Tag: ಬೆಂಕಿಪೊಟ್ಟಣ

  • ಮ್ಯಾಚ್‍ಬಾಕ್ಸ್ ನಲ್ಲಿ ಮಡಚಿಡುವ ಸೀರೆ ನೇಯ್ದ ನೇಕಾರ

    ಮ್ಯಾಚ್‍ಬಾಕ್ಸ್ ನಲ್ಲಿ ಮಡಚಿಡುವ ಸೀರೆ ನೇಯ್ದ ನೇಕಾರ

    ಹೈದರಾಬಾದ್: ಬೆಂಕಿ ಪೊಟ್ಟಣದಲ್ಲಿ ಮಡಚಿಡುವಂತಹ ಸೀರೆಯನ್ನು ತೆಲಂಗಾಣದ ರಾಜಣ್ಣ ಸಿರ್ಸಿಲ್ಲಾ ಜಿಲ್ಲೆಯ ಕೈಮಗ್ಗ ನೇಕಾರರೊಬ್ಬರು ನೇಯ್ದಿದ್ದಾರೆ.

    ರಾಜಣ್ಣ ಸಿರ್ಸಿಲ್ಲಾ ಜಿಲ್ಲೆಯ ನಿವಾಸಿಗಳಾದ ನಲ್ಲ ವಿಜಯ್ ಅವರು ಯುವ ಕೈಮಗ್ಗ ನೇಕಾರರಾಗಿದ್ದಾರೆ. ಇವರು ಬೆಂಕಿ ಪೊಟ್ಟಣದಲ್ಲಿ ಮಡಚಿ ಇಡಬಹುದಾದ ಸೀರೆಯನ್ನು ನೇಯ್ದಿದ್ದಾರೆ. ಈ ಸೀರೆಯನ್ನು ಅವರು ತೆಲಂಗಾಣ ಸಚಿವ ಕೆಟಿ ರಾಮರಾವ್, ಸಬಿತಾ ಇಂದ್ರ ರೆಡ್ಡಿ, ವಿ ಶ್ರೀನಿವಾಸ್ ಗೌಡ್ ಮತ್ತು ಎರ್ರಾಬೆಲ್ಲಿ ದಯಾಕರ್ ರಾವ್ ಅವರ ಮುಂದೆ ಪ್ರದರ್ಶಿಸಿದ್ದಾರೆ.

    ಯುವ ನೇಕಾರ ವಿಜಯ್ ಮಾತನಾಡಿ, ಮ್ಯಾಚ್‍ಬಾಕ್ಸ್‍ನಲ್ಲಿ ಹೊಂದಿಕೊಳ್ಳುವ ಸೀರೆಯನ್ನು ಕೈಯಿಂದ ನೇಯ್ದು ತಯಾರಿಸಲಾಗಿದೆ. ಇದನ್ನು ತಯಾರಿಸಲು ಆರು ದಿನಗಳು ಬೇಕಾಗುತ್ತದೆ. ಸೀರೆಯನ್ನು ತಯಾರಿಸಲು ಯಂತ್ರವನ್ನು ಬಳಸಿದರೆ, ಕೇವಲ ಮೂರು ದಿನಗಳು ಸಾಕಾಗುತ್ತದೆ. ಕೈಯಿಂದ ನೇಯ್ದ ಸೀರೆಗೆ 12,000 ರೂ., ಯಂತ್ರ ಬಳಸಿ ತಯಾರಿಸಿದ ಸೀರೆಗೆ 8,000 ರೂ. ದರವಿದೆ ಎಂದು ತಿಳಿಸಿದರು.

    ಇತ್ತೀಚಿನ ದಿನಗಳಲ್ಲಿ ಸಿರ್ಸಿಲ್ಲಾದ ಕೈಮಗ್ಗ ಕ್ಷೇತ್ರದಲ್ಲಿ ಹಲವು ಬದಲಾವಣೆಗಳು ಆಗಿದೆ. ನೇಕಾರರು ಅತ್ಯಾಧುನಿಕ ತಂತ್ರಜ್ಞಾನ ಹಾಗೂ ಉಪಕರಣವನ್ನು ಅಳವಡಿಸಿಕೊಂಡಿದ್ದಾರೆ. ಇದಕ್ಕೆ ಬೆಂಬಲ ನೀಡಿದ ರಾಜ್ಯ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದರು. ಇದನ್ನೂ ಓದಿ: ಪಾದಯಾತ್ರೆಗೆ ಹೈಕೋರ್ಟ್ ಕೆಂಡಾಮಂಡಲ – ಕೈ ಮುಗಿದು ಮುಖದ ಮೇಲೆ ಕೈಯಿಟ್ಟ ಡಿಕೆಶಿ

    ವಿಜಯ್ ನೇಯ್ದ ಸೀರೆಯನ್ನು ಈ ಹಿಂದೆ 2017ರಲ್ಲಿ ವಿಶ್ವ ತೆಲುಗು ಸಮ್ಮೇಳನದಲ್ಲಿ ಪ್ರದರ್ಶಿಸಲಾಗಿತ್ತು. ಅವರು 2015ರಲ್ಲಿ ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ಹಾಗೂ ಅವರ ಪತ್ನಿ ಮಿಚೆಲ್ ಒಬಾಮಾ ಭಾರತಕ್ಕೆ ಬಂದಾಗ ಅವರಿಗೆ ಸೂಪರ್ ಫೈನ್ ರೇಷ್ಮೆಯಿಂದ ಮಾಡಿದ ಸೀರೆಯನ್ನು ಉಡುಗೊರೆಯಾಗಿ ನೀಡಿದ್ದರು. ಪ್ರತಿಭಾವಂತ ಯುವ ನೇಕಾರನ ಕಾರ್ಯವನ್ನು ಶ್ಲಾಘಿಸಿದ ಸಚಿವರು, ಬೆಂಕಿ ಪೊಟ್ಟಣಕ್ಕೆ ಹೊಂದಿಕೊಳ್ಳುವ ಸೀರೆಯ ಬಗ್ಗೆ ಕೇಳಿದ್ದೆವು. ಆದರೆ ಇದೇ ಮೊದಲ ಬಾರಿಗೆ ನೋಡುತ್ತಿದ್ದೇವೆ ಎಂದಿದ್ದಾರೆ. ಇದನ್ನೂ ಓದಿ: ಯೋಗಿ, ಬಿಜೆಪಿಗೆ ಬಿಗ್‌ ಶಾಕ್‌ – ಸಚಿವ ಸೇರಿ 4 ಶಾಸಕರು ರಾಜೀನಾಮೆ, ಇಂದು ಎಸ್‌ಪಿ ಸೇರ್ಪಡೆ

  • ಬೆಂಕಿಪೊಟ್ಟಣದ ಲಾರಿಗೆ ಬೆಂಕಿ

    ಬೆಂಕಿಪೊಟ್ಟಣದ ಲಾರಿಗೆ ಬೆಂಕಿ

    ವಿಜಯಪುರ: ಆಕಸ್ಮಿಕ ಬೆಂಕಿ ತಗುಲಿ ಬೆಂಕಿ ಪೊಟ್ಟಣ ತುಂಬಿದ್ದ ಲಾರಿ ನೋಡ ನೋಡುತ್ತಿದ್ದಂತೆ ಕ್ಷಣಾರ್ಧದಲ್ಲೇ ಧಗಧಗನೆ ಹೊತ್ತಿ ಉರಿದ ಘಟನೆ ವಿಜಯಪುರದಲ್ಲಿ ನಡೆದಿದೆ.

    ತಾಲೂಕಿನ ಅರಕೇರಿ ತಾಂಡಾ ಬಳಿ ರಾಷ್ಟ್ರೀಯ ಹೆದ್ದಾರಿ 13ರಲ್ಲಿ ಬೆಳ್ಳಂಬೆಳಗ್ಗೆ ಈ ಘಟನೆ ನಡೆದಿದ್ದು, ತಮಿಳುನಾಡು ಮೂಲದ ಲಾರಿ ಇದಾಗಿದೆ. ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಚಾಲಕ ಹಾಗೂ ಕ್ಲೀನರ್ ಲಾರಿಯಿಂದ ಜಿಗಿದು ಪ್ರಾಣಾಪಾಯದಿಂದ ಪಾರಾಗಿದ್ದು, ಜೀವ ಭಯದಲ್ಲಿ ಪರಾರಿಯಾಗಿದ್ದಾರೆ. ತಮಿಳುನಾಡಿನಿಂದ ಮಹಾರಾಷ್ಟ್ರದ ಸೊಲ್ಲಾಪುರಕ್ಕೆ ಬೆಂಕಿ ಪೊಟ್ಟಣ ಸಾಗಿಸುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ.

    ಆಗಸದೆತ್ತರಕ್ಕೆ ಚಿಮ್ಮಿದ ಬೆಂಕಿಯ ಕೆನ್ನಾಲಿಗೆ, ಎರಡೂ ಬದಿಯ ರಸ್ತೆಗಳು ಬ್ಲಾಕ್ ಆಗಿದ್ದು, ರಸ್ತೆ ಮೇಲೆಯೇ ಲಾರಿಗೆ ಬೆಂಕಿ ಹೊತ್ತಿಕೊಂಡಿದ್ದರಿಂದ ವಾಹನ ಸಂಚಾರಕ್ಕೆ ಅಡೆತಡೆಯಾಗಿ ಕೆಲ ಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು. ಬರೋಬ್ಬರಿ ಅರ್ಧಗಂಟೆ ಲಾರಿ ಹೊತ್ತಿ ಉರಿದಿದೆ. ನಂತರ ಸ್ಥಳಕ್ಕೆ ವಿಜಯಪುರ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಸಿ
    ಬೆಂಕಿ ನಂದಿಸಿದ್ದಾರೆ. ಈ ಕುರಿತು ವಿಜಯಪುರ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.