Tag: ಬುಶ್ರಾ ಬಿಬಿ

  • ಪಾಕ್‌ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ಗೆ 14 ವರ್ಷ, ಪತ್ನಿಗೆ 7 ವರ್ಷ ಜೈಲು ಶಿಕ್ಷೆ

    ಪಾಕ್‌ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ಗೆ 14 ವರ್ಷ, ಪತ್ನಿಗೆ 7 ವರ್ಷ ಜೈಲು ಶಿಕ್ಷೆ

    ಇಸ್ಲಾಮಾಬಾದ್‌: ಅಲ್-ಖಾದಿರ್ ಟ್ರಸ್ಟ್‌ಗೆ ಸಂಬಂಧಿಸಿದ ಭೂ ಭ್ರಷ್ಟಾಚಾರ ಪ್ರಕರಣದಲ್ಲಿ ದೋಷಿಯಾಗಿರುವ ಪಾಕಿಸ್ತಾನದ (Pakistan) ಮಾಜಿ ಪ್ರಧಾನಿ ಇಮ್ರಾನ್‌ ಖಾನ್ (Imran Khan) ಅವರಿಗೆ 14 ವರ್ಷ ಜೈಲು ಮತ್ತು ಅವರ ಪತ್ನಿ ಬುಶ್ರಾ ಬೀಬಿಗೆ 7 ವರ್ಷ ಜೈಲು ಶಿಕ್ಷೆಯಾಗಿದೆ.

    ಇಮ್ರಾನ್‌ ಖಾನ್‌ ಮೇಲಿದ್ದ ಆರೋಪ ಸಾಬೀತಾದ ಬೆನ್ನಲ್ಲೇ ಇಂದು ರಾವಲ್ಪಿಂಡಿಯಲ್ಲಿರುವ ಭ್ರಷ್ಟಾಚಾರ ವಿರೋಧಿ ನ್ಯಾಯಾಲಯವು ತೀರ್ಪನ್ನು ಪ್ರಕಟಿಸಿತು.

    ನ್ಯಾಯಾಧೀಶರು ಅಡಿಲಾ ಜೈಲಿನಲ್ಲಿ ಸ್ಥಾಪಿಸಲಾದ ತಾತ್ಕಾಲಿಕ ನ್ಯಾಯಾಲಯದಲ್ಲಿ ತೀರ್ಪು ಪ್ರಕಟಿಸಿದರು. ಇಮ್ರಾನ್‌ ಖಾನ್‌ ಆಗಸ್ಟ್ 2023 ರಿಂದ ಜೈಲಿನಲ್ಲಿದ್ದಾರೆ. ಇದನ್ನೂ ಓದಿ: ಶ್ವೇತಭವನದ ಮೇಲೆ ದಾಳಿ – ಭಾರತೀಯ ಮೂಲದ ವ್ಯಕ್ತಿಗೆ 8 ವರ್ಷ ಜೈಲು

    ಏನಿದು ಅಲ್-ಖಾದಿರ್ ಟ್ರಸ್ಟ್ ಕೇಸ್?
    ಇಮ್ರಾನ್ ಖಾನ್​​ನ್ನು ಅಲ್-ಖಾದಿರ್ ಟ್ರಸ್ಟ್‌ಗೆ ಸಂಬಂಧಿಸಿದ ಭ್ರಷ್ಟಾಚಾರ ಪ್ರಕರಣದಲ್ಲಿ ಬಂಧಿಸಲಾಗಿದೆ. ತಮ್ಮ ಅಧಿಕಾರಾವಧಿಯಲ್ಲಿ ಪಂಜಾಬ್‌ನ ಝೀಲಂನಲ್ಲಿ ಗುಣಮಟ್ಟದ ಶಿಕ್ಷಣವನ್ನು ಒದಗಿಸಲು ವಿಶ್ವವಿದ್ಯಾಲಯ ಸ್ಥಾಪನೆ ಮಾಡುವುದಾಗಿ ಇಮ್ರಾನ್‌ ಖಾನ್‌ ಭರವಸೆ ನೀಡಿದ್ದರು.

