Tag: ಬುಲೆರೋ

  • ಭೀಕರ ರಸ್ತೆ ಅಪಘಾತ- ಸ್ವಿಫ್ಟ್ ಕಾರ್‌ನಲ್ಲಿದ್ದ ಯುವಕ, ಯುವತಿಯ ಸಾವು

    ಭೀಕರ ರಸ್ತೆ ಅಪಘಾತ- ಸ್ವಿಫ್ಟ್ ಕಾರ್‌ನಲ್ಲಿದ್ದ ಯುವಕ, ಯುವತಿಯ ಸಾವು

    ಚಿಕ್ಕೋಡಿ: ರಾಷ್ಟ್ರೀಯ ಹೆದ್ದಾರಿ 4ರ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಕಣಗಲಾ ಗ್ರಾಮದ ಬಳಿ ಕಾರುಗಳ ಮಧ್ಯೆ ಡಿಕ್ಕಿಯಾಗಿ ಇಬ್ಬರು ಮೃತಪಟ್ಟಿರುವ ಘಟನೆ ಮಂಗಳವಾರ ಸಂಜೆ ನಡೆದಿದೆ.

    ಹುಕ್ಕೇರಿ ತಾಲೂಕಿನ ಕಮತನೂರ ಗ್ರಾಮದ ಪ್ರಶಾಂತ್ ಕೊಲಾರಗಿ (24) ಅಥಣಿ ಮೂಲದ ಶ್ರಧ್ಧಾ ತೆಲಸಂಗಮಠ (20) ಮೃತ ದುರ್ದೈವಿಗಳು. ಇವರು ಸ್ವಿಫ್ಟ್ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಇದನ್ನೂ ಓದಿ: ಪದ್ಮಶ್ರೀ ಪ್ರಶಸ್ತಿ ತಿರಸ್ಕರಿಸಿದ್ದ ಗಾಯಕಿ ಸಂಧ್ಯಾ ಮುಖರ್ಜಿ ನಿಧನ

    ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಬುಲೆರೋ ಕಾರು ನಿಪ್ಪಾಣಿಯಿಂದ ವೇಗವಾಗಿ ಬರುತ್ತಿದ್ದು ಸ್ವಿಫ್ಟ್ ಕಾರುಗೆ ಡಿಕ್ಕಿ ಹೊಡೆದ ಪರಿಣಾಮ ಸ್ವಿಫ್ಟ್ ಕಾರಿನಲ್ಲಿದ್ದ ಓರ್ವ ಯುವಕ ಹಾಗೂ ಯುವತಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ. ಸಂಕೇಶ್ವರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಸಂಕೇಶ್ವರ  ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಕೈ, ಕಾಲು ಕಟ್ಟಿ ಹಾಕಿ ಸಿನಿಮೀಯ ರೀತಿಯಲ್ಲಿ ಮನೆಗಳ ದರೋಡೆ

  • 20 ಜನ ಕೂಲಿಕಾರ್ಮಿಕರಿದ್ದ ವಾಹನಕ್ಕೆ ಲಾರಿ ಡಿಕ್ಕಿ- ಇಬ್ಬರು ಸಾವು, 12 ಜನರ ಸ್ಥಿತಿ ಗಂಭೀರ

    20 ಜನ ಕೂಲಿಕಾರ್ಮಿಕರಿದ್ದ ವಾಹನಕ್ಕೆ ಲಾರಿ ಡಿಕ್ಕಿ- ಇಬ್ಬರು ಸಾವು, 12 ಜನರ ಸ್ಥಿತಿ ಗಂಭೀರ

    ರಾಯಚೂರು: 20 ಜನ ಕೂಲಿಕಾರ್ಮಿಕರಿದ್ದ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿದ ಘಟನೆ ಲಿಂಗಸುಗೂರಿನ ಗುರಗುಂಟಾ ಬಳಿಯ ಗೋನಾಳ ಕ್ರಾಸ್‍ನಲ್ಲಿ ನಡೆದಿದೆ.

    ರಾಯದುರ್ಗ ಗ್ರಾಮದ ಕೂಲಿಕಾರ್ಮಿಕರಾದ ಚನ್ನಮ್ಮ (16) ಹನುಮಮ್ಮ (50) ಮೃತ ದುರ್ದೈವಿಗಳು. ಈ ಘಟನೆ 12 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಲಾರಿ ಹಾಗೂ ಕೂಲಿಕಾರ್ಮಿಕರದ್ದ ಬುಲೆರೋ ಚಾಲಕರು ವೇಗವಾಗಿ ಚಾಲನೆ ಮಾಡಿದ್ದೆ ದುರಂತಕ್ಕೆ ಕಾರಣ ಎನ್ನಲಾಗಿದೆ.

    ಯಾದಗಿರಿಯ ಸುರಪುರದಿಂದ ನಿತ್ಯವೂ ಕೃಷಿ ಕೂಲಿಕಾರ್ಮಿಕರು ಕೆಲಸಕ್ಕಾಗಿ ಲಿಂಗಸುಗೂರಿಗೆ ಹೋಗುತ್ತಾರೆ. ಎಂದಿನಂತೆ ಬುಧವಾರವು ಕೂಡ 20 ಜನ ಕೂಲಿಕಾರ್ಮಿಕರು ಕೆಎ 36 ಬಿ 6600 ನಂಬರ್‍ನ ಬುಲೆರೋದಲ್ಲಿ ಕೆಲಸಕ್ಕಾಗಿ ಹೋಗಿದ್ದರು. ಸಂಜೆ ಕೆಲಸ ಮುಗಿಸಿ ಮನೆಗೆ ಹಿಂತಿರುಗುತ್ತಿದ್ದಾಗ ಚಾಲಕ ವೇಗವಾಗಿ ಚಾಲನೆ ಮಾಡುತ್ತಿದ್ದ. ಈ ವೇಳೆ ಸುರಪುದಿಂದ ವೇಗವಾಗಿ ಬಂದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಬುಲೆರೋಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಬಲೆರೋದ ಹಿಂಭಾಗದಲ್ಲಿ ಕುಳಿತಿದ್ದವರ ಪೈಕಿ ಇಬ್ಬರು ಮಹಿಳೆಯರು ಮೃತಪಟ್ಟಿದ್ದಾರೆ.

