Tag: ಬುಲೆಟ್ ಪ್ರೂಫ್ ಕಾರು

  • ರಾಜ್ಯಪಾಲರಿಗೆ ಬಂತು ಬುಲೆಟ್ ಫ್ರೂಫ್ ಕಾರು!

    ರಾಜ್ಯಪಾಲರಿಗೆ ಬಂತು ಬುಲೆಟ್ ಫ್ರೂಫ್ ಕಾರು!

    ಬೆಂಗಳೂರು: ಸಿಎಂ ಸಿದ್ದರಾಮಯ್ಯ (CM Siddaramaiah) ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ಬೆನ್ನಲ್ಲೇ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ (Governer Thawar Chand Gehlot) ಅವರು ಬುಲೆಟ್ ಪ್ರೂಫ್ ಕಾರನ್ನು ಬಳಸಲು ಆರಂಭಿಸಿದ್ದಾರೆ.

    ಮುಡಾ (MUDA) ಪ್ರಕರಣದ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ (Prosecution) ಅನುಮತಿ ನೀಡಿದ ಬಳಿಕ ರಾಜ್ಯದಲ್ಲಿ ಕೆಲವು ಕಡೆ ಪ್ರತಿಭಟನೆಗಳು ನಡೆಯುತ್ತಿವೆ. ಈ ಪ್ರತಿಭಟನೆಯಿಂದಾಗಿ ರಾಜ್ಯಾಪಾಲರು ಎಚ್ಚರಿಕೆಯ ನಡೆಯನ್ನು ತೋರಿಸಿದ್ದಾರೆ.ಇದನ್ನೂ ಓದಿ: MUDA Scam | ಹೊಸ ಟ್ವಿಸ್ಟ್‌ – ಸಿಎಂ ಪತ್ನಿ ಬರೆದ ಪತ್ರವನ್ನೇ ಅಧಿಕಾರಿಗಳು ತಿರುಚಿದ್ದಾರಾ?

    ಇಷ್ಟು ದಿನ ಅವಕಾಶ ಇದ್ದರೂ ನಾರ್ಮಲ್ ಇನ್ನೋವಾ ಕಾರನ್ನು ಬಳಸುತ್ತಿದ್ದ ರಾಜ್ಯಪಾಲರು ಇದೀಗ ಬುಲೆಟ್ ಫ್ರೂಫ್ ಕಾರನ್ನು (BulletProof Car) ಬಳಸಲು ಆರಂಭಿಸಿದ್ದಾರೆ. ರಾಜ್ಯಪಾಲರು ಅಧಿಕಾರ ಸ್ವೀಕರಿಸಿದಾಗಲೇ ಬುಲೆಟ್ ಪ್ರೂಫ್ ಕಾರಿನ ವ್ಯವಸ್ಥೆ ಮಾಡಲಾಗಿತ್ತು. ಆದರೆ ಆ ಕಾರನ್ನು ವಾಪಸ್ ಕಳುಹಿಸಿದ್ದರು. ಈಗ ಮತ್ತೆ ಗುಪ್ತಚರ ಇಲಾಖೆಯಿಂದ ಸೂಚನೆ ಬಂದ ನಂತರ ಬುಲೆಟ್ ಪ್ರೂಫ್ ಕಾರಿನ ವ್ಯವಸ್ಥೆ ಮಾಡಲಾಗಿದೆ.

    ಶನಿವಾರ ಮಧ್ಯಾಹ್ನ ಇಂದೋರ್‌ಗೆ ತೆರಳಿದ್ದ ರಾಜ್ಯಪಾಲರು ಮಂಗಳವಾರ ರಾತ್ರಿ ವಾಪಸಾಗಿದ್ದಾರೆ. ಇಂದು ನಡೆಯಬೇಕಿದ್ದ ಸಾರ್ವಜನಿಕ ಕಾರ್ಯಕ್ರಮವೊಂದನ್ನು ಸೇರಿ ಆ.29ರ ತನಕ ಪೂರ್ವ ನಿಗದಿಯಾಗಿದ್ದ ಎಲ್ಲಾ ಸಾರ್ವಜನಿಕ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ.ಇದನ್ನೂ ಓದಿ: ನನ್ನ ಮಕ್ಕಳನ್ನು ಗುಂಡು ಹೊಡೆದು ಸಾಯಿಸಿ – ಪೊಲೀಸರ ಮುಂದೆ ರೌಡಿಶೀಟರ್ ತಂದೆ ಅಳಲು

  • ಜೀವ ಬೆದರಿಕೆ ಹಿನ್ನೆಲೆ ದುಬಾರಿ ಬುಲೆಟ್ ಪ್ರೂಫ್ ಕಾರು ಖರೀದಿಸಿದ ಸಲ್ಮಾನ್

    ಜೀವ ಬೆದರಿಕೆ ಹಿನ್ನೆಲೆ ದುಬಾರಿ ಬುಲೆಟ್ ಪ್ರೂಫ್ ಕಾರು ಖರೀದಿಸಿದ ಸಲ್ಮಾನ್

    ಬಾಲಿವುಡ್ ನಟ ಸಲ್ಮಾನ್ ಖಾನ್ ಗೆ ಜೀವ ಬೆದರಿಕೆ ಇರುವ ಹಿನ್ನೆಲೆಯಲ್ಲಿ ಈಗಾಗಲೇ ಮುಂಬೈ ಪೊಲೀಸರು ಸಾಕಷ್ಟು ಭದ್ರತೆ ನೀಡಿದ್ದಾರೆ. ಸಲ್ಮಾನ್ ಖಾನ್, ಅವರ ನಿವಾಸ ಹಾಗೂ ಸಲ್ಮಾನ್ ತಂದೆಗೆ ಪ್ರತ್ಯೇಕ ಭದ್ರತೆಯನ್ನು ನೀಡಲಾಗಿದೆ. ಆದರೂ, ಅತ್ಯಾಧುನಿಕ ಬುಲೆಟ್ ‍ಪ್ರೂಫ್ ಕಾರು (Bullet Proof Car) ಖರೀದಿಸಿ ಎಂದು ಸಲಹೆ ಬಂದ ಹಿನ್ನೆಲೆಯಲ್ಲಿ ಎಸ್ ಯುವಿ ನಿಸ್ಸಾನ್  ಕಾರನ್ನು ಸಲ್ಮಾನ್ ಖರೀದಿಸಿದ್ದಾರೆ. ಈ ಕಾರಿನ ಬೆಲೆ 5 ರಿಂದ 6 ಕೋಟಿ ಎಂದು ಅಂದಾಜಿಸಲಾಗಿದೆ.

    ಈಗಾಲೇ ಸಲ್ಮಾನ್ ಅವರ ಬಾಂದ್ರಾದಲ್ಲಿರುವ ಗ್ಯಾಲಕ್ಸಿ ಅಪಾರ್ಟ್ಮೆಂಟ್ ಗೆ ಮುಂಬೈ ಪೊಲೀಸರು ಟೈಟ್ ಸೆಕ್ಯೂರಿಟಿ ನೀಡಿದ್ದಾರೆ. ರವಿವಾರದಿಂದ ಮನೆ ಸುತ್ತಮುತ್ತ ತಪಾಸಣೆ ಕಾರ್ಯವನ್ನೂ ಪೊಲೀಸರು ಆರಂಭಿಸಿದ್ದು, ಯಾವುದೇ ಬಹಿರಂಗ ಕಾರ್ಯಕ್ರಮದಲ್ಲಿ ಭಾಗಿಯಾಗದಂತೆ ತಿಳಿಸಿದ್ದಾರೆ. ಸಲ್ಮಾನ್ ಖಾನ್ ಅವರನ್ನು ಕುಖ್ಯಾತ ದರೋಡೆಕೋರ ಲಾರೆನ್ಸ್ ಬಿಷ್ಣೋಯ್ ಕೊಲ್ಲುವುದಾಗಿ ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ಪೊಲೀಸರು ಅಗತ್ಯ ಕ್ರಮಗಳನ್ನು ತಗೆದುಕೊಳ್ಳಲು ಮುಂದಾಗಿದ್ದಾರೆ. ಇದನ್ನೂ ಓದಿ:ಸಿಡ್ನಿ ವರನ ಜೊತೆ ನಟಿ ಸುಕೃತಾ ನಾಗ್ ಮದುವೆ ಫಿಕ್ಸ್

    ಕೃಷ್ಣಮೃಗ ಕೊಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ಯಾಂಗ್ ಸ್ಟರ್ (gangster) ಲಾರೆನ್ಸ್ ಬಿಷ್ಣೋಯ್ (Lawrence Bishnoi) ಮತ್ತು ಬಾಲಿವುಡ್ ನಟ ಸಲ್ಮಾನ್ ಖಾನ್ (Salman Khan) ನಡುವಿನ ಕಾಳಗ ಸದ್ಯಕ್ಕೆ ಮುಗಿಯುವಂತೆ ಕಾಣುತ್ತಿಲ್ಲ. ಈಗಾಗಲೇ ಸಲ್ಮಾನ್ ಖಾನ್ ಕೊಲ್ಲಲು (Death Threats) ಬಿಷ್ಣೋಯ್ ಮತ್ತು ಟೀಮ್  ಹಲವು ರೀತಿಯಲ್ಲಿ ಪ್ರಯತ್ನ ಮಾಡಿ ವಿಫಲವಾಗಿದೆ. ಈ ಸಂಬಂಧವಾಗಿ ಅನೇಕರು ಬಂಧನ ಕೂಡ ಆಗಿದ್ದಾರೆ. ಸ್ವತಃ ಬಿಷ್ಣೋಯ್ ಜೈಲಿನಲ್ಲೇ ಇದ್ದಾನೆ. ಜೈಲಿನಿಂದಲೇ ಮತ್ತೆ ಸಲ್ಮಾನ್ ಬಗ್ಗೆ ಮಾತನಾಡಿದ್ದಾನೆ.

    ಮಾಧ್ಯಮವೊಂದರ ಸಂದರ್ಶನದಲ್ಲಿ ಮಾತನಾಡಿರುವ ಲಾರೆನ್ಸ್ ಬಿಷ್ಣೋಯ್ ‘ನನ್ನ ಜೀವನದ ಅಂತಿಮ ಗುರಿ ಅಂತಿದ್ದರೆ ಅದು ನಟ ಸಲ್ಮಾನ್ ಖಾನ್ ಅವರನ್ನು ಕೊಲ್ಲುವುದೇ ಆಗಿದೆ. ಸಲ್ಮಾನ್ ಖಾನ್ ಬಿಷ್ಣೋಯ್ ಸಮುದಾಯಕ್ಕೆ ಕ್ಷಮೆಯಾಚಿಸಿದ ನಂತರವೇ ಈ ದ್ವೇಷ ಕೊನೆಗೊಳ್ಳುತ್ತದೆ’ ಎಂದು ಮಾತನಾಡಿದ್ದಾನೆ. ಅವನ ಈ ಮಾತು ಬಾಲಿವುಡ್ ನಲ್ಲಿ ಭಾರೀ ಆತಂಕ ಸೃಷ್ಟಿ ಮಾಡಿದೆ.

    ಸಲ್ಮಾನ್ ಖಾನ್ ಜೀವ ಉಳಿಯಬೇಕು ಎಂದರೆ, ತನ್ನ ಮಾತನ್ನು ಕೇಳಲೇಬೇಕು ಎಂದು ಲಾರೆನ್ಸ್ ಹೇಳಿಕೊಂಡಿದ್ದಾನೆ. ಯಾವುದೋ ಜಾಗದಲ್ಲಿ ನಿಂತು ಕ್ಷಮೆ ಕೇಳಿದರೆ ನಾವು ಒಪ್ಪುವುದಿಲ್ಲ. ಬಿಕಾನೇರ್ ನಲ್ಲಿರುವ ಅವರ ದೇವಸ್ಥಾನಕ್ಕೆ ಹೋಗಿ ಕ್ಷಮೆ ಕೇಳಬೇಕು ಎಂದು ಲಾರೆನ್ಸ್ ಮಾತನಾಡಿದ್ದಾನೆ. ಸಲ್ಮಾನ್ ಖಾನ್ ಗೆ ತುಂಬಾ ಅಹಂ ಇದೆ. ಆ ನಟನಿಗೆ ಅಂಗರಕ್ಷಕರು ಇಲ್ಲದಿದ್ದರೆ ಇಷ್ಟೊತ್ತಿಗೆ ಪ್ರಾಣ ಹೋಗಿರುತ್ತಿತ್ತು ಎಂದಿದ್ದಾನೆ.