Tag: ಬುಲೆಟ್ ಪ್ರೂಫ್ ವಾಹನ

  • ಮೋದಿ ರೋಡ್ ಶೋಗೆ ಸಿದ್ಧವಾಗಿದೆ ಸ್ಪೆಷಲ್‌ ಬುಲೆಟ್ ಪ್ರೂಫ್ ವಾಹನ

    ಮೋದಿ ರೋಡ್ ಶೋಗೆ ಸಿದ್ಧವಾಗಿದೆ ಸ್ಪೆಷಲ್‌ ಬುಲೆಟ್ ಪ್ರೂಫ್ ವಾಹನ

    ಬೆಂಗಳೂರು:‌ ಕರ್ನಾಟಕ ವಿಧಾನಸಭಾ ಚುನಾವಣೆ (Karnataka Election) ಹಿನ್ನೆಲೆಯಲ್ಲಿ ಏಪ್ರಿಲ್‌ 29ರ ಶನಿವಾರ ಪ್ರಧಾನಿ ನರೇಂದ್ರ ಮೋದಿ (Narendra Modi) ಬೆಂಗಳೂರಿಗೆ ಭೇಟಿ ನೀಡುತ್ತಿದ್ದಾರೆ. ಅಂದು ಮೋದಿ ನಡೆಸಲಿರುವ ಮೆಗಾ ರೋಡ್‌ ಶೋಗಾಗಿ (Road Show) ಬುಲೆಟ್ ಪ್ರೂಫ್ ವಾಹನ (Bulletproof Vehicles) ಸಿದ್ಧವಾಗಿದೆ.

    ಮೋದಿ ಪ್ರಚಾರಕ್ಕೆ ಎಸ್‌ಪಿಜಿ (SPG) ತಂಡ ಬೆಂಗಳೂರಿಗೆ ಸ್ಪೆಷಲ್ ಪ್ರೂಫ್ ವಾಹನ ಕಳುಹಿಸಿದೆ. ಆ ವಾಹನದಲ್ಲೇ ಮೋದಿ ರೋಡ್ ಶೋ ನಡೆಸಲಿದ್ದಾರೆ. ಬೆಂಗಳೂರು, ಮೈಸೂರು ಹಾಗೂ ಕಲಬುರಗಿ ಜಿಲ್ಲೆಗಳಲ್ಲಿ ಇದೇ ವಾಹನದಲ್ಲಿ ಮೋದಿ ರೋಡ್ ಶೋ ನಡೆಸಲಿದ್ದಾರೆ. ಮೋದಿ ಸುರಕ್ಷತಾ ದೃಷ್ಟಿಯಿಂದಾಗಿ ಈ ಬಾರಿ ಬುಲೆಟ್ ಪ್ರೂಫ್ ವಾಹನ ಸಿದ್ಧಪಡಿಸಿದ್ದು, ಈಗಾಗಲೇ ಬೆಂಗಳೂರಿಗೆ ಬಂದಿಳಿದಿದೆ. ಇದನ್ನೂ ಓದಿ: ಅನುಷ್ಕಾ ಶೆಟ್ಟಿ ‘ಪೊನ್ನಿಯಿನ್ ಸೆಲ್ವನ್’ ಕೈಬಿಟ್ಟಿದ್ದಕ್ಕೆ ಮೀ ಟೂ ಕಾರಣವಾ?