    ಈ ಭರವಸೆಯ ಭಾಗವಾಗಿ ಖಾನ್ ಅಲ್-ಖಾದಿರ್ ಯೂನಿವರ್ಸಿಟಿ ಪ್ರಾಜೆಕ್ಟ್ ಟ್ರಸ್ಟ್ ಸ್ಥಾಪಿಸಿದ್ದರು. ಅದರಲ್ಲಿ ಬೀಬಿ, ಆಪ್ತ ಸಹಾಯಕರಾಗಿದ್ದ ಬುಖಾರಿ ಮತ್ತು ಬಾಬರ್‌ ಅವರನ್ನು ಪದಾಧಿಕಾರಿಗಳಾಗಿ ನೇಮಿಸಲಾಗಿತ್ತು. ಈ ಸಂಬಂಧ ಆಗಿನ ಪಿಟಿಐ ಸರ್ಕಾರ ಮತ್ತು ಆಸ್ತಿ ಉದ್ಯಮಿ ನಡುವೆ ಒಪ್ಪಂದ ಮಾಡಿಕೊಂಡಿತ್ತು. ಈ ಒಪ್ಪಂದಿಂದ ದೇಶದ ಖಜಾನೆಗೆ 190 ಮಿಲಿಯನ್ ಪೌಂಡ್‌ಗಳ ನಷ್ಟವಾಗಿದೆ. ವಿಶ್ವವಿದ್ಯಾನಿಲಯವನ್ನು ಸ್ಥಾಪಿಸಲು 458 ಎಕರೆಗೂ ಹೆಚ್ಚು ಭೂಮಿ ಪಡೆದು ಲಾಭವನ್ನು ಪಡೆದ ಆರೋಪ ಇಮ್ರಾನ್‌ ಖಾನ್‌ ಮೇಲಿದೆ.

     

  • ಪಾಕ್‌ ಪ್ರಧಾನಿ ಇಮ್ರಾನ್‌ ಖಾನ್‌ 3ನೇ ಪತ್ನಿಯ ಕ್ಲೋಸ್‌ ಫ್ರೆಂಡ್‌ ಪಲಾಯನ!

    ಪಾಕ್‌ ಪ್ರಧಾನಿ ಇಮ್ರಾನ್‌ ಖಾನ್‌ 3ನೇ ಪತ್ನಿಯ ಕ್ಲೋಸ್‌ ಫ್ರೆಂಡ್‌ ಪಲಾಯನ!

    ಲಾಹೋರ್: ಪಾಕಿಸ್ತಾನ ಪ್ರಧಾನಿ ಇಮ್ರಾನ್‌ ಖಾನ್‌ ಅವರ ಮೂರನೇ ಪತ್ನಿ ಬುಶ್ರಾ ಬಿಬಿ ಅವರ ಆತ್ಮೀಯ ಸ್ನೇಹಿತೆ ಫರಾಹ್‌ ಖಾನ್‌ ಬಂಧನದ ಭೀತಿಯಿಂದಾಗಿ ದುಬೈಗೆ ಪಲಾಯನಗೈದಿದ್ದಾರೆ.

    ಇಮ್ರಾನ್‌ ಖಾನ್‌ ಅವರ ಸರ್ಕಾರ ಉರುಳಿದರೆ ಫರಾಹ್‌ ಖಾನ್ ಅವರನ್ನು ಬಂಧಿಸುವ ಸಾಧ್ಯತೆ ಇದೆ ಎಂದು ವರದಿಗಳಾಗಿವೆ. ಹೀಗಾಗಿ ಭೀತಿಯಿಂದ ಅವರು ದೇಶ ತೊರೆದಿದ್ದಾರೆ. ಈಗಾಗಲೇ ಫರಾಹ್‌ ಖಾನ್ ಅವರ ಪತಿ ಹಸನ್‌ ಗುಜ್ಜರ್‌ ಕೂಡ ಪಾಕಿಸ್ತಾನ ತೊರೆದು ಅಮೆರಿಕದಲ್ಲಿ ನೆಲೆಸಿದ್ದಾರೆ. ಇದನ್ನೂ ಓದಿ: ಪಾಕ್ ಸುಪ್ರೀಂಕೋರ್ಟ್ ನಿರ್ಧಾರದಿಂದ ಇಮ್ರಾನ್ ಖಾನ್‍ಗೆ ಶಾಕ್ – ಮುಂದುವರಿದ ರಾಜಕೀಯ ಹೈಡ್ರಾಮಾ

    ಫರಾಹ್ ಅವರು ಭಾನುವಾರ ಪಾಕಿಸ್ತಾನ ತೊರೆದು ದುಬೈಗೆ ಪಲಾಯನವಾಗಿದ್ದಾರೆ ಎಂದು ದಿ ಎಕ್ಸ್‌ಪ್ರೆಸ್‌ ಟ್ರಿಬ್ಯೂನ್‌ ವರದಿ ಮಾಡಿದೆ.

