ಕೋಲ್ಕತ್ತಾ: ಹಿರಿಯ ಎಡಪಂಥೀಯ ನಾಯಕ ಮತ್ತು ಪಶ್ಚಿಮ ಬಂಗಾಳದ (West Bengal) ಮಾಜಿ ಮುಖ್ಯಮಂತ್ರಿ ಬುದ್ಧದೇವ್ ಭಟ್ಟಾಚಾರ್ಯ (80) ವಿಧಿವಶರಾಗಿದ್ದಾರೆ.
ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಕೆಲ ದಿನಗಳಿಂದ ಅಸ್ವಸ್ಥರಾಗಿದ್ದರು. ಇಂದು ಬೆಳಗ್ಗೆ ಬುದ್ಧದೇವ್ ಭಟ್ಟಾಚಾರ್ಯ (Buddhadeb Bhattacharjee) ಅವರು ದಕ್ಷಿಣ ಕೋಲ್ಕತ್ತಾದ ನಿವಾಸದಲ್ಲಿ ನಿಧನರಾದರು.
ಸಿಪಿಎಂನ ಉನ್ನತ ನಿರ್ಧಾರ ತೆಗೆದುಕೊಳ್ಳುವ ಪಾಲಿಟ್‌ಬ್ಯೂರೊದ ಮಾಜಿ ಸದಸ್ಯರಾಗಿದ್ದ ಬುದ್ಧದೇವ್ ಭಟ್ಟಾಚಾರ್ಯ 2000 ರಿಂದ 2011 ರವರೆಗೆ ಬಂಗಾಳ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದರು. ಜ್ಯೋತಿ ಬಸು ಅವರ ನಂತರ ಉನ್ನತ ಹುದ್ದೆಯನ್ನು ಅಲಂಕರಿಸಿದ್ದರು.
2011ರಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ಐತಿಹಾಸಿಕ ಗೆಲುವು ಸಾಧಿಸುವುದರೊಂದಿಗೆ 34 ವರ್ಷಗಳ ಕಮ್ಯುನಿಸ್ಟ್ ಆಳ್ವಿಕೆಯನ್ನು ಕೊನೆಗೊಳಿಸಿದ್ದರು. 2011ರ ಚುನಾವಣೆಯನ್ನು ಕಮ್ಯೂನಿಸ್ಟ್ ಪಕ್ಷ ಬುದ್ಧದೇವ್ ಭಟ್ಟಾಚಾರ್ಯ ನೇತೃತ್ವದಲ್ಲಿ ಎದುರಿಸಿತ್ತು.
ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಬುದ್ಧದೇವ್ ಭಟ್ಟಾಚಾರ್ಯ (Buddhadeb Bhattacharya) ಅವರ ಪುತ್ರಿ ಸುಚೇತನಾ ಭಟ್ಟಾಚಾರ್ಯ (Suchetana Bhattacharya) ಪುರುಷನಾಗಿ ರೂಪಾಂತರಗೊಳ್ಳಲು ಲಿಂಗ ಪರಿವರ್ತನೆ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳಲು ಉದ್ದೇಶಿಸಿದ್ದಾರೆ. ಅಲ್ಲದೇ ತಮ್ಮ ಹೆಸರನ್ನ ʻಸುಚೇತನ್ʼ ಎಂದೂ ಬಸಲಿಸಿಕೊಳ್ಳಲು ನಿರ್ಧರಿಸಿದ್ದಾರೆ.