    ಮಾಗಡಿ ರೋಡ್ ಬಂದ್: ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿನಲ್ಲಿ ರೋಡ್‌ ಶೋ ನಡೆಯಲಿರುವ ಹಿನ್ನೆಲೆಯಲ್ಲಿ ಅಂದು ಮಧ್ಯಾಹ್ನ 2 ಗಂಟೆಯಿಂದ ಮಾಗಡಿ ರಸ್ತೆ ಬಂದ್‌ ಆಗಲಿದೆ. ಬೆಳಗಾವಿಯಿಂದ ಬೆಂಗಳೂರಿಗೆ ಬರುತ್ತಿರುವ ಮೋದಿ ಅವರು ಸಂಜೆ 4.30ಕ್ಕೆ ಇಲ್ಲಿನ ಹೆಚ್‌ಎಎಲ್‌ ವಿಮಾನ ನಿಲ್ದಾಣದಲ್ಲಿ ಬಂದಿಳಿಯಲಿದ್ದಾರೆ. ಅಲ್ಲಿಂದ ನೆಲಮಂಗಲದ ಬಿಐಇಸಿ ಹೆಲಿಪ್ಯಾಡ್‌ಗೆ ಆಗಮಿಸಲಿದ್ದಾರೆ. ಇದನ್ನೂ ಓದಿ: Mood Of Karnataka ಚಾಪ್ಟರ್‌ 2 – ಕಾಂಗ್ರೆಸ್ಸಿಗಿಲ್ಲ ಬಹುಮತ, ಮೊದಲಿಗಿಂತ ಬಿಜೆಪಿ ಸ್ವಲ್ಪ ಸುಧಾರಣೆ

    ನಂತರ ಬಿಐಇಸಿ ನಿಂದ ನೈಸ್‌ ರಸ್ತೆ ಮೂಲಕ ಮಾಗಡಿ ರಸ್ತೆಗೆ ಪ್ರಯಾಣ ಬೆಳೆಸಲಿದ್ದಾರೆ. ಮಾಗಡಿ ರಸ್ತೆಯಿಂದ ಸುಮ್ಮನಹಳ್ಳಿಯ ತನಕ ರೋಡ್ ಶೋ ನಡೆಸಲಿದ್ದಾರೆ. ಮೋದಿ ಬರುವ 1 ಗಂಟೆಗೂ ಮುನ್ನವೇ ನೈಸ್‌ ರಸ್ತೆ ಸಂಚಾರವನ್ನೂ ಬಂದ್‌ ಮಾಡಲಾಗುತ್ತದೆ.

    ಸುಮ್ಮನಹಳ್ಳಿ ರೋಡ್ ಶೋ ಬಳಿಕ ಗೊರಗುಂಟೆಪಾಳ್ಯ, ಮೇಖ್ರೀ ಸರ್ಕಲ್ ಮೂಲಕ ರಾಜಭವನಕ್ಕೆ ತೆರಳಲಿದ್ದಾರೆ. ಶನಿವಾರ ರಾಜಭವನದಲ್ಲೇ ವಾಸ್ತವ್ಯ ಹೂಡಲಿರೋ ಮೋದಿ, ಭಾನುವಾರ ನಿಗದಿತ ಕಾರ್ಯಕ್ರಮ ಮುಗಿಸಿ ಅಂದು ಸಂಜೆ ದೆಹಲಿಗೆ ಮರಳಲಿದ್ದಾರೆ.

  • ಪಾದಯಾತ್ರೆಯನ್ನು ಬುಲೆಟ್ ಪ್ರೂಫ್ ವಾಹನದಲ್ಲಿ ಮಾಡೋಕ್ಕಾಗಲ್ಲ: ನಿಯಮ ಉಲ್ಲಂಘನೆ ಆರೋಪಕ್ಕೆ ರಾಗಾ ತಿರುಗೇಟು

    ಪಾದಯಾತ್ರೆಯನ್ನು ಬುಲೆಟ್ ಪ್ರೂಫ್ ವಾಹನದಲ್ಲಿ ಮಾಡೋಕ್ಕಾಗಲ್ಲ: ನಿಯಮ ಉಲ್ಲಂಘನೆ ಆರೋಪಕ್ಕೆ ರಾಗಾ ತಿರುಗೇಟು

    ನವದೆಹಲಿ: ಕಾಂಗ್ರೆಸ್ (Congress) ನಡೆಸುತ್ತಿರುವ ಭಾರತ್ ಜೋಡೋ ಯಾತ್ರೆಯಲ್ಲಿ (Bharat Jodo Yatra) ನಾಯಕ ರಾಹುಲ್ ಗಾಂಧಿ (Rahul Gandhi) ಅವರ ಭದ್ರತೆಯ ವಿವಾದದ ಉಂಟಾಗಿತ್ತು. ಇದಕ್ಕೆ ಪಕ್ಷ ದೆಹಲಿ ಪೊಲೀಸರನ್ನು ದೂಷಿಸಿತ್ತು. ಬಳಿಕ ಕೇಂದ್ರ ಮೀಸಲು ಪೊಲೀಸ್ ಪಡೆ ರಾಹುಲ್ ಗಾಂಧಿ ಅವರು ಸ್ವತಃ ಪ್ರೋಟೋಕಾಲ್ ಅನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪ ಹೊರಿಸಿದ್ದು, ಇದೀಗ ಈ ಆರೋಪಕ್ಕೆ ಪ್ರತಿಕ್ರಿಯಿಸಿರುವ ರಾಗಾ ನಾವು ಭಾರತ್ ಜೋಡೋ ಯಾತ್ರೆಯನ್ನು ಬುಲೆಟ್ ಪ್ರೂಫ್ ವಾಹನದಲ್ಲಿ (Bullet Proof Car) ಮಾಡಲು ಸಾಧ್ಯವಿಲ್ಲ ಎಂದಿದ್ದಾರೆ.

    ಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್ ಗಾಂಧಿ 113 ಬಾರಿ ಭದ್ರತಾ ನಿಯಮ ಉಲ್ಲಂಘನೆ ಮಾಡಿರುವುದಾಗಿ ಕೇಂದ್ರದ ಅರೆಸೇನಾ ಪಡೆ ಸಿಆರ್‌ಪಿಎಫ್ ಹೇಳಿದೆ. ಇದಕ್ಕೆ ರಾಹುಲ್ ತಿರುಗೇಟು ನೀಡಿ, ಬುಲೆಟ್ ಪ್ರೂಫ್ ಕಾರಿನಲ್ಲಿ ನಾನು ಭಾರತ್ ಜೋಡೋ ಯಾತ್ರೆಯನ್ನು ಮಾಡಬೇಕೆಂದು ಸರ್ಕಾರ ಬಯಸುತ್ತದೆ. ಭಾರತ್ ಜೋಡೋ ಯಾತ್ರೆ ಪಾದಯಾತ್ರೆಯಾಗಿದ್ದು, ಅದನ್ನು ಬುಲೆಟ್ ಪ್ರೂಫ್ ವಾಹನದಲ್ಲಿ ಮಾಡಲು ಹೇಗೆ ಸಾಧ್ಯ ಎಂದು ಕೇಳಿದ್ದಾರೆ.

    ಕೆಲ ದಿನಗಳ ಹಿಂದೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದರು. ಪೊಲೀಸರು ರಾಹುಲ್ ಗಾಂಧಿ ಅವರಿಗೆ ಸೂಕ್ತ ಭದ್ರತೆ ಒದಗಿಸುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದಿದ್ದರು. ಆದರೆ ಈ ಬಗ್ಗೆ ರಾಷ್ಟ್ರರಾಜಧಾನಿಯಲ್ಲಿ ಭದ್ರತಾ ವೈಫಲ್ಯವಾಗಿರುವ ಆರೋಪವನ್ನು ಭದ್ರತಾ ಪಡೆಯು ನಿರಾಕರಿಸಿದೆ.

    ರಾಹುಲ್ ಗಾಂಧಿ ಅವರಿಗೆ `ಝಡ್ ಪ್ಲಸ್’ ಭದ್ರತೆ ನೀಡಲಾಗಿದ್ದು, ಭಾರತ್ ಜೋಡೋ ಯಾತ್ರೆಯು ಪಂಜಾಬ್, ಜಮ್ಮು ಮತ್ತು ಕಾಶ್ಮೀರದ ಸೂಕ್ಷ್ಮ ಪ್ರದೇಶಗಳಿಗೆ ಪ್ರವೇಶಿಸಿದಾಗ ಅಗತ್ಯ ಭದ್ರತೆ ಖಚಿತಪಡಿಸುವಂತೆ ಕಾಂಗ್ರೆಸ್ ಕೋರಿದೆ. ಇದನ್ನೂ ಓದಿ: ಬಿಜೆಪಿ, ಆರ್‌ಎಸ್‌ಎಸ್ ನನ್ನ ಗುರು – ರಾಹುಲ್ ಗಾಂಧಿ

    ರಾಜ್ಯದ ಪೊಲೀಸರು ಹಾಗೂ ಇತರೆ ಭದ್ರತಾ ಇಲಾಖೆಗಳ ಸಮನ್ವಯದೊಂದಿಗೆ ಸಿಆರ್‌ಪಿಎಫ್ ರಾಹುಲ್ ಗಾಂಧಿ ಅವರಿಗೆ ಅಗತ್ಯ ಭದ್ರತೆಯನ್ನು ಒಗಿಸಿತ್ತು. ಡಿಸೆಂಬರ್ 24ರ ಕಾರ್ಯಕ್ರಮಕ್ಕಾಗಿ 2 ದಿನ ಮುಂಚಿತವಾಗಿಯೇ ಭದ್ರತಾ ಸಂಪರ್ಕ ಸುಧಾರಣೆ (ಎಎಸ್‌ಎಲ್) ನಡೆಸಲಾಗಿತ್ತು ಎಂದು ಸಿಆರ್‌ಪಿಎಫ್ ಹೇಳಿದೆ. ಪ್ರಮುಖ ಕಾರ್ಯಕ್ರಮಗಳಲ್ಲಿ ವಿಐಪಿಗಳ ಭದ್ರತೆಗಾಗಿ ಭದ್ರತಾ ಪಡೆಗಳು ಯೋಜನೆ ರೂಪಿಸಲು ನಡೆಸುವ ಸಭೆಯನ್ನು ಎಎಸ್‌ಎಲ್ ಎನ್ನಲಾಗುತ್ತದೆ.

    ದೆಹಲಿಯಲ್ಲಿ ಯಾತ್ರೆಯ ದಿನ ಭದ್ರತೆಗೆ ಸಂಬಂಧಿಸಿದ ಎಲ್ಲಾ ಮಾರ್ಗಸೂಚಿಗಳನ್ನು ಪೂರ್ಣವಾಗಿ ಅನುಸರಿಸಲಾಗಿದೆ. ಈ ಬಗ್ಗೆ ದೆಹಲಿ ಪೊಲೀಸರಿಗೂ ಮಾಹಿತಿ ನೀಡಲಾಗಿದೆ. ಆದರೆ ರಾಹುಲ್ ಗಾಂಧಿ ಅವರು ಪದೇ ಪದೇ ಭದ್ರತಾ ನಿಯಮಾವಳಿಗಳನ್ನು ಉಲ್ಲಂಘಿಸಿದ್ದಾರೆ. ಸುರಕ್ಷತೆಗಾಗಿ ಭದ್ರತೆ ನಿಯೋಜಿಸಿದ್ದರೆ, ರಕ್ಷಣೆಗೆ ಒಳಪಟ್ಟಿರುವ ವ್ಯಕ್ತಿಯೇ ಭದ್ರತಾ ನಿಯಮ ಮುರಿಯುವಂತೆ ಮಾಡಿದ್ದಾರೆ. ಅವರಿಗೂ ಇದನ್ನು ಆಗಾಗ್ಗೆ ತಿಳಿಸಲಾಗಿದೆ ಎಂದು ಹೇಳಿದೆ. ಇದನ್ನೂ ಓದಿ: 73 ಜನರ ಬಲಿ ತೆಗೆದುಕೊಂಡ ಬಿಹಾರ ಕಳ್ಳಭಟ್ಟಿ ಪ್ರಕರಣದ ಮಾಸ್ಟರ್ ಮೈಂಡ್ ಕೊನೆಗೂ ಪೊಲೀಸ್ ಬಲೆಗೆ

    Live Tv
    [brid partner=56869869 player=32851 video=960834 autoplay=true]