    ಅಧಿಕಾರಿಗಳನ್ನು ಅವರು ಬಯಸಿದ ಸ್ಥಳಗಳಿಗೆ ವರ್ಗಾವಣೆ ಮಾಡಿಸಲು ಫರಾಹ್ ಅವರು ಲಂಚ ಪಡೆದಿದ್ದಾರೆ ಎಂದು ಪ್ರತಿಪಕ್ಷಗಳು ಗಂಭೀರ ಆರೋಪ ಹೊರಿಸಿವೆ. ಇದುವರೆಗೂ ಫರಾಹ್ ಅವರು 6 ಬಿಲಿಯನ್‌ ಪಾಕಿಸ್ತಾನಿ ರೂಪಿಯನ್ನು (32 ಮಿಲಿಯನ್‌ ಯುಎಸ್‌ ಡಾಲರ್)‌ ಲಂಚ ಪಡೆದಿದ್ದಾರೆ. ಹೀಗಾಗಿ ಅವರನ್ನು ʼಎಲ್ಲಾ ಹಗರಣಗಳ ತಾಯಿʼ ಎಂದು ಪ್ರತಿಪಕ್ಷಗಳು ಕರೆದಿವೆ. ಇದನ್ನೂ ಓದಿ: ಪಾಕಿಸ್ತಾನದಲ್ಲಿ ಹೈಡ್ರಾಮಾ – ಸದ್ಯಕ್ಕೆ ಇಮ್ರಾನ್ ಪಾರು, 90 ದಿನದಲ್ಲಿ ಚುನಾವಣೆ

    ಪಾಕಿಸ್ತಾನ್ ಮುಸ್ಲಿಂ ಲೀಗ್ (ಎನ್) ಉಪಾಧ್ಯಕ್ಷರು ಹಾಗೂ ಮಾಜಿ ಪ್ರಧಾನಿ ನವಾಜ್ ಷರೀಫ್ ಅವರ ಪುತ್ರಿ ಮರ್ಯಮ್ ನವಾಜ್ ಅವರು, ಇಮ್ರಾನ್ ಮತ್ತು ಅವರ ಪತ್ನಿಯ ಆಜ್ಞೆಯ ಮೇರೆಗೆ ಫರಾಹ್ ಈ ಭ್ರಷ್ಟಾಚಾರವನ್ನು ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

    ಪಾಕಿಸ್ತಾನದಲ್ಲಿ ರಾಜಕೀಯ ಹೈಡ್ರಾಮಾ ಮುಂದುವರಿದಿದೆ. ಪಾಕ್ ಸುಪ್ರೀಂಕೋರ್ಟ್‍ನಲ್ಲಿ ಪ್ರಧಾನಿ ಇಮ್ರಾನ್ ಖಾನ್‍ಗೆ ಹಿನ್ನಡೆ ಆಗಿದೆ. ಚುನಾವಣೆ ಅತ್ಯಗತ್ಯ, ಆದ್ರೇ ಅದು ಅವಿಶ್ವಾಸ ನಿಲುವಳಿ ಮೇಲಿನ ಮತದಾನದಿಂದ ನಿರ್ಧಾರವಾಗಲಿ ಎಂದು ಪಾಕಿಸ್ತಾನ ಸುಪ್ರೀಂಕೋರ್ಟ್ ಮಹತ್ವದ ಆದೇಶ ನೀಡಿದೆ.

    ಪಾಕಿಸ್ತಾನ ಸುಪ್ರೀಂಕೋರ್ಟ್‍ನ ನಿವೃತ್ತ ಮುಖ್ಯ ನ್ಯಾಯಮೂರ್ತಿ ಗುಲ್ಜಾರ್ ಅಹ್ಮದ್ ಹೆಸರನ್ನು ಹಂಗಾಮಿ ಪ್ರಧಾನಿ ಹುದ್ದೆಗೆ ಇಮ್ರಾನ್ ಖಾನ್ ಪ್ರಸ್ತಾಪಿಸಿದ್ದಾರೆ. ಹೊಸ ಹಂಗಾಮಿ ಪ್ರಧಾನಿ ಅಧಿಕಾರ ಸ್ವೀಕರಿಸುವವರೆಗೂ ಇಮ್ರಾನ್ ಖಾನ್ ಪ್ರಧಾನಿಯಾಗಿ ಮುಂದುವರೆಯಲಿದ್ದಾರೆ. ಇದನ್ನೂ ಓದಿ: ಪಾಕ್ ಪ್ರಧಾನಿ ಇಮ್ರಾನ್‌ಖಾನ್‌ನನ್ನು ಮಿನಿ ಟ್ರಂಪ್ ಎಂದ ಮಾಜಿ ಪತ್ನಿ