ಲಿಂಗಪರಿವರ್ತನೆಗೆ ಒಳಗಾಗಲು ಸಕಲ ಸಿದ್ಧತೆ ನಡೆಸಿದ್ದು, ಅಗತ್ಯ ಪ್ರಮಾಣ ಪತ್ರಗಳನ್ನ ಪಡೆದುಕೊಳ್ಳಲು ಮನೋವೈದ್ಯರನ್ನ (Psychiatrists) ಸಂಪರ್ಕಿಸುತ್ತಿದ್ದಾರೆ. ಜೊತೆಗೆ ಪರಿಣಿತರಿಂದ ಸೂಕ್ತ ಸಲಹೆಗಳನ್ನೂ ಅವರು ಪಡೆಯುತ್ತಿದ್ದಾರೆ. ಇತ್ತೀಚೆಗೆ ನಡೆದ ಎಲ್‌ಜಿಬಿಟಿಕ್ಯೂ ಕಾರ್ಯಾಗಾರದಲ್ಲಿ ಸುಚೇತನಾ ತಮ್ಮನ್ನ ಒಬ್ಬ ಪುರುಷ ಎಂದು ಗುರುತಿಸಿಕೊಂಡಿದ್ದರು. ದೈಹಿಕವಾಗಿಯೂ ಪುರುಷನ ಹಾಗೆ ಕಾಣಿಸಿಕೊಳ್ಳಲು ಬಯಸಿರುವುದಾಗಿ ಹೇಳಿಕೊಂಡಿದ್ದರು. ಇದನ್ನೂ ಓದಿ: ಕುಡಿದ ಮತ್ತಿನಲ್ಲಿ ಪ್ರಧಾನಿ ಮೋದಿ ಕೊಲ್ಲುತ್ತೇನೆ ಎಂದು ಕರೆ ಮಾಡಿದ್ದ ವ್ಯಕ್ತಿ ಬಂಧನ
ಈ ಕುರಿತು ಖಾಸಗಿ ವಾಹಿನಿಯೊಂದಿಗಿನ ಸಂದರ್ಶನದಲ್ಲಿ ಮಾತನಾಡಿರುವ ಅವರು, ನಾನು ನನ್ನ ಎಲ್‌ಜಿಬಿಟಿಕ್ಯೂ (LGBTQ) ಚಳವಳಿಯ ಭಾಗವಾಗಿ ಇದನ್ನು ಮಾಡ್ತಿದ್ದೇನೆ. ನನ್ನ ಪೋಷಕರು ಗುರುತಾಗಲಿ, ಕುಟುಂಬದ ಐಡೆಂಟಿಟಿಯಾಗಲಿ ಇಲ್ಲಿ ದೊಡ್ಡ ವಿಷಯವಲ್ಲ. ಲಿಂಗ ಪರಿವರ್ತನೆ ಆಗುವ ಮೂಲಕ ಪ್ರತಿದಿನ ಎದುರಿಸುವ ಸಾಮಾಜಿಕ ಕಿರುಕುಳ ತಡೆಯಲು ನಾನು ಬಯಸಿದ್ದೇನೆ ಎಂದು ಹೇಳಿಕೊಂಡಿದ್ದಾರೆ. ಇದನ್ನೂ ಓದಿ: ಅಕ್ಕಿ ವಿಚಾರದಲ್ಲಿ ದ್ವೇಷದ ರಾಜಕೀಯ ಮಾಡೋದು ಬೇಡ – ಅಮಿತ್ ಶಾಗೆ ಸಿದ್ದರಾಮಯ್ಯ ಮನವಿ
ನನ್ನ ನಿರ್ಧಾರ ನಾನೇ ತೆಗೆದುಕೊಳ್ಳಬಹುದು:
ಅಲ್ಲದೇ ನಾನೀಗ ವಯಸ್ಕಳಾಗಿದ್ದೇನೆ, ನನಗೆ ಈಗ 41 ವರ್ಷ ವಯಸ್ಸು. ಹೀಗಾಗಿ ನನ್ನ ಜೀವನಕ್ಕೆ ಸಂಬಂಧಿಸಿದ ಎಲ್ಲಾ ನಿರ್ಧಾರಗಳನ್ನೂ ನಾನೇ ತೆಗೆದುಕೊಳ್ಳಬಹುದು, ಅದೇ ರೀತಿಯಲ್ಲಿ ಈ ನಿರ್ಧಾರ ಕೂಡ ನಾನು ತೆಗೆದುಕೊಳ್ಳುತ್ತಿದ್ದೇನೆ. ಈ ವಿಚಾರಕ್ಕೆ ದಯವಿಟ್ಟು ನನ್ನ ಪೋಷಕರನ್ನು ಎಳೆದು ತರಬೇಡಿ. ಯಾರು ತಮ್ಮನ್ನು ಮಾನಸಿಕವಾಗಿ ಪುರುಷ ಎಂದು ಪರಿಗಣಿಸುತ್ತಾರೋ, ಅವರು ವಾಸ್ತವವಾಗಿಯೂ ಪುರುಷರೇ ಆಗಿರುತ್ತಾರೆ. ನನ್ನನ್ನು ನಾನು ಮಾನಸಿಕವಾಗಿ ಪುರುಷ ಎಂದೇ ಪರಿಗಣಿಸಿದ್ದೇನೆ. ಅದನ್ನು ದೈಹಿಕವಾಗಿ ಕೂಡ ಸಾಧ್ಯವಾಗಿಸಲು ಬಯಸಿದ್ದೇನೆ. ನನ್ನ ತಂದೆ ಬಾಲ್ಯದಿಂದಲೂ ನನ್ನ ನಿರ್ಧಾರಗಳಿಗೆ ಸಹಕರಿಸುತ್ತಲೇ ಬಂದಿದ್ದಾರೆ. ಈಗಲೂ ಅವರು ನನ್ನ ನಿರ್ಧಾರವನ್ನು ಒಪ್ಪುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಏಕಾಂಗಿಯಾಗಿ ಹೋರಾಟ ಮಾಡ್ತೀನಿ:
ಯಾರೂ ಏನಾದರೂ ಹೇಳಿಕೊಳ್ಳಲಿ, ನಾನಂತೂ ನಿರ್ಧಾರ ತೆಗೆದುಕೊಂಡಿದ್ದೇನೆ. ಅದಕ್ಕಾಗಿ ಹೋರಾಟ ನಡೆಸುವ ಧೈರ್ಯವೂ ನನಗಿದೆ. ಪ್ರತಿಯೊಬ್ಬರ ಪ್ರಶ್ನೆಗೆ ಉತ್ತರ ಕೊಡೋದಕ್ಕೂ ನಾನೂ ಸಿದ್ಧವಾಗಿದ್ದೇನೆ. ಇದು ನನ್ನ ಸ್ವಂತ ನಿರ್ಧಾರ, ಏಕಾಂಗಿಯಾಗಿ ಹೋರಾಡಲು ಇಚ್ಛಿಸುತ್ತೇನೆ. ನನಗೆ ಬಾಲ್ಯದಿಂದಲೂ ಈ ದೃಷ್ಟಿಕೋನವಿತ್ತು. ಅನೇಕ ಜನರು ಇದನ್ನು ಬೆಂಬಲಿಸಿದ್ದಾರೆ, ಮತ್ತೂ ಕೆಲವರು ಲೇವಡಿ ಮಾಡಿದ್ದಾರೆ. ನಾನು ಒಬ್ಬ ಟ್ರಾನ್ಸ್ ಮ್ಯಾನ್. ದೈಹಿಕವಾಗಿಯೂ ನಾನು ಹಾಗೇ ಆಗಲು ಬಯಸಿದ್ದೇನೆ ಎಂದು ತಿಳಿಸಿದ್ದಾರೆ.
ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ಹಿರಿಯ ಸಿಪಿಐ(ಎಂ) (ಭಾರತೀಯ ಕಮ್ಯುನಿಸ್ಟ್ ಪಕ್ಷ) ನಾಯಕ ಬುದ್ಧದೇವ್ ಭಟ್ಟಾಚಾರ್ಯ ಪದ್ಮಭೂಷಣ ಪ್ರಶಸ್ತಿ ಸ್ವೀಕರಿಸಲು ನಿರಾಕರಿಸಿದ್ದಾರೆ.