    ಈ ದುರಂತದಲ್ಲಿ ಗಂಭೀರವಾಗಿ ಗಾಯಗೊಂಡ 12 ಜನರನ್ನು ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಚಿಕ್ಕಪುಟ್ಟ ಗಾಯವಾಗಿರುವ 6 ಜನರಿಗೆ ಲಿಂಗಸುಗೂರು ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಲಾರಿ ಹಾಗೂ ಬುಲೆರೋ ಚಾಲಕರಿಬ್ಬರೂ ಘಟನಾ ಸ್ಥಳದಿಂದ ಪರಾರಿಯಾಗಿದ್ದರು. ಈ ಕುರಿತು ಮಾಹಿತಿ ಸಿಗುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು, ಪರಿಶೀಲನೆ ನಡೆಸಿ ಚಾಲಕರನ್ನು ಬಂಧಿಸಿದ್ದಾರೆ.

    ಗೋನಾಳ ಕ್ರಾಸ್‍ನಲ್ಲಿ ಹಲವು ತಿರುವುಗಳಿದ್ದು, ಯಾವುದೇ ಎಚ್ಚರಿಕೆಯ ಫಲಕಗಳು ಇಲ್ಲದಿರುವುದು ಅಪಘಾತಕ್ಕೆ ಕಾರಣವಾಗಿದೆ. ಈ ಹಿಂದೆಯೂ ಇದೇ ಸ್ಥಳದಲ್ಲಿ ಸಾಕಷ್ಟು ಅಪಘಾತಗಳು ಸಂಭವಿಸಿವೆ. ಘಟನೆಯ ಸಂಬಂಧ ಎರಡೂ ವಾಹನಗಳ ಚಾಲಕರ ವಿರುದ್ಧ ಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದುರಂತದಲ್ಲಿ ಮೃತಪಟ್ಟ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

  • ಅಂತ್ಯಕ್ರಿಯೆ ಮುಗಿಸಿ ತೆರಳುವಾಗ ಭೀಕರ ಅಪಘಾತ- 6 ಸಾವು, 8 ಜನರಿಗೆ ಗಾಯ

    ಅಂತ್ಯಕ್ರಿಯೆ ಮುಗಿಸಿ ತೆರಳುವಾಗ ಭೀಕರ ಅಪಘಾತ- 6 ಸಾವು, 8 ಜನರಿಗೆ ಗಾಯ

    ಬೆಳಗಾವಿ: ಬೊಲೆರೋ ಹಾಗೂ ಕಬ್ಬು ತುಂಬಿದ ಟ್ರ್ಯಾಕ್ಟರ್ ನಡುವೆ ಭೀಕರ ರಸ್ತೆ ಅಪಘಾತವಾಗಿ ಸ್ಥಳದಲ್ಲಿ 6 ಜನ ಮೃತಪಟ್ಟು, 8 ಜನರಿಗೆ ಸಣ್ಣಪುಟ್ಟ ಗಾಯಗಳಾಗಿರುವ ಘಟನೆ ಜಿಲ್ಲೆಯ ಗೋಕಾಕ್ ತಾಲೂಕಿನ ಹಿರೇನಂದಿ ಗ್ರಾಮದ ಬಳಿ ನಡೆದಿದೆ.

    ಯಲ್ಲವ್ವ ಖಂಡ್ರೆ(60), ನೀಲವ್ವಾ(40), ಅನುಸೂಯಾ ನಾಯ್ಕರ(38), ಪಾರವ್ವಾ ಖಂಡ್ರಿ(30), ಬಿಮಸೆಪ್ಪ ಪೂಜಾರಿ(38) ಹಾಗೂ ಮಹಾದೇವ(30) ಮೃತ ದುರ್ದೈವಿಗಳು. ಅಪಘಾತದ ನಂತರ ಸ್ಥಳದಲ್ಲಿ ನಾಲ್ವರು ಮೃತಪಟ್ಟರೆ, ಇಬ್ಬರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

    ಈ ಅಪಘಾತದಲ್ಲಿ ಬೊಲೆರೋದಲ್ಲಿದ್ದ 6 ಜನರ ಮೃತಪಟ್ಟಿದ್ದು, 8 ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸದ್ಯ ಮೃತರು, ಗೋಕಾಕ್ ತಾಲೂಕಿನ ಯರಗರವಿ ಗ್ರಾಮದವರು ಎಂದು ಹೇಳಲಾಗುತ್ತಿದೆ. ಗೋಕಾಕ್ ಫಾಲ್ಸ್ ನಲ್ಲಿದ್ದ ಸಂಬಂಧಿಕರ ಅಂತ್ಯಕ್ರಿಯೆ ಮುಗಿಸಿ ತೆರಳುವಾಗ ಈ ಘಟನೆ ನಡೆದಿದೆ.

    ಸದ್ಯ ಈ ಬಗ್ಗೆ ಗೋಕಾಕ್ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv