ಬಾಣಂತಿ ಸಾವು

    ಮದ್ವೆಯಾಗಿ 12 ವರ್ಷದ ಬಳಿಕ ಗರ್ಭವತಿ – ಮಗುವಿಗೆ ಜನ್ಮ ನೀಡಿದ ಬಳಿಕ ಬಾಣಂತಿ ಸಾವು

    ಬೆಳಗಾವಿ: ಮಗುವಿಗೆ ಜನ್ಮ ನೀಡಿದ ಬಳಿಕ ಬಾಣಂತಿ ಸಾವನ್ನಪ್ಪಿದ ಘಟನೆ ಬೆಳಗಾವಿ ಬೀಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ.

    ಬೆಳಗಾವಿ ತಾಲೂಕಿನ‌ ನಿಲಜಿ ಗ್ರಾಮದ ಅಂಜಲಿ ಪಾಟೀಲ್ ಸಾವನ್ನಪ್ಪಿದ ಬಾಣಂತಿ. ಮದುವೆಯಾಗಿ ಹನ್ನೆರಡು ವರ್ಷದ ಬಳಿಕ ಗರ್ಭವತಿಯಾಗಿದ್ದ ಅಂಜಲಿಯನ್ನು ಹೆರಿಗೆ ಮಾಡಿಸಲು ಸೋಮವಾರ ಬೀಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದನ್ನೂ ಓದಿ: Microfinance | ಮನೆ, ಶಾಲೆಗೆ ಬಂದು ಟಾರ್ಚರ್‌ – ಶಿಕ್ಷಕಿಯ ಶವ ಎರಡು ದಿನದ ನಂತರ ಪತ್ತೆ

    ಹೆರಿಗೆಯಾದ ಸಂದರ್ಭದಲ್ಲಿ ಕ್ಷೇಮವಾಗಿಯೇ ಇದ್ದ ಅಂಜಲಿ ಮಧ್ಯರಾತ್ರಿ ಮೃತಪಟ್ಟಿದ್ದಾರೆ. ವೈದ್ಯರು ಲೋ ಬಿಪಿಯಿಂದ ಮೃತಪಟ್ಟಿದ್ದಾರೆ ಎಂದು ಹೇಳಿದರೆ ವೈದ್ಯರ ನಿರ್ಲಕ್ಷದಿಂದಲೇ ಅಂಜಲಿ ಸಾವಾಗಿದೆ ಎಂದು ಕುಟುಂಬಸ್ಥರು ಆರೋಪಿಸುತ್ತಿದ್ದಾರೆ.

    ಆಸ್ಪತ್ರೆಯ ಮುಂಭಾಗದಲ್ಲಿ ಕುಟುಂಬಸ್ಥರ ಅಕ್ರಂದನ ಮುಗಿಲು ಮುಟ್ಟಿದೆ. ಎಪಿಎಂಸಿ ಪೊಲೀಸರು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

     

  • ಸೆಲ್ಫಿ ತೆಗೆದುಕೊಳ್ಳುವಾಗ ಕಾಲು ಜಾರಿ ಬಿದ್ದು ನಾಲ್ವರು ಯುವತಿಯರ ಸಾವು

    ಸೆಲ್ಫಿ ತೆಗೆದುಕೊಳ್ಳುವಾಗ ಕಾಲು ಜಾರಿ ಬಿದ್ದು ನಾಲ್ವರು ಯುವತಿಯರ ಸಾವು

    ಬೆಳಗಾವಿ: ಕರ್ನಾಟಕ ಮಹಾರಾಷ್ಟ್ರದ ಗಡಿಭಾಗದಲ್ಲಿರುವ (Karnataka Maharashtra Border) ಕಿತವಾಡ ಫಾಲ್ಸ್‌ನಲ್ಲಿ ಕಾಲು ಜಾರಿ ಬಿದ್ದು ನಾಲ್ವರು ಯುವತಿಯರು ಸಾವನ್ನಪ್ಪಿದ್ದಾರೆ.

    ಇಲ್ಲಿನ ಉಜ್ವಲ್ ನಗರ ಆಸೀಯಾ ಮುಜಾವರ್ (17), ಅನಗೋಳದ ಕುದ್‌ಶೀಯಾ ಹಾಸ್‌ಂ ಪಟೇಲ್(20), ಝಟ್‌ಪಟ್ ಕಾಲೋನಿಯ ರುಕ್ಕಶಾರ್ ಭಿಸ್ತಿ(20) ಹಾಗೂ ತಸ್ಮಿಯಾ(20) ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಶ್ರದ್ಧಾವಾಕರ್ ಹತ್ಯೆ ಪ್ರಕರಣ – ಪಾಲಿಗ್ರಾಫ್ ಪರೀಕ್ಷೆ ವೇಳೆ ಅಫ್ತಾಬ್‍ಗೆ ಕೇಳಿದ ಪ್ರಶ್ನೆಗಳೇನು?

    ಬೆಳಗಾವಿಯಿಂದ ಕಿತವಾಡ ಫಾಲ್ಸ್‌ಗೆ (Kitwad Waterfalls) 40 ಯುವತಿಯರು ಪ್ರವಾಸಕ್ಕೆ ತೆರಳಿದ್ದರು. ಈ ವೇಳೆ ಸೆಲ್ಫಿ ತಗೆದುಕೊಳ್ಳುವ ವೇಳೆ ಐವರು ಯುವತಿಯರು ಕಾಲು ಜಾರಿ ಬಿದ್ದಿದ್ದಾರೆ. ಅವರಲ್ಲಿ ನಾಲ್ವರು ಸಾವನ್ನಪ್ಪಿದ್ದು, ಓರ್ವ ಯುವತಿಯ ಸ್ಥಿತಿ ಗಂಭೀರವಾಗಿದೆ. ಇದನ್ನೂ ಓದಿಮಂಡ್ಯದಲ್ಲಿ ಕಮಲ ಅರಳಿಸಲು ಪ್ಲಾನ್ – ಸುಮಲತಾ ಅಂಬರೀಶ್ ಆಪ್ತ ಸಚ್ಚಿದಾನಂದ ಬಿಜೆಪಿಗೆ

    ಗಾಯಗೊಂಡ ಯುವತಿಯನ್ನ ಬೆಳಗಾವಿ ಬೀಮ್ಸ್ ಆಸ್ಪತ್ರೆಗೆ (Belagavi Hospital) ದಾಖಲಿಸಲಾಗಿದೆ. ಉಳಿದ ನಾಲ್ವರು ಯುವತಿಯರ ಮೃತದೇಹವೂ ಆಸ್ಪತ್ರೆಯಲ್ಲೇ ಇದ್ದು, ಕುಟುಂಬಸ್ಥರು ಆಸ್ಪತ್ರೆ ಎದುರು ಜಮಾಯಿಸಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]