ಈ ಕುರಿತಂತೆ ಬುದ್ಧದೇವ್ ಭಟ್ಟಾಚಾರ್ಯ ಅವರು, ನನಗೆ ಈ ಪ್ರಶಸ್ತಿ ಬಗ್ಗೆ ಏನೂ ಗೊತ್ತಿಲ್ಲ. ಇದರ ಬಗ್ಗೆ ನನಗೆ ಯಾರೂ ಹೇಳಿಲ್ಲ. ಅವರು ಏನಾದರೂ ನನಗೆ ಪದ್ಮಭೂಷಣ ಪ್ರಶಸ್ತಿ ನೀಡಲು ನಿರ್ಧರಿಸಿದ್ದರೆ, ನಾನು ಅದನ್ನು ಸ್ವೀಕರಿಸಲು ನಿರಾಕರಿಸುತ್ತೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಹೆದ್ದಾರಿಯನ್ನು ಅಡವಿಟ್ಟು ಸಾಲ ಪಡೆದ ಪಾಕಿಸ್ತಾನ
ಈ ಕುರಿತಂತೆ ಪಕ್ಷವು ತನ್ನ ಟ್ವಿಟ್ಟರ್‌ನಲ್ಲಿ ಪದ್ಮಭೂಷಣ ಪ್ರಶಸ್ತಿಗೆ ಆಯ್ಕೆಯಾಗಿರುವ ಬುದ್ಧದೇವ್ ಭಟ್ಟಾಚಾರ್ಯ ಅವರು ಅದನ್ನು ಸ್ವೀಕರಿಸಲು ನಿರಾಕರಿಸಿದ್ದಾರೆ. ರಾಜ್ಯದಿಂದ ಅಂತಹ ಪ್ರಶಸ್ತಿಗಳನ್ನು ನಿರಾಕರಿಸುವಲ್ಲಿ ಸಿಪಿಐ(ಎಂ) ನೀತಿಯು ಸ್ಥಿರವಾಗಿದೆ. ನಮ್ಮ ಕೆಲಸ ಜನರಿಗಾಗಿ, ಪ್ರಶಸ್ತಿಗಳಿಗಾಗಿ ಅಲ್ಲ ಎಂದು ಬರೆದುಕೊಂಡಿದೆ. ಇದನ್ನೂ ಓದಿ: ಉಗ್ರರಿಗೆ ಸಹಕಾರ – ಪಾಕಿಸ್ತಾನದ ಜೊತೆ ಬೂದುಪಟ್ಟಿಗೆ ಸ್ನೇಹಿತ ಟರ್ಕಿಯೂ ಸೇರ್ಪಡೆ
Com. Buddhadeb Bhattacharya who was nominated for the Padma Bhushan award has declined to accept it. The CPI(M) policy has been consistent in declining such awards from the State. Our work is for the people not for awards. Com EMS who was earlier offered an award had declined it. pic.twitter.com/fTmkkzeABl
ಜನವರಿ 25 ರಂದು ಗೃಹ ವ್ಯವಹಾರಗಳ ಸಚಿವಾಲಯ (ಎಂಎಚ್‍ಎ) ಈ ವರ್ಷ ಪದ್ಮಭೂಷಣ ಪ್ರಶಸ್ತಿಯನ್ನು ನೀಡಲಾಗುವ ವ್ಯಕ್ತಿಗಳ ಹೆಸರಿನ ಪಟ್ಟಿಯನ್ನು ಹಂಚಿಕೊಂಡಿದೆ. ಈ ಬಾರಿ ವಿವಿಧ ಕ್ಷೇತ್ರಗಳ 128 ವ್ಯಕ್ತಿಗಳಿಗೆ ಪದ್ಮ ಪ್ರಶಸ್ತಿಗೆ ಆರಿಸಲಾಗಿದೆ.